Site icon Vistara News

Horoscope Today : ದಶಮಿಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

Horoscope Today daily horoscope

Horoscope Today

ಇಂದಿನ ಪಂಚಾಂಗ (01-03-2023)

ಶ್ರೀ ಶಕೇ 1944, ಶುಭಕೃತ ನಾಮ ಸವತ್ಸರ, ಉತ್ತರಾಯಣ,
ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ

ತಿಥಿ: ದಶಮಿ 30:38 ವಾರ: ಬುಧವಾರ
ನಕ್ಷತ್ರ: ಮೃಗಶಿರಾ 09:50 ಯೋಗ: ಪ್ರೀತಿ 17:00
ಕರಣ: ತೈತುಲ 17:26
ಅಮೃತಕಾಲ: ಮಧ್ಯರಾತ್ರಿ 01 ಗಂಟೆ 32 ನಿಮಿಷದಿಂದ 03 ಗಂಟೆ 19 ನಿಮಿಷದವರೆಗೆ.

ಸೂರ್ಯೋದಯ : 06:36 ಸೂರ್ಯಾಸ್ತ : 06:28

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹಣಕಾಸಿನ ಹರಿವು ಇದ್ದರೂ ಖರ್ಚು ಹೆಚ್ಚು. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರ ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಎಚ್ಚರಿಕೆ ಇರಲಿ. ದಿಢೀರ್‌ ಪ್ರಯಾಣ ಸಾಧ್ಯತೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ವೃಷಭ: ನಕಾರಾತ್ಮಕ ಆಲೋಚನೆಗಳು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಆದಷ್ಟು ಇವುಗಳಿಂದ ದೂರ ಇರಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆಪ್ತರಿಂದ ಉಡುಗೊರೆ ದೊರೆಯಬಹುದು. ಇಂದು ಅನೇಕ ಸಮಸ್ಯೆಗಳು ಪರಿಹಾರವಾಗಲಿವೆ. ಉದ್ಯೋಗಿಗಳಿಗೆ ಒತ್ತಡದ ದಿನ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಮಿಥುನ: ಅನಾವಶ್ಯಕವಾಗಿ ಇಂದು ಸಾಕಷ್ಟು ಒತ್ತಡ ಉಂಟಾಗಲಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಅವಕಾಶ. ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಪಡೆಯಲು ಆಲಸ್ಯವನ್ನು ಬಿಡಿ. ಉದ್ಯೋಗದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಕಟಕ: ನಿಮ್ಮ ವರ್ತನೆ ಇತರರಿಗೆ ಮುಜುಗರ ಉಂಟುಮಾಡುವ ಸಾಧ್ಯತೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆಪ್ತರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗದಲ್ಲಿ ಇಂದು ಹಿಡಿದ ಕೆಲಸ ಪೂರ್ಣಗೊಳಿಸುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಸಿಂಹ: ಆರ್ಥಿಕವಾಗಿ ಹೂಡಿಕೆ ಮಾಡುವವರು ದಿನದ ಮಟ್ಟಿಗೆ ಇಂದು ವ್ಯವಹಾರ ನಡೆಸುವುದು ಬೇಡ. ವ್ಯಾಪಾರ ವ್ಯವಹಾರ ಸಾಧಾರಣ. ಮಕ್ಕಳಿಂದ ನಿರಾಸೆ ಅನುಭವಿಸುವಿರಿ. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯ ಹಾಗೂ ಉದ್ಯೋಗ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಕನ್ಯಾ: ಇತರರನ್ನು ಟೀಕಿಸುವ ಭರದಲ್ಲಿ ನೀವು ಟೀಕೆಗೆ ಒಳಗಾಗುವುದು ಬೇಡ. ನೀವು ಸಾಲವಾಗಿ ನೀಡಿದ ಹಣ ಮರುಪಾವತಿಯಾಗಲಿದೆ‌. ಆರ್ಥಿಕ ಪ್ರಗತಿ ಉತ್ತಮ. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ವ್ಯತ್ಯಾಸ. ಉದ್ಯೋಗಿಗಳಿಗೆ ಯಶಸ್ಸು ಪಡೆಯುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸುವುದು ಉತ್ತಮ. ಆತುರದಲ್ಲಿ ಯಾವುದೇ ಹೂಡಿಕೆ ಮಾಡುವುದು ಬೇಡ. ಕುಟುಂಬದವರೊಂದಿಗೆ ಚರ್ಚಿಸಿ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ವೃಶ್ಚಿಕ: ದಿನದ ಮಟ್ಟಿಗೆ ಒತ್ತಡ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ದಿನದ ಮಟ್ಟಿಗೆ ಖರ್ಚು ಹೆಚ್ಚು. ಆರೋಗ್ಯ ಸಾಧಾರಣವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಮಧ್ಯಮ ಫಲ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

