horoscope today read your daily horoscope predictions for june 4, 2023Horoscope Today : ಈ ರಾಶಿಯವರು ಇಂದು ವಾಹನ ಚಲಾಯಿಸುವಾಗ ಎಚ್ಚರಿಕೆ ವಹಿಸಲೇಬೇಕು! - Vistara News

ಪ್ರಮುಖ ಸುದ್ದಿ

Horoscope Today : ಈ ರಾಶಿಯವರು ಇಂದು ವಾಹನ ಚಲಾಯಿಸುವಾಗ ಎಚ್ಚರಿಕೆ ವಹಿಸಲೇಬೇಕು!

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಹುಣ್ಣಿಮೆಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (04-06-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.

ತಿಥಿ: ಹುಣ್ಣಿಮೆ 09:10 ವಾರ: ಭಾನುವಾರ
ನಕ್ಷತ್ರ: ಜ್ಯೇಷ್ಠ 27:21 ಯೋಗ: ಸಿದ್ದಿ 11:57
ಕರಣ: ಭವ 09:10 ಇಂದಿನ ವಿಶೇಷ: ಕಾರ ಹುಣ್ಣಿಮೆ, ಭೂಮಿ ಪೂರ್ಣಿಮಾ, ಸಂತ ಕಬೀರ ದಾಸ ಜಯಂತಿ.
ಅಮೃತಕಾಲ: ರಾತ್ರಿ 07 ಗಂಟೆ 12 ನಿಮಿಷದಿಂದ ರಾತ್ರಿ 08 ಗಂಟೆ 41 ನಿಮಿಷದವರೆಗೆ.

ಸೂರ್ಯೋದಯ : 05:52 ಸೂರ್ಯಾಸ್ತ : 06:44

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ : ಆರ್ಥಿಕವಾಗಿ ಬಲಿಷ್ಠರಾಗುವಿರಿ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಒತ್ತಡ. ಹಳೆಯ ಸ್ನೇಹಿತರ ಜೊತೆ ಕಾಲ ಕಳೆಯುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಪ್ರಯಾಣ ಮಾಡುವ ಸಾಧ್ಯತೆ. ಅನಿರೀಕ್ಷಿತ ಲಾಭಗಳನ್ನು ಪಡೆಯುವಿರಿ. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಸಾಮಜಿಕ ಕಾರ್ಯಗಳಲ್ಲಿ ತೊಡಗುವ ಸಾಧ್ಯತೆ. ಉದ್ಯೋಗಿಗಳಿಗೆ ಒತ್ತಡ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಬಲವಂತವಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ ಬರಬಹುದು. ಇಂದಿನ ದಿವಸ ಗಾಬರಿಯಿಂದ ಇರುವ ಸಾಧ್ಯತೆ. ಅಪಘಾತ ಸಂಭವ. ನಿಧಾನವಾಗಿ ವಾಹನ ಚಾಲನೆ ಮಾಡಿ. ಕುಟುಂಬದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವಿರಿ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಒತ್ತಡದ ಜೀವನಕ್ಕೆ ವಿಶ್ರಾಂತಿ ಸಿಗಲಿದೆ. ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ. ಅಗತ್ಯ ವಸ್ತುಗಳ ಖರೀದಿ. ಸಹದ್ಯೋಗಿಗಳ ಬೆಂಬಲ ದೊರೆಯಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಮಾನಸಿಕ ಆರೋಗ್ಯ ಸದೃಢ. ಅತಿ ಅವಶ್ಯಕ ಕೆಲಸದ ಕಾರಣ ದೈಹಿಕ ಶ್ರಮ. ಉದ್ಯೋಗಿಗಳಿಗೆ ಸಹಕಾರ ದೊರೆಯಲಿದೆ. ಆರೋಗ್ಯ ಉತ್ತಮ. ಕೌಟುಂಬಿಕ ಕಲಹಗಳಿಗೆ ದ್ವನಿಯಾವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ದೀರ್ಘಕಾಲದ ಪ್ರಯಾಣ. ನಿರೀಕ್ಷೆಗೆ ತಕ್ಕಂತೆ ಫಲ ಸಿಗಲಿದೆ. ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವ ಅವಕಾಶ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಕುಟುಂಬದಲ್ಲಿನ ಹಿರಿಯರೊಂದಿಗೆ ವಾದಕ್ಕೆ ಇಳಿಯುವುದು ಬೇಡ. ಆರ್ಥಿಕ ಪ್ರಗತಿ ಸಾಧಾರಣ. ಹರಟೆಯಿಂದ ಕಾಲ ಹರಣ ಮಾಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗುವವು. ಸಕರಾತ್ಮಕ ಆಲೋಚನೆ ಮಾಡಿವಿರಿ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಉತ್ತಮ ಫಲಿತಾಂಶ ದೊರೆಯಲಿದೆ. ಆತ್ಮವಿಶ್ವಾಸ ಹೆಚ್ಚಲಿದೆ. ಕುಟುಂಬದ ಸದಸ್ಯರ ಮೇಲೆ ಕೋಪಗೊಳ್ಳುವುದು ಬೇಡ. ಆರೋಗ್ಯ ಮಧ್ಯಮ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಉತ್ತಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ಸಾಮಾಜಿಕ ಕಾರ್ಯಗಳಲ್ಲಿ ಭಾಗಿ. ಇಂದು ಪ್ರಯಾಣ ಮಾಡುವ ಸಾಧ್ಯತೆ. ಆರ್ಥಿಕ ಪ್ರಗತಿ ಉತ್ತಮ. ಪ್ರಮುಖ ಯೋಜನೆ ಕೈಗೊಳ್ಳುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ನಿಮ್ಮ ವರ್ತನೆ ಇತರರಿಗೆ ಮುಜುಗರ ಉಂಟು ಮಾಡುವ ಸಾಧ್ಯತೆ. ಯಾರೊಂದಿಗೂ ಅತಿಯಾದ ಸಲುಗೆ ಬೇಡ. ಆತುರದ ಮಾತುಗಳು ಅಪಾಯ ತರುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

