horoscope today read your daily horoscope predictions for may 09, 2023Horoscope Today : ಇಂದು ಯಾವ ರಾಶಿಯವರಿಗೆ ವ್ಯಾಪಾರದಲ್ಲಿ ಲಾಭ? ಇಲ್ಲಿದೆ ನಿತ್ಯ ಭವಿಷ್ಯ - Vistara News

ಪ್ರಮುಖ ಸುದ್ದಿ

Horoscope Today : ಇಂದು ಯಾವ ರಾಶಿಯವರಿಗೆ ವ್ಯಾಪಾರದಲ್ಲಿ ಲಾಭ? ಇಲ್ಲಿದೆ ನಿತ್ಯ ಭವಿಷ್ಯ

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಚೌತಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (09-05-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.

ತಿಥಿ: ಚೌತಿ 16:07 ವಾರ: ಮಂಗಳವಾರ
ನಕ್ಷತ್ರ: ಮೂಲ 17:44 ಯೋಗ: ಸಿದ್ದಿ 21:14
ಕರಣ: ಬಾಲವ 16:07
ಅಮೃತಕಾಲ: ಬೆಳಗ್ಗೆ 11 ಗಂಟೆ 44 ನಿಮಿಷದಿಂದ ಮಧ್ಯಾಹ್ನ 01ಗಂಟೆ 14 ನಿಮಿಷದವರೆಗೆ.

ಸೂರ್ಯೋದಯ : 05:56 ಸೂರ್ಯಾಸ್ತ : 06:36

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಗೃಹೋಪಯೋಗಿ ವಸ್ತುಗಳ ಖರೀದಿಯಿಂದಾಗಿ ಖರ್ಚು. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ವಹಿಸಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಕಿರಿಕಿರಿ. ಆರೋಗ್ಯ ಮಧ್ಯಮ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗುವುದು. ಹಿರಿಯರ ಬೆಂಬಲ ಆಶೀರ್ವಾದ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚನೆ ಮಾಡುವಿರಿ. ಕುಟುಂಬದಲ್ಲಿ ಸಂಗಾತಿಯ ಬೆಂಬಲ ಸಲಹೆ ಸಿಗಲಿದೆ. ದಿನದ ಮಟ್ಟಿಗೆ ಖರ್ಚು. ಉದ್ಯೋಗಿಗಳಲ್ಲಿ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅತಿಯಾದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ, ಆರೋಗ್ಯದ ಕಡೆಗೆ ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ನಿಮ್ಮ ಆಕರ್ಷಕ ವರ್ತನೆ ಎಲ್ಲರ ಗಮನ ಸೆಳೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಸಾಧ್ಯವಾದಷ್ಟು ಮಟ್ಟಿಗೆ ತಾಳ್ಮೆ ಇರಲಿ. ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು, ಕೀರ್ತಿ, ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ.
ಮುಂದೆಯಾಗುವ ಕಾರ್ಯಗಳ ಬಗೆಗೆ ಗಮನ ಇರಲಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಣಕಾಸಿನ ಸಮಸ್ಯೆ ತಲೆದೋರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು ಕೇಳಿ ಬರಲಿವೆ. ಹೂಡಿಕೆ ವ್ಯವಹಾರಗಳನ್ನು ಮಾಡುವುದು ಬೇಡ. ಉದ್ಯೋಗಿಗಳಿಗೆ ಹೆಚ್ಚಿನ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣ. ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು. ಕುಟುಂಬದವರ ಸಹಕಾರ ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಕೊಂಚಮಟ್ಟಿಗೆ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಯಾವ ಉಂಗುರ ಧರಿಸಿದರೆ ನಿಮಗೆ ಕಷ್ಟಗಳು ದೂರವಾಗುತ್ತವೆ?
Horoscope Today

ಧನಸ್ಸು: ಭವಿಷ್ಯದ ಕುರಿತಾಗಿ ಆಲೋಚನೆ ಮಾಡುವಿರಿ. ಜೀವನದಲ್ಲಿ ಅಭದ್ರತೆ ಕಾಡಬಹುದು. ಯಾವುದನ್ನು ಅತಿಯಾಗಿ ಆಲೋಚಿಸಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ. ಹೂಡಿಕೆ, ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಆರ್ಥಿಕ ಪ್ರಗತಿ ಉತ್ತಮ. ಆರೋಗ್ಯದಲ್ಲಿ ಕೊಂಚ ಏರು-ಪೇರು. ಕೆಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ. ಹಿಂದೆ ನೀಡಿದ ಹಣವು ಮರಳುವ ಸಾಧ್ಯತೆ. ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಉತ್ಸಾಹದಿಂದ ಕಾರ್ಯ ಸಿದ್ಧಿ. ಅಗತ್ಯವಸ್ತುಗಳ ಖರೀದಿಗಾಗಿ ಖರ್ಚು ಮಾಡುವಿರಿ. ಅಮೂಲ್ಯ ವಸ್ತುಗಳ ಕುರಿತು ಲಕ್ಷ್ಯ ಇರಲಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅನೇಕ ಮೂಲಗಳಿಂದ ಹಣಕಾಸಿನ ಹರಿವು ಹೆಚ್ಚಳ. ದೀರ್ಘಕಾಲದ ಆಲೋಚನೆಯಿಂದ ದೂರವಾಗುವ ಸಾಧ್ಯತೆ. ಮಾನಸಿಕ ನೆಮ್ಮದಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : ಶುಕ್ರ ಗ್ರಹ ಲಗ್ನದಲ್ಲಿದ್ದರೆ ಉತ್ತಮ ಆರೋಗ್ಯ, ಉಳಿದ ಮನೆಯಲ್ಲಿದ್ದರೆ ಯಾವೆಲ್ಲಾ ಫಲ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Modi in Karnataka: ಏಪ್ರಿಲ್‌ 28 – 29ಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ; ಯಾವ ಯಾವ ಕ್ಷೇತ್ರದಲ್ಲಿ ಮತ ಬೇಟೆ?

Modi in Karnataka: ಏಪ್ರಿಲ್‌ 28ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ಮೂರು ಕಡೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ದಾವಣಗೆರೆ, ಬೆಳಗಾವಿ ಹಾಗೂ ಉತ್ತರಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ಈ ಮೂಲಕ ಇವುಗಳೂ ಸೇರಿದಂತೆ ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳ ಮತದಾರರನ್ನೂ ಸೆಳೆಯಲು ಬಿಜೆಪಿ ಪ್ಲ್ಯಾನ್‌ ಮಾಡಿಕೊಂಡಿದೆ.

VISTARANEWS.COM


on

Modi in Karnataka PM Narendra Modi to visit from April 28 and 29
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಈಗಾಗಲೇ ಒಂದು ಸುತ್ತಿನ ಮತ ಬೇಟೆ ಮುಗಿಸಿ ತೆರಳಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಎರಡನೇ ಹಂತದ ಚುನಾವಣೆಗೆ ರಿಎಂಟ್ರಿ ಕೊಡಲಿದ್ದಾರೆ. ಈ ವೇಳೆ ಮೋದಿ (Modi in Karnataka) ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಏಪ್ರಿಲ್‌ 28 ಹಾಗೂ 29ರಂದು ಕರ್ನಾಟಕದಲ್ಲಿ ಜನರನ್ನು ಮೋಡಿ ಮಾಡಲು ಮೋದಿ ಮುಂದಾಗಿದ್ದಾರೆ.

