ಪ್ರಮುಖ ಸುದ್ದಿ
Horoscope Today : ದ್ವಾದಶಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡಿ
ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ದ್ವಾದಶಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಇಂದಿನ ಪಂಚಾಂಗ (02-05-2023)
ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ.
ತಿಥಿ: ದ್ವಾದಶಿ 23:17 ವಾರ: ಮಂಗಳವಾರ
ನಕ್ಷತ್ರ: ಉತ್ತರ ಪಾಲ್ಗುಣಿ 19:40 ಯೋಗ: ವ್ಯಾಘಾತ 11:47
ಕರಣ: ಭವ 10:47 ಇಂದಿನ ವಿಶೇಷ: ವಸಂತ ದ್ವಾದಶಿ, ವಿಶ್ವ ಅಸ್ತಮಾ ದಿನ
ಅಮೃತಕಾಲ: ಬೆಳಗ್ಗೆ 11 ಗಂಟೆ 56 ನಿಮಿಷದಿಂದ ಮಧ್ಯಾಹ್ನ 01 ಗಂಟೆ 40 ನಿಮಿಷದವರೆಗೆ.
ಸೂರ್ಯೋದಯ : 05:59 ಸೂರ್ಯಾಸ್ತ : 06:35
ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30
ದ್ವಾದಶ ರಾಶಿ ಭವಿಷ್ಯ (Horoscope Today)
ಮೇಷ: ಕೆಲವು ನಿರ್ಧಾರಗಳು ಹತಾಶೆ ಮತ್ತು ಮಾನಸಿಕ ಪ್ರಕ್ಷುಬ್ಧತೆಗೆ ಕಾರಣವಾಗುತ್ತದೆ. ಆಪ್ತರಿಂದ ಸಹಾಯದ ಕೋರಿಕೆ. ಒತ್ತಡದ ಕೆಲಸದಿಂದಾಗಿ ದೈಹಿಕವಾಗಿ ಬಳಲುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಸದೃಢರಾಗಿರುವಿರಿ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1
ವೃಷಭ: ಆಂತರಿಕ ಭಯ ನಿಮ್ಮ ಸಂತೋಷವನ್ನು ಹಾಳುಗೆಡವಬಹುದು. ನಕಾರಾತ್ಮಕ ಆಲೋಚನೆಗಳನ್ನು ಮಾಡದಿರಿ, ಆಗ ನಿಮ್ಮ ಹಾಸ್ಯದ ಪ್ರವೃತ್ತಿ ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ದಿನದ ಕೊನೆಯ ಭಾಗದಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವ ಸಾಧ್ಯತೆ. ಆರೋಗ್ಯ ಕೊಂಚಮಟ್ಟಿಗೆ ಹದಗೆಡುವ ಸಾಧ್ಯತೆ. ಆರ್ಥಿಕವಾಗಿ ಪ್ರಗತಿ.
ಅದೃಷ್ಟ ಸಂಖ್ಯೆ: 9
ಮಿಥುನ: ಬೇರೆಯವರ ಮಾತನ್ನು ಕೇಳಿಕೊಂಡು ನಿಮ್ಮನ್ನು ಪ್ರೀತಿಯಿಂದ ಕಾಣುವ ವ್ಯಕ್ತಿಗಳನ್ನು ದ್ವೇಷಿಸುವುದು ಬೇಡ. ಇತರರ ಸಮಸ್ಯೆಗಳನ್ನು ಪರಿಹರಿಸಲು ನೀವು ಮಧ್ಯಪ್ರವೇಶ ಮಾಡುವ ಸಾಧ್ಯತೆ. ದಿಢೀರ್ ಪ್ರಯಾಣ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಅನಾವಶ್ಯಕ ಖರ್ಚು. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಕಟಕ: ಅನಿವಾರ್ಯ ಪ್ರಸಂಗಗಳು ನಿಮಗೆ ಕೋಪವನ್ನು ತರಿಸಿವ ಸಾಧ್ಯತೆ, ಭಾವನೆಗಳನ್ನು ನಿಯಂತ್ರಣಕ್ಕೆ ತೆಗೆದುಕೊಂಡರೆ ಉತ್ತಮ. ಕಠಿಣ ಪರಿಶ್ರಮ ನಿಮಗೆ ಫಲ ನೀಡಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಆರೋಗ್ಯದಲ್ಲಿ ವ್ಯತ್ಯಾಸ. ಆರ್ಥಿಕವಾಗಿ ಲಾಭ. ಉದ್ಯೋಗದ ಸ್ಥಳದಲ್ಲಿ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಸಿಂಹ: ನಿಮ್ಮ ಸಭ್ಯ ನಡವಳಿಕೆ ಇತರರಿಂದ ಮೆಚ್ಚುಗೆ ಪಡೆಯುತ್ತದೆ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ. ದಿನದ ಆರಂಭದಲ್ಲಿ ಇಂದು ನೀವು ಯಾವುದೇ ಆರ್ಥಿಕ ನಷ್ಟವನ್ನು ಹೊಂದಬಹುದು. ಇದರಿಂದ ನಿಮ್ಮ ಪೂರ್ತಿ ದಿನ ಹದಗೆಡಬಹುದು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9
ಕನ್ಯಾ: ಒತ್ತಡದಿಂದ ವಿಮುಕ್ತಿ ಹೊಂದಿ ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ದೀರ್ಘಕಾಲದ ದೃಷ್ಟಿಕೋನದಿಂದ ಮಾಡಿದ ಹೂಡಿಕೆಯಿಂದ ಲಾಭ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಸಂಪೂರ್ಣ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಅದೃಷ್ಟ ಖುಲಾಯಿಸಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ದಿಢೀರ್ ಧನಾಗಮನದಿಂದ ಸಂತೋಷ ಇಮ್ಮಡಿಯಾಗಲಿದೆ. ಅನೇಕ ಸಮಸ್ಯೆಗಳು ಇಂದು ಪರಿಹಾರವಾಗುವುದು. ಆರೋಗ್ಯ ಪರಿಪೂರ್ಣ. ಬಹಳ ದಿನಗಳಿಂದ ಕಂಡ ಕನಸು ನನಸಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ.
