ಪ್ರಮುಖ ಸುದ್ದಿ
Horoscope Today : ಕನ್ಯಾ ರಾಶಿಯವರಿಗೆ ಇಂದು ಸಂತೋಷದ ದಿನ; ನಿಮ್ಮ ಭವಿಷ್ಯ ಹೀಗಿದೆ
ಶ್ರೀ ಶಕೇ 1944, ಶುಭಕೃತ ನಾಮ ಸವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷದ ನವಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಇಂದಿನ ಪಂಚಾಂಗ (16-03-2023)
ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ, ಉತ್ತರಾಯಣ,
ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ.
ತಿಥಿ: ನವಮಿ 16:38 ವಾರ: ಗುರುವಾರ
ನಕ್ಷತ್ರ: ಪೂರ್ವಾಷಾಢ 28:45 ಯೋಗ: ವ್ಯತಿಪಾತ 10:05
ಕರಣ: ಗರಜ 16:38 ಇಂದಿನ ವಿಶೇಷ: ರಾಷ್ಟ್ರೀಯ ಲಸಿಕಾ ದಿನ
ಅಮೃತಕಾಲ: ಮಧ್ಯರಾತ್ರಿ 12 ಗಂಟೆ 18 ನಿಮಿಷದಿಂದ ಮಧ್ಯರಾತ್ರಿ 01 ಗಂಟೆ 48 ನಿಮಿಷದವರೆಗೆ.
ಸೂರ್ಯೋದಯ : 06:27 ಸೂರ್ಯಾಸ್ತ : 06:30
ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30
ದ್ವಾದಶ ರಾಶಿ ಭವಿಷ್ಯ (Horoscope Today)
ಮೇಷ: ನಿಮ್ಮ ವರ್ತನೆ ಇತರರಿಗೆ ಒತ್ತಡ ಉಂಟುಮಾಡುವ ಸಾಧ್ಯತೆ. ಹಣಕಾಸು ಪ್ರಗತಿ ಉತ್ತಮ. ಧಾರ್ಮಿಕ ವ್ಯಕ್ತಿಗಳ ಭೇಟಿ, ಕ್ಷೇತ್ರ ದರ್ಶನ ಸಾಧ್ಯತೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ. ಉದ್ಯೋಗದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ
ಅದೃಷ್ಟ ಸಂಖ್ಯೆ: 7
ವೃಷಭ: ನಿಮ್ಮಲ್ಲಿರುವ ದ್ವೇಷದ ಭಾವನೆ ನಿಮ್ಮ ಮನಸ್ಸಿನ ಮೇಲೆಯೇ ಒತ್ತಡ ಉಂಟುಮಾಡುವ ಸಾಧ್ಯತೆ. ಕುಟುಂಬದ ಸದಸ್ಯರೊಂದಿಗೆ ಸಮಾಧಾನದಿಂದ ವರ್ತಿಸಿ. ಮೌನದಿಂದ ಇರುವುದು ಒಳಿತು. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7
ಮಿಥುನ: ಮಹತ್ವಾಕಾಂಕ್ಷೆಯ ಯೋಜನೆಗಳು ಸಫಲವಾಗುವವು. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ. ಅನಾವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಆರ್ಥಿಕವಾಗಿ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಕಟಕ: ಬಿಡುವಿಲ್ಲದ ಕೆಲಸದಿಂದ ಒತ್ತಡ, ಆರೋಗ್ಯದಲ್ಲಿ ವ್ಯತ್ಯಾಸ. ಆರ್ಥಿಕ ಪ್ರಗತಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಮನಸ್ಸಿಗೆ ನೋವುಂಟು ಮಾಡಬಹುದು. ಆಪ್ತರೊಂದಿಗೆ ಭಾವನೆ ಹಂಚಿಕೊಳ್ಳುವಿರಿ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ಸಿಂಹ: ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಕನ್ಯಾ: ಸಂತೋಷದಿಂದ ಇದ್ದು, ಇತರರಿಗೆ ಸಂತಸ ಹಂಚಿಕೊಳ್ಳಲು ಹವಣಿಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಆತುರದ ಭರದಲ್ಲಿ ಇತರರನ್ನು ಟೀಕೆ ಮಾಡುವುದು ಬೇಡ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ನಿಮ್ಮ ಹರಿತವಾದ ಮಾತುಗಳಿಂದ ಇತರರ ಮನಸ್ಸಿಗೆ ನೋವಾಗುವುದು ಬೇಡ, ಆಲೋಚಿಸಿ ಮಾತನಾಡಿ. ಕುಟುಂಬದ ಪ್ರತಿಯೊಂದು ವಿಷಯದಲ್ಲೂ ತಪ್ಪು ಹುಡುಕುವುದು ಬೇಡ, ಇದರಿಂದ ಮನಸ್ಸು ಘಾಸಿಯಾಗುವುದು. ಆಧ್ಯಾತ್ಮದ ಹಾದಿ ದಾರಿ ತೋರಿತು. ಶ್ರೀ ಗುರು ದತ್ತಾತ್ರೇಯನನ್ನು ಆರಾಧಿಸಿ.
ಅದೃಷ್ಟ ಸಂಖ್ಯೆ: 7
ವೃಶ್ಚಿಕ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಸಮಯ ನೀಡುವಿರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಭೂಮಿ, ಆಸ್ತಿ ಖರೀದಿಗಾಗಿ ಆಲೋಚನೆ ಮಾಡುವಿರಿ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಧನಸ್ಸು: ದೀರ್ಘಕಾಲದ ಪ್ರಯಾಣ ಮಾಡುವ ಸಾಧ್ಯತೆ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಹೊಸ ಕೆಲಸಗಳಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಆರೋಗ್ಯ ಉತ್ತಮ. ಉದ್ಯೋಗದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಮಕರ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವುದು. ಮುಂಗೋಪದಿಂದ ನಷ್ಟ ಸಾಧ್ಯತೆ. ಉದ್ಯೋಗದಲ್ಲಿ ನಿಮ್ಮ ಗುರಿ ಮುಟ್ಟಲು ಶ್ರಮ ಪಡಬೇಕಾಗಿ ಬರಬಹುದು. ಸ್ನೇಹಿತರ ಸಲಹೆ ಸಹಕಾರ ಸಿಗುವುದು.
ಅದೃಷ್ಟ ಸಂಖ್ಯೆ: 6
ಕುಂಭ: ಆಲಸ್ಯದಿಂದ ಕಾರ್ಯ ಹಾನಿ. ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಸೃಜನಾತ್ಮಕವಾಗಿ ಕೆಲಸ ಮಾಡಿ. ಇದರಿಂದ ಉದ್ಯೋಗದಲ್ಲಿ ನೀವಿಂದು ಒಳ್ಳೆಯ ಫಲ ಪಡೆಯಬಹುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಮೀನ: ಹೊಸ ಅವಕಾಶಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಹಿಂದೆ ಟೀಕೆಗಳನ್ನು ಮಾಡುವ ಜನರಿಂದ ದೂರ ಇರಿ. ದಿನದ ಮಟ್ಟಿಗೆ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಆಗುವ ಸಾಧ್ಯತೆ. ಸಂಗಾತಿಯ ಸ್ವಾರ್ಥದಿಂದ ಕುಟುಂಬದ ವಾತಾವರಣದಲ್ಲಿ ವ್ಯತ್ಯಾಸ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | [email protected]
ಇದನ್ನೂ ಓದಿ: Papamochani Ekadasi 2023 : ಪಾಪವಿಮೋಚಿನೀ ಏಕಾದಶಿ ದಿನ ವ್ರತಾಚರಣೆ ಹೇಗೆ?
