horoscope today read your daily horoscope predictions for may 08, 2023Horoscope Today : ಮಿಥುನ ರಾಶಿಯ ಉದ್ಯೋಗಿಗಳಿಗೆ ಶುಭ ಫಲ; ನಿಮ್ಮ ಭವಿಷ್ಯ ಹೀಗಿದೆ - Vistara News

ಪ್ರಮುಖ ಸುದ್ದಿ

Horoscope Today : ಮಿಥುನ ರಾಶಿಯ ಉದ್ಯೋಗಿಗಳಿಗೆ ಶುಭ ಫಲ; ನಿಮ್ಮ ಭವಿಷ್ಯ ಹೀಗಿದೆ

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ತದಿಗೆಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (08-05-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.

ತಿಥಿ: ತದಿಗೆ 18:18/ ಚತುರ್ದಶಿ ವಾರ: ಸೋಮವಾರ
ನಕ್ಷತ್ರ: ಜೇಷ್ಠ 19:09 ಯೋಗ: ಶಿವ 24:07
ಕರಣ: ವಣಿಜ 07:18 ಇಂದಿನ ವಿಶೇಷ: ಸಂಕಷ್ಟ ಚತುರ್ಥಿ, ವಿಶ್ವ ರೆಡ್‌ಕ್ರಾಸ್‌ ದಿನ.
ಅಮೃತಕಾಲ: ಬೆಳಗ್ಗೆ 10 ಗಂಟೆ 48 ನಿಮಿಷದಿಂದ 12 ಗಂಟೆ 19 ನಿಮಿಷದವರೆಗೆ.

ಸೂರ್ಯೋದಯ : 05:56 ಸೂರ್ಯಾಸ್ತ : 06:36

ರಾಹುಕಾಲ : ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ಆರೋಗ್ಯ ಮಧ್ಯಮ. ಹಣಕಾಸಿಗೆ ಸಂಬಂಧಿಸಿದ ಬಾಕಿ ಇರುವ ವ್ಯವಹಾರಗಳು ಪೂರ್ಣವಾಗುವವು. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ವಿಶೇಷವಾದ ಕಾರ್ಯಕ್ರಮಕ್ಕೆ ಆಮಂತ್ರಣ ಸಿಗುವ ಸಾಧ್ಯತೆ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಆರ್ಥಿಕವಾಗಿ ಬಳಲುವ ಸಾಧ್ಯತೆ. ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ವಾಹನ ಖರೀದಿಯ ಕುರಿತು ವಿಚಾರ ಮಾಡುವಿರಿ. ಹಿಂದೆ ನಡೆದ ಘಟನೆ ನೆನಪಿಸಿಕೊಂಡು ಕೊರಗುವುದು ಬೇಡ. ಸಹದ್ಯೋಗಿಗಳಿಂದ ಅಸಹಕಾರ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಇತರರ ವಿರುದ್ಧ ದ್ವೇಷ ಕಾರುತ್ತಾ ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ನಕರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿಮಾಡಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಆರ್ಥಿಕ ಪ್ರಗತಿ ಸಾಧಾರಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕಟಕ: ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಬೇಡ. ನಿಮ್ಮ ಭಾವನೆಗಳನ್ನು ನಿಯಂತ್ರಿಸಿಕೊಳ್ಳಿ. ಹಣಕಾಸು ಪ್ರಗತಿ ಸಾಧಾರಣ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಆರ್ಥಿಕ ಸಮಸ್ಯೆಯಿಂದಾಗಿ ಒತ್ತಡ ಹೆಚ್ಚಾಗಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ, ಸ್ನೇಹ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣ ಭಾಗ್ಯ ಕೂಡಿ ಬರುವುದು. ವ್ಯಾಪಾರ-ವ್ಯವಹಾರದಲ್ಲಿ ಸಾಧಾರಣ ಪ್ರಗತಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ. ಪ್ರಯಾಣ ಮಾಡುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರ್ಥಿಕವಾಗಿ ಬಳಲುವ ಸಾಧ್ಯತೆ, ಕೆಲಸ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ. ತಾಳ್ಮೆಯಿಂದ ವರ್ತಿಸಿ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಬೇಡ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ, ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಲಾಭ. ಸಮಾರಂಭಗಳಲ್ಲಿ ಭಾಗವಹಿಸುವ ನಿರೀಕ್ಷೆ. ನಿಮ್ಮ ಜನಪ್ರಿಯತೆ ಹೆಚ್ಚಾಗಲಿದೆ. ಪ್ರವಾಸದ ಕುರಿತು ಚರ್ಚೆ. ಕುಟುಂಬದವರ ಸಹಕಾರ ಸಿಗಲಿದೆ. ಕೊಂಚ ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅತಿಯಾದ ಚಿಂತೆ, ಒತ್ತಡ ನಿಮ್ಮ ಆರೋಗ್ಯದ ಮೇಲೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಪರಿಣಾಮವನ್ನು ಬೀರಬಹುದು. ಆದಷ್ಟು ವಿಶ್ರಾಂತಿ ಪಡೆಯಿರಿ, ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಶುಭ ಫಲ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು ಕೇಳಿ ಬರಲಿವೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಅನಿವಾರ್ಯ ಪ್ರಸಂಗಗಳು ನಿಮ್ಮನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಬಹುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಪ್ರಗತಿ, ಹೂಡಿಕೆಯ ಕುರಿತು ಆಲೋಚನೆ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಉದ್ಯೋಗದ ಕುರಿತು ಆಲೋಚನೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ವಾಹನ ಚಾಲನೆ ಮಾಡುವಾಗ ಜಾಗರೂಕರಾಗಿರಿ. ಅವಸರದಲ್ಲಿ ಕೆಲಸ ಮಾಡುವುದು ಬೇಡ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ದಿಢೀರ್‌ ಪ್ರಯಾಣ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಕನಿಷ್ಠ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮೀನ: ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು. ಆರೋಗ್ಯ ಮಧ್ಯಮ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮಾತಿನ ಭರದಲ್ಲಿ ಅತಿರೇಕದ ಮಾತುಗಳು ಬೇಡ, ತಾಳ್ಮೆಯಿಂದ ವರ್ತಿಸಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : ಗುರು ಗ್ರಹ ನೀಡುವ ಭಾವಫಲಗಳ ಬಗ್ಗೆ ಮಾಹಿತಿ ಇದೆಯೇ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Modi in Karnataka: ಬೆಂಗಳೂರಲ್ಲಿ ಮೋದಿ ಸಮಾವೇಶ; ಇಲ್ಲಿದೆ LIVE ವಿಡಿಯೊ

Modi in Karnataka: ಬೆಂಗಳೂರಿನ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿರುವ ಬೃಹತ್ ಪ್ರಚಾರ ರ‍್ಯಾಲಿಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಇಲ್ಲಿ ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಕೇಂದ್ರ ಲೋಕಸಭಾ ಕ್ಷೇತ್ರಗಳು ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನೊಳಗೊಂಡಂತೆ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಇಲ್ಲಿ ಲೈವ್‌ ವಿಡಿಯೊವನ್ನು ವೀಕ್ಷಿಸಬಹುದು.

VISTARANEWS.COM


on

Modi in Karnataka PM Modi to address rally in Bengaluru Here live video
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಕರ್ನಾಟಕಕ್ಕೆ (Modi in Karnataka) ಆಗಮಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬೃಹತ್‌ ಸಮಾವೇಶವನ್ನು ಪೂರ್ಣಗೊಳಿಸಿ, ಬೆಂಗಳೂರಿನತ್ತ ಮುಖ ಮಾಡಿದ್ದಾರೆ.

ಶನಿವಾರ ಸಂಜೆ 5.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಪ್ರಚಾರ ರ‍್ಯಾಲಿಯನ್ನು ಆಯೋಜನೆ ಮಾಡಲಾಗಿದೆ. ಇಲ್ಲಿ ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಕೇಂದ್ರ ಲೋಕಸಭಾ ಕ್ಷೇತ್ರಗಳು ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನೊಳಗೊಂಡಂತೆ ನರೇಂದ್ರ ಮೋದಿ ಮಾತನಾಡಲಿದ್ದಾರೆ.