ಏಪ್ರಿಲ್‌ 28ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ಮೂರು ಕಡೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ದಾವಣಗೆರೆ, ಬೆಳಗಾವಿ ಹಾಗೂ ಉತ್ತರಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ಈ ಮೂಲಕ ಇವುಗಳೂ ಸೇರಿದಂತೆ ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳ ಮತದಾರರನ್ನೂ ಸೆಳೆಯಲು ಬಿಜೆಪಿ ಪ್ಲ್ಯಾನ್‌ ಮಾಡಿಕೊಂಡಿದೆ.

ಮೂರು ಕಡೆಯೂ ಬೃಹತ್‌ ಸಮಾವೇಶ

ಈ ಮೂರು ಲೋಕಸಭಾ ಕ್ಷೇತ್ರಗಳಲ್ಲಿಯೂ ಬೃಹತ್‌ ಸಮಾವೇಶ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಂದು ಬೆಳಗಾವಿಯಲ್ಲಿ 28 ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.

29ರಂದು 4 ಕಡೆ ಸಮಾವೇಶ

ಏಪ್ರಿಲ್‌ 29ರಂದು ಕಲಬುರಗಿ, ಬಳ್ಳಾರಿ, ರಾಯಚೂರು ಅಥವಾ ಕೊಪ್ಪಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶವನ್ನು ನಡೆಸಲಿದ್ದಾರೆ.

ಕರ್ನಾಟಕದಲ್ಲಿ ಇಂದು ಅಮಿತ್‌ ಶಾ, ಪ್ರಿಯಾಂಕಾ ವಾದ್ರಾ ಪ್ರಚಾರ

ಮಂಗಳವಾರ (ಏಪ್ರಿಲ್‌ 23) ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಹಾಗೂ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ (Priyanka Vadra) ಅವರು ಅಬ್ಬರದ ಪ್ರಚಾರ ಮಾಡಲಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿಯೇ ಮಂಗಳವಾರ ಅಮಿತ್‌ ಶಾ ಹಾಗೂ ಪ್ರಿಯಾಂಕಾ ವಾದ್ರಾ ಅವರು ಪ್ರಚಾರ ಮಾಡುತ್ತಿರುವುದು ವಿಶೇಷವಾಗಿದೆ. ಇಂದು ಸಂಜೆ 7.50ಕ್ಕೆ ಅಮಿತ್‌ ಶಾ ಅವರು ತೇಜಸ್ವಿ ಸೂರ್ಯ ಪರ ರೋಡ್‌ ಶೋ ನಡೆಸಲಿದ್ದಾರೆ. ಸ್ವಾಮಿ ವಿವೇಕಾನಂದ ವೃತ್ತದಿಂದ ಸೇಂಟ್‌ ಫ್ರಾನ್ಸಿಸ್‌ ಶಾಲೆವರೆಗೂ ಅಮಿತ್‌ ಶಾ ಅವರು ರೋಡ್‌ ಶೋ ನಡೆಸುವ ಮೂಲಕ ತೇಜಸ್ವಿ ಸೂರ್ಯ ಪರ ಮತಯಾಚನೆ ಮಾಡಲಿದ್ದಾರೆ. ರೋಡ್‌ ಶೋಗಾಗಿ ಬಿಜೆಪಿ ಸಕಲ ಸಿದ್ಧತೆ ಮಾಡಿಕೊಂಡಿದೆ. 8.45ರವರೆಗೆ ರೋಡ್‌ ಶೋ ನಡೆಯಲಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರು ಮಧ್ಯಾಹ್ನ 2 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸಲಿದ್ದು, ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಪ್ರಿಯಾಂಕಾ ವಾದ್ರಾ ಅವರು ಭಾಷಣ ಮಾಡಲಿದ್ದಾರೆ. ಇದಾದ ನಂತರ ಸಂಜೆ ಬೆಂಗಳೂರಿಗೆ ಆಗಮಿಸುವ ಪ್ರಿಯಾಂಕಾ ವಾದ್ರಾ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರ ಪರವಾಗಿ ಪ್ರಚಾರ ನಡೆಸುವ ಮೂಲಕ ಹೆಣ್ಣುಮಕ್ಕಳ ಮತ ಸೆಳೆಯುವ ಪ್ರಯತ್ನ ಮಾಡಲಿದ್ದಾರೆ.

ಅಮಿತ್‌ ಶಾ ಅವರು ಬೊಮ್ಮನಹಳ್ಳಿ ವೃತ್ತದಿಂದ ಪ್ರಚಾರ ಆರಂಭಿಸಿದರೆ, ಪ್ರಿಯಾಂಕಾ ವಾದ್ರಾ ಅವರು ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಎಚ್.ಎಸ್. ಆರ್ ಬಡಾವಣೆಯಿಂದ ಪ್ರಚಾರ ಆರಂಭಿಸಲಿದ್ದಾರೆ. ಕರ್ನಾಟಕದಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಏಪ್ರಿಲ್‌ 24ರಂದೇ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಇದರಿಂದಾಗಿ ಮಂಗಳವಾರದ ಪ್ರಚಾರವು ಪ್ರಾಮುಖ್ಯತೆ ಪಡೆದಿದೆ. ಕರ್ನಾಟಕದಲ್ಲಿ ಈಗಾಗಲೇ ನರೇಂದ್ರ ಮೋದಿ ಅವರು ಪ್ರಚಾರ ನಡೆಸಿದ್ದಾರೆ.

Continue Reading

ದೇಶ

Spices Row: ಸಿಂಗಾಪುರ, ಹಾಂಕಾಂಗ್‌ ಬಳಿಕ ಭಾರತದಲ್ಲೂ ಎವರೆಸ್ಟ್, ಎಂಡಿಎಚ್‌ ಮಸಾಲೆ ಪರಿಶೀಲನೆ ಶುರು

Everest Spices Row: ಎವರೆಸ್ಟ್ ಜೊತೆಗೆ, ʼMDH’ ಎಂದು ಜನಪ್ರಿಯವಾಗಿರುವ ಮಹಾಶಿಯಾನ್ ಡಿ ಹಟ್ಟಿಯ ಮಸಾಲೆಗಳು ಸಹ ವಿವಾದದಲ್ಲಿ ಸಿಲುಕಿಕೊಂಡಿವೆ. MDH ನವದೆಹಲಿ ಮೂಲದ ಭಾರತೀಯ ಮಸಾಲೆ ಉತ್ಪಾದಕ ಮತ್ತು ಮಾರಾಟಗಾರ. ಎವರೆಸ್ಟ್ ನಂತರ ಇದು ಭಾರತೀಯ ಮಾರುಕಟ್ಟೆಯಲ್ಲಿ ಎರಡನೇ ಅತಿದೊಡ್ಡ ಮಸಾಲೆ ಬ್ರಾಂಡ್.