ಅದೃಷ್ಟ ಸಂಖ್ಯೆ: 1
ವೃಶ್ಚಿಕ: ಇಂದು ಪ್ರಮುಖ ನಿರ್ಧಾರಗಳಿಂದಾಗಿ ಮಾನಸಿಕವಾಗಿ ನೀವು ಬಳಲುವ ಸಾಧ್ಯತೆ. ಅನಾವಶ್ಯಕವಾಗಿ ಖರ್ಚು ಮಾಡಿ ಕೊರಗುವ ಸಾಧ್ಯತೆ. ಆದಷ್ಟು ಖರ್ಚು ನಿಯಂತ್ರಣದಲ್ಲಿರಲಿ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಧನಸ್ಸು: ಆರೋಗ್ಯದ ಆರೈಕೆ ಇಂದು ಅಗತ್ಯವಿದೆ. ಆಪ್ತರೊಂದಿಗೆ ಸೇರಿಕೊಂಡು ಮಾಡುವ ವ್ಯಾಪಾರ ನಷ್ಟ ತಂದೀತು, ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ನಿಮ್ಮ ಆಂತರಿಕ ಶಕ್ತಿ ದಿನದ ಕೆಲಸವನ್ನು ಉತ್ತಮಗೊಳಿಸುತ್ತದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಮಾತನಾಡುವಾಗ ಯೋಚಿಸಿ ಮಾತನಾಡಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ಮಕರ: ಆಹಾರ ಕ್ರಮದ ವ್ಯತ್ಯಾಸದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರು ಸಾಧ್ಯತೆ, ಆದಷ್ಟು ಆಹಾರ ಸೇವನೆ ನಿಯಂತ್ರಣದಲ್ಲಿರಲಿ. ಅನಿವಾರ್ಯ ಕಾರಣಗಳಿಂದ ಖರ್ಚು. ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ದಿಢೀರ್ ಪ್ರಯಾಣ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8
ಕುಂಭ: ನಿಮ್ಮ ಸಾಧನೆಗೆ ಇಂದು ಪ್ರೋತ್ಸಾಹ ಸಿಗಲಿದೆ. ಅನೇಕ ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ. ವ್ಯಾಪಾರದ ಉದ್ದೇಶಕ್ಕಾಗಿ ಕೈಕೊಂಡ ಪ್ರಯಾಣ ಲಾಭವನ್ನು ತಂದುಕೊಡಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6
ಮೀನ: ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆವರಿಸಬಹುದು. ಆದಷ್ಟು ಸಕಾರಾತ್ಮಕವಾಗಿ ಆಲೋಚಿಸಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ. ನಿಮ್ಮ ಸಹೋದ್ಯೋಗಿಗಳು ನಿಮ್ಮನ್ನು ಟೀಕಿಸುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | [email protected]
ಇದನ್ನೂ ಓದಿ : Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?
ಕರ್ನಾಟಕ
Liquor Consumption: ಬಡವನ ಕುಡಿತದ ವಾರ್ಷಿಕ ಲೆಕ್ಕಾಚಾರ ಇಲ್ಲಿದೆ! ದಿನಕ್ಕೆ ಆತನ ಸರಾಸರಿ ಖರ್ಚೆಷ್ಟು?
liquor price: ರಾಜ್ಯ ಸರ್ಕಾರ ಮದ್ಯದ ಮೇಲಿನ ಸುಂಕವನ್ನು ಏರಿಕೆ ಮಾಡುತ್ತಲೇ ಇದೆ. ಇದು ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ತೀವ್ರ ಸಂಕಷ್ಟವನ್ನು ತಂದೊಡ್ಡಿದೆ. ಈ ಕಾರಣದಿಂದಾಗಿ ಮದ್ಯದ ಮೇಲಿನ ಸುಂಕವನ್ನು ಇಳಿಕೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕುಡುಕರ ಸಂಘವು ಪತ್ರ ಬರೆದು ಮನವಿ ಮಾಡಿದೆ!
