Site icon Vistara News

Horoscope Today : ಶನಿ ವಕ್ರಾರಂಭದ ಈ ದಿನ ಯಾವೆಲ್ಲಾ ರಾಶಿಗೆ ಶುಭ ಫಲ?

shani vakri 2023

#image_title

ಇಂದಿನ ಪಂಚಾಂಗ (19-06-2023)

ಶ್ರೀ ಶಕೇ 1945, ಶೋಭಕೃತ್‌ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.

ತಿಥಿ: ಪಾಡ್ಯ 11:24 ವಾರ: ಸೋಮವಾರ
ನಕ್ಷತ್ರ: ಆರಿದ್ರಾ 20:09 ಯೋಗ: ವೃದ್ಧಿ 25:13
ಕರಣ: ಭವ 11:24 ಇಂದಿನ ವಿಶೇಷ: ಆಷಾಢಮಾಸ ಪ್ರಾರಂಭ, ಶನಿವಕ್ರಾರಂಭ.
ಅಮೃತಕಾಲ: ಬೆಳಗ್ಗೆ 09 ಗಂಟೆ 19 ನಿಮಿಷದಿಂದ 11 ಗಂಟೆ 03 ನಿಮಿಷದವರೆಗೆ.

ಸೂರ್ಯೋದಯ : 05:54 ಸೂರ್ಯಾಸ್ತ : 06:48

ರಾಹುಕಾಲ : ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ಶ್ರಮದ ಜೀವಕೆ ವಿಶ್ರಾಂತಿಯು ಸಿಗುವುದು. ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ. ಉದ್ಯೋಗದ ಸ್ಥಳದಲ್ಲಿ ಸಹಕಾರ ಸಿಗಲಿದೆ. ಸಭೆ- ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

ವೃಷಭ: ಒತ್ತಡದಿಂದ ಹೊರಬರಲು ವ್ಯಸನಗಳಿಗೆ ಬಲಿಯಾಗುವುದು ಬೇಡ. ಆಧ್ಯಾತ್ಮದ ಹಾದಿ ಸಮಾಧಾನ ನೀಡುವುದು. ಕುಟುಂಬದ ಆಪ್ತರು, ಸ್ನೇಹಿತರಿಂದ ಆರ್ಥಿಕ ಸಹಾಯ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟಾಗುವ ಸಾಧ್ಯತೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಮಿಥುನ: ನಿಮ್ಮ ಆಕರ್ಷಕ ವ್ಯಕ್ತಿತ್ವದಿಂದ ಇತರರನ್ನು ಆಕರ್ಷಿಸುತ್ತೀರಿ. ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಎಂದೂ ಇರದ ಉತ್ಸಾಹ, ನೆಮ್ಮದಿ, ಸಂತೋಷ ಇಂದು ನಿಮ್ಮದಾಗದು. ಆರೋಗ್ಯ ಪರಿಪೂರ್ಣ. ಬದುಕಿನಲ್ಲಿ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಕಟಕ: ಅನೇಕ ಒತ್ತಡಗಳಿಂದ ಮುಕ್ತರಾಗುವಿರಿ. ಸಾಲದ ಮರುಪಾವತಿಯಾಗಿ ಆರ್ಥಿಕವಾಗಿ ಬಲಗೊಳ್ಳುವಿರಿ. ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಸಂಗಾತಿಯ ಮಧುರ ಮಾತುಗಳು ಕುಟುಂಬದಲ್ಲಿ ಭರವಸೆಯನ್ನು ಹೆಚ್ಚಿಸಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕ ಶುಭ ಫಲ.
ಅದೃಷ್ಟ ಸಂಖ್ಯೆ: 6

ಸಿಂಹ: ಕುಟುಂಬದ ಆಪ್ತರಿಂದ ಸಹಾಯ-ಸಹಕಾರ ಸಿಗಲಿದೆ. ವ್ಯಾಪಾರದಲ್ಲಿ ಪ್ರಗತಿ. ಭರವಸೆಯ ಹೊಸ ಅವಕಾಶಗಳು ನಿಮ್ಮದಾಗಲಿವೆ. ನಿಮ್ಮನ್ನು ದ್ವೇಷಿಸುವ ಜನರೇ ನಿಮ್ಮ ಸ್ನೇಹಿತರಾಗಿ ಪರಿವರ್ತನೆ ಆಗುವರು. ಅಂದುಕೊಂಡ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