ಬೆಂಗಳೂರು ಗ್ರಾಮಾಂತರಕ್ಕೆ ಸಿಗುವುದೇ ಮೋದಿ ಬೂಸ್ಟ್‌?

ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನಾಗಿ ಡಾ. ಸಿ.ಎನ್.‌ ಮಂಜುನಾಥ್‌ ಅವರನ್ನು ಕಣಕ್ಕಿಳಿಸಲಾಗಿದೆ. ಇದರಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಡಿಎ ಅಭ್ಯರ್ಥಿಗಳ ನಡುವೆ ಟಫ್‌ ಫೈಟ್‌ ಏರ್ಪಟ್ಟಿದೆ. ಕಾರಣ ಇಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮತಗಳು ಕ್ರೋಡೀಕರಣಗೊಂಡರೆ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್‌ ಅವರ ಗೆಲುವಿನ ಹಾದಿ ಅಷ್ಟು ಸುಲಭವಿಲ್ಲ. ಈ ಹಿನ್ನೆಲೆಯಲ್ಲಿ ಡಿಕೆ ಬ್ರದರ್ಸ್‌ ರಾತ್ರಿ – ಹಗಲು ಎನ್ನುವಂತೆ ಪ್ರಚಾರದಲ್ಲಿ ನಿರತರಾಗಿದ್ದಾರೆ. ಅಲ್ಲದೆ, ಕ್ಷೇತ್ರದ ಗೆಲುವಿಗೆ ನಾನಾ ಕಸರತ್ತುಗಳನ್ನು, ರಣತಂತ್ರಗಳನ್ನು ಹೆಣೆಯುತ್ತಾ ಬರುತ್ತಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಸಹ ಬರಲಿದ್ದು, ಅವರು ಪಕ್ಷದ ಅಭ್ಯರ್ಥಿಯಾದ ಡಾ. ಸಿ.ಎನ್.‌ ಮಂಜುನಾಥ್‌ ಪರ ಏನು ಹೇಳಲಿದ್ದಾರೆ? ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.ಕೆ. ಸುರೇಶ್‌ ವಿರುದ್ಧ ಯಾವ ಬಾಂಬ್‌ ಎಸೆಯಲಿದ್ದಾರೆ? ಇದು ಮತದಾರರ ಮೇಲೆ ಬೀರುವ ಪರಿಣಾಮ ಏನು ಎಂಬಿತ್ಯಾದಿ ಲೆಕ್ಕಾಚಾರಗಳನ್ನು ಹಾಕಲಾಗುತ್ತಿದೆ.

ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಧಾನಿ; ಕಿಸಾನ್‌ ಸಮ್ಮಾನ್‌ ಪ್ರಸ್ತಾಪ

ಕಾಂಗ್ರೆಸ್‌ ರೈತರಿಗೆ ಯಾವ ರೀತಿಯ ಮೋಸ ಮಾಡುತ್ತದೆ ಎನ್ನುವುದಕ್ಕೆ ಕರ್ನಾಟಕ ಕಾಂಗ್ರೆಸ್‌ ಸರ್ಕಾರವೇ ಸಾಕ್ಷಿ. ನಾವು ರೈತರ ಬಗ್ಗೆ ಕಳಕಳಿಯಿಂದ ಯೋಜನೆಯಿಂದ ಕಿಸಾನ್‌ ಸಮ್ಮಾನ್‌ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಇದಕ್ಕೆ ಈ ಹಿಂದಿನ ಸರ್ಕಾರವು ಕೇಂದ್ರ ಸರ್ಕಾರ ಕೊಡುತ್ತಿದ್ದ 6 ಸಾವಿರ ರೂಪಾಯಿ ಜತೆಗೆ 4 ಸಾವಿರ ರೂಪಾಯಿಯನ್ನು ಕೊಡುತ್ತಲಿತ್ತು. ಆದರೆ, ಈ ಸರ್ಕಾರ ಅದನ್ನು ನಿಲ್ಲಿಸಿದೆ. ಹೀಗಾಗಿ ರೈತ ವಿರೋಧಿ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದರು.

ಚಿಕ್ಕಬಳ್ಳಾಪುರದಲ್ಲಿ ಶನಿವಾರ (ಏಪ್ರಿಲ್‌ 20) ಏರ್ಪಡಿಸಲಾಗಿದ್ದ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್‌ ಹಾಗೂ ಕೋಲಾರ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಮಲ್ಲೇಶ್‌ ಬಾಬು ಪರವಾಗಿ ಮತಯಾಚಿಸಿದರು.

ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿ

ಈ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. 150 ಅಮೃತ ಸರೋವರ ಯೋಜನೆ ಮಾಡಲಾಗಿದೆ. 2.70 ಲಕ್ಷ ಕುಟುಂಬಕ್ಕೆ ಕುಡಿಯುವ ನೀರನ್ನು ಕೊಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ. ಆದರೆ, ಕಾಂಗ್ರೆಸ್‌ ಸರ್ಕಾರವು ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ. ಇಂಥ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುತ್ತೀರಿ ಎಂಬುದಾಗಿ ಭಾವಿಸಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

ರೇಷ್ಮೆ ಉದ್ಯಮಕ್ಕೆ ಉತ್ತೇಜನ ನೀಡಲಾಗಿತ್ತು. 1,300 ಕೋಟಿ ರೂಪಾಯಿ ಸಹಾಯಧನ ನೀಡಲಾಗಿದೆ. ಶಿಡ್ಲಘಟ್ಟದಲ್ಲಿ ರೇಷ್ಮೆ ಉದ್ಯಮಕ್ಕೆ ಸಹಾಯ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು.

ಕರ್ನಾಟಕದ ಕಮಿಟ್ಮೆಂಟ್‌ ಗೊತ್ತಾಗುತ್ತಿದೆ

ಸಂತ ಕೈವಾರ ತಾತಯ್ಯ, ಸರ್.ಎಂ ವಿಶ್ವೇಶ್ವರಯ್ಯ, ಈ ಮಣ್ಣಿನಲ್ಲಿ ಜನರ ದರ್ಶನ ನನ್ನ ಸೌಭಾಗ್ಯ ಎಂದು ಮಾತು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಉತ್ಸಾಹ ಹೆಚ್ಚಾಗಿದೆ. ಆ ಉತ್ಸಾಹ ನನಗೆ ಕಾಣುತ್ತಿದೆ. ಯುವಕರಿಗೆ ಪ್ರೇರಣೆ ಸಿಗಲಿದೆ. ನನಗೆ ಭಾಷೆ ಅರ್ಥ ಆಗಲ್ಲ. ಆದರೆ, ಕರ್ನಾಟಕದ ಕಮಿಟ್ಮೆಂಟ್‌ ಗೊತ್ತಾಗುತ್ತಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ನನ್ನ ಹೃದಯದಿಂದ ಅಭಾರಿಯಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ದೇವೇಗೌಡರು ಇಂಡಿ ಮೈತ್ರಿ ಬಗ್ಗೆ ಹೇಳಿದ್ದಾರೆ. ಇಂಡಿ ಮೈತ್ರಿಯಲ್ಲಿ ನಾಯಕರಿಲ್ಲ, ಭವಿಷ್ಯದ ಬಗ್ಗೆ ಚಿಂತನೆಯೇ ಅವರಲ್ಲಿ ಇಲ್ಲ. ಅವರ ಇತಿಹಾಸ ಕೇವಲ ಹಗರಣ ಮಾತ್ರ ಎಂದು ಗುಡುಗಿದರು.

