horoscope today read your daily horoscope predictions for may 1, 2023Horoscope Today : ಏಕಾದಶಿಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ - Vistara News

ಪ್ರಮುಖ ಸುದ್ದಿ

Horoscope Today : ಏಕಾದಶಿಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ಏಕಾದಶಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (01-05-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ.

ತಿಥಿ: ಏಕಾದಶಿ 22:09 ವಾರ: ಸೋಮವಾರ
ನಕ್ಷತ್ರ: ಪೂ.ಪಾಲ್ಗುಣಿ 17:50 ಯೋಗ: ಧ್ರುವ 11:42
ಕರಣ: ವಣಿಜ 09:22 ಇಂದಿನ ವಿಶೇಷ: ಮೋಹಿನೀ ಏಕಾದಶಿ, ವಿಶ್ವ ಕಾರ್ಮಿಕರ ದಿನ.
ಅಮೃತಕಾಲ: ಬೆಳಗ್ಗೆ 10 ಗಂಟೆ 50 ನಿಮಿಷದಿಂದ ಮಧ್ಯಾಹ್ನ 12 ಗಂಟೆ 35 ನಿಮಿಷದವರೆಗೆ.

ಸೂರ್ಯೋದಯ : 05:59 ಸೂರ್ಯಾಸ್ತ : 06:35

ರಾಹುಕಾಲ : ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ಆರೋಗ್ಯ ಸಂಬಂಧಿ ಖರ್ಚು ಹೆಚ್ಚು. ಅಪರೂಪದ ವ್ಯಕ್ತಿಗಳ ಪರಿಚಯವಾಗಲಿದೆ. ಅನೇಕ ವಿಚಾರಗಳು ಮನಸ್ಸಿನ ಆಳಕ್ಕೆ ಇಳಿದು, ಸ್ಪಷ್ಟ ತೀರ್ಮಾನ ತೆಗೆದುಕೊಳ್ಳುವಿರಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ನಿಮ್ಮನ್ನು ಕಾಡುತ್ತಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದು ಇಂದು ಉತ್ತಮ. ಸುಮ್ಮನೆ ಯೋಚನೆ ಮಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ದಿನದ ಮಟ್ಟಿಗೆ ಖರ್ಚು. ಉದ್ಯೋಗಿಗಳಿಗೆ ಕೆಲಸದ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಬುದ್ಧಿವಂತಿಕೆಯಿಂದ ವರ್ತಿಸಿ, ಕಾರ್ಯದಲ್ಲಿ ಯಶಸ್ಸು ಸಿಗುವುದು. ಯಾರನ್ನೂ ನಂಬಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಸ್ನೇಹಿತರೊಂದಿಗೆ ಮಾತು ಕತೆ ನಡೆಸುವಿರಿ. ದಿನದ ಕೊನೆಯ ಭಾಗದಲ್ಲಿ ಮಾನಸಿಕವಾಗಿ ಕುಗ್ಗುವ ಸಾಧ್ಯತೆ. ಗುರು ದತ್ತಾತ್ರೇಯನನ್ನು ಆರಾಧಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಆಪ್ತರೊಂದಿಗೆ ಅತಿಯಾದ ಸಲುಗೆ ಒಳ್ಳೆಯದಲ್ಲ. ದಿನದ ಮಟ್ಟಿಗೆ ಖರ್ಚು ಹೆಚ್ಚು. ಯೋಚಿಸದೇ ಆಡುವ ಮಾತುಗಳಿಂದ ತೊಂದರೆ, ಮಾತಿನ ಮೇಲೆ ಹಿಡಿತವಿರಲಿ. ಉದ್ಯೋಗಿಗಳಿಗೆ ಯಶಸ್ಸು. ಅತಿಥಿಗಳ ಆಗಮನದಿಂದ ಕಾರ್ಯ ವಿಳಂಬ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಬಿಡುವಿರದಂತೆ ಕೆಲಸದ ಒತ್ತಡ ಇರಲಿ. ಆರೋಗ್ಯ ಉತ್ತಮ. ಹಣಕಾಸು, ಹೂಡಿಕೆ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಕೀರ್ತಿ ಸಿಗಲಿದೆ. ಉದ್ಯೋಗಿಗಳಿಗೆ ಉತ್ತಮ ಅವಕಾಶ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಆರೋಗ್ಯದ ಬಗೆಗೆ ತುಂಬಾ ಕಾಳಜಿ ವಹಿಸಿ. ಗತಿಸಿದ ಘಟನೆಗಳ ಬಗ್ಗೆ ಚಿಂತಿಸಿ ಫಲವಿಲ್ಲ. ದಿನದ ಮಟ್ಟಿಗೆ ಖರ್ಚು. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ವಹಿಸಿ. ಆಪ್ತರೊಂದಿಗೆ ಮಾತುಕತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ದೀರ್ಘಕಾಲದ ಪ್ರಯತ್ನ ನಿಮಗೆ ಯಶಸ್ಸು ತಂದು ಕೊಡುವುದು. ಕುಟುಂಬದ ಆಪ್ತರು, ಸ್ನೇಹಿತರಿಂದ ಉಡುಗೊರೆ ಸಿಗುವ ಸಾಧ್ಯತೆ. ಆರ್ಥಿಕ ಸ್ಥಿತಿ ಸಾಧಾರಣ. ಆರೋಗ್ಯ ಉತ್ತಮ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸನ್ನು ತಂದು ಕೊಡಲಿದೆ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ. ಉದ್ಯೋಗಿಗಳಿಗೆ ಮಧ್ಯಮ ಫಲ. ಹಣಕಾಸು ಸ್ಥಿತಿ ಉತ್ತಮ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಧನಸ್ಸು: ಕುಟುಂಬದ ಸಮಸ್ಯೆಗಳು ನಿಮ್ಮನ್ನು ಮಾನಸಿಕವಾಗಿ ದೈಹಿಕವಾಗಿ ಬಳಲುವಂತೆ ಮಾಡಬಹುದು. ಹಿರಿಯರ ಮಾರ್ಗದರ್ಶನ ಪಡೆಯಿರಿ. ದಿನದ ಮಟ್ಟಿಗೆ ಖರ್ಚು. ಆರೋಗ್ಯದ ಕಡೆಗೆ ಗಮನ ಹರಿಸಿ. ಸಂಗಾತಿಯ ಮಧುರ ಮಾತುಗಳು ಸಮಾಧಾನ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಯಾರಿಗೆ ಬುಧ ದೆಸೆಯಿಂದ ಶುಭ-ಅಶುಭ ಉಂಟಾಗುತ್ತದೆ?
Horoscope Today