ಕ್ರಿಕೆಟ್
IPL 2023: ಮೂರು ವರ್ಷಗಳ ಬಳಿಕ ಐಪಿಎಲ್ ಫ್ಯಾನ್ ಪಾರ್ಕ್; ಕರ್ನಾಟಕದಲ್ಲಿಯೂ ಇರಲಿದೆ ಜೋಶ್
ಐಪಿಎಲ್ 2023ರ ಉದ್ಘಾಟನಾ ಪಂದ್ಯವ್ನಾಡಲು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಸಜ್ಜಾಗಿದೆ.
ಬೆಂಗಳೂರು: ಕೊರೊನಾ ಕಾರಣದಿಂದ ಕಳೆದ ಮೂರು ವರ್ಷ ಮನೆಯಲ್ಲಿಯೇ ಬಂದಿಯಾಗಿ ಐಪಿಎಲ್ ಪಂದ್ಯ ವೀಕ್ಷಿಸಿದ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಈ ಬಾರಿ ಮುಕ್ತವಾಗಿ ಫ್ಯಾನ್ ಪಾರ್ಕ್(ipl fan park) ಮೂಲಕ ಪಂದ್ಯ ವೀಕ್ಷಿಸುವ ಅವಕಾಶ ಲಭಿಸಲಿದೆ.
2019ರಲ್ಲಿ ಕೊರೊನಾ ಕಾರಣದಿಂದ ಜನ ಒಂದೆಡೆ ಒಟ್ಟಾಗಿ ಸೇರಬಾರದು ಎಂಬ ನಿಯಮದನ್ವಯ ಪ್ರೇಕ್ಷಕರಿಲ್ಲದ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡಿಸಲಾಗಿತ್ತು. ಅದೇ ನಿಯಮದನ್ವಯ ಫ್ಯಾನ್ ಪಾರ್ಕ್ ಕೂಡಾ ರದ್ದಾಗಿತ್ತು. ಆದರೆ ಈ ಬಾರಿ ಕೊರೊನಾ ಮುಕ್ತವಾಗಿ ಟೂರ್ನಿ ನಡೆಯಲಿದೆ. ಜತೆಗೆ ಟೂರ್ನಿ ಹಳೆಯ ಸ್ವರೂಪಕ್ಕೆ ಮರಳಿದೆ. ಅದ್ಧೂರಿ ಉದ್ಘಾಟನಾ ಸಮಾರಂಭ ಕೂಡ ನಡೆಯಲಿದೆ. ಇದೀಗ ಫ್ಯಾನ್ ಪಾರ್ಕ್ ಮೂಲಕ ಐಪಿಎಲ್‌ಪ್ರಿಯರಿಗೆ ತಮ್ಮ ನಗರದಲ್ಲಿ ದೊಡ್ಡ ಪರದೆಯ ಮೇಲೆ ಪಂದ್ಯ ನೋಡುವ ಅವಕಾಶವನ್ನು ಬಿಸಿಸಿಐ ಮಾಡಿಕೊಟ್ಟಿದೆ.
ಐಪಿಎಲ್ನಲ್ಲಿ ಮೂರು ವರ್ಷಗಳ ಬಳಿಕ ಐಪಿಎಲ್ ಫ್ಯಾನ್ ಪಾರ್ಕ್ ಮಾಡಲಾಗುತ್ತಿದೆ. ಕೊರೊನಾ ಕಾರಣದಿಂದ ಐಪಿಎಲ್ ಫ್ಯಾನ್ ಪಾರ್ಕ್‌ಗಳಿಗೆ ಬ್ರೇಕ್ ಹಾಕಲಾಗಿತ್ತು. ಇದೀಗ 2019ರ ಬಳಿಕ ಮತ್ತೆ ಫ್ಯಾನ್ ಪಾರ್ಕ್ ಕಾಣಿಸಿಕೊಳ್ಳಲಿದೆ. 20 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ 45ಕ್ಕೂ ಹೆಚ್ಚು ನಗರಗಳಲ್ಲಿ ಈ ಫ್ಯಾನ್ ಪಾರ್ಕ್ ಇರಲಿದೆ. ಐಪಿಎಲ್ ಟೂರ್ನಿಯನ್ನು ದೇಶದ ವಿವಿಧ ನಗರಗಳಲ್ಲಿ ವೀಕ್ಷಣೆ ಮಾಡುವ ಮೂಲಕ ಈ ಟೂರ್ನಿಗೆ ಮತ್ತಷ್ಟು ಪ್ರಚಾರ ಸಿಗುವಂತಾಗಲು, ಬಿಸಿಸಿಐ 2015ರ ಈ ಪರಿಕಲ್ಪನೆಯನ್ನು ಜಾರಿಗೆ ತಂದಿತ್ತು.
ಇದನ್ನೂ ಓದಿ IPL 2023: ಧೋನಿಗೆ ಗಾಯ; ಮೊದಲ ಪಂದ್ಯಕ್ಕೆ ಅನುಮಾನ; ಸ್ಟೋಕ್ಸ್ ನಾಯಕತ್ವ ಸಾಧ್ಯತೆ
ಐಪಿಎಲ್‌ನ 16ನೇ ಆವೃತ್ತಿಯ ಮೊದಲ ಪಂದ್ಯ ಇಂದು ಸಂಜೆ 7.30ಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ನಾಲ್ಕು ಬಾರಿ ವಿಜೇತ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಕಿಕ್‌ಸ್ಟಾರ್ಟ್ ಆಗಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಿಗಾಗಿ ಮಧುರೈನಲ್ಲಿ ಫ್ಯಾನ್ ಪಾರ್ಕ್ ಇರಲಿದೆ ಎಂದು ಬಿಸಿಸಿಐ ತಿಳಿಸಿದೆ.
ಕರ್ನಾಟಕದಲ್ಲಿಯೂ ಇರಲಿದೆ ಫ್ಯಾನ್ ಪಾರ್ಕ್
ಕರ್ನಾಟಕದಲ್ಲಿ ನಾಲ್ಕು ಕಡೆ ಈ ಐಪಿಎಲ್ ಫ್ಯಾನ್ ಪಾರ್ಕ್ ಮಾಡಲಾಗುತ್ತಿದೆ. ಹುಬ್ಬಳ್ಳಿ, ಬೆಳಗಾವಿ, ಮೈಸೂರು ಮತ್ತು ಶಿವಮೊಗ್ಗದಲ್ಲಿ ಅಭಿಮಾನಿಗಳಿಗೆ ದೊಡ್ಡ ಪರದೆಯ ಮೂಲಕ ಪಂದ್ಯ ನೋಡಲು ವ್ಯವಸ್ಥೆ ಇರಲಿದೆ. ಹುಬ್ಬಳ್ಳಿಯಲ್ಲಿ ಏಪ್ರಿಲ್ 15 ಮತ್ತು 16, ಬೆಳಗಾವಿ ಏ.22 ಮತ್ತು 23, ಶಿವಮೊಗ್ಗ ಮೇ 6 ಮತ್ತು 7 ಹಾಗೂ ಮೈಸೂರಿನಲ್ಲಿ ಮೇ 20 ಮತ್ತು 21 ರಂದು ಪಂದ್ಯ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಫೈನಲ್ ಪಂದ್ಯಕ್ಕೆ 5 ಕಡೆ ಫ್ಯಾನ್ ಪಾರ್ಕ್ ಇರಲಿದೆ. ಮೇ 28 ರಂದು ನಡೆಯುವ ಫೈನಲ್ ಕದನಕ್ಕೆ ಜಮ್ಮು, ಜೆಮ್‌ಶೆಡ್‌ಪುರ, ಪಾಲಕ್ಕಾಡ್, ಜೋರ್ಹತ್ ಮತ್ತು ಭೋಪಾಲ್ ಒಟ್ಟು ಐದು ಕಡೆ ಫ್ಯಾನ್ ಪಾರ್ಕ್ ಇರಲಿದೆ.
