horoscope today read your daily horoscope predictions for june‌ 20, 2023Horoscope Today : ಈ ರಾಶಿಯವರು ಇಂದು ವಾಹನ ಚಲಾಯಿಸುವಾಗ ಎಚ್ಚರಿಕೆ ವಹಿಸಿ! Vistara News

ಪ್ರಮುಖ ಸುದ್ದಿ

Horoscope Today : ಈ ರಾಶಿಯವರು ಇಂದು ವಾಹನ ಚಲಾಯಿಸುವಾಗ ಎಚ್ಚರಿಕೆ ವಹಿಸಿ!

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ ಬಿದಿಗೆಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (20-06-2023)

ಶ್ರೀ ಶಕೇ 1945, ಶೋಭಕೃತ್‌ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.

ತಿಥಿ: ಬಿದಿಗೆ 13:06 ವಾರ: ಮಂಗಳವಾರ
ನಕ್ಷತ್ರ: ಪುನರ್ವಸು 22:35 ಯೋಗ: ಧ್ರುವ 25:46
ಕರಣ: ಕೌಲವ 13:06
ಅಮೃತಕಾಲ: ರಾತ್ರಿ 07 ಗಂಟೆ 58 ನಿಮಿಷದಿಂದ 09 ಗಂಟೆ 44 ನಿಮಿಷದವರೆಗೆ.

ಸೂರ್ಯೋದಯ : 05:54 ಸೂರ್ಯಾಸ್ತ : 06:48

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ನಿಮ್ಮ ಹಾಸ್ಯದ ಮನೋಭಾವ ಇತರರನ್ನು ಆಕರ್ಷಿಸುವುದು. ಹಣಕಾಸು ಪ್ರಗತಿ ಉತ್ತಮ. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಸಾಧ್ಯತೆ. ಅಧ್ಯಾತ್ಮ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಷಭ: ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ನಿಮಗೆ ಕೋಪ ತರಿಸಬಹುದು, ತಾಳ್ಮೆಯಿಂದ ವರ್ತಿಸಿ. ಈ ಹಿಂದೆ ಕಾಡಿದ ವ್ಯಾಧಿ ಮರುಕಳಿಸುವ ಸಾಧ್ಯತೆ. ದಿನದ ಮಟ್ಟಿಗೆ ಖರ್ಚು. ಏತನ್ಮಧ್ಯೆ ಅತಿಥಿಗಳ ಆಗಮನ ಹರ್ಷ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು, ಮುಂದೆ ಆಗಬೇಕಾಗಿರುವ ಕೆಲಸಗಳ ಬಗ್ಗೆ ಕಾರ್ಯ ಪ್ರವೃತ್ತರಾಗಿ. ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು. ಅನೇಕ ವಿಚಾರಗಳಿಂದ ಒತ್ತಡಕ್ಕೆ ಒಳಾಗಾಗುವ ಸಾಧ್ಯತೆ. ಕೋಪದಿಂದ ಏನನ್ನು ಸಾಧಿಸಲಾಗದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಹಣದ ಹರಿವು ಹೆಚ್ಚಾಗಲಿದೆ. ಮಾನಸಿಕ ನೆಮ್ಮದಿ ಸಿಗುವುದು. ಹೊಸ ಭರವಸೆಯ ಅವಕಾಶಗಳು ಹುಡುಕಿಕೊಂಡು ಬರುವುವು. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಫಲ ಸಿಗಲಿದೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಸಿಂಹ: ಕುಟುಂಬದ ಆಪ್ತರ ಹಾಗೂ ಸ್ನೇಹಿತರ ಸೂಕ್ತ ಸಲಹೆ ಸಹಕಾರ ಸಿಗುವುದು. ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ವಿಶ್ರಾಂತಿ ಸಿಗಲಿದೆ. ಹಣಕಾಸು ಪ್ರಗತಿ ಉತ್ತಮ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ, ಅಗತ್ಯವಿದ್ದಷ್ಟೆ ಮಾತನಾಡಿ. ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ. ಖರ್ಚು ಹೆಚ್ಚಾಗುವ ಸಾಧ್ಯತೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತ ಸಂಬಂಧಿಕರಿಂದ ಸಹಾಯ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸು ಪ್ರಗತಿ. ಹಳೆಯ ವಿಚಾರಗಳು ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ, ಎಚ್ಚರಿಕೆ ಇರಲಿ. ಉತ್ತಮ ಆರೋಗ್ಯ, ಉದ್ಯೋಗದಲ್ಲಿ ಸಾಧಾರಣ ಫಲ. ಕುಟುಂಬದ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ವಾಹನ ಚಾಲನೆ ಮಾಡುವಾಗ ಆದಷ್ಟು ಎಚ್ಚರಿಕೆ ವಹಿಸಿ. ಆಪ್ತರ ಸಲಹೆಗಳನ್ನು ತಿರಸ್ಕಾರ ಭಾವದಿಂದ ನೋಡಬೇಡಿ. ವ್ಯತಿರಿಕ್ತವಾದ ಪರಿಣಾಮದಿಂದಾಗಿ ಸ್ನೇಹದಲ್ಲಿ ಬಿರುಕು ಮೂಡುವ ಸಾಧ್ಯತೆ. ಅನಗತ್ಯ ಖರ್ಚು. ಆರೋಗ್ಯ ಸಾಧಾರಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು: ಅನಿರೀಕ್ಷಿತ ಪ್ರಯಾಣ ಸಾಧ್ಯತೆ. ಆತುರದ ಭರದಲ್ಲಿ ಅತಿರೇಕದ ಮಾತುಗಳು ಜಗಳ ತರಬಹುದು, ಸಮಾಧಾನದಿಂದ ವರ್ತಿಸಿ. ಅಮೂಲ್ಯ ವಸ್ತುಗಳು ಕೈತಪ್ಪುವ ಸಾಧ್ಯತೆ, ಎಚ್ಚರಿಕೆ ಇರಲಿ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡದಂತೆ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಕರ: ಆರೋಗ್ಯ ಉತ್ತಮ. ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಭರವಸೆ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಪ್ರಯತ್ನಿಸುವಿರಿ. ಸಮಾರಂಭದ ಆಮಂತ್ರಣ ಬರುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಮನೆ ಸೇರಿರುವ ದುಷ್ಟ ಶಕ್ತಿಗಳನ್ನು ಹೋಗಲಾಡಿಸಲು ಏನು ಮಾಡಬೇಕು ? ಈ ವಿಡಿಯೋ ನೋಡಿ.
Horoscope Today

