Site icon Vistara News

Horoscope Today : ಈ ನಾಲ್ಕು ರಾಶಿಯ ಉದ್ಯೋಗಿಗಳಿಗೆ ಇಂದು ಅದೃಷ್ಟದ ದಿನವಂತೆ!

Horoscope Today

#image_title

ಇಂದಿನ ಪಂಚಾಂಗ (05-06-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ:
ಪಾಡ್ಯ 06:38/ಬಿದಿಗೆ 27:48 ವಾರ: ಸೋಮವಾರ
ನಕ್ಷತ್ರ: ಮೂಲ 25:22 ಯೋಗ: ಸಾಧ್ಯ 08:47
ಕರಣ: ಕೌಲವ 06:38 ಇಂದಿನ ವಿಶೇಷ: ವಿಶ್ವ ಪರಿಸರ ದಿನ.
ಅಮೃತಕಾಲ: ರಾತ್ರಿ 07 ಗಂಟೆ 31 ನಿಮಿಷದಿಂದ ರಾತ್ರಿ 08 ಗಂಟೆ 59 ನಿಮಿಷದವರೆಗೆ.

ಸೂರ್ಯೋದಯ : 05:52 ಸೂರ್ಯಾಸ್ತ : 06:44

ರಾಹುಕಾಲ : ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ಆರೋಗ್ಯ ಪರಿಪೂರ್ಣವಾಗಿರಲಿದೆ. ಇಂದು ದೈಹಿಕ ಶ್ರಮ ಹೆಚ್ಚಲಿದೆ. ಸಂಶಯಾಸ್ಪದವಾದ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬಹುದು. ಆಪ್ತರಿಂದ ಸಿಹಿ ಸುದ್ದಿ ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ವೃಷಭ: ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗುವುದು. ಕುಟುಂಬದ ಆಪ್ತರಿಂದ ಆರ್ಥಿಕ ಸಹಾಯದ ಬೇಡಿಕೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ವಿದ್ಯಾರ್ಥಿಗಳು ಮನೋಬಲ ಹೆಚ್ಚಿಸಿಕೊಳ್ಳುವುದು ಅವಶ್ಯಕ. ಅಧೈರ್ಯ ಕಾಡಬಹುದು. ಆರೋಗ್ಯ ಮಧ್ಯಮ. ಉದ್ಯೋಗಿಗಳಿಗೆ ಕಿರಿಕಿರಿ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಮಿಥುನ: ಸದಾ ಹಗಲುಗನಸು ಕಾಣುತ್ತಾ ಕಾಲ ಕಳೆಯಬೇಡಿ. ಬೇರೆಯವರಿಗೆ ಆರ್ಥಿಕವಾಗಿ ಸಹಾಯ ಮಾಡಿ ನೀವು ಹಣಕಾಸಿನ ಸಮಸ್ಯೆಯಲ್ಲಿ ಸಿಲುಕುವುದು ಬೇಡ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಕಟಕ: ಯಾವುದಾದರೂ ಮೂಲದಿಂದ ಆರ್ಥಿಕವಾಗಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಹಣದ ಹರಿವು ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣ. ಆಪ್ತರೊಂದಿಗೆ ಮಾತುಕತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಸಿಂಹ: ಸಹೋದ್ಯೋಗಿಗಳಿಂದ ಬೆಂಬಲ ಸಿಗಲಿದೆ. ಕೆಲವು ಘಟನೆಗಳು ಮನಸ್ಸಿನ ಮೇಲೆ ಪರಿಣಾಮ ಬೀರುವವು. ಆರೋಗ್ಯ ಪರಿಪೂರ್ಣ. ಕ್ಷೇತ್ರ ದರ್ಶನ ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

ಕನ್ಯಾ: ದೀರ್ಘಕಾಲದ ಕೆಲಸ ಕಾರ್ಯಗಳು ಇಂದು ಯಶಸ್ಸನ್ನು ತಂದು ಕೊಡಲಿದೆ. ಆದಾಯದ ಮೂಲ ಹೆಚ್ಚಾಗಲಿದೆ. ಆಪ್ತರೊಂದಿಗೆ ಮಾತುಕತೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ, ಕುಟುಂಬದ ವಾತಾವರಣ ಹದಗೆಡುವ ಸಾಧ್ಯತೆ. ಉದ್ಯೋಗಿಗಳಿಗೆ ಕಿರಿಕಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಆತ್ಮವಿಶ್ವಾಸದಿಂದ ಕೆಲಸಕಾರ್ಯಗಳಲ್ಲಿ ಪ್ರಗತಿ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವಿರಿ. ಹಣಕಾಸು, ಉದ್ಯೋಗ ಹಾಗೂ ವ್ಯಾಪಾರದಲ್ಲಿ ಪ್ರಗತಿ. ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಕಾಲ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ವೃಶ್ಚಿಕ: ಆರೋಗ್ಯದ ಕುರಿತು ಕಾಳಜಿ ಇರಲಿ. ನ್ಯಾಯಾಲಯದಲ್ಲಿರುವ ವ್ಯಾಜ್ಯಗಳು ವಿಜಯವನ್ನು ತಂದುಕೊಡುವ ಸಾಧ್ಯತೆ. ಹಣಕಾಸು, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಧನಸ್ಸು: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಹಾದಿ ಅತ್ಯವಶ್ಯಕ. ಹಣಕಾಸು ವಿಷಯದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಮಿಶ್ರ ಫಲ. ಕೆಲಸ ಕಾರ್ಯಗಳಲ್ಲಿ ಯಶಸ್ಸು. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಮಕರ: ಬುದ್ಧಿವಂತಿಕೆಯಿಂದ ಕೆಲಸಕಾರ್ಯಗಳಲ್ಲಿ ಯಶಸ್ಸು ಕೀರ್ತಿ ಸಿಗುವುದು. ಶೀಘ್ರಕೋಪ ಅಪಾಯ ತರುವುದು. ಆರೋಗ್ಯ ಪರಿಪೂರ್ಣ. ಆರ್ಥಿಕ ಲಾಭ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

ಈ ಲೆಟರ್‌ ನಿಮ್ಮ ಹೆಸರಿನಲ್ಲಿದ್ದರೆ ನೀವು ಅದೃಷ್ಟವಂತರು..! ಈ ವಿಡಿಯೋ ನೋಡಿ.

ಕುಂಭ: ದುಂದುವೆಚ್ಚವನ್ನು ತಪ್ಪಿಸಿ. ಬುದ್ದಿವಂತಿಕೆಯಿಂದ ಕೆಲಸಮಾಡಿ. ಗೌಪ್ಯ ವಿಷಯಗಳನ್ನು ಬೇರೆಯವರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಮೀನ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ. ಆರೋಗ್ಯ ಮಧ್ಯಮ. ಆರ್ಥಿಕವಾಗಿ ಪ್ರಗತಿ. ಸಂಗಾತಿ ಇಂದು ನಿಮ್ಮೊಂದಿಗೆ ಮುಖ್ಯ ವಿಷಯದ ಕುರಿತು ಚರ್ಚಿಸಬಹುದು. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : ಶುಕ್ರ ಗ್ರಹ ಲಗ್ನದಲ್ಲಿದ್ದರೆ ಉತ್ತಮ ಆರೋಗ್ಯ, ಉಳಿದ ಮನೆಯಲ್ಲಿದ್ದರೆ ಯಾವೆಲ್ಲಾ ಫಲ?

Exit mobile version