Site icon Vistara News

Horoscope Today : ಮಿಥುನ ರಾಶಿಯವರಿಗೆ ಉತ್ಸಾಹದ ದಿನವಿದು; ನಿಮ್ಮ ರಾಶಿ ಭವಿಷ್ಯ ಹೀಗಿದೆ

horoscope today

Horoscope Today

ಇಂದಿನ ಪಂಚಾಂಗ (23-03-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ.

ತಿಥಿ: ಬಿದಿಗೆ 18:20 ವಾರ: ಗುರುವಾರ
ನಕ್ಷತ್ರ: ರೇವತಿ 14:07 ಯೋಗ: ಇಂದ್ರ 27:41
ಕರಣ: ಬಾಲವ 07:15 ಇಂದಿನ ವಿಶೇಷ: ಭಗತ್‌ಸಿಂಗ್‌, ರಾಜಗುರು, ಸುಖದೇವ್‌ ಬಲಿದಾನದ ದಿನ.
ಅಮೃತಕಾಲ: ಬೆಳಗ್ಗೆ 11 ಗಂಟೆ 53 ನಿಮಿಷದಿಂದ ಮಧ್ಯಾಹ್ನ 01 ಗಂಟೆ 23 ನಿಮಿಷದವರೆಗೆ.

ಸೂರ್ಯೋದಯ : 06:22 ಸೂರ್ಯಾಸ್ತ : 06:31

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ನಿಮ್ಮ ಬಹಳ ದಿನಗಳ ಕನಸು ನನಸಾಗುವ ದಿನ. ವ್ಯಾಜ್ಯ ಪ್ರಕರಣಗಳು ಪರಿಹಾರವಾಗುವ ಸಾಧ್ಯತೆ. ಆರ್ಥಿಕ ಪ್ರಗತಿ. ಕುಟುಂಬ ಸದಸ್ಯರ ಸಹಕಾರದಿಂದ ಮನೆಯಲ್ಲಿ ನೆಮ್ಮದಿ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ವೃಷಭ: ಬಂಧು ಮಿತ್ರರಿಂದ ಸಹಕಾರ ದೊರೆಯಲಿದೆ. ಆರ್ಥಿಕ ಪ್ರಗತಿ ಸಾಧಾರಣ. ನಿಮ್ಮ ವ್ಯಕ್ತಿತ್ವ ಇತತರನ್ನು ಆಕರ್ಷಿಸಿ, ಕಾರ್ಯದಲ್ಲಿ ಯಶಸ್ಸು ತಂದುಕೊಡಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 3

ಮಿಥುನ: ಇಂದು ನೀವು ಸಂತಸದ ಕ್ಷಣಗಳನ್ನು ಕಳೆಯುವಿರಿ. ಆರ್ಥಿಕ ಪ್ರಗತಿ. ಬಹಳ ದಿನಗಳ ಬಾಕಿ ಇರುವ ಕಾರ್ಯವು ಪುರ್ಣವಾಗುವುದು. ಮನೆಯಲ್ಲಿ ಪರಸ್ಪರ ಸಹಕಾರ ಸಿಗುವುದು, ಉತ್ಸಾಹದ ದಿನವಿದು. ಕೌಟುಂಬಿಕವಾಗಿಯೂ ಶುಭ ಫಲ.
ಅದೃಷ್ಟ ಸಂಖ್ಯೆ: 1

ಕಟಕ: ಆಕರ್ಷಕ ವ್ಯಕ್ತಿತ್ವ ಹೊಂದಿರುವ ನೀವು ಇಂದು ಇತರರನ್ನು ಆಕರ್ಷಿಸುವಿರಿ. ಆರ್ಥಿಕ ಪ್ರಗತಿ ಸಾಧಾರಣ. ಆದರೂ ಸಮರ್ಥವಾಗಿ ನಿರ್ವಹಿಸುವಿರಿ. ಉದ್ಯೋಗದಲ್ಲಿ ಪ್ರಗತಿ. ಮಡದಿಯ ಪ್ರೀತಿಗೆ ಸೋಲುವಿರಿ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 5

ಸಿಂಹ: ಉದ್ಯೋಗ ಅಪೇಕ್ಷಿತರಿಗೆ ಇಂದು ಉದ್ಯೋಗ ದೊರೆಯುವ ಭರವಸೆ ಮೂಡಲಿದೆ. ಆರ್ಥಿಕ ಪ್ರಗತಿ. ಪರಿಶ್ರಮಕ್ಕೆ ತಕ್ಕ ಪ್ರತಿ ಫಲ ಸಿಗುವುದು. ಮನೆಯವರ ಪ್ರೀತಿ ಸಹಕಾರ ಸಿಗಲಿದೆ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಅದೃಷ್ಟ ಸಂಖ್ಯೆ: 3

