ಪ್ರಮುಖ ಸುದ್ದಿ
Horoscope Today : ಇಂದು ಉದ್ಯೋಗಿಗಳಿಗೆ ಒತ್ತಡದ ದಿನ; ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ
ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ತ್ರಯೋದಶಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಇಂದಿನ ಪಂಚಾಂಗ (03-05-2023)
ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ.
ತಿಥಿ: ತ್ರಯೋದಶಿ 23:49 ವಾರ: ಬುಧವಾರ
ನಕ್ಷತ್ರ: ಹಸ್ತ 20:55 ಯೋಗ: ಹರ್ಷಣ 11:25
ಕರಣ: ಕೌಲವ 11:37 ಇಂದಿನ ವಿಶೇಷ: ಪಕ್ಷ ಪ್ರದೋಷ, ವಿಶ್ವ ಪತ್ರಿಕಾಸ್ವಾತಂತ್ರ್ಯ ದಿನ.
ಅಮೃತಕಾಲ: ಮಧ್ಯಾಹ್ನ 02 ಗಂಟೆ 38 ನಿಮಿಷದಿಂದ ಸಂಜೆ 04 ಗಂಟೆ 19 ನಿಮಿಷದವರೆಗೆ.
ಸೂರ್ಯೋದಯ : 05:58 ಸೂರ್ಯಾಸ್ತ :06:35
ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00
ದ್ವಾದಶ ರಾಶಿ ಭವಿಷ್ಯ (Horoscope Today)
ಮೇಷ: ಮಾನಸಿಕವಾಗಿ ಇಂದು ಬಳಲುವ ಸಾಧ್ಯತೆ. ಅನಿವಾರ್ಯ ಕಾರಣಗಳಿಂದ ಪ್ರಯಾಣ ಮಾಡುವ ಸಾಧ್ಯತೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಸಂಗಾತಿಯಿಂದ ಸಲಹೆ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2
ವೃಷಭ: ಭರವಸೆಯಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಇಂದು ಮಾಡಿದ ಹೂಡಿಕೆ ನಿಮ್ಮ ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ. ಇದಕ್ಕೆ ಪೂರಕವೆಂಬಂತೆ ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ. ಉದ್ಯೋಗದ ಸ್ಥಳದಲ್ಲಿ ಒತ್ತಡವಿದ್ದರೂ ಸಮರ್ಥವಾಗಿ ನಿಭಾಯಿಸುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಮಿಥುನ: ಭರವಸೆಯ ಹೊಸ ಬೆಳಕು ನಿಮ್ಮ ಬಾಳಿನಲ್ಲಿ ಮೂಡಲಿದೆ. ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯ ಪರಿಪೂರ್ಣ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ. ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಲಾಭ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ಕಟಕ: ನಿಮ್ಮ ಆಕರ್ಷಕ ವ್ಯಕ್ತಿತ್ವ ಇತರರನ್ನು ಆಕರ್ಷಿಸಲಿದೆ. ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆ ಎಚ್ಚರ ವಹಿಸಿ. ಉದ್ಯೋಗಕ್ಕಾಗಿ ಕೈಗೊಂಡ ಪ್ರಯಾಣ ಫಲಪ್ರದವಾಗಬಹುದು. ದೈಹಿಕವಾಗಿ ಆಯಾಸವಾಗುವ ಸಾಧ್ಯತೆ. ಆದಷ್ಟು ಸೃಜನಾತ್ಮಕವಾಗಿ ಕಾರ್ಯವನ್ನು ಮಾಡುವುದು ಒಳಿತು. ಅನಿವಾರ್ಯ ಕಾರಣಗಳಿಂದ ಖರ್ಚು. ಉದ್ಯೋಗಿಗಳಿಗೆ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3
ಸಿಂಹ: ವಾಹನ ಚಾಲನೆ ಮಾಡುವಾಗ ಆದಷ್ಟು ಎಚ್ಚರ ವಹಿಸಿ. ಕಳೆದ ದಿನಗಳಿಗೆ ಹೋಲಿಸಿದರೆ ಇಂದು ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಒಂದು ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುವುದರಿಂದ ಅಥವಾ ಆಧ್ಯಾತ್ಮಿಕ ವ್ಯಕ್ತಿಗಳ ಸಂಪರ್ಕದಿಂದಾಗಿ ಮನಸ್ಸಿಗೆ ಸಮಾಧಾನ. ನಿಮ್ಮಲ್ಲಿ ಸಕಾರಾತ್ಮಕ ಬದಲಾವಣೆ ಆಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಎಲ್ಲಿಲ್ಲದ ಪ್ರೋತ್ಸಾಹ ,ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಕನ್ಯಾ: ಕೆಲವು ಘಟನೆಗಳಿಂದಾಗಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಬಳಲುವ ಸಾಧ್ಯತೆ. ನಕಾರಾತ್ಮಕ ಆಲೋಚನೆಗಳನ್ನು ಮಾಡದಿರಿ. ಹಣಕಾಸು ಆಡಚಣೆಗಳು ನಿವಾರಣೆ ಆಗಲಿವೆ. ಉದ್ಯೋಗಿಗಳಿಗೆ ಸಹೋದ್ಯೋಗಿಗಳಿಂದ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಕೆಲವು ಅನುಮಾನಗಳು ಮನೆಯ ವಾತಾವರಣವನ್ನು ವಿಷಮ ಸ್ಥಿತಿಗೆ ತಳ್ಳುವ ಸಾಧ್ಯತೆ. ಆದಷ್ಟು ಸಮಾಧಾನ ಚಿತ್ತರಾಗಿ ಆಲೋಚಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಾವಶ್ಯಕ ಖರ್ಚುಗಳಿಂದಾಗಿ ಮನಸ್ಸಿನ ಹತೋಟಿಯನ್ನು ಕಳೆದುಕೊಳ್ಳುವ ಸಾಧ್ಯತೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ತಕ್ಕಮಟ್ಟಿಗೆ ಲಾಭ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2
