ಪ್ರಮುಖ ಸುದ್ದಿ
Horoscope Today : ವಾರದ ರಜೆಯ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ
ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಬಿದಿಗೆಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಇಂದಿನ ಪಂಚಾಂಗ (07-05-2023)
ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಬಿದಿಗೆ 20:14 ವಾರ: ಭಾನುವಾರ
ನಕ್ಷತ್ರ: ಅನುರಾಧ 20:20 ಯೋಗ: ಪರಿಘ 26:50
ಕರಣ: ತೈತುಲ 09:06 ಇಂದಿನ ವಿಶೇಷ: ನಾರದ ಜಯಂತಿ, ವಿಶ್ವ ನಗೆ ದಿನ
ಅಮೃತಕಾಲ: ಬೆಳಗ್ಗೆ 10 ಗಂಟೆ 20 ನಿಮಿಷದಿಂದ 11 ಗಂಟೆ 52 ನಿಮಿಷದವರೆಗೆ
ಸೂರ್ಯೋದಯ : 05:57 ಸೂರ್ಯಾಸ್ತ : 06:36
ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30
ದ್ವಾದಶ ರಾಶಿ ಭವಿಷ್ಯ (Horoscope Today)
ಮೇಷ: ಆರೋಗ್ಯದಲ್ಲಿ ಪ್ರಗತಿ. ವ್ಯಾಪಾರ ವ್ಯವಹಾರದಲ್ಲಿ ಲಾಭ. ಅತಿಯಾದ ಸಂಶಯಾತ್ಮಕ ಸ್ವಭಾವ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5
ವೃಷಭ: ಕೈಗೆ ಬಂದ ತುತ್ತು ಬಾಯಿಗೆ ಬರುವ ಮುನ್ನ ಕೋಪದಿಂದ ಪರಿಸ್ಥಿತಿ ಹದಗೆಡಲು ಹಾದಿ ಮಾಡಿಕೊಳ್ಳುವುದು ಬೇಡ. ತಾಳ್ಮೆಯಿಂದ ವರ್ತಿಸಿ. ಕೆಲಸ ಕಾರ್ಯಗಳಲ್ಲಿ ಮಂದಗತಿ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4
ಮಿಥುನ: ಆಪ್ತ ವ್ಯಕ್ತಿಗಳಿಂದ ಸಲಹೆ- ಸಹಕಾರ ಸಿಗಲಿದೆ. ಆರ್ಥಿವಾಗಿ ಬಲ ಸಿಗಲಿದೆ. ದ್ವಿಸ್ವಭಾವದವರಾದ ನೀವು ಆಂತರಿಕ ಭಯದಿಂದ ಬಳಲುವ ಸಾಧ್ಯತೆ. ಆರೋಗ್ಯದಲ್ಲಿ ಪ್ರಗತಿ. ಉದ್ಯೋಗದಲ್ಲಿ ನಿಮಗೆ ಇಂದು ಒಂದಿಷ್ಟು ಅಡೆ-ತಡೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಕಟಕ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ಹೊಸ ವ್ಯವಹಾರದಲ್ಲಿ ತೊಡಗುವಿರಿ. ಆತುರದ ತಿರ್ಮಾನಗಳು ಬೇಡ. ಕುಟುಂಬದ ಸದಸ್ಯರೊಂದಿಗೆ ಚರ್ಚೆ ನಡೆಸುವಿರಿ. ಸಂಗಾತಿಯ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಸಿಂಹ: ಅತಿಯಾದ ವ್ಯಾಮೋಹ ದುಃಖಕ್ಕೆ ಕಾರಣವಾಗಬಹುದು. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ನಿಮ್ಮ ಶಕ್ತಿ ಮತ್ತು ನಿಮ್ಮ ಮುಂದಿನ ಯೋಜನೆಗಳನ್ನು ಮರು ನಿರ್ಣಯಿಸುವ ಸಮಯ. ಆರೋಗ್ಯದಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಕನ್ಯಾ: ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಅತಿಥಿಗಳ ಆಗಮನ ಸಂತಸ ತರುವುದು. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಆಪ್ತರ ಮಾತುಗಳು ಅಗಾದ ಪರಿಣಾಮ ಬೀರುವ ಸಾಧ್ಯತೆ. ಹಣಕಾಸು ವ್ಯವಹಾರದಲ್ಲಿ ಕುಂಠಿತ. ಕುಟುಂಬದ ಸದಸ್ಯರ ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು. ದೃತಿಗೆಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ವೃಶ್ಚಿಕ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ. ಅನಗತ್ಯ ಖರ್ಚುಗಳು ಹೆಚ್ಚಾಗುವ ಸಾಧ್ಯತೆ. ನಿಮ್ಮ ಉದಾರತೆಯನ್ನು ಬೆರೆಯವರು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ. ಉದ್ಯೋಗದಲ್ಲಿ, ವ್ಯವಹಾರದಲ್ಲಿ ಶುಭ ಫಲ. ಕೌಟುಂಬಿಕವಾಗಿಯೂ ಶುಭಫಲ.
