ಇಂದಿನ ಪಂಚಾಂಗ (26-02-2023)
ಶ್ರೀ ಶಕೇ 1944, ಶುಭಕೃತ ನಾಮ ಸವತ್ಸರ, ಉತ್ತರಾಯಣ,
ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ
ತಿಥಿ: ಸಪ್ತಮಿ 24:58 ವಾರ: ಭಾನುವಾರ
ನಕ್ಷತ್ರ: ಕೃತ್ತಿಕಾ 29:17 ಯೋಗ: ಇಂದ್ರ 16:25
ಕರಣ: ಗರಜ 12:33 ಇಂದಿನ ವಿಶೇಷ: ಶ್ರೀ ಗುರು ಸಾರ್ವಭೌಮರ 428ನೇ ವರ್ಧಂತಿ ಉತ್ಸವ.
ಅಮೃತಕಾಲ: ಮಧ್ಯರಾತ್ರಿ 02 ಗಂಟೆ 47 ನಿಮಿಷದಿಂದ 04 ಗಂಟೆ 28 ನಿಮಿಷದವರೆಗೆ.
ಸೂರ್ಯೋದಯ : 06:37 ಸೂರ್ಯಾಸ್ತ : 06:28
ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30
ದ್ವಾದಶ ರಾಶಿ ಭವಿಷ್ಯ (Horoscope Today)
ಮೇಷ: ಆಪ್ತರ ವರ್ತನೆಯಿಂದ ನಿಮ್ಮ ಮನಸ್ಸಿಗೆ ನೋವು ತರುವ ಸಾಧ್ಯತೆಗಳು ಹೆಚ್ಚು, ತಾಳ್ಮೆಯಿಂದ ಇರಿ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು, ಮಾತಿನಲ್ಲಿ ಹಿಡಿತವಿರಲಿ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ವೃಷಭ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ, ಆರೋಗ್ಯದ ಕಡೆಗೆ ಗಮನ ಹರಿಸಿ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಪ್ರಗತಿಯೊಂದಿಗೆ ಲಾಭ ಪಡೆಯುವಿರಿ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಹಿರಿಯರಿಂದ ಮಾರ್ಗದರ್ಶನ ದೊರೆಯಲಿದೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಮಿಥುನ: ಯಾರಾದರೂ ನಿಮ್ಮ ಸಹಾಯ ಬೇಡಿ ಬರುವರು, ಯೋಚಿಸಿ ಸಹಾಯ ಮಾಡಿ. ಆರ್ಥಿಕ ಪ್ರಗತಿ ದಿನದ ಮಟ್ಟಿಗೆ ಸಾಧಾರಣ. ಯಾರಾದರೂ ನಿಮ್ಮ ಭಾವನೆಗಳಿಗೆ ನಿರಾಸೆ ಮಾಡುವ ಸಾಧ್ಯತೆ, ಅವರ ಮಾತನ್ನು ಲಕ್ಷಿಸದೇ ಕಾರ್ಯದಲ್ಲಿ ಮುನ್ನುಗ್ಗಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಹೊಸ ಭರವಸೆಯ ಆಶಾಭಾವನೆ ಮೂಡಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2
ಕಟಕ: ಕೆಲವು ಆಘಾತಗಳನ್ನು ಎದುರಿಸಬೇಕಾಗಿ ಬರಬಹುದು, ಧೈರ್ಯದಿಂದ ಇರಿ. ನಿಮ್ಮ ಆಸೆ-ಆಕಾಂಕ್ಷೆಗಳು ಯಶಸ್ಸನ್ನು ತಂದುಕೊಡಲಿವೆ. ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ. ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದೀತು, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿಯೂ ಶುಭ ಫಲ.