ಬೆಂಗಳೂರು: ಅನೇಕ ಬಜೆಟ್ ಮಂಡನೆ ಸಂದರ್ಭದಲ್ಲಿ ಮದ್ಯ ಪ್ರಿಯರಿಗೆ ಆಯಾ ಸರ್ಕಾರಗಳು ಶಾಕ್ ಕೊಡುತ್ತಲೇ ಬರುತ್ತಿವೆ. ಮದ್ಯದ ದರದ ಮೇಲೆ ಅಬಕಾರಿ ಸುಂಕವನ್ನು ಹೇರುತ್ತಿವೆ. ಈಗ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಜುಲೈ 7ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಈ ನಡುವೆ ಅವರಿಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಸವಾಲಿದೆ. ಅದಕ್ಕೆ ಹಣ ಹೊಂದಾಣಿಕೆಯನ್ನು ಮಾಡಬೇಕಿದೆ. ಇದು ಈಗ ಮದ್ಯ ಪ್ರಿಯರಲ್ಲಿ ತಲ್ಲಣವನ್ನು ಹುಟ್ಟಿಸಿದೆ. ಈ ಕಾರಣಕ್ಕೆ ಅವರೆಲ್ಲರೂ “ಎಣ್ಣೆಯ ವಿಷ್ಯ, ಬೇಡವೋ ಶಿಷ್ಯ” ಎಂಬ ಹಾಡನ್ನು ಹಾಡಬೇಕಾಗುತ್ತದೆ ಎಂದು ಆತಂಕದಲ್ಲಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಕರ್ನಾಟಕ ರಾಜ್ಯ ಮದ್ಯ ಪ್ರೇಮಿಗಳ/ಕುಡುಕರ ಸಂಘವು, ಈಗಾಗಲೇ ಮದ್ಯದ (Liquor Consumption) ಸುಂಕವನ್ನು ಹೆಚ್ಚಳ ಮಾಡಿದ್ದು, ಅದನ್ನು ಇಳಿಸಿ ಎಂದು ಮನವಿ ಮಾಡಿದ್ದಾರೆ. ಈ ಪತ್ರ ಈಗ ವೈರಲ್ (Viral News) ಆಗಿದೆ.
ಇದಲ್ಲದೆ, ಅಬಕಾರಿ ಸಚಿವರು, ಶುಲ್ಕ ನಿಯಂತ್ರಣ ಸಮಿತಿ ಅಧ್ಯಕ್ಷರು, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೂ ಪತ್ರದ ಪ್ರತಿಯನ್ನು ಲಗತ್ತಿಸಿದ್ದು, ದಯಮಾಡಿ ಅಬಕಾರಿ ಸುಂಕವನ್ನು ಇಳಿಸಿ ಸಂಕಷ್ಟದಲ್ಲಿರುವ ಮದ್ಯ ಪ್ರಿಯರ ರಕ್ಷಣೆಗೆ ದಾವಿಸಿ ಎಂದು ಮೊರೆ ಇಟ್ಟಿದ್ದಾರೆ!
ಇದನ್ನೂ ಓದಿ: Dinesh Gundu Rao: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ ಮರು ತನಿಖೆ; ರೆಡಿ ಆಗ್ತಿದೆ ಡಿಪಿಆರ್!
ಮನವಿ ಪತ್ರದಲ್ಲೇನಿದೆ?
ಮಾನ್ಯ ಮುಖ್ಯಮಂತ್ರಿ ಮತ್ತು ಮದ್ಯ ಪ್ರಿಯರ ಇಲಾಖೆ ಅಂದರೆ ಅಬಕಾರಿ ಇಲಾಖೆಯ ಸಚಿವರಲ್ಲಿ ವಿನಂತಿಸುವುದೇನೆಂದರೆ, ರಾಜ್ಯದಲ್ಲಿ ಜಾತಿ, ಧರ್ಮ, ಬಡವ ,ಬಲ್ಲಿದ, ರಾಜಕಾರಣಿ, ಡಾಕ್ಟರ್, ಪತ್ರಕರ್ತ, ಸರ್ಕಾರಿ ನೌಕರರು, ವಕೀಲರು ಎಂಬ ತಾರತಮ್ಯ ಇಲ್ಲದೆ ಮದ್ಯ ಸೇವನೆಯನ್ನು ಮಾಡುತ್ತಾರೆ. ಎಲ್ಲ ವರ್ಗದವರು ಮದ್ಯ ಸೇವನೆಯನ್ನು ಮಾಡುತ್ತಿದ್ದು, ಇದು ಆಹಾರ ಸಂಸ್ಕೃತಿಯ ಭಾಗವಾಗಿದೆ. ಮದುವೆ, ಹಬ್ಬ ಹರಿದಿನಗಳಲ್ಲಿ ಆರಾಧನೆ ಪದ್ಧತಿಯಲ್ಲಿ, ಸಂತೋಷ ಕೂಟದಲ್ಲಿ ಮದ್ಯ ಪ್ರಿಯರು ಮದ್ಯ ಸೇವನೆಯನ್ನು ಮಾಡುತ್ತಿದ್ದಾರೆ. ಸುರಪಾನಕ್ಕೆ ಭಾರತೀಯ ಸಂಸ್ಕೃತಿಯಲ್ಲಿ ಸಾವಿರಾರು ವರ್ಷಗಳ ಇತಿಹಾಸ ಇದೆ.
ಇದರಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ರೂಪಾಯಿ ಆದಾಯ ಬರುತ್ತಿದೆ. ಇಷ್ಟೆಲ್ಲ ಆದಾಯ ಬರುತ್ತಿದ್ದರೂ ಮದ್ಯ ಪ್ರೇಮಿಗಳ ಬಗ್ಗೆ ಕಾಳಜಿ ವಹಿಸದಿರುವುದು ತುಂಬ ದುಃಖಕರ ವಿಷಯ. ಈಗಾಗಲೇ ರಾಜ್ಯ ಸರ್ಕಾರವು ಮದ್ಯದ ಮೇಲಿನ ತೆರಿಗೆಯನ್ನು ಜಾಸ್ತಿ ಮಾಡಿದೆ ಎಂದು ಮಾಧ್ಯಮಗಳ ಮೂಲಕ ತಿಳಿದು ಬಂದಿದೆ.
ಮಾನ್ಯ ಮುಖ್ಯಮಂತ್ರಿಗಳಲ್ಲಿ ವಿನಂತಿ ಏನೆಂದರೆ, ಒಬ್ಬ ಬಿಪಿಎಲ್ ಕಾರ್ಡ್ ಹೊಂದಿದವನ ಆದಾಯ ಅಲ್ಪ ಪ್ರಮಾಣದಲ್ಲಿ ಇರುತ್ತದೆ. ಮದ್ಯ ಪ್ರೇಮಿ ದಿನಗೂಲಿ ನೌಕರ ದಿನವೂ ಸರಾಸರಿ 180 ಎಂ.ಎಲ್. ಕುಡಿದರೂ ಅವನಿಗೆ ದಿನಕ್ಕೆ 200 ರಿಂದ 250 ರೂಪಾಯಿಯಷ್ಟು ಮದ್ಯಕ್ಕೆ ಖರ್ಚು ತಗಲುತ್ತದೆ. ಅಂದರೆ, ತಿಂಗಳಿಗೆ 7500 ರೂಪಾಯಿ ಬೇಕಾಗುತ್ತದೆ. ವಾರ್ಷಿಕ 90,000 ರೂಪಾಯಿ ಒಬ್ಬ ಮದ್ಯ ಪ್ರೇಮಿ ಕುಡುಕನಿಗೆ ಬೇಕಾಗುತ್ತದೆ.
ಇದನ್ನೂ ಓದಿ: Electricity Bill: ನೇಕಾರರಿಗೆ ಶಾಕ್! 90 ರೂಪಾಯಿ ಮಿನಿಮಮ್ ಚಾರ್ಜ್ 140ಕ್ಕೆ ಏರಿಕೆ; ಇದು ಗ್ಯಾರಂಟಿ ಎಫೆಕ್ಟಾ?
ಇದರಿಂದ ಮದ್ಯಮ ವರ್ಗ ಮತ್ತು ಬಡವರಿಗೆ ಆರ್ಥಿಕವಾಗಿ ಹೊರೆಯಾಗಲಿದೆ. ಆದ್ದರಿಂದ ಮದ್ಯದ ಮೇಲಿನ ಸುಂಕದ ದರ ಹೆಚ್ಚಳ ಬಗ್ಗೆ ಪುನರ್ ಪರಿಶೀಲನೆ ಮಾಡಿ ಸ್ಥಳೀಯ ಬ್ರಾಂಡ್‌ನ ಇಂಡಿಯನ್ ಮೇಡ್ ಫಾರಿನ್ ಲಿಕ್ಕರ್ ಹಾಗೂ ಬಿಯರ್ ಮೇಲಿನ ಸುಂಕವನ್ನು ಕಡಿಮೆ ಮಾಡಬೇಕು ಎಂದು ಎಲ್ಲ ಮದ್ಯ ಪ್ರಿಯ ಬ್ರದರ್ಸ್ & ಸಿಸ್ಟರ್ಸ್ ಪರವಾಗಿ ವಿನಂತಿಸುತ್ತೇವೆ.
ಕ್ರೈಂ
Apsara Murder: ಪತ್ನಿ ಇದ್ದರೂ ಅರ್ಚಕನಿಗೆ ಬೇಕು ಲವ್ವರ್; ಆಕೆ ಮದುವೆಯಾಗು ಎಂದಿದ್ದಕ್ಕೆ ಆದ ಕಿಲ್ಲರ್
Apsara Murder: ತೆಲಂಗಾಣದ ಸರೂರ್ ನಗರದಲ್ಲಿ ಅರ್ಚಕನೊಬ್ಬ ಈಗಾಗಲೇ ಮದುವೆಯಾಗಿದ್ದರೂ ಮತ್ತೊಬ್ಬ ಮಹಿಳೆಯ ಸಹವಾಸ ಮಾಡಿದ್ದಾನೆ. ಪ್ರೀತಿಸುತ್ತಿದ್ದೀಯ, ಮದುವೆಯಾಗು ಎಂದು ಮಹಿಳೆ ಒತ್ತಾಯ ಮಾಡಿದ್ದಕ್ಕೆ ಪ್ರೇಯಸಿಯನ್ನೇ ಅರ್ಚಕ ಕೊಂದಿದ್ದಾನೆ.
