horoscope today read your daily horoscope predictions for may 05, 2023Horoscope Today : ಅಗಿ ಹುಣ್ಣಿಮೆಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ - Vistara News

ಪ್ರಮುಖ ಸುದ್ದಿ

Horoscope Today : ಅಗಿ ಹುಣ್ಣಿಮೆಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ಹುಣ್ಣಿಮೆಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today read your daily horoscope predictions for may 05, 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (05-05-2023)

ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ.

ತಿಥಿ: ಹುಣ್ಣಿಮೆ 23:03 ವಾರ: ಶುಕ್ರವಾರ
ನಕ್ಷತ್ರ: ಸ್ವಾತಿ 21:38 ಯೋಗ: ಸಿದ್ಧಿ 09:15
ಕರಣ: ವಿಷ್ಟಿ (ಭದ್ರ) 11:27 ಇಂದಿನ ವಿಶೇಷ: ಬುದ್ಧ ಪೂರ್ಣಿಮಾ, ಕೂರ್ಮ ಜಯಂತಿ, ಅಗಿ ಹುಣ್ಣಿಮೆ.
ಅಮೃತಕಾಲ: ಮಧ್ಯಾಹ್ನ 12 ಗಂಟೆ 50 ನಿಮಿಷದಿಂದ ಸಂಜೆ 02 ಗಂಟೆ 26 ನಿಮಿಷದವರೆಗೆ.

ಸೂರ್ಯೋದಯ : 05:58 ಸೂರ್ಯಾಸ್ತ : 06:35

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ದೈಹಿಕ ಶ್ರಮ ಹೆಚ್ಚಲಿದೆ. ಸಂಶಯಾಸ್ಪದವಾದ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ. ಆಪ್ತರಿಂದ ಸಿಹಿ ಸುದ್ದಿ ಬರಲಿದೆ. ದಿನದ ಮಟ್ಟಿಗೆ ಖರ್ಚು. ಸಂಗಾತಿಯ ಮಧುರ ಮಾತುಗಳು ಹಿತ ವೆನಿಸುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಕುಟುಂಬದ ಆಪ್ತರಿಂದ ಆರ್ಥಿಕ ಸಹಾಯದ ಬೇಡಿಕೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ವಿದ್ಯಾರ್ಥಿಗಳ ಮನೋಬಲ ಹೆಚ್ಚಿಸಿಕೊಳ್ಳುವುದು ಅವಶ್ಯಕ. ಧೈರ್ಯ ಕಾಡಬಹುದು. ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗುವುದು. ಆರೋಗ್ಯ ಮಧ್ಯಮ. ಉದ್ಯೋಗಿಗಳಿಗೆ ಕಿರಿಕಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ಸದಾ ಹಗಲು ಕನಸುಗಳನ್ನು ಕಾಣುವುದರಿಂದ ಯಾವುದೇ ಪ್ರಯೋಜನವಿಲ್ಲ. ಬೇರೆಯವರಿಗೆ ಆರ್ಥಿಕ ಸಹಾಯ ಮಾಡಿ ನೀವು ಹಣಕಾಸಿನ ಸಮಸ್ಯೆಯಲ್ಲಿ ಸಿಲುಕುವುದು ಬೇಡ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕಟಕ: ಕುಟುಂಬದ ಸದಸ್ಯರಿಂದ ಆರ್ಥಿಕ ಬೆಂಬಲ ಸಿಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಹಣದ ಹರಿವು ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣ. ಆಪ್ತ ವ್ಯಕ್ತಿಗಳೊಂದಿಗೆ ಮಾತುಕತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಕೆಲವು ಘಟನೆಗಳು ನಿಮ್ಮ ಮನಸ್ಸಿನ ಮೇಲೆ ಪರಿಣಾಮ ಬೀರುವವು. ಆರೋಗ್ಯ ಪರಿಪೂರ್ಣ. ಸಹೋದ್ಯೋಗಿಗಳಿಂದ ಬೆಂಬಲ ಸಿಗಲಿದೆ. ಕ್ಷೇತ್ರ ದರ್ಶನ ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ದೀರ್ಘಕಾಲದ ಕೆಲಸ ಕಾರ್ಯಗಳು ಇಂದು ಯಶಸ್ಸನ್ನು ತಂದು ಕೊಡಲಿವೆ. ಆದಾಯದ ಮೂಲ ಹೆಚ್ಚಾಗಲಿದೆ. ಆಪ್ತರೊಂದಿಗೆ ಮಾತುಕತೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ, ಕುಟುಂಬದ ವಾತಾವರಣ ಹದಗೆಡುವ ಸಾಧ್ಯತೆ. ಉದ್ಯೋಗಿಗಳಿಗೆ ಕಿರಿಕಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆತ್ಮವಿಶ್ವಾಸದಿಂದ ಕೆಲಸಕಾರ್ಯಗಳಲ್ಲಿ ಪ್ರಗತಿ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವಿರಿ. ಹಣಕಾಸು, ಉದ್ಯೋಗ ಹಾಗೂ ವ್ಯಾಪಾರದಲ್ಲಿ ಪ್ರಗತಿ. ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಕಾಲ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಆರೋಗ್ಯದ ಕುರಿತು ಕಾಳಜಿ ಇರಲಿ. ನ್ಯಾಯಾಲಯದಲ್ಲಿರುವ ವ್ಯಾಜ್ಯಗಳು ವಿಜಯವನ್ನು ತಂದುಕೊಡುವ ಸಾಧ್ಯತೆ. ಹಣಕಾಸು, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಹಾದಿ ಅತ್ಯವಶ್ಯಕ. ಹಣಕಾಸು ವಿಷಯದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಮಿಶ್ರ ಫಲ. ಕೆಲಸ ಕಾರ್ಯಗಳಲ್ಲಿ ಯಶಸ್ಸು. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಈಗ ಯಾವ ರಾಶಿಗೆ ಹಣ ಪ್ರಾಪ್ತಿಯಾಗುವ ಸಮಯ? ಈ ವಿಡಿಯೋ ನೋಡಿ.
Horoscope Today