ಮಕರ: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿದೆ. ಇಂದಿನ ದಿವಸ ಯಾರೊಂದಿಗೂ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಸದಸ್ಯರ ವರ್ತನೆ ಕೋಪವನ್ನು ತರಿಸುವುದು. ಆಲಸ್ಯದಿಂದ ಉತ್ತಮ ಕೆಲಸವನ್ನು ಮುಂದೂಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಖರ್ಚಿನ ವಿಷಯಗಳಿಗೆ ಕಡಿವಾಣ ಹಾಕಿ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಸಂಗಾತಿಯು ಸೃಷ್ಟಿಸುವ ಸಮಸ್ಯೆಗಳನ್ನು ಬುದ್ಧಿವಂತಿಕೆಯಿಂದ ನಿಭಾಯಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮೀನ: ಸುಮ್ಮನೆ ಯೋಚಿಸುತ್ತಾ ಕುಳಿತು ಕಾಲಹರಣ ಮಾಡುವ ಬದಲು ಸೃಜನಾತ್ಮಕ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಉದ್ಯೊಗದಲ್ಲಿ ಹೊಸ ಭರವಸೆ ಮೂಡಲಿದೆ. ಆರ್ಥಿಕವಾಗಿ ಬಲಿಷ್ಠರಾಗುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಇಂಡಿಯಾ ಒಕ್ಕೂಟಕ್ಕೆ ಬಹುಮತ ಸಿಗಲ್ಲ ಎಂದ ಸಿದ್ದರಾಮಯ್ಯ; ಚುನಾವಣೆ ಮೊದಲೇ ಸೋಲೊಪ್ಪಿಗೆ?

ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಸಿಗುವುದು ಕಷ್ಟ ಸಾಧ್ಯ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ. ಚುನಾವಣೆಗೆ ಮೊದಲೇ ಸಿದ್ದರಾಮಯ್ಯ ಅವರು ಸೋಲೊಪ್ಪಿಕೊಂಡರೇ ಎಂಬ ಪ್ರಶ್ನೆಗಳು ಮೂಡಿವೆ. ಇಂಡಿಯಾ ಒಕ್ಕೂಟದಿಂದ ಪಶ್ಚಿಮ ಬಂಗಾಳದ ಟಿಎಂಸಿ ಸೇರಿ ಹಲವು ಪಕ್ಷಗಳು ಹೊರನಡೆದಿರುವುದೇ ಸಿದ್ದರಾಮಯ್ಯ ಹೇಳಿಕೆಗೆ ಕಾರಣ ಎನ್ನಲಾಗುತ್ತಿದೆ.

VISTARANEWS.COM


on

CM Siddaramaiah
Koo

ಬೆಂಗಳೂರು: ಕರ್ನಾಟಕ (Karnataka) ಸೇರಿ ದೇಶಾದ್ಯಂತ ಲೋಕಸಭೆ ಚುನಾವಣೆ (Lok Sabha Election 2024) ಕಾವು ಬೇಸಿಗೆಯ ಬಿಸಿಲಿಗಿಂತ ಜಾಸ್ತಿ ಇದೆ. ಕರ್ನಾಟಕದಲ್ಲಂತೂ ಚುನಾವಣೆಯ ಭರಾಟೆ ದಿನೇದಿನೆ ಜಾಸ್ತಿಯಾಗುತ್ತಲೇ ಇದೆ. ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ, ಕಾಂಗ್ರೆಸ್‌ ರಣತಂತ್ರ ರೂಪಿಸುತ್ತಿವೆ. ಇದರ ಬೆನ್ನಲ್ಲೇ, “ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟಕ್ಕೆ (India Bloc) ಸ್ಪಷ್ಟ ಬಹುಮತ ಸಿಗುವ ಸಾಧ್ಯತೆ ಕಡಿಮೆ” ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದ ವೇಳೆ ಸಿದ್ದರಾಮಯ್ಯ ಅವರು ಹೀಗೆ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ. “ಲೋಕಸಭೆ ಚುನಾವಣೆ ವೇಳೆ ಇಂಡಿಯಾ ಒಕ್ಕೂಟಕ್ಕೆ ಸ್ಪಷ್ಟ ಬಹುಮತ ಸಿಗುವುದು ಕಷ್ಟಸಾಧ್ಯ. ಹಾಗಂತ, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೂ ಸ್ಪಷ್ಟ ಬಹುಮತ ಸಿಗುವುದಿಲ್ಲ. ಇಂಡಿಯಾ ಒಕ್ಕೂಟವು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಒಡಿಶಾದ ನವೀನ್‌ ಪಟ್ನಾಯಕ್‌ ಸೇರಿ ಹಲವು ರಾಜ್ಯಗಳ ಪಕ್ಷಗಳ ಬೆಂಬಲದೊಂದಿಗೆ ಕೇಂದ್ರದಲ್ಲಿ ಸರ್ಕಾರ ರಚಿಸುತ್ತದೆ” ಎಂಬುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ದೇಶದಲ್ಲಿ ಬಿಜೆಪಿಯು ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ. ಅವರು ಕೂಡ ಎನ್‌ಡಿಎ ಎಂಬ ಮೈತ್ರಿಕೂಟವನ್ನು ರಚಿಸಿಯೇ ಅವರು ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿದ್ದಾರೆ. ಅವರು ಗಳಿಸುವ ಮತ ಪ್ರಮಾಣವನ್ನು ಹೆಚ್ಚಿಸಿಕೊಂಡಿದ್ದಾರೆ. ಆದರೆ, ಬಿಜೆಪಿಯೊಂದೇ ಚುನಾವಣೆಯಲ್ಲಿ ಸ್ಪರ್ಧಿಸಿ ಅಧಿಕಾರಕ್ಕೆ ಬಂದಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಎನ್‌ಡಿಎಗೆ ಸ್ಪಷ್ಟ ಬಹುಮತ ಸಿಗಲು ಸಾಧ್ಯವೇ ಇಲ್ಲ” ಎಂದಿದ್ದಾರೆ.