ದೇಶದ ಬಗ್ಗೆ 24×7 ಕೆಲಸ

ದೇಶದ ಜನತೆಗೆ ನನ್ನ ಕೆಲಸದ ಬಗ್ಗೆ ತಿಳಿಸಿದ್ದೇನೆ. ನಾನು ನಿಮ್ಮ ನಡುವೆ ನಮ್ಮ ರಿಪೋರ್ಟ್‌ ಕಾರ್ಡ್ ಹಿಡಿದು ಆಶೀರ್ವಾದ ಪಡೆಯಲು ಬಂದಿದ್ದೇನೆ. ನಾನು ಎಲ್ಲರನ್ನೂ ಪರಿವಾರ ಅಂತ ತಿಳಿದಿದ್ದೇನೆ. ನಿಮ್ಮ ಕನಸು, ಮೋದಿಯ ಸಂಕಲ್ಪವಾಗಿದೆ. ಪ್ರತಿ ಕ್ಷಣದಲ್ಲೂ ನಿಮ್ಮ ಹಾಗೂ ದೇಶದ ಬಗ್ಗೆ 24×7 ಕೆಲಸ ಮಾಡಲು ಬಂದಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾನ ಮಾಡಿದರು.

ಮುಂದಿನ ಐದು ವರ್ಷವೂ ಉಚಿತ ರೇಷನ್

ದೇಶದ ಜನ ಎಂದೂ ಉಚಿತ ರೇಷನ್ ಸಿಗುತ್ತದೆ ಅಂತ ಅನ್ನಿಸಿರಲಿಲ್ಲ. ನಿಮ್ಮ ಮೋದಿ ಅದನ್ನು ಈಡೇರಿಸಿದ್ದಾರೆ. ಇಂದು ಚಿಕ್ಕಬಳ್ಳಾಪುರದ ಎಂಟು ಲಕ್ಷಕ್ಕೂ ಹೆಚ್ಚು ಜನರಿಗೆ ಉಚಿತ ರೇಷನ್ ಕೊಡುತ್ತಿದ್ದೇವೆ. ಇದೇ ರೀತಿ ಮುಂದಿನ ಐದು ವರ್ಷವೂ ಉಚಿತ ಅಕ್ಕಿ ನಿಮಗೆ ಸಿಗಲಿದೆ. ಕರ್ನಾಟಕದ ಲಕ್ಷಾಂತರ ಜನರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಮಂದಿ ಆಯುಷ್ಮಾನ್ ಯೋಜನೆ ಮೂಲಕ ಐದು ಲಕ್ಷ ರೂಪಾಯಿವರೆಗೂ ಚಿಕಿತ್ಸೆ ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ‌

25 ಕೋಟಿ ಜನ ಬಡತನದಿಂದ ಹೊರ ಬಂದಿದ್ದಾರೆ

ಮೋದಿ ಸರ್ಕಾರದ ಯೋಜನೆ ಮೂಲಕ ಕೋಟ್ಯಂತರ ಮಂದಿ ಲಾಭ ಪಡೆದಿದ್ದಾರೆ. ಎಸ್‌ಸಿ, ಎಸ್‌ಟಿ, ಒಬಿಸಿ ಕುಟುಂಬದವರಿಗೆ ಭರಪೂರ ಯೋಜನೆ ನೀಡಲಾಗಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬರುವ ಮೊದಲು ಕೊಳಗೇರಿಯಲ್ಲಿ ವಾಸ ಮಾಡುವಂತಾಗಿತ್ತು. ವಿದ್ಯುತ್, ನೀರು ಕೂಡ ಸಿಗುತ್ತಿರಲಿಲ್ಲ. ಜನರೂ ಹಿಂದಿನ ಸರ್ಕಾರದ ಮೇಲೆ ಭರವಸೆ ಕೂಡ ಬಿಟ್ಟುಬಿಟ್ಟಿದ್ದರು. ಆದರೆ, ನಿಮ್ಮ ಭರವಸೆಯನ್ನು ಮೋದಿ ಗ್ಯಾರಂಟಿ ನಿಜ ಮಾಡಿದೆ. 25 ಕೋಟಿ ಜನ ಬಡತನದಿಂದ ಹೊರ ಬಂದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇನ್ನೈದು ವರ್ಷದಲ್ಲಿ ಸೂರಿಲ್ಲದವರಿಗೆ ಮನೆ

ಹಿಂದಿನ ಹತ್ತು ವರ್ಷಗಳಲ್ಲಿ ಚಿಕ್ಕಬಳ್ಳಾಪುರದಲ್ಲಿ 14 ಕೋಲಾರ 24 ಸಾವಿರ ಮನೆ ನಿರ್ಮಾಣ ಮಾಡಿ ನೀಡಲಾಗಿದೆ. ಮೋದಿ ಸರ್ಕಾರ ಹೊಸ ಮನೆಗಳ ನಿರ್ಮಾಣ ಮಾಡುವ ಭರವಸೆ ನೀಡಿದೆ. ಯಾರಿಗೆ ಈವರೆಗೆ ಮನೆ ಸಿಕ್ಕಿಲ್ಲವೋ ಅವರಿಗೆ ಮುಂದಿನ ಐದು ವರ್ಷಗಳಲ್ಲಿ ಖಂಡಿತವಾಗಿಯೂ ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದರು.

ಎಸ್‌ಸಿ ಸಮುದಾಯದವರನ್ನು ರಾಷ್ಟ್ರಪತಿ ಮಾಡಿದ್ದು ಎನ್‌ಡಿಎ

2014ರಲ್ಲಿ ಎನ್‌ಡಿಎ ಸರ್ಕಾರ ಬಂದ ಬಳಿಕ ಎಸ್‌ಸಿ ಸಮುದಾಯದವರನ್ನು ರಾಷ್ಟ್ರಪತಿ ಮಾಡುವ ಮೂಲಕ ಮೊದಲ ಪ್ರಜೆಯನ್ನು ಆಯ್ಕೆ ಮಾಡಿತು. ಹಿಂದುಳಿದ ಸಮುದಾಯದ ಮಹಿಳೆಯನ್ನು ರಾಷ್ಟ್ರಪತಿ ಮಾಡಲಾಗಿದೆ ಎಂದು ಎನ್‌ಡಿಎ ಸರ್ಕಾರ ಕೈಗೊಂಡ ಕ್ರಮಗಳು, ನಿರ್ಧಾರಗಳ ಬಗ್ಗೆ ಪ್ರಧಾನಿ ಮೋದಿ ವಿವರಿಸಿದರು.

ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ 10ರಿಂದ 20 ಲಕ್ಷ ರೂಪಾಯಿ ವರೆಗೂ ಸಾಲ

ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮೂಲಕ ಎಲ್ಲರನ್ನೂ ಜತೆಗೆ ತೆಗೆದುಕೊಂಡು ಹೋಗುವ ಕೆಲಸ ಮಾಡಲಾಗಿದೆ. ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ‌ ಒತ್ತು ನೀಡಲಾಗಿದೆ. ಉನ್ನತ ಶಿಕ್ಷಣದಲ್ಲಿ ದಾಖಲಾತಿ ಹೆಚ್ಚಾಗಿದೆ. ಗ್ಯಾರಂಟಿ ಇಲ್ಲದೆ, ಮುದ್ರಾ ಲೋನ್ ಮೂಲಕ ಸಾಲ ನೀಡಲಾಗಿದೆ. ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ 10ರಿಂದ 20 ಲಕ್ಷ ರೂಪಾಯಿ ವರೆಗೂ ಸಾಲ ನೀಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು.