ಮಕರ: ಬುದ್ಧಿವಂತಿಕೆಯಿಂದ ಕೆಲಸಕಾರ್ಯಗಳಲ್ಲಿ ಯಶಸ್ಸು ಕೀರ್ತಿ ಸಿಗುವುದು. ಶೀಘ್ರಕೋಪ ಅಪಾಯ ತರುವುದು. ಆರೋಗ್ಯ ಪರಿಪೂರ್ಣ. ಆರ್ಥಿಕ ಲಾಭ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ದುಂದುವೆಚ್ಚವನ್ನು ತಪ್ಪಿಸಿ. ಬುದ್ಧಿವಂತಿಕೆಯಿಂದ ಕೆಲಸ ಮಾಡಿ. ಸುಮ್ಮನೆ ಶ್ರಮಪಡುವ ಅಗತ್ಯವಿಲ್ಲ. ಗೌಪ್ಯ ವಿಷಯಗಳನ್ನು ಬೇರೆಯವರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮೀನ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ. ಆರೋಗ್ಯ ಮಧ್ಯಮ. ಆರ್ಥಿಕವಾಗಿ ಪ್ರಗತಿ. ಸಂಗಾತಿ ಇಂದು ನಿಮ್ಮೊಂದಿಗೆ ಮುಖ್ಯ ವಿಷಯದ ಕುರಿತು ಚರ್ಚಿಸಬಹುದು. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : ಬಹುತೇಕ ಶುಭಫಲಗಳನ್ನೇ ನೀಡುವ ಬುಧನ ಭಾವಫಲಗಳು ಹೀಗಿವೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain
Karnataka rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain
Karnataka rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain
Karnataka rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru
Karnataka rain

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain
Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading

ಮಳೆ

Karnataka Rain :ಸತತ ಮಳೆಗೆ ಬೆಂಗಳೂರು ಥಂಡಾ; ಶಾಲೆಗಳಿಗೆ ಇಂದು ರಜೆ ಘೋಷಣೆ

Karnataka Rain : ಸತತ ಮಳೆ ಹಿನ್ನೆಲೆಯಲ್ಲಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನ ಶಾಲೆಗಳಿಗೆ ಇಂದು ಸೋಮವಾರ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ (Karnataka Rain) ನಿರಂತರವಾಗಿ ಮಳೆಯಾಗುತ್ತಿದ್ದು, ರಸ್ತೆಗಳು ಕೆರೆಯಂತಾಗಿ ಮಾರ್ಪಾಡಾಗಿದೆ. ಈ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ ಮೌಖಿಕವಾಗಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Continue Reading