ವೃಶ್ಚಿಕ: ಅನಿವಾರ್ಯ ಕಾರಣಗಳಿಂದ ಒತ್ತಡ ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ. ಕುಟುಂಬದ ಸದಸ್ಯರ ವರ್ತನೆ ನಿಮಗೆ ಮುಜುಗರ ಉಂಟುಮಾಡುವ ಸಾಧ್ಯತೆ. ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಬಹಳ ದಿನಗಳಿಂದ ದ್ವೇಷಿಸುತ್ತಿರುವ ವ್ಯಕ್ತಿಗಳು ಇಂದು ನಿಮ್ಮ ಸಂಪರ್ಕಕ್ಕೆ ಬರಬಹುದು. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಧನಸ್ಸು: ಆರ್ಥಿಕ ಭಾಗವು ಬಲಗೊಳ್ಳುವ ಪೂರ್ಣ ಸಾಧ್ಯತೆ ಇದೆ. ನೀವು ಯಾವುದೇ ವ್ಯಕ್ತಿಗೆ ಸಾಲ ನೀಡಿದ್ದರೆ, ಇಂದು ನೀವು ಆ ಹಣವನ್ನು ಮರಳಿ ಪಡೆಯುವ ನಿರೀಕ್ಷೆಯಿದೆ. ಆರೋಗ್ಯ ಪರಿಪೂರ್ಣ ವಾಗಿರಲಿದೆ. ಉದ್ಯೋಗಿಗಳಿಗೆ ಇಂದು ಭರವಸೆಯ ಹೊಸ ಅವಕಾಶಗಳು ಸಿಗಲಿವೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಮಕರ: ತುಂಬಾ ಚಿಂತೆ ಮತ್ತು ಒತ್ತಡ ನಿಮ್ಮ ಆರೋಗ್ಯವನ್ನು ನಾಶಮಾಡಬಹುದು. ನೀವು ಮಾನಸಿಕವಾಗಿ ಸ್ಪಷ್ಟತೆಯನ್ನು ಕಾಯ್ದುಕೊಳ್ಳಲು ಗೊಂದಲಗಳನ್ನು ದೂರವಿಡಬೇಕು. ಅನಿವಾರ್ಯ ಕಾರಣಗಳಿಂದ ಖರ್ಚು ಸಾಧ್ಯತೆ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ಕುಂಭ: ಸಾಧ್ಯವಾದರೆ ದೀರ್ಘ ಪ್ರಯಾಣವನ್ನು ತಪ್ಪಿಸಿ. ದೈಹಿಕವಾಗಿ ಮತ್ತು ಆರ್ಥಿಕವಾಗಿ ಬಳಲುವ ಸಾಧ್ಯತೆ. ವಿಶೇಷವಾಗಿ ಕೆಲಸದ ಸ್ಥಳದಲ್ಲಿ ಉದ್ಭವಿಸುವ ಆಕ್ಷೇಪಣೆಗಳಿಗೆ ವಿವೇಚನಾಯುಕ್ತರಾಗಿ ಮತ್ತು ಧೈರ್ಯಶಾಲಿಗಳಾಗಿ ಪ್ರತಿಕ್ರಿಯೆ ನೀಡಿ. ನಿಮ್ಮ ವಿರುದ್ಧ ಪಿತೂರಿ ನಡೆಯುವ ಸಾಧ್ಯತೆ. ಕೌಟುಂಬಿಕವಾಗಿ ಶುಭ.
ಅದೃಷ್ಟ ಸಂಖ್ಯೆ: 7
ಮೀನ: ಇಂದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿ ಬೆಳೆಸಿಕೊಳ್ಳಲು ಒಳ್ಳೆಯ ದಿನವಾಗಲಿದೆ. ದೀರ್ಘ ಕಾಲದಿಂದ ಬಾಕಿಯಿದ್ದ ಕೆಲಸಗಳು ಪೂರ್ಣವಾಗಲಿವೆ. ಸಂಬಂಧಿಕರು ಮತ್ತು ಸ್ನೇಹಿತರಿಂದ ಅನಿರೀಕ್ಷಿತ ಉಡುಗೊರೆಗಳು ದೊರೆಯುವ ಸಾಧ್ಯತೆ. ಯಾವುದೇ ಪಾಲುದಾರಿಕೆಗೆ ಒಪ್ಪುವ ಮೊದಲು ಆಲೋಚಿಸಿ ಹೆಜ್ಜೆ ಹಾಕಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿರೀಕ್ಷಿತ ಲಾಭ ದೊರೆಯಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | [email protected]
ಇದನ್ನೂ ಓದಿ : ಬಹುತೇಕ ಶುಭಫಲಗಳನ್ನೇ ನೀಡುವ ಬುಧನ ಭಾವಫಲಗಳು ಹೀಗಿವೆ
ದೇಶ
NITI Aayog Meeting: ವಿಕಸಿತ ಭಾರತದ ಕನಸು ಬಿತ್ತಿದ ಮೋದಿ; 11 ಸಿಎಂಗಳು ಗೈರಾದರೂ ಪ್ರಧಾನಿ ಅಭಿವೃದ್ಧಿ ಮಂತ್ರ
NITI Aayog Meeting: ಮುಖ್ಯಮಂತ್ರಿಗಳ ಗೈರು ಹಾಜರಿಯ ಮಧ್ಯೆಯೇ ನೀತಿ ಆಯೋಗದ ಸಭೆಯಲ್ಲಿ ನರೇಂದ್ರ ಮೋದಿ ಅವರು ಅಭಿವೃದ್ಧಿಯ ಮಂತ್ರ ಪಠಿಸಿದರು. ವಿಕಸಿತ ಭಾರತದ ಕನಸು ಬಿತ್ತಿದರು.
ನವದೆಹಲಿ: ನೀತಿ ಆಯೋಗದ ಎಂಟನೇ ಗವರ್ನಿಂಗ್ ಸಮಿತಿ ಸಭೆ ನಡೆದಿದ್ದು, 11 ಮುಖ್ಯಮಂತ್ರಿಗಳು ಗೈರಾಗಿದ್ದಾರೆ. ಉಳಿದ ಸಿಎಂಗಳು ಹಾಜರಾಗಿದ್ದು, ಇದೇ ವೇಳೆ ನರೇಂದ್ರ ಮೋದಿ ಅವರು 2047ರ ವೇಳೆಗೆ ಭಾರತದ ಅಭಿವೃದ್ಧಿಯ ನಕ್ಷೆ ಹಾಕಿದ್ದಾರೆ. “ಎಲ್ಲರೂ ಒಗ್ಗೂಡಿ ವಿಕಸಿತ ಭಾರತದ (ಅಭಿವೃದ್ಧಿ ಹೊಂದಿದ ಭಾರತ) ಕನಸು ನನಸು ಮಾಡೋಣ” ಎಂದು ಹೇಳಿದ್ದಾರೆ.