ಕುಂಭ: ಆಹಾರದ ಕ್ರಮ ಆರೋಗ್ಯದಲ್ಲಿ ವ್ಯತ್ಯಾಸ ಮೂಡಿಸಬಹುದು. ಅಮೂಲ್ಯ ವಸ್ತುಗಳ ಬಗೆಗೆ ಕಾಳಜಿ ವಹಿಸಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಉದ್ಯೋಗದಲ್ಲಿ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸುವುದರಲ್ಲಿ ಯಶಸ್ಸು ಪಡೆಯುವಿರಿ. ಸಂಗಾತಿಯ ಹಸ್ತಕ್ಷೇಪ ನಿಮಗೆ ಮುಜುಗರ ಉಂಟು ಮಾಡುವ ಸಾಧ್ಯತೆ. ಉದ್ಯೋಗದಲ್ಲಿ ಭರವಸೆ ಮೂಡಲಿದೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

ಇದನ್ನೂ ಓದಿ : Shani Vakri 2023 : ಇಂದಿನಿಂದ ಶನಿ ವಕ್ರೀ ಸಂಚಾರ; ಈ ನಾಲ್ಕು ರಾಶಿಯವರಿಗೆ ಅಶುಭ ಫಲ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರಿಕೆಟ್

ನಾಳೆಯಿಂದ ಅಂಡರ್​-19 ಏಷ್ಯಾಕಪ್; ಭಾರತ-ಪಾಕ್​ ಮುಖಾಮುಖಿ ಯಾವಾಗ?

ಅಂಡರ್​-19 ಏಷ್ಯಾಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಬದ್ದ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಡಿ.10 ರಂದು ನಡೆಯಲಿದೆ.

VISTARANEWS.COM


on

U-19 Asia Cup IND vs PAK
Koo

ದುಬೈ: ದುಬೈ (Dubai) ಆತಿಥ್ಯನಲ್ಲಿ ನಡೆಯುವ ಪುರುಷರ ಅಂಡರ್​-19 ಏಷ್ಯಾಕಪ್ (ACC Men’s U19 Asia Cup 2023) ಟೂರ್ನಿಯ ಪಂದ್ಯಾವಳಿಗಳು ಡಿಸೆಂಬರ್ 8 ರಿಂದ ಆರಂಭಗೊಳ್ಳಲಿದೆ. ಟೂರ್ನಿ ಡಿಸೆಂಬರ್ 17 ರವರೆಗೆ ನಡೆಯಲಿದೆ. ಡಿ.8ರಂದು ನಡೆಯುವ ಉದ್ಘಾಟನ ಪಂದ್ಯದಲ್ಲಿ ಭಾರತ ತಂಡ ಅಫಘಾನಿಸ್ತಾನ​ ವಿರುದ್ಧ ಕಣಕ್ಕಿಳಿಯುವ ಮೂಲಕ ಅಭಿಯಾನ ಆರಂಭಿಸಲಿದೆ. ಸಾಂಪ್ರದಾಯಿಕ ಬದ್ದ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ ಡಿ.10 ರಂದು ಕಣಕಿಳಿಯಲಿದೆ.

15 ಪಂದ್ಯಗಳು

50-ಓವರ್‌ಗಳ ಸ್ಪರ್ಧೆಯಲ್ಲಿ ಒಟ್ಟು 15 ಪಂದ್ಯಗಳು ನಡೆಯಲಿವೆ. ಇದರಲ್ಲಿ ಎರಡು ಸೆಮಿಫೈನಲ್ ಮತ್ತು ಒಂದು ಫೈನಲ್ ಪಂದ್ಯ ಕೂಡ ಸೇರಿದೆ. ಫೈನಲ್ ಪಂದ್ಯ ಡಿಸೆಂಬರ್ 17 ರಂದು ನಡೆಯಲ್ಲಿದೆ. ಈ ಟೂರ್ನಿಯ ಪಂದ್ಯಗಳು ಐಸಿಸಿ ಅಕಾಡೆಮಿ ಓವಲ್ ಸೇರಿದಂತೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ (Dubai International Cricket Stadium) ನಡೆಯಲಿವೆ. ಒಟ್ಟು 8 ತಂಡಗಳು ಪ್ರಶಸ್ತಿಗಾಗಿ ಸಣಸಾಡಲಿವೆ.

ತಂಡಗಳು

ಕೂಟದಲ್ಲಿ ಒಟ್ಟು 8 ತಂಡಗಳು ಪಾಲ್ಗೊಳ್ಳಲಿವೆ. ಅವುಗಳೆಂದರೆ ಭಾರತ, ಪಾಕಿಸ್ತಾನ, ಶ್ರೀಲಂಕಾ, ಜಪಾನ್, ಯುಎಇ
ಅಫಘಾನಿಸ್ತಾನ, ಬಾಂಗ್ಲಾದೇಶ, ನೇಪಾಳ. ಎಂಟು ತಂಡಗಳನ್ನು ತಲಾ ನಾಲ್ಕು ತಂಡಗಳ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಹಾಲಿ ಚಾಂಪಿಯನ್ ಭಾರತ, ನೇಪಾಳ, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ. ‘ಬಿ’ ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ, ಜಪಾನ್ ಮತ್ತು ಆತಿಥೇಯ ಯುನೈಟೆಡ್ ಅರಬ್ ಎಮಿರೇಟ್ಸ್ ತಂಡಗಳು ಸ್ಥಾನ ಪಡೆದಿವೆ.

ಇದನ್ನೂ ಓದಿ ACC Under-19 Asia Cup : ಜೂನಿಯರ್​ಗಳ ಏಷ್ಯಾ ಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ವೇಳಾಪಟ್ಟಿ