ಅದೃಷ್ಟ ಸಂಖ್ಯೆ: 5
ಸಿಂಹ: ಇಂದು ನಿಮಗೆ ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕವಾಗಿ ಲಾಭ ಕಡಿಮೆ. ಹೊಸ ಆಲೋಚನೆಗಳು ನಿಮ್ಮನ್ನು ಸೃಜನಾತ್ಮಕವಾಗಿ ಏನಾದರೂ ಮಾಡಲು ಪ್ರೇರೇಪಿಸುತ್ತದೆ. ಉದ್ಯೋಗದಲ್ಲಿ ಯಶಸ್ಸು ಪಡೆಯುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಕನ್ಯಾ: ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳವಿರಿ. ಹಣಕಾಸು ಪರಿಸ್ಥಿತಿ ಸಾಧಾರಣ, ದಿನದ ಮಟ್ಟಿಗೆ ಖರ್ಚು ಹೆಚ್ಚು. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಾಸಿಗೆ ಇದ್ದಷ್ಟು ಕಾಲು ಚಾಚಿ. ಆರೋಗ್ಯ ಮಧ್ಯಮ, ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಪ್ರಭಾವಿ ಜನರ ಬೆಂಬಲ ಸಿಗಲಿದೆ. ಇದರಿಂದ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ. ಒಡಹುಟ್ಟಿದವರ ಸಹಕಾರ ಸಿಗಲಿದೆ. ಆತುರದಲ್ಲಿ ಯಾರೊಂದಿಗೂ ಅತಿರೇಕದಿಂದ ಮಾತನಾಡಿ, ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ವೃಶ್ಚಿಕ: ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡಿ, ಕೆಲಸ ಕಾರ್ಯಗಳಲ್ಲಿ ಯಶಸ್ಸು ತಂದು ಕೊಡಲಿವೆ. ಇಂದು ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ. ಪ್ರಯಾಣದಿಂದ ಲಾಭ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6
ಧನಸ್ಸು: ಭಾವನಾ ಜೀವಿಗಳಾದ ನೀವು ನಕಾರಾತ್ಮಕ ಆಲೋಚನೆಗಳಿಂದ ದೂರ ಇರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ, ಕ್ಷೇತ್ರ ದರ್ಶನ ಪಡೆದು ಮಾನಸಿಕ ನೆಮ್ಮದಿ ತಂದುಕೊಳ್ಳುವುದು ಅವಶ್ಯಕ. ಮಕ್ಕಳ ಆರೋಗ್ಯದ ಕಡೆಗೆ ಗಮನ ಹರಿಸಿ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಮಕರ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಸಾಧ್ಯತೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಕೆಲಸ ಕಾರ್ಯಗಳಲ್ಲಿ ಬಳಸಿಕೊಂಡರೆ ಇನ್ನೂ ಹೆಚ್ಚು ಆಕರ್ಷಕ ವ್ಯಕ್ತಿತ್ವ ನಿಮ್ಮದಾಗುತ್ತದೆ. ಆರೋಗ್ಯ ಉತ್ತಮವಾಗಿರಲಿದೆ. ದಿನದ ಮಟ್ಟಿಗೆ ಖರ್ಚು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಕುಂಭ: ಅತಿಥಿಗಳ ಆಗಮನ ಸಂತಸ ತರುವುದು. ಆತ್ಮವಿಶ್ವಾಸದ ಹೊಸ ಭರವಸೆ ಮೂಡಲಿದೆ. ಹೂಡಿಕೆಯ ಲಾಭ ಇಂದು ಉಪಯೋಗಕ್ಕೆ ಬರುವುದು. ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದು ಕೊಡಲಿದೆ. ಆರೋಗ್ಯ, ಉದ್ಯೋಗದಲ್ಲಿ ಉತ್ತಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಮೀನ: ಅತಿರೇಕದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಕೋಪಕ್ಕೆ ಕಾರಣವಾಗುವ ವಿಷಯಗಳಿಂದ ದೂರ ಇರಿ. ತಾಳ್ಮೆಯಿಂದ ವರ್ತಿಸಿ. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com
ಇದನ್ನೂ ಓದಿ: Vastu Tips : ಆರ್ಥಿಕ ಲಾಭ ಪಡೆಯಲು ಮನೆಯ ಉತ್ತರ ದಿಕ್ಕಿನಲ್ಲಿ ಹೀಗೆ ಮಾಡಿ!