ಭವಿಷ್ಯ

Dina Bhavishya : ಹೂಡಿಕೆ ವ್ಯವಹಾರಗಳನ್ನು ಈ ದಿನ ಮಾಡುವುದು ಬೇಡವೇ ಬೇಡ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಕೃಷ್ಣ ಪಕ್ಷದ ಪಂಚಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಿಥುನ ರಾಶಿಯಿಂದ ಸೋಮವಾರ ಸಂಜೆ 06:49ಕ್ಕೆ ಕರ್ಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು ಇರಲಿದೆ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (21-10-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಕೃಷ್ಣ ಪಕ್ಷ.
ತಿಥಿ: ಪಂಚಮಿ 26:28 ವಾರ: ಸೋಮವಾರ
ನಕ್ಷತ್ರ: ರೋಹಿಣಿ 06:49 ಯೋಗ: ಮೃಗಶಿರಾ 29:49
ಕರಣ: ಕೌಲವ 15:17 ಅಮೃತಕಾಲ: ರಾತ್ರಿ 09:25 ರಿಂದ 10:57
ದಿನದ ವಿಶೇಷ: ನಾರಾಯಣಪುರ ಜಾತ್ರೆ

ಸೂರ್ಯೋದಯ : 06:11   ಸೂರ್ಯಾಸ್ತ : 05:57

ರಾಹುಕಾಲ: ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ
1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು ಇರಲಿದೆ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗುವುದು. ಹಿರಿಯರ ಬೆಂಬಲ ಆಶೀರ್ವಾದ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಆರೋಗ್ಯದ ಕುರಿತು ಕಾಳಜಿ ಇರಲಿ. ಅದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚನೆ ಮಾಡುವಿರಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚು, ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಸಾಧ್ಯವಾದಷ್ಟು ಮಟ್ಟಿಗೆ ತಾಳ್ಮೆ ಇರಲಿ. ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು,ಕೀರ್ತಿ, ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ಮುಂದೆಯಾಗುವ ಕಾರ್ಯಗಳ ಬಗೆಗೆ ಗಮನ ಇರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಣಕಾಸಿನ ಸಮಸ್ಯೆ ತಲೆದೋರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು . ಹೂಡಿಕೆ ವ್ಯವಹಾರಗಳನ್ನು ಮಾಡುವುದು ಬೇಡ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ:ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ.ದೀರ್ಘಕಾಲದ ಕೆಲಸ-ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದವರ ಸಹಕಾರ ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕೊಂಚಮಟ್ಟಿಗೆ ಒತ್ತಡ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಭವಿಷ್ಯದ ಕುರಿತಾಗಿ ಆಲೋಚನೆ, ಜೀವನದಲ್ಲಿ ಅಭದ್ರತೆಯು ಕಾಡಬಹುದು.ಯಾವುದನ್ನು ಅತಿಯಾಗಿ ಆಲೋಚಿಸಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ.ಹೂಡಿಕೆ, ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 9

Horoscope Today

ಮಕರ: ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯದಲ್ಲಿ ಕೊಂಚ ಏರು-ಪೇರು. ಕೆಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಹಿಂದೆ ನೀಡಿದ ಹಣವು ಮರಳುವ ಸಾಧ್ಯತೆ ಇದೆ. ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಉತ್ಸಾಹದಿಂದ ಕಾರ್ಯ ಸಿದ್ಧಿ.ಅಗತ್ಯವಸ್ತುಗಳ ಖರೀದಿ ಖರ್ಚು ಹೆಚ್ಚಲಿದೆ. ಅಮೂಲ್ಯ ವಸ್ತುಗಳ ಕುರಿತು ಲಕ್ಷ ಇರಲಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅನೇಕ ಮೂಲಗಳಿಂದ ಹಣಕಾಸಿನ ಹರಿವು ಹೆಚ್ಚಳ. ದೀರ್ಘಕಾಲದ ಆಲೋಚನೆಯಿಂದ ದೂರವಾಗುವ ಸಾಧ್ಯತೆ. ಮಾನಸಿಕ ನೆಮ್ಮದಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರುವುದು. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಮಳೆ

Karnataka Rain: ತೊಯ್ದು ತೊಪ್ಪೆಯಾದ ಚಿಕ್ಕಮಗಳೂರು, ಶಿವಮೊಗ್ಗ; ನಾಳೆಗೂ ಭಾರಿ ಮಳೆ ಎಚ್ಚರಿಕೆ

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು: ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶದಲ್ಲೇ ಭಾರಿ (Karnataka Rain) ಮಳೆಯಾಗುತ್ತಿದೆ. ಹಿಂಗಾರು ಮಳೆಗೆ ಪಶ್ಚಿಮಘಟ್ಟಗಳ ತಪ್ಪಲು ಅಲ್ಲೋಲ-ಕಲ್ಲೋಲವಾಗಿದೆ. ಚಿಕ್ಕಮಗಳೂರಿನ ದತ್ತಪೀಠದ ರಸ್ತೆಯಲ್ಲಿ 3 ಅಡಿ ಎತ್ತರದಲ್ಲಿ ನೀರು ಹರಿದಿದೆ. ಎಷ್ಟೇ ಮಳೆ ಬಂದರೂ ಪಶ್ಚಿಮ ಘಟ್ಟಕ್ಕೆ ಲೆಕ್ಕವೇ ಅಲ್ಲ, ಸಾವಿರಾರು ಅಡಿ ಆಳ, ಮುಗಿಲೆತ್ತರದ ಬೆಟ್ಟಗುಡ್ಡಗಳ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಕೆರೆಯಂತೆ ನೀರು ಹರಿಯುತ್ತಿದೆ. ಮಳೆರಾಯನ ಅಬ್ಬರಕ್ಕೆ ಪ್ರವಾಸಿಗರು ತೊಯ್ದು ತೊಪ್ಪೆ ಆಗಿದ್ದಾರೆ. ಮಳೆ ಮಧ್ಯೆ ಸಿಲುಕಿ ಚಿಕ್ಕಮಗಳೂರು ತಾಲ್ಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಸಹವಾಸವೇ ಬೇಡ ಎನ್ನುತ್ತಿದ್ದಾರೆ ಪ್ರವಾಸಿಗರು.

ತರೀಕೆರೆ ತಾಲೂಕಿನಾದ್ಯಂತ ಸುರಿದ ಧಾರಾಕಾರ ಮಳೆಗೆ ಹೊಲ-ಗದ್ದೆ, ತೋಟಗಳಿಗೆ ನೀರು ನುಗ್ಗಿದೆ. ಸಣ್ಣಬೋಕಿಕೆರೆ, ಗೊಲ್ಲರಹಳ್ಳಿ ಹೊಲಗಳು ಜಲಾವೃತಗೊಂಡಿದೆ. ಕೋರನಹಳ್ಳಿ, ಚಟ್ಟನಹಳ್ಳಿ, ಶಿವಪುರ ಭಾಗದಲ್ಲಿ ಹಳ್ಳಿ ಹರಿದು ಭಾರೀ ಅನಾಹುತವಾಗಿದೆ. ಗೊಲ್ಲರಹಳ್ಳಿಯಲ್ಲಿ ಹೂವಿನಹೊಲದಲ್ಲಿ ಮಳೆ ‌ನೀರು ನಿಂತಿದೆ.

ಕಾಫಿನಾಡ ಮಹಾಮಳೆಗೆ ಮಲೆನಾಡು ಭಾಗದ ಜನರು ಕಂಗಾಲಾಗಿದ್ದಾರೆ. ಭಾರೀ ಮಳೆಗೆ ಗ್ರಾಮೀಣ ಭಾಗದ ಸೇತುವೆಗಳು ಜಲಾವೃತಗೊಂಡಿದೆ. ಮುತ್ತೋಡಿ ವ್ಯಾಪ್ತಿಯ ಗ್ರಾಮದ ಜನ ಹಳ್ಳ ದಾಟಲು ಪರದಾಡಿದರು. ವೃದ್ಧೆಯನ್ನ ಹಳ್ಳಿಗರು ಅಂಗೈಲಿ ಹೊತ್ತು ಸಾಗಿದ ಘಟನೆ ಚಿಕ್ಕಮಗಳೂರು ತಾಲೂಕಿನ ಮಲಗಾರು ಗ್ರಾಮದಲ್ಲಿ ನಡೆದಿದೆ. ಮಲಗಾರು ಗ್ರಾಮ ಮುತ್ತೋಡಿ ಅರಣ್ಯ ವ್ಯಾಪ್ತಿಯ ಕುಗ್ರಾಮ ಇದಾಗಿದೆ. ನಿನ್ನೆ ಸಂಜೆ ಸುರಿದ ಭಾರೀ ಮಳೆಯಿಂದ ಅಪಾರ ಪ್ರಮಾಣದಲ್ಲಿ ನೀರು ಹರಿದು, ಕಿರು ಸೇತುವೆ ತುಂಬಿ ಹೋಗಿದೆ.