ಕರ್ನಾಟಕ
JDS Karnataka: ಬಿಜೆಪಿಯಿಂದ ಜೆಡಿಎಸ್‌ಗೆ ಮರಳಿದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ
ಖೂಬಾ ಅವರು ಜೆಡಿಎಸ್ ಪಕ್ಷದಲ್ಲಿಯೇ ಇದ್ದವರು. ಕಾರಣಾಂತರಗಳಿಂದ ಅವರು ಪಕ್ಷ ಬಿಟ್ಟಿದ್ದರು. ಈಗ ಮರಳಿ ತಮ್ಮ ಮನೆಗೆ ವಾಪಸ್ ಆಗಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು: ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ಮರಳಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಜೆಡಿಎಸ್ ಪಕ್ಷದ ಶಾಲು ಹಾಕುವ ಮೂಲಕ ಖೂಬಾ ಅವರನ್ನು ಪಕ್ಷಕ್ಕೆ ಕುಮಾರಸ್ವಾಮಿ ಬರಮಾಡಿಕೊಂಡರು. ಶುಭ ಸಮಯ ಇದ್ದ ಕಾರಣಕ್ಕೆ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾಗಿ ಖೂಬಾ ಅವರು ತಿಳಿಸಿದ್ದಾರೆ.
ಜೆಡಿಎಸ್ ಪಕ್ಷದಿಂದ ಬಸವ ಕಲ್ಯಾಣ ಕ್ಷೇತ್ರವನ್ನು ಎರಡು ಅವಧಿಗೆ ಪ್ರತಿನಿಧಿಸಿದ್ದರು ಖೂಬಾ. ಕಳೆದ ಚುನಾವಣೆ ವೇಳೆ ಬಿಜೆಪಿಗೆ ಮರಳಿದ್ದರು. 2018ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಕಾಂಗ್ರೆಸ್ ಅಭ್ಯರ್ಥಿ ಬಿ. ನಾರಾಯಣ ರಾವ್ ವಿರುದ್ಧ ಸೋಲುಂಡಿದ್ದರು.
ಈ ಕುರಿತು ಮಾತನಾಡಿದ ಕುಮಾರಸ್ವಾಮಿ, ಖೂಬಾ ಅವರು ಜೆಡಿಎಸ್ ಪಕ್ಷದಲ್ಲಿಯೇ ಇದ್ದವರು. ಕಾರಣಾಂತರಗಳಿಂದ ಅವರು ಪಕ್ಷ ಬಿಟ್ಟಿದ್ದರು. ಈಗ ಮರಳಿ ತಮ್ಮ ಮನೆಗೆ ವಾಪಸ್ ಆಗಿದ್ದಾರೆ. ಒಳ್ಳೆಯ ಸಮಯ ಇದೆ ಎನ್ನುವ ಕಾರಣಕ್ಕೆ ಬಂದು ಪಕ್ಷಕ್ಕೆ ಸೇರಿದರು. ಶೀಘ್ರದಲ್ಲಿಯೇ ಅವರು ಪಕ್ಷದ ರಾಜ್ಯದ ಕಚೇರಿಯಲ್ಲಿ ರಾಜ್ಯಾಧ್ಯಕ್ಷರಾದ ಸಿ.ಎಂ.ಇಬ್ರಾಹಿಂ, ಮಾಜಿ ಸಚಿವ ಬಂಡೆಪ್ಪ ಕಾಷೆಂಪೂರ್ ಮತ್ತಿತರೆ ಹಿರಿಯ ನಾಯಕರ ಸಮಕ್ಷಮದಲ್ಲಿ ತಮ್ಮ ಬೆಂಬಲಿಗರ ಜತೆ ಪಕ್ಷಕ್ಕೆ ಅಧಿಕೃತವಾಗಿ ಸೇರಿಕೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದರು.
ಇದನ್ನೂ ಓದಿ: ರಾಮ ರಾಮ! ಶ್ರೀರಾಮನ ಕಾಲಿನ ಮೇಲೆ ನಿಂತು ಪ್ರತಿಮೆಗೆ ಹೂವಿನ ಹಾರ ಹಾಕಿದ ಬಸವಕಲ್ಯಾಣ ಬಿಜೆಪಿ ಶಾಸಕ!
ಅಂಕಣ
ಮೊಗಸಾಲೆ ಅಂಕಣ: ಮೋದಿ, ಖರ್ಗೆ ಹಣಾಹಣಿಗೆ ವೇದಿಕೆ ಸಜ್ಜು
ಮೊಗಸಾಲೆ ಅಂಕಣ
ಮೋದಿ, ಖರ್ಗೆ ಹಣಾಹಣಿಗೆ ವೇದಿಕೆ ಸಜ್ಜು
ಅತ್ತ ಮೋದಿಯವರಿಗೆ ಈ ಕರ್ನಾಟಕ ಚುನಾವಣೆ ಗೆಲುವು ಎಷ್ಟು ಮುಖ್ಯವೋ, ಅದಕ್ಕಿಂತ ಹತ್ತು ಪಟ್ಟು ಖರ್ಗೆಯವರಿಗೆ ಮುಖ್ಯವಾಗಿದೆ. ಎಸ್.ನಿಜಲಿಂಗಪ್ಪ ಬಳಿಕ ಏಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಏರಿರುವ ಕನ್ನಡಿಗ ಖರ್ಗೆಯವರಿಗೆ ಕರ್ನಾಟಕವನ್ನು ಜೈಸಲೇಬೇಕಾಗಿದೆ. ಆದರೆ ಹೇಗೆ?
ಕರ್ನಾಟಕ ವಿಧಾನಸಭೆ ಚುನಾವಣೆ ಕಣ
ಬರಲಿರುವ ಮೇ ಮಾಹೆಯ ಹತ್ತನೇ ದಿವಸ ಕರ್ನಾಟಕ ವಿಧಾನ ಸಭಾ ಚುನಾವಣೆಯ (karnataka election 2023) ಮತದಾನದ ದಿನ ಮಾತ್ರವೇ ಆಗಿರದೆ ಜನಮಾನಸದ ಐತೀರ್ಪಿನ ಮುಹೂರ್ತವೂ ಆಗಿದೆ. ಜಡ್ಜ್‌ಮೆಂಟ್ ಡೇ ಎಂದು ಅದನ್ನು ಕರೆಯಬಹುದು. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹೆಸರನ್ನು ಮುಂದಿಟ್ಟು ಯಾರು ಹಿತವರು ನಿಮಗೆ ಈ ಮೂರರೊಳಗೆ ಎಂದು ಕೇಳಿದರೆ ಯಾವುದೂ ಹಿತವಲ್ಲ ಎಂದು ಜನ ಹೇಳಿಯಾರು. ಆದರೆ ನಮ್ಮದು ಚುನಾಯಿತ ಪ್ರಜಾಪ್ರಭುತ್ವ. ಇಲ್ಲಿ ಅದಕ್ಕೆಲ್ಲ ಸೀಮಿತ ಅವಕಾಶವಷ್ಟೇ ಇರುತ್ತದೆ. ಕರ್ನಾಟಕದ ಜನರಿಗೆ ಸದ್ಯಕ್ಕೆ ಈ ಮೂರೂ ಪಕ್ಷಗಳ ಆಚೆಗೆ ಪ್ರಬಲವಾದ ನಾಲ್ಕನೇ ಆಯ್ಕೆಗೆ ಅವಕಾಶ ಇಲ್ಲ.