ಡಿಸೆಂಬರ್ 8 – ಭಾರತ vs ಅಫ್ಘಾನಿಸ್ತಾನ – ICC ಅಕಾಡೆಮಿ ಓವಲ್ 1

ಡಿಸೆಂಬರ್ 8 – ಪಾಕಿಸ್ತಾನ vs ನೇಪಾಳ – ICC ಅಕಾಡೆಮಿ ಓವಲ್ 2

ಡಿಸೆಂಬರ್ 9 – ಬಾಂಗ್ಲಾದೇಶ vs ಯುಎಇ – ICC ಅಕಾಡೆಮಿ ಓವಲ್ 1

ಡಿಸೆಂಬರ್ 9 – ಶ್ರೀಲಂಕಾ vs ಜಪಾನ್ – ICC ಅಕಾಡೆಮಿ ಓವಲ್ 2

ಡಿಸೆಂಬರ್ 10 – ಭಾರತ vs ಪಾಕಿಸ್ತಾನ – ICC ಅಕಾಡೆಮಿ ಓವಲ್ 1

ಡಿಸೆಂಬರ್ 10 – ಅಫ್ಘಾನಿಸ್ತಾನ vs ನೇಪಾಳ – ICC ಅಕಾಡೆಮಿ ಓವಲ್ 2

ಡಿಸೆಂಬರ್ 11 – ಶ್ರೀಲಂಕಾ vs ಯುಎಇ – ICC ಅಕಾಡೆಮಿ ಓವಲ್ 1

ಡಿಸೆಂಬರ್ 11 – ಬಾಂಗ್ಲಾದೇಶ vs ಜಪಾನ್ – ICC ಅಕಾಡೆಮಿ ಓವಲ್ 2

ಡಿಸೆಂಬರ್ 12 – ಪಾಕಿಸ್ತಾನ vs ಅಫ್ಘಾನಿಸ್ತಾನ – ICC ಅಕಾಡೆಮಿ ಓವಲ್ 1

ಡಿಸೆಂಬರ್ 12 – ಭಾರತ vs ನೇಪಾಳ – ICC ಅಕಾಡೆಮಿ ಓವಲ್ 2

ಡಿಸೆಂಬರ್ 13 – ಬಾಂಗ್ಲಾದೇಶ vs ಶ್ರೀಲಂಕಾ – ICC ಅಕಾಡೆಮಿ ಓವಲ್ 1

ಡಿಸೆಂಬರ್ 13 – ಯುಎಇ vs ಜಪಾನ್ – ಐಸಿಸಿ ಅಕಾಡೆಮಿ ಓವಲ್ 2

ಡಿಸೆಂಬರ್ 15 – ಸೆಮಿಫೈನಲ್ 1 – ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣ

ಡಿಸೆಂಬರ್ 15 – ಸೆಮಿ-ಫೈನಲ್ 2 – ICC ಅಕಾಡೆಮಿ ಓವಲ್ 1

ಡಿಸೆಂಬರ್ 17 – ಫೈನಲ್ – ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣ

ಭಾರತ ಅಂಡರ್-19 ತಂಡ

ಅರ್ಶಿನ್ ಕುಲಕರ್ಣಿ, ಆದರ್ಶ್ ಸಿಂಗ್, ರುದ್ರ ಮಯೂರ್ ಪಟೇಲ್, ಸಚಿನ್ ದಾಸ್, ಪ್ರಿಯಾಂಶು ಮೊಲಿಯಾ, ಮುಶೀರ್ ಖಾನ್, ಉದಯ್ ಸಹರಾನ್ (ನಾಯಕ), ಅರ್ವೆಲ್ಲಿ ಅವನೀಶ್ ರಾವ್ (ವಿಕೆಟ್​ ಕೀಪರ್​), ಸೌಮಿ ಕುಮಾರ್ ಪಾಂಡೆ (ಉಪನಾಯಕ), ಮುರುಗನ್ ಅಭಿಷೇಕ್, ಇನ್ನೇಶ್ ಮಹಾಜನ್ (ವಿಕೆಟ್ ಕೀಪರ್), ಧನುಷ್ ಗೌಡ, ಆರಾಧ್ಯ ಶುಕ್ಲಾ, ರಾಜ್ ಲಿಂಬಾನಿ, ನಮನ್ ತಿವಾರಿ.

ಟ್ರಾವೆಲಿಂಗ್ ಮೀಸಲು ಆಟಗಾರರು: ಪ್ರೇಮ್ ದಿಯೋಕರ್, ಅನ್ಶ್ ಗೋಸಾಯಿ, ಎಂಡಿ ಅಮನ್

ಮೀಸಲು ಆಟಗಾರರು: ದಿಗ್ವಿಜಯ್ ಪಾಟೀಲ್, ಜಯಂತ್ ಗೋಯತ್, ಪಿ.ವಿಘ್ನೇಶ್, ಕಿರಣ್ ಚೋರ್ಮಾಲೆ

Continue Reading

ಕರ್ನಾಟಕ

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

Veer Savarkar : ಸಾವರ್ಕರ್ ಫೋಟೊ ತೆಗೆದರೆ ಸೂಕ್ತ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ನನಗೆ ಬಿಟ್ಟರೆ ಇಂದೇ ಅವರ ಫೋಟೊವನ್ನು ತೆಗೆದು ಹಾಕುತ್ತೇನೆ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಈ ಹೇಳಿಕೆಗೆ ಬಿಜೆಪಿ ಕೆಂಡವಾಗಿದ್ದು, ಪ್ರಿಯಾಂಕ್‌ ಖರ್ಗೆ ಅವರು ಸಂಪೂರ್ಣ ಭಾರತೀಯರಿಗೆ, ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ ಎಂದು ಆಕ್ರೋಶವನ್ನು ಹೊರಹಾಕಿದೆ.

VISTARANEWS.COM


on

Veer Savarkar and Priyank Kharge
Koo

ಬೆಳಗಾವಿ: ಬೆಳಗಾವಿ ವಿಧಾನಸೌಧದಲ್ಲಿ ಕಳೆದ ಬಿಜೆಪಿ ಸರ್ಕಾರ ಇದ್ದಾಗ ಹಾಕಲಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್‌ (Veer Savarkar) ಅವರ ಫೋಟೊ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ (Minister Priyank Kharge) ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ. ಸಾವರ್ಕರ್ ಫೋಟೊ ತೆಗೆದರೆ ಸೂಕ್ತ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ನನಗೆ ಬಿಟ್ಟರೆ ಇಂದೇ ಅವರ ಫೋಟೊವನ್ನು ತೆಗೆದು ಹಾಕುತ್ತೇನೆ ಎಂದು ಹೇಳಿದ್ದಾರೆ. ಈ ಹೇಳಿಕೆಗೆ ಬಿಜೆಪಿ ಕೆಂಡವಾಗಿದ್ದು, ಪ್ರಿಯಾಂಕ್‌ ಖರ್ಗೆ ಅವರು ಸಂಪೂರ್ಣ ಭಾರತೀಯರಿಗೆ, ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ ಎಂದು ಆಕ್ರೋಶವನ್ನು ಹೊರಹಾಕಿದೆ.

ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ, ವೀರ ಸಾವರ್ಕರ್‌ ಅವರ ಯಾವ ತತ್ವ ಸಿದ್ಧಾಂತದಲ್ಲಿಯೂ ಸಮಾನತೆ ಕಾಣಲ್ಲ. ಅದನ್ನು ನಾನು ಒಪ್ಪಲ್ಲ. ಯಾವ ತತ್ವ ಸಿದ್ಧಾಂತದ ಪ್ರೇರಿತವಾಗಿ ಗಾಂಧೀಜಿ ಹತ್ಯೆಯಾಗಿದೆ? ನನ್ನನ್ನು ಬಿಟ್ಟರೆ ಬೆಳಗಾವಿ ವಿಧಾನಸೌಧದೊಳಗೆ ಇರುವ ವೀರ ಸಾವರ್ಕರ್‌ ಅವರ ಫೋಟೊವನ್ನು ಇವತ್ತೇ ತೆಗೆದುಹಾಕುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ; ಉ.ಕ ಜಿಲ್ಲಾ ಶಾಸಕರಲ್ಲೇ ಒಡಕು! ತಮ್ಮ ತಾಲೂಕಿಗೇ ಬೇಕೆಂದು ಸದನದಲ್ಲಿ ಕಿತ್ತಾಟ