ಒಂದು ಕೋಟಿ ಮಹಿಳೆಯರನ್ನು ಲಕ್ಷಪತಿಯರನ್ನಾಗಿ ಮಾಡಿದ್ದೇವೆ

ಇಂದು ಇಷ್ಟು ಹೆಚ್ಚಿನ ಸಂಖ್ಯೆಯಲ್ಲಿ ತಾಯಂದಿರು ಬಂದಿದ್ದಾರೆ. ನಿಮ್ಮ ಕಷ್ಟವನ್ನು ಮೋದಿ ನೋಡಿದ್ದಾರೆ. ದೇಶದ ಅನೇಕರು ಮೋದಿಯನ್ನು ಅಧಿಕಾರದಿಂದ ಕೆಳಗೆ ಇಳಿಸಲು ಪ್ರಯತ್ನ ಮಾಡಿದ್ದಾರೆ. ಆದರೆ, ತಾಯಂದಿರ ಆಶೀರ್ವಾದ ಇದೆ. ನಿಮ್ಮೆಲ್ಲರ ಆಶೀರ್ವಾದಿಂದ ನಾನು ಎದುರಿಸುತ್ತೇನೆ. ಪ್ರತಿ ತಾಯಂದಿರ ಸೇವೆ ಮಾಡುವುದು ಮೋದಿ ಗ್ಯಾರಂಟಿಯಾಗಿದೆ. ಒಂದು ಕೋಟಿ ಮಹಿಳೆಯರನ್ನು ಲಕ್ಷಪತಿಯರನ್ನಾಗಿ ತಯಾರು ಮಾಡಲಾಗಿದೆ. ಮೂರು ಕೋಟಿ ಮಹಿಳೆಯರ ವಾರ್ಷಿಕ ಆದಾಯ ಲಕ್ಷ‌ ರೂಪಾಯಿ ಮೀರಲಿದೆ. ಎನ್‌ಡಿಎ ಸರ್ಕಾರದಿಂದ ಡ್ರೋನ್ ಪೈಲೆಟ್ ಟ್ರೈನಿಂಗ್ ಕೊಡಲಾಗುತ್ತಿದೆ. ಯುವತಿಯರು ಡ್ರೋನ್ ಮೂಲಕ ಸಾಧನೆ ಮಾಡಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇದನ್ನೂ ಓದಿ: Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಈ ನೆಲದಲ್ಲಿ ಮಾವು, ಪಶುಪಾಲನೆ ನಡೆಯುತ್ತಿದೆ. ಎನ್‌ಡಿಎ ಸರ್ಕಾರ ಹಳ್ಳಿಗಳ ಅಭಿವೃದ್ಧಿಗೆ ಶ್ರಮ ವಹಿಸುತ್ತಿದೆ. ನಮ್ಮ ಜತೆ ದೇವೇಗೌಡರಂತಹ ಹಿರಿಯ ರಾಜಕಾರಣಿ ಇದ್ದಾರೆ. ಅಂಥವರ ಮಾರ್ಗದರ್ಶನ ನಮಗಿದೆ. ಪಶು ಪಾಲನೆ ಮಾಡುವವರಿಗೂ ಕಿಸಾನ್ ಕಾರ್ಡ್ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕೋಲಾರ ಸಂಸದ ಮುನಿಸ್ವಾಮಿ, ಯಲಹಂಕ ಶಾಸಕರಾದ ವಿಶ್ವನಾಥ್, ಸಮೃದ್ಧಿ ಮಂಜುನಾಥ್, ಮಾಜಿ ಶಾಸಕ ವೈ. ಸಂಪಂಗಿ, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್ ಸೇರಿ ಪ್ರಮುಖರು ಉಪಸ್ಥಿತರಿದ್ದರು.

Continue Reading

ದೇಶ

Narendra Modi: ಅಮೇಥಿಯಂತೆ ವಯನಾಡಿನಲ್ಲೂ ರಾಹುಲ್‌ ಗಾಂಧಿಗೆ ಸೋಲು; ಮೋದಿ ಭವಿಷ್ಯ!

Narendra Modi: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಗಿದಿದ್ದು, ಎರಡನೇ ಹಂತದ ಮತದಾನಕ್ಕಾಗಿ ದೇಶಾದ್ಯಂತ ಕುತೂಹಲ ಮೂಡಿದೆ. ಇದರ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲ, ಅಮೇಥಿಯಂತೆ ವಯನಾಡಿನಲ್ಲೂ ರಾಹುಲ್‌ ಗಾಂಧಿಗೆ ಸೋಲಾಗಲಿದೆ ಎಂದು ಹೇಳಿದ್ದಾರೆ.

VISTARANEWS.COM


on

Narendra Modi
Koo

ಮುಂಬೈ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. “ಏಪ್ರಿಲ್‌ 26ರಂದು ವಯನಾಡಿನಲ್ಲಿ ಮತದಾನ ನಡೆಯುತ್ತಿದ್ದು, ಕಾಂಗ್ರೆಸ್‌ ಕುತೂಹಲದಿಂದ ಕಾಯುತ್ತಿದೆ. ಕಾಂಗ್ರೆಸ್‌ನ ಮಹಾರಾಜ (ಶೆಹ್ಜಾದ) ಹೇಗೆ ಅಮೇಥಿಯಿಂದ ಓಡಿದರೋ, ವಯನಾಡಿನಲ್ಲೂ (Wayanad) ಅವರು ಓಡುತ್ತಾರೆ” ಎಂದು ಮಹಾರಾಷ್ಟ್ರದ ನಾಂದೇಡ್‌ನಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಕುಟುಕಿದ್ದಾರೆ.

“ವಯನಾಡಿನಲ್ಲಿ ಕಾಂಗ್ರೆಸ್‌ ಬಿಕ್ಕಟ್ಟು ಎದುರಿಸುತ್ತಿದೆ. ಕಾಂಗ್ರೆಸ್‌ನ ಮಹಾರಾಜ ಹಾಗೂ ಅವರ ಆಪ್ತರು ಮತದಾನಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಅಮೇಥಿಯಲ್ಲಿ ಅವರು ಓಡಿದಂತೆ, ವಯನಾಡಿನಿಂದಲೂ ಓಡಿಹೋಗುತ್ತಾರೆ. ಇದನ್ನು ನೀವು ಸುಲಭವಾಗಿ ಊಹಿಸಬಹುದು. ಚುನಾವಣೆಯ ಬಳಿಕ ರಾಹುಲ್‌ ಗಾಂಧಿ ಅವರಿಗೆ ಕಾಂಗ್ರೆಸ್‌ ಮತ್ತೊಂದು ಸುರಕ್ಷಿತ ಕ್ಷೇತ್ರವನ್ನು ಹುಡುಕಬೇಕಾಗುತ್ತದೆ” ಎಂದು ಛೇಡಿಸಿದರು.

ಇಂಡಿಯಾ ಒಕ್ಕೂಟಕ್ಕೂ ಟಾಂಗ್‌

“ಕಾಂಗ್ರೆಸ್‌ ಮಾತ್ರವಲ್ಲ ಇಂಡಿಯಾ ಒಕ್ಕೂಟದಲ್ಲೂ ಭಾರಿ ಬಿಕ್ಕಟ್ಟು ಉಂಟಾಗಿದೆ. ಇದೇ ಕಾರಣಕ್ಕಾಗಿ ಇಂಡಿಯಾ ಒಕ್ಕೂಟದಿಂದ ಒಬ್ಬ ನಾಯಕನನ್ನು ಆಯ್ಕೆ ಮಾಡಲು ಆಗಲಿಲ್ಲ. ಆ ಮೂಲಕ ನಮ್ಮ ನಾಯಕ ಇವರು ಎಂಬುದಾಗಿ ದೇಶದ ಜನರಿಗೆ ತಿಳಿಸಲು ಆಗಲಿಲ್ಲ. ಏಕೆಂದರೆ, ಇಂಡಿಯಾ ಒಕ್ಕೂಟದ ನಾಯಕರು ಈಗಾಗಲೇ ಸೋಲನ್ನು ಒಪ್ಪಿಕೊಂಡಿದ್ದಾರೆ. ಚುನಾವಣೆ ಫಲಿತಾಂಶಕ್ಕೂ ಮೊದಲೇ ಕಾಂಗ್ರೆಸ್‌ ಕೂಡ ಸೋಲನ್ನು ಒಪ್ಪಿಕೊಂಡಿದೆ” ಎಂಬುದಾಗಿ ವಾಗ್ದಾಳಿ ನಡೆಸಿದರು.

“ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳಿಗೆ ಸೋಲು ಕಟ್ಟಿಟ್ಟ ಬುತ್ತಿಯಾಗಿದೆ. ಹಾಗಾಗಿ, ಬೇರೆ ಪಕ್ಷಗಳ ನಾಯಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಶ್ರಮ ವಹಿಸುವುದರಲ್ಲಿ ಯಾವುದೇ ಉಪಯೋಗವಿಲ್ಲ. ಹಾಗಾಗಿ, ನೀವು ಪಕ್ಷಗಳ ಪರವಾಗಿ ಕೆಲಸ ಮಾಡುವ ಬದಲು, ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ಕೆಲಸ ಮಾಡಿ. ಆಗ, ಇಂದಲ್ಲ, ನಾಳೆ ನಿಮಗೂ ಒಂದು ಸಮಯ, ಅವಕಾಶ ಬರುತ್ತದೆ” ಎಂದು ಪರೋಕ್ಷವಾಗಿ ಚುನಾವಣೆಯಲ್ಲಿ ಪಕ್ಷದ ಪರ ಕೆಲಸ ಮಾಡುವುದರಿಂದ ಯಾವುದೇ ಉಪಯೋಗವಿಲ್ಲ” ಎಂದರು.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕೇರಳದ ವಯನಾಡು ಲೋಕಸಭೆ ಕ್ಷೇತ್ರದಿಂದ ಎರಡನೇ ಬಾರಿ ಸ್ಪರ್ಧಿಸುತ್ತಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ಅವರು ಉತ್ತರ ಪ್ರದೇಶದ ಅಮೇಥಿ ಹಾಗೂ ವಯನಾಡಿನಲ್ಲಿ ಸ್ಪರ್ಧಿಸಿದ್ದರು. ಆದರೆ, ಈ ಬಾರಿ ಅಮೇಥಿಯಲ್ಲಿ ಕಾಂಗ್ರೆಸ್‌ ಇದುವರೆಗೆ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ.

ಇದನ್ನೂ ಓದಿ: Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Continue Reading

ಪ್ರಮುಖ ಸುದ್ದಿ

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka: ದೇಶದ ಜನ ಎಂದೂ ಉಚಿತ ರೇಷನ್ ಸಿಗುತ್ತದೆ ಅಂತ ಅನ್ನಿಸಿರಲಿಲ್ಲ. ನಿಮ್ಮ ಮೋದಿ ಅದನ್ನು ಈಡೇರಿಸಿದ್ದಾರೆ. ಇಂದು ಚಿಕ್ಕಬಳ್ಳಾಪುರದ ಎಂಟು ಲಕ್ಷಕ್ಕೂ ಹೆಚ್ಚು ಜನರಿಗೆ ಉಚಿತ ರೇಷನ್ ಕೊಡುತ್ತಿದ್ದೇವೆ. ಇದೇ ರೀತಿ ಮುಂದಿನ ಐದು ವರ್ಷವೂ ಉಚಿತ ಅಕ್ಕಿ ನಿಮಗೆ ಸಿಗಲಿದೆ. ಕರ್ನಾಟಕದ ಲಕ್ಷಾಂತರ ಜನರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಮಂದಿ ಆಯುಷ್ಮಾನ್ ಯೋಜನೆ ಮೂಲಕ ಐದು ಲಕ್ಷ ರೂಪಾಯಿವರೆಗೂ ಚಿಕಿತ್ಸೆ ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

VISTARANEWS.COM


on

Modi in Karnataka Congress snatches Rs 4000 under Kisan Samman says PM Narendra Modi
Koo

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಮೂರನೇ ಬಾರಿ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (Modi in Karnataka) ಅವರು ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ ರೈತರಿಗೆ ಯಾವ ರೀತಿಯ ಮೋಸ ಮಾಡುತ್ತದೆ ಎನ್ನುವುದಕ್ಕೆ ಕರ್ನಾಟಕ ಕಾಂಗ್ರೆಸ್‌ ಸರ್ಕಾರವೇ ಸಾಕ್ಷಿ. ನಾವು ರೈತರ ಬಗ್ಗೆ ಕಳಕಳಿಯಿಂದ ಯೋಜನೆಯಿಂದ ಕಿಸಾನ್‌ ಸಮ್ಮಾನ್‌ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಇದಕ್ಕೆ ಈ ಹಿಂದಿನ ಸರ್ಕಾರವು ಕೇಂದ್ರ ಸರ್ಕಾರ ಕೊಡುತ್ತಿದ್ದ 6 ಸಾವಿರ ರೂಪಾಯಿ ಜತೆಗೆ 4 ಸಾವಿರ ರೂಪಾಯಿಯನ್ನು ಕೊಡುತ್ತಲಿತ್ತು. ಆದರೆ, ಈ ಸರ್ಕಾರ ಅದನ್ನು ನಿಲ್ಲಿಸಿದೆ. ಹೀಗಾಗಿ ರೈತ ವಿರೋಧಿ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದರು.

ಚಿಕ್ಕಬಳ್ಳಾಪುರದಲ್ಲಿ ಶನಿವಾರ (ಏಪ್ರಿಲ್‌ 20) ಏರ್ಪಡಿಸಲಾಗಿದ್ದ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್‌ ಹಾಗೂ ಕೋಲಾರ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಮಲ್ಲೇಶ್‌ ಬಾಬು ಪರವಾಗಿ ಮತಯಾಚಿಸಿದರು.

ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿ

ಈ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. 150 ಅಮೃತ ಸರೋವರ ಯೋಜನೆ ಮಾಡಲಾಗಿದೆ. 2.70 ಲಕ್ಷ ಕುಟುಂಬಕ್ಕೆ ಕುಡಿಯುವ ನೀರನ್ನು ಕೊಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ. ಆದರೆ, ಕಾಂಗ್ರೆಸ್‌ ಸರ್ಕಾರವು ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ. ಇಂಥ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುತ್ತೀರಿ ಎಂಬುದಾಗಿ ಭಾವಿಸಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

ರೇಷ್ಮೆ ಉದ್ಯಮಕ್ಕೆ ಉತ್ತೇಜನ ನೀಡಲಾಗಿತ್ತು. 1,300 ಕೋಟಿ ರೂಪಾಯಿ ಸಹಾಯಧನ ನೀಡಲಾಗಿದೆ. ಶಿಡ್ಲಘಟ್ಟದಲ್ಲಿ ರೇಷ್ಮೆ ಉದ್ಯಮಕ್ಕೆ ಸಹಾಯ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು.

ಕರ್ನಾಟಕದ ಕಮಿಟ್ಮೆಂಟ್‌ ಗೊತ್ತಾಗುತ್ತಿದೆ

ಸಂತ ಕೈವಾರ ತಾತಯ್ಯ, ಸರ್.ಎಂ ವಿಶ್ವೇಶ್ವರಯ್ಯ, ಈ ಮಣ್ಣಿನಲ್ಲಿ ಜನರ ದರ್ಶನ ನನ್ನ ಸೌಭಾಗ್ಯ ಎಂದು ಮಾತು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಉತ್ಸಾಹ ಹೆಚ್ಚಾಗಿದೆ. ಆ ಉತ್ಸಾಹ ನನಗೆ ಕಾಣುತ್ತಿದೆ. ಯುವಕರಿಗೆ ಪ್ರೇರಣೆ ಸಿಗಲಿದೆ. ನನಗೆ ಭಾಷೆ ಅರ್ಥ ಆಗಲ್ಲ. ಆದರೆ, ಕರ್ನಾಟಕದ ಕಮಿಟ್ಮೆಂಟ್‌ ಗೊತ್ತಾಗುತ್ತಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ನನ್ನ ಹೃದಯದಿಂದ ಅಭಾರಿಯಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ದೇವೇಗೌಡರು ಇಂಡಿ ಮೈತ್ರಿ ಬಗ್ಗೆ ಹೇಳಿದ್ದಾರೆ. ಇಂಡಿ ಮೈತ್ರಿಯಲ್ಲಿ ನಾಯಕರಿಲ್ಲ, ಭವಿಷ್ಯದ ಬಗ್ಗೆ ಚಿಂತನೆಯೇ ಅವರಲ್ಲಿ ಇಲ್ಲ. ಅವರ ಇತಿಹಾಸ ಕೇವಲ ಹಗರಣ ಮಾತ್ರ ಎಂದು ಗುಡುಗಿದರು.