ಅದೃಷ್ಟ ಸಂಖ್ಯೆ: 6
ಧನಸ್ಸು: ದೈಹಿಕವಾಗಿ ನಿಮಗೆ ಆಯಾಸವಾಗುವುದು. ಅತಿಯಾದ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ. ಕೆಲಸಕಾರ್ಯಗಳಲ್ಲಿ ನಿಧಾನ. ವ್ಯಾಪಾರದಲ್ಲಿ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 3
ಮಕರ: ಆರೋಗ್ಯದ ದೃಷ್ಟಿಯಿಂದ ಉತ್ತಮವಾದ ದಿನ. ಎಂದಿಗಿಂತ ಇಂದು ನೀವು ಉತ್ಸಾಹದಿಂದ ಇರುವಿರಿ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಪ್ರೀತಿ ಅಂಕುರವಾಗುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3
ಕುಂಭ: ಭರವಸೆಯು ನಿಮ್ಮ ಕೆಲಸದಲ್ಲಿ ಸಹಾಯ ಮಾಡುವುದು. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ವ್ಯಾಪಾರ-ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಮೀನ: ಪ್ರೀತಿ, ಭರವಸೆ, ನಂಬಿಕೆ, ಸಹಾನುಭೂತಿ, ಆಶಾವಾದ ಮತ್ತು ನಿಷ್ಠೆಗಳಂಥ ಧನಾತ್ಮಕ ಭಾವನೆಗಳನ್ನು ಗ್ರಹಿಸಲು ಮನಸ್ಸು ಪ್ರೋತ್ಸಾಹಿಸುವುದು. ಹಿಡಿದ ಕಾರ್ಯದಲ್ಲಿ ಪ್ರಗತಿ. ಹಿರಿಯರ ಆಶೀರ್ವಾದ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | [email protected]
ಇದನ್ನೂ ಓದಿ : ಗುರು ಗ್ರಹ ನೀಡುವ ಭಾವಫಲಗಳ ಬಗ್ಗೆ ಮಾಹಿತಿ ಇದೆಯೇ?
ದೇಶ
17 ವರ್ಷದ ಹೆಣ್ಣುಮಕ್ಕಳು ಮಗು ಹೆರುವ ಕಾಲವಿತ್ತು; ರೇಪ್ ಸಂತ್ರಸ್ತೆಯ ಗರ್ಭಪಾತ ಬೇಡವೆಂದ ಹೈಕೋರ್ಟ್
Viral News: ಅತ್ಯಾಚಾರಕ್ಕೀಡಾದ ಬಾಲಕಿಯು ಈಗ ಗರ್ಭ ಧರಿಸಿದ್ದು, ಆಕೆಯ ವಯಸ್ಸನ್ನು ಪರಿಗಣಿಸಿ ನ್ಯಾಯಾಲಯವು ವೈದ್ಯಕೀಯ ಗರ್ಭಪಾತಕ್ಕೆ ಅನುಮತಿ ನೀಡಬೇಕು ಎಂದು ಅರ್ಜಿ ಸಲ್ಲಿಸಲಾಗಿದೆ. ಆದರೆ, ಇದಕ್ಕೆ ಗುಜರಾತ್ ಹೈಕೋರ್ಟ್ ನಿರಾಕರಿಸಿದೆ.
ಗಾಂಧಿನಗರ: 17 ವರ್ಷದ ಬಾಲಕಿಯ ಗರ್ಭಪಾತಕ್ಕೆ ಅನುಮತಿ ನೋಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದೆ. ಅತ್ಯಾಚಾರ ಸಂತ್ರಸ್ತೆ ಗರ್ಭ ಧರಿಸಿ ಈಗ ತಿಂಗಳಾಗಿದೆ. ಆಕೆಯ ಗರ್ಭಪಾತಕ್ಕೆ ಕೋರಿ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ತಳ್ಳಿಹಾಕಿದೆ. ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯವು, “ಮೊದಲೆಲ್ಲ 17 ವರ್ಷದ ಹೆಣ್ಣುಮಕ್ಕಳು ಮಕ್ಕಳನ್ನು ಹೆರುತ್ತಿದ್ದರು, 14-15 ವರ್ಷಕ್ಕೆ ಮದುವೆಯಾಗುತ್ತಿದ್ದರು. ಇದೆಲ್ಲ ತಿಳಿಯಲು (Viral News) ಮನುಸ್ಮೃತಿ ಓದಿ” ಎಂದು ಕೂಡ ಹೇಳಿದೆ.
ಅತ್ಯಾಚಾರ ಸಂತ್ರಸ್ತೆಯ ವಯಸ್ಸನ್ನು ಪರಿಗಣಿಸಿ, ಆಕೆಗೆ ವೈದ್ಯಕೀಯ ಗರ್ಭಪಾತಕ್ಕೆ ಅನುಮತಿ ನೀಡಬೇಕು ಎಂದು ಸಂತ್ರಸ್ತ ಬಾಲಕಿಯ ತಂದೆಯು ಅರ್ಜಿ ಸಲ್ಲಿಸಿದ್ದರು. “ಹಿಂದಿನ ಕಾಲದಲ್ಲಿ 18 ವರ್ಷ ತುಂಬುವ ಮೊದಲೇ ಹೆಣ್ಣುಮಕ್ಕಳು ಮದುವೆಯಾಗಿ, ಮಕ್ಕಳನ್ನು ಹೆರುತ್ತಿದ್ದರು ಎಂಬುದು ಗೊತ್ತಿರಲಿ. ಇದನ್ನು ನೀವು ಓದಿಲ್ಲವೆಂದರೆ, ಮನುಸ್ಮೃತಿ ಓದಿ ತಿಳಿದುಕೊಳ್ಳಿ” ಎಂದು ನ್ಯಾಯಮೂರ್ತಿ ಸಮೀರ್ ಜೆ ದಾವೆ ಹೇಳಿದರು.
ಸಂತ್ರಸ್ತೆಯ ತಂದೆ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಸಿಕಂದರ್ ಸೈಯದ್, “ಆಗಸ್ಟ್ 18ರಂದು ಬಾಲಕಿಯು ಮಗು ಹೆರುವ ಸಾಧ್ಯತೆ ಇದೆ. ವೈದ್ಯರು ಡೇಟ್ ಕೊಟ್ಟಿದ್ದಾರೆ. ಆಕೆಯ ವಯಸ್ಸನ್ನು ಪರಿಗಣಿಸಿ ಗರ್ಭಪಾತಕ್ಕೆ ಅನುಮತಿ ನೀಡಬೇಕು” ಎಂದು ವಾದ ಮಂಡಿಸಿದರು. ಆದರೆ, ನ್ಯಾಯಾಲಯವು, “ಬಾಲಕಿ ಹಾಗೂ ಮಗು ಆರೋಗ್ಯವಾಗಿದ್ದರೆ ಗರ್ಭಪಾತಕ್ಕೆ ಅನುಮತಿ ನೀಡುವುದಿಲ್ಲ” ಎಂದು ಸ್ಪಷ್ಟಪಡಿಸಿತು. ಹಾಗೆಯೇ, ಬಾಲಕಿಯ ವೈದ್ಯಕೀಯ ಪರೀಕ್ಷೆಗೆ ಆದೇಶಿಸಿತು.
