Site icon Vistara News

Horoscope Today : ಸಿಂಹ ರಾಶಿಯವರಿಗೆ ಇಂದು ಆರ್ಥಿಕ ಪ್ರಗತಿ; ನಿಮ್ಮ ಭವಿಷ್ಯ ಹೇಗಿದೆ?

rashi bhavishya today in kannada

Horoscope Today

ಇಂದಿನ ಪಂಚಾಂಗ (23-02-2023)

ಶ್ರೀ ಶಕೇ 1944, ಶುಭಕೃತ ನಾಮ ಸವತ್ಸರ, ಉತ್ತರಾಯಣ,
ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ

ತಿಥಿ: ಚೌತಿ 25:33 ವಾರ: ಗುರುವಾರ
ನಕ್ಷತ್ರ: ರೇವತಿ 27:43 ಯೋಗ: ಶುಭ 20:56
ಕರಣ: ವಣಿಜ 14:22

ಸೂರ್ಯೋದಯ : 06:೫೬ ಸೂರ್ಯಾಸ್ತ : 06:2

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಪ್ರಾತಃ ಕಾಲ 9.00 ರಿಂದ 10.30
ಯಮಗಂಡಕಾಲ: ಪ್ರಾತಃ ಕಾಲ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ಬಹಳ ದಿನಗಳ ಕನಸು ನನಸಾಗುವ ದಿನ. ವ್ಯಾಜ್ಯ ಪ್ರಕರಣಗಳು ಪರಿಹಾರವಾಗುವ ಸಾಧ್ಯತೆ. ಆರ್ಥಿಕ ಪ್ರಗತಿ. ಕುಟುಂಬ ಸದಸ್ಯರ ಸಹಕಾರದಿಂದ ಮನೆಯಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 4

ವೃಷಭ: ಬಂಧು ಮಿತ್ರರಿಂದ ಸಹಕಾರ. ಆರ್ಥಿಕ ಪ್ರಗತಿ ಸಾಧಾರಣ. ನಿಮ್ಮ ವ್ಯಕ್ತಿತ್ವ ಇತತರನ್ನು ಆಕರ್ಷಿಸಿ ಕಾರ್ಯದಲ್ಲಿ ಯಶಸ್ಸು. ಧಾರ್ಮಿಕ ಕಾರ್ಯಗಳಲ್ಲಿ ಬಾಗಿ, ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 3

ಮಿಥುನ: ನಿಮ್ಮ ಅಭಿಪ್ರಾಯಗಳಿಗೆ ವಿರೋಧ ವ್ಯಕ್ತವಾಗವ ಸಾಧ್ಯತೆ,ಇದರಿಂದ ಆತುರದಲ್ಲಿ ಮಾತನಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಖರ್ಚು ಹೆಚ್ಚು. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಕಟಕ: ಆಕರ್ಷಕ ವ್ಯಕ್ತಿತ್ವ ಹೊಂದಿರುವ ನೀವು ಇಂದು ಇತತರನ್ನು ಆಕರ್ಷಿಸುವಿರಿ. ಆರ್ಥಿಕ ಪ್ರಗತಿ ಸಾಧಾರಣ ವಿದ್ದರೂ ಸಮರ್ಥವಾಗಿ ನಿರ್ವಹಿಸುವಿರಿ. ಉದ್ಯೋಗದಲ್ಲಿ ಪ್ರಗತಿ. ಮಡದಿಯ ಪ್ರೀತಿಗೆ ಸೋಲುವಿರಿ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 5

ಸಿಂಹ: ಉದ್ಯೋಗ ಅಪೇಕ್ಷಿತರಿಗೆ ಇಂದು ಉದ್ಯೋಗದ ಭರವಸೆ. ಆರ್ಥಿಕ ಪ್ರಗತಿ. ಪರಿಶ್ರಮಕ್ಕೆ ಪ್ರತಿ ಫಲ ಸಿಗುವುದು. ಮನೆಯವರ ಪ್ರೀತಿ ಸಹಕಾರ ಸಿಗಲಿದೆ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 3

ಕನ್ಯಾ: ಮನೆಯಲ್ಲಿ ಪರಸ್ಪರರ ಮಧ್ಯೆ ಕಲಹದಿಂದ ವಾತಾವರಣ ಹದಗೆಡಡಬಹುದು. ಕೆಲಸದಲ್ಲಿ ಹಿರಿಯರಿಂದ ಒತ್ತಡ, ಎಚ್ಚರಿಕೆ ವಹಿಸಿ. ಆರ್ಥಿಕ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಯಾವುದೇ ಹೂಡಿಕೆ ಬೇಡ. ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರೋಗ್ಯದಲ್ಲಿ ಉತ್ತಮ. ಮನೆಯಲ್ಲಿ ಸಂತೋಷದ ದಿನ.
ಅದೃಷ್ಟ ಸಂಖ್ಯೆ: 4

ವೃಶ್ಚಿಕ: ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಹೊಂದಲು ಹಿರಿಯರು ಮಾರ್ಗದರ್ಶನ ಮಾಡುವುರು. ಧೈರ್ಯದಿಂದ ಕಾರ್ಯದಲ್ಲಿ ಮುನ್ನುಗ್ಗಿ ಯಶ ಸಿಗುವುದು. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 5

ಧನಸ್ಸು: ಕುಟುಂಬ ಸದಸ್ಯರ ಆರೋಗ್ಯ ಸಂಬಂಧಿ ವಿಷಯಗಳು ತಮಗೆ ಒತ್ತಡ ಉಂಟುಮಾಡಬಹುದು. ಉದಾಸಿನತೆ ಮಾಡುವುದು ಬೇಡ. ಆಶಾವಾದಿಗಳಾಗಿರಿ ಕುಲದೇವರನ್ನು ಸ್ಮರಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ಮಕರ: ಉದ್ಯೋಗದಲ್ಲಿ ಅಧಿಕಾರಿಗಳ ಕಿರಿಕಿರಿ ಒತ್ತಡ ಉಂಟುಮಾಡುವ ಸಾಧ್ಯತೆ. ಆಲಸ್ಯದಿಂದ ದೂರವಿದ್ದು ಕಾರ್ಯ ಪೂರ್ಣ ಮಾಡಿ. ಕೆಲಸದ ಒತ್ತಡದಿಂದ ಮನೆಯ ಸದಸ್ಯರ ಮೇಲೆ ಹಾಕಿ, ವಾತಾವರಣ ಹದಗೆಡಲು ಕಾರಣವಾಗಬೇಡಿ. ಗುರುಗಳ ಆರಾಧನೆ ಮಾಡಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ಕುಂಭ: ಭೂ ಸಂಭಂಧಿ ವ್ಯವಹಾರದಲ್ಲಿ ಪ್ರಗತಿ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರುವುದು.ಅನ್ಯರು ಆಡುವ ಕುಹುಕು ಮಾತುಗಳಿಗೆ ದ್ವನಿಯಾಗಬೇಡಿ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 9

ಮೀನ: ನಿಮ್ಮ ಮಹತ್ವಾಕಾಂಕ್ಷೆಯ ಕೆಲಸ ಕಾರ್ಯಗಳು ಕುಂಠಿತವಾಗುವ ಸಾಧ್ಯತೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಆರ್ಥಿಕ ನಷ್ಟ ತಪ್ಪಿಸಿಕೊಳ್ಳಿ. ಸಂಗಾತಿಯ ಮಾತುಗಳು ಹಿತವೆನಿಸುದು. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 7

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ: Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?

Exit mobile version