Site icon Vistara News

Horoscope Today : ಮಿಥುನ ರಾಶಿಯವರಿಗೆ ಅತ್ಯಂತ ಶುಭ ದಿನ; ನಿಮ್ಮ ರಾಶಿ ಭವಿಷ್ಯ ಹೇಗಿದೆ?

horoscope today

Horoscope Today

ಇಂದಿನ ಪಂಚಾಂಗ (31-03-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ.

ತಿಥಿ: ದಶಮಿ 25:57 ವಾರ: ಶುಕ್ರವಾರ
ನಕ್ಷತ್ರ: ಪುಷ್ಯ 25:56 ಯೋಗ: ಸುಕರ್ಮ 25:54
ಕರಣ: ತೈತುಲ 12:43 ಇಂದಿನ ವಿಶೇಷ: ಧರ್ಮರಾಜ ದಶಮಿ, ಶಾಲಿವಾಹನ ಜಯಂತಿ.
ಅಮೃತಕಾಲ: ಸಂಜೆ 06 ಗಂಟೆ 46 ನಿಮಿಷದಿಂದ ರಾತ್ರಿ 08 ಗಂಟೆ 34 ನಿಮಿಷದವರೆಗೆ.

ಸೂರ್ಯೋದಯ : 06:17 ಸೂರ್ಯಾಸ್ತ : 06:31

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ನಿಮ್ಮ ವೈಯಕ್ತಿಕ ಜೀವನದಲ್ಲಿ ಇತರರು ಹಸ್ತಕ್ಷೇಪ ಮಾಡದಂತೆ ಎಚ್ಚರಿಕೆ ವಹಿಸಿ. ಅನೇಕ ವಿಚಾರಗಳು ಮಾನಸಿಕ ಒತ್ತಡ ತರುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಹಣಕಾಸು ವ್ಯವಹಾರದಲ್ಲಿ ಸಾಧರಣ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ವೃಷಭ: ಬಹಳ ದಿನಗಳ ಕನಸು ನನಸಾಗುವ ಸಮುಯ. ಭೂ ಸಂಬಂಧಿ ವ್ಯವಹಾರದಲ್ಲಿ ಯಶಸ್ಸು. ಇಂದು ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ, ಪ್ರೋತ್ಸಾಹ ಸಿಗಲಿದೆ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಕುಟುಂಬದಲ್ಲಿ ವಿನಾಕಾರಣ ಕಲಹಗಳು ನಡೆಯದಂತೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಮಿಥುನ: ನಿಮಗಿಂದು ಅತ್ಯಂತ ಉತ್ಸಾಹದ ದಿನ. ಆತುರದಲ್ಲಿ ಹಣ ಹೂಡಿಕೆ ಮಾಡುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಮಕ್ಕಳ ಕುರಿತಾಗಿ ಚಿಂತಿಸಿ ಉತ್ಸಾಹ ಕಳೆದುಕೊಳ್ಳುವುದು ಬೇಡ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಕಟಕ: ಅನಾವಶ್ಯಕ ಒತ್ತಡ ತೆಗೆದುಕೊಳ್ಳುವುದು ಬೇಡ. ಮನೆಯಲ್ಲಿನ ಕಲಹಗಳಿಗೆ ನೀವು ಧ್ವನಿಯಾಗುವುದು ಬೇಡ. ಪ್ರತಿಭೆಗೆ ತಕ್ಕ ಪ್ರೋತ್ಸಾಹ ಸಿಗುವುದು. ಆರ್ಥಿಕ ಪ್ರಗತಿ ಸಾಧಾರಣ. ಸಂಗಾತಿಯ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಸಿಂಹ: ಪಾಲುದಾರಿಕೆ ವ್ಯವಹಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿ ಆಗುವ ಸಾಧ್ಯತೆ, ಎಚ್ಚರವಹಿಸಿ. ಹಿರಿಯರ ಮಾರ್ಗದರ್ಶನ ಪಡೆಯಿರಿ. ಅತಿಯಾದ ಆತ್ಮವಿಶ್ವಾಸದ ಭರದಲ್ಲಿ ದುಡುಕುವುದು ಬೇಡ. ಉದ್ಯೋಗದಲ್ಲಿ ಯಶಸ್ಸಿನತ್ತ ಹೆಜ್ಜೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಕನ್ಯಾ: ವ್ಯಾಪಾರ ವ್ಯವಹಾರಗಳಲ್ಲಿ ಕಾರ್ಯ ಸಿದ್ಧಿ. ಪ್ರಯಾಣದಿಂದ ಲಾಭ. ತಾಳ್ಮೆಯಿಂದ ಕಾಯ್ದು ಕೊಂಡಿರುವ ಕೆಲಸವು ಫಲ ನೀಡುವುದು. ಆರೋಗ್ಯದಲ್ಲಿ ಉತ್ತಮ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ನಿಮ್ಮೆಲ್ಲಾ ಕೆಲಸ ಕಾರ್ಯಗಳಿಗೆ ಪ್ರಶಂಸೆ ಪ್ರೋತ್ಸಾಹ ಸಿಗುವುದು. ನಿಮ್ಮ ಸಭ್ಯ ನಡವಳಿಕೆ ಮೆಚ್ಚುಗೆ ಪಡೆಯುತ್ತದೆ. ಆರ್ಥಿಕ ಸಮಸ್ಯೆಗಳು ಪರಿಹಾರ ಆಗುವವು. ಆದರೂ ಯಾವುದಾದರೂ ಒಂದು ಕೊರತೆ ಕಾಡುವುದು. ಆಧ್ಯಾತ್ಮದ ಹಾದಿಯಲ್ಲಿ ಹೆಜ್ಜೆ ಹಾಕಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