ಇದನ್ನೂ ಓದಿ: Video Viral: ಚಾಮರಾಜನಗರದಲ್ಲಿ ಹಾವುಗಳ ಮಿಲನ; ಗಂಟೆಗೂ ಹೆಚ್ಚು ಸರಸ ಸಲ್ಲಾಪ! ವೈರಲ್ ಆಯ್ತು ವಿಡಿಯೊ
ರಾಜಕೋಟ್‌ನಲ್ಲಿರುವ ಸಿವಿಲ್ ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಅವರು ಬಾಲಕಿ ಹಾಗೂ ಆಕೆಯ ಹೊಟ್ಟೆಯಲ್ಲಿರುವ ಮಗುವಿನ ವೈದ್ಯಕೀಯ ತಪಾಸಣೆಯನ್ನು ತುರ್ತಾಗಿ ಮಾಡಬೇಕು ಎಂದು ಗುಜರಾತ್ ಹೈಕೋರ್ಟ್ ನಿರ್ದೇಶನ ನೀಡಿದೆ. ವೈದ್ಯಕೀಯ ವರದಿಯನ್ನು ಆಧರಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ ನ್ಯಾಯಾಲಯವು, ಜೂನ್ 15ಕ್ಕೆ ವಿಚಾರಣೆ ಮುಂದೂಡಿದೆ.
ಸಹೋದರನಿಂದಲೇ ಗರ್ಭ ಧರಿಸಿದ 15 ವರ್ಷದ ಬಾಲಕಿಯ ಗರ್ಭಪಾತಕ್ಕೆ ಕೆಲ ದಿನಗಳ ಹಿಂದೆ ಕೇರಳ ಹೈಕೋರ್ಟ್ ಅನುಮತಿ ನೀಡಿತ್ತು. ಗರ್ಭಪಾತ ಮಾಡಿಸಲು ಅನುಮತಿ ಕೋರಿ ಬಾಲಕಿಯ ತಂದೆ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ್ದ ಏಕ ಸದಸ್ಯ ಪೀಠದ ನ್ಯಾ. ಜಿಯಾದ್ ರೆಹಮಾನ್ ಅವರು ಗರ್ಭಪಾತ ಮಾಡಿಸಲು ಅನುಮತಿ ನೀಡಿದ್ದರು.
“ಗರ್ಭಪಾತಕ್ಕೆ ಅನುಮತಿ ನೀಡದೆ ಹೋದರೆ ಸಾಮಾಜಿಕ ವ್ಯವಸ್ಥೆ ಹಾಗೂ ಬಾಲಕಿಯ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ, ಗರ್ಭಪಾತಕ್ಕೆ ಅನುಮತಿ ನೀಡಲಾಗಿದೆ” ಎಂದು ಸ್ಪಷ್ಟಪಡಿಸಿತು. ವೈದ್ಯಕೀಯ ಮಂಡಳಿಯು ಗರ್ಭಪಾತದ ಕುರಿತು ವರದಿ ಸಲ್ಲಿಸಿತ್ತು. 15 ವರ್ಷದ ಬಾಲಕಿಗೆ ಗರ್ಭಪಾತಕ್ಕೆ ಅನುಮತಿ ನೀಡದಿದ್ದರೆ ಸಾಮಾಜಿಕ ವ್ಯವಸ್ಥೆ ಹಾಗೂ ಆಕೆಯ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಹಾಗಾಗಿ, ಗರ್ಭಪಾತಕ್ಕೆ ಅನುಮತಿ ಸಿಕ್ಕಿತ್ತು.
ಕರ್ನಾಟಕ
Viral News: ಮುಖ್ಯಮಂತ್ರಿಗಳೇ ಎಣ್ಣೆ ರೇಟ್ ಜಾಸ್ತಿ ಮಾಡ್ಬೇಡಿ; BPL ಕಾರ್ಡ್‌ದಾರನ ವಾರ್ಷಿಕ ಲೆಕ್ಕ ಮುಂದಿಟ್ಟ ಕುಡುಕರ ಸಂಘ!
liquor price: ರಾಜ್ಯ ಸರ್ಕಾರ ಮದ್ಯದ ಮೇಲಿನ ಸುಂಕವನ್ನು ಏರಿಕೆ ಮಾಡುತ್ತಲೇ ಇದೆ. ಇದು ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ತೀವ್ರ ಸಂಕಷ್ಟವನ್ನು ತಂದೊಡ್ಡಿದೆ. ಈ ಕಾರಣದಿಂದಾಗಿ ಮದ್ಯದ ಮೇಲಿನ ಸುಂಕವನ್ನು ಇಳಿಕೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕುಡುಕರ ಸಂಘವು ಪತ್ರ ಬರೆದು ಮನವಿ ಮಾಡಿದೆ!