ಒಂದೇ ಹಂತದಲ್ಲಿ ಚುನಾವಣೆ ನಡೆಯುವುದೆಂದು ಚುನಾವಣಾ ಆಯೋಗ ಪ್ರಕಟಿಸಿದೆ. ಕಾನೂನು ಸುರಕ್ಷತೆ ಮತ್ತು ಕಾಯ್ದೆಯನ್ನು ವ್ಯವಸ್ಥಿತವಾಗಿ ಕಾಯ್ದುಕೊಂಡು ಬರುವ ಭರವಸೆಯನ್ನು ಮುಖ್ಯ ಕಾರ್ಯದರ್ಶಿ ವಂದನಾ ಶರ್ಮ ಮತ್ತು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ನೀಡಿರುವುದು ಈ ನಿರ್ಧಾರಕ್ಕೆ ಆಧಾರವೆಂದು ಮೇಲು ನೋಟಕ್ಕೇ ಅರ್ಥವಾಗುತ್ತದೆ. ಈ ಇಬ್ಬರು ವರಿಷ್ಠ ಅಧಿಕಾರಿಗಳೊಂದಿಗೆ ನಡೆಸಿದ ಸಮಾಲೋಚನೆ ಸಮಾಧಾನಕರವೆಂದು ಆಯೋಗಕ್ಕೆ ಮನವರಿಕೆಯಾಗಿರುವುದು ರಾಜ್ಯದಲ್ಲಿ ನೆಲೆಸಿರುವ ಶಾಂತಿಯುತ ವಾತಾವರಣಕ್ಕೆ ಕೋಡು ಮೂಡಿಸಿರುವ ಬೆಳವಣಿಗೆ. 31 ಜಿಲ್ಲೆಗಳಲ್ಲಿ ಹರಡಿರುವ 224 ಕ್ಷೇತ್ರಗಳಿಗೆ ಒಂದೇ ಹಂತ/ಒಂದೇ ದಿವಸ ಚುನಾವಣೆ ನಡೆಸುವುದು ಹುಡುಗಾಟಿಕೆಯ ಮಾತಲ್ಲ. ಶಾಸಕ ಬಲಕ್ಕೆ ಹೋಲಿಸಿದರೆ ಕರ್ನಾಟಕದ ಅರ್ಧವೂ ಇರದ ಚಿಕ್ಕಪುಟ್ಟ ರಾಜ್ಯಗಳಲ್ಲಿ ಎರಡು ಮೂರು ಹಂತದ ಚುನಾವಣೆ ನಡೆದಿದ್ದಕ್ಕೆ ದೇಶ ಸಾಕ್ಷಿಯಾಗಿದೆ. ಇಲ್ಲಿ ಎಲ್ಲವೂ ಸುಗಮ ಸುರಕ್ಷಿತ ಎಂದು ಆಯೋಗ ಭಾವಿಸಿದ್ದರೆ ಅದಕ್ಕಾಗಿ ನಮ್ಮ ಬೆನ್ನನ್ನು ನಾವೇ ತಟ್ಟಿಕೊಂಡು ಸುಖಿಸಬಹುದು.
ಎಚ್.ಡಿ. ದೇವೇಗೌಡ ನೇತೃತ್ವದ ಜಾತ್ಯತೀತ ಜನತಾ ದಳದ ಮುಖ್ಯಮಂತ್ರಿ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿಯವರು ಸ್ವತಂತ್ರ ಬಲದ ಮೇಲೆ ಅಧಿಕಾರಕ್ಕೆ ಬರುವ, 123 ಸ್ಥಾನ ಗೆಲ್ಲುವ ಛಲದಲ್ಲಿ ಪ್ರಚಾರ ಪ್ರವಾಸ ನಡೆಸಿದ್ದಾರೆ. ಚುನಾವಣಾ ರಾಜಕೀಯಕ್ಕೆ ಇಳಿಯುವ ಪ್ರತಿಯೊಂದೂ ಪಕ್ಷ ತಾನೇ ಅಧಿಕಾರಕ್ಕೆ ಬರುವುದಾಗಿ ಜನರ ಮುಂದೆ ಹೇಳಬೇಕು; ಜನರು ಅದನ್ನು ನಂಬುವಂತೆ ಮಾಡಬೇಕು. ಕುಮಾರಸ್ವಾಮಿಯವರಿಗೆ ಪ್ರವಾಹದ ವಿರುದ್ಧ ಈಜುತ್ತಿರುವ ಅನುಭವ ಈಗಾಗಲೇ ಮನವರಿಕೆಯಾಗಿದೆ. ಹಾಸನ ಜಿಲ್ಲೆಯಲ್ಲಿ ನಡೆದಿರುವ ಟಿಕೆಟ್ ಹಂಚಿಕೆ ಯಾದವೀ ಕಲಹ ಅವರನ್ನು ಹಣ್ಣುಗಾಯಿ ನೀರುಗಾಯಿ ಮಾಡಿದೆ ಎನ್ನಲು ಹೇರಳ ಸಾಂದರ್ಭಿಕ ಸಾಕ್ಷ್ಯಗಳಿವೆ. ಮಾರು ಗೆದ್ದು ಊರು ಗೆಲ್ಲು ಎಂಬ ಮಾತಿದೆ. ಕುಮಾರಸ್ವಾಮಿಯವರು ಮೊದಲಿಗೆ ಹಾಸನವನ್ನು ಗೆಲ್ಲಬೇಕಿದೆ; ನಂತರದಲ್ಲಿ ರಾಜ್ಯದ ಮಾತು.
2004ರ ಚುನಾವಣೆಯಲ್ಲಿ ಜೆಡಿಎಸ್ 58 ಸ್ಥಾನ ಗೆದ್ದಿತ್ತು. ಅದು ಆ ಪಕ್ಷದ ಹೆಸರಿನಲ್ಲಿರುವ ದಾಖಲೆ. ನಂತರದ 2009ರ ಚುನಾವಣೆಯಲ್ಲಿ ಅದು 30 ಸೀಟು ಗೆದ್ದು 28 ಸೀಟು ಕಳೆದುಕೊಂಡಿತ್ತು. 2013ರ ಚುನಾವಣೆಯಲ್ಲಿ 40 ಸ್ಥಾನ ಅದಕ್ಕೆ ಒಲಿದಿತ್ತು. ವಿಶೇಷವೆಂದರೆ ಚುನಾವಣೆ ಪೂರ್ವದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿಯೂ ನಲವತ್ತು ಸ್ಥಾನ ಜೈಸಿ ಮೂರನೇ ಸ್ಥಾನದಲ್ಲಿ ಕೂರುವಂತಾಗಿತ್ತು. ಎರಡೂ ಪಕ್ಷಗಳು ತಲಾ ನಲವತ್ತು ಸ್ಥಾನ ಗಳಿಸಿದಾಗ ಯಾವ ಪಕ್ಷಕ್ಕೆ ವಿಧಾನ ಸಭೆಯಲ್ಲಿ ಅಧಿಕೃತ ವಿರೋಧ ಪಕ್ಷದ ಸ್ಥಾನಮಾನ ನೀಡಬೇಕು ಎಂಬ ಜಿಜ್ಞಾಸೆ ಉದ್ಭವಿಸಿತ್ತು. ಆಡಳಿತ ನಡೆಸಿರುವ ಪಕ್ಷ ತಾನಾಗಿರುವ ಕಾರಣ ಆ ಸ್ಥಾನಮಾನ ತನಗೇ ಎಂದು ಬಿಜೆಪಿ ಪ್ರತಿಪಾದಿಸಿತ್ತು. ಇಕ್ಕಟ್ಟಿನ ಪರಿಸ್ಥಿತಿ ಎದುರಾದ ಅಂಥ ಸಂದರ್ಭದಲ್ಲಿ ಕಾನೂನು ಪರಿಹಾರವೂ ಇದೆ. ಯಾವ ಪಕ್ಷಕ್ಕೆ ಜಾಸ್ತಿ ಮತಗಳು ಸಿಕ್ಕಿವೆ ಎನ್ನುವುದರ ಆಧಾರದಲ್ಲಿ ತೀರ್ಮಾನ ಆಗುತ್ತದೆ. ಅದರಂತೆ ಜೆಡಿಎಸ್‍ನ ಕುಮಾರಸ್ವಾಮಿ ವಿಪಕ್ಷ ನಾಯಕರಾದರು.
