Site icon Vistara News

Horoscope Today : ಇಂದು ಯಾವ ರಾಶಿಯವರಿಗೆ ಉದ್ಯೋಗದಲ್ಲಿ ಶುಭ ಫಲ? ನಿಮ್ಮ ಭವಿಷ್ಯ ಇಲ್ಲಿದೆ

Horoscope Today

Horoscope Today

ಇಂದಿನ ಪಂಚಾಂಗ (02-06-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.

ತಿಥಿ: ತ್ರಯೋದಶಿ 12:47 ವಾರ: ಶುಕ್ರವಾರ
ನಕ್ಷತ್ರ: ಸ್ವಾತಿ 06:51 ಯೋಗ: ಪರಿಘ 17:08
ಕರಣ: ತೈತುಲ 12:47 ಇಂದಿನ ವಿಶೇಷ: ಸೌರನೃಸಿಂಹ ಜಯಂತಿ
ಅಮೃತಕಾಲ: ರಾತ್ರಿ 09 ಗಂಟೆ 41 ನಿಮಿಷದಿಂದ ರಾತ್ರಿ 11 ಗಂಟೆ 15 ನಿಮಿಷದವರೆಗೆ.

ಸೂರ್ಯೋದಯ : 05:52 ಸೂರ್ಯಾಸ್ತ :06:43

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ಕೆಲವು ನಿರ್ಧಾರಗಳು ಹತಾಶೆ ಮತ್ತು ಮಾನಸಿಕ ಪ್ರಕ್ಷುಬ್ಧತೆಗೆ ಕಾರಣವಾಗುತ್ತದೆ. ಆಪ್ತರಿಂದ ಸಹಾಯದ ಕೋರಿಕೆ. ಒತ್ತಡದ ಕೆಲಸದಿಂದಾಗಿ ದೈಹಿಕವಾಗಿ ಬಳಲುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಸದೃಢವಾದ ದಿನ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

ವೃಷಭ: ಆಂತರಿಕ ಭಯ ನಿಮ್ಮ ಸಂತೋಷವನ್ನು ಹಾಳುಗೆಡವಬಹುದು. ನಕಾರಾತ್ಮಕ ಆಲೋಚನೆಗಳನ್ನು ಮಾಡದಿರಿ,ಆಗ ನಿಮ್ಮ ಹಾಸ್ಯದ ಪ್ರವೃತ್ತಿ ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ದಿನದ ಕೊನೆಯ ಭಾಗದಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವ ಸಾಧ್ಯತೆ. ಆರೋಗ್ಯ ಕೊಂಚಮಟ್ಟಿಗೆ ಹದಗೆಡುವ ಸಾಧ್ಯತೆ. ಆರ್ಥಿಕವಾಗಿ ಪ್ರಗತಿ.
ಅದೃಷ್ಟ ಸಂಖ್ಯೆ: 9

ಮಿಥುನ: ಬೇರೆಯವರ ಮಾತನ್ನು ಕೇಳಿಕೊಂಡು ನಿಮ್ಮನ್ನು ಪ್ರೀತಿಯಿಂದ ಕಾಣುವ ವ್ಯಕ್ತಿಗಳನ್ನು ದ್ವೇಷಿಸುವುದು ಬೇಡ. ಇತರರ ಸಮಸ್ಯೆಗಳನ್ನು ಪರಿಹರಿಸಲು ನೀವು ಮಧ್ಯಪ್ರವೇಶ ಮಾಡುವ ಸಾಧ್ಯತೆ. ದಿಢೀರ್‌ ಪ್ರಯಾಣ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಅನಾವಶ್ಯಕ ಖರ್ಚು. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಕಟಕ: ಅನಿವಾರ್ಯ ಪ್ರಸಂಗಗಳು ನಿಮಗೆ ಕೋಪವನ್ನು ತರಿಸಿವ ಸಾಧ್ಯತೆ, ಭಾವನೆಗಳನ್ನು ನಿಯಂತ್ರಣಕ್ಕೆ ತೆಗೆದುಕೊಂಡರೆ ಉತ್ತಮ. ಕಠಿಣ ಪರಿಶ್ರಮ ನಿಮಗೆ ಫಲ ನೀಡಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಆರೋಗ್ಯದಲ್ಲಿ ವ್ಯತ್ಯಾಸ. ಆರ್ಥಿಕವಾಗಿ ಲಾಭ. ಉದ್ಯೋಗಿಗದ ಸ್ಥಳದಲ್ಲಿ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಸಿಂಹ: ನಿಮ್ಮ ಸಭ್ಯ ನಡವಳಿಕೆ ಇತರರಿಂದ ಮೆಚ್ಚುಗೆ ಪಡೆಯುತ್ತದೆ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ. ದಿನದ ಆರಂಭದಲ್ಲಿ ಇಂದು ನೀವು ಯಾವುದೇ ಆರ್ಥಿಕ ನಷ್ಟವನ್ನು ಹೊಂದಬಹುದು. ಇದರಿಂದ ನಿಮ್ಮ ಪೂರ್ತಿ ದಿನ ಹದಗೆಡಬಹುದು. ಇತರರಿಗೆ ಸಹಾಯ ಮಾಡುವ ನಿಮ್ಮ ಸಾಮರ್ಥ್ಯ ಒಳಿತನ್ನು ಮಾಡಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಭರವಸೆಯ ಅವಕಾಶ ಸಿಗಲಿವೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಕನ್ಯಾ: ಒತ್ತಡದಿಂದ ವಿಮುಕ್ತಿ ಹೊಂದಿ ಸಂತೋಷವನ್ನು ಅನುಭವಿಸಲಿದ್ದೀರಿ. ದೀರ್ಘಕಾಲದ ಲಾಭದ ಉದ್ದೇಶದಿಂದ ಮಾಡಿದ ಹೂಡಿಕೆಯಿಂದ ಲಾಭ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಸಂಪೂರ್ಣ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಅದೃಷ್ಟ ಖುಲಾಯಿಸಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ದಿಢೀರ್‌ ಧನಾಗಮನದಿಂದ ಸಂತೋಷ ಇಮ್ಮಡಿಯಾಗಲಿದೆ. ಅನೇಕ ಸಮಸ್ಯೆಗಳು ಇಂದು ಪರಿಹಾರವಾಗುವುದು. ಆರೋಗ್ಯ ಪರಿಪೂರ್ಣ. ಬಹಳ ದಿನಗಳಿಂದ ಕಂಡ ಕನಸು ನನಸಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ.
ಅದೃಷ್ಟ ಸಂಖ್ಯೆ: 1