VISTARANEWS.COM


on

MDH everest spices row
Koo

ಹೊಸದಿಲ್ಲಿ: ಕ್ಯಾನ್ಸರ್ (Cancer) ಉಂಟುಮಾಡುವ ಕೀಟನಾಶಕ (pesticide) ಅಂಶಗಳನ್ನು ಹೊಂದಿರುವ ಕಾರಣಕ್ಕಾಗಿ ಸಿಂಗಾಪುರ (Singapore) ಮತ್ತು ಹಾಂಕಾಂಗ್‌ಗಳಲ್ಲಿ (Hongkong) ಆಹಾರ ನಿಗಾ ಸಂಸ್ಥೆಗಳ ತೀವ್ರ ನಿಗಾಕ್ಕೆ (Spices Row) ಕಾರಣವಾಗಿರುವ ಭಾರತೀಯ ಮೂಲದ ಎವರೆಸ್ಟ್‌ (Everest spices) ಮಸಾಲೆ ಉತ್ಪನ್ನಗಳ ಕಂಪನಿ, ಇದೀಗ ತಮ್ಮ ಉತ್ಪನ್ನಗಳು ಬ್ಯಾನ್‌ (ban) ಆಗಿಲ್ಲ ಎಂದಿವೆ. ಭಾರತೀಯ ಮಸಾಲೆ ಮಂಡಳಿ ಮತ್ತು ಎಫ್‌ಎಸ್‌ಎಸ್‌ಎಐನಂತಹ ಶಾಸನಬದ್ಧ ಸಂಸ್ಥೆಗಳು ನಿಗದಿಪಡಿಸಿದ ಆಹಾರ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿದ್ದೇವೆ ಎಂದು ಕಂಪನಿ ಹೇಳಿದೆ.

ಎರಡೂ ದೇಶಗಳಲ್ಲಿ ತಮ್ಮ ಮಸಾಲೆಗಳನ್ನು ನಿಷೇಧಿಸಲಾಗಿಲ್ಲ ಎಂದು ಕಂಪನಿ ಸ್ಪಷ್ಟಪಡಿಸಿದೆ. ಕಂಪನಿಯು ತನ್ನ ಎಲ್ಲಾ ಉತ್ಪನ್ನಗಳನ್ನು ರವಾನೆ ಮಾಡುವ ಮೊದಲು ಮತ್ತು ರಫ್ತು ಮಾಡುವ ಮೊದಲು ಕಟ್ಟುನಿಟ್ಟಾದ ತಪಾಸಣೆಗೆ ಒಳಪಡಿಸುತ್ತೇವೆ ಎಂದು ಹೇಳಿದೆ. ಪ್ರತಿ ಸಾಗಣೆಯೂ ಭಾರತೀಯ ಮಸಾಲೆ ಮಂಡಳಿಯಿಂದ ಗುಣಮಟ್ಟದ ತಪಾಸಣೆಗೆ ಒಳಗಾಗುತ್ತದೆ. ಪ್ರಸ್ತುತ ಸಮಸ್ಯೆಯ ನಿವಾರಣೆಗೆ ಅಧಿಕೃತ ಸಂವಹನಕ್ಕಾಗಿ ಕಾಯುತ್ತಿದ್ದು, ನಮ್ಮ ಗುಣಮಟ್ಟ ನಿಯಂತ್ರಣ ತಂಡವು ಈ ವಿಷಯವನ್ನು ಪರಿಶೀಲಿಸುತ್ತಿದೆ ಎಂದಿದೆ.

ತಮ್ಮ ಮಸಾಲೆಗಳನ್ನು ಸಿಂಗಾಪುರ ಅಥವಾ ಹಾಂಕಾಂಗ್‌ನಲ್ಲಿ ನಿಷೇಧಿಸಲಾಗಿಲ್ಲ ಎಂದು ಎವರೆಸ್ಟ್‌ನ ವಕ್ತಾರರು ತಿಳಿಸಿದ್ದಾರೆ. “ಸಿಂಗಾಪುರದ ಆಹಾರ ಸುರಕ್ಷತಾ ಪ್ರಾಧಿಕಾರವು ಹಾಂಕಾಂಗ್‌ನ ಉತ್ಪನ್ನ ವಾಪಸಾತಿ ಎಚ್ಚರಿಕೆಯನ್ನು ಉಲ್ಲೇಖಿಸಿದೆ ಮತ್ತು ಹೆಚ್ಚಿನ ತಪಾಸಣೆಗಾಗಿ ಉತ್ಪನ್ನವನ್ನು ಮರುಪಡೆಯಲು ಮತ್ತು ತಾತ್ಕಾಲಿಕವಾಗಿ ಹಿಡಿದಿಡಲು ನಮ್ಮ ಸಿಂಗಾಪುರ್ ಆಮದುದಾರರನ್ನು ಕೇಳಿದೆ” ಎಂದು ವಕ್ತಾರರು ಸ್ಪಷ್ಟಪಡಿಸಿದರು.

ದಿವಂಗತ ವಾದಿಲಾಲ್ ಭಾಯ್ ಶಾ ಸ್ಥಾಪಿಸಿದ 57 ವರ್ಷ ಹಳೆಯ ಮಸಾಲೆ ಬ್ರಾಂಡ್ ಎವರೆಸ್ಟ್‌ ಕಂಪನಿಯು ಶುದ್ಧ ಮತ್ತು ಮಿಶ್ರಿತ ಮಸಾಲೆಗಳ ಭಾರತದ ಅತಿದೊಡ್ಡ ತಯಾರಕ. ಜಾಗತಿಕವಾಗಿ 80ಕ್ಕೂ ಹೆಚ್ಚು ದೇಶಗಳಲ್ಲಿ ಚಲಾವಣೆಯಲ್ಲಿದೆ.

ಎವರೆಸ್ಟ್ ಜೊತೆಗೆ, ʼMDH’ ಎಂದು ಜನಪ್ರಿಯವಾಗಿರುವ ಮಹಾಶಿಯಾನ್ ಡಿ ಹಟ್ಟಿಯ ಮಸಾಲೆಗಳು ಸಹ ವಿವಾದದಲ್ಲಿ ಸಿಲುಕಿಕೊಂಡಿವೆ. MDH ನವದೆಹಲಿ ಮೂಲದ ಭಾರತೀಯ ಮಸಾಲೆ ಉತ್ಪಾದಕ ಮತ್ತು ಮಾರಾಟಗಾರ. ಎವರೆಸ್ಟ್ ನಂತರ ಇದು ಭಾರತೀಯ ಮಾರುಕಟ್ಟೆಯಲ್ಲಿ ಎರಡನೇ ಅತಿದೊಡ್ಡ ಮಸಾಲೆ ಬ್ರಾಂಡ್.

ವಿವಾದ ಏನು?