ವೃಶ್ಚಿಕ: ಅತಿಯಾದ ಮಾನಸಿಕ ಒತ್ತಡ ನಿಮ್ಮನ್ನು ಜರ್ಜರಿತರನ್ನಾಗಿ ಮಾಡಬಹುದು, ಅದ್ದರಿಂದ ಹೊರ ಬನ್ನಿ. ಮನೆಯಲ್ಲಿ ಮಾತಿಗೆ ಮಾತು ಬೆಳೆದು ಕಲಹವಾಗುವ ಸಾಧ್ಯತೆ. ಮೌನದಿಂದ ಕಾರ್ಯ ಸಾಧಿಸಿ. ಉದ್ಯೋಗದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿಯೂ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

ಧನಸ್ಸು: ದೀರ್ಘ ಕಾಲದ ಅನಾರೋಗ್ಯ ನಿಮ್ಮನ್ನು ಹಿಂಸೆಗೆ ಗುರಿ ಮಾಡಬಹುದು. ವಿಶ್ವಾದಿಂದ ಕಾರ್ಯ ಸಾಧನೆ ಮಾಡಿ ಶುಭವಾಗುವುದು. ಅರ್ಥಿಕವಾಗಿ ಶುಭ ಫಲ. ಉದ್ಯೋಗದಲ್ಲಿ ನೀವಂದುಕೊಂಡಿದ್ದನ್ನು ಮಾಡಲು ಸಾಧ್ಯವಾಗದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಮಕರ: ಅತಿಯಾದ ಭರವಸೆಯಿಂದ ದುಡುಕುವುದು ಬೇಡ. ಆರ್ಥಿಕ ಪ್ರಗತಿ ಉತ್ತಮ. ನಿಮ್ಮ ಪ್ರತಿ ಸ್ಪರ್ಧಿಗಳು ಕೆಟ್ಟದ್ದನ್ನು ಮಾಡಬಹುದು. ಆರೋಗ್ಯವು ಉತ್ತಮ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:6

ಕುಂಭ: ಭೂ ವ್ಯವಹಾರದಲ್ಲಿ ಅನುಕೂಲತೆ. ಸಂಬಂಧಿಕರು ಮತ್ತು ಸ್ನೇಹಿತರಿಂದ ಅನಿರೀಕ್ಷಿತ ಉಡುಗೊರೆಗಳು ದೊರೆಯುವವು. ಉದ್ಯೋಗದಲ್ಲಿ ಆತ್ಮವಿಶ್ವಾಸ ಹೆಚ್ಚಲಿದೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ಮೀನ: ಮಕ್ಕಳ ಆರೋಗ್ಯದ ಬಗ್ಗೆ ಗಮನ ಹರಿಸಿ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗುವುದು. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಮಾತು ಕಡಿಮೆ ಆಡಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ: Navavidha Bhakti : ಭಕ್ತಿ- ಮುಕ್ತಿಗಳನ್ನೀವ ಭಗವಂತನ ಸ್ಮರಣೆ

Exit mobile version