“ಭಾರತವು ಏಳಿಗೆ ಹೊಂದುತ್ತಿದ್ದು, ಸರ್ವ ಕ್ಷೇತ್ರಗಳಲ್ಲಿ ನಾವು ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಒಕ್ಕೂಟದ ವ್ಯವಸ್ಥೆಯ ಬೇರುಗಳು ಇನ್ನಷ್ಟು ಬಲವಾಗಬೇಕು. ದೇಶದ ಜನರಿಗೆ ಸಕಲ ಮೂಲ ಸೌಕರ್ಯಗಳು ಸಿಗುವಂತಾಗಬೇಕು. ಜಲ ಸಂರಕ್ಷಣೆ, ಪರಿಸರ ರಕ್ಷಣೆ, ಆರ್ಥಿಕ ಶಿಸ್ತಿನಲ್ಲಿ ನಾವು ಇನ್ನಷ್ಟು ನೈಪುಣ್ಯ ಸಾಧಿಸಬೇಕು. ಜಾಗತಿಕ ಮಟ್ಟದ ಸ್ಪರ್ಧೆಗೆ ನಾವು ಇನ್ನಷ್ಟು ಮುಕ್ತವಾಗಬೇಕು. ಸಣ್ಣ ಕೈಗಾರಿಕೆಗಳು, ಎಂಎಸ್‌ಎಂಇಗಳ ಏಳಿಗೆಯಾಗಬೇಕು. ಇದರಿಂದ ಮಾತ್ರ ಭಾರತ ಏಳಿಗೆ ಹೊಂದಲು ಸಾಧ್ಯ. ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಇಂತಹ ಮನೋಭಾವದೊಂದಿಗೆ 2047ರ ವೇಳೆಗೆ ವಿಕಸಿತ ಭಾರತದ ನಿರ್ಮಾಣ ಮಾಡಬೇಕು” ಎಂದು ಕರೆ ನೀಡಿದರು.
ನೀತಿ ಆಯೋಗದ ಸಭೆಯಲ್ಲಿ ದೇಶದ ಅಭಿವೃದ್ಧಿಯ ದೃಷ್ಟಿಯಿಂದ 100 ವಿಚಾರಗಳನ್ನು ಪ್ರಸ್ತಾಪಿಸಲಾಗಿದೆ. ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್‌ಗಳು, ಕೇಂದ್ರ ಸಚಿವರು ಸಭೆಯಲ್ಲಿ ಭಾಗವಹಿಸಿ ಅಭಿವೃದ್ಧಿ ವಿಚಾರಗಳನ್ನು ಚರ್ಚಿಸಲಾಗಿದೆ. ಎಂಎಸ್‌ಎಂಇ, ಮೂಲ ಸೌಕರ್ಯ, ಹೂಡಿಕೆ, ಮಹಿಳಾ ಸಬಲೀಕರಣ, ಆರೋಗ್ಯ, ಕೌಶಲಾಭಿವೃದ್ಧಿ ಸೇರಿ ವಿವಿಧ ವಿಷಯಗಳನ್ನು ಪ್ರಸ್ತಾಪಿಸಲಾಗಿದೆ.
#8thGCM | The Centre, States & UTs should work as Team 🇮🇳 & fulfil people's dreams & aspirations for a #VikasitBharat @ 2047. #NITIAayog can play a key role in helping them take a quantum leap towards achieving its vision of #AmritKaal: PM @narendramodi
— NITI Aayog (@NITIAayog) May 27, 2023
🔗https://t.co/2g1j5ywKZu pic.twitter.com/9EIJu9SebJ
ಗೈರಾದ ಸಿಎಂಗಳು ಯಾರು? ಏಕೆ?
ದೆಹಲಿಯಲ್ಲಿ ಆಡಳಿತ ಸೇವೆಗಳ ಮೇಲಿನ ನಿಯಂತ್ರಣ ಕುರಿತು ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ತಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಭೆಗೆ ಹಾಜರಾಗಿಲ್ಲ. ಇನ್ನು, ಕೇಂದ್ರದಿಂದ ಅನುದಾನ ಸಿಗುತ್ತಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರು ಕೂಡ ಗೈರಾಗಿದ್ದಾರೆ. ಕರ್ನಾಟಕದಲ್ಲಿ ಸಚಿವರ ಪ್ರಮಾಣವಚನ, ಖಾತೆ ಹಂಚಿಕೆ ಹಿನ್ನೆಲೆಯಲ್ಲಿ ನೂತನ ಸಿಎಂ ಸಿದ್ದರಾಮಯ್ಯ, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರು ಸಭೆಯಲ್ಲಿ ಪಾಲ್ಗೊಂಡಿಲ್ಲ.
ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಬೇರೆ ಕಾರ್ಯಕ್ರಮದಿಂದಾಗಿ ಒಡಿಶಾ ಸಿಎಂ ನವೀನ್ ಪಾಟ್ನಾಯಕ್, ಕೇಂದ್ರದ ಮೇಲಿನ ಅಸಮಾಧಾನದಿಂದಾಗಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಬಿಹಾರದ ನಿತೀಶ್ ಕುಮಾರ್, ತೆಲಂಗಾಣದ ಕೆ.ಚಂದ್ರಶೇಖರ ರಾವ್ ಹಾಗೂ ಯಾವುದೇ ಕಾರಣ ನೀಡದೆ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಸಭೆಯಲ್ಲಿ ಪಾಲ್ಗೊಂಡಿಲ್ಲ.
ಇದನ್ನೂ ಓದಿ: NITI Aayog Meeting: ಕೇಂದ್ರಕ್ಕೆ ಬಾಯ್ಕಾಟ್ ಬಿಸಿ; ದೀದಿ ಬಳಿಕ ನೀತಿ ಆಯೋಗದ ಸಭೆ ಬಹಿಷ್ಕರಿಸಿದ ಕೇಜ್ರಿವಾಲ್
ಪ್ರಮುಖ ಸುದ್ದಿ
ವಿಸ್ತಾರ ಸಂಪಾದಕೀಯ: ನೂತನ ಸಂಸತ್ ಕಟ್ಟಡ ಪ್ರಜಾತಂತ್ರವನ್ನು ಮತ್ತಷ್ಟು ಮೆರೆಸಲಿ
ನೂತನ ಹಾಗೂ ಸುಸಜ್ಜಿತ ಸಂಸತ್ ಭವನ ನಮ್ಮ ಈಗಿನ ಹಾಗೂ ಭವಿಷ್ಯದ ಅಗತ್ಯ. ಮುಂದೆ ಅದೇ ಭಾರತದ ಪ್ರಜಾತಂತ್ರದ ಭವ್ಯ ಲಾಂಛನವೂ ಆಗಿರಲಿದೆ.
ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಸ್ಪೀಕರ್ ಓಂ ಬಿರ್ಲಾ ಭಾನುವಾರ ಉದ್ಘಾಟಿಸಲಿದ್ದಾರೆ. ಬದಲಾದ ಕಾಲಮಾನಕ್ಕೆ ತಕ್ಕಂತೆ ನೂತನ ಸಂಸತ್ ಭವನ ನಿರ್ಮಾಣ ಅಗತ್ಯವಾಗಿತ್ತು. ಈಗ ಬಳಕೆಯಾಗುತ್ತಿರುವ ಸಂಸತ್ ಭವನ ಶತಮಾನವನ್ನು ಸಮೀಪಿಸುತ್ತಿದ್ದು, ಅದರ ಗರಿಷ್ಠ ಬಳಕೆಯಾಗಿದೆ. ಮುಂದೆ ಸಂಸತ್ ಸದಸ್ಯರ ಸಂಖ್ಯೆ ಕೂಡ ಹೆಚ್ಚಾಗಲಿರುವುದರಿಂದ ಆಸನಗಳ ಸಂಖ್ಯೆಯೂ ಹೆಚ್ಚಿಸುವುದು ಅವಶ್ಯವಾಗಿತ್ತು. ಹಿಂದಿನ ಸಂಸತ್ ಭವನದಲ್ಲಿ ಲೋಕಸಭೆಯ ಆಸನಗಳ ಸಂಖ್ಯೆ 550 ಇದ್ದರೆ, ಹೊಸ ಕಟ್ಟಡದಲ್ಲಿ ಈ ಸಂಖ್ಯೆ 888ಕ್ಕೆ ಏರುತ್ತದೆ. ರಾಜ್ಯಸಭೆಯ ಆಸನಗಳ ಸಂಖ್ಯೆ 250ರಿಂದ 384ಕ್ಕೆ ಏರುತ್ತದೆ. ಪ್ರಾಕೃತಿಕ ಮತ್ತು ಭದ್ರತೆಯ ದೃಷ್ಟಿಯಿಂದ ಈಗಿನ ಕಟ್ಟಡ ಹಿಂದಿನ ಕಟ್ಟಡಕ್ಕಿಂತ ಹೆಚ್ಚು ಸುರಕ್ಷಿತವಾಗಿದೆ.
ಹಿಂದಿನ ಕಟ್ಟಡ ವಿಸ್ತೀರ್ಣ 24,281 ಚ.ಮೀ. ಇದ್ದರೆ, ಈಗಿನ ಕಟ್ಟಡ ವಿಸ್ತೀರ್ಣ 64,500 ಚ.ಮೀ ಇದೆ. ಪ್ರಜಾತಂತ್ರದ ದೇಗುಲ ಎನ್ನಲಾಗುವ ನೂತನ ಕಟ್ಟಡದ ಪಕ್ಷಿನೋಟವೇ ಅದ್ಭುತವಾಗಿದೆ. 971 ಕೋಟಿ ರೂ. ವೆಚ್ಚದ ಈ ಭವ್ಯ ಕಟ್ಟಡ ಕೇವಲ ಎರಡೇ ವರ್ಷದೊಳಗೆ ನಿರ್ಮಾಣ ಆಗಿರುವುದು ಅದ್ಭುತವೇ ಸರಿ. ಆಧುನಿಕ ತಂತ್ರಜ್ಞಾನವನ್ನೂ ಕಲಾಪಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬಳಸಲು ಇಲ್ಲಿ ಅವಕಾಶ ಕಲ್ಪಿಸಲಾಗಿದೆ. ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು 60,000 ಕಾರ್ಮಿಕರನ್ನು ಸನ್ಮಾನಿಸಲಿರುವುದು ಕೂಡ ಅರ್ಥಪೂರ್ಣವಾಗಿದೆ. ಕ್ರಿ.ಶ. 3ನೇ ಶತಮಾನದಲ್ಲಿ ಆಳ್ವಿಕೆ ನಡೆಸಿದ್ದ ಚೋಳ ರಾಜರು ಬಳಸಿದ್ದ ಚಿನ್ನದ ಸೆಂಗೋಲ್ (ರಾಜದಂಡ) ಅನ್ನು ನೂತನ ಸಂಸತ್ ಭವನದಲ್ಲಿ ಭಾರತದ ಸ್ವಾತಂತ್ರ್ಯದ ಪ್ರತೀಕವಾಗಿ ಇರಿಸುತ್ತಿರುವುದು ಕೂಡ ಭಾರತೀಯ ಪರಂಪರೆಗೆ ನೀಡುತ್ತಿರುವ ಮಹತ್ವದ ಅಂಶ.
ಪ್ರತಿಯೊಂದು ರಾಷ್ಟ್ರವೂ ತನ್ನದೇ ಆದ ಮಹತ್ತು, ಭವ್ಯತೆಗಳನ್ನು ಹೊಂದಿರುವ ವಾಸ್ತುಶಿಲ್ಪಗಳನ್ನು ಸೃಷ್ಟಿಸುತ್ತದೆ. ಭಾರತದ ಹಳೆಯ ಸಂಸತ್ತು ಕೂಡ ಭವ್ಯವಾದುದು; ಆದರೆ ಅದು ಬ್ರಿಟಿಷರಿಂದ ನಿರ್ಮಿತವಾದುದು. ಬ್ರಿಟಿಷರಿಂದ ನಿರ್ಮಿತ ಎಂಬ ಕಾರಣಕ್ಕೇ ತ್ಯಾಜ್ಯವಾಗಬೇಕಿಲ್ಲ. ಆದರೆ, ನಮ್ಮನ್ನು ಆಳುವ ಸ್ವಾತಂತ್ರ್ಯ ಹಾಗೂ ಅಧಿಕಾರಗಳನ್ನು ನಾವೇ ಪಡೆದುಕೊಂಡಂತೆ, ಹಾಗೆ ಆಳುವ ಸರ್ಕಾರ ಕಾರ್ಯಾಚರಿಸುವ ಸಂಸತ್ ಭವನ ಕೂಡ ನಮ್ಮ ನಿರ್ಮಾಣವೇ ಆಗಿರಬೇಕು ಎಂಬ ಕನಸು ನಮಗಿರುವುದೂ ಸಹಜ. ನೂತನ ಹಾಗೂ ಸುಸಜ್ಜಿತ ಸಂಸತ್ ಭವನ ನಮ್ಮ ಈಗಿನ ಹಾಗೂ ಭವಿಷ್ಯದ ಅಗತ್ಯ. ಮುಂದೆ ಅದೇ ಭಾರತದ ಪ್ರಜಾತಂತ್ರದ ಭವ್ಯ ಲಾಂಛನವೂ ಆಗಿರಲಿದೆ.
ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ರಾಜ್ಯಾದ್ಯಂತ ಗ್ಯಾರಂಟಿ ಭರವಸೆಯ ಗದ್ದಲ, ಹೊಸ ಸರ್ಕಾರ ಗೊಂದಲ ನಿವಾರಿಸಲಿ
ಈ ಮಧ್ಯೆ, ಉದ್ಘಾಟನೆ ಸಮಾರಂಭಕ್ಕೆ ಕೆಲವು ಪ್ರತಿಪಕ್ಷಗಳು ಬಹಿಷ್ಕಾರ ಹಾಕಿವೆ. ಲೋಕಸಭೆ- ರಾಜ್ಯಸಭೆ ನಡೆಯುತ್ತಿರುವಾಗ ನೆಪ ತೆಗೆದು ಮಾಡುವ ಸಭಾತ್ಯಾಗವೇ ಸಮಂಜಸವಲ್ಲ ಎಂದಾಗ, ದೇಶದ ಹೆಮ್ಮೆಯಾದ ನೂತನ ಸಂಸತ್ ಭವನದ ಉದ್ಘಾಟನೆಯನ್ನೇ ಬಹಿಷ್ಕರಿಸುವ ನಡೆ ಎಷ್ಟು ಸರಿ? ಇದು ಪ್ರಜಾಪ್ರಭುತ್ವದ ನೈಜ ಚೈತನ್ಯಕ್ಕೇ ಕೊಡಲಿಯೇಟು. ಪ್ರಧಾನಿ ಮೋದಿ, ನೂರ ಮೂವತ್ತು ಕೋಟಿ ಪ್ರಜೆಗಳ ಪ್ರತಿನಿಧಿಯಾಗಿ ಸಂಸತ್ತನ್ನು ಉದ್ಘಾಟಿಸುತ್ತಿದ್ದಾರೆ. ಇನ್ನೂ ನೂರಾರು ವರ್ಷಗಳ ಕಾಲ ಇದು ಅರ್ಥಪೂರ್ಣ ಕಲಾಪಗಳ ತಾಣವಾಗಬೇಕಿದೆ. ರಾಷ್ಟ್ರದ ವಿವೇಕಯುತ ಮುನ್ನಡೆಯನ್ನು ನಿರ್ಣಯಿಸುವ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಳವಾಗಿರಲಿದೆ. ಈ ನಿಟ್ಟಿನಲ್ಲಿ ಪ್ರತಿಪಕ್ಷಗಳು ತಮ್ಮ ನಿರ್ಧಾರ ಮರುಪರಿಶೀಲಿಸಿ ಸಮಾರಂಭದಲ್ಲಿ ಭಾಗವಹಿಸುವುದು ವಿವೇಕಯುತವಾಗಿರುತ್ತದೆ. ಅವರ ಸಮಾರಂಭ ಬಹಿಷ್ಕಾರದ ಕರೆಯ ನಡುವೆಯೂ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮುಂತಾದ ಪ್ರತಿಪಕ್ಷಗಳ ನಾಯಕರು ಭಾಗವಹಿಸುತ್ತಿರುವುದು ವಿವೇಕದ ನಿರ್ಧಾರ. ಅವರ ಈ ನಡೆ ಇತರರಿಗೆ ಮಾದರಿಯಾಗಲಿ. ನೂತನ ಸಂಸತ್ ಭವನ ಭಾರತದ ಪ್ರಜಾತಂತ್ರವನ್ನು ಮತ್ತಷ್ಟು ಮೆರೆಸಲಿ.
ದೇಶ
New Parliament Building: ಸೆಂಗೋಲ್ ಎಂಬ ರಾಜದಂಡ ಸ್ವಾತಂತ್ರ್ಯದ ಸಂಕೇತ; ಪ್ರತಿಷ್ಠಾಪನೆಗೆ ಕಾರಣ ತಿಳಿಸಿದ ಮೋದಿ
New Parliament Building: ನೂತನ ಸಂಸತ್ ಭವನದಲ್ಲಿರುವ ಸ್ಪೀಕರ್ ಪೀಠದ ಬಳಿ ಚೋಳರ ಕಾಲದ ಸೆಂಗೋಲ್ಅನ್ನು ಪ್ರತಿಷ್ಠಾಪಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಇದುವರೆಗೆ ಮ್ಯೂಸಿಯಂನಲ್ಲಿದ್ದ ಸೆಂಗೋಲ್‌ಅನ್ನು ನೂತನ ಸಂಸತ್‌ನಲ್ಲಿ ಪ್ರತಿಷ್ಠಾಪಿಸಲಾಗುತ್ತಿದೆ.
ನವದೆಹಲಿ: ತಮಿಳುನಾಡಿನ ಧರ್ಮಾಪುರಂ ಹಾಗೂ ತಿರುವಾವದುತುರೈಂನ ಶೈವ ಪರಂಪರೆಯ ಅಧೀನಾಮ್ ಮಠದ ಸ್ವಾಮೀಜಿಗಳು ನರೇಂದ್ರ ಮೋದಿ ಅವರ ನಿವಾಸದಲ್ಲಿ ಸೆಂಗೋಲ್‌ಅನ್ನು (ರಾಜದಂಡ) ಅವರಿಗೆ ಹಸ್ತಾಂತರಿಸಿದ್ದಾರೆ. ಇದಾದ ಬಳಿಕ ಮಾತನಾಡಿದ ನರೇಂದ್ರ ಮೋದಿ, “ಸೆಂಗೋಲ್ ಎಂಬುದು ಕೇವಲ ಧರ್ಮದಂಡವಲ್ಲ. ಇದು ಸ್ವಾತಂತ್ರ್ಯದ ಸಂಕೇತ, ಗುಲಾಮಗಿರಿಯನ್ನು ಅಂತ್ಯಗೊಳಿಸಿದ ಸಂಕೇತ” ಎಂದು ಹೇಳಿದರು.