ನಿಮ್ಮ ಮಕ್ಕಳ ಈ ವಿಷಯಗಳು ನಿಮಗೆ ಗೊತ್ತಾ? ಈ ವಿಡಿಯೋ ನೋಡಿ.
Horoscope Today

ಮೀನ: ಒತ್ತಡದ ಕೆಲಸದಿಂದ ಮುಕ್ತಿ. ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವುದು. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : Saturn Astrology : ಈ ಮೂರು ರಾಶಿಯವರಿಗೆ ಸದಾ ಇರಲಿದೆ ಶನಿ ದೇವರ ಕೃಪೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಕಾಂಗ್ರೆಸ್‌ಗೆ ಅಧಿಕಾರ ಸಿಕ್ಕರೆ ಪಿತ್ರಾರ್ಜಿತ ಆಸ್ತಿಯಲ್ಲಿ ಸರ್ಕಾರಕ್ಕೆ ಪಾಲು; ‘ಕೈ’ಗೆ ಇಕ್ಕಟ್ಟು, ಬಿಜೆಪಿಗೆ ಅಸ್ತ್ರ

Lok Sabha Election 2024: ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ಸಾಮಾನ್ಯ ಕಾರ್ಯಕರ್ತನವರೆಗೂ ಈ ವಿಚಾರವನ್ನು ಪ್ರಸ್ತಾಪ ಮಾಡಲು ತಂತ್ರಗಾರಿಕೆ ಹೆಣೆಯಲಾಗಿದೆ. ಮಾಸ್ ಮತದಾರರನ್ನು ಟಾರ್ಗೆಟ್ ಮಾಡಿ ಈ ವಿಚಾರವನ್ನು ಬಿಜೆಪಿ ಪ್ರಸ್ತಾಪ ಮಾಡುತ್ತಿದೆ. ದಿನೇ ದಿನೇ ಬಿಜೆಪಿ ಈ ವಿಚಾರವನ್ನು ಪ್ರಸ್ತಾಪ ಮಾಡುತ್ತಿದ್ದಂತೆ ಕಾಂಗ್ರೆಸ್‌ಗೆ ಇದರ ಡ್ಯಾಮೇಜ್‌ನ ಅರಿವಾಗಿದೆ. ಚುನಾವಣೆಯಲ್ಲಿ ಇದು ದೊಡ್ಡ ಹೊಡೆತವನ್ನು ಕೊಡಬಹುದು ಎಂದು ಅಂದಾಜಿಸಿದೆ. ಈ ಕಾರಣಕ್ಕೆ ಎಚ್ಚೆತ್ತುಕೊಂಡ ಕೈಪಡೆ ಈಗ ಸ್ಯಾಮ್‌ ಪಿತ್ರೋಡ ಹೇಳಿಕೆಯಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದೆ.

VISTARANEWS.COM


on

Lok Sabha Election 2024 BJP rejects Sam Pitroda statement
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಆಡುವ ಒಂದೊಂದು ಮಾತುಗಳೂ ಪ್ರಾಮುಖ್ಯತೆಯನ್ನು ಪಡೆಯುತ್ತವೆ. ಕೆಲವು ಮಾತುಗಳು ಪ್ಲಸ್‌ ಮಾಡಿದರೆ, ಮತ್ತೆ ಕೆಲವು ಭಾರಿ ಡ್ಯಾಮೇಜ್‌ ಮಾಡುತ್ತವೆ. ಈಗ ಉದ್ಯಮಿ ಸ್ಯಾಮ್‌ ಪಿತ್ರೋಡ (Sam Pitroda) ಕಾಂಗ್ರೆಸ್‌ ಪರವಾಗಿ ಆಡಿದ ಮಾತುಗಳು ಕೈಪಡೆಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ. “ಪಿತ್ರಾರ್ಜಿತ ಆಸ್ತಿಗಳನ್ನು (Ancestral property) ಮಕ್ಕಳಿಗೆ ಹಸ್ತಾಂತರಿಸುವ ಸಂದರ್ಭದಲ್ಲಿ ಅಮೆರಿಕದಲ್ಲಿ ಜಾರಿಯಲ್ಲಿರುವ ಕಾನೂನನ್ನು ಭಾರತದಲ್ಲಿಯೂ ಅನುಷ್ಠಾನಕ್ಕೆ ತರಬೇಕು. ಪಿತ್ರಾರ್ಜಿತ ಆಸ್ತಿಗೂ ತೆರಿಗೆ ವಿಧಿಸಬೇಕು. ಇದರಲ್ಲಿ ಶೇಕಡಾ 55ರಷ್ಟು ಪಾಲನ್ನು ಸರ್ಕಾರಕ್ಕೆ ಕೊಡಬೇಕು” ಎಂಬ ಸ್ಯಾಮ್ ‌ಪಿತ್ರೋಡ ಹೇಳಿಕೆಯು ಈಗ ಭಾರಿ ವಿವಾದವನ್ನು ಸೃಷ್ಟಿಸಿದೆ. ಇದನ್ನು ಬಿಜೆಪಿ ಚುನಾವಣಾ ಅಸ್ತ್ರ ಮಾಡಿಕೊಂಡಿದ್ದು, ಕಾಂಗ್ರೆಸ್‌ ಇಕ್ಕಟ್ಟಿಗೆ ಸಿಲುಕಿದೆ. ಈ ಹೇಳಿಕೆಗೂ ನಮಗೂ ಸಂಬಂಧವೇ ಇಲ್ಲವೆಂದು ಸ್ಪಷ್ಟೀಕರಣ ಕೊಡುತ್ತಿದೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಸಹ ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಡಿಕೆಶಿ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿ, ಈ ರೀತಿ ಮಾಡಲು ಕಾನೂನಿನಲ್ಲಿ ಅವಕಾಶವೇ ಇಲ್ಲ ಎಂದು ಹೇಳಿದ್ದಾರೆ.

ದೇಶದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಶುರುವಾಗುವ ಮುನ್ನ ಕಾಂಗ್ರೆಸ್‌ಗೆ ಸ್ಯಾಮ್‌ ಪಿತ್ರೋಡ ಹೇಳಿಕೆ ನುಂಗಲಾರದ ತುತ್ತಾಗಿದೆ. ಕಾರಣ, ಈ ಹೇಳಿಕೆಯನ್ನು ಸರಿಯಾಗಿ ಬಳಸಿಕೊಳ್ಳಲು ಬಿಜೆಪಿ ಮುಂದಾಗಿದೆ. ಇದನ್ನೇ ಚುನಾವಣಾ ಅಸ್ತ್ರವನ್ನಾಗಿ ಮಾಡಿಕೊಂಡಿದೆ. “ಪಿತ್ರಾರ್ಜಿತ ಆಸ್ತಿಗೆ ಕಾಂಗ್ರೆಸ್ ಕೊಕ್ಕೆ” ಎಂಬ ಅಭಿಯಾನವನ್ನೂ ಬಿಜೆಪಿ ಶುರು ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ಸಾಮಾನ್ಯ ಕಾರ್ಯಕರ್ತನವರೆಗೂ ಈ ವಿಚಾರವನ್ನು ಪ್ರಸ್ತಾಪ ಮಾಡಲು ತಂತ್ರಗಾರಿಕೆ ಹೆಣೆಯಲಾಗಿದೆ. ಮಾಸ್ ಮತದಾರರನ್ನು ಟಾರ್ಗೆಟ್ ಮಾಡಿ ಈ ವಿಚಾರವನ್ನು ಬಿಜೆಪಿ ಪ್ರಸ್ತಾಪ ಮಾಡುತ್ತಿದೆ. ದಿನೇ ದಿನೇ ಬಿಜೆಪಿ ಈ ವಿಚಾರವನ್ನು ಪ್ರಸ್ತಾಪ ಮಾಡುತ್ತಿದ್ದಂತೆ ಕಾಂಗ್ರೆಸ್‌ಗೆ ಇದರ ಡ್ಯಾಮೇಜ್‌ನ ಅರಿವಾಗಿದೆ. ಚುನಾವಣೆಯಲ್ಲಿ ಇದು ದೊಡ್ಡ ಹೊಡೆತವನ್ನು ಕೊಡಬಹುದು ಎಂದು ಅಂದಾಜಿಸಿದೆ. ಈ ಕಾರಣಕ್ಕೆ ಎಚ್ಚೆತ್ತುಕೊಂಡ ಕೈಪಡೆ ಈಗ ಸ್ಯಾಮ್‌ ಪಿತ್ರೋಡ ಹೇಳಿಕೆಯಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದೆ. ಈ ಬಗ್ಗೆ ಕೇಂದ್ರ ಮಟ್ಟದಲ್ಲಿಯೂ ಸ್ಪಷ್ಟೀಕರಣವನ್ನು ನೀಡಲಾಗಿದೆ. ಆದರೆ, ಬಿಜೆಪಿ ಮಾತ್ರ ಇದನ್ನೂ ಹಳ್ಳಿ ಹಳ್ಳಿಗೂ ಕೊಂಡೊಯ್ಯಲು ಪ್ಲ್ಯಾನ್‌ ಮಾಡಿಕೊಂಡಿದೆ.

ಇದನ್ನೂ ಓದಿ: Bank fraud: ಗುರು ರಾಘವೇಂದ್ರ, ವಸಿಷ್ಠ ಸಹಕಾರ ಬ್ಯಾಂಕ್‌ಗಳ ಹಗರಣ ಎಸ್‌ಐಟಿ ಹೆಗಲಿಗೆ; ಶೀಘ್ರ ಕ್ರಮವೆಂದ ಡಿಕೆಶಿ

ಡಿ.ಕೆ. ಶಿವಕುಮಾರ್‌ ಹೇಳಿದ್ದೇನು?

ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಇಂತಹ ಕಾನೂನನ್ನು ತರಲು ಸಾಧ್ಯವೇ ಇಲ್ಲ. ನಮ್ಮದು ಕೂಡಾ ಆಸ್ತಿ ಇದೆ. ಸ್ಯಾಮ್‌ ಪಿತ್ರೋಡ ಅವರ ಹೇಳಿಕೆಯನ್ನು ತಿರುಚುವ ಕೆಲಸ ಆಗುತ್ತಿದೆ ಎಂದು ಹೇಳಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಸಹ ಈ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಣೆ ಮಾಡಿದ್ದಾರೆ.

Continue Reading

ದೇಶ

Rahul Gandhi: ಅಮೇಥಿಯಲ್ಲಿ ರಾಹುಲ್‌ ಗಾಂಧಿ ಸ್ಪರ್ಧೆ ಖಚಿತ; ಸ್ಮೃತಿ ಇರಾನಿಗೆ ಕೈ ನಾಯಕ ಸವಾಲು!