ಧನಸ್ಸು: ಆಪ್ತರ ಸಲಹೆ ಸಹಕಾರ ಸಿಗಲಿದೆ. ಆರ್ಥಿಕವಾಗಿ ಪ್ರಗತಿ. ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಪ್ರಯಾಣದ ಕುರಿತು ಆಲೋಚನೆ ಮಾಡುವಿರಿ. ಆರೋಗ್ಯ ಉತ್ತಮ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ಮಕರ: ಆರೋಗ್ಯ ಉತ್ತಮವಾಗಿರಲಿದೆ. ಬಾಕಿ ಇರುವ ವ್ಯವಹಾರಗಳು ಯಶಸ್ಸು ನೀಡಲಿವೆ. ದುರಸ್ತಿ ಕಾರ್ಯಗಳಿಗಾಗಿ ಖರ್ಚು ಮಾಡುವ ಸಾಧ್ಯತೆ. ವಿವಾಹ ಆಕಾಂಕ್ಷಿಗಳಿಗೆ ಸಂದೇಶ ಸಿಗಲಿದೆ. ಹಳೆಯ ಪ್ರೇಮ ಪ್ರಕರಣಗಳ ನೆನಪು ಮರಕಳಿಸುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ಕುಂಭ: ಆರ್ಥಿಕವಾಗಿ ಲಾಭ ಪಡೆಯುವಿರಿ. ಕುಟುಂಬದ ಸದಸ್ಯರ ನಡುವೆ ಅರ್ಥ ಮಾಡಿಕೊಳ್ಳವ ಮನಸ್ಥಿತಿ ಇರಲಿದೆ. ಹೀಗಾಗಿ ಕುಟುಂಬದಲ್ಲಿ ಸಾಮರಸ್ಯ ಮೂಡಲಿದೆ. ಗೌಪ್ಯ ವಿಷಯಗಳನ್ನು ಯಾರೊಂದಿಗೂ ಚರ್ಚಿಸುವುದು ಸರಿಯಲ್ಲ. ಉದ್ಯೋಗದಲ್ಲಿ ಯಶಸ್ಸಿನ ದಿನವಾಗಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

ಮೀನ: ಆರೋಗ್ಯ ಉತ್ತಮವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಅಪೇಕ್ಷಿತರಿಂದ ಆಮಂತ್ರಣ ಸಿಗಬಹುದು. ಇಂದು ನಿಮ್ಮ ತಾಳ್ಮೆ ಮಿತಿ ಮೀರುವ ಸಾಧ್ಯತೆ. ಉದ್ಯೋಗಿಗಳಿಗೆ ಯಶಸ್ಸು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ: Astrology Tips : ಮದುವೆಗೆ ಕಂಕಣ ಬಲ ಕೂಡಿ ಬರುತ್ತಿಲ್ಲವೇ?; ಜ್ಯೋತಿಷ್ಯ ಶಾಸ್ತ್ರದಲ್ಲಿದೆ ಪರಿಹಾರ

Exit mobile version