ಇಂದಿನ ಪಂಚಾಂಗ (16-06-2023)
ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ತ್ರಯೋದಶಿ 08:39 ವಾರ: ಶುಕ್ರವಾರ
ನಕ್ಷತ್ರ: ಕೃತ್ತಿಕಾ 15:05 ಯೋಗ: ಧೃತಿ 25:21
ಕರಣ: ವಣಿಜ 08:39
ಅಮೃತಕಾಲ: ಮಧ್ಯಾಹ್ನ 12 ಗಂಟೆ 37 ನಿಮಿಷದಿಂದ 02 ಗಂಟೆ 17 ನಿಮಿಷದವರೆಗೆ.
ಸೂರ್ಯೋದಯ : 05:54 ಸೂರ್ಯಾಸ್ತ : 06:47
ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30
ಮೇಷ: ನಿಮ್ಮ ವರ್ತನೆ ಇತರರಿಗೆ ಒತ್ತಡ ಉಂಟು ಮಾಡುವ ಸಾಧ್ಯತೆ. ಹಣಕಾಸು ಪ್ರಗತಿ ಉತ್ತಮ. ಧಾರ್ಮಿಕ ವ್ಯಕ್ತಿಗಳ ಭೇಟಿ, ಕ್ಷೇತ್ರ ದರ್ಶನ ಮಾಡುವಿರಿ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ
ಅದೃಷ್ಟ ಸಂಖ್ಯೆ: 7
ವೃಷಭ: ದ್ವೇಷದ ಭಾವನೆ ನಿಮ್ಮ ಮನಸ್ಸಿಗೆ ಅಸಮಾಧಾನ ತರುವುದರೊಂದಿಗೆ ಒತ್ತಡ ಉಂಟುಮಾಡುವ ಸಾಧ್ಯತೆ. ಕುಟುಂಬದ ಸದಸ್ಯರೊಂದಿಗೆ ಸಮಾಧಾನದಿಂದ ವರ್ತಿಸಿ. ಮೌನದಿಂದ ಇರುವುದು ಒಳಿತು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7
ಮಿಥುನ: ಮಹತ್ವಾಕಾಂಕ್ಷೆಯ ಯೋಜನೆಗಳು ಸಫಲವಾಗುವವು. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ. ಅನವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಆರ್ಥಿಕವಾಗಿ ಉತ್ತಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಕಟಕ: ಬಿಡುವಿಲ್ಲದ ಕೆಲಸದಿಂದ ಒತ್ತಡ. ಆರೋಗ್ಯದಲ್ಲಿ ವ್ಯತ್ಯಾಸ. ಆರ್ಥಿಕ ಪ್ರಗತಿ ಉತ್ತಮ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಮನಸ್ಸಿಗೆ ನೋವುಂಟು ಮಾಡಬಹುದು. ಆಪ್ತರೊಂದಿಗೆ ತಮ್ಮ ಭಾವನೆ ಹಂಚಿಕೊಳ್ಳುವಿರಿ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ಸಿಂಹ: ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಕನ್ಯಾ: ಇಂದು ಸಂತೋಷದಿಂದ ಇದ್ದು, ಇತರರಿಗೆ ಸಂತಸ ಹಂಚಿಕೊಳ್ಳಲು ಹವಣಿಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಆತುರದಲ್ಲಿ ಇತರರನ್ನು ಟೀಕೆ ಮಾಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ನಿಮ್ಮ ಹರಿತವಾದ ಮಾತುಗಳಿಂದ ಇತರರ ಮನಸ್ಸು ನೋಯಿಸುವುದು ಬೇಡ, ಆಲೋಚಿಸಿ ಮಾತನಾಡಿ. ಕುಟುಂಬದ ಪ್ರತಿಯೊಂದು ವಿಷಯದಲ್ಲೂ ತಪ್ಪು ಹುಡುಕುವುದು ಬೇಡ, ಇದರಿಂದ ಮನಸ್ಸು ಘಾಸಿಯಾಗುವುದು. ಆಧ್ಯಾತ್ಮದ ಹಾದಿ ದಾರಿ ತೋರಿತು. ಶ್ರೀ ಗುರು ದತ್ತಾತ್ರೇಯನನ್ನು ಆರಾಧಿಸಿ.
ಅದೃಷ್ಟ ಸಂಖ್ಯೆ: 7
ವೃಶ್ಚಿಕ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯಲು ಸಮಯ ನೀಡುವಿರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಭೂಮಿ, ಆಸ್ತಿ ಖರೀದಿಯ ಆಲೋಚನೆ ಮಾಡುವಿರಿ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಧನಸ್ಸು: ದೀರ್ಘಕಾಲದ ಪ್ರಯಾಣ ಮಾಡುವ ಸಾಧ್ಯತೆ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಹೊಸ ಕೆಲಸಗಳಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಮಕರ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವುದು. ಮುಂಗೋಪದಿಂದ ನಷ್ಟ ಸಾಧ್ಯತೆ. ಸ್ನೇಹಿತರ ಸಲಹೆ ಸಹಕಾರ ಸಿಗುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6
ಕುಂಭ: ಆಲಸ್ಯದಿಂದ ಕಾರ್ಯ ಹಾನಿ. ಆರೋಗ್ಯದ ಕಡೆಗೆ ಗಮನ ಹರಿಸಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಸೃಜನಾತ್ಮಕವಾಗಿ ಕೆಲಸ ಮಾಡಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಮೀನ: ಹೊಸ ಅವಕಾಶಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಹಿಂದೆ ಟೀಕೆಗಳನ್ನು ಮಾಡುವ ಜನರಿಂದ ದೂರ ಇರಿ. ದಿನದ ಮಟ್ಟಿಗೆ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿಯಾಗುವ ಸಾಧ್ಯತೆ. ಸಂಗಾತಿಯ ಸ್ವಾರ್ಥದಿಂದ ಕುಟುಂಬದ ವಾತಾವರಣದಲ್ಲಿ ವ್ಯತ್ಯಾಸ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com
ಇದನ್ನೂ ಓದಿ : Importance Of Daan : ಈ ಮೂರು ವಸ್ತುಗಳ ದಾನದಿಂದ ಪುಣ್ಯ ಅಧಿಕ