Rahul Gandhi: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಉತ್ತರ ಪ್ರದೇಶದ ಅಮೇಥಿ ಲೋಕಸಭೆ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ ಎಂಬುದಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಮಾಹಿತಿ ನೀಡಿದ್ದಾರೆ. ಇದಕ್ಕೂ ಮೊದಲು ರಾಹುಲ್‌ ಗಾಂಧಿ ಅವರು ವಯನಾಡು ಲೋಕಸಭೆ ಕ್ಷೇತ್ರದಲ್ಲಿ ಮಾತ್ರ ಸ್ಪರ್ಧಿಸಲಿದ್ದಾರೆ. ಅಮೇಥಿಯಲ್ಲಿ ಅವರು ಸ್ಪರ್ಧಿಸುವುದಿಲ್ಲ ಎಂಬ ಮಾತುಗಳು ಕೇಳಿಬಂದಿದ್ದವು.

VISTARANEWS.COM


on

Rahul Gandhi
Koo

ಲಖನೌ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಕೇರಳದ ವಯನಾಡು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ರಾಹುಲ್‌ ಗಾಂಧಿ (Rahul Gandhi) ಅವರು ಉತ್ತರ ಪ್ರದೇಶದ ಅಮೇಥಿ (Amethi) ಕ್ಷೇತ್ರದಲ್ಲೂ ಸ್ಪರ್ಧಿಸುವುದು ಖಚಿತವಾಗಿದೆ. ರಾಹುಲ್‌ ಗಾಂಧಿ ಅವರು ಅಮೇಥಿ ಕ್ಷೇತ್ರದಿಂದಲೂ ಸ್ಪರ್ಧಿಸುವ ಕುರಿತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ (Akhilesh Yadav) ಅವರು ಸ್ಪಷ್ಟಪಡಿಸಿದ್ದಾರೆ. ಸಮಾಜವಾದಿ ಪಕ್ಷವು ಇಂಡಿಯಾ ಒಕ್ಕೂಟದ ಭಾಗವಾಗಿರುವ ಕಾರಣ ಅಖಿಲೇಶ್‌ ಯಾದವ್‌ ಅವರ ಹೇಳಿಕೆಯು ಪ್ರಾಮುಖ್ಯತೆ ಪಡೆದಿದೆ.

“ನೀವು ಕನೌಜ್‌ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೀರಿ. ನಿಮ್ಮ ಗೆಳೆಯ ರಾಹುಲ್‌ ಗಾಂಧಿ ಅವರು ಅಮೇಥಿಯಿಂದ ಸ್ಪರ್ಧಿಸುತ್ತಿದ್ದಾರೆ” ಎಂದು ಸುದ್ದಿಗಾರರು ಕೇಳಿದ್ದಕ್ಕೆ ಅಖಿಲೇಶ್‌ ಯಾದವ್‌ ಪ್ರತಿಕ್ರಿಯಿಸಿದರು. “ಹೌದು, ಖಂಡಿತವಾಗಿಯೂ ಎಲ್ಲರೂ ಬರುತ್ತೇವೆ. ಉತ್ತರ ಪ್ರದೇಶದಲ್ಲಿ ಎಲ್ಲರೂ ಒಗ್ಗೂಡಿ ಹೋರಾಡುತ್ತೇವೆ. ಚುನಾವಣಾ ಬಾಂಡ್‌ ಕೇಸ್‌ ಕುರಿತು ಸುಪ್ರೀಂ ಕೋರ್ಟ್‌ ತೀರ್ಪು ಬರುತ್ತಲೇ ಬಿಜೆಪಿಯವರ ಬಣ್ಣ ಬಯಲಾಗಿದೆ” ಎಂದು ಅಖಿಲೇಶ್‌ ಯಾದವ್‌ ಹೇಳಿದರು. ಆ ಮೂಲಕ ಅಮೇಥಿಯಿಂದಲೂ ರಾಹುಲ್‌ ಗಾಂಧಿ ಸ್ಪರ್ಧಿಸುತ್ತಿದ್ದಾರೆ ಎಂಬುದರ ಸುಳಿವು ನೀಡಿದರು.

ರಾಹುಲ್‌ ಗಾಂಧಿ ಅವರು ಕೇರಳದ ವಯನಾಡು ಲೋಕಸಭೆ ಕ್ಷೇತ್ರದಿಂದ ಎರಡನೇ ಬಾರಿ ಸ್ಪರ್ಧಿಸುತ್ತಿದ್ದು, ಏಪ್ರಿಲ್‌ 26ರಂದು ಮತದಾನ ನಡೆಯಲಿದೆ. ಇನ್ನು ರಾಯ್‌ಬರೇಲಿಯಿಂದ ಸ್ಪರ್ಧಿಸುತ್ತಿದ್ದ ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ಆಯ್ಕೆಯಾಗುವ ಮೂಲಕ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಈ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅಥವಾ ಅವರ ಪತಿ ರಾಬರ್ಟ್‌ ವಾದ್ರಾ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಹುಲ್‌ ಗಾಂಧಿ ಅವರು ಅಮೇಥಿಯಿಂದ 2004ರಿಂದಲೂ ಸ್ಪರ್ಧಿಸಿ, ಗೆಲುವು ಸಾಧಿಸುತ್ತಿದ್ದರು. ಆದರೆ, 2019ರಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಅವರು ಸೋಲನುಭವಿಸಿದ ಕಾರಣ ವಯನಾಡು ಅವರ ಲೋಕಸಭೆ ಕ್ಷೇತ್ರವಾಗಿದೆ. ಈ ಬಾರಿಯೂ ರಾಹುಲ್‌ ಗಾಂಧಿ ಅವರು ಅಮೇಥಿಯಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಾಯ್‌ಬರೇಲಿಯಲ್ಲಿ ಸೋನಿಯಾ ಗಾಂಧಿ ಅವರು ಕೂಡ 2004ರಿಂದ ಸ್ಪರ್ಧಿಸುತ್ತಿದ್ದರು. ಈಗ ಮತ್ತೆ ರಾಹುಲ್‌ ಗಾಂಧಿ ಹಾಗೂ ಸ್ಮೃತಿ ಇರಾನಿ ಅವರ ಮಧ್ಯೆ ವಯನಾಡಿನಲ್ಲಿ ತೀವ್ರ ಸ್ಪರ್ಧೆ ಏರ್ಪಟ್ಟಿದೆ.

