Site icon Vistara News

Horoscope Today : ಅಗಿ ಹುಣ್ಣಿಮೆಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

horoscope today read your daily horoscope predictions for may 05, 2023

ಇಂದಿನ ಪಂಚಾಂಗ (05-05-2023)

ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ.

ತಿಥಿ: ಹುಣ್ಣಿಮೆ 23:03 ವಾರ: ಶುಕ್ರವಾರ
ನಕ್ಷತ್ರ: ಸ್ವಾತಿ 21:38 ಯೋಗ: ಸಿದ್ಧಿ 09:15
ಕರಣ: ವಿಷ್ಟಿ (ಭದ್ರ) 11:27 ಇಂದಿನ ವಿಶೇಷ: ಬುದ್ಧ ಪೂರ್ಣಿಮಾ, ಕೂರ್ಮ ಜಯಂತಿ, ಅಗಿ ಹುಣ್ಣಿಮೆ.
ಅಮೃತಕಾಲ: ಮಧ್ಯಾಹ್ನ 12 ಗಂಟೆ 50 ನಿಮಿಷದಿಂದ ಸಂಜೆ 02 ಗಂಟೆ 26 ನಿಮಿಷದವರೆಗೆ.

ಸೂರ್ಯೋದಯ : 05:58 ಸೂರ್ಯಾಸ್ತ : 06:35

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ದೈಹಿಕ ಶ್ರಮ ಹೆಚ್ಚಲಿದೆ. ಸಂಶಯಾಸ್ಪದವಾದ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ. ಆಪ್ತರಿಂದ ಸಿಹಿ ಸುದ್ದಿ ಬರಲಿದೆ. ದಿನದ ಮಟ್ಟಿಗೆ ಖರ್ಚು. ಸಂಗಾತಿಯ ಮಧುರ ಮಾತುಗಳು ಹಿತ ವೆನಿಸುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ವೃಷಭ: ಕುಟುಂಬದ ಆಪ್ತರಿಂದ ಆರ್ಥಿಕ ಸಹಾಯದ ಬೇಡಿಕೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ವಿದ್ಯಾರ್ಥಿಗಳ ಮನೋಬಲ ಹೆಚ್ಚಿಸಿಕೊಳ್ಳುವುದು ಅವಶ್ಯಕ. ಧೈರ್ಯ ಕಾಡಬಹುದು. ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗುವುದು. ಆರೋಗ್ಯ ಮಧ್ಯಮ. ಉದ್ಯೋಗಿಗಳಿಗೆ ಕಿರಿಕಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಮಿಥುನ: ಸದಾ ಹಗಲು ಕನಸುಗಳನ್ನು ಕಾಣುವುದರಿಂದ ಯಾವುದೇ ಪ್ರಯೋಜನವಿಲ್ಲ. ಬೇರೆಯವರಿಗೆ ಆರ್ಥಿಕ ಸಹಾಯ ಮಾಡಿ ನೀವು ಹಣಕಾಸಿನ ಸಮಸ್ಯೆಯಲ್ಲಿ ಸಿಲುಕುವುದು ಬೇಡ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಕಟಕ: ಕುಟುಂಬದ ಸದಸ್ಯರಿಂದ ಆರ್ಥಿಕ ಬೆಂಬಲ ಸಿಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಹಣದ ಹರಿವು ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣ. ಆಪ್ತ ವ್ಯಕ್ತಿಗಳೊಂದಿಗೆ ಮಾತುಕತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಸಿಂಹ: ಕೆಲವು ಘಟನೆಗಳು ನಿಮ್ಮ ಮನಸ್ಸಿನ ಮೇಲೆ ಪರಿಣಾಮ ಬೀರುವವು. ಆರೋಗ್ಯ ಪರಿಪೂರ್ಣ. ಸಹೋದ್ಯೋಗಿಗಳಿಂದ ಬೆಂಬಲ ಸಿಗಲಿದೆ. ಕ್ಷೇತ್ರ ದರ್ಶನ ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

