ಪ್ರಮುಖ ಸುದ್ದಿ
Horoscope Today : ಇಂದು ಈ ರಾಶಿಯವರು ಹಣಕಾಸಿನ ವ್ಯವಹಾರ ಮಾಡುವುದು ಬೇಡ!
ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ ಅಷ್ಟಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಇಂದಿನ ಪಂಚಾಂಗ (26-06-2023)
ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.
ತಿಥಿ: ಅಷ್ಟಮಿ 26:04 ವಾರ: ಸೋಮವಾರ
ನಕ್ಷತ್ರ: ಉತ್ತರಾ 12:42 ಯೋಗ: ವ್ಯತಿಪಾತ 06:05
ಕರಣ: ವಿಷ್ಟಿ (ಭದ್ರ) 13:18
ಅಮೃತಕಾಲ: ಬೆಳಗಿನ ಜಾವ 04 ಗಂಟೆ 46 ನಿಮಿಷದಿಂದ ಬೆಳಗ್ಗೆ 06 ಗಂಟೆ 32 ನಿಮಿಷದವರೆಗೆ.
ಸೂರ್ಯೋದಯ : 05:56 ಸೂರ್ಯಾಸ್ತ : 06:49
ರಾಹುಕಾಲ : ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00
ಮೇಷ : ಆಪ್ತರ ವರ್ತನೆ ನಿಮ್ಮ ಮನಸ್ಸಿಗೆ ನೋವು ತರುವ ಸಾಧ್ಯತೆ ಹೆಚ್ಚು, ತಾಳ್ಮೆಯಿಂದ ಇರಿ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು, ಮಾತಿನಲ್ಲಿ ಹಿಡಿತವಿರಲಿ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ವೃಷಭ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ, ಆರೋಗ್ಯದ ಕಡೆಗೆ ಗಮನ ಹರಿಸಿ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಪ್ರಗತಿಯೊಂದಿಗೆ ಲಾಭ ಪಡೆಯುವಿರಿ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಹಿರಿಯರಿಂದ ಮಾರ್ಗದರ್ಶನ. ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಮಿಥುನ: ಯಾರಾದರೂ ನಿಮ್ಮ ಸಹಾಯ ಬೇಡಿ ಬರುವರು, ಯೋಚಿಸಿ ಸಹಾಯ ಮಾಡಿ. ಆರ್ಥಿಕ ಪ್ರಗತಿ ದಿನದ ಮಟ್ಟಿಗೆ ಸಾಧಾರಣ. ಯಾರಾದರೂ ನಿಮ್ಮ ನಿರೀಕ್ಷೆಗಳಿಗೆ ನಿರಾಸೆ ಉಂಟು ಮಾಡುವ ಸಾಧ್ಯತೆ, ಅವರ ಮಾತನ್ನು ಲಕ್ಷಿಸದೇ ಕಾರ್ಯದಲ್ಲಿ ಮುನ್ನುಗ್ಗಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಹೊಸ ಭರವಸೆಯ ಆಶಾಭಾವನೆ ಮೂಡಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2
ಕಟಕ: ಕೆಲವು ಆಘಾತಗಳನ್ನು ಎದುರಿಸಬೇಕಾಗಿ ಬರಬಹುದು, ಧೈರ್ಯದಿಂದ ಇರಿ. ನಿಮ್ಮ ಆಸೆ-ಆಕಾಂಕ್ಷೆಗಳು ಯಶಸ್ಸನ್ನು ತಂದುಕೊಡಲಿವೆ. ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ. ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದೀತು ಎಚ್ಚರಿಕೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಸಿಂಹ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕವಾಗಿ ಲಾಭ ಕಡಿಮೆ. ಹೊಸ ಆಲೋಚನೆಗಳು ನಿಮ್ಮನ್ನು ಸೃಜನಾತ್ಮಕವಾಗಿ ಏನಾದರೂ ಮಾಡಲು ಪ್ರಯತ್ನಿಸುವಂತೆ ಪ್ರೇರೇಪಿಸುತ್ತವೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಕನ್ಯಾ: ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳವಿರಿ. ಹಣಕಾಸು ಪರಿಸ್ಥಿತಿ ಸಾಧಾರಣ, ದಿನದ ಮಟ್ಟಿಗೆ ಖರ್ಚು. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಾಸಿಗೆ ಇದ್ದಷ್ಟು ಕಾಲು ಚಾಚಿ. ಆರೋಗ್ಯ ಮಧ್ಯಮ, ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಪ್ರಭಾವಿ ಜನರ ಬೆಂಬಲ ಸಿಗಲಿದೆ. ಇದರಿಂದ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ. ಒಡಹುಟ್ಟಿದವರ ಸಹಕಾರ ಸಿಗಲಿದೆ. ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನು ಆಡಿ, ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ವೃಶ್ಚಿಕ: ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡಿ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಇಂದು ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ. ಪ್ರಯಾಣದಿಂದ ಲಾಭ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6
ಧನಸ್ಸು: ಭಾವನಾ ಜೀವಿಗಳಾದ ನೀವು ನಕಾರಾತ್ಮಕ ಆಲೋಚನೆಗಳಿಂದ ದೂರ ಇರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ, ಕ್ಷೇತ್ರ ದರ್ಶನ ಪಡೆದು ಮಾನಸಿಕ ನೆಮ್ಮದಿ ತಂದುಕೊಳ್ಳುವುದು ಅವಶ್ಯಕ. ಮಕ್ಕಳ ಆರೋಗ್ಯದ ಕಡೆಗೆ ಗಮನ ಹರಿಸಿ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಮಕರ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಸಾಧ್ಯತೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಕೆಲಸ ಕಾರ್ಯಗಳಲ್ಲಿ ಬಳಸಿಕೊಂಡರೆ ಇನ್ನೂ ಹೆಚ್ಚು ಆಕರ್ಷಕ ವ್ಯಕ್ತಿತ್ವ ವಿಕಸನ ಆಗುತ್ತದೆ. ಆರೋಗ್ಯ ಉತ್ತಮ. ದಿನದ ಮಟ್ಟಿಗೆ ಖರ್ಚು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಕುಂಭ: ಅತಿಥಿಗಳ ಆಗಮನ ಸಂತಸ ತರುವುದು. ಆತ್ಮವಿಶ್ವಾಸದ ಹೊಸ ಭರವಸೆ ಮೂಡಲಿದೆ. ಹೂಡಿಕೆಯ ಲಾಭ ಇಂದು ಉಪಯೋಗಕ್ಕೆ ಬರುವುದು. ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದು ಕೊಡಲಿದೆ. ಆರೋಗ್ಯ, ಉದ್ಯೋಗದಲ್ಲಿ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಇದನ್ನೂ ಓದಿ : ಶುಕ್ರ ಗ್ರಹ ಲಗ್ನದಲ್ಲಿದ್ದರೆ ಉತ್ತಮ ಆರೋಗ್ಯ, ಉಳಿದ ಮನೆಯಲ್ಲಿದ್ದರೆ ಯಾವೆಲ್ಲಾ ಫಲ?