ಹೈದರಾಬಾದ್: ಮನೆಯಲ್ಲೊಬ್ಬಳು ಮಡದಿ ಇದ್ದರೂ ಲವ್ವರ್ ಇರಬೇಕು ಎಂಬ ಅರ್ಚಕನೊಬ್ಬನ ಶೋಕಿಗಾಗಿ ತೆಲಂಗಾಣದಲ್ಲಿ 30 ವರ್ಷದ ಮಹಿಳೆಯೊಬ್ಬರ (Apsara Murder) ಜೀವವೇ ಬಲಿಯಾಗಿದೆ. ಹೌದು, ಶಂಷಾಬಾದ್ ಜಿಲ್ಲೆಯ ಸರೂರ್‌ನಗರದಲ್ಲಿ ಅರ್ಚಕನು ತನ್ನ ಗರ್ಲ್‌ಫ್ರೆಂಡ್‌ಅನ್ನು ಮದುವೆಯಾಗಬೇಕಾಗುತ್ತದೆ ಎಂದು ಆಕೆಯನ್ನು ಕೊಂದು, ದೇಹವನ್ನು ಚರಂಡಿ ಗುಂಡಿಗೆ (Manhole) ಎಸೆದಿದ್ದಾನೆ.
ಸರೂರ್ ನಗರದ ದೇವಾಲಯದಲ್ಲಿ ಅರ್ಚಕನಾಗಿರುವ ವೆಂಕಟ ಸೂರ್ಯ ಸಾಯಿ ಕೃಷ್ಣನಿಗೆ ಈಗಾಗಲೇ ಮದುವೆಯಾಗಿದೆ. ಮದುವೆ, ಸಂಸಾರ ಎಂದು ಸುಮ್ಮನಿರದ ಈತನು ಅಪ್ಸರಾ ಎಂಬ ಮಹಿಳೆಯ ಜತೆ ಸಂಬಂಧ ಬೆಳೆಸಿದ್ದಾನೆ. ಇಬ್ಬರ ಪ್ರೀತಿ ಗಾಢವಾದ ಮೇಲೆ ನನ್ನನ್ನು ಮದುವೆಯಾಗು ಎಂದು ಅಪ್ಸರಾ ಪಟ್ಟು ಹಿಡಿದಿದ್ದಾರೆ. ಈಗಾಗಲೇ ಮದುವೆಯಾದ ಕಾರಣ ಮತ್ತೊಂದು ಮದುವೆಯಾಗಲು ಒಪ್ಪದ ವೆಂಕಟಸೂರ್ಯ ಸಾಯಿ ಕೃಷ್ಣ, ಆಕೆಯನ್ನು ಕೊಂದು, ಚರಂಡಿಯ ಗುಂಡಿಯಲ್ಲಿ ಎಸೆದಿದ್ದಾನೆ.
ಗೋಶಾಲೆಗೆ ಭೇಟಿ ನೀಡುವ ನೆಪದಲ್ಲಿ ಕೊಲೆ
ಗೋಶಾಲೆಗೆ ಭೇಟಿ ನೀಡೋಣ ಎಂದು ವೆಂಕಟಸೂರ್ಯ ಸಾಯಿ ಕೃಷ್ಣ,ನು ಅಪ್ಸರಾ ಅವರನ್ನು ಕರೆಸಿದ್ದಾನೆ. ವೆಂಕಟೇಶ್ವರ ಕಾಲೋನಿ ನಿವಾಸಿಯಾದ ಅಪ್ಸರಾ, ವೆಂಕಟಸೂರ್ಯ ಸಾಯಿ ಕೃಷ್ಣನ ಮಾತು ಕೇಳಿ ಸುಲ್ತಾನ್‌ಪಳ್ಳಿಯಲ್ಲಿರುವ ಗೋಶಾಲೆಗೆ ಹೋಗಿದ್ದಾರೆ. ಇದೇ ವೇಳೆ, ನರ್ಕುಡಾ ಗ್ರಾಮದ ಹೊರವಲಯದಲ್ಲಿ ವೆಂಕಟಸೂರ್ಯ ಸಾಯಿ ಕೃಷ್ಣನು ಅಪ್ಸರಾ ತಲೆಮೇಲೆ ಬಂಡೆಗಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಬಳಿಕ ಶವವನ್ನು ಚರಂಡಿ ಗುಂಡಿಯಲ್ಲಿ ಎಸೆದಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: Murder Case: ಕೋಪದಿಂದ ಅಜ್ಜಿಯ ಕೊಲೆ ಮಾಡಿದ, ಹೆಣ ಕಾರಿನಲ್ಲಿ ಇಟ್ಟುಕೊಂಡು ಮಿಸ್ಸಿಂಗ್ ಕಂಪ್ಲೇಂಟ್ ನೀಡಿದ!