ಹಾಂಕಾಂಗ್ ಮತ್ತು ಸಿಂಗಾಪುರಗಳು ಭಾರತೀಯ ಬ್ರಾಂಡ್‌ಗಳಾದ ಎಂಡಿಹೆಚ್ ಮತ್ತು ಎವರೆಸ್ಟ್‌ನ ನಾಲ್ಕು ಮಸಾಲೆ ಉತ್ಪನ್ನಗಳ ಮಾರಾಟದ ಮೇಲೆ ನಿರ್ಬಂಧಗಳನ್ನು ವಿಧಿಸಿವೆ. ಇವುಗಳಲ್ಲಿ ನಿಗದಿತ ಮಿತಿಯನ್ನು ಮೀರಿ ಕೀಟನಾಶಕ ʼಎಥಿಲೀನ್ ಆಕ್ಸೈಡ್ʼ ಇದೆ ಎಂದು ಆರೋಪಿಸಲಾಗಿದೆ. ಹಾಂಕಾಂಗ್‌ನ ಆಹಾರ ಸುರಕ್ಷತೆ ಕೇಂದ್ರ (CFS) ಗ್ರಾಹಕರನ್ನು ಈ ಉತ್ಪನ್ನಗಳನ್ನು ಖರೀದಿಸದಂತೆ ಮತ್ತು ವ್ಯಾಪಾರಿಗಳನ್ನು ಮಾರಾಟ ಮಾಡದಂತೆ ಕೇಳಿಕೊಂಡಿದೆ. ಸಿಂಗಾಪುರ್ ಫುಡ್ ಏಜೆನ್ಸಿ, ಈ ಮಸಾಲೆಗಳನ್ನು ಮರುಪಡೆಯಲು ಕಂಪನಿಗೆ ನಿರ್ದೇಶಿಸಿದೆ.

ಸಿಂಗಾಪುರವು ‘ಎವರೆಸ್ಟ್ ಫಿಶ್ ಕರಿ ಮಸಾಲಾ’ವನ್ನು ಹಿಂಪಡೆದಿದೆ. MDHನ ಮದ್ರಾಸ್ ಕರಿ ಪೌಡರ್ (ಮದ್ರಾಸ್ ಮೇಲೋಗರ ಮಸಾಲೆ ಮಿಶ್ರಣ), ಎವರೆಸ್ಟ್ ಫಿಶ್ ಕರಿ ಮಸಾಲಾ, MDH ಸಾಂಬಾರ್ ಮಸಾಲಾ ಮಿಶ್ರಿತ ಮಸಾಲಾ ಪೌಡರ್ ಮತ್ತು MDH ಕರಿ ಪುಡಿ ಮಿಶ್ರಿತ ಮಸಾಲಾ ಪೌಡರ್ ಅನ್ನು ಖರೀದಿಸದಂತೆ ಹಾಂಕಾಂಗ್ ಗ್ರಾಹಕರನ್ನು ಕೇಳಿದೆ.

ಈಗ ಭಾರತದಲ್ಲಿ ಪರೀಕ್ಷೆ

ಇದರ ನಡುವೆ, ಭಾರತದಲ್ಲಿ ಮಾರಾಟವಾಗುವ ಮಸಾಲೆಗಳ ಗುಣಮಟ್ಟವನ್ನು ಪರಿಶೀಲಿಸಲು ಆಹಾರ ಸುರಕ್ಷತಾ ನಿಯಂತ್ರಕ ಎಫ್‌ಎಸ್‌ಎಸ್‌ಎಐ (FSSAI) ಮುಂದಾಗಿದೆ. ಸಿಂಗಾಪುರ ಮತ್ತು ಹಾಂಕಾಂಗ್‌ಗಳು ಎತ್ತಿರುವ ಕಾಳಜಿಯ ಹಿನ್ನೆಲೆಯಲ್ಲಿ, ದೇಶದಾದ್ಯಂತ MDH ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್‌ಗಳ ಪುಡಿ ರೂಪದ ಮಸಾಲೆಗಳ ಮಾದರಿಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿದೆ.

“ಪ್ರಸ್ತುತ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು, FSSAI ಎಮ್‌ಡಿಹೆಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್‌ಗಳ ಮಸಾಲೆಗಳ ಮಾದರಿಗಳನ್ನು ಮಾರುಕಟ್ಟೆಯಿಂದ ತೆಗೆದುಕೊಳ್ಳುತ್ತಿದೆ. ಅವುಗಳು ಎಫ್‌ಎಸ್‌ಎಸ್‌ಎಐ ಮಾನದಂಡಗಳನ್ನು ಪೂರೈಸುತ್ತವೆಯೇ ಎಂದು ಪರಿಶೀಲಿಸುತ್ತಿದೆ” ಎಂದು ಸರ್ಕಾರಿ ಮೂಲ ತಿಳಿಸಿದೆ.

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (FSSAI) ರಫ್ತು ಮಾಡುವ ಮಸಾಲೆಗಳ ಗುಣಮಟ್ಟವನ್ನು ನಿಯಂತ್ರಿಸುವುದಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ FSSAI, ದೇಶೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ಉತ್ಪನ್ನದ ಗುಣಮಟ್ಟವನ್ನು ಪರಿಶೀಲಿಸಲು ಮಾರುಕಟ್ಟೆಯಿಂದ ನಿಯಮಿತವಾಗಿ ಮಸಾಲೆಗಳ ಮಾದರಿಗಳನ್ನು ತೆಗೆದುಕೊಳ್ಳುತ್ತದೆ.

ಇದನ್ನೂ ಓದಿ: Everest Spices: ಸಿಂಗಾಪುರ ಬಳಿಕ ಹಾಂಕಾಂಗ್‌ನಲ್ಲೂ ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ ಬ್ಯಾನ್!

Continue Reading

ರಾಜಕೀಯ

Narendra Modi: ಕಾಂಗ್ರೆಸ್‌ ರಾಜ್ಯದಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾಪರಾಧ; ರಾಜಸ್ಥಾನದಲ್ಲಿ ಮೋದಿಯಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ತರಾಟೆ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ (Lok Sabha Election 2024) ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಮೊದಲ ಆದ್ಯತೆಯಾಗಿ ಹಂಚುತ್ತದೆ ಎಂಬ ಆರೋಪವನ್ನು ಮತ್ತೊಮ್ಮೆ ಪ್ರಸ್ತಾಪ ಮಾಡಿದ ಮೋದಿ (Narendra Modi), ನಾನು ಸತ್ಯ ಹೇಳಿದರೆ ಕಾಂಗ್ರೆಸ್‌ಗೆ ಮೆಣಸಿನ ಉರಿ ಬಿದ್ದಂತಾಗುತ್ತದೆ. ಈ ದೇಶದ ಸಂಪತ್ತಿನಲ್ಲಿ ಮುಸಲ್ಮಾನರಿಗೆ ಮೊದಲ ಪಾಲು ಸಿಗಬೇಕು ಎಂದು ಮನಮೋಹನ್‌ ಸಿಂಗ್‌ ತಾವು ಪ್ರಧಾನಿಯಾಗಿದ್ದ ಹೇಳಿದ್ದನ್ನು ನೀವು ಮರೆಯಬೇಡಿ ಎಂದಿದ್ದಾರೆ.