ದೇಶದ ಬಗ್ಗೆ 24×7 ಕೆಲಸ

ದೇಶದ ಜನತೆಗೆ ನನ್ನ ಕೆಲಸದ ಬಗ್ಗೆ ತಿಳಿಸಿದ್ದೇನೆ. ನಾನು ನಿಮ್ಮ ನಡುವೆ ನಮ್ಮ ರಿಪೋರ್ಟ್‌ ಕಾರ್ಡ್ ಹಿಡಿದು ಆಶೀರ್ವಾದ ಪಡೆಯಲು ಬಂದಿದ್ದೇನೆ. ನಾನು ಎಲ್ಲರನ್ನೂ ಪರಿವಾರ ಅಂತ ತಿಳಿದಿದ್ದೇನೆ. ನಿಮ್ಮ ಕನಸು, ಮೋದಿಯ ಸಂಕಲ್ಪವಾಗಿದೆ. ಪ್ರತಿ ಕ್ಷಣದಲ್ಲೂ ನಿಮ್ಮ ಹಾಗೂ ದೇಶದ ಬಗ್ಗೆ 24×7 ಕೆಲಸ ಮಾಡಲು ಬಂದಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾನ ಮಾಡಿದರು.

ಮುಂದಿನ ಐದು ವರ್ಷವೂ ಉಚಿತ ರೇಷನ್

ದೇಶದ ಜನ ಎಂದೂ ಉಚಿತ ರೇಷನ್ ಸಿಗುತ್ತದೆ ಅಂತ ಅನ್ನಿಸಿರಲಿಲ್ಲ. ನಿಮ್ಮ ಮೋದಿ ಅದನ್ನು ಈಡೇರಿಸಿದ್ದಾರೆ. ಇಂದು ಚಿಕ್ಕಬಳ್ಳಾಪುರದ ಎಂಟು ಲಕ್ಷಕ್ಕೂ ಹೆಚ್ಚು ಜನರಿಗೆ ಉಚಿತ ರೇಷನ್ ಕೊಡುತ್ತಿದ್ದೇವೆ. ಇದೇ ರೀತಿ ಮುಂದಿನ ಐದು ವರ್ಷವೂ ಉಚಿತ ಅಕ್ಕಿ ನಿಮಗೆ ಸಿಗಲಿದೆ. ಕರ್ನಾಟಕದ ಲಕ್ಷಾಂತರ ಜನರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಮಂದಿ ಆಯುಷ್ಮಾನ್ ಯೋಜನೆ ಮೂಲಕ ಐದು ಲಕ್ಷ ರೂಪಾಯಿವರೆಗೂ ಚಿಕಿತ್ಸೆ ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ‌

25 ಕೋಟಿ ಜನ ಬಡತನದಿಂದ ಹೊರ ಬಂದಿದ್ದಾರೆ

ಮೋದಿ ಸರ್ಕಾರದ ಯೋಜನೆ ಮೂಲಕ ಕೋಟ್ಯಂತರ ಮಂದಿ ಲಾಭ ಪಡೆದಿದ್ದಾರೆ. ಎಸ್‌ಸಿ, ಎಸ್‌ಟಿ, ಒಬಿಸಿ ಕುಟುಂಬದವರಿಗೆ ಭರಪೂರ ಯೋಜನೆ ನೀಡಲಾಗಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬರುವ ಮೊದಲು ಕೊಳಗೇರಿಯಲ್ಲಿ ವಾಸ ಮಾಡುವಂತಾಗಿತ್ತು. ವಿದ್ಯುತ್, ನೀರು ಕೂಡ ಸಿಗುತ್ತಿರಲಿಲ್ಲ. ಜನರೂ ಹಿಂದಿನ ಸರ್ಕಾರದ ಮೇಲೆ ಭರವಸೆ ಕೂಡ ಬಿಟ್ಟುಬಿಟ್ಟಿದ್ದರು. ಆದರೆ, ನಿಮ್ಮ ಭರವಸೆಯನ್ನು ಮೋದಿ ಗ್ಯಾರಂಟಿ ನಿಜ ಮಾಡಿದೆ. 25 ಕೋಟಿ ಜನ ಬಡತನದಿಂದ ಹೊರ ಬಂದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇನ್ನೈದು ವರ್ಷದಲ್ಲಿ ಸೂರಿಲ್ಲದವರಿಗೆ ಮನೆ

ಹಿಂದಿನ ಹತ್ತು ವರ್ಷಗಳಲ್ಲಿ ಚಿಕ್ಕಬಳ್ಳಾಪುರದಲ್ಲಿ 14 ಕೋಲಾರ 24 ಸಾವಿರ ಮನೆ ನಿರ್ಮಾಣ ಮಾಡಿ ನೀಡಲಾಗಿದೆ. ಮೋದಿ ಸರ್ಕಾರ ಹೊಸ ಮನೆಗಳ ನಿರ್ಮಾಣ ಮಾಡುವ ಭರವಸೆ ನೀಡಿದೆ. ಯಾರಿಗೆ ಈವರೆಗೆ ಮನೆ ಸಿಕ್ಕಿಲ್ಲವೋ ಅವರಿಗೆ ಮುಂದಿನ ಐದು ವರ್ಷಗಳಲ್ಲಿ ಖಂಡಿತವಾಗಿಯೂ ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದರು.

ಎಸ್‌ಸಿ ಸಮುದಾಯದವರನ್ನು ರಾಷ್ಟ್ರಪತಿ ಮಾಡಿದ್ದು ಎನ್‌ಡಿಎ

2014ರಲ್ಲಿ ಎನ್‌ಡಿಎ ಸರ್ಕಾರ ಬಂದ ಬಳಿಕ ಎಸ್‌ಸಿ ಸಮುದಾಯದವರನ್ನು ರಾಷ್ಟ್ರಪತಿ ಮಾಡುವ ಮೂಲಕ ಮೊದಲ ಪ್ರಜೆಯನ್ನು ಆಯ್ಕೆ ಮಾಡಿತು. ಹಿಂದುಳಿದ ಸಮುದಾಯದ ಮಹಿಳೆಯನ್ನು ರಾಷ್ಟ್ರಪತಿ ಮಾಡಲಾಗಿದೆ ಎಂದು ಎನ್‌ಡಿಎ ಸರ್ಕಾರ ಕೈಗೊಂಡ ಕ್ರಮಗಳು, ನಿರ್ಧಾರಗಳ ಬಗ್ಗೆ ಪ್ರಧಾನಿ ಮೋದಿ ವಿವರಿಸಿದರು.

ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ 10ರಿಂದ 20 ಲಕ್ಷ ರೂಪಾಯಿ ವರೆಗೂ ಸಾಲ

ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮೂಲಕ ಎಲ್ಲರನ್ನೂ ಜತೆಗೆ ತೆಗೆದುಕೊಂಡು ಹೋಗುವ ಕೆಲಸ ಮಾಡಲಾಗಿದೆ. ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ‌ ಒತ್ತು ನೀಡಲಾಗಿದೆ. ಉನ್ನತ ಶಿಕ್ಷಣದಲ್ಲಿ ದಾಖಲಾತಿ ಹೆಚ್ಚಾಗಿದೆ. ಗ್ಯಾರಂಟಿ ಇಲ್ಲದೆ, ಮುದ್ರಾ ಲೋನ್ ಮೂಲಕ ಸಾಲ ನೀಡಲಾಗಿದೆ. ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ 10ರಿಂದ 20 ಲಕ್ಷ ರೂಪಾಯಿ ವರೆಗೂ ಸಾಲ ನೀಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು.