ಮೀನ: ಅತಿರೇಕದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಕೋಪಗೊಳ್ಳುವಂತೆ ಉದ್ರೇಕವಾಗುವ ವಿಷಯಗಳಿಂದ ದೂರ ಇರಿ. ತಾಳ್ಮೆಯಿಂದ ವರ್ತಿಸಿ. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | [email protected]
ದೇಶ
Organ Donation : ಅಂಗಾಂಗ ದಾನ ಮಾಡಿದವರ ಅಂತ್ಯ ಸಂಸ್ಕಾರಕ್ಕೆ ಸಕಲ ಸರ್ಕಾರಿ ಗೌರವ
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಅಂಗಾಂಗ ದಾನಿಗಳಿಗೆ (Organ Donation) ಸಂಪೂರ್ಣ ಸರ್ಕಾರಿ ಗೌರವಗಳನ್ನು ಘೋಷಿಸಿದ್ದಾರೆ.
ಚೆನ್ನೈ: ಈ ಸೌಲಭ್ಯ ಕರ್ನಾಟಕದಲ್ಲಿ ಅಲ್ಲ. ತಮಿಳುನಾಡಲ್ಲಿ. ಶನಿವಾರ ಅಲ್ಲಿನ ಸಿಎಂ ಎಂ. ಕೆ ಸ್ಟಾಲಿನ್ ಅವರು ಈ ಘೋಷಣೆ ಮಾಡಿದ್ದಾರೆ. ಅಂಗಾಂಗ ದಾನಿಗಳ ಅಂತ್ಯಕ್ರಿಯೆಗೆ ತಮ್ಮ ಸರ್ಕಾರ ಸಂಪೂರ್ಣ ಸರ್ಕಾರಿ ಗೌರವಗಳನ್ನು ನೀಡಲಿದೆ ಎಂದು ಪ್ರಕಟಿಸಿದ್ದಾರೆ. ಮೆದುಳು ನಿಷ್ಕ್ರಿಯಗೊಂಡವರು ಮತ್ತು ಅಂಗಾಂಗಗಳನ್ನು ದಾನ ಮಾಡಲು ಮುಂದೆ ಬಂದ ಅವರ ಕುಟುಂಬ ಸದಸ್ಯರ ತ್ಯಾಗವನ್ನು ಗೌರವಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಅಂಗಾಂಗ ದಾನದಲ್ಲಿ ತಮಿಳುನಾಡು ದೇಶದಲ್ಲಿ ಮುಂಚೂಣಿ ಸ್ಥಾನ ಪಡೆದಿದೆ. ಮೆದುಳು ನಿಷ್ಕ್ರಿಯಗೊಂಡವರ ಅಂಗಾಂಗಗಳನ್ನು ದಾನ ಮಾಡಲು ಮುಂದೆ ಬರುವ ಕುಟುಂಬಗಳಿಂದಾಗಿ ತಮಿಳು ನಾಡಿಗೆ ಈ ಗೌರವ ಲಭಿಸಿದೆ ” ಎಂದು ಡಿಎಂಕೆ ಮುಖ್ಯಸ್ಥರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ನಲ್ಲಿ ಪ್ರಕಟಿಸಿದ್ದಾರೆ.
உடல் உறுப்பு தானத்தின் மூலம் நூற்றுக்கணக்கான நோயாளிகளுக்கு வாழ்வளிக்கும் அரும்பணியில் நாட்டின் முன்னணி மாநிலமாகத் தமிழ்நாடு தொடர்ந்து விளங்கி வருகின்றது.
— M.K.Stalin (@mkstalin) September 23, 2023
குடும்ப உறுப்பினர்கள் மூளைச்சாவு நிலையை அடைந்த துயரச் சூழலிலும், அவர்களின் உடல் உறுப்புகளைத் தானமாக அளித்திட முன்வரும்…
ಮೆದುಳು ನಿಷ್ಕ್ರಿಯಗೊಂಡ ಮತ್ತು ಅವರ ಅಂಗಾಂಗಗಳನ್ನು ಇತರರಿಗೆ ದಾನ ಮಾಡಿದ ವ್ಯಕ್ತಿಗಳಿಗೆ ಇನ್ನು ಮುಂದೆ ಅಂತಿಮ ವಿಧಿಗಳನ್ನು ನೆರವೇರಿಸುವಾಗ ರಾಜ್ಯ ಸರ್ಕಾರದ ಗೌರವಗಳನ್ನು ನೀಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ ಈ ಘೋಷಣೆಯನ್ನು ಶ್ಲಾಘಿಸಿದ ಪಿಎಂಕೆ ಮುಖ್ಯಸ್ಥ ಅನ್ಬುಮಣಿ ರಾಮದಾಸ್, ‘ಮೆದುಳು ನಿಷ್ಕ್ರಿಯಗೊಂಡವರು’ ಎಂದು ಘೋಷಿಸಲ್ಪಟ್ಟವರ ನಿಸ್ವಾರ್ಥ ತ್ಯಾಗಕ್ಕೆ ಇದಕ್ಕಿಂತ ಬೇರೆ ಯಾವುದೇ ಗೌರವ ಸಿಗದು ಎಂದು ಹೇಳಿದ್ದಾರೆ.