ಬೆಂಗಳೂರು: ಅನೇಕ ಬಜೆಟ್ ಮಂಡನೆ ಸಂದರ್ಭದಲ್ಲಿ ಮದ್ಯ ಪ್ರಿಯರಿಗೆ ಆಯಾ ಸರ್ಕಾರಗಳು ಶಾಕ್ ಕೊಡುತ್ತಲೇ ಬರುತ್ತಿವೆ. ಮದ್ಯದ ದರದ ಮೇಲೆ ಅಬಕಾರಿ ಸುಂಕವನ್ನು ಹೇರುತ್ತಿವೆ. ಈಗ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಈ ನಡುವೆ ಅವರಿಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಸವಾಲಿದೆ. ಅದಕ್ಕೆ ಹಣ ಹೊಂದಾಣಿಕೆಯನ್ನು ಮಾಡಬೇಕಿದೆ. ಇದು ಈಗ ಮದ್ಯ ಪ್ರಿಯರಲ್ಲಿ ತಲ್ಲಣವನ್ನು ಹುಟ್ಟಿಸಿದೆ. ಈ ಕಾರಣಕ್ಕೆ ಅವರೆಲ್ಲರೂ “ಎಣ್ಣೆಯ ವಿಷ್ಯ, ಬೇಡವೋ ಶಿಷ್ಯ” ಎಂಬ ಹಾಡನ್ನು ಹಾಡಬೇಕಾಗುತ್ತದೆ ಎಂದು ಆತಂಕದಲ್ಲಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಕರ್ನಾಟಕ ರಾಜ್ಯ ಮದ್ಯ ಪ್ರೇಮಿಗಳ/ಕುಡುಕರ ಸಂಘವು, ಈಗಾಗಲೇ ಮದ್ಯದ ಸುಂಕವನ್ನು ಹೆಚ್ಚಳ ಮಾಡಿದ್ದು, ಅದನ್ನು ಇಳಿಸಿ ಎಂದು ಮನವಿ ಮಾಡಿದ್ದಾರೆ. ಈ ಪತ್ರ ಈಗ ವೈರಲ್ (Viral News) ಆಗಿದೆ.
ಇದಲ್ಲದೆ, ಅಬಕಾರಿ ಸಚಿವರು, ಶುಲ್ಕ ನಿಯಂತ್ರಣ ಸಮಿತಿ ಅಧ್ಯಕ್ಷರು, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೂ ಪತ್ರದ ಪ್ರತಿಯನ್ನು ಲಗತ್ತಿಸಿದ್ದು, ದಯಮಾಡಿ ಅಬಕಾರಿ ಸುಂಕವನ್ನು ಇಳಿಸಿ ಸಂಕಷ್ಟದಲ್ಲಿರುವ ಮದ್ಯ ಪ್ರಿಯರ ರಕ್ಷಣೆಗೆ ದಾವಿಸಿ ಎಂದು ಮೊರೆ ಇಟ್ಟಿದ್ದಾರೆ!
ಇದನ್ನೂ ಓದಿ: Electricity Bill: ನೇಕಾರರಿಗೆ ಶಾಕ್! 90 ರೂಪಾಯಿ ಮಿನಿಮಮ್ ಚಾರ್ಜ್ 140ಕ್ಕೆ ಏರಿಕೆ; ಇದು ಗ್ಯಾರಂಟಿ ಎಫೆಕ್ಟಾ?
ಮನವಿ ಪತ್ರದಲ್ಲೇನಿದೆ?
ಮಾನ್ಯ ಮುಖ್ಯಮಂತ್ರಿ ಮತ್ತು ಮದ್ಯ ಪ್ರಿಯರ ಇಲಾಖೆ ಅಂದರೆ ಅಬಕಾರಿ ಇಲಾಖೆಯ ಸಚಿವರಲ್ಲಿ ವಿನಂತಿಸುವುದೇನೆಂದರೆ, ರಾಜ್ಯದಲ್ಲಿ ಜಾತಿ, ಧರ್ಮ, ಬಡವ ,ಬಲ್ಲಿದ, ರಾಜಕಾರಣಿ, ಡಾಕ್ಟರ್, ಪತ್ರಕರ್ತ, ಸರ್ಕಾರಿ ನೌಕರರು, ವಕೀಲರು ಎಂಬ ತಾರತಮ್ಯ ಇಲ್ಲದೆ ಮದ್ಯ ಸೇವನೆಯನ್ನು ಮಾಡುತ್ತಾರೆ. ಎಲ್ಲ ವರ್ಗದವರು ಮದ್ಯ ಸೇವನೆಯನ್ನು ಮಾಡುತ್ತಿದ್ದು, ಇದು ಆಹಾರ ಸಂಸ್ಕೃತಿಯ ಭಾಗವಾಗಿದೆ. ಮದುವೆ, ಹಬ್ಬ ಹರಿದಿನಗಳಲ್ಲಿ ಆರಾಧನೆ ಪದ್ಧತಿಯಲ್ಲಿ, ಸಂತೋಷ ಕೂಟದಲ್ಲಿ ಮದ್ಯ ಪ್ರಿಯರು ಮದ್ಯ ಸೇವನೆಯನ್ನು ಮಾಡುತ್ತಿದ್ದಾರೆ. ಸುರಪಾನಕ್ಕೆ ಭಾರತೀಯ ಸಂಸ್ಕೃತಿಯಲ್ಲಿ ಸಾವಿರಾರು ವರ್ಷಗಳ ಇತಿಹಾಸ ಇದೆ.
ಇದರಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ರೂಪಾಯಿ ಆದಾಯ ಬರುತ್ತಿದೆ. ಇಷ್ಟೆಲ್ಲ ಆದಾಯ ಬರುತ್ತಿದ್ದರೂ ಮದ್ಯ ಪ್ರೇಮಿಗಳ ಬಗ್ಗೆ ಕಾಳಜಿ ವಹಿಸದಿರುವುದು ತುಂಬ ದುಃಖಕರ ವಿಷಯ. ಈಗಾಗಲೇ ರಾಜ್ಯ ಸರ್ಕಾರವು ಮದ್ಯದ ಮೇಲಿನ ತೆರಿಗೆಯನ್ನು ಜಾಸ್ತಿ ಮಾಡಿದೆ ಎಂದು ಮಾಧ್ಯಮಗಳ ಮೂಲಕ ತಿಳಿದು ಬಂದಿದೆ.