ಒಂದು ಕೋಟಿ ಮಹಿಳೆಯರನ್ನು ಲಕ್ಷಪತಿಯರನ್ನಾಗಿ ಮಾಡಿದ್ದೇವೆ

ಇಂದು ಇಷ್ಟು ಹೆಚ್ಚಿನ ಸಂಖ್ಯೆಯಲ್ಲಿ ತಾಯಂದಿರು ಬಂದಿದ್ದಾರೆ. ನಿಮ್ಮ ಕಷ್ಟವನ್ನು ಮೋದಿ ನೋಡಿದ್ದಾರೆ. ದೇಶದ ಅನೇಕರು ಮೋದಿಯನ್ನು ಅಧಿಕಾರದಿಂದ ಕೆಳಗೆ ಇಳಿಸಲು ಪ್ರಯತ್ನ ಮಾಡಿದ್ದಾರೆ. ಆದರೆ, ತಾಯಂದಿರ ಆಶೀರ್ವಾದ ಇದೆ. ನಿಮ್ಮೆಲ್ಲರ ಆಶೀರ್ವಾದಿಂದ ನಾನು ಎದುರಿಸುತ್ತೇನೆ. ಪ್ರತಿ ತಾಯಂದಿರ ಸೇವೆ ಮಾಡುವುದು ಮೋದಿ ಗ್ಯಾರಂಟಿಯಾಗಿದೆ. ಒಂದು ಕೋಟಿ ಮಹಿಳೆಯರನ್ನು ಲಕ್ಷಪತಿಯರನ್ನಾಗಿ ತಯಾರು ಮಾಡಲಾಗಿದೆ. ಮೂರು ಕೋಟಿ ಮಹಿಳೆಯರ ವಾರ್ಷಿಕ ಆದಾಯ ಲಕ್ಷ‌ ರೂಪಾಯಿ ಮೀರಲಿದೆ. ಎನ್‌ಡಿಎ ಸರ್ಕಾರದಿಂದ ಡ್ರೋನ್ ಪೈಲೆಟ್ ಟ್ರೈನಿಂಗ್ ಕೊಡಲಾಗುತ್ತಿದೆ. ಯುವತಿಯರು ಡ್ರೋನ್ ಮೂಲಕ ಸಾಧನೆ ಮಾಡಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇದನ್ನೂ ಓದಿ: Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಈ ನೆಲದಲ್ಲಿ ಮಾವು, ಪಶುಪಾಲನೆ ನಡೆಯುತ್ತಿದೆ. ಎನ್‌ಡಿಎ ಸರ್ಕಾರ ಹಳ್ಳಿಗಳ ಅಭಿವೃದ್ಧಿಗೆ ಶ್ರಮ ವಹಿಸುತ್ತಿದೆ. ನಮ್ಮ ಜತೆ ದೇವೇಗೌಡರಂತಹ ಹಿರಿಯ ರಾಜಕಾರಣಿ ಇದ್ದಾರೆ. ಅಂಥವರ ಮಾರ್ಗದರ್ಶನ ನಮಗಿದೆ. ಪಶು ಪಾಲನೆ ಮಾಡುವವರಿಗೂ ಕಿಸಾನ್ ಕಾರ್ಡ್ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕೋಲಾರ ಸಂಸದ ಮುನಿಸ್ವಾಮಿ, ಯಲಹಂಕ ಶಾಸಕರಾದ ವಿಶ್ವನಾಥ್, ಸಮೃದ್ಧಿ ಮಂಜುನಾಥ್, ಮಾಜಿ ಶಾಸಕ ವೈ. ಸಂಪಂಗಿ, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್ ಸೇರಿ ಪ್ರಮುಖರು ಉಪಸ್ಥಿತರಿದ್ದರು.

Continue Reading

ದೇಶ

CJI Chandrachud: ಹೊಸ ಕಾನೂನುಗಳ ಜಾರಿ ಐತಿಹಾಸಿಕ; ಸಿಜೆಐ ಡಿ.ವೈ.ಚಂದ್ರಚೂಡ್‌ ಬಣ್ಣನೆ

CJI Chandrachud: ಐಪಿಸಿಯನ್ನು ಭಾರತೀಯ ನ್ಯಾಯ ಸಂಹಿತೆ-2023, ಸಿಆರ್‌ಪಿಸಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಭಾರತೀಯ ಸಾಕ್ಷ್ಯ ವಿಧೇಯಕ-2023 ಎಂಬುದಾಗಿ ಮಾರ್ಪಡಿಸಲಾಗಿದೆ. ಹೊಸ ಕಾನೂನುಗಳು ಜುಲೈ 1ರಿಂದ ಜಾರಿಗೆ ಬರಲಿವೆ. ಈ ಕಾನೂನುಗಳ ಕುರಿತು ಸಿಜೆಐ ಡಿ.ವೈ.ಚಂದ್ರಚೂಡ್‌ ಅವರು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

VISTARANEWS.COM


on

CJI Chandrachud
Koo

ನವದೆಹಲಿ: ದೇಶದಲ್ಲಿ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳ (Criminal Laws) ಸಂಪೂರ್ಣ ತಿದ್ದುಪಡಿ ದಿಸೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದ್ದು, ಭಾರತೀಯ ದಂಡ ಸಂಹಿತೆ (IPC-1860), ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆ (CrPC-1973) ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳನ್ನು (Indian Evidence Act-1872) ತಿದ್ದುಪಡಿಗೊಳಿಸಲಾಗಿದೆ. ಇವುಗಳ ಬದಲಾಗಿ ಮೂರು ಹೊಸ ಕಾನೂನುಗಳು (New Laws) ಜುಲೈ 1ರಿಂದಲೇ ದೇಶಾದ್ಯಂತ ಜಾರಿಗೆ ಬರಲಿವೆ. ಇದರ ಬೆನ್ನಲ್ಲೇ, ಹೊಸ ಕಾನೂನುಗಳ ಜಾರಿಯ ಕುರಿತು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸಿಜೆಐ ಡಿ.ವೈ.ಚಂದ್ರಚೂಡ್‌ (CJI Chandrachud) ಅವರು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಭಾರತವು ಬದಲಾಗುತ್ತಿದೆ ಎಂಬುದಕ್ಕೆ ಹೊಸ ಕಾನೂನುಗಳ ಜಾರಿಯೇ ಸಾಕ್ಷಿಯಾಗಿದೆ. ಭಾರತ ಹೊಸ ಹಾದಿಯತ್ತ ಸಾಗುತ್ತಿದೆ. ಆಧುನಿಕ ಭಾರತದ ಸವಾಲುಗಳನ್ನು ಎದುರಿಸಲು ಹಾಗೂ ಭವಿಷ್ಯದ ದೃಷ್ಟಿಯಿಂದ ಕಾನೂನುಗಳ ಬದಲಾವಣೆಯು ಪ್ರಮುಖವಾಗಿದೆ. ಇದರಿಂದ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ಆಗುತ್ತದೆ. ಹಾಗಾಗಿ, ಹೊಸ ಕಾನೂನುಗಳ ಜಾರಿಯು ಭಾರತವು ಬದಲಾಗುತ್ತಿದೆ ಎಂಬುದಕ್ಕೆ ಕುರುಹು” ಎಂದು ಹೊಸ ಕಾನೂನುಗಳನ್ನು ಶ್ಲಾಘಿಸಿದರು.

“ದೇಶದ ಕಾನೂನು ವ್ಯವಸ್ಥೆ, ಕ್ರಿಮಿನಲ್‌ ಕಾನೂನುಗಳ ಬದಲಾವಣೆಯು ಅತ್ಯಗತ್ಯವಾಗಿತ್ತು. ಇದರ ದಿಸೆಯಲ್ಲಿ ಹೊಸ ಕಾನೂನುಗಳನ್ನು ಜಾರಿಗೊಳಿಸುತ್ತಿರುವುದು, ಮಹತ್ವದ ಬದಲಾವಣೆ ಮಾಡುತ್ತಿರುವುದು ಸಂತಸವಾಗಿದೆ. ಅದರಲ್ಲೂ, ಸಂತ್ರಸ್ತರನ್ನು ರಕ್ಷಿಸಿ, ಅಪರಾಧ ಎಸಗುವವರ ವಿರುದ್ಧ ಕೂಲಂಕಷ ತನಿಖೆಗೆ ಹೊಸ ಕಾನೂನುಗಳು ಸಹಕಾರಿಯಾಗಿವೆ” ಎಂದು ಬಣ್ಣಿಸಿದರು.

ಐಪಿಸಿಯನ್ನು ಭಾರತೀಯ ನ್ಯಾಯ ಸಂಹಿತೆ-2023, ಸಿಆರ್‌ಪಿಸಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಭಾರತೀಯ ಸಾಕ್ಷ್ಯ ವಿಧೇಯಕ-2023 ಎಂಬುದಾಗಿ ಮಾರ್ಪಡಿಸಲಾಗಿದೆ. ಹೊಸ ಕಾನೂನುಗಳು ಜುಲೈ 1ರಿಂದ ಜಾರಿಗೆ ಬರಲಿವೆ.