ವೃಶ್ಚಿಕ: ಇಂದು ಪ್ರಮುಖ ನಿರ್ಧಾರಗಳಿಂದಾಗಿ ಮಾನಸಿಕವಾಗಿ ನೀವು ಬಳಲುವ ಸಾಧ್ಯತೆ. ಅನಾವಶ್ಯಕ ಖರ್ಚು ಮಾಡಿ ಕೊರಗುವ ಸಾಧ್ಯತೆ. ಆದಷ್ಟು ಖರ್ಚು ನಿಯಂತ್ರಣದಲ್ಲಿರಲಿ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ, ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಧನಸ್ಸು: ಆರೋಗ್ಯದ ಆರೈಕೆ ಇಂದು ಅಗತ್ಯವಿದೆ. ಆಪ್ತರೊಂದಿಗೆ ಸೇರಿಕೊಂಡು ಮಾಡುವ ವ್ಯಾಪಾರ ನಷ್ಟ ತಂದೀತು ಆದಷ್ಟು ಎಚ್ಚರಿಕೆ ಯಿಂದ ಹೆಜ್ಜೆ ಇಡಿ. ನಿಮ್ಮ ಆಂತರಿಕ ಶಕ್ತಿ ದಿನದ ಕೆಲಸವನ್ನು ಉತ್ತಮಗೊಳಿಸುವಲ್ಲಿ ನಿಮ್ಮನ್ನು ಬೆಂಬಲಿಸುತ್ತದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಮಕರ: ಆಹಾರ ಕ್ರಮದ ವ್ಯತ್ಯಾಸದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರು ಸಾಧ್ಯತೆ, ಆದಷ್ಟು ಆಹಾರ ನಿಯಂತ್ರಣ ಮಾಡಿ. ಅನಿವಾರ್ಯ ಕಾರಣಗಳಿಂದ ಖರ್ಚು. ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ದಿಢೀರ್ ಪ್ರಯಾಣ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

ಕುಂಭ: ನಿಮ್ಮ ಸಾಧನೆಗೆ ಇಂದು ಪ್ರೋತ್ಸಾಹ ಸಿಗಲಿದೆ. ಅನೇಕ ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ. ವ್ಯಾಪಾರದ ಉದ್ದೇಶಕ್ಕಾಗಿ ಕೈಕೊಂಡ ಪ್ರಯಾಣ ಲಾಭವನ್ನು ತಂದುಕೊಡಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಮೀನ: ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆವರಿಸಬಹುದು. ಆದಷ್ಟು ಸಕಾರಾತ್ಮಕವಾಗಿ ಆಲೋಚಿಸಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ. ನಿಮ್ಮ ಸಹೋದ್ಯೋಗಿಗಳು ನಿಮ್ಮನ್ನು ಟೀಕಿಸುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : Saturn Astrology : ಈ ಮೂರು ರಾಶಿಯವರಿಗೆ ಸದಾ ಇರಲಿದೆ ಶನಿ ದೇವರ ಕೃಪೆ!

Exit mobile version