VISTARANEWS.COM


on

Narendra Modi and Siddaramaiah
Koo

ಕಾಂಗ್ರೆಸ್‌ ಆಡಳಿತ ಇರುವ ರಾಜ್ಯಗಳಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾ ಅಪರಾಧ. ಶೋಭಾ ಯಾತ್ರೆ ನಡೆಸಲೂ ಅಲ್ಲಿ ಅವಕಾಶ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಜಸ್ಥಾನದಲ್ಲಿ ತಮ್ಮ ಚುನಾವಣಾ ಪ್ರಚಾರದ (Lok Sabha Election 2024) ವೇಳೆ ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

Modi in Karnataka Congress snatches Rs 4000 under Kisan Samman says PM Narendra Modi

ಕಾಂಗ್ರೆಸ್‌ ಎಂದೂ ಅಭಿವೃದ್ಧಿ ರಾಜಕಾರಣವನ್ನು ಮಾಡಿಯೇ ಇಲ್ಲ. ಅದು ಮಾಡುತ್ತಿರುವುದು ವೋಟ್‌ ಬ್ಯಾಂಕ್‌ ಪಾಲಿಟಿಕ್ಸ್‌, ಒಂದು ಸಮುದಾಯದ ಓಲೈಕೆ ರಾಜಕಾರಣ ಎಂದೂ ಮೋದಿ ಟೀಕಿಸಿದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಮೊದಲ ಆದ್ಯತೆಯಾಗಿ ಹಂಚುತ್ತದೆ ಎಂಬ ಆರೋಪವನ್ನು ಮತ್ತೊಮ್ಮೆ ಪ್ರಸ್ತಾಪ ಮಾಡಿದ ಮೋದಿ, ನಾನು ಸತ್ಯ ಹೇಳಿದರೆ ಕಾಂಗ್ರೆಸ್‌ಗೆ ಮೆಣಸಿನ ಉರಿ ಬಿದ್ದಂತಾಗುತ್ತದೆ. ಈ ದೇಶದ ಸಂಪತ್ತಿನಲ್ಲಿ ಮುಸಲ್ಮಾನರಿಗೆ ಮೊದಲ ಪಾಲು ಸಿಗಬೇಕು ಎಂದು ಮನಮೋಹನ್‌ ಸಿಂಗ್‌ ತಾವು ಪ್ರಧಾನಿಯಾಗಿದ್ದ ಹೇಳಿದ್ದನ್ನು ನೀವು ಮರೆಯಬೇಡಿ. ನಿಮ್ಮ ಕೊರಳಿನ ಮಂಗಳಸೂತ್ರವನ್ನೂ ಅವರು ಬಿಡುವುದಿಲ್ಲ ಎಂದು ಎಚ್ಚರಿಸಿದರು.

Narendra Modi

ದಲಿತರ ಮೀಸಲು ಮುಸಲ್ಮಾನರಿಗೆ

ದಲಿತರು ಮತ್ತು ಆದಿವಾಸಿಗಳ ಮೀಸಲ ಪಾಲನ್ನು ಕಿತ್ತು ಕಾಂಗ್ರೆಸ್‌ ಮುಸಲ್ಮಾನರಿಗೆ ನೀಡಲು ಸದಾ ಪ್ರಯತ್ನಿಸುತ್ತಿರುತ್ತದೆ. ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಪರಿಶಿಷ್ಟರ ಮೀಸಲಿನ ಪಾಲನ್ನು ಕಿತ್ತು ಮುಸಲ್ಮಾನರಿಗೆ ನೀಡಿತ್ತು. ಮುಂದೆ ಅಲ್ಲಿ ಬಿಜೆಪಿ ಸರ್ಕಾರ ಬಂದಾಗ ಅದನ್ನು ರದ್ದುಪಡಿಸಿ ಎಸ್‌ಸಿ, ಎಸ್‌ಟಿಯವರಿಗೆ ನ್ಯಾಯ ದೊರಕಿಸಲಾಯಿತು. ಆಂಧ್ರ ಪ್ರದೇಶದ ಕಾಂಗ್ರೆಸ್‌ ಸರ್ಕಾರ ಕೂಡ ಎಸ್‌ಸಿ, ಎಸ್‌ಟಿ ಮೀಸಲು ಕಡಿಮೆ ಮಾಡಿ ಮುಸಲ್ಮಾನರ ಮೀಸಲು ಹೆಚ್ಚಿಸಲು ನಾಲ್ಕು ಬಾರಿ ವಿಧೇಯಕ ಮಂಡಿಸಿ ಕಾಯಿದೆ ರೂಪಿಸಿತ್ತು. ಆದರೆ ಕೋರ್ಟ್‌ ಮಧ್ಯಪ್ರವೇಶದ ಕಾರಣ ಅದು ಸಾಧ್ಯವಾಗಲಿಲ್ಲ. 2012ರಲ್ಲಿ ಕೇಂದ್ರದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಹೀಗೆಯೇ ಮಾಡಲು ಹೊರಟಿತ್ತು. ಎಸ್‌ಸಿ-ಎಸ್‌ಟಿ ಮತ್ತು ಆಸಿವಾಸಿಗಳಿಗೆ ನಾನು ಯಾವ ಕಾರಣಕ್ಕೂ ಮೀಸಲಿನಲ್ಲಿ ನಷ್ಟ ಮಾಡಲು ಬಿಡುವುದಿಲ್ಲ. ಇದು ಮೋದಿ ಗ್ಯಾರಂಟಿ ಎಂದು ಮೋದಿ ಘೋಷಿಸಿದರು.

ನುಸುಳುಕೋರರಿಗೆ ಸೌಲಭ್ಯ ಕೊಡಬೇಕೆ?

ನುಸುಳುಕೋರರಿಗೆ, ದೇಶದ್ರೋಹಿಗಳಿಗೆ ಕಾಂಗ್ರೆಸ್‌ ಈ ದೇಶದ ಸಂಪತ್ತು ಹಂಚಲು ಬಯಸುತ್ತದೆ ಎಂದು ತೀವ್ರ ವಾಗ್ದಾಳಿ ನಡೆಸಿದ ಮೋದಿ, ನೆರೆಯ ದೇಶದಿಂದ ಪದೇಪದೆ ದಾಳಿಗೆ ಒಳಗಾಗುವ ನಮ್ಮ ವೀರ ಸೈನಿಕರಿಗೆ ಯಾವುದೇ ನೆರವು ನೀಡುತ್ತಿರಲಿಲ್ಲ. ಆದರೆ ನಾವು ನಮ್ಮ ಯೋಧರಿಗೆ ಎಲ್ಲ ರೀತಿಯ ನೆರವು ನೀಡುತ್ತಿದ್ದೇವೆ. ಅವರ ಆತ್ಮಸ್ಥೈರ್ಯ ಹೆಚ್ಚಿಸುತ್ತಿದ್ದೇವೆ ಎಂದರು.
ಕಾಂಗ್ರೆಸ್‌ ಪ್ರಣಾಳಿಕೆಯನ್ನು ನೀವು ಎಚ್ಚರಿಕೆಯಿಂದ ಓದಿ. ಅವರು ಅಧಿಕಾರಕ್ಕೆ ಬಂದರೆ ನಿಮ್ಮ ಸಂಪತ್ತಿನ ಸರ್ವೆ ನಡೆಸುತ್ತಾರಂತೆ. ಆ ಬಳಿಕ ಅದನ್ನು ಅಗತ್ಯ ಇದ್ದವರಿಗೆ ಹಂಚುತ್ತಾರಂತೆ. ಆ ಅಗತ್ಯ ಇದ್ದವರು ಯಾರು ಎಂಬುದು ನಿಮಗೆ ಗೊತ್ತಿರಲಿ ಎಂದು ಮೋದಿ ಹೇಳಿದರು.