ಕನ್ಯಾ: ಮನೆಯಲ್ಲಿ ಪರಸ್ಪರರ ಮಧ್ಯೆ ಕಲಹದಿಂದ ವಾತಾವರಣ ಹದಗೆಡಬಹುದು. ಕೆಲಸದಲ್ಲಿ ಹಿರಿಯರಿಂದ ಒತ್ತಡ, ಎಚ್ಚರಿಕೆ ವಹಿಸಿ. ಆರ್ಥಿಕವಾಗಿ ಪ್ರಗತಿ. ಉದ್ಯೋಗದಲ್ಲಿ ನಿಮ್ಮ ಇಷ್ಟದಂತೆಯೇ ಕೆಲಸ ಏರ್ಪಡುವುದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಯಾವುದೇ ಹೂಡಿಕೆ ವ್ಯವಹಾರ ಮಾಡುವುದು ಬೇಡ. ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರೋಗ್ಯದಲ್ಲಿ ಉತ್ತಮ. ಉದ್ಯೋಗದಲ್ಲಿ ಮಿಶ್ರ ಫಲ. ಮನೆಯಲ್ಲಿ ಸಂತೋಷದ ದಿನ.
ಅದೃಷ್ಟ ಸಂಖ್ಯೆ: 4

ವೃಶ್ಚಿಕ: ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಹೊಂದಲು ಹಿರಿಯರು ಮಾರ್ಗದರ್ಶನ ಮಾಡುವರು. ಧೈರ್ಯದಿಂದ ಕಾರ್ಯದಲ್ಲಿ ಮುನ್ನುಗ್ಗಿ, ಯಶಸ್ಸು ಸಿಗುವುದು. ಉದ್ಯೋಗದಲ್ಲಿ ಯಶಸ್ಸು. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 5

ಧನಸ್ಸು: ಕುಟುಂಬ ಸದಸ್ಯರ ಆರೋಗ್ಯ ಸಂಬಂಧಿ ವಿಷಯಗಳು ತಮಗೆ ಒತ್ತಡ ಉಂಟು ಮಾಡಬಹುದು. ಉದಾಸೀನ ಮಾಡುವುದು ಬೇಡ. ಆಶಾವಾದಿಗಳಾಗಿರಿ. ಕುಲದೇವರನ್ನು ಸ್ಮರಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ಮಕರ: ಉದ್ಯೋಗದಲ್ಲಿ ಅಧಿಕಾರಿಗಳ ಕಿರಿಕಿರಿ ಒತ್ತಡ ಉಂಟುಮಾಡುವ ಸಾಧ್ಯತೆ. ಆಲಸ್ಯದಿಂದ ದೂರವಿದ್ದು, ಕಾರ್ಯ ಪೂರ್ಣ ಮಾಡಿ. ಕೆಲಸದ ಒತ್ತಡವನ್ನು ಮನೆಯ ಸದಸ್ಯರ ಮೇಲೆ ಹಾಕಿ, ಮನೆಯ ವಾತಾವರಣ ಹದಗೆಡಲು ಕಾರಣವಾಗಬೇಡಿ. ಗುರುಗಳ ಆರಾಧನೆ ಮಾಡಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ಕುಂಭ: ಭೂ ಸಂಬಂಧಿ ವ್ಯವಹಾರದಲ್ಲಿ ಪ್ರಗತಿ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರುವುದು. ಅನ್ಯರು ಆಡುವ ಕುಹುಕದ ಮಾತುಗಳಿಗೆ ನೀವು ಬಲಿಯಾಗಬೇಡಿ. ಉದ್ಯೋಗದಲ್ಲಿ ನೀವಂದುಕೊಂಡಿದ್ದನ್ನು ಮಾಡಲು ಪರಿಶ್ರಮ ಪಡಬೇಕು. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 9

ಮೀನ: ನಿಮ್ಮ ಮಹತ್ವಾಕಾಂಕ್ಷೆಯ ಕೆಲಸ ಕಾರ್ಯಗಳು ಕುಂಠಿತವಾಗುವ ಸಾಧ್ಯತೆ. ಗೌಪ್ಯ ವಿಷಯಗಳು ಬಹಿರಂವಾಗದಿರಲಿ. ಆರ್ಥಿಕ ನಷ್ಟ ತಪ್ಪಿಸಿಕೊಳ್ಳಿ. ಸಂಗಾತಿಯ ಮಾತುಗಳು ಹಿತವೆನಿಸುವುದು. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 7

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ: Ugadi Horoscope 2023 : ಯುಗಾದಿ ಭವಿಷ್ಯ; ಹೊಸ ಸಂವತ್ಸರದಲ್ಲಿ ಯಾವೆಲ್ಲಾ ರಾಶಿಗಳಿಗೆ ಶುಭಾಶುಭ ಫಲಗಳಿವೆ?

Exit mobile version