ರಾಮಮಂದಿರಕ್ಕೆ ಭೇಟಿ?

ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತೆರಳದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶ್ರೀರಾಮನ ವಿರೋಧಿ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಇದು ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ರಾಮಮಂದಿರಕ್ಕೆ ಭೇಟಿ ನೀಡುವ ಮೂಲಕ ಕಾಂಗ್ರೆಸ್‌ ರಾಮಮಂದಿರ ವಿರೋಧಿ ಅಲ್ಲ ಎಂಬ ಸಂದೇಶ ರವಾನಿಸುವ ಉದ್ದೇಶವಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘನೆ; ಮೋದಿ, ರಾಹುಲ್‌ ಗಾಂಧಿ ಪ್ರತಿಕ್ರಿಯೆ ಕೇಳಿದ ಚುನಾವಣೆ ಆಯೋಗ!

Continue Reading

ದೇಶ

ನೀತಿ ಸಂಹಿತೆ ಉಲ್ಲಂಘನೆ; ಮೋದಿ, ರಾಹುಲ್‌ ಗಾಂಧಿ ಪ್ರತಿಕ್ರಿಯೆ ಕೇಳಿದ ಚುನಾವಣೆ ಆಯೋಗ!

ದ್ವೇಷ ಭಾಷಣ, ಧರ್ಮ, ಜಾತಿ, ಸಮುದಾಯಗಳನ್ನು ಪ್ರಸ್ತಾಪಿಸಿ ಮತಯಾಚನೆ, ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಹಾಗೂ ರಾಹುಲ್‌ ಗಾಂಧಿ ಅವರಿಗೆ ಚುನಾವಣಾ ಆಯೋಗವು ನೋಟಿಸ್‌ ನೀಡಿದೆ. ಏಪ್ರಿಲ್‌ 29ರ ಬೆಳಗ್ಗೆ 11 ಗಂಟೆಯೊಳಗೆ ಇಬ್ಬರೂ ನಾಯಕರು ಪ್ರತಿಕ್ರಿಯೆ ನೀಡಬೇಕು ಎಂಬುದಾಗಿ ಸೂಚನೆ ನೀಡಿದೆ.

VISTARANEWS.COM


on

Election Commission
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ಮಾದರಿ ನೀತಿ ಸಂಹಿತೆ ಉಲ್ಲಂಘನೆ (MCC Violations) ಮಾಡಿದ ಕುರಿತಂತೆ ಚುನಾವಣೆ ಆಯೋಗವು ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರ ಪ್ರತಿಕ್ರಿಯೆ ಕೇಳಿದೆ. ಏಪ್ರಿಲ್‌ 29ರ ಬೆಳಗ್ಗೆ 11 ಗಂಟೆಯೊಳಗೆ ಇಬ್ಬರೂ ನಾಯಕರು ಪ್ರತಿಕ್ರಿಯೆ ನೀಡಬೇಕು ಎಂಬುದಾಗಿ ಚುನಾವಣೆ ಆಯೋಗವು (Election Commission) ಸೂಚನೆ ನೀಡಿದೆ.

ನರೇಂದ್ರ ಮೋದಿ ಹಾಗೂ ರಾಹುಲ್‌ ಗಾಂಧಿ ಅವರು ಚುನಾವಣೆ ಪ್ರಚಾರದ ವೇಳೆ ಜಾತಿ, ಧರ್ಮ, ಸಮುದಾಯ ಹಾಗೂ ಭಾಷೆ ಆಧಾರದ ಮೇಲೆ ಮತಗಳನ್ನು ಕೇಳಿದ್ದಾರೆ. ದ್ವೇಷ ಹರಡುವ ರೀತಿಯಲ್ಲಿ ಇವರು ಮಾತನಾಡಿದ್ದಾರೆ ಎಂಬ ಕುರಿತು ಆರೋಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಚುನಾವಣೆ ಆಯೋಗವು ಇಬ್ಬರು ನಾಯಕರ ಪ್ರತಿಕ್ರಿಯೆ ಕೇಳಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಆಸ್ತಿ ಹಂಚಿಕೆ ವಿಷಯ ಪ್ರಸ್ತಾಪಿಸಿದ್ದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಿಮ್ಮ ಮಂಗಳಸೂತ್ರವನ್ನು ಮುಸ್ಲಿಮರಿಗೆ ನೀಡುತ್ತದೆ ಎಂದಿದ್ದರು. “ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ನಿಮ್ಮ ಆದಾಯ ಮತ್ತು ಆಸ್ತಿಯ ಮೇಲೆ ಕಣ್ಣಿಟ್ಟಿವೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಇದನ್ನು ಉಲ್ಲೇಖಿಸಿದೆ. ಮಹಿಳೆಯರು ಚಿನ್ನವನ್ನು ಆಭರಣಗಳ ರೂಪದಲ್ಲಿ ಧರಿಸಲು ಮಾತ್ರವಲ್ಲ, ಅದನ್ನು ರಸಕ್ಷಿಸಲು ಕಾನೂನಿನಲ್ಲಿ ಅವಕಾಶವಿದೆ. ಆದರೆ ಈಗ ಅವರ ಕಣ್ಣು ಮಹಿಳೆಯರ ಮಂಗಳಸೂತ್ರದ ಮೇಲೆ ನೆಟ್ಟಿದೆ. ತಾಯಿ ಮತ್ತು ಸಹೋದರಿಯರ ಚಿನ್ನವನ್ನು ದೋಚುವುದು ಇವರ ಉದ್ದೇಶ. ಹೀಗಾಗಿ ಅವರು ಅಧಿಕಾರಕ್ಕೆ ಬಂದರೆ ನಿಮ್ಮ ಮಂಗಳಸೂತ್ರವೂ ಸುರಕ್ಷಿತವಲ್ಲʼʼ ಎಂದು ಮೋದಿ ಹೇಳಿದ್ದರು.