ಆ ತರುವಾಯದ ಚುನಾವಣೆಗಳಲ್ಲಿ ಜೆಡಿಎಸ್ 40 ಶಾಸಕರ ಗಡಿ ಮುಟ್ಟಲಿಲ್ಲ. ಹಾಗಂತ ಆ ಪಕ್ಷ ತನ್ನ ವಿಶ್ವಾಸ ಕಳೆದುಕೊಂಡಿಲ್ಲ. ಛಲಬಿಡದ ತ್ರಿವಿಕ್ರಮನಂತೆ ಹೋರಾಟ ನಡೆಸಿರುವ ಕುಮಾರಸ್ವಾಮಿಯವರು 123 ಸ್ಥಾನ ಗೆಲ್ಲುವ, ಯಾರ ಹಂಗೂ ಇಲ್ಲದೆ ಸರ್ಕಾರ ನಡೆಸುವ ಕನಸನ್ನು ಜನರಲ್ಲಿ ಬಿತ್ತುತ್ತ ಸಾಗಿದ್ದಾರೆ. ಏತನ್ಮಧ್ಯೆ ಯಾವುದೇ ಪಕ್ಷಕ್ಕೂ ಸರಳ ಬಹುಮತ ಸಿಗಲಾರದು ಎಂಬ ಮಾಹಿತಿ ಅವರಿಗೆ ಸಿಕ್ಕಿದೆ ಎನ್ನುವುದು ಅವರ ಮಾತಿನಿಂದಲೇ ವೇದ್ಯವಾಗಿದೆ. ಬಿಜೆಪಿ, ಕಾಂಗ್ರೆಸ್ ಎರಡೂ ರಾಷ್ಟ್ರೀಯ ಪಕ್ಷಗಳ ದೆಹಲಿ ಮಟ್ಟದ ನಾಯಕರು ಭವಿಷ್ಯದ ಸರ್ಕಾರ ರಚಿಸುವ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆಂಬ ಅವರ ಮಾತನ್ನು ಸೀಳಿ ನೋಡಿದರೆ ಮತ್ತೊಮ್ಮೆ ಅತಂತ್ರ ವಿಧಾನ ಸಭೆ, ಮತ್ತೊಮ್ಮೆ ಸಮ್ಮಿಶ್ರ ಸರ್ಕಾರ ಎಂಬ ಭಾವನೆ ಬರುತ್ತದೆ. ಈ ನಿಟ್ಟಿನಲ್ಲಿ ಮಾತುಕತೆ ನಡೆದಿರುವುದು ಅಸಲಿಗೆ ಎಷ್ಟು ನಿಜ ಅಥವಾ ಅಲ್ಲ ಎನ್ನುವುದು ಕುಮಾರಸ್ವಾಮಿ ಮತ್ತು ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿರುವ ಕಾಂಗ್ರೆಸ್, ಬಿಜೆಪಿ ವರಿಷ್ಠರಿಗೆ ಮಾತ್ರ ಗೊತ್ತಿದೆ. ನಮಗೆ ಗೊತ್ತಾಗುವ ಅಂಶವೆಂದರೆ ರಾಷ್ಟ್ರೀಯ ಪಕ್ಷಗಳೂ ಅಭದ್ರತೆಯ ಕರಿನೆರಳ ಕೆಳಗಿವೆ ಎನ್ನುವುದು. ಈ ಮಾತಿಗೆ ಪೂರಕವಾಗಿ ಬಂದಿರುವ ವಿವಿಧ ಸಮೀಕ್ಷೆಗಳನ್ನು ಗಮನಿಸಬಹುದಾಗಿದೆ.
ಒಂದೆರಡು ಸಮೀಕ್ಷೆ ಹೊರತಾಗಿಸಿದರೆ ಅತಂತ್ರ ವಿಧಾನ ಸಭೆಯೇ ನಿಕ್ಕಿ ಎನ್ನುವುದು ಬಹುತೇಕ ಸಮೀಕ್ಷೆಗಳ ಫಲಶ್ರುತಿ. ಆ ಒಂದೆರಡು ಸಮೀಕ್ಷಾ ಭವಿಷ್ಯವಾದರೂ ಒಂದೇ ಪಕ್ಷದತ್ತ ಬೆರಳು ಮಾಡಿವೆಯೇ…? ಇಲ್ಲ. ಅತ್ತ ಕಾಂಗ್ರೆಸ್ಸನ್ನು ಒಂದೆರಡು ಸಮೀಕ್ಷೆ ಸರಳ ಬಹುಮತದ (113) ಗಡಿಯನ್ನು ದಾಟಿಸಿದ್ದರೆ, ಒಂದೆರಡು ಸಮೀಕ್ಷೆ ಬಿಜೆಪಿಯನ್ನು ಅತ್ಯಧಿಕ ಸ್ಥಾನಬಲದ ಆದರೆ ಸರಳ ಬಹುಮತ ಪಡೆಯದ ಪಕ್ಷವಾಗಲಿದೆ ಎಂದಿವೆ. ಈ ಹಿಂದೆ 2008ರಲ್ಲಿ ಬಿಜೆಪಿ ಅಧಿಕಾರ ನಡೆಸಿತ್ತು. ಆದರೆ ಅದು ಗೆದ್ದುದು 110 ಸ್ಥಾನ ಮಾತ್ರ. ಮತ್ತೆ ಅದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು 2018ರಲ್ಲಿ. ಅಂದರೆ ಕಳೆದ ಚುನಾವಣೆಯಲ್ಲಿ. ಆಗ ಅದು ಗೆದ್ದುದು 104 ಸೀಟು ಮಾತ್ರ. ಎರಡೂ ಸಂದರ್ಭದಲ್ಲಿ ಅದರ ಕೈಗೆ ಅಧಿಕಾರ ಬಂದುದು ಆಪರೇಷನ್ ಕಮಲದ ಕಾರಣವಾಗಿ.