ಹೀಗೆ ವಿಧಾನಸೌಧದೊಳಗೆ ಇರುವ ಫೊಟೊವನ್ನು ತೆಗೆಯುವ ಕೆಲಸ ನಿಯಮಾನುಸಾರವಾಗಿ ಆಗಬೇಕು. ಈ ವಿಷಯದಲ್ಲಿ ಸ್ಪೀಕರ್ ಯು.ಟಿ. ಖಾದರ್‌ ಅವರ ನಿರ್ಧಾರವನ್ನು ನೋಡೋಣ. ನಾನು ಸಂವಿಧಾನವನ್ನು ನಂಬಿರುವ ವ್ಯಕ್ತಿ. ಕಳೆದ ಬಾರಿ ಸಾವರ್ಕರ್ ಫೋಟೊ ಹಾಕಿದಾಗ ಬಿಜೆಪಿಯವರಿಗೆ ಪ್ರಶ್ನೆ ಕೇಳಿದ್ದೆ. ಅವರು ಇದುವರೆಗೂ ಉತ್ತರ ಕೊಟ್ಟಿಲ್ಲ. ಸಾವರ್ಕರ್ ಹೆಸರಿಗೆ ವೀರ್ ಹೇಗೆ ಬಂತು? ಬ್ರಿಟಿಷರ ಬಳಿ ಸಾವರ್ಕರ್ ಪಿಂಚಣಿ ಪಡೆಯುತ್ತಿರಲಿಲ್ಲವೇ? ಅವರ ಮನೆಯವರು ಕ್ಷಮಾಪಣೆ ಅರ್ಜಿ ಹಾಕಿದ್ದರಾ, ಇಲ್ಲವಾ? ಸುಭಾಷ್ ಚಂದ್ರ ಬೋಸ್ ಇಂಡಿಯನ್ ನ್ಯಾಷನಲ್ ಆರ್ಮಿ ಮಾಡಿದ್ದರು. ಅದಕ್ಕೆ ನೋಂದಣಿ ಮಾಡಿಕೊಳ್ಳಲು ಸೇರಿದ್ದರಾ ಇಲ್ಲವಾ? ಸಾವರ್ಕರ್ ಅವರಿಗೆ ಗೋ ಮಾತೆ ಬಗ್ಗೆ ಅಭಿಪ್ರಾಯ ಏನಿತ್ತು? ನಾನು ಅವರ ಐಡಿಯಾಲಜಿ ವಿರುದ್ಧ ಇದ್ದೇನೆ‌. ಅವರ ತತ್ವದ ಮೇಲೆ ನನಗೆ ನಂಬಿಕೆ ಇಲ್ಲ. ವೀರ ಸಾವರ್ಕರ್‌ ಫೋಟೊ ತೆಗೆಯುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೂ ಮನವಿ ಮಾಡಿದ್ದೇನೆ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದರು.

ಸಾವರ್ಕರ್ ಫೋಟೊ ತೆಗೆದು, ಜವಾಹರ್‌ಲಾಲ್‌ ನೆಹರು ಫೋಟೊ ಹಾಕುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಪ್ರಿಯಾಂಕ್‌ ಖರ್ಗೆ, ನೆಹರೂ ಅವರ ಫೋಟೊವನ್ನು ಹಾಕಲೇಬೇಕು‌. ಅವರು 3259 ದಿನ ಜೈಲಲ್ಲಿ ಇದ್ದವರು. ದೇಶದ ಮೊದಲ ಪ್ರಧಾನಿ. 16 ವರ್ಷ ದೇಶವನ್ನು ಆಳಿದ್ದಾರೆ. ಆರ್ಥಿಕವಾಗಿ ಸದೃಢವಾಗಿದ್ದೇವೆ ಅಂತ ಹೇಳುತ್ತಿದ್ದಾರಲ್ಲ? ಪ್ರಧಾನಿ ನರೇಂದ್ರ ಮೋದಿ ವಿಶ್ವಗುರು ಅಂತ ಹೇಳ್ತಿದ್ದಾರಲ್ಲವೇ? ಅದಕ್ಕೆ ಅಡಿಪಾಯ ಹಾಕಿದ್ದೇ ನೆಹರು. ಐಐಟಿ, ಐಐಎಂ, ಇಸ್ರೋ ಎಲ್ಲವನ್ನೂ ಸ್ಥಾಪಿಸಿದ್ದೇ ನೆಹರು. ಚಂದ್ರಯಾನ, ಸೂರ್ಯಯಾನ ಅಂತ ಬೆನ್ನು ತಟ್ಟಿಕೊಂಡು ಓಡಾಡುತ್ತಿದ್ದಾರಲ್ಲವೇ? ಇಸ್ರೋ ಸ್ಥಾಪಿಸಿದ್ದು ಯಾರು? ನೆಹರು ಅವರ ಫೋಟೊ ಹಾಕಲೇಬೇಕು ಎಂದು ಪ್ರತಿಪಾದಿಸಿದರು.

ಸಂಪೂರ್ಣ ಭಾರತೀಯರಿಗೆ, ಕನ್ನಡಿಗರಿಗೆ ಮಾಡಿದ ಅಪಮಾನ: ಅಶ್ವತ್ಥನಾರಾಯಣ್

ಪ್ರಿಯಾಂಕ್ ಖರ್ಗೆ ಅವರು ವೀರ ಸಾವರ್ಕರ್‌ ಅವರ ಬಗ್ಗೆ ಗೊಂದಲದ ಹೇಳಿಕೆ ನೀಡಿದ್ದಾರೆ. ಅವರಿಗೆ ಅಪಮಾನವಾಗಿ ಮಾತನಾಡಿದ್ದಾರೆ. ನಾನು ಫೋಟೊ ತೆಗೆದು ಹಾಕುತ್ತೇನೆ ಎಂದು ಹೇಳಿದ್ದಾರೆ. ಸಂಪೂರ್ಣ ಭಾರತೀಯರಿಗೆ, ಕನ್ನಡಿಗರಿಗೆ ಮಾಡಿದ ಅಪಮಾನ ಇದಾಗಿದೆ. ವೀರ ಸಾವರ್ಕರ್ ಅವರಿಗೆ ಅಗೌರವ ತೋರಿಸಿದ್ದನ್ನು ನಾವು ಖಂಡಿಸುತ್ತೇವೆ ಎಂದು ಶಾಸಕ ಅಶ್ವತ್ಥನಾರಾಯಣ್ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅಶ್ವತ್ಥನಾರಾಯಣ್, ಈ ರೀತಿ ಹೇಳಿಕೆಯನ್ನು ಕೊಡುವುದು ಬಿಟ್ಟು, ಕಲಬುರಗಿಗೆ ಹೋಗಿ ಅಭಿವೃದ್ಧಿ ಮಾಡಿ. ಭಾವನೆಗೆ ಧಕ್ಕೆ ತರುವ ಹೇಳಿಕೆಗಳನ್ನು ನಿಲ್ಲಿಸಿ. ಕೀಳು ಮಟ್ಟದ ಯೋಚನೆಯನ್ನು ನಿಲ್ಲಿಸಿ. ನೀವು ಈಗ ವ್ಯಕ್ತಿ ಮಾತ್ರ ಅಲ್ಲ, ಒಂದು ಘನತೆವೆತ್ತ ಸ್ಥಾನದಲ್ಲಿದ್ದೀರಿ. ಮಂತ್ರಿಯಾಗಿ ಅವಮಾನ ಆಗುವ ಕೆಲಸ ಮಾಡಬೇಡಿ ಎಂದು ಹೇಳಿದರು.

