Site icon Vistara News

Horoscope Today : ರೋಹಿಣಿ ನಕ್ಷತ್ರದ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

horoscope today

Horoscope Today

ಇಂದಿನ ಪಂಚಾಂಗ (28-02-2023)

ಶ್ರೀ ಶಕೇ 1944, ಶುಭಕೃತ ನಾಮ ಸವತ್ಸರ, ಉತ್ತರಾಯಣ,
ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ

ತಿಥಿ: ನವಮಿ 28:18 ವಾರ: ಮಂಗಳವಾರ
ನಕ್ಷತ್ರ: ರೋಹಿಣಿ 07:18 ಯೋಗ: ವಿಷ್ಕುಂಭ 16:24
ಕರಣ: ಬಾಳವ 15:15 ಇಂದಿನ ವಿಶೇಷ: ಶ್ರೀ ರಾಮಾನುಜಾಚಾರ್ಯರ ಪುಣ್ಯ ದಿನ, ರಾಷ್ಟ್ರೀಯ ವಿಜ್ಞಾನ ದಿನ.
ಅಮೃತಕಾಲ: ಮಧ್ಯರಾತ್ರಿ 12 ಗಂಟೆ 08 ನಿಮಿಷದಿಂದ 01 ಗಂಟೆ 54 ನಿಮಿಷದವರೆಗೆ.

ಸೂರ್ಯೋದಯ : 06:36 ಸೂರ್ಯಾಸ್ತ : 06:28

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ಭರವಸೆಯ ಹೊಸ ಅವಕಾಶಗಳು ಸಿಗುವ ಸಾಧ್ಯತೆ. ಹಣಗಳಿಸುವ ವಿವಿಧ ಮಾರ್ಗಗಳು ತೆರೆದುಕೊಳ್ಳಲಿವೆ. ಅನಗತ್ಯವಾಗಿ ಇತರರ ಬಗ್ಗೆ ಮನೆಯಲ್ಲಿ ಚರ್ಚಿಸುವುದು ಬೇಡ, ಇದರಿಂದ ಮನೆಯ ವಾತಾವರಣ ಕೆಡುವ ಸಾಧ್ಯತೆ. ಉದ್ಯೋಗ ಹಾಗೂ ಆರೋಗ್ಯದಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

ವೃಷಭ: ಗತಿಸಿದ ಘಟನೆಗಳ ಬಗ್ಗೆ ಚಿಂತಿಸಿ, ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಸಾಧ್ಯವಾದಷ್ಟು ತಾಳ್ಮೆಯಿಂದ ಇರಿ. ಭೂಮಿ, ಆಸ್ತಿ ಖರೀದಿ ವ್ಯವಹಾರದಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಖರ್ಚು ಹೆಚ್ಚಾಗಲಿದೆ. ಆರೋಗ್ಯ ಹಾಗೂ ಉದ್ಯೋಗದಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

ಮಿಥುನ: ಅನಿವಾರ್ಯವಾಗಿ ಖರ್ಚು ಹೆಚ್ಚಾಗಲಿದೆ. ಪ್ರಯಾಣ ಮಾಡುವ ಸಾಧ್ಯತೆ. ಕುಟುಂಬದಲ್ಲಿ ಯಾವುದೋ ವಿಷಯಕ್ಕೆ ಪರಸ್ಪರರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ. ನೀವು ತಾಳ್ಮೆಯಿಂದ ವರ್ತಿಸಿ. ಅರ್ಹ ನೌಕರರಿಗೆ ಇಂದು ಉದ್ಯೋಗದಲ್ಲಿ ಬಡ್ತಿ ಹೊಂದುವ ಅವಕಾಶ ಕೂಡಿಬರಲಿದೆ. ಆರೋಗ್ಯ ಉತ್ತಮ, ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

ಕಟಕ: ಹಳೆಯ ವಿಚಾರಗಳನ್ನು ಕೆದಕಿ ಮನಸ್ಸಿಗೆ ಘಾಸಿ ಮಾಡಿಕೊಳ್ಳುವುದು ಬೇಡ. ಮನರಂಜನೆಗಾಗಿ ಖರ್ಚು ಮಾಡುವ ಸಾಧ್ಯತೆ. ಸಭೆ ಸಮಾರಂಭದ ಆಮಂತ್ರಣ ಹುಡುಕಿಕೊಂಡು ಬರಲಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗ ಹಾಗೂ ಕೌಟುಂಬಿಕ ಶುಭ ಫಲ.
ಅದೃಷ್ಟ ಸಂಖ್ಯೆ: 1