ಇದನ್ನೂ ಓದಿ : Gautam Adani : ಅದಾನಿ ಭೇಟಿ ಮಾಡಿದ ಶರದ್ ಪವಾರ್; ರಾಹುಲ್ ಮಾತಿಗೆ ಕಿಮ್ಮತ್ತಿಲ್ಲ ಎಂದ ಬಿಜೆಪಿ!
ತಮ್ಮ ಅಂಗಾಂಗಗಳನ್ನು ದಾನ ಮಾಡಿ ಅನೇಕ ಜೀವಗಳನ್ನು ಉಳಿಸುವವರಿಗೆ ಇದಕ್ಕಿಂತ ಉತ್ತಮ ಗೌರವ ಮತ್ತು ಮಾನ್ಯತೆ ನೀಡಲು ಸಾಧ್ಯವಿಲ್ಲ” ಎಂದು ಅವರು ಪಕ್ಷದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಂಗಾಂಗ ದಾನದಲ್ಲಿ ಪಾರದರ್ಶಕತೆಯನ್ನು ತರುವಂತೆ ಪಿಎಂಕೆ ನಾಯಕ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಿಂದ ಚಿಕಿತ್ಸೆ ಪಡೆಯುವ ಜನರಿಗೆ ಅಂಗಾಂಗಗಳ ಹಂಚಿಕೆಯಲ್ಲಿ ಆದ್ಯತೆ ನೀಡಬೇಕು ಎಂಬುದಾಗಿಯೂ ಅವರು ಹೇಳಿದ್ದಾರೆ.
ಉಡುಪಿ
Chaitra Kundapura : ವಂಚಕಿ ಚೈತ್ರಾ ಜತೆಗೆ ಕುಂದಾಪುರದ ಹೆಸರು ಬಳಸಬೇಡಿ; ತಾತ್ಕಾಲಿಕ ನಿರ್ಬಂಧ ವಿಧಿಸಿದ ಕೋರ್ಟ್
Chaitra Kundapura : ವಂಚಕಿ ಚೈತ್ರಾ ಜತೆ ಕುಂದಾಪುರದ ಹೆಸರು ಬಳಸಬಾರದು ಎಂಬ ಅರ್ಜಿದಾರರ ದಾವೆಗೆ ಕೋರ್ಟ್ ತಾತ್ಕಾಲಿಕವಾಗಿ ಓಕೆ ಎಂದಿದೆ. ಮುಂದಿನ ವಿಚಾರಣೆಯ ಬಳಿಕ ಇದಕ್ಕೆ ಸ್ಪಷ್ಟತೆ ಸಿಗಲಿದೆ.
ಬೆಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ (Bynduru BJP Ticket) ಕೊಡಿಸುವುದಾಗಿ ಗೋವಿಂದ ಪೂಜಾರಿ (Govinda Poojari) ಅವರಿಗೆ ಐದು ಕೋಟಿ ರೂ. ವಂಚನೆ ಮಾಡಿರುವ ಕುಂದಾಪುರ ಮೂಲದ ಫೈರ್ ಬ್ರಾಂಡ್ ಭಾಷಣಕಾರ್ತಿ ಚೈತ್ರಾ (Chaitra Kundapura) ಹೆಸರು ಈಗ ಎಲ್ಲೆಡೆ ಫೇಮಸ್. ಆದರೆ, ಈಕೆಯ ಹೆಸರನ್ನು ಪದೇಪದೆ ವಂಚನೆಯ ಹೆಸರಲ್ಲಿ ಬಳಸುತ್ತಿರುವುದು ಕುಂದಾಪುರ (Kundapura Name of a town) ಎಂಬ ಊರಿಗೆ ಅಪಮಾನ ಮಾಡಿದಂತಾಗುತ್ತಿದೆ. ಹೀಗಾಗಿ ಆಕೆಯ ಹೆಸರಿನ ಜತೆಗಿರುವ ʻಕುಂದಾಪುರʼ ಹೆಸರನ್ನು ಬಳಸದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿ ಎಂದು ಕುಂದಾಪುರದ ವ್ಯಕ್ತಿಯೊಬ್ಬರು ಕೋರ್ಟ್ ಮೊರೆ ಹೊಕ್ಕಿದ್ದರು. ಈ ಕೋರ್ಟ್ ಈ ಬೇಡಿಕೆಗೆ ತಾತ್ಕಾಲಿಕ ಅಸ್ತು (Court restricts media from using Kundapuara name with Chaitra) ಎಂದಿದೆ.
ವಂಚನೆ ಪ್ರಕರಣವಾಗಿರುವುದರಿಂದ, ಬಿಜೆಪಿ ಟಿಕೆಟ್ ವಂಚನೆಯಾಗಿರುವುದರಿಂದ, ಪ್ರಧಾನ ಆರೋಪಿ ಸಾಕಷ್ಟು ಜನಪ್ರಿಯಳಾಗಿರುವುದರಿಂದ ಆಕೆಯ ಹೆಸರು ಮತ್ತು ಸುದ್ದಿ ಗಮನ ಸೆಳೆದಿತ್ತು. ಹೀಗಾಗಿ ಆಕೆಯೊಂದಿಗೆ ಆಕೆಯ ಊರಿನ ಹೆಸರೂ ಜತೆಯಾಗಿ ಬರುತ್ತಿತ್ತು. ಇದು ಸಹಜವಾಗಿ ಅಲ್ಲಿನ ಜನರಿಗೆ ಬೇಸರ ಉಂಟು ಮಾಡಿದೆ.