ಇದನ್ನೂ ಓದಿ: Belagavi Winter Session: ರೈತರ ಸಾಲ ಮನ್ನಾಕ್ಕೆ ಬಿಜೆಪಿ ಆಗ್ರಹ; ಇದು ದಿವಾಳಿ ಸರ್ಕಾರ ಎಂದ ಅಶೋಕ್‌

ಪ್ರಸ್ತಾವನೆ ಬಂದಿಲ್ಲ; ಬಂದ ಮೇಲೆ ನೋಡೋಣ

ಈ ಬಗ್ಗೆ ಸ್ಪೀಕರ್‌ ಯು.ಟಿ. ಖಾದರ್‌ ಅವರಿಗೆ ಮಾಧ್ಯಮದವರು ಪ್ರಶ್ನೆ ಮಾಡಿದಾಗ ಪ್ರತಿಕ್ರಿಯೆ ನೀಡಿದ ಅವರು, ಸಂವಿಧಾನಬದ್ಧವಾಗಿ ಏನು ಮಾಡಬೇಕೋ ಅದನ್ನು ಮಾಡುತ್ತೇನೆ. ನನ್ನ ಕರ್ತವ್ಯವನ್ನು ನಿಭಾಯಿಸುತ್ತೇನೆ. ಸಾವರ್ಕರ್‌ ಫೋಟೊ ಬದಲಾವಣೆ ಮಾಡುವ ಬಗ್ಗೆ ಈವರೆಗೆ ನನಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ. ಬಂದ ಮೇಲೆ ಈ ಬಗ್ಗೆ ನೋಡೋಣ. ಈಗಲೇ ಅದರ ಬಗ್ಗೆ ಬ್ಯಾಟ್‌ ಬೀಸಿದರೆ ಆಗುತ್ತದೆಯೇ? ಪ್ರಜಾಪ್ರಭುತ್ವದಲ್ಲಿ ಅವರವರ ಹೇಳಿಕೆ ನೀಡಲು ಅವಕಾಶವಿದೆ. ನನಗೆ ಮಂತ್ರಿಗಳೂ ಒಂದೇ, ಪ್ರತಿಪಕ್ಷದವರೂ ಒಂದೇ ಎಂದು ಹೇಳಿದರು.

Continue Reading

ದೇಶ

ಬೆಂಗಳೂರು ಸೇರಿ ದೇಶದ ಟಾಪ್ 7 ನಗರಗಳಲ್ಲಿ ಕಚೇರಿ ಬಾಡಿಗೆ ಹೆಚ್ಚಳ!

Bengaluru: ಬೆಂಗಳೂರು ಸೇರಿದಂತೆ ದೇಶದ 7 ನಗರಗಳಲ್ಲಿ ಕಚೇರಿ ಜಾಗ ಬಾಡಿಗೆ ಹೆಚ್ಚಳವಾಗಿದೆ. ಚೆನ್ನೈನಲ್ಲಿ ಈ ದರ ಅತ್ಯಧಿಕ ಇದೆ ಎಂದು ವರದಿ ತಿಳಿಸಿದೆ.

VISTARANEWS.COM


on

Office Rental Rises in top 7 cities including bengaluru
Koo

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಮೊದಲು ಆರು ತಿಂಗಳು ಬೆಂಗಳೂರು (Bengaluru) ಸೇರಿದಂತೆ ದೇಶದ ಟಾಪ್ 7 ನಗರಗಳಲ್ಲಿ (Top 7 Cities) ವಾಣಿಜ್ಯ ಕಚೇರಿ ಸ್ಥಳಾವಕಾಶದ ಚಟುವಟಿಕೆಗಳು ಅಷ್ಟೇನೂ ಪೂರಕವಾಗಿರಲಿಲ್ಲ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಸಾಕಷ್ಟು ಚಟುವಟಿಕೆಗಳು ಮಂದಗತಿಯಲ್ಲಿದ್ದವು ಎಂದು ಅನಾರಾಕ್ ತನ್ನ ಹೇಳಿಕೆಯಲ್ಲಿ ಹೇಳಿದೆ. ಈ ಮಧ್ಯೆ, ಬೆಂಗಳೂರು ಸೇರಿದಂತೆ ದೇಶದ ಏಳು ನಗರಗಳಲ್ಲಿ ಕಚೇರಿ ಬಾಡಿಗೆಯು ಶೇ.7ರಷ್ಟು ಹೆಚ್ಚಳವಾಗಿದೆ(Office Rental Rises). ಈ ಪೈಕಿ, ಚೆನ್ನೈ ನಗರವು (Chennai City) ಭಾರೀ ಬೆಳವಣಿಗೆ ಕಂಡಿದೆ.

ಸರಾಸರಿ ಮಾಸಿಕ ಕಚೇರಿ ಬಾಡಿಗೆ ಮೌಲ್ಯಗಳಲ್ಲಿ ಚೆನ್ನೈ ಅತ್ಯಧಿಕ ಶೇ.10 ರಷ್ಟು ವಾರ್ಷಿಕ ಏರಿಕೆಯನ್ನು ದಾಖಲಿಸಿದೆ. ಪ್ರತಿ ಚದರ ಅಡಿಗೆ 62 ರೂ. ರಿಂದ ಹೆಚ್ಚಳವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಪ್ರತಿ ಚದರ ಅಡಿಗೆ 68 ರೂ. ಇತ್ತು. ವಾರ್ಷಿಕ ಶೇ.8ರ ಬೆಳವಣಿಗೆಯೊಂದಿಗೆ ಹೈದರಾಬಾದ್ ನಂತರದ ಸ್ಥಾನದಲ್ಲಿದೆ. ನಗರದಲ್ಲಿನ ಸರಾಸರಿ ಮಾಸಿಕ ಕಚೇರಿ ಬಾಡಿಗೆ ಮೌಲ್ಯವು 61 ರೂ.ನಿಂದ 66 ರೂ.ಗೆ ಏರಿಕೆಯಾಗಿದೆ. ಮತ್ತೊಂದೆಡೆ, ಬೆಂಗಳೂರು ಮತ್ತು ಪುಣೆ, ಕೋಲ್ಕೊತಾ ನಗರಗಳಲ್ಲಿ ವಾರ್ಷಿಕ ಶೇ.7 ಬೆಳವಣಿಗೆಯನ್ನು ದಾಖಲಾಗಿದೆ. ಮತ್ತೊಂದೆಡೆ ಮುಂಬೈ ಮತ್ತು ಎನ್‌ಸಿಆರ್‌ನಲ್ಲಿ ಈ ಪ್ರಮಾಣ ಶೇ.5ರಷ್ಟು ಏರಿಕೆಯಾಗಿದೆ.