ಕನ್ಯಾ: ದೀರ್ಘಕಾಲದ ಕೆಲಸ ಕಾರ್ಯಗಳು ಇಂದು ಯಶಸ್ಸನ್ನು ತಂದು ಕೊಡಲಿವೆ. ಆದಾಯದ ಮೂಲ ಹೆಚ್ಚಾಗಲಿದೆ. ಆಪ್ತರೊಂದಿಗೆ ಮಾತುಕತೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ, ಕುಟುಂಬದ ವಾತಾವರಣ ಹದಗೆಡುವ ಸಾಧ್ಯತೆ. ಉದ್ಯೋಗಿಗಳಿಗೆ ಕಿರಿಕಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಆತ್ಮವಿಶ್ವಾಸದಿಂದ ಕೆಲಸಕಾರ್ಯಗಳಲ್ಲಿ ಪ್ರಗತಿ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವಿರಿ. ಹಣಕಾಸು, ಉದ್ಯೋಗ ಹಾಗೂ ವ್ಯಾಪಾರದಲ್ಲಿ ಪ್ರಗತಿ. ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಕಾಲ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ವೃಶ್ಚಿಕ: ಆರೋಗ್ಯದ ಕುರಿತು ಕಾಳಜಿ ಇರಲಿ. ನ್ಯಾಯಾಲಯದಲ್ಲಿರುವ ವ್ಯಾಜ್ಯಗಳು ವಿಜಯವನ್ನು ತಂದುಕೊಡುವ ಸಾಧ್ಯತೆ. ಹಣಕಾಸು, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಧನಸ್ಸು: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಹಾದಿ ಅತ್ಯವಶ್ಯಕ. ಹಣಕಾಸು ವಿಷಯದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಮಿಶ್ರ ಫಲ. ಕೆಲಸ ಕಾರ್ಯಗಳಲ್ಲಿ ಯಶಸ್ಸು. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಈಗ ಯಾವ ರಾಶಿಗೆ ಹಣ ಪ್ರಾಪ್ತಿಯಾಗುವ ಸಮಯ? ಈ ವಿಡಿಯೋ ನೋಡಿ.

ಮಕರ: ಬುದ್ಧಿವಂತಿಕೆಯಿಂದ ಕೆಲಸಕಾರ್ಯಗಳಲ್ಲಿ ಯಶಸ್ಸು ಕೀರ್ತಿ ಸಿಗುವುದು. ಶೀಘ್ರಕೋಪ ಅಪಾಯ ತರುವುದು. ಆರೋಗ್ಯ ಪರಿಪೂರ್ಣ. ಆರ್ಥಿಕ ಲಾಭ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

ಕುಂಭ: ದುಂದುವೆಚ್ಚವನ್ನು ತಪ್ಪಿಸಿ. ಬುದ್ಧಿವಂತಿಕೆಯಿಂದ ಕೆಲಸ ಮಾಡಿ. ಸುಮ್ಮನೆ ಶ್ರಮಪಡುವ ಅಗತ್ಯವಿಲ್ಲ. ಗೌಪ್ಯ ವಿಷಯಗಳನ್ನು ಬೇರೆಯವರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಮೀನ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ. ಆರೋಗ್ಯ ಮಧ್ಯಮ. ಆರ್ಥಿಕವಾಗಿ ಪ್ರಗತಿ. ಸಂಗಾತಿ ಇಂದು ನಿಮ್ಮೊಂದಿಗೆ ಮುಖ್ಯ ವಿಷಯದ ಕುರಿತು ಚರ್ಚಿಸಬಹುದು. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : ಬಹುತೇಕ ಶುಭಫಲಗಳನ್ನೇ ನೀಡುವ ಬುಧನ ಭಾವಫಲಗಳು ಹೀಗಿವೆ

Exit mobile version