ಇದನ್ನು ಗಮನಿಸಿದ ಕುಂದಾಪುರ ಮೂಲದ ಸದ್ಯ ಬೆಂಗಳೂರಿನಲ್ಲಿರುವ ವ್ಯಕ್ತಿಯೊಬ್ಬರು ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆಕೆಯ ಹೆಸರಿನ ಜತೆ ಕುಂದಾಪುರದ ಹೆಸರು ತಳುಕು ಹಾಕುವುದು ಬೇಡ ಎಂದು ಕೋರಿದ್ದರು.
ಬೆಂಗಳೂರಿನ ಬಸವನಗುಡಿಯಲ್ಲಿ ಕಾಫಿ ಶಾಪ್ ಹೋಟೆಲ್ ಮಾಲೀಕರು ಆದ ಕುಂದಾಪುರ ಮೂಲದ ಗಣೇಶ್ ಶೆಟ್ಟಿ ದಾವೆ ಹೂಡಿದವರು. ನಾನು ಕುಂದಾಪುರ ಮೂಲದವನಾಗಿದ್ದು, ಹೋಟೆಲ್ ನಡೆಸುತ್ತಿದ್ದೇನೆ. ಹೋಟೆಲ್ ಗೆ ಬರುವ ಗ್ರಾಹಕರು ಕುಂದಾಪುರ ಬಗ್ಗೆ ವಿಚಾರಿಸತೊಡಗಿದ್ದಾರೆ. ಇದರಿಂದ ಕುಂದಾಪುರ ದೂಷಣೆಗೆ ಒಳಗಾಗುತ್ತಿದೆ. ಈ ಒಂದು ಘಟನೆಯಿಂದ ಅಲ್ಲಿನ ಭವಿಷ್ಯದ ಪೀಳಿಗೆಯನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಬಹುದು ಎಂದು ಅವರು ದಾವೆಯಲ್ಲಿ ಆತಂಕ ವ್ಯಕ್ತಪಡಿಸಿದ್ದರು.
ಕುಂದಾಪುರವು ಉಡುಪಿ ಜಿಲ್ಲೆಯ ಪ್ರಮುಖ ಪಟ್ಟಣವಾಗಿದೆ. 10 ಮತ್ತು 11ನೇ ಶತಮಾನದಲ್ಲಿ ಅಲುಪು ರಾಜವಂಶಸ್ಥರಾದ ಕುಂದವರ್ಮ ಅವರು ಕುಂದಾಪುರದಲ್ಲಿ ಆಳ್ವಿಕೆ ನಡೆಸಿದ್ದು. ಐತಿಹಾಸಿಕ ಕುಂದೇಶ್ವರ ದೇವಸ್ಥಾನ ಸಹ ನಿರ್ಮಿಸಿದ್ದಾರೆ. ಕದಂಬರು, ಚಾಲುಕ್ಯ, ಹೊಯ್ಸಳ, ವಿಜಯನಗರ ಅರಸರು ಕುಂದಾಪುರ ಪಟ್ಟಣದ ಸಾಂಸ್ಕೃತಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ನಂತರ ಪೋರ್ಚಗೀಸರು, ಜರ್ಮನ್ನರು, ಟಿಪ್ಪುಸುಲ್ತಾನ್, ಬ್ರಿಟಿಷರು ಕುಂದಾಪುರ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಅನೇಕ ಐತಿಹಾಸಿಕ ದೇವಸ್ಥಾಗಳಿಂದ ಕುಂದಾಪುರ ಖ್ಯಾತಿ ಪಡೆದಿದೆ ಎಂದು ದಾವೆಯಲ್ಲಿ ವಿವರಿಸಲಾಗಿತ್ತು.
ವಂಚನೆ ಆರೋಪದಲ್ಲಿ ಚೈತ್ರಾ ಹಾಗೂ ಇತರೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚೈತ್ರ ಸಹ ಕುಂದಾಪುರದ ಮೂಲದವರಾಗಿದ್ದಾರೆ. ಆದರೆ, ಈ ವಂಚನೆ ಪ್ರಕರಣಕ್ಕೆ ಮಾಧ್ಯಮಗಳು ಚೈತ್ರಾ ಹೆಸರು ಬಳಸುವಾಗ ಕುಂದಾಪುರ ಎಂಬುದಾಗಿ ಉಲ್ಲೇಖಿಸುತ್ತಿವೆ. ಇದರಿಂದ ಕುಂದಾಪುರ ಪಟ್ಟಣದ ಹೆಸರು ಮತ್ತು ಘನತೆಗೆ ಧಕ್ಕೆಯಾಗುತ್ತಿದೆ. ಕುಂದಾಪುರ ಎಂದು ಉಲ್ಲೇಖಿಸಿ ಮಾಧ್ಯಮಗಳು ಸುದ್ದಿ ಪ್ರಕಟಿಸುವುದು ಅವಹೇಳನಕಾರಿಯಾಗಿದೆ ಎಂದು ದಾವೆಯಲ್ಲಿ ಆಕ್ಷೇಪಿಸಲಾಗಿತ್ತು.
ಇದನ್ನೂ ಓದಿ: Chaitra Kundapura : ಫೈರ್ ಬ್ರಾಂಡ್ ಚೈತ್ರಾ ಕುಂದಾಪುರ ಪರಪ್ಪನ ಅಗ್ರಹಾರಕ್ಕೆ; 14 ದಿನ ನ್ಯಾಯಾಂಗ ಬಂಧನ
ಹೀಗಾಗಿ ಮಾಧ್ಯಮಗಳು ಆಕೆಯ ವಿಚಾರ ಬಂದಾಗ ಕುಂದಾಪುರ ಎಂಬ ಹೆಸರನ್ನು ಉಲ್ಲೇಖಿಸದಂತೆ ಸೂಚನೆ ನೀಡಬೇಕು ಎಂದು ಅವರು ಕೋರಿದ್ದರು. ಜತೆಗೆ ಕುಂದಾಪುರ ಹೆಸರು ಉಲ್ಲೇಖಿಸಿ ಪ್ರಸಾರ ಮಾಡಿರುವ ಸುದ್ದಿ, ವೀಡಿಯೋ, ಲೇಖನ, ಪೋಸ್ಟ್, ಲಿಂಕ್‌ಗಳನ್ನು ಶಾಶ್ವತವಾಗಿ ತೆಗೆದುಹಾಕುವಂತೆ ಸೂಚಿಸಬೇಕು ಎಂದು ಕೂಡಾ ಕೇಳಿದ್ದರು.
