ಇಂದಿನ ಪಂಚಾಂಗ (10-03-2023)
ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ, ಉತ್ತರಾಯಣ,
ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ.
ತಿಥಿ: ತದಿಗೆ 21:41 ವಾರ: ಶುಕ್ರವಾರ
ನಕ್ಷತ್ರ: ಚಿತ್ತಾ 31:09 ಯೋಗ: ವೃದ್ಧಿ 20:37
ಕರಣ: ವಣಿಜ 09:20 ಇಂದಿನ ವಿಶೇಷ: ಸಂಕಷ್ಟ ಚತುರ್ಥಿ, ಶ್ರೀ ವಾದಿರಾಜರ ಆರಾಧನೆ (ಸೋಂದಾ)
ಅಮೃತಕಾಲ: ಮಧ್ಯರಾತ್ರಿ 12 ಗಂಟೆ 27 ನಿಮಿಷದಿಂದ ಮಧ್ಯರಾತ್ರಿ 02 ಗಂಟೆ 08 ನಿಮಿಷದವರೆಗೆ.
ಸೂರ್ಯೋದಯ : 06:31 ಸೂರ್ಯಾಸ್ತ : 06:30
ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30
ದ್ವಾದಶ ರಾಶಿ ಭವಿಷ್ಯ (Horoscope Today)
ಮೇಷ: ಇಂದು ಅನೇಕ ಒತ್ತಡಗಳು ನಿಮ್ಮನ್ನು ಆವರಿಸುವ ಸಾಧ್ಯತೆ. ಇತರರ ಮೇಲೆ ವಿನಾ ಕಾರಣ ಹಗೆ ಸಾಧಿಸಿ ನಿಮ್ಮ ಮಾನಸಿಕ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ. ಆರ್ಥಿಕವಾಗಿ ಒಂದಿಷ್ಟು ಸಮಸ್ಯೆ ಇರಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಕೊಂಚ ಮಟ್ಟಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6
ವೃಷಭ: ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯಕ. ವಿನಾ ಕಾರಣ ಎಲ್ಲದಕ್ಕೂ ಮೂಗು ತೂರಿಸುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ವಹಿಸಿ. ಹೂಡಿಕೆಯ ಕುರಿತು ಆಲೋಚನೆ ಮಾಡುವಿರಿ. ಆಪ್ತರ ಆರೋಗ್ಯ ವಿಚಾರಣೆ ಮಾಡುವಿರಿ. ಉದ್ಯೋಗಿಗಳಿಗೆ ಮಿಶ್ರ ಫಲ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ, ಆರ್ಥಿಕ ಲಾಭ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಮಿಥುನ: ಕೆಲಸ ಕಾರ್ಯಗಳು ಮಂದಗತಿಯಲ್ಲಿ ಸಾಗಲಿವೆ. ಆರೋಗ್ಯ ಮಧ್ಯಮ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ. ಆರ್ಥಿಕ ಲಾಭ ಸಾಧಾರಣ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರ ಫಲ. ಉದ್ಯೋಗಿಗಳಿಗೆ ಇಂದು ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಕಟಕ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗಲಿದೆ. ಆರ್ಥಿಕವಾಗಿ ನಿಮಗಿಂದು ಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಹಳೆಯ ಸ್ನೇಹಿತರು, ಕುಟುಂಬದ ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಸಿಂಹ: ಆರೋಗ್ಯದ ಬಗ್ಗೆ ಇಂದು ಕಾಳಜಿ ಅವಶ್ಯಕ. ಒತ್ತಡದಿಂದ ಹೊರಬರಲು ವ್ಯಸನಗಳಿಗೆ ಬಲಿಯಾಗುವುದು ಬೇಡ. ಆರ್ಥಿಕವಾಗಿ ಕೊಂಚ ಲಾಭ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಕಾಣುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಕನ್ಯಾ: ಶುಭ ಕಾರ್ಯಗಳಿಗಾಗಿ ಇಂದು ಖರ್ಚು ಮಾಡುವಿರಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ ಸೃಷ್ಟಿಯಾಗಲಿದೆ. ಜವಾಬ್ದಾರಿಗಳು ಹೆಚ್ಚಾಗಲಿವೆ. ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಅಗತ್ಯ. ಆತುರದಲ್ಲಿ ಯಾವುದೇ ಮಾತುಗಳನ್ನು ಆಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಆರೋಗ್ಯ ಪರಿಪೂರ್ಣ. ಕುಟುಂಬದ ಹಿರಿಯರಿಂದ ಒತ್ತಡ ಸೃಷ್ಟಿಯಾಗಲಿದೆ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಆರ್ಥಿಕ ಲಾಭದ ದಿನ. ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ. ಆಪ್ತರಿಂದ ಸಲಹೆ ಸಹಕಾರ ದೊರೆಯಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿಯೂ ಶುಭ ಫಲ.
