Site icon Vistara News

Horoscope Today : ನವ ಸಂವತ್ಸರದ ಮೊದಲ ದಿನ, ಹೇಗಿರಲಿದೆ ದ್ವಾದಶ ರಾಶಿಗಳ ಭವಿಷ್ಯ?

horoscope today

Horoscope Today

ಇಂದಿನ ಪಂಚಾಂಗ (22-03-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ.

ತಿಥಿ: ಪಾಡ್ಯ 20:20 ವಾರ: ಬುಧವಾರ
ನಕ್ಷತ್ರ: ಉತ್ತರಾಭಾದ್ರಪದ 15:31 ಯೋಗ: ಶುಕ್ಲ 09:15
ಕರಣ: ಕಿಂಸ್ತುಘ್ನ 09:32
ಇಂದಿನ ವಿಶೇಷ: ಸಂವತ್ಸರಾರಂಭ, ಚಂದ್ರಮಾನ ಯುಗಾದಿ, ಅಲ್ಲಮಪ್ರಭು ಜಯಂತಿ, ವಿಶ್ವ ನೀರು ದಿನ.
ಅಮೃತಕಾಲ: ಬೆಳಗ್ಗೆ 11 ಗಂಟೆ 07 ನಿಮಿಷದಿಂದ ಮಧ್ಯಾಹ್ನ 12 ಗಂಟೆ 35 ನಿಮಿಷದವರೆಗೆ.

ಸೂರ್ಯೋದಯ : 06:23 ಸೂರ್ಯಾಸ್ತ : 06:30

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಉತ್ತಮ. ಆರ್ಥಿಕವಾಗಿ ಇಂದು ನೀವು ಸಾಕಷ್ಟು ಬಲ ಪಡೆಯುವಿರಿ. ಹೊಸ ಯೋಜನೆಗಳು ಮತ್ತು ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಒಳ್ಳೆಯ ದಿನ. ದಿನದ ಕೊನೆಯಲ್ಲಿ ಮನೆಯಲ್ಲಿ ಕಲಹಗಳು ಉಂಟಾಗುವ ಸಾಧ್ಯತೆ. ಆದಷ್ಟು ಮಾತಿನ ಮೇಲೆ ಹಿಡಿತವಿರಲಿ.
ಅದೃಷ್ಟ ಸಂಖ್ಯೆ: 4