ಸಿದ್ದು-ಶ್ರೀನಿವಾಸ ಪ್ರಸಾದ್‌ ಭೇಟಿ

ಪ್ರಚಾರದ ಮಧ್ಯೆಯೇ ಸಿದ್ದರಾಮಯ್ಯ ಅವರು ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಸಂಸದ ಶ್ರೀನಿವಾಸ ಪ್ರಸಾದ್‌ ಅವರ ಮನೆಗೆ ತೆರಳಿ ಕೆಲ ಹೊತ್ತು ಚರ್ಚಿಸಿದರು. ಕಳೆದ ಕೆಲವು ವರ್ಷಗಳಿಂದ ಸಿದ್ದರಾಮಯ್ಯ ಅವರಿಂದ ಶ್ರೀನಿವಾಸ ಪ್ರಸಾದ್‌ ಅವರು ದೂರವೇ ಉಳಿದಿದ್ದರು. ಈಗ ಏಕಾಏಕಿ ಸಿದ್ದರಾಮಯ್ಯ ಅವರೇ ಶ್ರೀನಿವಾಸ ಪ್ರಸಾದ್‌ ಅವರನ್ನು ಭೇಟಿ ಮಾಡಿದರು. ಭೇಟಿಯ ಬೆನ್ನಲ್ಲೇ, “ನನಗೆ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ಹಾಗಾಗಿ, ನಾನು ಮೋದಿ ಕಾರ್ಯಕ್ರಮಕ್ಕೆ ಹೋಗುವುದಿಲ್ಲ. ಚಾಮರಾಜನಗರದಲ್ಲಿ ಈ ಬಾರಿ ಕಾಂಗ್ರೆಸ್‌ ಪರವಾದ ಅಲೆ ಇದೆ” ಎಂದು ಹೇಳಿದ್ದಾರೆ. ಶ್ರೀನಿವಾಸ ಪ್ರಸಾದ್‌ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಸಿದ್ದರಾಮಯ್ಯ, “ನಾನು, ಶ್ರೀನಿವಾಸ ಪ್ರಸಾದ್‌ ಅವರು ಬಹುಕಾಲದ ಗೆಳೆಯರು. ರಾಜಕೀಯ ನಿವೃತ್ತಿ ಬಳಿಕ ಭೇಟಿಯಾಗಿರಲಿಲ್ಲ. ಹಾಗಾಗಿ ಭೇಟಿಯಾದೆ ಅಷ್ಟೆ. ಇದು ರಾಜಕೀಯದ ಭೇಟಿ ಅಲ್ಲ” ಎಂದು ತಿಳಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ಮೋದಿ ಕಾರ್ಯಕ್ರಮಕ್ಕೆ ಹೋಗಲ್ಲ ಎಂದ ಶ್ರೀನಿವಾಸ ಪ್ರಸಾದ್!‌ ಏನಿದರ ಮರ್ಮ?

Continue Reading

ಕರ್ನಾಟಕ

ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ಮೋದಿ ಕಾರ್ಯಕ್ರಮಕ್ಕೆ ಹೋಗಲ್ಲ ಎಂದ ಶ್ರೀನಿವಾಸ ಪ್ರಸಾದ್!‌ ಏನಿದರ ಮರ್ಮ?

ಮೈಸೂರು ಹಾಗೂ ಚಾಮರಾಜನಗರ ಕ್ಷೇತ್ರಗಳನ್ನು ಸ್ವಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್‌ ಅವರನ್ನು ಭೇಟಿಯಾಗಿದ್ದಾರೆ. ಇದರ ಬೆನ್ನಲ್ಲೇ, ಶ್ರೀನಿವಾಸ ಪ್ರಸಾದ್‌ ಅವರು ಮಾತನಾಡಿದ್ದು, ನಾನು ಮೋದಿ ಕಾರ್ಯಕ್ರಮಕ್ಕೆ ಹೋಗಲ್ಲ ಎಂದಿದ್ದಾರೆ. ಇದು ಮತ್ತೊಂದು ಸಂಚಲನಕ್ಕೆ ಕಾರಣವಾಗಿದೆ.