ಸಿಂಹ: ನಿಮ್ಮ ಕೆಲಸ ಕಾರ್ಯಗಳಿಗೆ, ವರ್ತನೆಗೆ ಇತರರಿಂದ ಪ್ರಶಂಸೆ ವ್ಯಕ್ತವಾಗಲಿದೆ. ಬಾಕಿ ಇರುವ ಸಾಲ ಮರುಪಾವತಿ ಆಗಲಿದೆ. ಆರ್ಥಿಕವಾಗಿ ಲಾಭದ ಸಮಯ. ಹೊಸ ಹೂಡಿಕೆ ವ್ಯವಹಾರಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಕನ್ಯಾ: ಹಳೆಯ ವಿಚಾರಗಳು ನಿಮ್ಮನ್ನು ಮಾನಸಿಕ ಹಿಂಸಿಸುವ ಸಾಧ್ಯತೆ. ಅನಗತ್ಯ ಯೋಚನೆಗಳು ಬೇಡ. ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು, ಒಂದಿಷ್ಟು ಎಚ್ಚರಿಕೆ ವಹಿಸಿ. ಹಣಕಾಸು ವ್ಯವಹಾರ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯಲು ಸಮಯದ ಅಭಾವ ಉಂಟಾಗಬಹುದು. ವ್ಯಪಾರ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಕುಟುಂಬದ ಜವಾಬ್ದಾರಿಗಳು ಹೆಚ್ಚಾಗಲಿವೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಆರೋಗ್ಯ ಸಾಧಾರಣ. ಉದ್ಯೋಗಿಗಳಿಗೆ ಒತ್ತಡ, ತಾಳ್ಮೆ ಅತ್ಯವಶ್ಯಕ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ವೃಶ್ಚಿಕ: ನಕಾರಾತ್ಮಕ ಆಲೋಚನೆಗಳು ಬರದಂತೆ ಸೃಜನಾತ್ಮಕ ಕಾರ್ಯಗಳಲ್ಲಿ ತೊಡಗಿ. ಕುಲ ದೇವತಾ ದರ್ಶನ, ಆಧ್ಯಾತ್ಮ ಗುರುಗಳ ಮಾರ್ಗದರ್ಶನ ಪಡೆಯಿರಿ. ದಿನದ ಮಟ್ಟಿಗೆ ಖರ್ಚು. ಅತಿಥಿಗಳ ಆಗಮನದಿಂದ ಸಂತಸ. ಉದ್ಯೋಗಿಗಳಿಗೆ ಶುಭ ಫಲ.
ಅದೃಷ್ಟ ಸಂಖ್ಯೆ: 2

ಧನಸ್ಸು: ಸಾಮಾಜಿಕ ಜವಾಬ್ದಾರಿಗಳು ಹೆಚ್ಚಾಗಲಿದೆ. ಅದರ ಮಧ್ಯೆಯೂ ಆರೋಗ್ಯದ ಕುರಿತು ಕಾಳಜಿ ವಹಿಸಿ. ಸೌಂದರ್ಯ ಪ್ರಜ್ಞೆ ಮೂಡಲಿದೆ. ಭವಿಷ್ಯದ ಹೂಡಿಕೆಗಗಳ ಬಗ್ಗೆ ಆಲೋಚನೆ. ಉದ್ಯೋಗಿಗಳಿಗೆ ಯಶಸ್ಸು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಮಕರ: ಇಂದು ನಿಮಗೆ ಯಾವುದಾದರೂ ಸಂದರ್ಭದಲ್ಲಿ ಉದ್ವೇಘ ಹೆಚ್ಚಾಗಲಿದೆ. ಆತುರದಲ್ಲಿ ತೆಗೆದುಕೊಂಡ ನಿರ್ಧಾರ ಅಪಾಯ ತರುವುದು. ಕುಟುಂಬದಲ್ಲಿ ಪರಸ್ಪರರ ಮಧ್ಯೆ ಭಿನ್ನಾಭಿಪ್ರಾಯ ಮೂಡಬಹುದು. ತಂದೆ-ತಾಯಿಗಳ ಆರೋಗ್ಯದಲ್ಲಿ ವ್ಯತ್ಯಾಸ. ದಿನದ ಮಟ್ಟಿಗೆ ಖರ್ಚು. ಮಾತಿನಲ್ಲಿ ಹಿಡಿತವಿರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

ಕುಂಭ: ಇಂದು ನಿಮ್ಮ ಆರೋಗ್ಯ ಉತ್ತಮ. ಆರ್ಥಿಕ ಹೂಡಿಕೆ ವ್ಯವಹಾರದಲ್ಲಿ ಪ್ರಗತಿ, ಲಾಭ. ವೃತ್ತಿಪರರಿಗೆ ಶುಭ ಫಲ. ಕಾರ್ಯದ ಒತ್ತಡದಿಂದ ಕುಟುಂಬದವರೊಂದಿಗೆ ಕಾಲ ಕಳೆಯಲು ಸಮಯದ ಅಭಾವ ಉಂಟಾಗಬಹುದು. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಮೀನ: ಇಂದು ನಿಮ್ಮ ಮಾನಸಿಕ ಆರೋಗ್ಯ ಹದಗೆಡಲಿದೆ. ತಾಳ್ಮೆಯಿಂದ ಇರಿ. ಯಾರ ಪರವೂ ವಹಿಸಿ ಮಾತನಾಡುವುದು ಬೇಡ, ಇದು ನಿಮಗೆ ಅಪಾಯ ತರುವುದು. ಹಣಕಾಸು ಪ್ರಗತಿ ಸಾಧಾರಣ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುತ್ತದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ: Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?

Exit mobile version