ವೃಷಭ: ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಪ್ರಶಂಸೆ ದೊರೆಯಲಿದೆ. ದಿನದ ಮಟ್ಟಿಗೆ ಖರ್ಚು. ಸಂಬಂಧವಿರದ ವಿಷಯಗಳಿಗೆ ಕಿವಿಗೊಡವುದು ಬೇಡ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಳೆಯ ವಿಚಾರಗಳನ್ನು ನೆನಪು ಮಾಡಿಕೊಂಡು ಮನಸ್ಸಿಗೆ ನೋವು ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ಮಿಥುನ: ನಿಮ್ಮ ಸಕಾರಾತ್ಮಕ ದೃಷ್ಟಿಕೋನ ಮತ್ತು ಆತ್ಮವಿಶ್ವಾಸದಿಂದ ನಿಮ್ಮ ಸುತ್ತಲಿರುವ ಜನರನ್ನು ಪ್ರಭಾವಿಸಬಹುದಾದ ಸಾಧ್ಯತೆಗಳಿವೆ. ಅನಿರೀಕ್ಷಿತ ಲಾಭಗಳಿವೆ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಕಟಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಗೃಹಬಳಕೆ ಸಾಧನಗಳ ಖರೀದಿ ಸಾಧ್ಯತೆಯಿಂದ ಖರ್ಚು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಅತಿಥಿಗಳ ಆಗಮನ ಹರ್ಷ ತರಲಿದೆ. ಆರೋಗ್ಯ ಉತ್ತಮ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಸಿಂಹ: ನಿಮ್ಮ ಆಕರ್ಷಕ ಮಾತುಗಳಿಂದ ಇತರರನ್ನು ಆಕರ್ಷಸುವಿರಿ. ನಾಲಿಗೆಯ ರುಚಿಗೆ ಮಾರು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ, ಆಹರ ಸೇವೆನೆ ಮಿತಿಯಲ್ಲಿರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಸಂಗಾತಿಯ ಮಾತುಗಳು ಮಧುರವೆನಿಸುವವು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಕನ್ಯಾ: ನಿಮ್ಮ ತ್ಯಾಗದ ಮನೋಭಾವ ನಿಮಗೆ ಸಂತಸ ತರುವುದು. ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ, ವಿನಾಕಾರಣ ವಿವಾದವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದಲ್ಲಿ ಅನಾವಶ್ಯಕ ಮಾತುಗಳಿಂದ ಜಗಳವಾಗಬಹುದು, ಮೌನದಿಂದ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಇತರರು ನಿಮ್ಮ ಕಾರ್ಯಗಳನ್ನು ಪ್ರಶಂಸೆ ಮಾಡುವರು. ಹಣಕಾಸಿನ ಹರಿವು ಹೆಚ್ಚಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಸಹದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ, ಎಚ್ಚರಿಕೆ ಇರಲಿ. ವಿನಾಕಾರಣ ಜಗಳ ಮಾಡಿ ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ವೃಶ್ಚಿಕ: ಇತರರನ್ನು ಟೀಕಿಸಲು ನಿಮ್ಮ ಅಮೂಲ್ಯ ಸಮಯ ವ್ಯರ್ಥ ಮಾಡುವುದು ಬೇಡ. ಅನಾವಶ್ಯಕ ವಿಚಾರ ಮಾಡಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಶುಭ. ಕುಟುಂಬದಲ್ಲಿ ಹಳೆಯ ವಿಚಾರಗಳು ಕಲಹ ಸೃಷ್ಟಿಸಬಹುದು, ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ. ಅಮೂಲ್ಯ ವಸ್ತುಗಳ ಮೇಲೆ ಗಮನವಿರಲಿ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಹಣಕಾಸು ಪ್ರಗತಿ ಸಾಧಾರಣ. ವಿನಾಕಾರಣ ನಿಮ್ಮ ಸಿಟ್ಟು ಸಂಗಾತಿಯ ಮೇಲೆ ಹಾಕಿ, ಕುಟುಂಬದ ವಾತಾವರಣ ಕೆಡಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

ಮಕರ: ನಿಮ್ಮ ಕೋಪದ ಸ್ವಭಾವದಿಂದ ಇತರರೊಂದಿಗೆ ವಾದಕ್ಕಿಳಿಯಬೇಡಿ. ಆತುರದಲ್ಲಿ ಅತಿರೇಕದ ಮಾತುಗಳು ಜಗಳ ತಂದೀತು. ಆರೋಗ್ಯದ ಕಡೆಗೆ ಗಮನವಿರಲಿ. ದಿನದ ಮಟ್ಟಿಗೆ ಖರ್ಚು. ಆತ್ಮೀಯರೊಂದಿಗೆ ಪ್ರಯಾಣಿಸುವ ಸಾಧ್ಯತೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಕುಂಭ: ಕೆಲಸಕ್ಕೆ ಹಾಕಿದ ಶ್ರಮ ವ್ಯರ್ಥವಾಗದಂತೆ ಎಚ್ಚರಿಕೆ ವಹಿಸಿ. ಆತುರದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಸರಿಯಲ್ಲ, ತಾಳ್ಮೆಯಿಂದ ಮಾತನಾಡಿ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಮೀನ: ರಹಸ್ಯ ಕಾರ್ಯಗಳು ಯಶಸ್ಸು ತಂದು ಕೊಡಲಿವೆ. ಕುಟುಂಬಕ್ಕೆ ಸಮಯವನ್ನು ನೀಡುವಿರಿ. ವಿನಾಕಾರಣ ಕೋಪಗೊಂಡು ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಖರ್ಚು ಹೆಚ್ಚಾಗಲಿದೆ. ಸಂಗಾತಿ ನಿಮ್ಮ ಮನಸ್ಸಿನ ಭಾವನೆಗಳಿಗೆ ಸ್ಪಂದಿಸುವರು. ಮಧುರ ಪ್ರೇಮ ಅಂಕುರವಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಸರ್ವರಿಗೂ ಶೋಭನಕೃತ್ ನಾಮ ಸಂವತ್ಸರ ಶುಭ ತರಲಿ.
ಸರ್ವೇ ಜನಾಃ ಸುಖಿನೋ ಭವಂತು। ಸರ್ವೇ ಸಂತು ನಿರಾಮಯಃ॥

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ: Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?

Exit mobile version