ಇದನ್ನೂ ಓದಿ:ಮೊಗಸಾಲೆ ಅಂಕಣ: ರಾಜ್ಯ ಬಿಜೆಪಿ ಕಲಿಯಲೊಲ್ಲದ ಪಾಠ
2008ರಲ್ಲಿ ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ರಾಷ್ಟ್ರೀಯ ಮಟ್ಟದಲ್ಲಿ ಅವರ ಹೆಸರು ಇಷ್ಟೆಲ್ಲ ಮಹತ್ವಕ್ಕೆ ಬಂದಿರಲಿಲ್ಲ. ಆ ವರ್ಷ ಕರ್ನಾಟಕ ವಿಧಾನ ಸಭೆ ಚುನಾವಣೆ ನಡೆದುದು ಬಿ.ಎಸ್.ಯಡಿಯೂರಪ್ಪ ಹೆಗಲ ಮೇಲೆ. ಆಗ ಆ ಪಕ್ಷ ಗೆದ್ದಿದ್ದು 110 ಸೀಟನ್ನು. 2018ರ ಹೊತ್ತಿಗೆ ದೇಶದಾದ್ಯಂತ ಮೋದಿ ಅಲೆ. ಅದು ಕೇವಲ ಅಲೆಯಲ್ಲ ಸುನಾಮಿ ಎಂಬ ಮಾತೂ ಚಾಲ್ತಿಯಲ್ಲಿತ್ತು. ಅವರದೇ ಸಾರಥ್ಯದಲ್ಲಿ ನಡೆದ 2018ರ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದು 104 ಸೀಟನ್ನಷ್ಟೆ. ಅಂದರೆ ಆರು ಸ್ಥಾನ ಕಡಿಮೆ. ಕರ್ನಾಟಕದ ಮತದಾರರು ಮೋದಿ ಎಂದ ಮಾತ್ರಕ್ಕೇ ಮೋಡಿಗೆ ಒಳಗಾಗುವವರಲ್ಲ ಎಂಬ ಸಂದೇಶ ಐದು ವರ್ಷದ ಹಿಂದೆಯೇ ರವಾನೆ ಆಗಿದೆ.
ಹೀಗೆಂದ ಮಾತ್ರಕ್ಕೆ ಕಾಂಗ್ರೆಸ್‍ಗೆ ಸರಳ ಬಹುಮತ ಶತಸ್ಸಿದ್ಧ ಎಂದೇನೂ ಅಲ್ಲ. ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಸಾಗಿದ್ದು 22 ದಿವಸ. ವಿಚಿತ್ರ ಆದರೂ ಸತ್ಯ ಎನ್ನುತ್ತಾರಲ್ಲ ಹಾಗಿದೆ ಯಾತ್ರೆಯ ಫಲಶ್ರುತಿ ಈ ರಾಜ್ಯದಲ್ಲಿ. ಈಗ ಜನ ಹಾಗಿರಲಿ, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಕೂಡಾ ಅದನ್ನು ಪ್ರಸ್ತಾಪಿಸಿ ಮಾತಾಡುತ್ತಿಲ್ಲ. ಭಾರತ್ ಜೋಡೋ, ಬಿರುಕು ಬಿಡಲಿದ್ದ ಜನರ ಮನಸ್ಸನ್ನು ಪುನಃ ಬೆಸೆಯುವುದಕ್ಕೆ ಹೇಗೆ ನೆರವಾಯಿತು ಎಂದು ಅವರಲ್ಲದೆ ಇನ್ಯಾರು ಹೇಳಬೇಕು. ಆದರೆ ಪ್ರಚಾರದ ರ್ಯಾಲಿಗಳಲ್ಲಿ ಇದರ ಪ್ರಸ್ತಾಪವೇ ಆಗುತ್ತಿಲ್ಲ. ಏನಿರಬಹುದು ಒಳಗುಟ್ಟು…? ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಲ್ಲವೇ ಸಿದ್ದರಾಮಯ್ಯ ಹೇಳಬೇಕು. ಯಾಕೆ ಅವರು ಮೌನಕ್ಕೆ ಜಾರಿದ್ದಾರೋ ಗೊತ್ತಿಲ್ಲ.
ಸೂರತ್ ನ್ಯಾಯಾಲಯದ ತೀರ್ಪನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಕಾಂಗ್ರೆಸ್ ಇರಾದೆ ನಿಚ್ಚಳವಾಗಿದೆ. ಇದರಲ್ಲಿ ತಪ್ಪು ಹುಡುಕಲು ಏನೂ ಇಲ್ಲ. ಲೋಕಸಭಾ ಸದಸ್ಯತ್ವ ರದ್ದಾಗಿರುವುದು, ತಾವು ವಾಸವಿದ್ದ ಮನೆಯನ್ನು ರಾಹುಲ್‍ರು ತೆರವು ಮಾಡಬೇಕಾಗಿರುವುದು; ಮೇಲಿನ ಕೋರ್ಟ್‍ಗೆ ಹೋಗಿ ತಡೆಯಾಜ್ಞೆ ತಾರದ ಪಕ್ಷದಲ್ಲಿ ಅನುಭವಿಸಲೇ ಬೇಕಿರುವ ಎರಡು ವರ್ಷದ ಜೈಲು ಶಿಕ್ಷೆ..ಇವುಗಳು ಕಾಂಗ್ರೆಸ್‍ಗೆ ಚುನಾವಣಾ ಬಲ ತರುವ ಸಂಗತಿಗಳಾಗಲಿವೆ. ಸೂರತ್ ಕೋರ್ಟ್‍ನ ಆದೇಶಕ್ಕೆ ತಡೆ ತರಬೇಕೇ ಬೇಡವೇ ಎಂಬುದು ಕಾಂಗ್ರೆಸ್‍ನ ಉನ್ನತ ಸ್ತರದಲ್ಲಿ ಬಿಸಿಬಿಸಿ ಚರ್ಚೆಗೆ ಗ್ರಾಸವೊದಗಿಸಿದೆ. ಈವರೆಗಿನ ಬೆಳವಣಿಗೆಗಳನ್ನು ಗಮನಿಸಿ ಹೇಳುವುದಾದರೆ ರಾಹುಲ್‍ರು ಜೈಲಿಗೆ ಹೋಗುವ ತಯಾರಿಯಲ್ಲಿದ್ದಾರೆ. ಹಾಗೆ ಹೋಗುವುದರಿಂದ ಪಕ್ಷಕ್ಕೆ ಅದು ಒಂದಾನೊಂದು ಕಾಲದಲ್ಲಿ ಹೊಂದಿದ್ದ ಬಲ ಮರಳುತ್ತದೆ ಎನ್ನುವುದು ಈ ತಯಾರಿ ಹಿಂದಿರುವ ಮನಃಸ್ಥಿತಿ. 2024ರ ಲೋಕಸಭಾ ಚುನಾವಣೆ ಗೆದ್ದರೆ ಯುಪಿಎ ಬಹುಮತದಲ್ಲಿ ಅಧಿಕಾರಕ್ಕೆ ಬಂದರೆ ಸಂಬಂಧಿಸಿದ ಕಾಯಿದೆಗೆ ತಿದ್ದುಪಡಿ ತಂದು ರಾಹುಲ್‍ರನ್ನು ಬಂಧಮುಕ್ತರನ್ನಾಗಿಸಬಹುದು ಎಂಬ ದೂರಗಾಮೀ ಲೆಕ್ಕಾಚಾರದ ಭಾಗಾಕಾರ, ಗುಣಾಕಾರ ನಡೆದಿದೆ ಎಂಬ ವದಂತಿ ತೇಲುತ್ತಿದೆ.