ಇದೀಗ ಕೋರ್ಟ್ ಅವರ ದಾವೆಯನ್ನು ಸ್ವೀಕರಿಸಿದ್ದು ಮುಂದಿನ ವಿಚಾರಣೆಯ ವರೆಗೆ ಮಾಧ್ಯಮಗಳು ಆಕೆಯ ಹೆಸರಿನ ಜತೆಗೆ ಕುಂದಾಪುರ ಎಂಬ ಹೆಸರನ್ನು ಬಳಸದಂತೆ ತಾತ್ಕಾಲಿಕ ನಿರ್ಬಂಧವನ್ನು ವಿಧಿಸಿದೆ. ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಲ್ಲಿ ಮುಂದಿನ ವಿಚಾರಣೆಯವರೆಗೆ ಈ ನಿರ್ಬಂಧವನ್ನು ಪಾಲಿಸಬೇಕು ಎಂದು ಸೂಚಿಸಲಾಗಿದೆ.
ದೇಶ
Illicit Affair : ಅಕ್ರಮ ಸಂಬಂಧ ನೋಡಿದ ಮಗನನ್ನೇ ಕೊಂದ ಹೆತ್ತಮ್ಮ; 2 ವರ್ಷದ ಬಳಿಕ ಪ್ರಿಯಕರನ ಜತೆ ಅರೆಸ್ಟ್
8 ವರ್ಷದ ಮಗುವಿನ ತಾಯಿ ಹಾಗೂ ಚಿಕ್ಕಪ್ಪ ಸೇರಿಕೊಂಡು (Illicit Affair) ಕತ್ತು ಹಿಸುಕಿ ಕೊಂದಿದ್ದಾರೆ. ಅವರು ಮಗುವಿನ ಮೃತ ದೇಹವನ್ನು ಹೊಲದಲ್ಲಿ ಕೊಂದ ನಂತರ ಸಮಾಧಿ ಮಾಡಿದ್ದರು.
ಜೈಪುರ : ತನ್ನ ಮತ್ತು ಭಾವನ ನಡುವಿನ ಅಕ್ರಮ ಸಂಬಂಧವನ್ನು (Illicit Affair) ನೋಡಿದ ಮಗುವನ್ನು ಕೊಂದು ಹಾಕಿದ ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿದ ಘಟನೆ ರಾಜಸ್ಥಾನದ ಭರತ್ಪುರದಲ್ಲಿ ನಡೆದಿದೆ. ಕೊಲೆ ಆರೋಪ ಹಾಗೂ ಸಾಕ್ಷಿ ನಾಶ ಆರೋಪದ ಮೇಲೆ ಮಹಿಳೆ ಮತ್ತು ಆಕೆಯ ಭಾವನನ್ನು ಬಂಧಿಸಲಾಗಿದೆ. ಅವರಿಬ್ಬರು ಮಗುವಿನ ಕತ್ತು ಹಿಸುಕಿ ಕೊಂದು ಮೃತದೇಹವನ್ನು ಹೊಲದಲ್ಲಿ ಹೂತು ಹೋಗಿದ್ದರು. ಪ್ರಕರಣದ ಬಗ್ಗೆ ನಾನಾ ಹಂತಗಳಲ್ಲಿ ತನಿಖೆ ನಡೆದು ಎರಡು ವರ್ಷಗಳ ಬಳಿಕ ಆರೋಪಿಗಳು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಆರಂಭದಲ್ಲಿ ಅವರು ನಾನಾ ನೆಪ ಹೇಳಿ ಬಚಾವಾಗಿದ್ದರು. ಆದರೆ ಹತ್ಯೆಯಾದ ಮಗುವಿನ ತಂದೆಯ ನಿರಂತರ ಹೋರಾಟದ ಬಳಿಕ ಆರೋಪಿಗಳು ಕಾನೂನು ಬಲೆಗೆ ಬಿದ್ದಿದ್ದಾರೆ.
ಯಾಕೆ ಕೊಲೆ ಮಾಡಿದ್ದರು
ಬಂಧನಕ್ಕೊಳಗಾದವರನ್ನು ಕೃಷ್ಣ ಕಾಂತ್ ಮತ್ತು ತಾಯಿ ಹೇಮಲತಾ ಎಂದು ಗುರುತಿಸಲಾಗಿದೆ. ಕೃಷ್ಣಕಾಂತ್ ನ ಸಹೋದರನ ಪತ್ನಿಯೇ ಹೇಮಲತಾ. ಅವರಿಬ್ಬರೂ ಅಕ್ರಮ ಸಂಬಂಧ ಹೊಂದಿದ್ದರು. ಒಂದು ದಿನ ಅವರಿಬ್ಬರು ಹೊಲದಲ್ಲಿ ಲೈಂಗಿಕ ಸಂಪರ್ಕ ನಡೆಸುತ್ತಿದ್ದಾಗ ಮಗ ಗೋಲು ಬಂದು ನೋಡಿದ್ದ. ಆತ ವಿಷಯವನ್ನು ಎಲ್ಲರಿಗೂ ತಿಳಿಸುತ್ತಾನೆ ಎಂಬ ಭಯದಿಂದ ಅವರಿಬ್ಬರೂ ಸೇರಿಕೊಂಡು ಕತ್ತು ಹಿಸುಕಿ ಕೊಲೆ ಮಾಡಿದ್ದರು.