ಉತ್ತರ ಪ್ರದೇಶದಲ್ಲೂ ಮೋದಿ ಗುಡುಗಿದ್ದರು

ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ನೀಡಿದ್ದ ಸಂಪತ್ತು ಮರುಹಂಚಿಕೆಯ ವಿಚಾರದ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ಉತ್ತರ ಪ್ರದೇಶದ ಅಲಗಢದಲ್ಲೂ ಗುಡುಗಿದ್ದರು. ಕಾಂಗ್ರೆಸ್‌ನವರಿಗೆ ಮಹಿಳೆಯರ ಮಂಗಳಸೂತ್ರದ ಮೇಲೂ ಕಣ್ಣು ಬಿದ್ದಿದೆ. ಮಾತೆಯರು, ಭಗಿನಿಯರ ಚಿನ್ನವನ್ನು ದೋಚುವ ದುರುದ್ದೇಶ ಇವರದ್ದು ಎಂದು ವಾಗ್ದಾಳಿ ನಡೆಸಿದ್ದರು.

“ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ನಿಮ್ಮ ಆದಾಯ ಮತ್ತು ಆಸ್ತಿಯ ಮೇಲೆ ಕಣ್ಣಿಟ್ಟಿವೆ. ಕಾಂಗ್ರೆಸ್ ತನ್ನಪ್ರಣಾಳಿಕೆಯಲ್ಲಿ ಇದನ್ನು ಉಲ್ಲೇಖಿಸಿದೆ. ಮಹಿಳೆಯರು ಚಿನ್ನವನ್ನು ಆಭರಣಗಳ ರೂಪದಲ್ಲಿ ಧರಿಸಲು ಮಾತ್ರವಲ್ಲ, ಅದನ್ನು ರಸಕ್ಷಿಸಲು ಕಾನೂನಿನಲ್ಲಿ ಅವಕಾಶವಿದೆ. ಆದರೆ ಈಗ ಅವರ ಕಣ್ಣು ಮಹಿಳೆಯರ ಮಂಗಳಸೂತ್ರದ ಮೇಲೆ ನೆಟ್ಟಿದೆ. ತಾಯಿ ಮತ್ತು ಸಹೋದರಿಯರ ಚಿನ್ನವನ್ನು ದೋಚುವುದು ಇವರ ಉದ್ದೇಶ. ಹೀಗಾಗಿ ಅವರು ಅಧಿಕಾರಕ್ಕೆ ಬಂದರೆ ನಿಮ್ಮ ಮಂಗಳಸೂತ್ರವೂ ಸುರಕ್ಷಿತವಲ್ಲʼʼ ಎಂದು ಮೋದಿ ಹೇಳಿದ್ದರು.
ʼʼಒಂದು ವೇಳೆ ನೀವು ಹಳ್ಳಿಯಲ್ಲಿ ಪಿತ್ರಾರ್ಜಿತ ಮನೆಯನ್ನು ಹೊಂದಿದ್ದು, ನಗರದಲ್ಲಿ ಮಕ್ಕಳಿಗಾಗಿ ಚಿಕ್ಕ ಫ್ಲ್ಯಾಟ್‌ ಖರೀದಿಸಿದ್ದೀರಿ ಎಂದಿಟ್ಟುಕೊಳ್ಳೋಣ. ಆಗ ಅವರು ಎರಡರ ಪೈಕಿ ಒಂದನ್ನು ತಮ್ಮ ವಶಕ್ಕೆ ಪಡೆದುಕೊಳ್ಳಲಿದ್ದಾರೆ. ಇದು ಮಾವೋವಾದಿ ಮತ್ತು ಕಮ್ಯೂನಿಷ್ಟ್‌ ಮನೋಭಾವದ ಯೋಚನಾ ಲಹರಿ. ಹೀಗೆ ಮಾಡಿಯೇ ಅವರು ಹಲವು ದೇಶಗಳನ್ನು ನಾಶಪಡಿಸಿದ್ದಾರೆ. ಈಗ ಕಾಂಗ್ರೆಸ್‌ ಮತ್ತು ಪ್ರತಿಪಕ್ಷಗಳ ʼಒಂಡಿಯಾʼ ಒಕ್ಕೂಟ ಆ ನಿಯಮವನ್ನು ಭಾರತದಲ್ಲಿ ಜಾರಿಗೊಳಿಸಲು ಮುಂದಾಗಿದೆʼʼ ಎಂದು ಪ್ರಧಾನಮಂತ್ರಿ ದೂರಿದ್ದರು. ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಇದೆ ಎಂದು ಕಾಂಗ್ರೆಸ್ ಈ ಹಿಂದೆ ಹೇಳಿತ್ತು. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ದೇಶದ ಆಸ್ತಿಯನ್ನು ವಿತರಿಸುವುದಾಗಿ ತಿಳಿಸಿತ್ತು. “”ಕಾಂಗ್ರೆಸ್ ಅಧಿಕಾರ ಬಂದರೆ, ಈ ದೇಶದಲ್ಲಿ ಯಾರು ಎಷ್ಟು ಆಸ್ತಿ ಹೊಂದಿದ್ದಾರೆ ಎಂದು ಸಮೀಕ್ಷೆ ಕೈಗೊಳ್ಳಲಾಗುವುದು. ಬಳಿಕ ಈ ಆಸ್ತಿಯನ್ನು ಮರು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದುʼʼ ಎಂದು ರಾಹುಲ್ ಗಾಂಧಿ ಹೇಳಿದ್ದರು. ಈ ಬಗ್ಗೆ ಮೋದಿ ತಮ್ಮ ಚುನಾವಣಾ ಭಾಷಣದಲ್ಲಿ ಪ್ರಸ್ತಾಪಿಸಿ ಕಾಂಗ್ರೆಸನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Lok Sabha Election 2024: ವಿಧಾನ ಪರಿಷತ್‌ ಸ್ಥಾನಕ್ಕೆ ಕೆ.ಪಿ. ನಂಜುಂಡಿ ರಾಜೀನಾಮೆ; ಕಾಂಗ್ರೆಸ್‌ ಸೇರ್ಪಡೆ?