“ದೇಶಕ್ಕೆ ಸ್ವಾತಂತ್ರ್ಯ ಸಿಗುವ ಸಂದರ್ಭ ಬಂದಾಗ, ಅಧಿಕಾರದ ಹಸ್ತಾಂತರದ ಪ್ರತೀಕವಾಗಿ ಸೆಂಗೋಲ್‌ಅನ್ನು ಬಳಸಲಾಯಿತು. ತಮಿಳು ಪರಂಪರೆಯಲ್ಲಿ ಅಧಿಕಾರ ಹಸ್ತಾಂತರದ ಸಂಕೇತವಾಗಿ ಸೆಂಗೋಲ್‌ಅನ್ನು ನೀಡಲಾಗುತ್ತದೆ. ಹಾಗೆಯೇ, ರಾಜಧರ್ಮ ಪಾಲನೆಯ ಜವಾಬ್ದಾರಿಯನ್ನೂ ಸೆಂಗೋಲ್ ತಿಳಿಸುತ್ತದೆ. 1947ರಲ್ಲಿ ಅಧಿಕಾರದ ಹಸ್ತಾಂತರದ ವೇಳೆ ಸೆಂಗೋಲ್‌ಅನ್ನು ನೀಡಿದ್ದು ಗುಲಾಮಗಿರಿಯ ಅಂತ್ಯದ ಸಂಕೇತವಾಗಿತ್ತು” ಎಂದು ಹೇಳಿದರು.
ಸೆಂಗೋಲ್ ಕುರಿತು ಮೋದಿ ಭಾಷಣದ ವಿಡಿಯೊ
“ಇಂತಹ ರಾಜದಂಡವನ್ನು ನಾವು ಸಂಸತ್ತಿನಲ್ಲಿ ಪ್ರತಿಷ್ಠಾಪಿಸುತ್ತಿದ್ದೇವೆ. ದೇಶದ ಜನರ ಏಳಿಗೆ, ರಾಜಧರ್ಮವನ್ನು ಪಾಲಿಸುವುದರ ದ್ಯೋತಕವಾಗಿ ಸಂಸತ್ತಿನಲ್ಲಿ ಪ್ರತಿಷ್ಠಾಪಿಸಲಾಗುತ್ತಿದೆ. ಆದರೆ, ರಾಜದಂಡವನ್ನು ಪ್ರಯಾಗರಾಜ್‌ನ ಮ್ಯೂಸಿಯಂನಲ್ಲಿ ಇರಿಸಲಾಗಿತ್ತು. ಆನಂದ ಭವನದಲ್ಲಿ ವಾಕಿಂಗ್ ಸ್ಟಿಕ್ (ಊರುಗೋಲು) ಎಂದು ಪ್ರದರ್ಶನಕ್ಕಾಗಿ ಇರಿಸಲಾಗಿತ್ತು. ಆದರೆ, ನಿಮ್ಮ ಈ ಸೇವಕ ಹಾಗೂ ನಮ್ಮ ಸರ್ಕಾರವು ಆನಂದ ಭವನದಿಂದ ಸೆಂಗೋಲ್‌ಅನ್ನು ತಂದಿದ್ದೇವೆ. ಸ್ವಾತಂತ್ರ್ಯದ ಮೊದಲ ಫಲದ ರೂಪದಲ್ಲಿರುವ ರಾಜದಂಡವನ್ನು ಸಂಸತ್ತಿನಲ್ಲಿ ಇರಿಸುತ್ತೇವೆ. ಪ್ರಜಾಪ್ರಭುತ್ವದ ಮಂದಿರದಲ್ಲಿ ಸೆಂಗೋಲ್ ಪ್ರತಿಷ್ಠಾಪನೆಯಾಗುತ್ತಿರುವುದು ಸಂತಸ ತಂದಿದೆ. ನಮಗೆ ಇದು ಕರ್ತವ್ಯಪಥ ತೋರಿಸುತ್ತದೆ, ಜವಾಬ್ದಾರಿಯ ಕುರಿತು ಜಾಗೃತಿ ಮೂಡಿಸುತ್ತದೆ. ಜನತಾ ಜನಾರ್ದನರ ಸೇವೆಗೆ ಸ್ಫೂರ್ತಿ ನೀಡುತ್ತದೆ” ಎಂದರು.
#WATCH | Prime Minister Narendra Modi says, "…It would have been good if the holy #Sengol would have been given its due respect after independence and given an honourable position. But this Sengol was kept on display as a walking stick in Anand Bhawan, Prayagraj. Your 'sevak'… pic.twitter.com/Z4vKmsRQ7r
— ANI (@ANI) May 27, 2023
ಇದನ್ನೂ ಓದಿ: New Parliament Building: ಮೋದಿಗೆ ಸೆಂಗೋಲ್ ಹಸ್ತಾಂತರಿಸಿದ ಸ್ವಾಮೀಜಿಗಳು; ಭಾನುವಾರ ಸಂಸತ್‌ನಲ್ಲಿ ಪ್ರತಿಷ್ಠಾಪನೆ
“ತಮಿಳುನಾಡಿನ ಸಂಸ್ಕೃತಿ ಇಂದಿಗೂ ಸಮೃದ್ಧಿಯಾಗಿದೆ ಎಂದರೆ ಅದಕ್ಕೆ ಅಧೀನಮ್ ಸ್ವಾಮೀಜಿಗಳಂತಹ ಸಂತರ ಕೊಡುಗೆ ಇದೆ. ಇಂತಹ ಸಂಸ್ಥಾನಗಳಿಂದಲೇ ತಮಿಳುನಾಡಿನಲ್ಲಿ ಪರಂಪರೆ ಶ್ರೀಮಂತವಾಗಿದೆ” ಎಂದು ಬಣ್ಣಿಸಿದರು. ಪ್ರಧಾನಿ ಭಾಷಣಕ್ಕೂ ಮೊದಲು ಮೋದಿ ಅವರ ಹಣೆಗೆ ತಿಲಕ ಇಟ್ಟು, ಹಾರ ಹಾಕಿ, ಶಾಲು ಹೊದಿಸಿದ ಸ್ವಾಮೀಜಿಗಳು ಬಳಿಕ ಮೋದಿ ಅವರಿಗೆ ಸೆಂಗೋಲ್‌ಅನ್ನು ನೀಡಿದರು. ಮೋದಿ ಅವರು ರಾಜದಂಡಕ್ಕೆ ನಮಸ್ಕಾರ ಮಾಡಿದರು. ಇದೇ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.
