ಇಂದಿನ ಪಂಚಾಂಗ (29-06-2023)
ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ
ತಿಥಿ: ಏಕಾದಶಿ 26:41 ವಾರ: ಗುರುವಾರ
ನಕ್ಷತ್ರ: ಸ್ವಾತಿ 16:28 ಯೋಗ: ಸಿದ್ದಿ 27:41
ಕರಣ: ವಣಿಜ 15:06 ಇಂದಿನ ವಿಶೇಷ: ಚಾತುರ್ಮಾಸ್ಯವ್ರತಾರಂಭ, ಗೋಪದ್ಮವ್ರತ, ಶಯನೀ ಏಕಾದಶಿ.
ಅಮೃತಕಾಲ: ಬೆಳಗ್ಗೆ 07 ಗಂಟೆ 31 ನಿಮಿಷದಿಂದ ಬೆಳಗ್ಗೆ 09 ಗಂಟೆ 09 ನಿಮಿಷದವರೆಗೆ.
ಸೂರ್ಯೋದಯ : 05:57 ಸೂರ್ಯಾಸ್ತ : 06:50
ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30
ಮೇಷ: ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬದ ಸದಸ್ಯರ ಸಕಾಲಿಕ ಬೆಂಬಲ ಹಿಡಿದ ಕೆಲಸದಲ್ಲಿ ಬಯಸಿದ ಫಲಿತಾಂಶಗಳನ್ನು ತರುತ್ತವೆ. ಆರೋಗ್ಯ ಪರಿಪೂರ್ಣ. ಅನಿವಾರ್ಯ ಕಾರಣಗಳಿಂದ ಖರ್ಚು. ಉದ್ಯೋಗದ ಸ್ಥಳದಲ್ಲಿ ಹೆಚ್ಚಿನ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ವೃಷಭ: ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ. ಆರ್ಥಿಕವಾಗಿ ಪರಿಸ್ಥಿತಿ ಸುಧಾರಣೆ ಆಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ. ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ, ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2
ಮಿಥುನ: ಹೂಡಿಕೆ ವ್ಯವಹಾರ ಮಾಡುವ ಕುರಿತು ಆಲೋಚನೆ. ಆರ್ಥಿಕವಾಗಿ ಪ್ರಗತಿ. ಅತಿಥಿಗಳ ಆಗಮನ. ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ಕಟಕ: ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ. ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ. ಆರೋಗ್ಯ ಪರಿಪೂರ್ಣ. ಅನಿವಾರ್ಯ ಕಾರಣಗಳಿಂದ ಖರ್ಚು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3
ಸಿಂಹ: ಪಾಲುದಾರಿಕೆ ವ್ಯವಹಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಯಾಗುವ ಸಾಧ್ಯತೆ, ಎಚ್ಚರವಹಿಸಿ. ಹಿರಿಯರ ಮಾರ್ಗದರ್ಶನ ಪಡೆಯುವಿರಿ. ಅತಿಯಾದ ಆತ್ಮವಿಶ್ವಾಸದಿಂದ ಯಾವುದೇ ಕೆಲಸಲ್ಲಿ ದುಡುಕುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6
ಕನ್ಯಾ: ನಿಮ್ಮ ಕ್ರಿಯಾಶೀಲ ಕಾರ್ಯ ಯೋಜನೆ ಸಫಲತೆಯನ್ನು ತಂದು ಕೊಡಲಿದೆ. ಆಪ್ತರು ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ. ಉದ್ಯೋಗಿಗಳಿಗೆ ಕಿರಿಕಿರಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಆರೋಗ್ಯ ಪರಿಪೂರ್ಣ ಅದರ ಹೊರತಾಗಿಯೂ ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ. ಖರ್ಚು ಹೆಚ್ಚಾಗುವ ಸಾಧ್ಯತೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2
ವೃಶ್ಚಿಕ: ಬಿಡುವಿಲ್ಲದ ಕಾರ್ಯದಿಂದ ಆಯಾಸ, ಇದರಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ. ಆದಷ್ಟು ವಿಶ್ರಾಂತಿ ಪಡೆಯಿರಿ. ಅನಗತ್ಯ ಖರ್ಚು. ಹಿರಿಯರಿಂದ ಮಾರ್ಗದರ್ಶನ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 4
ಧನಸ್ಸು: ಇಂದು ನೀವಿರುವಲ್ಲಿ ಸಂತೋಷ ತುಂಬಿದ ವಾತಾವರಣ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1
ಮಕರ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು. ಈ ದಿನ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮಲ್ಲಿರುವ ನಾಯಕತ್ವ ಗುಣವನ್ನು ಬೇರೆಯವರು ಗುರುತಿಸುವ ಸಾಧ್ಯತೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಕುಂಭ: ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ನೀಡುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ. ಆದರೆ ಅದೇ ಸಮಯದಲ್ಲಿ ಖರ್ಚೂ ತುಂಬಾ ಹೆಚ್ಚಾಗುತ್ತದೆ. ನಿಮ್ಮ ಬಗೆಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಬೇಡ. ದೀರ್ಘಕಾಲದ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ. ಆರೋಗ್ಯ ಪರಿಪೂರ್ಣ ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ಇದನ್ನೂ ಓದಿ : Mars Transit 2023 : ಜು.1ಕ್ಕೆ ಸಿಂಹ ರಾಶಿಗೆ ಮಂಗಳನ ಸಂಚಾರ; ಈ ಐದು ರಾಶಿಯವರಿಗೆ ಅದೃಷ್ಟವೋ ಅದೃಷ್ಟ!
ಮೀನ: ವಿನಾಕಾರಣ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ.
ಅನಗತ್ಯವಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆ. ಸಂಗಾತಿಯ ಸಲಹೆ ಹಿತಕರವೆನಿಸುವುದು. ಆತ್ಮೀಯರೊಂದಿಗೆ ಕಾಲ ಕಳೆಯುವ ಸಾಧ್ಯತೆ. ದಿನದ ಮಟ್ಟಿಗೆ ಆರೋಗ್ಯ ಹದಗೆಡುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com