Continue Reading

ಕ್ರೀಡೆ

Gukesh D: ಡಿ.ಗುಕೇಶ್‌ ಸಾಧನೆಗಾಗಿ ವೈದ್ಯ ವೃತ್ತಿಯನ್ನೇ ತೊರೆದಿದ್ದ ತಂದೆ

Gukesh D: 12ನೇ ವರ್ಷದಲ್ಲೇ ಗ್ರ್ಯಾಂಡ್‌ಮಾಸ್ಟರ್‌ ಆಗಿ ಹೊರಹೊಮ್ಮಿದ್ದ ಗುಕೇಶ್‌, ಕ್ಯಾಂಡಿಡೇಟ್ಸ್‌ ಟೂರ್ನಿ ಗೆದ್ದ ವಿಶ್ವದ ಅತಿ ಕಿರಿಯ ಚೆಸ್‌ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಪ್ರಶಸ್ತಿ ಗೆದ್ದ 2ನೇ ಭಾರತೀಯ ಎಂಬ ಕೀರ್ತಿಯೂ ಅವರದ್ದಾಗಿದೆ. ವಿಶ್ವನಾಥನ್‌ ಆನಂದ್‌ ಮೊದಲಿಗ. ಅವರು 2014ರಲ್ಲಿ ಕ್ಯಾಂಡಿಡೇಟ್ಸ್‌ ಪ್ರಶಸ್ತಿ ಗೆದ್ದಿದ್ದರು.

VISTARANEWS.COM


on

Gukesh D
Koo

ಬೆಂಗಳೂರು: ಭಾನುವಾರ ನಡೆದಿದ್ದ ಫಿಡೆ ಕ್ಯಾಂಡಿಡೇಟ್ಸ್‌ ಚೆಸ್‌ನಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ಚಾಂಪಿಯನ್​ ಪಟ್ಟ ಅಲಂಕರಿಸಿದ ಭಾರತದ ಚೆಸ್‌ ಗ್ರ್ಯಾಂಡ್‌ಮಾಸ್ಟರ್ ಡಿ.ಗುಕೇಶ್‌(Gukesh D) ಅವರ ಸಾಧನೆಯ ಹಿಂದೆ ಅವರ ತಂದೆಯ ಅಪಾರ ಶ್ರಮವಿದೆ. ಮಗನ ಚೆಸ್​ ಸಾಧನೆಗೆ ಯಾವುದೇ ಅಡೆತಡೆ ಉಂಟಾಗಬಾರದೆಂದು ತಂದೆ ತಂದೆ ಡಾ.ರಜನೀಕಾಂತ್‌(Rajinikanth) ಅವರು ತಮ್ಮ ವೈದ್ಯ ವೃತ್ತಿಯನ್ನೇ ತಾತ್ಕಾಲಿಕವಾಗಿ ತೊರೆದಿದ್ದರು.

ಹೌದು, ಬಾಲ್ಯದಲ್ಲೇ ಚೆಸ್‌ ಮೇಲೆ ಒಲವು ಹೊಂದಿದ್ದ ಗುಕೇಶ್‌ಗೆ ಕೋಚಿಂಗ್‌, ಟೂರ್ನಿಯ ಸಿದ್ಧತೆ, ಪ್ರಯಾಣಕ್ಕಾಗಿ ಪೋಷಕರು ಆರ್ಥಿಕ ಸಮಸ್ಯೆ ಎದುರಿಸಿದ್ದರು. ಆದರೆ, ಮಗನ ಸಾಧನೆಗೆ ಹಣಕಾಸಿನ ಕೊರತೆ ಅಡ್ಡಿಯಾಗಬಾರದೆಂದು ತಂದೆ ಡಾ.ರಜನೀಕಾಂತ್‌, ತಾಯಿ ಪದ್ಮಾ ದೃಢನಿರ್ಧಾರ ಕೈಗೊಂಡಿದ್ದರು. ಹಣ ಹೊಂದಿಸಲು ಕ್ರೌಂಡ್‌ ಪಂಡಿಂಗ್ ಕೂಡಾ ನಡೆಸಿದ್ದರು. ಇದು ಮಾತ್ರವಲ್ಲದೆ ಗುಕೇಶ್‌ ಜತೆ ಟೂರ್ನಿಗಳಲ್ಲಿ ಪಾಲ್ಗೊಳ್ಳಲು ವಿದೇಶಕ್ಕೆ ಹೋಗುವ ಕಾರಣಕ್ಕಾಗಿ ಅವರ ತಂದೆ 2017-18ರಲ್ಲಿ ತಮ್ಮ ವೈದ್ಯ ವೃತ್ತಿಯನ್ನೇ ತಾತ್ಕಾಲಿಕವಾಗಿ ತೊರೆದಿದ್ದರು.

ಇದನ್ನೂ ಓದಿ D Gukesh: 17ನೇ ವಯಸ್ಸಿಗೇ ‘ಚೆಸ್‌ ಕ್ಯಾಂಡಿಡೇಟ್ಸ್‌’ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತದ ಗುಕೇಶ್!

ಪೋಷಕರ ತ್ಯಾಗ ಮತ್ತು ಶ್ರಮಕ್ಕೆ ಇಂದು ಗುಕೇಶ್‌ ಚೆಸ್​ನಲ್ಲಿ ಮಿಂಚುವ ಮೂಲಕ ಅವರಿಗೂ ಕೀರ್ತಿ ತಂದಿದ್ದಾನೆ. 12ನೇ ವರ್ಷದಲ್ಲೇ ಗ್ರ್ಯಾಂಡ್‌ಮಾಸ್ಟರ್‌ ಆಗಿ ಹೊರಹೊಮ್ಮಿದ್ದ ಗುಕೇಶ್‌, ಕ್ಯಾಂಡಿಡೇಟ್ಸ್‌ ಟೂರ್ನಿ ಗೆದ್ದ ವಿಶ್ವದ ಅತಿ ಕಿರಿಯ ಚೆಸ್‌ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಪ್ರಶಸ್ತಿ ಗೆದ್ದ 2ನೇ ಭಾರತೀಯ ಎಂಬ ಕೀರ್ತಿಯೂ ಅವರದ್ದಾಗಿದೆ. ವಿಶ್ವನಾಥನ್‌ ಆನಂದ್‌ ಮೊದಲಿಗ. ಅವರು 2014ರಲ್ಲಿ ಕ್ಯಾಂಡಿಡೇಟ್ಸ್‌ ಪ್ರಶಸ್ತಿ ಗೆದ್ದಿದ್ದರು.

ಡಿ.ಗುಕೇಶ್‌ ವಿಶ್ವ ಚಾಂಪಿಯನ್‌ ಎನಿಸಿಕೊಳ್ಳಲು ಇನ್ನೊಂದೇ ಹೆಜ್ಜೆ ಬಾಕಿ ಇದೆ. ಈ ಸ್ಪರ್ಧೆಯಲ್ಲಿ ಚೀನಾದ ಡಿಂಗ್‌ ಲಿರೆನ್‌ ವಿರುದ್ಧ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. ವರ್ಷಾಂತ್ಯದಲ್ಲಿ ಪಂದ್ಯ ನಡೆಯಲಿದ್ದು, ವೇಳಾಪಟ್ಟಿ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ. ಭಾರತದಿಂದ ಈ ವರೆಗೂ ವಿಶ್ವನಾಥನ್‌ ಆನಂದ್ ಮಾತ್ರ ವಿಶ್ವ ಚಾಂಪಿಯನ್‌ ಆಗಿದ್ದಾರೆ. ಅವರು 5 ಬಾರಿ ಪ್ರಶಸ್ತಿ ಗೆದ್ದಿದ್ದಾರೆ.