ಇದನ್ನೂ ಓದಿ: ಮೊಗಸಾಲೆ ಅಂಕಣ: ಆಯಾರಾಂ ಗಯಾರಾಂ ಮರಕೋತಿ ಆಟ
ಲೋಕಸಭಾ ಚುನಾವಣೆಗೂ ಪೂರ್ವದಲ್ಲಿ ನಡೆಯುತ್ತಿರುವ ಈ ಚುನಾವಣೆಯಲ್ಲಿ ಕರ್ನಾಟಕವನ್ನು ಗೆಲ್ಲುವ, ಬಿಜೆಪಿಯಿಂದ ಅದನ್ನು ಕಸಿಯುವ ಅನಿವಾರ್ಯ ಕಾಂಗ್ರೆಸ್‍ಗೆ, ಕೈಯಲ್ಲಿರುವ ಕರ್ನಾಟಕವನ್ನು ಕೈಯಲ್ಲೇ ಉಳಿಸಿಕೊಳ್ಳುವ ಅನಿವಾರ್ಯ ಬಿಜೆಪಿಗೆ ಎದುರಾಗಿದೆ. ಕೇಂದ್ರಾಡಳಿತ ಪುದುಚೆರಿಯ ಆಡಳಿತ ಬಿಜೆಪಿ ಕೈಲಿದೆ. ಅದು ಲೆಕ್ಕಕ್ಕೆ ಉಂಟು ಆಟಕ್ಕೆ ಇಲ್ಲ ಎಂಬಂತಿರುವ ಸಣ್ಣ ಲಂಗೋಟಿಯಂತಿರುವ ರಾಜ್ಯ. ದಕ್ಷಿಣದಲ್ಲಿ ಬಿಜೆಪಿಯ ಹೆಬ್ಬಾಗಿಲು ಕರ್ನಾಟಕ. ಈ ರಾಜ್ಯ 2019ರಲ್ಲಿ ಲೋಕಸಭೆಗೆ 26 ಸಂಸದರನ್ನು ಆಯ್ಕೆ ಮಾಡಿ ಕಳಿಸಿದೆ. ಆ ದಾಖಲೆಯ ಪುನರಾವರ್ತನೆ ಆಗಬೇಕೆಂದಾದರೆ ವಿಧಾನ ಸಭಾ ಚುನಾವಣೆಯನ್ನು ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಗೆಲ್ಲಬೇಕಿದೆ. 2018ರ ವಿಧಾನ ಸಭಾ ಚುನಾವಣೆಯಲ್ಲಿ 104 ಕ್ಷೇತ್ರ ಬಿಜೆಪಿ ತೆಕ್ಕೆಗೆ ಬಂತು. ಮರುವರ್ಷ 2019ರಲ್ಲಿ ಲೋಕಸಭೆಗೆ ಚುನಾವಣೆ ನಡೆದಾಗ 140ಕ್ಕೂ ಅಧಿಕ ವಿಧಾನ ಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಲೀಡ್ ಸಿಕ್ಕಿತ್ತು. ಇದನ್ನು ಬಲ್ಲ ಪ್ರಧಾನಿ ಮೋದಿಯವರು ಕರ್ನಾಟಕವನ್ನು ಶತಾಯಗತಾಯ ಉಳಿಸಿಕೊಳ್ಳುವ ಛಲದಲ್ಲಿ ಚುನಾವಣಾ ತಯಾರಿ ನಡೆಸಿದ್ದಾರೆ. ಪಕ್ಷವನ್ನು ಸರ್ವ ಸನ್ನದ್ಧ ಸ್ಥಿತಿಯಲ್ಲಿ ಹೋರಾಟಕ್ಕೆ ಅಣಿಗೊಳಿಸುತ್ತಿದ್ದಾರೆ.
ಕಾಂಗ್ರೆಸ್‍ನ ಅಖಿಲ ಭಾರತ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಕರ್ನಾಟಕ ಚುನಾವಣೆ ಅಕ್ಷರಶಃ ಅಗ್ನಿಪರೀಕ್ಷೆಯ ಕಣವಾಗಿದೆ. ಎಸ್.ನಿಜಲಿಂಗಪ್ಪ ಬಳಿಕ ಏಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಏರಿರುವ ಕನ್ನಡಿಗ ಖರ್ಗೆಯವರಿಗೆ ಕರ್ನಾಟಕವನ್ನು ಜೈಸಲೇಬೇಕಾಗಿದೆ. ಐದು ವರ್ಷದ ಹಿಂದೆ ಕಳೆದುಕೊಂಡ ಅಧಿಕಾರವನ್ನು ಮರಳಿ ಪಡೆಯುವುದಕ್ಕಷ್ಟೇ ಖರ್ಗೆ ಆಶಯ ಉದ್ದೇಶವಲ್ಲ. ಕಾಂಗ್ರೆಸ್ ಈ ಚುನಾವಣೆಯನ್ನೂ ಸೋತರೆ ಅದರ ಪರಿಸ್ಥಿತಿ ಇನ್ನಷ್ಟು ಶೋಚನೀಯವಾಗಲಿದೆ. ಕಾಂಗ್ರೆಸ್ ಸೋತರೆ ಆ ಪಕ್ಷದ ಮುಖಂಡರು ಅದನ್ನು ಖರ್ಗೆಯವರ ತಲೆಗೆ ಕಟ್ಟುತ್ತಾರೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಹತ್ತಾರು ಚುನಾವಣೆ ಸೋತರೂ ಅವರೊಂದಿಗೇ ನಿಂತಿರುವ ಕಾಂಗ್ರೆಸ್‍ನ ನಾಯಕರನೇಕರು ಖರ್ಗೆಯವರಿಗೆ ಅಷ್ಟೆಲ್ಲ ಅವಕಾಶ ಕೊಡಲಾರರು. ಖರ್ಗೆಯವರ ತಲೆದಂಡ ಪಡೆಯುವ ಕೆಲಸಕ್ಕೆ ಅವರೆಲ್ಲ ಒಂದುಗೂಡಿ ಮುಂದಾಗುವುದು ಶತಃಸ್ಸಿದ್ಧ. ಅತ್ತ ಮೋದಿಯವರಿಗೆ ಈ ಚುನಾವಣೆ ಗೆಲುವು ಎಷ್ಟು ಮುಖ್ಯವೋ ಅದಕ್ಕಿಂತ ಹತ್ತು ಪಟ್ಟು ಖರ್ಗೆಯವರಿಗೆ ಮುಖ್ಯವಾಗಿದೆ.
ಇದನ್ನೂ ಓದಿ: ಮೊಗಸಾಲೆ ಅಂಕಣ: ಮತ್ತೆ ಮಧ್ಯರಂಗಕ್ಕೆ ಬಂದ ಬಿಎಸ್ ಯಡಿಯೂರಪ್ಪ
ಆರೋಗ್ಯ
New Virus: ಕೊರೊನಾ ಬೆನ್ನಲ್ಲೇ ಪತ್ತೆಯಾಯ್ತು ಮತ್ತೊಂಡು ಡೆಡ್ಲಿ ವೈರಸ್! ಭಾರತದಲ್ಲೇ ಮೊದಲ ಕೇಸ್!
ಕೊರೊನಾ ಸೋಂಕಿನ ಬೆನ್ನಲ್ಲೇ ಮತ್ತೊಂದು ಸೋಂಕಿನ (New Virus) ಸುದ್ದಿ ಎಲ್ಲೆಡೆ ಹರಿದಾಡಿದೆ. ಸಿಲ್ವರ್ ಲೀಫ್ ಡಿಸೀಸ್ ಹೆಸರಿನ ಕಾಯಿಲೆ ಭಾರತದಲ್ಲಿ ಮೊದಲನೆಯದಾಗಿ ಪತ್ತೆಯಾಗಿರುವುದಾಗಿ ವರದಿಯಾಗಿದೆ.