ಜೂನ್ 3ರಿಂದ ಅಪ್ಸರಾ ಕಾಣೆಯಾದ ಕಾರಣ ಅವರ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಬಳಿಕ ಪೊಲೀಸರು ತನಿಖೆ ನಡೆಸಿದ್ದು, ಅಪ್ಸರಾ ಕಾಲ್ ರೆಕಾರ್ಡ್ಸ್ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ವೆಂಕಟಸೂರ್ಯ ಸಾಯಿ ಕೃಷ್ಣನನ್ನು ಬಂಧಿಸಿದ್ದಾರೆ. ಬಂಧಿಸಿದ ಬಳಿಕ ಅರ್ಚಕನು ತಾನು ನಡೆಸಿದ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಮದುವೆಯಾಗು ಎಂಬುದಾಗಿ ಅಪ್ಸರಾ ಪೀಡಿಸಿದ ಕಾರಣ ಕೊಲೆ ಮಾಡಿದೆ ಎಂಬುದಾಗಿ ವೆಂಕಟಸೂರ್ಯ ಸಾಯಿ ಕೃಷ್ಣ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
ಇನ್ನು ಚರಂಡಿಯಲ್ಲಿ ಬಿದ್ದಿರುವ ಶವವನ್ನು ಹೊರತೆಗೆಯಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ, ಮಹಿಳೆಯೊಬ್ಬರು ಕಾಣೆಯಾದ ಪ್ರಕರಣವು ಆಕೆಯ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಮದುವೆಯಾದರೂ ಮತ್ತೊಬ್ಬ ಮಹಿಳೆಯ ಸಹವಾಸ ಮಾಡುವ ಜತೆಗೆ ಆಕೆಯನ್ನು ಕೊಲೆಗೈದ ಅರ್ಚಕನು ಕಂಬಿ ಎಣಿಸುತ್ತಿದ್ದಾನೆ.
ಕರ್ನಾಟಕ
Congress Guarantee: ಪಾರ್ಟ್ ಟೈಂ ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ!
ಜೂನ್ 10 ಹಾಗೂ 11ರಂದು ಕುಟುಂಬ ಸಮೇತರಾಗಿ ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದರ್ಶನಕ್ಕೆ ಡಿ.ಕೆ. ಶಿವಕುಮಾರ್ ತೆರಳಲಿದ್ದಾರೆ.
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಅದ್ಧೂರಿಯಾಗಿ ಚಾಲನೆ ನೀಡಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದೀಗ ವಿನೂತನ ಉಪಾಯವೊಂದನ್ನು ಆಯ್ಕೆ ಮಾಡಿಕೊಂಡಿದೆ. ಸಾರಿಗೆ ಇಲಾಖೆಯ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಸೇವೆ ಕಲ್ಪಿಸುವ ಶಕ್ತಿ ಯೋಜನೆಗೆ ಚಾಲನೆ ನೀಡಲು ಸ್ವತಃ ಸಿಎಂ ಸಿದ್ದರಾಮಯ್ಯ ಕಂಡಕ್ಟರ್ ಆಗಲಿದ್ದಾರೆ.
ಜೂನ್ 11ರಂದು ರಾಜ್ಯಾದ್ಯಂತ ಶಕ್ತಿ ಯೋಜನೆಗೆ ಚಾಲನೆ ಸಿಗಲಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಯೋಜನೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ವಿಧಾನಸೌಧದ ಬಳಿ ಯೋಜನೆಗೆ ಚಾಲನೆ ನೀಡಿ ಸಿದ್ದರಾಮಯ್ಯ ಮಾತನಾಡಲಿದ್ದಾರೆ.
ಆದರೆ ಅದಕ್ಕೂ ಮುನ್ನ ಕೆಂಪೇಗೌಡ ಬಸ್ ನಿಲ್ದಾಣದಿಂದ(ಮೆಜೆಸ್ಟಿಕ್) ವಿಧಾನಸೌಧದವರೆಗೆ ಮಾರ್ಗ ಸಂಖ್ಯೆ 43ರಲ್ಲಿ ಸಿದ್ದರಾಮಯ್ಯ ಬಸ್‌ನಲ್ಲೇ ಚಲಿಸಲಿದ್ದಾರೆ. ಈ ವೇಳೆ ಉಚಿತ ಟಿಕೆಟ್‌ಗಳನ್ನು ಮಹಿಳೆಯರಿಗೆ ಸಿದ್ದರಾಮಯ್ಯ ನೀಡಲಿದ್ದಾರೆ. ಈ ರೀತಿ ವಿಧಾನಸೌಧದವರೆಗೂ ಕಂಡಕ್ಟರ್ ಆಗಿ ಕೆಲಸ ಮಾಡಲಿದ್ದಾರೆ.