VISTARANEWS.COM


on

Siddaramaiah
Koo

ಮೈಸೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮೈಸೂರಿಗೆ ಆಗಮಿಸಿ ಮತಬೇಟೆ ಆರಂಭಿಸುವ ಒಂದು ದಿನದ ಮೊದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddramaiah) ಅವರು ಪ್ರಮುಖ ರಣತಂತ್ರ ಹೆಣೆದಿದ್ದಾರೆ. ಮೈಸೂರಿನಲ್ಲಿ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್‌ (V Srinivas Prasad) ಅವರ ಮನೆಗೆ ಸಿದ್ದರಾಮಯ್ಯ ಭೇಟಿ ನೀಡಿದ್ದು, ಕಾಂಗ್ರೆಸ್‌ಗೆ ಬಿಜೆಪಿಯ ಪ್ರಭಾವಿ ದಲಿತ ನಾಯಕನ ಬೆಂಬಲವನ್ನು ಸೆಳೆಯುವ ಪ್ರಯತ್ನ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದು ಈಗ ರಾಜಕೀಯ ಸಂಚಲನಕ್ಕೂ ಕಾರಣವಾಗಿದೆ. ಅಷ್ಟೇ ಅಲ್ಲ, ಸಿದ್ದರಾಮಯ್ಯ ಜತೆ ಮಾತುಕತೆ ನಡೆಸಿದ ಬೆನ್ನಲ್ಲೇ, “ಭಾನುವಾರ ನಡೆಯುವ ಮೋದಿ ಸಮಾವೇಶಕ್ಕೆ ನಾನು ಹೋಗುವುದಿಲ್ಲ” ಎಂದು ಶ್ರೀನಿವಾಸ ಪ್ರಸಾದ್‌ ಅವರು ಹೇಳಿರುವುದು ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದೆ.

ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಶ್ರೀನಿವಾಸ ಪ್ರಸಾದ್‌ ಅವರ ಮನೆಗೆ ತೆರಳಿದ ಸಿದ್ದರಾಮಯ್ಯ ಅವರು ಕೆಲ ಹೊತ್ತು ಚರ್ಚಿಸಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಸಿದ್ದರಾಮಯ್ಯ ಅವರಿಂದ ಶ್ರೀನಿವಾಸ ಪ್ರಸಾದ್‌ ಅವರು ದೂರವೇ ಉಳಿದಿದ್ದರು. ಈಗ ಏಕಾಏಕಿ ಸಿದ್ದರಾಮಯ್ಯ ಅವರೇ ಶ್ರೀನಿವಾಸ ಪ್ರಸಾದ್‌ ಅವರನ್ನು ಭೇಟಿ ಮಾಡಿದರು. ಭೇಟಿಯ ಬೆನ್ನಲ್ಲೇ, “ನನಗೆ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ಹಾಗಾಗಿ, ನಾನು ಮೋದಿ ಕಾರ್ಯಕ್ರಮಕ್ಕೆ ಹೋಗುವುದಿಲ್ಲ. ಚಾಮರಾಜನಗರದಲ್ಲಿ ಈ ಬಾರಿ ಕಾಂಗ್ರೆಸ್‌ ಪರವಾದ ಅಲೆ ಇದೆ” ಎಂದು ಹೇಳಿದ್ದಾರೆ. ಶ್ರೀನಿವಾಸ ಪ್ರಸಾದ್‌ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಸಿದ್ದರಾಮಯ್ಯ, “ನಾನು, ಶ್ರೀನಿವಾಸ ಪ್ರಸಾದ್‌ ಅವರು ಬಹುಕಾಲದ ಗೆಳೆಯರು. ರಾಜಕೀಯ ನಿವೃತ್ತಿ ಬಳಿಕ ಭೇಟಿಯಾಗಿರಲಿಲ್ಲ. ಹಾಗಾಗಿ ಭೇಟಿಯಾದೆ ಅಷ್ಟೆ. ಇದು ರಾಜಕೀಯದ ಭೇಟಿ ಅಲ್ಲ” ಎಂದು ತಿಳಿಸಿದರು.

ಶ್ರೀನಿವಾಸ ಪ್ರಸಾದ್‌ ಅವರು ಈಗಾಗಲೇ ರಾಜಕೀಯದಿಂದ ನಿವೃತ್ತಿ ಪಡೆಯುವುದಾಗಿ ಘೋಷಿಸಿದರೂ ಅವರಿಗೆ ಬೇಡಿಕೆ ಇದೆ. ಪ್ರಭಾವಿ ದಲಿತ ನಾಯಕರಾಗಿರುವ ಕಾರಣ ಅವರ ಬೆಂಬಲ ಸೆಳೆಯಲು ಕಾಂಗ್ರೆಸ್ಸಿಗರು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಶ್ರೀನಿವಾಸ ಪ್ರಸಾದ್‌ ಅವರ ಅಳಿಯ ಧೀರಜ್‌ ಪ್ರಸಾದ್‌ ಅವರು ಕಾಂಗ್ರೆಸ್‌ ಸೇರಿದ್ದಾರೆ. ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿ ಹಲವರು ಶ್ರೀನಿವಾಸ ಪ್ರಸಾದ್‌ ಅವರನ್ನು ಭೇಟಿಯಾಗಿದ್ದರು. ಇದರ ಬೆನ್ನಲ್ಲೇ, ಸಿಎಂ ಕೂಡ ಸಂಸದರನ್ನು ಭೇಟಿಯಾಗಿರುವುದು ತೀವ್ರ ಸಂಚಲನ ಮೂಡಿಸಿದೆ.