ನರೇಂದ್ರ ಮೋದಿ ಅವರ ಹೇಳಿಕೆಗೆ ದೇಶಾದ್ಯಂತ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. ನರೇಂದ್ರ ಮೋದಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ಪ್ರತಿಪಕ್ಷಗಳ ನಾಯಕರು ಆಗ್ರಹಿಸಿದ್ದರು. ಇದಕ್ಕೂ ಮೊದಲು ಮೋದಿ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಬೇಕು ಚುನಾವಣೆ ಆಯೋಗವು ನಿರಾಕರಿಸಿತ್ತು. ರಾಹುಲ್‌ ಗಾಂಧಿ ಅವರ ಕೆಲ ಹೇಳಿಕೆಗಳ ಕುರಿತು ಕೂಡ ಅಸಮಾಧಾನ ವ್ಯಕ್ತವಾಗಿತ್ತು. ಹಾಗಾಗಿ, ಚುನಾವಣಾ ಆಯೋಗವು ಇಬ್ಬರೂ ನಾಯಕರಿಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

ರಾಜಕೀಯ ಭಾಷಣ ತೆರವಿಗೆ ಆಯೋಗ ಆದೇಶ

ರಾಜಕೀಯ ನಾಯಕರು ನೀಡುವ ವಿವಾದಾತ್ಮಕ ಹೇಳಿಕೆಗಳ ಭಾಷಣಗಳ ವಿಡಿಯೊ, ಪೋಸ್ಟ್‌ಗಳನ್ನು ತೆಗೆದುಹಾಕುವಂತೆ ಇದಕ್ಕೂ ಮೊದಲು ಚುನಾವಣಾ ಆಯೋಗವು ಎಕ್ಸ್‌ ಸಾಮಾಜಿಕ ಜಾಲತಾಣಕ್ಕೆ ಸೂಚಿಸಿದೆ. ಈ ಮಧ್ಯೆ ಚುನಾವಣಾ ಆಯೋಗ ಆದೇಶದಂತೆ ಸಾಮಾಜಿಕ ಜಾಲತಾಣ ಎಕ್ಸ್‌ ರಾಜಕಾರಣಿಗಳು, ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಭಾಷಣವನ್ನು ಒಳಗೊಂಡಿರುವ ಕೆಲವು ಪೋಸ್ಟ್‌ಗಳನ್ನು ತೆಗೆದು ಹಾಕಿದೆ.

ಇದನ್ನೂ ಓದಿ: Lok Sabha Election 2024: ಹಿಂದೂ ಧರ್ಮದ ಉಳಿವಿಗಾಗಿ ಮತ್ತೆ ಮೋದಿ ಬೆಂಬಲಿಸಿ: ಪ್ರಲ್ಹಾದ್‌ ಜೋಶಿ

Continue Reading

ಬೆಂಗಳೂರು

Bank fraud: ಗುರು ರಾಘವೇಂದ್ರ, ವಸಿಷ್ಠ ಸಹಕಾರ ಬ್ಯಾಂಕ್‌ಗಳ ಹಗರಣ ಎಸ್‌ಐಟಿ ಹೆಗಲಿಗೆ; ಶೀಘ್ರ ಕ್ರಮವೆಂದ ಡಿಕೆಶಿ

Bank fraud: ಎಸ್‌ಐಟಿ ತನಿಖೆ ನಡೆಸುವ ಸಂಬಂಧ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ ಎಂದು ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ ಈಗ ಠೇವಣಿದಾರರು ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ತಮಗೆ ಸಾಕಷ್ಟು ಅನ್ಯಾಯ ಆಗಿದೆ. ಕೋಟಿ ಕೋಟಿ ಕಳೆದುಕೊಂಡಿದ್ದೇವೆ. ನ್ಯಾಯ ಕೇಳೋಕೆ ಹೋದರೆ ಯಾವುದೇ ಪರಿಹಾರ ಇಲ್ಲ. ಮೂರು ವರ್ಷದಿಂದ ಒಂದು ದೂರು ಕೂಡ ದಾಖಲಾಗಿಲ್ಲ. ಕಾಂಗ್ರೆಸ್‌ ಮುಖಂಡ ಶಂಕರ್ ಗುಹಾ ಅವರು ಬಂದ ಮೇಲೆ ದೂರು ದಾಖಲಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

VISTARANEWS.COM


on

Guru Raghavendra and Vasishta Co operative Bank fraud handed over to SIT says DK Shivakumar
Koo

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಹಗರಣದ (Bank fraud) ತನಿಖೆ ಹೊಣೆಯನ್ನು ಎಸ್‌ಐಟಿಗೆ (SIT Investigation) ವಹಿಸುವಂತೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಬಳಿ ಚರ್ಚೆ ನಡೆಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ಭರವಸೆ ನೀಡಿದ್ದಾರೆ.

ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಠೇವಣಿದಾರರು ಗುರುವಾರ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಮನವಿ ಮಾಡಿದ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಈ ಭರವಸೆ ನೀಡಿದರು.

ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬೆಂಗಳೂರಿಗೆ ಪ್ರಿಯಾಂಕಾ ಗಾಂಧಿ (Priyanka Gandhi) ಆಗಮಿಸಿದ್ದ ವೇಳೆ ಅವರನ್ನು ಭೇಟಿ ಮಾಡಿದ್ದ ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಠೇವಣಿದಾರರು ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದರು. ಈ ಬ್ಯಾಂಕ್‌ಗಳಲ್ಲಿ ಲಕ್ಷಾಂತರ ರೂಪಾಯಿಯನ್ನು ಹೂಡಿಕೆ ಮಾಡಿದ್ದೇವೆ. ಈಗ ಹಗರಣದಿಂದಾಗಿ ನಮಗೆ ನಯಾ ಪೈಸೆ ಸಿಗುತ್ತಿಲ್ಲ. ಇದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ಕಷ್ಟಪಟ್ಟು ನಾವು ದುಡಿದಿದ್ದ ಹಣವನ್ನೆಲ್ಲ ಈ ಸಂಸ್ಥೆಯಲ್ಲಿ ಹೂಡಿಕೆ ಮಾಡಿಟ್ಟಿದ್ದೇವೆ. ಇದರಿಂದ ನಮಗೆ ತೀವ್ರ ಸಮಸ್ಯೆಯಾಗುತ್ತಿದೆ. ಈವರೆಗೆ ಯಾವ ಸರ್ಕಾರಗಳೂ ಈ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿಲ್ಲ. ನಮಗೆ ದಿಕ್ಕೇ ತೋಚದಂತಾಗಿದೆ. ಹೀಗಾಗಿ ಕೂಡಲೇ ಕ್ರಮವಹಿಸುವಂತೆ ಮನವಿ ಮಾಡಿದ್ದರು. ‌

ಎಸ್‌ಐಟಿ ತನಿಖೆಯ ಭರವಸೆ ನೀಡಿದ್ದ ಪ್ರಿಯಾಂಕಾ ಗಾಂಧಿ

ಠೇವಣಿದಾರರ ಮನವಿ ಸ್ವೀಕಾರ ಮಾಡಿದ್ದ ಪ್ರಿಯಾಂಕಾ ಗಾಂದಿ, ರಾಜ್ಯ ಸರ್ಕಾರದಿಂದ ಎಸ್‌ಐಟಿ ತನಿಖೆ ನಡೆಸುವ ಸಂಬಂಧ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ ಎಂದು ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ ಈಗ ಠೇವಣಿದಾರರು ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ತಮಗೆ ಸಾಕಷ್ಟು ಅನ್ಯಾಯ ಆಗಿದೆ. ಕೋಟಿ ಕೋಟಿ ಕಳೆದುಕೊಂಡಿದ್ದೇವೆ. ನ್ಯಾಯ ಕೇಳೋಕೆ ಹೋದರೆ ಯಾವುದೇ ಪರಿಹಾರ ಇಲ್ಲ. ಮೂರು ವರ್ಷದಿಂದ ಒಂದು ದೂರು ಕೂಡ ದಾಖಲಾಗಿಲ್ಲ. ಕಾಂಗ್ರೆಸ್‌ ಮುಖಂಡ ಶಂಕರ್ ಗುಹಾ ಅವರು ಬಂದ ಮೇಲೆ ದೂರು ದಾಖಲಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಸಿಎಂಗೆ ಪತ್ರ ಬರೆಯಲು ಮುಂದಾದ ಡಿ.ಕೆ. ಶಿವಕುಮಾರ್

ಮನವಿ ಸ್ವೀಕರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಈ ಸಂಬಂಧ ಮಾತನಾಡುತ್ತೇನೆ. ಶೀಘ್ರವೇ ಎಸ್‌ಐಟಿ ರಚನೆ ಮಾಡಲು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೆ, ಕೂಡಲೇ ಈ ಸಂಬಂಧ ಸಿಎಂಗೆ ಪತ್ರವನ್ನು ಸಿದ್ಧಪಡಿಸಲು ಸಿಬ್ಬಂದಿಗೆ ಸೂಚನೆ ನೀಡಿದರು.

ಗುರು ರಾಘವೇಂದ್ರ ಬ್ಯಾಂಕ್ ಹಗರಣದ​ ಹಿನ್ನೆಲೆ

ಚಾಲ್ತಿಯಲ್ಲಿರುವ ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿದ ಆರೋಪ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಮೇಲಿದೆ. ಹೆಚ್ಚಿನ ಬಡ್ಡಿ ಆಸೆಗೆ ಸಾವಿರಾರು ಗ್ರಾಹಕರು ಈ ಸಂಸ್ಥೆಯಲ್ಲಿ ನೂರಾರು ಕೋಟಿ ರೂ. ಠೇವಣಿ ಇಟ್ಟಿದ್ದರು. ಆದರೆ ಬ್ಯಾಂಕ್​​ ಸುಳ್ಳು ಸಾಲಗಾರರ ಖಾತೆ ತೆರೆದು ಈ ಹಣವನ್ನು ಲಾಂಡರಿಂಗ್​ ಮಾಡಿದೆ.

ಇದನ್ನೂ ಓದಿ: Lok Sabha Election 2024: ಮತ ಹಾಕಿಸಿಕೊಳ್ಳಲು ಚುನಾವಣಾಧಿಕಾರಿಗಳು ಮನೆಗೆ ಬಂದಾಗಲೇ 98ರ ವೃದ್ಧೆ ಸಾವು!