ಡಿ.ಕೆ. ಶಿವಕುಮಾರ್ ಗೈರು
ಚುನಾವಣೆಗೂ ಮುನ್ನ ಕಾಂಗ್ರೆಸ್‌ನಿಂದ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅದನ್ನು ಪ್ರಚಾರ ಮಾಡಿದ್ದರಿಂದ ಪಕ್ಷ ಅಧಿಕಾರಕ್ಕೆ ಬಂದಿತ್ತು. ಕೆಪಿಸಿಸಿ ಅಧ್ಯಕ್ಷರಾಗಿ ಪ್ರಚಾರದ ನೇತೃತ್ವ ವಹಿಸಿದ್ದ, ಇದೀಗ ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಶಕ್ತಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ.
ಜೂನ್ 10 ಹಾಗೂ 11ರಂದು ಕುಟುಂಬ ಸಮೇತರಾಗಿ ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದರ್ಶನಕ್ಕೆ ಡಿ.ಕೆ. ಶಿವಕುಮಾರ್ ತೆರಳಲಿದ್ದಾರೆ. ಸರ್ಕಾರದ ಮಹತ್ವದ ಯೋಜನೆಗೆ ಚಾಲನೆ ನೀಡುವ ವೇಳೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಈ ಮೂಲಕ ಗೂರುಹಾಜರಾಗಲಿದ್ದಾರೆ.
ಇದನ್ನೂ ಓದಿ: Congress Guarantee: ʼಗೃಹಲಕ್ಷ್ಮಿʼಗೂ ಮಗನ ಐಟಿಗೂ ಸಂಬಂಧ ಇಲ್ಲ; ಉಲ್ಟಾ ಹೊಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಕ್ರಿಕೆಟ್
ICC World Cup 2023: ಏಕದಿನ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಗೆ ಮುಹೂರ್ತ ನಿಗದಿ
ಐಸಿಸಿ ಏಕದಿನ ವಿಶ್ವ ಕಪ್ ಟೂರ್ನಿಯ ವೇಳಾಪಟ್ಟಿ ಜೂನ್ 10, ಶನಿವಾರ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ.
ಲಂಡನ್: ಭಾರತದ ಆತಿಥ್ಯದಲ್ಲಿ ವರ್ಷಾಂತ್ಯದಲ್ಲಿ ನಡೆಯಲಿರುವ ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವ ಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ಐಸಿಸಿ ಮೂಲಗಳ ಪ್ರಕಾರ ಜೂನ್ 10 ಶನಿವಾರ ಟೂರ್ನಿಯ ವೇಳಾಪಟ್ಟಿ ಪ್ರಕಟಗೊಳ್ಳಲಿದೆ ಎಂದು ವರದಿಯಾಗಿದೆ.
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಲಂಡನ್ನಲ್ಲಿ ನಡೆಯುತ್ತಿದ್ದರು. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸುತ್ತಿದೆ. ಈ ಪಂದ್ಯ ವೀಕ್ಷಣೆಗೆ ಬಿಸಿಸಿಐ ಅಧಿಕಾರಿಗಳು ಮತ್ತು ಐಸಿಸಿ ಅಧಿಕಾರಿಗಳು ಲಂಡನ್ನಲ್ಲಿ ಸೇರಿದ್ದಾರೆ. ಇದೇ ವೇಳೆ ಸಭೆ ನಡೆಸಿ ಏಕದಿನ ಟೂರ್ನಿಯ ವೇಳಾಪಟ್ಟಿ ಮತ್ತು ತಾಣಗಳನ್ನು ಅಂತಿಮಗೊಳಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಶನಿವಾರ ಇದು ಅಧಿಕೃತ ಪ್ರಕಟನೆ ಮೂಲಕ ಹೊರಬೀಳಲಿದೆ ಎನ್ನಲಾಗಿದೆ. ಅಕ್ಟೋಬರ್ 5ರಿಂದ ನವೆಂಬರ್ 19ರ ವರೆಗೆ ಈ ಕ್ರೀಡಾಕೂಟ ನಡೆಯುವ ಸಾಧ್ಯತೆ ಇದೆ.
ಟೂರ್ನಿಗಾಗಿ ಕನಿಷ್ಠ 10ಕ್ಕೂ ಹೆಚ್ಚು ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರು, ಚೆನ್ನೈ, ದೆಹಲಿ, ಧರ್ಮಶಾಲಾ, ಗುವಾಹಟಿ, ಹೈದರಾಬಾದ್, ಕೋಲ್ಕೊತಾ, ಲಕ್ನೋ, ಇಂದೋರ್, ರಾಜ್‌ಕೋಟ್ ಮತ್ತು ಮುಂಬೈ ಈ ಪಟ್ಟಿಯಲ್ಲಿ ಸೇರಿವೆ ಎನ್ನಲಾಗಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ಚೆನ್ನೈನಲ್ಲಿ ನಡೆಯುವ ಸಾಧ್ಯತೆಯಿದೆ. ಪಾಕಿಸ್ತಾನದ ಹೆಚ್ಚಿನ ಪಂದ್ಯಗಳು ಬೆಂಗಳೂರು ಮತ್ತು ಚೆನ್ನೈನಲ್ಲಿ ನಡೆಯಲಿದೆ. ಬಾಂಗ್ಲಾದೇಶದ ಪಂದ್ಯಗಳು ಕೋಲ್ಕತ್ತಾ ಮತ್ತು ಗುವಾಹಟಿಯಲ್ಲಿ ನಡೆಯುವ ಸಾಧ್ಯತೆ ಇದೆ. ಭಾರತ ಮತ್ತು ಪಾಕಿಸ್ತಾನ ವಿರುದ್ಧದ ಪಂದ್ಯ ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ ಎಂದು ವರದಿಯಾಗಿತ್ತು. ಆದರೆ ಪಾಕಿಸ್ತಾನ ತಂಡ ಯಾವುದೇ ಕಾರಣಕ್ಕೂ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ಆಡುವುದಿಲ್ಲ ಎಂದು ಹೇಳಿದೆ. ಅಂತಿಮ ಪಟ್ಟಿ ಹೇಗೆ ಇರಲಿದೆ ಎಂದು ಶನಿವಾರ ಉತ್ತರ ಸಿಗುವ ಸಾಧ್ಯತೆ ಇದೆ.