ಮಾನ್ಯ ಮುಖ್ಯಮಂತ್ರಿಗಳಲ್ಲಿ ವಿನಂತಿ ಏನೆಂದರೆ, ಒಬ್ಬ ಬಿಪಿಎಲ್ ಕಾರ್ಡ್ ಹೊಂದಿದವನ ಆದಾಯ ಅಲ್ಪ ಪ್ರಮಾಣದಲ್ಲಿ ಇರುತ್ತದೆ. ಮದ್ಯ ಪ್ರೇಮಿ ದಿನಗೂಲಿ ನೌಕರ ದಿನವೂ ಸರಾಸರಿ 180 ಎಂ.ಎಲ್. ಕುಡಿದರೂ ಅವನಿಗೆ ದಿನಕ್ಕೆ 200 ರಿಂದ 250 ರೂಪಾಯಿಯಷ್ಟು ಮದ್ಯಕ್ಕೆ ಖರ್ಚು ತಗಲುತ್ತದೆ. ಅಂದರೆ, ತಿಂಗಳಿಗೆ 7500 ರೂಪಾಯಿ ಬೇಕಾಗುತ್ತದೆ. ವಾರ್ಷಿಕ 90,000 ರೂಪಾಯಿ ಒಬ್ಬ ಮದ್ಯ ಪ್ರೇಮಿ ಕುಡುಕನಿಗೆ ಬೇಕಾಗುತ್ತದೆ.
ಇದನ್ನೂ ಓದಿ: Congress Guarantee: ʼಗೃಹಲಕ್ಷ್ಮಿʼಗೂ ಮಗನ ಐಟಿಗೂ ಸಂಬಂಧ ಇಲ್ಲ; ಉಲ್ಟಾ ಹೊಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಇದರಿಂದ ಮದ್ಯಮ ವರ್ಗ ಮತ್ತು ಬಡವರಿಗೆ ಆರ್ಥಿಕವಾಗಿ ಹೊರೆಯಾಗಲಿದೆ. ಆದ್ದರಿಂದ ಮದ್ಯದ ಮೇಲಿನ ಸುಂಕದ ದರ ಹೆಚ್ಚಳ ಬಗ್ಗೆ ಪುನರ್ ಪರಿಶೀಲನೆ ಮಾಡಿ ಸ್ಥಳೀಯ ಬ್ರಾಂಡ್‌ನ ಇಂಡಿಯನ್ ಮೇಡ್ ಫಾರಿನ್ ಲಿಕ್ಕರ್ ಹಾಗೂ ಬಿಯರ್ ಮೇಲಿನ ಸುಂಕವನ್ನು ಕಡಿಮೆ ಮಾಡಬೇಕು ಎಂದು ಎಲ್ಲ ಮದ್ಯ ಪ್ರಿಯ ಬ್ರದರ್ಸ್ & ಸಿಸ್ಟರ್ಸ್ ಪರವಾಗಿ ವಿನಂತಿಸುತ್ತೇವೆ.
ಪ್ರಮುಖ ಸುದ್ದಿ
New Country: ಕೇವಲ 15 ಲಕ್ಷ ರೂ.ನಲ್ಲಿ ರೆಡಿ ಆಯ್ತು ಹೊಸ ದೇಶ, ಹೆಸರು ಸ್ಲೋಜಾಮ್‌ಸ್ತಾನ!
New Country: ಅಮೆರಿಕದ ಪ್ರವಾಸಿಗ ತನ್ನದೇ ಆದ ಸ್ವಂತ ರಾಷ್ಟ್ರ ನಿರ್ಮಾಣ ಮಾಡಿದ್ದಾನೆ. ಅದು ಕೇವಲ ಹದಿನೈದು ಲಕ್ಷ ರೂಪಾಯಿ ವೆಚ್ಚ ಮಾಡಿದ್ದಾನಷ್ಟೇ.
ನವದೆಹಲಿ: ರೇಪ್ ಆರೋಪ ಹೊತ್ತು ದೇಶ ಪಲಾಯನ ಮಾಡಿದ ನಿತ್ಯಾನಂದ ಸ್ವಾಮಿ ಈಕ್ವೆಡಾರ್ ಕರಾವಳಿಯಲ್ಲಿ ಕೈಲಾಸ ಎಂಬ ತನ್ನದೇ ಆದ ಸ್ವಂತ ದೇಶ ನಿರ್ಮಾಣ ಮಾಡಿದ್ದು ಭಾರತೀಯರಿಗೆ ಗೊತ್ತೇ ಇರುತ್ತದೆ. ಅದೇ ರೀತಿ, ಅಮೆರಿಕ ವ್ಯಕ್ತಿಯೊಬ್ಬ ಸ್ವಂತ ದೇಶವನ್ನು (New Country) ಸೃಷ್ಟಿಸಿಕೊಂಡಿದ್ದಾನೆ. ವೃತ್ತಿಯಿಂದ ಡಿಜೆ ಆಗಿರುವ ಆರ್ ಡಬ್ ವಿಲಿಯಮ್ಸ್(R Dub Williams), ತಮ್ಮ ಪ್ರದರ್ಶನಕ್ಕೆ ಸ್ಲೋ ಜಾಮ್ಸ್ ಎಂದು ಹೆಸರಿಟ್ಟಿದ್ದಾರೆ. ಈಗ ಅದೇ ಹೆಸರನ್ನು ತಮ್ಮ ದೇಶಕ್ಕೆ ಇಟ್ಟಿದ್ದಾರೆ(Viral News). ಅಂದರೆ, ವಿಲಿಯಮ್ಸ್ ಅವರ ದೇಶದ ಹೆಸರು ಸ್ಲೋಜಾಮ್‌ಸ್ತಾನ (Slowjamastan).