ಈಗಿರುವ ಭಾರತೀಯ ದಂಡ ಸಂಹಿತೆಯಲ್ಲಿ 420 ಸೆಕ್ಷನ್ ಅನ್ನು ವಂಚನೆ ಅಪರಾಧಕ್ಕೆ ಅನ್ವಯಿಸಲಾಗುತ್ತದೆ. ಆದರೆ, ಭಾರತೀಯ ನ್ಯಾಯ ಸಂಹಿತೆಯ ಈ ಅಪರಾಧಕ್ಕೆ 316(2), (3) ಮತ್ತು (4) ಸೆಕ್ಷನ್‌ಗಳು ಇರಲಿವೆ. ವಂಚನೆ ಅಪರಾಧಕ್ಕಾಗಿ ಈ ಸೆಕ್ಷನ್‌ಗಳಡಿ ಅಪರಾಧಿಗೆ ಮೂರು ವರ್ಷ, ಐದು ವರ್ಷ ಅಥವಾ ಏಳು ವರ್ಷಗಳವರೆಗೆ ದಂಡ ಸಹಿತ ಜೈಲು ಶಿಕ್ಷೆಯನ್ನು ವಿಸ್ತರಿಸಬಹುದಾಗಿದೆ.

ದೇಶದ್ರೋಹ ಕಾನೂನು ಬದಲು

ಬ್ರಿಟಿಷರ ಕಾಲದಲ್ಲಿ ಜಾರಿಗೆ ತಂದ ದೇಶದ್ರೋಹದ ಕಾನೂನು ನೂತನ ಕ್ರಿಮಿನಲ್‌ ಕಾನೂನಿನಲ್ಲಿ ಇರುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾಹಿತಿ ನೀಡಿದ್ದಾರೆ. ದೇಶದ್ರೋಹ ಕಾನೂನಿನಲ್ಲಿ ಬಂಧಿತರಾದವರಿಗೆ ಮೂರು ವರ್ಷದಿಂದ ಜೀವಾವಧಿ ಶಿಕ್ಷೆ ನೀಡಬಹುದಾಗಿದ್ದು, ಈ ಕಾನೂನು ರದ್ದುಗೊಳಿಸಲಾಗುತ್ತದೆ ಎಂದು ಹೇಳಿದರು. ಇದರ ಬದಲಾಗಿ ಹೊಸ ನಿಯಮಗಳು ಜಾರಿಗೆ ಬರಲಿವೆ ಎಂದು ಕೂಡ ತಿಳಿಸಿದರು.

ಅತ್ಯಾಚಾರಿಗಳಿಗೆ 20 ವರ್ಷ ಜೈಲು

ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಜಾಸ್ತಿಯಾಗುತ್ತಿರುವ ಬೆನ್ನಲ್ಲೇ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವುದು ನೂತನ ಕಾನೂನುಗಳನ್ನು ಜಾರಿಗೊಳಿಸಲಾಗುತ್ತಿದೆ. “ಹೊಸ ಕಾನೂನುಗಳ ಅಡಿಯಲ್ಲಿ ಅತ್ಯಾಚಾರಿಗಳಿಗೆ ಗರಿಷ್ಠ 20 ವರ್ಷ ಅಥವಾ ಅವರು ಜೀವಿತಾವಧಿವರೆಗೆ ಜೈಲಿನಲ್ಲಿ ಕಾಲ ಕಳೆಯುವ ರೀತಿ ಶಿಕ್ಷೆ ವಿಧಿಸಲಾಗುತ್ತದೆ. ಹಾಗೆಯೇ, ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದವರಿಗೆ ಗಲ್ಲು ಶಿಕ್ಷೆ ವಿಧಿಸುವ, ಅತ್ಯಾಚಾರ ಸಂತ್ರಸ್ತೆಯರ ಮಾಹಿತಿ ಬಹಿರಂಗಪಡಿಸಿದವರಿಗೂ ಶಿಕ್ಷೆ ವಿಧಿಸುವ ಕಾನೂನು ಇರಲಿದೆ” ಎಂದು ಅಮಿತ್‌ ಶಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Parliament Session: ಅಪರಾಧ ಎಸಗಿ ದೇಶ ಬಿಟ್ಟು ಹೋದವರಿಗೆ ಇನ್ನಿಲ್ಲ ನೆಮ್ಮದಿ; ಬರ್ತಿದೆ ಹೊಸ ಕಾನೂನು!

Continue Reading
Advertisement
Modi in Karnataka PM Modi to address rally in Bengaluru Here live video
Lok Sabha Election 20244 mins ago

Modi in Karnataka: ಬೆಂಗಳೂರಲ್ಲಿ ಮೋದಿ ಸಮಾವೇಶ; ಇಲ್ಲಿದೆ LIVE ವಿಡಿಯೊ

Narendra Modi
ದೇಶ6 mins ago

Narendra Modi: ಅಮೇಥಿಯಂತೆ ವಯನಾಡಿನಲ್ಲೂ ರಾಹುಲ್‌ ಗಾಂಧಿಗೆ ಸೋಲು; ಮೋದಿ ಭವಿಷ್ಯ!

Horseshoe Septum Ring Fashion
ಫ್ಯಾಷನ್7 mins ago

Horseshoe Septum Ring Fashion: ಅಲ್ಟ್ರಾ ಮಾಡರ್ನ್‌ ಸ್ಟೈಲಿಂಗ್‌ ಪ್ರಿಯರ ಮನಗೆದ್ದ ಹಾರ್ಸ್‌ ಶೂ ಸೆಪ್ಟಮ್‌ ರಿಂಗ್‌

Mrunal Thakur and Siddhant Chaturvedi to start shoot
ಟಾಲಿವುಡ್7 mins ago

Mrunal Thakur: ಸಿದ್ಧಾಂತ್ ಚತುರ್ವೇದಿ ಜತೆ ಮೃಣಾಲ್ ಠಾಕೂರ್ ರೊಮ್ಯಾನ್ಸ್‌!

IPL 2024
ಕ್ರೀಡೆ8 mins ago

IPL 2024: ‘ಕ್ಯಾಚ್ ಆಫ್ ದಿ ಐಪಿಎಲ್ 2024’; ಜಡೇಜಾ ಫ್ಲೈಯಿಂಗ್ ಕ್ಯಾಚ್​ಗೆ ಶಬ್ಬಾಶ್ ಎಂದ ರವಿಶಾಸ್ತ್ರಿ

Viral Video
ವೈರಲ್ ನ್ಯೂಸ್9 mins ago

Viral Video: ಯುವತಿ ತಲೆಗೆ ಬಲವಂತವಾಗಿ ಹಿಜಾಬ್‌ ಹಾಕಿದ ಪಾಕ್‌ ಯುವಕ; ಮುಂದೇನಾಯ್ತು?

Murder Case
ಬೆಂಗಳೂರು10 mins ago

Murder case : ಬೆಂಗಳೂರಲ್ಲಿ ಮಹಿಳೆಯ ಬರ್ಬರ ಹತ್ಯೆ; ಹಂತಕರಿಗಾಗಿ ಪೊಲೀಸರ ಹುಡುಕಾಟ

Lok Sabha Election 2024
ಕರ್ನಾಟಕ13 mins ago

Lok Sabha Election 2024: ನಾಚಿಗೆ ಇಲ್ಲದೆ 3 ಸೀಟಿಗಾಗಿ ಬಿಜೆಪಿ ಜತೆ ಹೋಗಿದ್ದಾರೆ: ದೇವೇಗೌಡರ ವಿರುದ್ಧ ಸಿಎಂ ವಾಗ್ದಾಳಿ

Lok Sabha Election 2024
Lok Sabha Election 202424 mins ago

Lok Sabha Election 2024: ಮೊದಲ ಹಂತದ ಮತದಾನ ವೇಳೆ ಗುಂಡಿನ ದಾಳಿ ನಡೆಸಿದ್ದ ಮೂವರ ಬಂಧನ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ31 mins ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ31 mins ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20241 hour ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ5 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ6 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ12 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ1 day ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ2 days ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ4 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ5 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

ಟ್ರೆಂಡಿಂಗ್‌