ಇದನ್ನೂ ಓದಿ World Cup 2023: ಈ ಸ್ಟೇಡಿಯಂನಲ್ಲಿ ಪಾಕ್ ತಂಡ ಭಾರತ ವಿರುದ್ಧ ವಿಶ್ವ ಕಪ್ ಆಡಲ್ಲವಂತೆ!
48 ಪಂದ್ಯಗಳು
ಒಟ್ಟು ಹತ್ತು ತಂಡಗಳನ್ನು ಎರಡು ಗುಂಪುಗಳಾಗಿ ಆಡಿಸಲಾಗುತ್ತದೆ. ಹೀಗಾಗಿ 46 ದಿನಗಳಲ್ಲಿ 48 ಪಂದ್ಯಗಳು ನಡೆಯಲಿವೆ. ಅಕ್ಟೋಬರ್-ನವೆಂಬರ್ನಲ್ಲಿ ಕೆಲ ಪ್ರದೇಶಗಳಲ್ಲಿ ಹಿಂಗಾರು ಮಳೆ ಸಾಧ್ಯತೆ ಇರುವುದರಿಂದ ಅಭ್ಯಾಸ ನಡೆಸುವ ತಾಣಗಳನ್ನು ಬಿಸಿಸಿಐ ಶಿಘ್ರದಲ್ಲೇ ಪ್ರಕಟಿಸಲಿದೆ ಎಂದು ವರದಿ ಮಾಡಿದೆ.
-
ಸುವಚನ13 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ19 hours ago
ವಿಸ್ತಾರ ಸಂಪಾದಕೀಯ: ಇಂದಿರಾ ಗಾಂಧಿ ಹತ್ಯೆಯ ಸಂಭ್ರಮ; ಕೆನಡಾದಲ್ಲಿ ಖಲಿಸ್ತಾನಿಗಳ ಉದ್ಧಟತನ ಖಂಡನೀಯ
-
South Cinema23 hours ago
Kannada New Movie: ಹಿಮಾಲಯದ ಕೊರೆಯುವ ಚಳಿಯಲ್ಲಿ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಶೂಟಿಂಗ್!
-
South Cinema23 hours ago
Nandamuri Balakrishna: ‘ಐ ಡೋಂಟ್ ಕೇರ್ʼ ಎಂದು ಮಾಸ್ ಅವತಾರವೆತ್ತ ನಂದಮೂರಿ ಬಾಲಕೃಷ್ಣ; ಟೈಟಲ್ ರಿವೀಲ್!
-
ದೇಶ18 hours ago
ಬದುಕುಳಿಯಲಿಲ್ಲ ಬೋರ್ವೆಲ್ಗೆ ಬಿದ್ದ ಕಂದಮ್ಮ; ಸಾವಿನ ವಿರುದ್ಧ 50 ಗಂಟೆ ಹೋರಾಟದಲ್ಲಿ ಗೆದ್ದಿದ್ದು ವಿಧಿ
-
ದೇಶ21 hours ago
ಸಹಕಾರಿ ಬ್ಯಾಂಕ್ಗಳು ಕೂಡ ಸುಸ್ತಿದಾರರ ಜತೆ ರಾಜಿ, ಸಾಲ ರೈಟ್-ಆಫ್ ಮಾಡಬಹುದು; ಆರ್ಬಿಐ ಮಹತ್ವದ ಘೋಷಣೆ
-
ಕರ್ನಾಟಕ22 hours ago
Fraud Case: ಬೆಳದಿಂಗಳ ಬಾಲೆ ಪ್ರಕರಣಕ್ಕೆ ಟ್ವಿಸ್ಟ್; ಸ್ವಾಮೀಜಿ ವಂಚನೆ ಕೇಸಲ್ಲಿ ಎ2 ಆರೋಪಿ ಈಗ ಎ1!
-
ದೇಶ10 hours ago
Miss World- 2023: 27 ವರ್ಷಗಳ ಬಳಿಕ ಭಾರತಕ್ಕೆ ಬರುತ್ತಿರುವ ʼಮಿಸ್ ವರ್ಲ್ಡ್ʼ