2023ರ ವಿತ್ತ ವರ್ಷದ ಮೊದಲ ಅರ್ಧ ವರ್ಷಕ್ಕೆ ಹೋಲಿಸಿದರೆ, 2024ರ ವಿತ್ತ ವರ್ಷದ ಮೊದಲ ಆರ್ಥಿಕ ವರ್ಷದಲ್ಲಿ ದೇಶದ 7 ನಗರಗಳಲ್ಲಿ ಹೊಸ ಕಚೇರಿಯ ಬೇಡಿಕೆ ಪೂರೈಕೆಯ ಕೇವಲ ಶೇ.5ರಷ್ಟು ಏರಿಕೆಯಾಗಿದೆ. ಇದೇ ವೇಳೆ, ವಾರ್ಷಿಕ ಬೇಡಿಕೆಯಲ್ಲಿ ಶೇ.1ರಷ್ಟು ಕುಸಿತವಾಗಿದೆ.

ಟಿಎಂಎಫ್ ಜಾಗತಿಕ ಸುಸ್ಥಿರ ನಗರಗಳ ಚಾಲೆಂಜ್; ಬೆಂಗಳೂರು, ವಾರಾಣಸಿ ಶಾರ್ಟ್ ಲಿಸ್ಟ್

ಟೊಯೊಟಾ ಮೊಬಿಲಿಟಿ ಫೌಂಡೇಶನ್ (Toyota Mobility Foundation – TMF) 9 ಮಿಲಿಯನ್ ಡಾಲರ್ ಸುಸ್ಥಿರ ನಗರಗಳ ಚಾಲೆಂಜ್ ನಲ್ಲಿ ಅಗ್ರ 10 ನಗರಗಳಲ್ಲಿ ಬೆಂಗಳೂರು (Bengaluru) ಮತ್ತು ವಾರಣಾಸಿಯನ್ನು (Varanasi) ಶಾರ್ಟ್ ಲಿಸ್ಟ್ (Shortlisted) ಮಾಡಲಾಗಿದೆ ಎಂದು ಘೋಷಿಸಿದೆ. ಟೊಯೊಟಾ ಮೊಬಿಲಿಟಿ ಫೌಂಡೇಶನ್, ಚಾಲೆಂಜ್ ವರ್ಕ್ಸ್ ಮತ್ತು ವರ್ಲ್ಡ್ ರಿಸೋರ್ಸಸ್ ಇನ್ಸ್ಟಿಟ್ಯೂಟ್‌ನ ಬೆಂಬಲದೊಂದಿಗೆ ಜೂನ್ 2023 ರಲ್ಲಿ ಈ ಚಾಲೆಂಜ್ ಅನ್ನು ಪ್ರಾರಂಭಿಸಲಾಗಿತ್ತು. ಪ್ರಪಂಚದಾದ್ಯಂತದ ಲಕ್ಷಾಂತರ ಜನರ ಜೀವನವನ್ನು ಪರಿವರ್ತಿಸುವ ಸಾಮರ್ಥ್ಯದೊಂದಿಗೆ ಚಲನಶೀಲತೆ ಕೇಂದ್ರಿತ ನಾವೀನ್ಯತೆಯನ್ನು ಬೆಂಬಲಿಸುವ ಮೂಲಕ ನಗರಗಳು ಭವಿಷ್ಯಕ್ಕಾಗಿ ಸಿದ್ಧವಾಗಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ.

ಈ ಪ್ರವೇಶ ಅವಧಿಯಲ್ಲಿ ಜಾಗತಿಕವಾಗಿ 46 ದೇಶಗಳ 150 ಕ್ಕೂ ಹೆಚ್ಚು ನಗರಗಳಿಂದ 200 ಕ್ಕೂ ಹೆಚ್ಚು ನಮೂದುಗಳನ್ನು ಸ್ವೀಕರಿಸಲಾಗಿದೆ. 1) ಚಾಲೆಂಜ್ ಫೋಕಸ್ 2) ನಾವೀನ್ಯತೆ 3) ಪರಿಣಾಮ 4) ಪಾಲುದಾರ ಸಾಮರ್ಥ್ಯದ ನಾಲ್ಕು ಪ್ರಮುಖ ಮಾನದಂಡಗಳ ಮೇಲೆ ಮೌಲ್ಯಮಾಪನ ಮಾಡಲಾಯಿತು. ಬ್ರೆಜಿಲ್, ಕೊಲಂಬಿಯಾ, ಭಾರತ, ಇಟಲಿ, ಮಲೇಷ್ಯಾ, ಮೆಕ್ಸಿಕೊ, ಯುನೈಟೆಡ್ ಕಿಂಗ್ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್ ನಗರಗಳು ಈ ಪಟ್ಟಿಯಲ್ಲಿವೆ.

ಈ ಸುದ್ದಿಯನ್ನೂ ಓದಿ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ತಪಾಸಣೆಗಾಗಿ ಇನ್ನು ಮೊಬೈಲ್, ಲ್ಯಾಪ್‌ಟ್ಯಾಪ್‌ ಟ್ರೇನಲ್ಲಿ ಇಡಬೇಕಿಲ್ಲ!

Continue Reading

ಕರ್ನಾಟಕ

Basavaraja Bommai : ಸಿಎಂ ಜತೆ ಐಸಿಸ್‌ ಸಂಪರ್ಕಿತ ಮೌಲ್ವಿ ; NIA ತನಿಖೆಗೆ ಬೊಮ್ಮಾಯಿ ಆಗ್ರಹ

basavaraja Bommai : ಸಿಎಂ ಸಿದ್ದರಾಮಯ್ಯ ಅವರ ಜತೆ ವೇದಿಕೆ ಹಂಚಿಕೊಂಡ ಮೌಲ್ವಿ ತನ್ವೀರ್‌ ಪೀರಾ ಅವರ ಬಗ್ಗೆ ತನಿಖೆ ನಡೆಯಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

VISTARANEWS.COM


on

Tanveer Peera Cm Siddaramaiah Basavaraja Bommai
Koo

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಐಸಿಸ್ ಉಗ್ರ ಸಂಘಟನೆ (ISIS Terror Organization) ಜೊತೆ ಸಂಪರ್ಕ ಇರುವ ಮುಸ್ಲಿಂ ಮೌಲ್ವಿ (Muslim Moulvi) ಕುಳಿತಿರುವ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎನ್ಐಎಗೆ (NIA Investigation) ಒಪ್ಪಿಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ಆಗ್ರಹಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯ ಜೊತೆ ವೇದಿಕೆ ಹಂಚಿಕೊಂಡ ಮೌಲ್ವಿಯ ವಿರುದ್ದ ವಿಜಯಪುರದಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿರುವ ಬಗ್ಗೆ ಪ್ರಕರಣಗಳು ದಾಖಲಾಗಿವೆ. ಅವರಿಗೆ ಐಎಸ್ ಐ ಸಂಪರ್ಕ ಇರುವ ಬಗ್ಗೆ ನಮ್ಮ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದ್ದಾರೆ. ಮುಖ್ಯಮಂತ್ರಿಗಳು ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಎನ್‌ಐಎಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