ನವದೆಹಲಿ: ಕೊರೊನಾ ಸೋಂಕು ವಿಶ್ವಾದ್ಯಂತ ಭಾರೀ ತಲ್ಲಣವನ್ನೇ ಉಂಟುಮಾಡಿತ್ತು. ಲಕ್ಷಾಂತರ ಜೀವಗಳು ಈ ಸೋಂಕಿನಿಂದಾಗಿ ಸಾವನ್ನಪ್ಪಿವೆ. ಅದರ ಬೆನ್ನಲ್ಲೇ ಇದೀಗ ಮತ್ತೊಂದು ವೈರಸ್ (New Virus) ಬಂದಿರುವ ಬಗ್ಗೆ ಸುದ್ದಿ ಹರಿದಾಡಲಾರಂಭಿಸಿದೆ. ಅದರಲ್ಲೂ ಭಾರತದಲ್ಲಿಯೇ ಮೊದಲನೆಯದಾಗಿ ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಇದನ್ನೂ ಓದಿ: Covid-19 Cases: ಕೊರೊನಾ ಸೋಂಕಿನ ಕೇಸ್ನಲ್ಲಿ 24ಗಂಟೆಯಲ್ಲಿ ಶೇ.40 ಏರಿಕೆ; ಇಂದು 3ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲು
ಹೌದು. ಭಾರತದಲ್ಲಿ ಸಸ್ಯಗಳಿಗೆ ಹೆಚ್ಚಾಗಿ ಕಾಡುವ ರೋಗವೆಂದರೆ ಅದು ಸಿಲ್ವರ್ ಲೀಫ್ ರೋಗ. ಈ ರೋಗದ ವೈರಸ್ ಇದೀಗ ಮಾನವನ ದೇಹಕ್ಕೂ ಹೊಗ್ಗಿರುವುದಾಗಿ ವರದಿಯಾಗಿದೆ. ಭಾರತದ ರೈತನೊಬ್ಬನಿಗೆ ಈ ಸೋಂಕು ತಗುಲಿದ್ದು, ಆತನಲ್ಲಿ ಜ್ವರ, ಕೆಮ್ಮುವಿನಂತಹ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ವರದಿಯಾಗಿದೆ. ಇದುವರೆಗೆ ಈ ಸೋಂಕು ಯಾವುದೇ ದೇಶದಲ್ಲಿಯೂ ಮನುಷ್ಯರಿಗೆ ಹಬ್ಬಿರಲಿಲ್ಲ. ಇದೇ ಮೊದಲನೇ ಬಾರಿಗೆ ಇಂತದ್ದೊಂದು ಪ್ರಕರಣ ವರದಿಯಾಗಿದೆ.
ಅಂದ ಹಾಗೆ ಈ ಸೋಂಕು ಯಾವಾಗ ರೈತನಿಗೆ ತಗುಲಿದ್ದು ಎನ್ನುವ ವಿಚಾರದಲ್ಲಿ ಸ್ಪಷ್ಟ ಮಾಹಿತಿಯಿಲ್ಲ. ಆದರೆ ಈ ಕುರಿತಾದ ವರದಿಯೊಂದು ʼಮೆಡಿಕಲ್ ಮೈಕೋಲಜಿ ಕೇಸ್ ರಿಪೋರ್ಟ್ಸ್ʼ ಜರ್ನಲ್‌ನಲ್ಲಿ ದಾಖಲಾಗಿದೆ.
ಇದನ್ನೂ ಓದಿ: Coronavirus: ಇಂದು 1800ಕ್ಕೂ ಅಧಿಕ ಕೊರೊನಾ ಕೇಸ್ಗಳು ಪತ್ತೆ; ಏಪ್ರಿಲ್ನಲ್ಲಿ 2 ದಿನ ಆಸ್ಪತ್ರೆಗಳಲ್ಲಿ ಅಣುಕು ಕಾರ್ಯಾಚರಣೆ
ಇತ್ತೀಚೆಗೆ ಅಮೆರಿಕದ ಆರೋಗ್ಯ ಅಧಿಕಾರಿಗಳು ವೈರಸ್ ಒಂದರ ಬಗ್ಗೆ ಎಚ್ಚರಿಕೆ ಕೊಟ್ಟಿದ್ದರು. ಕ್ಯಾಂಡಿಡಾ ಔರಿಸ್ ಫಂಗಸ್ ಹೆಸರಿನ ಸೋಂಕು ಇತ್ತೀಚಿನ ದಿನಗಳಲ್ಲಿ ಮೂರು ಪಟ್ಟು ಹೆಚ್ಚಾಗಿದೆ ಎಂದು ಅವರು ಹೇಳಿದ್ದರು. ಹಾಗೆಯೇ ಈ ಸೋಂಕಿಗೆ ತುತ್ತಾಗುವವರಲ್ಲಿ ಶೇ.60 ಮಂದಿ ಸಾವನ್ನಪ್ಪುವ ಸಾಧ್ಯತೆಯಿದೆ ಎಂದೂ ಅವರು ತಿಳಿಸಿದ್ದರು. ಅದರ ಬೆನ್ನಲ್ಲೇ ಇದೀಗ ಭಾರತದಲ್ಲಿ ಮತ್ತೊಂದು ಸೋಂಕಿನ ವಿಚಾರ ಸುದ್ದಿಯಾಗಿದೆ. ಇದರ ಬಗ್ಗೆ ಭಾರತೀಯ ಆರೋಗ್ಯ ಇಲಾಖೆಯಿಂದ ಯಾವುದೇ ಮಾಹಿತಿ ಸೋರಿಕೆಯಾಗಿಲ್ಲ.
-
ಸುವಚನ11 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ7 hours ago
Chenab Bridge | ಐಫೆಲ್ ಟವರ್ಗಿಂತಲೂ ಎತ್ತರದ ರೈಲ್ವೇ ಸೇತುವೆ ಜಮ್ಮು ಕಾಶ್ಮೀರದಲ್ಲಿ ಲೋಕಾರ್ಪಣೆಗೆ ಸಿದ್ಧ
-
ಪ್ರಮುಖ ಸುದ್ದಿ16 hours ago
ವಿಸ್ತಾರ ಸಂಪಾದಕೀಯ: ಹಿಂದಿ ಬಗ್ಗೆ ಪೂರ್ವಗ್ರಹ ಬೇಡ, ಹಾಗಂತ ಹೇರಿಕೆ ಸಲ್ಲದು
-
ಕರ್ನಾಟಕ8 hours ago
SSLC Exam 2023: ಇಂದಿನಿಂದ SSLC ಎಕ್ಸಾಂ; ಪರೀಕ್ಷೆ ಬರೆಯಲಿರುವ 8.42 ಲಕ್ಷ ವಿದ್ಯಾರ್ಥಿಗಳು
-
ಕ್ರಿಕೆಟ್24 hours ago
IPL 2023: ಗುಜರಾತ್ vs ಚೆನ್ನೈ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ವೈರಲ್ ನ್ಯೂಸ್23 hours ago
Viral Video: ಇದು ರೋಲ್ಸ್ ರಾಯ್ಸ್ ಆಫ್ ಆಟೋ; ಒಂದು ಬಟನ್ ಪ್ರೆಸ್ ಮಾಡಿದ್ರೆ ಸಾಕು ಮೇಲ್ಭಾಗ ತೆರೆದುಕೊಳ್ಳತ್ತೆ!
-
ಕರ್ನಾಟಕ20 hours ago
ವಿಸ್ತಾರ Special: ಬಿಜೆಪಿ ಇತಿಹಾಸದಲ್ಲೇ ಮೊದಲ ಪ್ರಯತ್ನ ಇದು: ಅಭ್ಯರ್ಥಿ ಆಯ್ಕೆಗೆ ಶುಕ್ರವಾರ ನಡೆಯಲಿದೆ ಆಂತರಿಕ ಚುನಾವಣೆ
-
ಕ್ರಿಕೆಟ್20 hours ago
IPL 203 : ಐಪಿಎಲ್ 16ನೇ ಆವೃತ್ತಿಯ ವೇಳಾಪಟ್ಟಿ ಇಲ್ಲಿದೆ