ಇತ್ತ ಕಳೆದ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಿಗೆ‌ ನೀರು ನುಗ್ಗಿದೆ. ಶಿವಮೊಗ್ಗ ನಗರದಲ್ಲಿ ರಾತ್ರಿಯಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಪರಿಣಾಮ ನಗರದ ದೇವರಾಜು ಅರಸು ಬಡಾವಣೆಯ ಮನೆಗಳು ಜಲಾವೃತಗೊಂಡಿದೆ. ರಸ್ತೆ ಮೇಲೆ ನೀರು ಉಕ್ಕಿ ಹರಿಯುತ್ತಿದ್ದು, ಜನರ ಓಡಾಟಕ್ಕೂ ಸಂಕಷ್ಟ ಎದುರಾಗಿದೆ.

5 ದಶಕಗಳ ನಂತರ ಕೋಡಿ ಬಿದ್ದ ಹುಲಿಕೆರೆ ಗ್ರಾಮದ ಕೆರೆ

ಕಳೆದ ಮೂರ್ನಾಲ್ಕು ದಿನದಿಂದ ಸುರಿಯುತ್ತಿರುವ ಮಳೆಗೆ ಐದು ದಶಕಗಳ ನಂತರ ಹುಲಿಕೆರೆ ಗ್ರಾಮದ ಕೆರೆ ಕೋಡಿ ಬಿದ್ದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿರುವ ಹುಲಿಕೆರೆ ನೋಡಲು ಜನಸಾಗರವೇ ಹರಿದುಬಂದಿತ್ತು. ಕಲ್ಯಾಣ ಚಾಲುಕ್ಯರ ಕಾಲಘಟ್ಟದಲ್ಲಿ ಕಟ್ಟಿಸಿದ ಕೆರೆಯು ಹುಲಿಕೆರೆ ಗ್ರಾಮ ಸೇರಿ ಸುತ್ತಮುತ್ತಲಿನ ಹತ್ತಾರು ಹಳ್ಳಿಯ ಜೀವನಾಡಿಯಾಗಿದೆ. ಕೆರೆ ಭರ್ತಿಯಾಗಿ ಕೋಡಿ ಬಿದ್ದಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕೆರೆಗಳು ಭರ್ತಿ

ಬರದ ನಾಡು ಎಂದೇ ಕರೆಯುತ್ತಿದ್ದ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಗೆ ತಾಲೂಕಿನ ಬಹುತೇಕ ಕೆರೆಗಳು ಭರ್ತಿಯಾಗಿದೆ. ಬತ್ತಿ ಹೋಗಿದ್ದ ಬೋರ್ ವೆಲ್‌ನಲ್ಲಿ ನೀರು ಉಕ್ಕಿ ಬರುತ್ತಿದೆ. ಜಗಳೂರು ತಾಲ್ಲೂಕಿನ ಕಾನನಕಟ್ಟೆ, ಅಣಬೂರು ಗ್ರಾಮದಲ್ಲಿ ನೀರು ಉಕ್ಕಿ ಬರುತ್ತಿದೆ. ಅಂತರ್ಜಲ ಹೆಚ್ಚಾಗಿ ಬೋರ್ ವೆಲ್ ಗಳಲ್ಲಿ ನೀರು ಉಕ್ಕಿ ಬರುತ್ತಿದ್ದು, ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