ಫೆಬ್ರವರಿ 2022 ರಲ್ಲಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಅಧಿಕಾರಿಯೊಬ್ಬರನ್ನು ಮನಿ ಲಾಂಡರಿಂಗ್ ಆರೋಪದ ಮೇಲೆ ಇಡಿ ಬಂಧಿಸಿತು. ಈವರೆಗೆ ಸಂಸ್ಥೆಯ ಅಧ್ಯಕ್ಷ ಸೇರಿ 4 ಮಂದಿಯನ್ನು ಬಂಧಿಸಲಾಗಿದೆ. ಬ್ಯಾಂಕ್‌​ನಿಂದ ವಂಚನೆಗೆ ಒಳಗಾದವರಲ್ಲಿ ಹಿರಿಯ ನಾಗರಿಕರೇ ಹೆಚ್ಚಿನವರಾಗಿದ್ದಾರೆ. ಹಿರಿಯ ನಾಗರಿಕರು ತಮ್ಮ ಉಳಿತಾಯ ಹಾಗೂ ನಿವೃತ್ತಿ ವೇತನದ ಹಣವನ್ನು ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆಗಾಗಿ ಗುರು ರಾಘವೇಂದ್ರ ಸಹಕಾರ ಬ್ಯಾಂಕ್​ನಲ್ಲಿ ಠೇವಣಿ ಇಟ್ಟಿದ್ದರು.

ಗುರು ರಾಘವೇಂದ್ರ ಬ್ಯಾಂಕ್‌ ಹಾಗೂ ಗುರು ಸಾರ್ವಭೌಮ ಬ್ಯಾಂಕ್‌ನಲ್ಲಿ 1,500 ಕೋಟಿ ರೂ. ಅಕ್ರಮ, ವಸಿಷ್ಠ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ 450 ರಿಂದ 500 ಕೋಟಿ ವಂಚನೆ ನಡೆದಿರುವ ಆರೋಪವಿದೆ.

Continue Reading
Advertisement
Lok Sabha Election 2024 BJP rejects Sam Pitroda statement
Lok Sabha Election 20243 mins ago

Lok Sabha Election 2024: ಕಾಂಗ್ರೆಸ್‌ಗೆ ಅಧಿಕಾರ ಸಿಕ್ಕರೆ ಪಿತ್ರಾರ್ಜಿತ ಆಸ್ತಿಯಲ್ಲಿ ಸರ್ಕಾರಕ್ಕೆ ಪಾಲು; ‘ಕೈ’ಗೆ ಇಕ್ಕಟ್ಟು, ಬಿಜೆಪಿಗೆ ಅಸ್ತ್ರ

Anant-Radhika wedding
ವಾಣಿಜ್ಯ8 mins ago

Anant- Radhika  wedding: 1,500 ಕೋಟಿ ರೂ. ದಾಟಲಿದೆ ಅಂಬಾನಿ ಮಗನ ಮದುವೆ ಖರ್ಚು!

Ballari Lok Sabha constituency Congress candidate e Tukaram election campaign at apmc market
ಬಳ್ಳಾರಿ15 mins ago

Lok Sabha Election 2024: ತಾಯಿ ನಾನು ನಿಮ್ಮ ಮಗನಂತೆ, ಮತ ನೀಡಿ ಗೆಲ್ಲಿಸಿ ಎಂದ ಈ. ತುಕಾರಾಂ

Rahul Gandhi
ದೇಶ31 mins ago

Rahul Gandhi: ಅಮೇಥಿಯಲ್ಲಿ ರಾಹುಲ್‌ ಗಾಂಧಿ ಸ್ಪರ್ಧೆ ಖಚಿತ; ಸ್ಮೃತಿ ಇರಾನಿಗೆ ಕೈ ನಾಯಕ ಸವಾಲು!

DC vs GT
ಕ್ರೀಡೆ39 mins ago

DC vs GT: ಕೊಹ್ಲಿಯಂತೆ ಅದ್ಭುತ ಫೀಲ್ಡಿಂಗ್​ ನಡೆಸಿ ಡೆಲ್ಲಿಗೆ ಗೆಲುವು ತಂದ ಟ್ರಿಸ್ಟಾನ್ ಸ್ಟಬ್ಸ್

Heeramandi Premiere Farida Jalal rare public appearance
ಬಾಲಿವುಡ್39 mins ago

Heeramandi Premiere: ʻಹೀರಾಮಂಡಿʼ ಪ್ರೀಮಿಯರ್‌ನಲ್ಲಿ ಅಪರೂಪವಾಗಿ ಕಂಡ ʻಕಭಿ ಖುಷಿ ಕಭಿ ಗಮ್ʼ ಸಿನಿಮಾ ನಟಿ!

Murder case In davanagere
ದಾವಣಗೆರೆ39 mins ago

Murder Case : ಮನೆ ಹಾಳು ಮಾಡಿದ ಕುಡಿತ; ತಾಯಿ ಸಾವಿಗೆ, ತಂದೆಯ ಕೊಂದ ಮಗ!

Election Commission
ದೇಶ57 mins ago

ನೀತಿ ಸಂಹಿತೆ ಉಲ್ಲಂಘನೆ; ಮೋದಿ, ರಾಹುಲ್‌ ಗಾಂಧಿ ಪ್ರತಿಕ್ರಿಯೆ ಕೇಳಿದ ಚುನಾವಣೆ ಆಯೋಗ!

arunachal pradesh landslide
ವೈರಲ್ ನ್ಯೂಸ್1 hour ago

Arunachal Pradesh landslide: ಅರುಣಾಚಲದಲ್ಲಿ ಭೂಕುಸಿತ, ಚೀನಾ ಗಡಿ ಪ್ರದೇಶಕ್ಕೆ ಸಂಪರ್ಕ ಬಂದ್‌

Neha Murder case CID Officer
ಹುಬ್ಬಳ್ಳಿ1 hour ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder case CID Officer
ಹುಬ್ಬಳ್ಳಿ1 hour ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20243 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

ಟ್ರೆಂಡಿಂಗ್‌