ರುಬ್ಪಾಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಚಂದನ್ಪುರ ಗ್ರಾಮದಲ್ಲಿ 2021 ರಲ್ಲಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಮಗುವಿನ ತಂದೆ ಗ್ಯಾನ್ ಸಿಂಗ್ ತನ್ನ ಮಗ ಗೋಲು ಫೆಬ್ರವರಿ 2021 ರಲ್ಲಿ ಕಾಣೆಯಾದ ಬಗ್ಗೆ ಪೊಲೀಸ್ ದೂರು ದಾಖಲಿಸಿದ್ದರು. ಪೊಲೀಸರು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ಮೂರು ದಿನಗಳ ನಂತರ ಗ್ರಾಮದ ಹೊಲದಲ್ಲಿ ಗೋಲು ಮೃತ ದೇಹ ಪತ್ತೆಯಾಗಿತ್ತು.
ಪೊಲೀಸರು ಕೊಲೆಗಾರರನ್ನು ಬಂಧಿಸಲು ತನಿಖೆಯನ್ನು ಪ್ರಾರಂಭಿಸಿದ್ದರೂ ಕೊಲೆಗಾರರನ್ನು ಬಂಧಿಸಲು ಸಾಧ್ಯವಾಗಲಿಲ್ಲ. ಬಳಿಕ ಪೊಲೀಸರು ಡಿಸೆಂಬರ್ 2021 ರಂದು ಪ್ರಕರಣವನ್ನು ಮುಕ್ತಾಯಗೊಳಿಸಿದ್ದರು. ಆದರೆ ಮಗುವಿನ ತಂದೆ ಬಿಟ್ಟುಕೊಡಲಿಲ್ಲ. ತನ್ನ ಮಗನ ಕೊಲೆಗಾರರನ್ನು ಕಂಡುಹಿಡಿಯದಿರುವ ಬಗ್ಗೆ ಜೈಪುರ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದರು ಹಾಗೂ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು. ಈ ವಿಚಾರಣೆ ನಡೆಸಿದ ಜೈಪುರ ಹೈಕೋರ್ಟ್ ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸುವಂತೆ ಆದೇಶಿಸಿತ್ತು.
ತಂಡ ರಚನೆ
ಬಯಾನಾದ ಸರ್ಕಲ್ ಆಫೀಸರ್ (ಸಿಒ) ನಿತಿರಾಜ್ ಸಿಂಗ್ ಅವರ ನೇತೃತ್ವದಲ್ಲಿ ಕೊಲೆ ಆರೋಪಿಗಳ ಪತ್ತೆ ತಂಡವನ್ನು ರಚಿಸಲಾಯಿತು. ಎಂಟು ವರ್ಷದ ಮಗುವಿನ ಕೊಲೆಗಾರರನ್ನು ಬಂಧಿಸಲು ಮತ್ತೊಮ್ಮೆ ತನಿಖೆಯನ್ನು ಪ್ರಾರಂಭಿಸಲಾಯಿತು. ಈ ವೇಳೆ ಮಗುವಿನ ಚಿಕ್ಕಪ್ಪ ಮತ್ತು ತಾಯಿ ಅಕ್ರಮ ಸಂಬಂಧ ಹೊಂದಿದ್ದಾರೆಂದು ತಿಳಿಯಿತು. ಚಿಕ್ಕಪ್ಪ ಕೃಷ್ಣ ಕಾಂತ್ ಮತ್ತು ತಾಯಿ ಹೇಮಲತಾ ಅವರು ಹೆಚ್ಚಿನ ವಿಚಾರಣೆಗೆ ಕರೆಯಲಾಗಿತ್ತು.
ಇದನ್ನೂ ಓದಿ : Murder Case : ನೀರಿನ ತೊಟ್ಟಿಯಲ್ಲಿ ತೇಲುತ್ತಿತ್ತು ಮಗುವಿನ ಶವ; ಮೊಮ್ಮಗಳನ್ನೇ ಕೊಂದು ಬಿಟ್ಟನಾ!
ಆರಂಭದಲ್ಲಿ, ಅವರಿಬ್ಬರು ಮಗುವಿನ ಕೊಲೆಯಲ್ಲಿ ತಮ್ಮ ಪಾತ್ರವನ್ನು ನಿರಾಕರಿಸಿದ್ದರು. ಆದಾಗ್ಯೂ, ಸಮಗ್ರ ವಿಚಾರಣೆಯ ನಂತರ ಅವರಿಬ್ಬರೂ ತಮ್ಮ ಅಪರಾಧವನ್ನು ಒಪ್ಪಿಕೊಂಡರು. ತಾವಿಬ್ಬರೂ ಏಕಾಂತದಲ್ಲಿ ಇರುವ ಸಮಯವನ್ನು ಮಗುವು ನೋಡಿತ್ತು. ತಮ್ಮ ಸಂಬಂಧವನ್ನು ಸಾರ್ವಜನಿಕವಾಗಿ ಹೇಳಿಕೊಂಡರೆ ಎಂಬ ಭಯದಿಂದ ಕತ್ತು ಹಿಸುಕಿ ಕೊಂದಿದ್ದೇವೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಇಷ್ಟೆಲ್ಲ ಆಗವಾಗ ಎರಡು ವರ್ಷ ಕಳೆದಿತ್ತು. ಆರೋಪಿಗಳು ಬಂಧನವಾದ ಬಳಿಕ ಗೋಲುವಿನ ತಂದೆಗೆ ಸಮಾಧಾನವಾಗಿದೆ.
ಕರ್ನಾಟಕ
HD Kumaraswamy : ನಾನು ಹೇಳಿದ ಹಾಗೆ ಮಾಡ್ತೀರಾ?; ಕಾವೇರಿ ಬಿಕ್ಕಟ್ಟು ಪರಿಹಾರಕ್ಕೆ ಕುಮಾರಸ್ವಾಮಿ ನೀಡಿದ 3 ಸಲಹೆಗಳು
HD Kumaraswamy: ಮಂಡ್ಯದ ಕೆಆರ್‌ಎಸ್ ಅಣೆಕಟ್ಟಿಗೆ ಹೋಗಿ ನೀರಿನ ಪರಿಸ್ಥಿತಿ ಅವಲೋಕನ ಮಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಮೂರು ಸಲಹೆ ಕೊಟ್ಟಿದ್ದಾರೆ.