ಸಿಎನ್ಎನ್ ಟ್ರಾವೆಲ್ಲರ್ ಜತೆ ಮಾತನಾಡಿರುವ ವಿಲಿಯಮ್ಸ್, ನನಗೆ ಪ್ರವಾಸ ಮಾಡಲು ಈಗ ದೇಶಗಳೇ ಉಳಿದಿಲ್ಲ. ಹಾಗಾಗಿ, ನನ್ನದೇ ಆದ ಸ್ವಂತ ನಿರ್ಮಾಣ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ವಿಶ್ವಸಂಸ್ಥೆ ಗುರುತಿಸಿರುವ 193 ರಾಷ್ಟ್ರಗಳ ಪೈಕಿ 192 ರಾಷ್ಟ್ರಗಳನ್ನು ಈ ಮಿಲಿಯಮ್ಸ್ ಭೇಟಿ ನೀಡಿದ್ದಾರೆ. ತಮ್ಮ ಈ ಪ್ರವಾಸದ ಪಟ್ಟಿಯಲ್ಲಿ ತುರ್ಕಮೇನಿಸ್ತಾನ ಕೊನೆಯ ರಾಷ್ಟ್ರವಾಗಿದ್ದು, ಶೀಘ್ರವೇ ಆ ರಾಷ್ಟ್ರಕ್ಕೂ ಅವರ ಭೇಟಿ ನೀಡಲಿದ್ದಾರೆ. ಈ ಕಾರಣಕ್ಕಾಗಿಯೇ ಅವರು 194ನೇ ರಾಷ್ಟ್ರವಾಗಿ ತಮ್ಮದೇ ಸ್ವಂತ ದೇಶವನ್ನು ನಿರ್ಮಾಣ ಮಾಡಿದ್ದಾರೆಂದು ಸಿಎನ್ಎನ್ ವರದಿ ಮಾಡಿದೆ.
ಅಮೆರಿಕದ ಕ್ಯಾಲಿಫೋರ್ನಿಯಾದ ಮರಳುಗಾಡಿನಲ್ಲಿ 11.07 ಎಕರೆ ಭೂಮಿಯನ್ನು ಖರೀದಿಸಿ ವಿಲಿಯಮ್ಸ್ ಅದಕ್ಕೆ ತಾವು ನಡೆಸಿಕೊಡುವ ಶೋ ಹೆಸರನ್ನೇ ಇಟ್ಟಿದ್ದಾರೆ. ಸ್ಲೋಜಾಮ್‌ಸ್ತಾನ್ ಸುಲ್ತಾನ್ ಆಗಿರುವ ವಿಲಿಯಮ್ಸ್, 2021 ಡಿಸೆಂಬರ್ 1ರಂದ ಅಮೆರಿಕದಿಂದ ಪ್ರತ್ಯೇಕಗೊಂಡ ಸ್ವತಂತ್ರ ರಾಷ್ಟ್ರ ಎಂದು ಘೋಷಿಸಿಕೊಂಡಿದ್ದಾರೆ. ದುಬ್ಲಾಂಡಿಯಾ, ಸ್ಲೋಜಾಮ್‌ಸ್ತಾನ್ ರಾಷ್ಟ್ರದ ರಾಜಧಾನಿಯಾಗಿದೆ. ಅಲ್ಲಿಂದಲೇ ಲೈವ್ ಮೂಲಕ ಸ್ವತಂತ್ರ ರಾಷ್ಟ್ರ ಎಂದು ಘೋಷಿಸಿದ್ದಾರೆ.
ಇದನ್ನೂ ಓದಿ: Swami Nithyananda: ʼಕೈಲಾಸʼದಿಂದ ವಿಶ್ವಸಂಸ್ಥೆಗೆ ಬಂದ ನಿತ್ಯಾನಂದನ ಪ್ರತಿನಿಧಿ ಯಾರೀಕೆ?
ಈ ಹೊಸ ರಾಷ್ಟ್ರವು ತನ್ನದೇ ಪಾಸ್‌ಪೋರ್ಟ್, ಸ್ವಂತ ಧ್ವಜ, ಸ್ವಂತ ಕರೆನ್ಸ್, ರಾಷ್ಟ್ರಗೀತೆ ಸೇರಿದಂತೆ ಸಾರ್ವಭೌಮ ರಾಷ್ಟ್ರಕ್ಕಿರುವ ಎಲ್ಲ ಸಂಗತಿಗಳನ್ನು ಒಳಗೊಂಡಿದೆ. ಸಿಎನ್ಎನ್ ಟ್ರಾವಲರ್ ವರದಿಯ ಪ್ರಕಾರ, ಸದ್ಯ 500 ನೋಂದಾಯಿತ ನಾಗರಿಕರಿದ್ದರು, ನೋಂದಣಿಗೆ ಇನ್ನೂ 4500 ಜನರು ಕಾಯ್ದು ಕುಳಿತಿದ್ದಾರೆ. ಅಂದ ಹಾಗೆ, ಹೊಸ ದೇಶ ನಿರ್ಮಾಣಕ್ಕೆ ವಿಲಿಯಮ್ಸ್ ಕೇವಲ 15 ಲಕ್ಷ ವೆಚ್ಚವಾಗಿದೆ.
ವಿದೇಶದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ
Karnataka Govt: ಜಿಲ್ಲಾ ಉಸ್ತುವಾರಿ ನೇಮಕದಲ್ಲಿ ಬಿಜೆಪಿ ನೀತಿಯನ್ನು ಕಿತ್ತೆಸೆದ ಕಾಂಗ್ರೆಸ್ ಸರ್ಕಾರ: ಇಬ್ಬರು ಸಚಿವರಿಗೆ ಜಿಲ್ಲೆ ಇಲ್ಲ
ಬಿಜೆಪಿ ಸರ್ಕಾರದಲ್ಲಿ (Karnataka Govt), ಅದೇ ಜಿಲ್ಲೆಯ ಶಾಸಕರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬಾರದು ಎಂಬ ನೀತಿ ಇತ್ತು.
ಬೆಂಗಳೂರು: ರಾಜ್ಯ ಸರ್ಕಾರವು (Karnataka Govt) ಎಲ್ಲ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶಿಸಿದೆ. ರಾಜ್ಯದ ಎಲ್ಲ ಸರ್ಕಾರಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಶಕ್ತಿ ಯೋಜನೆಗೆ ಜೂನ್ 11ರಂದು ರಾಜ್ಯಾದ್ಯಂತ ಚಾಲನೆ ನೀಡಲಾಗುತ್ತಿದ್ದು, ಜಿಲ್ಲಾ ಕೇಂದ್ರದಲ್ಲಿ ಇದೀಗ ನೇಮಕವಾಗಿರುವ ಜಿಲ್ಲಾ ಉಸ್ತುವಾರಿ ಸಚಿವರೇ ಹೊಣೆ ಹೊರಲಿದ್ದಾರೆ.