ಮಲೆನಾಡಿನಂತಾದ ಹೊಸಪೇಟೆ ಪಟ್ಟಣ

ವಿಜಯನಗರದ ಹೊಸಪೇಟೆ ಪಟ್ಟಣ ಮಿನಿ ಮಲೆನಾಡಿನಂತಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಇಡೀ ಹೊಸಪೇಟೆ ತಾಲೂಕು ಮಂಜಿನಿಂದ ಆವರಿಸಿದೆ. ಐತಿಹಾಸಿಕ ಜೋಳದ ರಾಶಿ ಗುಡ್ಡ ಸೇರಿದಂತೆ ನಾನಾ ಕಡೆ ಮಂಜಿನ ವಾತಾವರಣ ಕ್ಕೆ ಜನರು ಫುಲ್ ಫಿದಾ ಆಗಿದ್ದಾರೆ. ಮಂಜಿನಲ್ಲೇ ಕುಳಿತು ಪ್ರಕೃತಿ ಸೌಂದರ್ಯ ಸವಿಯುತ್ತಿದ್ದಾರೆ.

Continue Reading
Advertisement
Karnataka Rain
ಮಳೆ3 ಗಂಟೆಗಳು ago

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain
ಮಳೆ3 ಗಂಟೆಗಳು ago

Karnataka Rain :ಸತತ ಮಳೆಗೆ ಬೆಂಗಳೂರು ಥಂಡಾ; ಶಾಲೆಗಳಿಗೆ ಇಂದು ರಜೆ ಘೋಷಣೆ

Dina Bhavishya
ಭವಿಷ್ಯ4 ಗಂಟೆಗಳು ago

Dina Bhavishya : ಹೂಡಿಕೆ ವ್ಯವಹಾರಗಳನ್ನು ಈ ದಿನ ಮಾಡುವುದು ಬೇಡವೇ ಬೇಡ

Karnataka Rain
ಮಳೆ1 ದಿನ ago

Karnataka Rain: ತೊಯ್ದು ತೊಪ್ಪೆಯಾದ ಚಿಕ್ಕಮಗಳೂರು, ಶಿವಮೊಗ್ಗ; ನಾಳೆಗೂ ಭಾರಿ ಮಳೆ ಎಚ್ಚರಿಕೆ

Kichcha Sudeeps mother Saroja passes away
ಬೆಂಗಳೂರು1 ದಿನ ago

Kichcha Sudeepa : ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನ

Dina Bhavishya
ಭವಿಷ್ಯ1 ದಿನ ago

Dina Bhavishya : ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳಬೇಡಿ; ನಂಬಿದ ವ್ಯಕ್ತಿಗಳಿಂದ ಈ ರಾಶಿಯವರಿಗೆ ನಿರಾಸೆ

Bigg boss kannada
ಬಿಗ್ ಬಾಸ್2 ದಿನಗಳು ago

Bigg Boss Kannada : ಕಿಚ್ಚನ ಪಂಚಾಯ್ತಿಯಲ್ಲಿ ಗರ್ಮಾಗರಂ ವಿಷ್ಯಗಳು; ಬಿಗ್‌ಬಾಸ್‌ ನಿರ್ಧಾರವನ್ನೇ ಪ್ರಶ್ನೆ ಮಾಡ್ತಾರಾ ಸುದೀಪ್‌!

missing case
ಗದಗ2 ದಿನಗಳು ago

Missing Case : ಬಸ್ ನಿಲ್ದಾಣದಲ್ಲಿ ಕಳೆದು ಹೋಗಿದ್ದ 5 ವರ್ಷದ ಮಗು: ಎರಡೇ ಗಂಟೆಯಲ್ಲಿ ತಾಯಿ ಮಡಿಲು ಸೇರಿಸಿದ ಪೊಲೀಸರು

Dina Bhavishya
ಭವಿಷ್ಯ2 ದಿನಗಳು ago

Dina Bhavishya : ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ; ಈ ರಾಶಿಯವರು ಅಗತ್ಯವಿದ್ದಷ್ಟೆ ಮಾತನಾಡಿ

Gode Bengaluru
ಬೆಂಗಳೂರು3 ದಿನಗಳು ago

Gode Bengaluru : ಬೆಂಗಳೂರು ಗೋಡೆಗಳ ಮೇಲೆ ಚಿತ್ತಾರ; ʻಗೋಡೆ ಬೆಂಗಳೂರುʼ ಘೋಷಿಸಿದ ಅನ್‌ಬಾಕ್ಸಿಂಗ್‌

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ3 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