ಈ ಹಿಂದೆ ಕುಕ್ಕರ್ ಬಾಂಬ್ ಪ್ರಕರಣದ ಬಗ್ಗೆ ಕಾಂಗ್ರೆಸ್‌ನವರು ಲಘುವಾಗಿ ಪರಿಗಣಿಸಿದ್ದರು. ಆದರೆ, ಅವರಲ್ಲಿ ಐದಾರು ಜನರು ದೇಶದ್ರೋಹ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎನ್ನುವುದು ಬೆಳಕಿಗೆ ಬಂದಿದೆ ಎನ್ನುವುದನ್ನು ನೆನಪಿಸಿದರು.

ಮುಖ್ಯಮಂತ್ರಿಗಳು ಮುಸ್ಲಿಂ ಸಮುದಾಯಕ್ಕೆ 10 ಸಾವಿರ ಕೋಟಿ ರೂ. ನೀಡುವುದಾಗಿ ಹೇಳಿರುವುದು ಓಲೈಕೆ ರಾಜಕಾರಣದ ಮುಂದುವರೆದ ಭಾಗ, ಅಲ್ಲದೇ ಪ್ರಚೋದನಾಕಾರಿಯಾಗಿಯೂ ಇದೆ. ಅವರ ಸಚಿವ ಸಂಪುಟದ ಸಹೋದ್ಯೋಗಿಯೊಬ್ಬರು ಅಲ್ಪ ಸಂಖ್ಯಾತರನ್ನು ಸ್ಪೀಕರ್‌ ಮಾಡಿದ್ದೇವೆ, ಎಲ್ಲರೂ ಅವರ ಮುಂದೆ ಜೀ ಹುಜೂರ್ ಅನಬೇಕು ಎನ್ನುತ್ತಾರೆ. ಇದೊಂದು ಪ್ರಚೋದನೆ. ಸಿಎಂ ಆದವರು ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗಬೇಕು. ದೇಶದ ಸಂಪತ್ತನ್ನು ಬೆಳೆಸಲು ಎಲ್ಲರೂ ದುಡಿಯಬೇಕು. ಅದು ದೇಶಕ್ಕೆ ಇರುತ್ತದೆ. ಅದನ್ನು ಹೇಳುವ ಬದಲು ಒಂದು ಸಮುದಾಯಕ್ಕೆ ಸಂಪತ್ತು ಹಂಚಿಕೆ ಮಾಡುವ ಬಗ್ಗೆ ಹೇಳುತ್ತಾರೆ‌. ಇದು ಸಮಾಜ ಒಡೆಯುವ ಕೆಲಸ ಎಂದು ಹೇಳಿದರು.

ರೈತರ ಸಾಲ ವಸೂಲಿ ನಿಲ್ಲಿಸಲಿ ಎಂದ ಬೊಮ್ಮಾಯಿ

ರಾಜ್ಯದಲ್ಲಿ ಬರದಿಂದ ರೈತರು ಕಂಗಾಲಾಗಿದ್ದಾರೆ. ಬರಗಾಲಕ್ಕೆ ಹಣ ಬಿಡಿಗಡೆ ಮಾಡಿಲ್ಲ. ರೈತರಿಗೆ ಬೆಳೆ ಇಲ್ಲ, ಕುಡಿಯುವ ನೀರಿಲ್ಲ, ಜಾನುವಾರುಗಳಿಗೆ ಮೇವಿಲ್ಲ, ಸರ್ಕಾರ ಇದುವರೆಗೂ ಬಿಡಿಗಾಸು ಬಿಡುಗಡೆ ಮಾಡಿಲ್ಲ. ಕೇಂದ್ರದ ಕಡೆಗೆ ಬೆರಳು ಮಾಡಿ ತೋರಿಸುತ್ತಾರೆ. ಹಿಂದೆ ಪ್ರವಾಹ ಬಂದಾಗ ನಾವು ಒಂದು ತಿಂಗಳಲ್ಲಿ ಡಿಬಿಟಿ ಮುಖಾಂತರ ರೈತರಿಗೆ ಸುಮಾರು 2000 ಕೋಟಿ ರೂ. ಬಿಡುಗಡೆ ಮಾಡಿದ್ದೆವು. ಅವರು ಕೇವಲ 2000 ಸಾವಿರ ನೀಡುತ್ತೇನೆ ಎನ್ನುತ್ತಾರೆ. ಇದು ರೈತರಿಗೆ ಅವಮಾನ ಮಾಡಿದಂತೆ. ಕೇಂದ್ರದ ನಿಯಮಂತಾದರೂ ಒಣ ಬೇಸಾಯಕ್ಕೆ ಪ್ರತಿ ಹೆಕ್ಟೇರ್‌ಗೆ ಕನಿಷ್ಠ 6000 ರೂ., ನೀರಾವರಿಗೆ 18 ಸಾವಿರ ರೂ. ನೀಡುವ ಕೆಲಸ ಮಾಡಬೇಕು. ನಾವು ರೈತರಿಗೆ ಕಿಸಾನ್ ಸಮ್ಮಾನ್ ನೀಡುತ್ತಿದ್ದೆವು. ಅದನ್ನು ನಿಲ್ಲಿಸಿದ್ದಾರೆ. ರೈತರಿಂದ ಸಾಲ ವಸೂಲಿ ನಿಲ್ಲಿಸಬೇಕು. ಕೂಡಲೇ ಹೊಸ ಸಾಲ ನೀಡುವ ವ್ಯವಸ್ಥೆ ಮಾಡಬೇಕು. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದೆ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು.

