Site icon Vistara News

Horoscope Today : ಈ ರಾಶಿಯವರ ಆರೋಗ್ಯದಲ್ಲಿ ಇಂದು ವ್ಯತ್ಯಾಸವಾಗಬಹುದು!

Horoscope Today health horoscope

#image_title

ಇಂದಿನ ಪಂಚಾಂಗ (14-06-2023)

ಶ್ರೀ ಶಕೇ 1945, ಶೋಭಕೃತ್‌ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.

ತಿಥಿ: ಏಕಾದಶಿ 08:47 ವಾರ: ಬುಧವಾರ
ನಕ್ಷತ್ರ: ಅಶ್ವಿನಿ 13:39 ಯೋಗ: ಅತಿಗಂಡ 26:59
ಕರಣ: ಬಾಲವ 08:47 ಇಂದಿನ ವಿಶೇಷ: ಬುಧ ಜಯಂತಿ, ಯೋಗಿನಿ ಏಕಾದಶಿ, ವಿಶ್ವ ರಕ್ತದಾನಿಗಳ ದಿನ.
ಅಮೃತಕಾಲ: ಬೆಳಗ್ಗೆ 06 ಗಂಟೆ 26 ನಿಮಿಷದಿಂದ 08 ಗಂಟೆ 02 ನಿಮಿಷದವರೆಗೆ.

ಸೂರ್ಯೋದಯ : 05:53 ಸೂರ್ಯಾಸ್ತ : 06:46

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ಅತಿಯಾದ ಒತ್ತಡ ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ. ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವವರ ಬಗ್ಗೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

ವೃಷಭ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಅವಕಾಶ ಸಿಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ. ಉತ್ತಮ ಆರೋಗ್ಯ. ಸಹದ್ಯೋಗಿಗಳಿಂದ ಕಿರಿಕಿರಿ, ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಮಿಥುನ: ಬಂಧುಗಳು ಟೀಕೆಗಳನ್ನು ಮಾಡುವ ಸಾಧ್ಯತೆ. ದಿನದ ಮಟ್ಟಿಗೆ ಒತ್ತಡ ನಿಮ್ಮ ಮಾನಸಿಕ ನೆಮ್ಮದಿ ಹಾಳು ಮಾಡುವ ಸಾಧ್ಯತೆ. ಸಂಯಮದಿಂದ ವರ್ತಿಸಿ. ಆರ್ಥಿಕ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ಕಟಕ: ಪ್ರಮುಖ ವ್ಯಕ್ತಿಗಳ ಸಹಕಾರ ಸಿಗಲಿದೆ. ಆತುರದ ತಿರ್ಮಾನ ತೆಗೆದುಕೊಳ್ಳುವುದು ಬೇಡ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣವಾಗಿರುತ್ತದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಸಿಂಹ: ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವು, ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಮಕ್ಕಳಿಂದ ಸಂತೋಷ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಕನ್ಯಾ: ನಿಮ್ಮ ವರ್ತನೆ ಕುಟುಂಬದ ಸದಸ್ಯರಿಗೆ ಕಿರಿಕಿರಿ ಉಂಟು ಮಾಡುವ ಸಾಧ್ಯತೆ. ಆರೋಗ್ಯದಲ್ಲಿ ವ್ಯತ್ಯಾಸ. ಹಣಕಾಸು ಪ್ರಗತಿ. ಬಂಧುಗಳ ಭೇಟಿ ಕೊಂಚ ಸಮಾಧಾನ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ. ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ವೃಶ್ಚಿಕ: ಕುಟುಂಬದ ಸದಸ್ಯರ ಆರೋಗ್ಯದ ಕಡೆ ಗಮನ ಇರಲಿ. ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವಂತೆ ಮಾಡಬಹುದು. ದಿನದ ಮಟ್ಟಿಗೆ ಖರ್ಚು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಧನಸ್ಸು: ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆಪ್ತ ಸ್ನೇಹಿತ- ಸಂಬಂಧಿಗಳ ಸಮಸ್ಯೆಗಳಿಗೆ ಸ್ಪಂದಿಸುವಿರಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಮಕರ: ಆರೋಗ್ಯ ಉತ್ತಮ. ಸ್ನೇಹಿತರ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತರುವುದು. ಅತಿರೇಖದಲ್ಲಿ ಮಾತನಾಡುವುದು ಬೇಡ. ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಕುಂಭ: ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ದೊರೆಯಲಿದೆ. ಹಿರಿಯರ ಮಾರ್ಗದರ್ಶನ ಸಿಗುವುದು. ಉತ್ತಮ ಆರೋಗ್ಯ. ಅನಿರೀಕ್ಷಿತ ಖರ್ಚು. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ.
ಅದೃಷ್ಟ ಸಂಖ್ಯೆ: 3

ಮೀನ: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕಾರ್ಯಗಳಲ್ಲಿ ಯಶಸ್ಸು. ಪಾಲುದಾರಿಕೆ ವ್ಯವಹಾರವು ನಷ್ಟ ತರುವುದು. ನಿಮ್ಮ ಉದಾರ ವರ್ತನೆಯನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : ಬಹುತೇಕ ಶುಭಫಲಗಳನ್ನೇ ನೀಡುವ ಬುಧನ ಭಾವಫಲಗಳು ಹೀಗಿವೆ

Exit mobile version