ಅದೃಷ್ಟ ಸಂಖ್ಯೆ: 6
ವೃಶ್ಚಿಕ: ಸಂಗಾತಿಯ ಆರೋಗ್ಯದ ಸಲವಾಗಿ ಖರ್ಚುಮಾಡುವಿರಿ. ವೃತಾ ಕಾಲಹರಣ ಮಾಡುವ ಆಲೋಚನೆಗಳಿಂದ ದೂರವಿರಿ. ಸಹೋದ್ಯೋಗಿಗಳಿಂದ ಕಿರಿಕಿರಿ ಸಾಧ್ಯತೆ. ವ್ಯಾಪಾರ ವ್ಯವಹಾರ ಸಾಧಾರಣ ಫಲ. ಹೂಡಿಕೆಯ ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7
ಧನಸ್ಸು: ನಿಮ್ಮ ನಿಲುವಿಗೆ ಆಪ್ತರಿಂದ ಬೆಂಬಲ ದೊರೆಯಲಿದೆ. ಕೆಲಸ ಕಾರ್ಯಗಳಲ್ಲಿ ಪ್ರಗತಿ. ಆಪ್ತರಿಂದ ಹಣದ ಸಹಾಯದ ಕೋರಿಕೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ಮಕರ: ಉತ್ಸಾಹಭರಿತ ಜೀವನ ನಿಮ್ಮದಾಗಿರಲಿದೆ. ಆರ್ಥಿಕವಾಗಿ ಲಾಭ. ಹೂಡಿಕೆ ವ್ಯವಹಾರಗಳಲ್ಲಿ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ. ಯಾವುದಾದರೂ ಸಭೆ-ಸಮಾರಂಭಗಳಲ್ಲಿ ಭಾಗವಹಿಸುವ ಆಮಂತ್ರಣ ಬರಬಹುದು. ನಿರೀಕ್ಷೆಯ ಹೊಸ ಭರವಸೆಗಳು ಮೂಡಲಿವೆ. ಆಪ್ತರೊಂದಿಗೆ ಮಾತುಕತೆ. ಕುಟುಂಬದ ಸದಸ್ಯರಿಂದ ಸಲಹೆ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಕುಂಭ: ಅನಾವಶ್ಯಕವಾಗಿ ನೀವು ಇತರರನ್ನು ಟೀಕಿಸುತ್ತ ಸಮಯ ವ್ಯರ್ಥ ಮಾಡುವುದು ಬೇಡ. ಭೂಮಿಗೆ ಸಂಬಂಧಿಸಿದಂತೆ ವ್ಯಾಪಾರ ವ್ಯವಹಾರದಲ್ಲಿ ಲಾಭ ದೊರೆಯಲಿದೆ. ಪ್ರಯಾಣ ಮಾಡುವ ಸಾಧ್ಯತೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಮೀನ: ಆರೋಗ್ಯ ಪರಿಪೂರ್ಣ. ಉದ್ಯೋಗಕ್ಕೆ ಸಂಬಂಧಿಸಿದಂತೆ ಖರ್ಚು. ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ನಿಮ್ಮ ನಿರೀಕ್ಷೆಗಳಿಗೆ ತಕ್ಕ ಫಲ ಸಿಗದು. ಕುಟುಂಬದ ಸದಸ್ಯರಿಂದ ಒತ್ತಡ. ಸಂಗಾತಿಯ ವರ್ತನೆ ನಿಮ್ಮ ಖ್ಯಾತಿಯ ಮೇಲೆ ಪರಿಣಾಮ ಬೀರಬಹುದು. ಆರೋಗ್ಯ ಪರಿಪೂರ್ಣ. ದಿಢೀರ್ ಧನಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com
ಇದನ್ನೂ ಓದಿ: Astro Tips : ಯಾವ ದಿಕ್ಕಿಗೆ ತಲೆಹಾಕಿ ಮಲಗಿದರೆ ಒಳ್ಳೆಯದು? ವಾಸ್ತು ಶಾಸ್ತ್ರ ಹೇಳುವುದೇನು?