ಆನೆ ಅರ್ಜುನ ಸಾವಿನ ತನಿಖೆಯಾಗಲಿ

ಆನೆ ಅರ್ಜುನ ಸಾವಿನ ಬಗ್ಗೆ ಸರ್ಕಾರ ಸತ್ಯ ಮುಚ್ಚಿಡುವ ಕೆಲಸ ಮಾಡುತ್ತಿದೆ. ಅದೇ ಕಾರಣಕ್ಕೆ ತರಾತುರಿಯಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದಾರೆ. ಅರಣ್ಯ ಇಲಾಖೆಯಲ್ಲಿ ಅರಾಜಕತೆ ನಡೆಯುತ್ತಿದೆ. ಐಎಫ್ಎಸ್ ಅಧಿಕಾರಿಗಳ ಹಿಂಡು ಬೆಂಗಳೂರಿನಲ್ಲಿ ಆನೆ ಹಿಂಡಿನಂತಿದ್ದಾರೆ. ಅವರನ್ನು ನಾನು ಕಾಡಿಗೆ ಕಳುಹಿಸುವ ಕೆಲಸ ಮಾಡಿದ್ದೆ, ಈಗ ಮತ್ತೆ ವಾಪಸ್ ಬರುವ‌ ಕೆಲಸ ಮಾಡುತ್ತಿದ್ದಾರೆ. ಐಎಫ್ಎಸ್ ಅಧಿಕಾರಿಗಳು ಬೆಂಗಳೂರಿನಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದಾರೆ ಅವರಿಗೆ ಅರಣ್ಯದ ಜವಾಬ್ದಾರಿ ನೀಡಿ ಕಾಡಿಗೆ ಕಳುಹಿಸಬೇಕು. ಆನೆ ಅರ್ಜುನ ಹಾಗೂ ಬೆಂಗಳೂರಿನ ಚೀತಾ ಸಾವಿನ ಪ್ರಕರಣದಲ್ಲಿ ಸರಿಯಾದ ತರಬೇತಿ‌ ಇಲ್ಲದೆ ಕಾರಣವಾಗಿದೆ ಎಂದು ಹೇಳಿದರು.

ಸೋಮಣ್ಣ ಅವರ ಬಗ್ಗೆ ಹೈಕಮಾಂಡ್ ಮಾತನಾಡುತ್ತದೆ

ಪಕ್ಷದ ಹಿರಿಯ ನಾಯಕ ಸೋಮಣ್ಣ ಅವರ ನಡೆಯ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸೋಮಣ್ಣ ಅವರು ಹಿರಿಯ ನಾಯಕರು. ಅವರ ಬಗ್ಗೆ ಪಕ್ಷದ ಹೈಕಮಾಂಡ್‌ಗೆ ಎಲ್ಲವೂ ಗೊತ್ತಿದೆ. ಅವರು ಚುನಾವಣೆ ಮುಗಿದ ನಂತರ ದೆಹಲಿಗೆ ಹೋಗುವುದಾಗಿ ಹೇಳಿದ್ದಾರೆ. ಹೈಕಮಾಂಡ್ ಅವರನ್ನು ಕರೆದು ಮಾತನಾಡುತ್ತಾರೆ ಎನ್ನುವ ವಿಶ್ವಾಸ ಇದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿಷಯಕ್ಕೂ ಹೈಕಮಾಂಡ್ ಮಾತನಾಡುತ್ತದೆ ಎಂದರು.

ಮಾಜಿ ಸಚಿವ ಗೂಳುಹಟ್ಟಿ ಶೇಖರ್ ಅವರ ಹೇಳಿಕೆಗೂ ಪ್ರತಿಕ್ರಿಯಿಸಿದ ಅವರು, ಅವರ ಹೇಳಿಕೆ ತಪ್ಪು ಕಲ್ಪನೆಯಿಂದ ಕೂಡಿದೆ. ಸಂಘದಲ್ಲಿ ದಲಿತ ಸಮುದಾಯವರೂ ಎತ್ತರ ಮಟ್ಟದಲ್ಲಿದ್ದಾರೆ ಎಂದರು.

Continue Reading
Advertisement
self harming by wadi Acc cement Depute Director
ಕರ್ನಾಟಕ7 mins ago

Self Harming : ಅದಾನಿ ಗ್ರೂಪ್‌ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್ ಸೂಸೈಡ್‌!

A girl shoots her classmate and herself with shotgun
ವಿದೇಶ8 mins ago

ಸಹಪಾಠಿಗೆ ಗುಂಡು ಹೊಡೆದು ತಾನೂ ಸತ್ತ 14 ವರ್ಷದ ವಿದ್ಯಾರ್ಥಿನಿ!

Flax Seeds Benefits For Hair
ಆರೋಗ್ಯ17 mins ago

Flax Seeds Benefits For Hair: ಚಳಿಗಾಲದಲ್ಲಿ ಕೂದಲ ಆರೋಗ್ಯಕ್ಕೆ ಅಗಸೆಬೀಜ ಸೂಪರ್‌!

Wedding Fashion
ಫ್ಯಾಷನ್23 mins ago

Wedding Fashion: ಮದುಮಗನ ಆರತಕ್ಷತೆಯ ಗ್ರ್ಯಾಂಡ್‌ ಔಟ್‌ಫಿಟ್‌ ಆಯ್ಕೆಗೆ ಇಲ್ಲಿದೆ 5 ಸಿಂಪಲ್‌ ಸೂತ್ರ

U-19 Asia Cup IND vs PAK
ಕ್ರಿಕೆಟ್32 mins ago

ನಾಳೆಯಿಂದ ಅಂಡರ್​-19 ಏಷ್ಯಾಕಪ್; ಭಾರತ-ಪಾಕ್​ ಮುಖಾಮುಖಿ ಯಾವಾಗ?

Veer Savarkar and Priyank Kharge
ಕರ್ನಾಟಕ33 mins ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

job opportunity
ದೇಶ46 mins ago

Job News: ಕೇಂದ್ರ ಸರ್ಕಾರ, ರಕ್ಷಣಾ ಇಲಾಖೆಗಳಲ್ಲಿ ಶೇ.14ರಷ್ಟು ಉದ್ಯೋಗ ಹೆಚ್ಚಳ

Office Rental Rises in top 7 cities including bengaluru
ದೇಶ48 mins ago

ಬೆಂಗಳೂರು ಸೇರಿ ದೇಶದ ಟಾಪ್ 7 ನಗರಗಳಲ್ಲಿ ಕಚೇರಿ ಬಾಡಿಗೆ ಹೆಚ್ಚಳ!

BMTC Bus hits bike
ಕರ್ನಾಟಕ1 hour ago

BMTC Accident : ಕಿಲ್ಲರ್‌ ಬಿಎಂಟಿಸಿ ಬಸ್‌ಗೆ 120 ಮಂದಿ ಬಲಿ!

Kapil Sharma and Sunil Grover
ಬಾಲಿವುಡ್1 hour ago

The Kapil Sharma Show: 6 ವರ್ಷದ ಮುನಿಸು ಮರೆತು ಒಟ್ಟಿಗೆ ಪಾರ್ಟಿ ಮಾಡಿದ ಕಪಿಲ್‌ ಶರ್ಮಾ, ಸುನಿಲ್‌ ಗ್ರೋವರ್!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Veer Savarkar and Priyank Kharge
ಕರ್ನಾಟಕ33 mins ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ6 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ13 hours ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ21 hours ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ1 day ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ1 day ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ1 day ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ1 day ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ1 day ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

read your daily horoscope predictions for december 6 2023
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರು ಸುಮ್ಮನಿದ್ದರೂ ನಡೆಯುತ್ತೆ ಕಲಹ!

ಟ್ರೆಂಡಿಂಗ್‌