ಮೈಸೂರು: ಬಿಜೆಪಿ ನಾಯಕರ ಜತೆ ಮೈತ್ರಿ ಮಾತುಕತೆಗಾಗಿ (BJP-JDS Alliance) ದಿಲ್ಲಿಗೆ ತೆರಳಿದ್ದ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ(HD Kumaraswamy) ಅವರು ಅಲ್ಲಿಂದ ಮರಳುತ್ತಲೇ ಕಾವೇರಿ ಹೋರಾಟದ ಕಣಕ್ಕೆ (Cauvery dispute) ಧುಮುಕಿದ್ದಾರೆ. ಶನಿವಾರ ದಿಲ್ಲಿಯಿಂದ ಬಂದವರೇ ನೇರವಾಗಿ ಮಂಡ್ಯದ ಕೆಆರ್‌ಎಸ್ ಅಣೆಕಟ್ಟೆಗೆ (KRS Dam) ಭೇಟಿ ನೀಡಿ ಅಲ್ಲಿನ ನೀರಿನ ಪರಿಸ್ಥಿತಿಯನ್ನು ಅವಲೋಕಿಸಿದರು. ಬಳಿಕ ಮಂಡ್ಯದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ (Protest at Mandya) ಪಾಲ್ಗೊಂಡರು.
ಸರ್ಕಾರಕ್ಕೆ ಎಚ್.ಡಿ.ಕುಮಾರಸ್ವಾಮಿ ಮಹತ್ವದ ಮೂರು ಸಲಹೆ
ಕೆಆರ್‌ಎಸ್ ಅಣೆಕಟ್ಟೆಗೆ ಭೇಟಿ ನೀಡಿದ ಅವರು ಅಲ್ಲಿನ ಪರಿಸ್ಥಿತಿಯನ್ನು ಕಂಡು ಈ ಪರಿಸ್ಥಿತಿಯಲ್ಲಿ ನೀರು ಬಿಡುವುದು ಸಾಧ್ಯವೇ ಎಂದು ಕೇಳಿದರು. ಕೆಆರ್‌ಎಸ್ ಅಣೆಕಟ್ಟೆಗೆ ಭೇಟಿ ನೀಡಿದ ಜೆಡಿಎಸ್ ನಿಯೋಗದಲ್ಲಿ ಕುಮಾರಸ್ವಾಮಿ ಅವರ ಜತೆ ಶಾಸಕ ಜಿ.ಟಿ.ದೇವೇಗೌಡ, ಮಾಜಿ ಶಾಸಕರಾದ ಸಿ.ಎಸ್.ಪುಟ್ಟರಾಜು, ರವೀಂದ್ರ ಶ್ರೀಕಂಠಯ್ಯ, ಸುರೇಶ್‌ಗೌಡ, ಡಿ.ಸಿ.ತಮ್ಮಣ್ಣ ಸೇರಿದಂತೆ ಪ್ರಮುಖರು ಇದ್ದರು.
ಅಣೆಕಟ್ಟೆ ಅವಲೋಕನ ಮಾಡಿದ ಬಳಿಕ ಮಾತನಾಡಿದ ಅವರು ಮೂರು ಸಲಹೆಗಳನ್ನು ನೀಡಿದರು.
- ಪಾಲಿಸಲಾಗದ ಆದೇಶ ಪಾಲಿಸದೇ ಇದ್ದರೆ ನ್ಯಾಯಾಂಗ ನಿಂಧನೆ ಆಗಲ್ಲ. ಈ ಸಂಬಂಧ 2016ರಲ್ಲಿ ಸುಪ್ರೀಂಕೋರ್ಟ್ ತೀರ್ಪು ಇದೆ. ಇದರ ಆಧಾರದ ಮೇಲೆ ನೀರು ನಿಲ್ಲಿಸಿ ಸುಪ್ರೀಂಕೋರ್ಟ್‌ನಲ್ಲಿ ಚಾಲೆಂಜ್ ಮಾಡಿ.
- ಮೂವರು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ರಾಜ್ಯದಲ್ಲಿ ಇದ್ದಾರೆ. 6 ನ್ಯಾಯಾಲಯಗಳು, ಅಕ್ವೋಕೇಟ್ ಜನರಲ್ ಆಗಿದ್ದವರು ಇದ್ದಾರೆ. ಅವರ ಸಭೆ ಮಾಡಿ ಕಾನೂನು ಹೋರಾಟಕ್ಕೆ ಸಲಹೆ ಪಡೆಯಿರಿ.
- ಸಂಕಷ್ಟ ಸೂತ್ರ ರಚಿಸಲು ಇದು ಸಕಾಲ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಮಾರ್ಗಸೂಚಿ ಸಿದ್ಧಪಡಿಸಿ.
ಮಾಜಿ ಪ್ರಧಾನಿ ದೇವೇಗೌಡರು ಕೂಡಾ ಸರಕಾರಕ್ಕೆ ಉಪಯುಕ್ತ ಸಲಹೆಗಳನ್ನು ನೀಡಿದ್ದಾರೆ. ಅವುಗಳನ್ನು ಸಮರ್ಥರವಾಗಿ ಬಳಸಿಕೊಳ್ಳಬೇಕು. ಇದರಲ್ಲಿ ರಾಜಕೀಯ ಮಾಡಬಾರದು ಎಂದು ಸಲಹೆ ನೀಡಿದರು.