ಬಿಜೆಪಿ ಸರ್ಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕಕ್ಕೆ ನಿಯಮ ಹಾಕಿಕೊಳ್ಳಲಾಗಿತ್ತು. ಅದೇ ಜಿಲ್ಲೆಯ ಶಾಸಕರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬಾರದು ಎಂಬ ನೀತಿ ಇತ್ತು. ಆದರೆ ಈ ನೀತಿಯ ಕುರಿತು ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದರು. ಇದರಿಂದ ಜಿಲ್ಲಾ ಅಭಿವೃದ್ಧಿ ಸರಿಯಾಗಿ ನಡೆಯುವುದಿಲ್ಲ ಎಂದಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಇದಕ್ಕೆ ಸೊಪ್ಪು ಹಾಕಿರಲಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲುಂಡ ನಂಥರ ಅವಲೋಕನ ಸಭೆಯಲ್ಲೂ ಅಭ್ಯರ್ಥಿಗಳು ಇದೇ ಮಾತನ್ನು ಹೇಳಿದ್ದರು. ನಾಯಕರ ಮಾತನ್ನು ಕೇಳಿ ಅನೇಕರು ಸೋತರು ಎಂದು ತಿಳಿಸಿದ್ದರು.
ಇದೀಗ ಕಾಂಗ್ರೆಸ್ ಸರ್ಕಾರ, ಅದೇ ಜಿಲ್ಲೆಗೆ ನೇಮಕ ಮಾಡಬಾರದು ಎಂಬ ನೀತಿಯನ್ನು ಒಟ್ಟಾರೆ ಕೈಬಿಟ್ಟಿದೆ. ಬಹಳಷ್ಟು ಸಚಿವರಿಗೆ ಅದೇ ಜಿಲ್ಲೆಯನ್ನು ನೀಡಲಾಗಿದೆ. ಆದರೆ ಒಂದೇ ಜಿಲ್ಲೆಯಲ್ಲಿ ಇಬ್ಬರು ಸಚಿವರಿರುವಾಗ ಅನೇಕ ಜಿಲ್ಲೆಗಳಿಗೆ ಹೊರಗಿನವರನ್ನೂ ನೇಮಿಸಲಾಗಿದೆ.
ಸಚಿವರು ಹಾಗೂ ಉಸ್ತುವಾರಿ ಜಿಲ್ಲೆಗಳು
ಸಿಎಂ ಸಿದ್ದರಾಮಯ್ಯ (ಹಣಕಾಸು, ಗುಪ್ತಚರ)
ಡಿಸಿಎಂ ಡಿ.ಕೆ ಶಿವಕುಮಾರ್(ಸಣ್ಣ ಮತ್ತು ಬೃಹತ್ ನೀರಾವರಿ, ಬೆಂಗಳೂರು ಅಭಿವೃದ್ಧಿ)- ಬೆಂಗಳೂರು ನಗರ
ಜಿ.ಪರಮೇಶ್ವರ್ (ಗೃಹ)- ತುಮಕೂರು
ಹೆಚ್.ಕೆ ಪಾಟೀಲ್ (ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ)- ಗದಗ
ಕೆ.ಹೆಚ್ ಮುನಿಯಪ್ಪ (ಆಹಾರ ಮತ್ತು ನಾಗರಿಕ ಸರಬರಾಜು)-ಬೆಂಗಳೂರು ಗ್ರಾಮಾಂತರ
ರಾಮಲಿಂಗಾ ರೆಡ್ಡಿ (ಸಾರಿಗೆ ಹಾಗೂ ಮುಜರಾಯಿ)-ರಾಮನಗರ
ಎಂ.ಬಿ ಪಾಟೀಲ್ (ಬೃಹತ್ ಕೈಗಾರಿಕೆ)-ವಿಜಯಪುರ
ಕೆ.ಜೆ ಜಾರ್ಜ್ (ಇಂಧನ)-ಚಿಕ್ಕಮಗಳೂರು
ದಿನೇಶ್ ಗುಂಡೂರಾವ್ (ಆರೋಗ್ಯ)-ದಕ್ಷಿಣ ಕನ್ನಡ
ಹೆಚ್.ಸಿ ಮಹದೇವಪ್ಪ (ಸಮಾಜಕಲ್ಯಾಣ)-ಮೈಸೂರು
ಸತೀಶ್ ಜಾರಕಿಹೊಳಿ (ಲೋಕೋಪಯೋಗಿ)-ಬೆಳಗಾವಿ
ಕೃಷ್ಣ ಬೈರೇಗೌಡ (ಕಂದಾಯ)- ಇಲ್ಲ
ಪ್ರಿಯಾಂಕ್ ಖರ್ಗೆ (ಗ್ರಾಮೀಣಾಭಿವೃದ್ಧಿ, ಐಟಿ-ಬಿಟಿ)-ಕಲಬುರಗಿ
ಶಿವಾನಂದ ಪಾಟೀಲ್ (ಜವಳಿ, ಸಕ್ಕರೆ)-ಹಾವೇರಿ
ಜಮೀರ್ (ವಸತಿ)-ವಿಜಯನಗರ
ಶರಣಬಸಪ್ಪ ದರ್ಶನಾಪುರ್ (ಸಣ್ಣ ಕೈಗಾರಿಕೆ)-ಯಾದಗಿರಿ
ಈಶ್ವರ್ ಖಂಡ್ರೆ (ಅರಣ್ಯ)-ಬೀದರ್
ಚಲುವರಾಯಸ್ವಾಮಿ (ಕೃಷಿ)-ಮಂಡ್ಯ
ಎಸ್.ಎಸ್ ಮಲ್ಲಿಕಾರ್ಜುನ (ಗಣಿ ಮತ್ತು ಭೂಗರ್ಭ ಶಾಸ್ತ್ರ, ತೋಟಗಾರಿಕೆ)-ದಾವಣಗೆರೆ
ರಹೀಂ ಖಾನ್ (ಪೌರಾಡಳಿತ, ಹಜ್)- ಇಲ್ಲ
ಸಂತೋಷ ಲಾಡ್ (ಕಾರ್ಮಿಕ)-ಧಾರವಾಡ
ಡಾ.ಶರಣುಪ್ರಕಾಶ್ ಪಾಟೀಲ್ (ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ)-ರಾಯಚೂರು