ಕನ್ಯಾ: ಇಂದು ನೀವು ಉತ್ಸಾಹದಿಂದ ಇರುವಿರಿ. ವ್ಯಾಪಾರದಲ್ಲಿ ಪ್ರಗತಿ. ಹಣಕಾಸು ಪ್ರಗತಿ ಉತ್ತಮ. ಕುಟುಂಬದಲ್ಲಿ ಪರಸ್ಪರರ ಮಧ್ಯೆ ಸಾಮರಸ್ಯ ಮೂಡಲಿದೆ‌. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಅತಿಯಾದ ಒತ್ತಡದಿಂದ ಮಾನಸಿಕ ಚಿಂತೆ ಕಾಡಲಿದೆ. ಆರ್ಥಿಕ ಪ್ರಗತಿ ಸಾಧಾರಣ. ವಿನಾಕಾರಣ ಅಪರಿಚಿತರೊಂದಿಗೆ ಕಲಹವಾಗುವ ಸಾಧ್ಯತೆ. ಮಾತಿನ ಮೇಲೆ ಹಿಡಿತವಿರಲಿ. ಉದ್ಯೋಗದಲ್ಲಿ ಪ್ರಗತಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

ವೃಶ್ಚಿಕ: ಒತ್ತಡದ ಮಧ್ಯೆಯೂ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ರಹಸ್ಯ ಕಾರ್ಯಗಳು ಸಹ ಯಶಸ್ಸನ್ನು ನೀಡಲಿವೆ. ಮಾತಿನಿಂದಾಗಿ ಸಂಬಂಧಿಕರ ನಡುವೆ ಬಿರುಕು ಮೂಡುವ ಸಾಧ್ಯತೆ. ಕೌಶಲ್ಯಕ್ಕ ತಕ್ಕ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

ಶನಿಕಾಟ ಹೆಚ್ಚಾಗಲು ಗ್ರಹಗತಿಗಳು ಕಾರಣವೇ? ತಿಳಿಯಲು ಈ ವಿಡಿಯೋ ನೋಡಿ.

ಧನಸ್ಸು: ನಿಮ್ಮ ಮಾತಿಗೆ ಇಂದು ಬೆಲೆ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಆಪ್ತರ ಬೆಂಬಲ ಸಿಗಲಿದೆ. ಇತರ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡುವಿರಿ. ದಿನದ ಕೊನೆಯಲ್ಲಿ ಯಾರೊಂದಿಗೂ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ಮಕರ: ಹಿಂದೆ ಮಾಡಿರುವ ಧನ ಸಹಾಯ ಇಂದು ತಮಗೆ ಮರಳುವ ಸಾಧ್ಯತೆ. ಅಲ್ಪಸಮಯದ ಕೋಪ ನಿಮ್ಮ ಮನಸ್ಥಿತಿ ಹಾಳುಮಾಡುವ ಸಾಧ್ಯತೆ. ಆದ್ದರಿಂದ ಶಾಂತವಾಗಿರಿ. ಸೂಕ್ತ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗದಲ್ಲಿ ಸ್ವಲ್ಪ ಮಟ್ಟಿಗೆ ಒತ್ತಡ ಇರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಕುಂಭ: ಮನರಂಜನೆಯಿಂದಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳ ಸಹಕಾರ ಸಿಗಲಿದೆ. ಮನೆಯಲ್ಲಿ ಹಿರಿಯರೊಂದಿಗೆ ಮಾತಿಗೆ ಮಾತು ಬೆಳೆಸಬೇಡಿ. ಮೌನವಾಗಿರುವುದು ಉತ್ತಮ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಮೀನ: ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮ. ಸಂಗಾತಿಯಿಂದ ಶುಭ ಸುದ್ದಿ ಸಿಗುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : Mithuna Sankranti 2023 : ಸೂರ್ಯನ ಈ ಸಂಚಾರ‌, ಕೆಲವರ ಬದುಕಲ್ಲಿ ಬಂಗಾರ!

Exit mobile version