ಪ್ರಾಧಿಕಾರಕ್ಕೆ ಮಾಹಿತಿ ನೀಡುವಲ್ಲಿ ಸರ್ಕಾರ ವಿಫಲ ಎಂದ ಎಚ್‌ಡಿಕೆ
ಮಂಡ್ಯದಲ್ಲಿ ರೈತ ಹಿತ ರಕ್ಷಣಾ ಸಮಿತಿ ನೇತೃತ್ವದಲ್ಲಿ ನಡೆದ ಬಂದ್ ಮತ್ತು ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಎಚ್.ಡಿ ಕುಮಾರಸ್ವಾಮಿ ಅವರು, ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರದ ಮುಂದೆ ಸೂಕ್ತ ಮಾಹಿತಿ ಕೊಡವಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.
ʻʻಸರ್ಕಾರ ಆರಂಭಿಕ ದಿನಗಳಲ್ಲಿ ವಿಷಯ ಪ್ರಸ್ತಾಪಿಸುವಾಗ ಲಘುವಾಗಿ ತೆಗೆದುಕೊಂಡಿದ್ದಾರೆ. ಕಾವೇರಿ ನಿರ್ವಹಣಾ ಪ್ರಾಧಿಕಾರದ ಮುಂದೆ ಮನವರಿಕೆ ಮಾಡಿಕೊಡುವುದರಲ್ಲಿ ಸರ್ಕಾರ ವಿಫಲವಾಗಿದೆ. ಹೀಗಾಗಿ ಸಮಸ್ಯೆ ಉದ್ಭವವಾಗಿದೆ ಎಂದರು.
ನಾನು, ಬಸವರಾಜ ಬೊಮ್ಮಾಯಿಯವರು ನೀರು ಬಿಡಬೇಡಿ ಎಂದು ಹೇಳಿದೆವು. ಆದರೂ ಕಾನೂನು ತಜ್ಞರ ಮಾತು ಕೇಳಿ ನೀರು ಬಿಟ್ಟಿದ್ದಾರೆ. ಈಗ ಪರಿಸ್ಥಿತಿ ಹದಗೆಟ್ಟಿದೆ ಎಂದು ಹೇಳಿದರು.
ಇದನ್ನೂ ಓದಿ: Cauvery Protest: ಬೆಂಗಳೂರು ಬಂದ್ ಮಾಡುವುದು ಬೇಡ ಎಂದ ಡಿಕೆಶಿ, ಪ್ರತಿಭಟನೆ ಹಕ್ಕಿಗೆ ವಿರೋಧವಿಲ್ಲ ಎಂದ ಸಿದ್ದರಾಮಯ್ಯ
ʻʻಬಂಗಾರಪ್ಪನವರು ಚಿಟಿಕೆ ಹೊಡೆದಂಗೆ ಸಮಸ್ಯೆ ಬಗೆಹರಿಸಿದ್ರು ಅಂತ ಮಧು ಬಂಗಾರಪ್ಪ ಹೇಳಿದ್ದಾರೆ. ಯಾವ ಸಮಸ್ಯೆ ಪರಿಹರಿಸಿದ್ರು? ಬೆಂಗಳೂರಿನಲ್ಲಿ ಬಂದ್ ಹೆಸರಲ್ಲಿ ಲೂಟಿ ಮಾಡಿಸಿದರು. ಬಂದ್ ಹೆಸರಲ್ಲಿ ಏನೇನಾಯ್ತು ಅಂತ ನಾವು ನೋಡಿದ್ದೇವೆ. ಮುಗ್ಧ ಜನರ ವಿಷಯದಲ್ಲಿ ನಾವು ಆಟ ಆಡಬಾರದು. ಇದರಲ್ಲಿ ತಾಂತ್ರಿಕ ವಿಷಯಗಳಿವೆʼʼ ಎಂದರು.
-
ಕರ್ನಾಟಕ23 hours ago
Heart Attack: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಸದ್ದಿಗೆ ಹಾರಿಹೋಯ್ತು ಯುವಕನ ಪ್ರಾಣ!
-
ಸುವಚನ18 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕರ್ನಾಟಕ9 hours ago
Suspicious death : ಮನೆಯಲ್ಲಿ ನೇತಾಡುತ್ತಿತ್ತು ಹೆಂಡ್ತಿ ಶವ; ಚಿತೆಯ ಫೋಟೊ ಹಾಕಿದ ಗಂಡ!
-
ದೇಶ13 hours ago
Kamal Haasan: ಸನಾತನ ಧರ್ಮದ ವಿಷಯದಲ್ಲಿ ‘ಮಗು’ ಉದಯನಿಧಿ ಮೇಲೆ ದಾಳಿ ಎಂದ ಕಮಲ್ ಹಾಸನ್
-
ವೈರಲ್ ನ್ಯೂಸ್4 hours ago
Viral Video : ಅಬ್ಬಾ ಏನು ಧೈರ್ಯ; ವೇಗವಾಗಿ ಚಲಿಸುತ್ತಿದ್ದ ಟ್ರಕ್ನ ಚಕ್ರದ ಪಕ್ಕದಲ್ಲಿಯೇ ಗಡದ್ದಾಗಿ ನಿದ್ದೆ ಹೊಡೆದ !
-
ಅಂಕಣ16 hours ago
ವಿಸ್ತಾರ ಅಂಕಣ: ಮಣ್ಣು ಬರೀ ಮಣ್ಣಲ್ಲ, ಅದು ನಮ್ಮ ಭಾವಕೋಶ, ನಾವು ಮಣ್ಣಿನ ಮಕ್ಕಳು!
-
ದೇಶ23 hours ago
‘ದ್ವೇಷದ ಸಂತೆಯಲ್ಲಿ ಪ್ರೀತಿಯ ಅಂಗಡಿ’! ಡ್ಯಾನಿಶ್ ಅಲಿಯನ್ನು ಭೇಟಿಯಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
-
South Cinema6 hours ago
Silk Smitha: ಸಿಲ್ಕ್ ಸ್ಮಿತಾ ಶವದ ಮೇಲೆ ಅತ್ಯಾಚಾರ ; ನಟಿಯ ಪುಣ್ಯತಿಥಿಯಂದು ಅಚ್ಚರಿಯ ಸತ್ಯ ಹೊರಬಿತ್ತು!