ವಿಶೇಷವೆಂದರೆ ಸಂಸತ್ ಭವನದಲ್ಲಿ ನಡೆಯಲಿರುವ ಉದ್ಘಾಟನೆ ಸಂಬಂಧಿತ ಪೂಜಾ ಕೈಂಕರ್ಯಗಳನ್ನು ನಡೆಸುವ ಜವಾಬ್ದಾರಿಯನ್ನು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಪುರೋಹಿತರಿಗೆ ನೀಡಲಾಗಿದೆ. ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸುವುದಕ್ಕಾಗಿ ಶೃಂಗೇರಿಯ ಪುರೋಹಿತರ ತಂಡ ಆಗಲೇ ದಿಲ್ಲಿ ತಲುಪಿಸಿದ್ದು ಶನಿವಾರ ಸಂಜೆಯಿಂದಲೇ ಕಾರ್ಯಕ್ರಮಗಳು ನಡೆಯಲಿವೆ. ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಈ ಭವನವನ್ನು ಉದ್ಘಾಟಿಸಲಿದ್ದು, ಅದಕ್ಕೆ ಸಂಬಂಧಿಸಿದ ಪೂಜೆಗಳನ್ನು ಶೃಂಗೇರಿಯ ವೇದಪಾರಂಗತ ಪುರೋಹಿತರಾದ ಸೀತಾರಾಮ ಶರ್ಮ, ಶ್ರೀರಾಮ ಶರ್ಮ ಹಾಗೂ ಲಕ್ಷ್ಮೀಶ ತಂತ್ರಿ ಅವರು ನೆರವೇರಿಸಲಿದ್ದಾರೆ.
ದೇಶ
New Parliament Building: ರಾಜಸ್ಥಾನದ ಶಿಲೆ, ಮಹಾರಾಷ್ಟ್ರದ ತೇಗದ ಮರ; ವೈವಿಧ್ಯತೆಯಲ್ಲಿ ಏಕತೆಯ ಸಂಕೇತ ಈ ಸಂಸತ್ ಭವನ
New Parliament Building: ನೂತನ ಸಂಸತ್ ಭವನದ ನಿರ್ಮಾಣಕ್ಕೆ ದೇಶದ ಹತ್ತಾರು ಭಾಗಗಳಿಂದ ಶಿಲೆ, ಮರದ ತುಂಡು, ಮಾರ್ಬಲ್‌ಗಳನ್ನು ಬಳಸಲಾಗಿದೆ. ಹಾಗಾಗಿ, ಇದು ವೈವಿಧ್ಯತೆಯಲ್ಲಿ ಏಕತೆ ಸಾರುವ ಸಂಕೇತವೆನಿಸಿದೆ.
ನವದೆಹಲಿ: ದೇಶದ ಶಕ್ತಿಕೇಂದ್ರವಾಗಲಿರುವ ನೂತನ ಸಂಸತ್ ಭವನವನ್ನು (New Parliament Building) ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (May 28) ಉದ್ಘಾಟನೆ ನೆರವೇರಿಸಲಿದ್ದಾರೆ. ಅತ್ಯಾಧುನಿಕ ತಂತ್ರಜ್ಞಾನ ಬಳಕೆ, ಉತ್ತಮ ಆಸನ ವ್ಯವಸ್ಥೆ ಸೇರಿ ಸಕಲ ಸೌಕರ್ಯಗಳಿರುವ ನೂತನ ಸಂಸತ್ ಭವನದ ನಿರ್ಮಾಣಕ್ಕೆ ದೇಶದ ಹತ್ತಾರು ಭಾಗಗಳಿಂದ ಕಲ್ಲು, ಮಾರ್ಬಲ್ ಸೇರಿ ಹಲವು ವಸ್ತುಗಳನ್ನು ಬಳಸಲಾಗಿದೆ. ದೇಶದ ಮೂರ್ತರೂಪವಾಗಿ ಸಂಸತ್ ಭವನ ತಲೆ ಎತ್ತಿದ್ದು, ಇದಕ್ಕಾಗಿ ದೇಶದ ಯಾವ ಭಾಗದಿಂದ ಯಾವ ವಸ್ತುವನ್ನು ಬಳಸಿದೆ ಎಂಬುದರ ಸಂಕ್ಷಿಪ್ತ ಮಾಹಿತಿ ಹೀಗಿದೆ.
ಸಂಸತ್ ಭವನಕ್ಕೆ ಯಾವ ಭಾಗದಿಂದ ಯಾವ ವಸ್ತು ಬಳಕೆ?
- ರಾಜಸ್ಥಾನದ ಸರ್ಮಥುರದಿಂದ ಕೆಂಪು ಹಾಗೂ ಬಿಳಿಯ ಸ್ಯಾಂಡ್‌ಸ್ಟೋನ್‌ಗಳನ್ನು ಬಳಸಿ ನೂತನ ಸಂಸತ್ ಭವನ ನಿರ್ಮಿಸಲಾಗಿದೆ. ದೆಹಲಿಯಲ್ಲಿ ಕೆಂಪುಕೋಟೆ ಹಾಗೂ ಹುಮಾಯುನ್ ಸಮಾಧಿಯನ್ನು ಇದೇ ಶಿಲೆಗಳಿಂದ ನಿರ್ಮಿಸಲಾಗಿದೆ ಎಂಬುದು ಗಮನಾರ್ಹ.
- ನೂತನ ಸಂಸತ್ ಭವನದ ನಿರ್ಮಾಣದ ವೇಳೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಹೆಚ್ಚಾಗಿ ಸಿಗುವ ತೇಗದ ಮರದ ತುಂಡುಗಳನ್ನು ಬಳಸಲಾಗಿವೆ. ಇವು ಕಟ್ಟಡದ ಅಂದ ಹೆಚ್ಚಿಸುವ ಜತೆಗೆ ದೀರ್ಘ ಬಾಳಿಕೆಗೆ ಹೆಸರಾಗಿವೆ.
- ಸಂಸತ್ ಭವನದ ಸೌಂದರ್ಯ ಹೆಚ್ಚಿಸುವ ದೃಷ್ಟಿಯಿಂದ ರಾಜಸ್ಥಾನದ ಅಜ್ಮೇರ್ ಬಳಿಯ ಲಾಖದಿಂದ ಕೇಶರಿಯಾ ಹಸಿರು ಶಿಲೆ, ಕೆಂಪು ಗ್ರಾನೈಟ್ ಹಾಗೂ ಅಂಬಾಜಿಯಿಂದ ಬಿಳಿ ಅಮೃತಶಿಲೆಗಳನ್ನು ಬಳಸಲಾಗಿದೆ.