ಆರ್.ಬಿ ತಿಮ್ಮಾಪುರ (ಅಬಕಾರಿ)-ಬಾಗಲಕೋಟೆ
ಕೆ. ವೆಂಕಟೇಶ್ (ಪಶುಸಂಗೋಪನೆ)-ಚಾಮರಾಜನಗರ
ಶಿವರಾಜ್ ತಂಗಡಗಿ (ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ)-ಕೊಪ್ಪಳ
ಡಿ.ಸುಧಾಕರ್ (ಯೋಜನೆ ಮತ್ತು ಸಾಂಖ್ಯಿಕ)-ಚಿತ್ರದುರ್ಗ
ಬಿ.ನಾಗೇಂದ್ರ (ಕ್ರೀಡೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ)-ಬಳ್ಳಾರಿ
ಕೆ.ಎನ್.ರಾಜಣ್ಣ (ಸಹಕಾರ)-ಹಾಸನ
ಬಿ.ಎಸ್ ಸುರೇಶ್ (ನಗರಾಭಿವೃದ್ಧಿ)-ಕೋಲಾರ
ಲಕ್ಷ್ಮಿ ಹೆಬ್ಬಾಳ್ಕರ್ (ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ)-ಉಡುಪಿ
ಮಂಕಾಳ್ ವೈದ್ಯ (ಮೀನುಗಾರಿಕೆ ಮತ್ತು ಬಂದರು)-ಉತ್ತರ ಕನ್ನಡ
ಮಧು ಬಂಗಾರಪ್ಪ (ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ)-ಶಿವಮೊಗ್ಗ
ಡಾ.ಎಂ.ಸಿ .ಸುಧಾಕರ್ (ಉನ್ನತ ಶಿಕ್ಷಣ)-ಚಿಕ್ಕಬಳ್ಳಾಪುರ
ಎನ್.ಎಸ್.ಬೋಸರಾಜ್ (ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ)-ಕೊಡಗು
ಇದನ್ನೂ ಓದಿ: Cow slaughter: ಗೋಹತ್ಯೆ ಹೇಳಿಕೆ ನೀಡಿದ್ದು ಖಾತೆ ಬದಲಾವಣೆಗಾಗಿ: ಸಚಿವ ಕೆ. ವೆಂಕಟೇಶ್ ಕುರಿತು ಮಾಜಿ ಸಿಎಂ ಹೇಳಿದ್ದೇನು?
-
ಸುವಚನ11 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
South Cinema23 hours ago
Priya Prakash Varrier: ಕಣ್ಣು ಹೊಡೊಯೊ ಐಡಿಯಾ ಕೊಟ್ಟಿದ್ದು ನಾನೆ ಎಂದ ಪ್ರಿಯಾ; ಆಕೆಗೆ ತೈಲ ಕೊಡ್ರಪ್ಪ ಎಂದ ನಿರ್ದೇಶಕ!
-
South Cinema22 hours ago
Kannada New Movie: ಹಿಮಾಲಯದ ಕೊರೆಯುವ ಚಳಿಯಲ್ಲಿ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಶೂಟಿಂಗ್!
-
South Cinema21 hours ago
Nandamuri Balakrishna: ‘ಐ ಡೋಂಟ್ ಕೇರ್ʼ ಎಂದು ಮಾಸ್ ಅವತಾರವೆತ್ತ ನಂದಮೂರಿ ಬಾಲಕೃಷ್ಣ; ಟೈಟಲ್ ರಿವೀಲ್!
-
ಪ್ರಮುಖ ಸುದ್ದಿ17 hours ago
ವಿಸ್ತಾರ ಸಂಪಾದಕೀಯ: ಇಂದಿರಾ ಗಾಂಧಿ ಹತ್ಯೆಯ ಸಂಭ್ರಮ; ಕೆನಡಾದಲ್ಲಿ ಖಲಿಸ್ತಾನಿಗಳ ಉದ್ಧಟತನ ಖಂಡನೀಯ
-
South Cinema24 hours ago
Sara Ali Khan: ಶುಭ್ಮನ್ ಗಿಲ್ ಜತೆ ಡೇಟಿಂಗ್, ಕೂನೆಗೂ ಉತ್ತರ ಕೊಟ್ಟರಾ ಸಾರಾ
-
ಪ್ರಮುಖ ಸುದ್ದಿ22 hours ago
ವಿಧವೆ ಅನ್ನೋದಕ್ಕೆ ರಾಷ್ಟ್ರಪತಿಯನ್ನು ಸಂಸತ್ ಭವನ ಉದ್ಘಾಟನೆಗೆ ಮೋದಿ ಆಹ್ವಾನಿಸಿಲ್ಲವೆಂದ ಕುಂ. ವೀರಭದ್ರಪ್ಪ
-
ಪ್ರಮುಖ ಸುದ್ದಿ23 hours ago
Textbook Revision: ಬುದ್ಧಿಜೀವಿ ಎಂದು ಹೇಳಿಕೊಂಡು ಕೆಲವರು ಓಡಾಡುತ್ತಿದ್ದಾರೆ!: ಸರ್ಕಾರಕ್ಕೆ ಹಿಗ್ಗಾಮುಗ್ಗಾ ಜಾಡಿಸಿದ ಮಾಜಿ ಸಚಿವ ಬಿ.ಸಿ. ನಾಗೇಶ್