Site icon Vistara News

Horoscope Today : ವೃಶ್ಚಿಕ ರಾಶಿಯವರ ಆರೋಗ್ಯ ಉತ್ತಮ; ನಿಮ್ಮ ರಾಶಿ ಭವಿಷ್ಯ ಹೇಗಿದೆ?

rashi bhavishya today in kannada

Horoscope Today

ಇಂದಿನ ಪಂಚಾಂಗ (04-05-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ.

ತಿಥಿ: ಚತುರ್ದಶಿ 23:43 ವಾರ: ಗುರುವಾರ
ನಕ್ಷತ್ರ: ಚಿತ್ತಾ 21:34 ಯೋಗ: ವಜ್ರ 10:34
ಕರಣ: ಗರಜ 11:50 ಇಂದಿನ ವಿಶೇಷ: ಶ್ರೀ ನೃಸಿಂಹಜಯಂತೀ.
ಅಮೃತಕಾಲ: ಮಧ್ಯಾಹ್ನ 03 ಗಂಟೆ 01 ನಿಮಿಷದಿಂದ ಸಂಜೆ 04 ಗಂಟೆ 39 ನಿಮಿಷದವರೆಗೆ.

ಸೂರ್ಯೋದಯ : 05:58 ಸೂರ್ಯಾಸ್ತ : 06:35

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ಇಂದು ಆರ್ಥಿಕವಾಗಿ ಬಲಿಷ್ಠರಾಗುವಿರಿ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡದ ದಿನ. ಹಳೆಯ ಸ್ನೇಹಿತರ ಜೊತೆ ಕಾಲ ಕಳೆಯುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ವೃಷಭ: ಪ್ರಯಾಣ ಮಾಡುವ ಸಾಧ್ಯತೆ. ಅನಿರೀಕ್ಷಿತ ಲಾಭಗಳನ್ನು ಪಡೆಯುವಿರಿ. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಸಾಮಜಿಕ ಕಾರ್ಯಗಳಲ್ಲಿ ತೊಡಗುವ ಸಾಧ್ಯತೆ. ಉದ್ಯೋಗಿಗಳಿಗೆ ಒತ್ತಡ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

ಮಿಥುನ: ಬಲವಂತವಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ ಇಂದು ಒದಗಿ ಬರಲಿದೆ. ಇಂದು ನೀವು ಗಾಬರಿಯಿಂದ ಇರುವ ಸಾಧ್ಯತೆ. ನಿಧಾನವಾಗಿ ವಾಹನ ಚಾಲನೆ ಮಾಡಿ. ಕುಟುಂಬದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವಿರಿ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

ಕಟಕ: ಒತ್ತಡದ ಜೀವನಕ್ಕೆ ವಿಶ್ರಾಂತಿ ಸಿಗಲಿದೆ. ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ. ಅಗತ್ಯ ವಸ್ತುಗಳ ಖರೀದಿ ಮಾಡುವಿರಿ. ಸಹೋದ್ಯೋಗಿಗಳ ಬೆಂಬಲ ನಿಮಗೆ ದೊರೆಯಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಸಿಂಹ: ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಮಾನಸಿಕ ಆರೋಗ್ಯ ಸದೃಢವಾಗಿರಲಿದೆ. ಅತಿ ಅವಶ್ಯಕ ಕೆಲಸದ ಕಾರಣಕ್ಕೆ ದೈಹಿಕ ಶ್ರಮ. ಉದ್ಯೋಗಿಗಳಿಗೆ ಸಹಕಾರ ದೊರೆಯಲಿದೆ. ಆರೋಗ್ಯ ಉತ್ತಮ. ಕೌಟುಂಬಿಕ ಕಲಹಗಳಲ್ಲಿ ಭಾಗಿಯಾಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ಕನ್ಯಾ: ಇಂದು ನೀವು ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ದೀರ್ಘಕಾಲದ ಪ್ರಯಾಣ. ನಿರೀಕ್ಷೆಗೆ ತಕ್ಕಂತೆ ಫಲ ಸಿಗಲಿದೆ. ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವ ಅವಕಾಶ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಕುಟುಂಬದಲ್ಲಿನ ಹಿರಿಯರೊಂದಿಗೆ ವಾದಕ್ಕೆ ಇಳಿಯುವುದು ಬೇಡ. ಆರ್ಥಿಕ ಪ್ರಗತಿ ಸಾಧಾರಣ. ಹರಟೆಯಿಂದ ಕಾಲ ಹರಣ ಮಾಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ವೃಶ್ಚಿಕ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗುವವು. ಸಕರಾತ್ಮಕ ಆಲೋಚನೆಗಳನ್ನು ಮಾಡುವಿರಿ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಧನಸ್ಸು: ಇಂದು ನಿಮ್ಮ ಶ್ರಮಕ್ಕೆ ಉತ್ತಮ ಫಲಿತಾಂಶ ದೊರೆಯಲಿದೆ. ಆತ್ಮವಿಶ್ವಾಸ ಹೆಚ್ಚಲಿದೆ. ಕುಟುಂಬದ ಸದಸ್ಯರ ಮೇಲೆ ಕೋಪಗೊಳ್ಳುವುದು ಬೇಡ. ಆರೋಗ್ಯ ಮಧ್ಯಮ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಉತ್ತಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಏ.21 ರಂದು ನಡೆದ ಗುರು ಸಂಚಾರದಿಂದ ಯಾವ ರಾಶಿಗೆ ಶುಭ ಫಲಗಳಿವೆ ಎಂಬುದನ್ನು ಇಲ್ಲಿ ನೋಡಿ.

ಮಕರ: ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಪ್ರಯಾಣ ಮಾಡುವ ಸಾಧ್ಯತೆ. ಆರ್ಥಿಕ ಪ್ರಗತಿ ಉತ್ತಮ. ಪ್ರಮುಖ ಯೋಜನೆ ಕೈಗೊಳ್ಳುವ ಸಾಧ್ಯತೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗ ಸ್ಥಳದಲ್ಲಿ ನೀವಂದುಕೊಂಡಂತೆಯೇ ಎಲ್ಲವೂ ನಡೆಯಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಕುಂಭ: ನಿಮ್ಮ ವರ್ತನೆ ಇತರರಿಗೆ ಮುಜುಗರ ಉಂಟು ಮಾಡುವ ಸಾಧ್ಯತೆ. ಯಾರೊಂದಿಗೂ ಅತಿಯಾದ ಸಲುಗೆ ಬೇಡ. ಆತುರದ ಮಾತುಗಳು ಅಪಾಯ ತರುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

ಮೀನ: ಒತ್ತಡದ ಕೆಲಸದಿಂದ ಮುಕ್ತಿ ಪಡೆಯುವಿರಿ. ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವುದು. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : ಬಹುತೇಕ ಶುಭಫಲಗಳನ್ನೇ ನೀಡುವ ಬುಧನ ಭಾವಫಲಗಳು ಹೀಗಿವೆ

Exit mobile version