- ಸಂಸತ್ ಭವನದ ಒಳಗಡೆಯ ಪೀಠೋಪಕರಣಗಳನ್ನು ಮಹಾರಾಷ್ಟ್ರದ ಮುಂಬೈನಲ್ಲಿ ಕೆತ್ತಲಾಗಿದೆ. ಇದರಿಂದ ಸಂಸತ್ ಭವನದ ಆಕರ್ಷಣೆ ಹೆಚ್ಚಾಗಿದೆ.
- ಲೋಕಸಭೆ ಹಾಗೂ ರಾಜ್ಯಸಭೆಯ ಸೀಲಿಂಗ್‌ಗಳಿಗೆ ಕೇಂದ್ರಾಡಳಿತ ಪ್ರದೇಶವಾದ ದಮನ್ ಮತ್ತು ದಿಯುನ ಉಕ್ಕಿನ ಉಪಕರಣಗಳನ್ನು ಬಳಸಲಾಗಿದೆ.
- ಕಟ್ಟಡದ ಅಂದವನ್ನು ಹೆಚ್ಚಿಸುವ, ಜಾಲಿ ಎಂದೇ ಖ್ಯಾತಿಯಾದ ಕಲ್ಲುಗಳನ್ನು ರಾಜಸ್ಥಾನದ ರಾಜನಗರ ಹಾಗೂ ಉತ್ತರ ಪ್ರದೇಶದ ನೊಯ್ಡಾದಿಂದ ತರಿಸಿ, ಬಳಸಲಾಗಿದೆ.
- ಲೋಕಸಭೆ ಹಾಗೂ ರಾಜ್ಯಸಭೆಯ ಗೋಡೆಗಳ ಮೇಲೆ ಅಶೋಕ ಚಕ್ರಗಳನ್ನು ಸುಂದರವಾಗಿ ಕೆತ್ತಿಸಲು ಮಹಾರಾಷ್ಟ್ರದ ಔರಂಗಾಬಾದ್ ಹಾಗೂ ರಾಜಸ್ಥಾನದ ಜೈಪುರದಿಂದ ಶಿಲೆಗಳನ್ನು ತರಿಸಲಾಗಿದೆ.
- ರಾಜಸ್ಥಾನದ ಅಬುರೋಡ್ (ನಗರ) ಹಾಗೂ ಉದಯಪುರದ ಕೌಶಲಯುತ ಶಿಲ್ಪಿಗಳು ರಾಜಸ್ಥಾನದ ಕೊಟ್ಪುಟಲಿ ಶಿಲೆಗಳನ್ನು ಸುಂದರವಾಗಿ ಕೆತ್ತಿದ್ದಾರೆ.
- ನಿರ್ಮಾಣ ಚಟುವಟಿಕೆಗಳಿಗಾಗಿ ಹರಿಯಾಣದ ಚರ್ಖಿ ದಾದ್ರಿಯಿಂದ ಎಂ-ಸ್ಯಾಂಡ್‌ಅನ್ನು ಬಳಸಲಾಗಿದೆ. ಎಂ-ಸ್ಯಾಂಡ್‌ಗೆ ಗುಣಮಟ್ಟದ ಕಾಂಕ್ರೀಟ್‌ಅನ್ನು ಮಿಕ್ಸ್ ಮಾಡಲಾಗಿದೆ.
- ಪರಿಸರ ಸ್ನೇಹಿ ಎನಿಸುವ ಇಟ್ಟಿಗೆಗಳನ್ನು ಹರಿಯಾಣ ಹಾಗೂ ಉತ್ತರ ಪ್ರದೇಶದಿಂದ ತರಿಸಿ ಬಳಸಲಾಗಿದೆ. ವಾಸ್ತುಶಿಲ್ಪಕ್ಕಾಗಿ ಗುಜರಾತ್‌ನ ಅಹ್ಮದಾಬಾದ್‌ನಿಂದ ಹಿತ್ತಾಳೆ ಉತ್ಪನ್ನಗಳನ್ನು ತರಿಸಲಾಗಿದೆ.
ಇದನ್ನೂ ಓದಿ: New Parliament Building: ನೂತನ ಸಂಸತ್ ಭವನದ ವೈಭವ ಹೇಗಿದೆ? ಇಲ್ಲಿದೆ ಅದ್ಭುತ ವಿಡಿಯೊ!
-
ಸುವಚನ19 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕರ್ನಾಟಕ10 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ13 hours ago
Karnataka Cabinet Expansion Live : 34 ಸಚಿವರಿಗೆ ಖಾತೆ ಹಂಚಿಕೆ; ಬಯಸಿದ ಖಾತೆ ಪಡೆದ ಡಿ ಕೆ ಶಿವಕುಮಾರ್
-
ಉತ್ತರ ಕನ್ನಡ24 hours ago
Honnavar News: ಕಾರಿಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ, 30 ಮಂದಿಗೆ ಗಾಯ
-
ಪ್ರಮುಖ ಸುದ್ದಿ24 hours ago
ವಿಸ್ತಾರ ಸಂಪಾದಕೀಯ: ರಾಜ್ಯಾದ್ಯಂತ ಗ್ಯಾರಂಟಿ ಭರವಸೆಯ ಗದ್ದಲ, ಹೊಸ ಸರ್ಕಾರ ಗೊಂದಲ ನಿವಾರಿಸಲಿ
-
ಕರ್ನಾಟಕ10 hours ago
Karnataka Cabinet Expansion: ಪ್ರಮಾಣ ವಚನ ಸಮಾರಂಭ ಬಹಿಷ್ಕಾರ; ಊರಿಗೆ ಹೊರಟ ಒಂದೇ ಜಿಲ್ಲೆಯ 5 ಶಾಸಕರು!
-
ಕ್ರಿಕೆಟ್24 hours ago
IPL 2023: ಟೈಟನ್ಸ್ ರನ್ ಮಳೆಗೆ ಮುಳುಗಿದ ಮುಂಬೈ; ಫೈನಲ್ಗೆ ಹಾರ್ದಿಕ್ ಪಡೆ
-
ಕಿರುತೆರೆ9 hours ago
Deepak Gowda: ‘ಶ್ರೀರಸ್ತು ಶುಭಮಸ್ತು’ಧಾರಾವಾಹಿಯಿಂದ ಹೊರನಡೆದ ದೀಪಕ್ ಗೌಡ; ಪಾತ್ರಕ್ಕೆ ಬಂದವರು ಕಿರುತೆರೆಗೆ ಹೊಸಬರಲ್ಲ!