ಭಾನುವಾರ ತಡರಾತ್ರಿ ಕೆನಡಾದ ಟೊರೊಂಟೊದಲ್ಲಿ ನಡೆದ ಮುಕ್ತ ವಿಭಾಗದ 14 ಹಾಗೂ ಕೊನೆ ಸುತ್ತಿನ ಹಣಾಹಣಿಯಲ್ಲಿ ಗುಕೇಶ್‌ ಅವರು ಅಮೆರಿಕದ ಹಿಕರು ನಕಮುರಾ ವಿರುದ್ಧ ಡ್ರಾ ಸಾಧಿಸಿದರು. ಇದರೊಂದಿಗೆ ಗುಕೇಶ್‌ ಅಂಕ ಗಳಿಕೆಯನ್ನು 9ಕ್ಕೆ ಹೆಚ್ಚಿಸಿ ಅಗ್ರಸ್ಥಾನ ಕಾಯ್ದುಕೊಂಡರು. ರಷ್ಯಾದ ಇಯಾನ್‌ ನೆಪೊಮ್ನಿಯಾಚಿ ಹಾಗೂ ಫ್ಯಾಬಿಯಾನೊ ಕರುನಾ ನಡುವಿನ ಪಂದ್ಯ ಡ್ರಾಗೊಳ್ಳುವುದರೊಂದಿಗೆ ಗುಕೇಶ್‌ ಚಾಂಪಿಯನ್‌ ಎನಿಸಿಕೊಂಡರು.

ಇದೇ ವೇಳೆ ಗುಕೇಶ್‌ 40 ವರ್ಷಗಳ ದಾಖಲೆಯನ್ನು ಅಳಿಸಿ ಹಾಕಿ, ನೂತನ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು. ಗುಕೇಶ್‌ ಕ್ಯಾಂಡಿಡೇಟ್ಸ್‌ ಟೂರ್ನಿ ಗೆದ್ದ ವಿಶ್ವದ ಅತಿ ಕಿರಿಯ ಚೆಸ್‌ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದರು. ರಷ್ಯಾದ ದಿಗ್ಗಜ ಚೆಸ್‌ ಪಟು ಗ್ಯಾರಿ ಕಾಸ್ಪರೋವ್‌ 1984ರಲ್ಲಿ ತಮ್ಮ 22ನೇ ವರ್ಷದಲ್ಲಿ ಕ್ಯಾಂಡಿಡೇಟ್ಸ್‌ ಟೂರ್ನಿ ಗೆದ್ದಿದ್ದರು. ಇದು ಈವರೆಗಿನ ಟೂರ್ನಿಯ ಇತಿಹಾಸವಾಗಿತ್ತು. ಆದರೆ ಗುಕೇಶ್‌ 17ನೇ ವಯಸ್ಸಿಗೆ ಚಾಂಪಿಯನ್​ ಆಗುವ ಮೂಲಕ ಕಾಸ್ಪರೋವ್‌ ದಾಖಲೆ ಮುರಿದರು.

Continue Reading
Advertisement
Murder case in hublli
ಹುಬ್ಬಳ್ಳಿ17 mins ago

Kidnap Case : ಅಖಂಡೇಶ್ವರ ಜಾತ್ರೆಗೆ ಹೋದ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ ಮುಸ್ಲಿಂ ಯುವಕ

Rafael Nadal
ಕ್ರೀಡೆ31 mins ago

Rafael Nadal: ಲೇವರ್‌ ಕಪ್‌ ಬಳಿಕ 22 ಬಾರಿಯ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್​ ನಡಾಲ್‌ ನಿವೃತ್ತಿ!

Modi in Karnataka PM Narendra Modi to visit from April 28 and 29
Lok Sabha Election 202443 mins ago

Modi in Karnataka: ಏಪ್ರಿಲ್‌ 28 – 29ಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ; ಯಾವ ಯಾವ ಕ್ಷೇತ್ರದಲ್ಲಿ ಮತ ಬೇಟೆ?

Murder Case In Bengaluru
ಬೆಂಗಳೂರು48 mins ago

Murder Case : ಒಂಟಿ ಮಹಿಳೆ ಕೊಲೆ ಕೇಸ್‌; ಅತಿಯಾದ ಸೆಕ್ಸ್‌ಗೆ ಒತ್ತಾಯಿಸಿದವಳನ್ನು ಬೆಡ್‌ ರೂಂನಲ್ಲೇ ಕೊಂದ ಯುವಕ

MDH everest spices row
ದೇಶ1 hour ago

Spices Row: ಸಿಂಗಾಪುರ, ಹಾಂಕಾಂಗ್‌ ಬಳಿಕ ಭಾರತದಲ್ಲೂ ಎವರೆಸ್ಟ್, ಎಂಡಿಎಚ್‌ ಮಸಾಲೆ ಪರಿಶೀಲನೆ ಶುರು

Narendra Modi and Siddaramaiah
ರಾಜಕೀಯ1 hour ago

Narendra Modi: ಕಾಂಗ್ರೆಸ್‌ ರಾಜ್ಯದಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾಪರಾಧ; ರಾಜಸ್ಥಾನದಲ್ಲಿ ಮೋದಿಯಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ತರಾಟೆ

Gukesh D
ಕ್ರೀಡೆ1 hour ago

Gukesh D: ಡಿ.ಗುಕೇಶ್‌ ಸಾಧನೆಗಾಗಿ ವೈದ್ಯ ವೃತ್ತಿಯನ್ನೇ ತೊರೆದಿದ್ದ ತಂದೆ

baba ramdev supreme court
ಪ್ರಮುಖ ಸುದ್ದಿ1 hour ago

Patanjali Case: ಜಾಹೀರಾತು ಗಾತ್ರದಲ್ಲೇ ಕ್ಷಮಾಪಣೆ ಕೇಳಿ: ಬಾಬಾ ರಾಮ್‌ದೇವ್‌ ಬೆವರಿಳಿಸಿದ ಸುಪ್ರೀಂ ಕೋರ್ಟ್‌

Murder Case in raichur
ರಾಯಚೂರು1 hour ago

Murder Case : ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಮುಸ್ಲಿಂ ಯುವಕನ ಕೊಂದ ಅರ್ಚಕ

Lok Sabha Election-2024
Latest1 hour ago

Voter Slip by Mobile: ಮತಪಟ್ಟಿಯಲ್ಲಿ ಹೆಸರು ಪರಿಶೀಲನೆ, ವೋಟರ್ ಸ್ಲಿಪ್ ಡೌನ್‌ಲೋಡ್‌ ಮೊಬೈಲ್‌ನಲ್ಲೇ ಮಾಡಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು21 hours ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ22 hours ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ1 day ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ2 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