ಕಾಂಗ್ರೆಸ್‌ಗೆ ಶ್ರೀನಿವಾಸ ಪ್ರಸಾದ್‌ ಬೆಂಬಲ ಎಂದ ಸುನೀಲ್‌ ಬೋಸ್‌

“ಶ್ರೀನಿವಾಸ ಪ್ರಸಾದ್‌ ಅವರ ಬೆಂಬಲ ನಮಗಿದೆ” ಎಂಬುದಾಗಿ ಚಾಮರಾಜನಗರ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಅವರು ಕೂಡ ಬಹಿರಂಗವಾಗಿ ಹೇಳಿದ್ದು ಬಿಜೆಪಿಯಲ್ಲಿ ತಳಮಳ ಸೃಷ್ಟಿಸಿದೆ. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುನೀಲ್‌ ಬೋಸ್‌, “ಶ್ರೀನಿವಾಸ ಪ್ರಸಾದ್‌ ಅವರ ಸಂಪೂರ್ಣ ಬೆಂಬಲ ಕಾಂಗ್ರೆಸ್‌ಗೆ ಇದೆ. ಬಿಜೆಪಿ ಸಂಸದರ ಆಶೀರ್ವಾದ ಪಡೆದಿದ್ದೇನೆ. ಗೆದ್ದು ಬಾ ಎಂದು ಅವರು ನನಗೆ ಆಶೀರ್ವಾದ ಮಾಡಿದ್ದಾರೆ. ಅವರ ಬೆಂಬಲಿಗರು ಕೂಡ ಕಾಂಗ್ರೆಸ್‌ ಸೇರಿದ್ದಾರೆ. ಹಾಗಾಗಿ ನಮ್ಮ ಗೆಲುವು ನಿಶ್ಚಿತ” ಎಂಬುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರು ಹಾಗೂ ಚಾಮರಾಜನಗರ ಲೋಕಸಭೆ ಕ್ಷೇತ್ರಗಳನ್ನು ಸಿದ್ದರಾಮಯ್ಯ ಅವರು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಇದಕ್ಕಾಗಿ ಅವರು ಅಬ್ಬರದ ಪ್ರಚಾರ ಕೈಗೊಳ್ಳುತ್ತಿದ್ದಾರೆ. ನರೇಂದ್ರ ಮೋದಿ ಅವರೂ ಮೈಸೂರಿನಲ್ಲಿ ಬೃಹತ್‌ ಸಮಾವೇಶ ಕೈಗೊಳ್ಳುತ್ತಿದ್ದು, ಎರಡೂ ಕ್ಷೇತ್ರಗಳ ಮೇಲೆ ಇದು ಪ್ರಭಾವ ಬೀರಲಿದೆ. ಇದರ ಮಧ್ಯೆಯೇ ಸಿದ್ದರಾಮಯ್ಯ ಅವರು ಶ್ರೀನಿವಾಸ ಪ್ರಸಾದ್‌ ಅವರನ್ನು ಭೇಟಿಯಾಗಿ ಹೊಸ ದಾಳ ಉರುಳಿಸಿರುವುದು ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಇದನ್ನೂ ಓದಿ: Operation Kamala: ಸಿದ್ದರಾಮಯ್ಯ ತವರಲ್ಲಿ ಆಪರೇಷನ್ ಕಮಲ; ಸಿಎಂ ಆಪ್ತನನ್ನು ಬಿಜೆಪಿಗೆ ಸೆಳೆದ ವಿಜಯೇಂದ್ರ

Continue Reading

ಪ್ರಮುಖ ಸುದ್ದಿ

Rameshwaram Cafe Blast: ರಾಮೇಶ್ವರಂ ಕೆಫೆ ಬಾಂಬರ್‌ಗಳಿಗೆ 10 ದಿನ ಎನ್‌ಐಎ ಕಸ್ಟಡಿ; ಮತ್ತಷ್ಟು ಗ್ರಿಲ್‌ ಮಾಡಲು ಪೊಲೀಸರು ಸಜ್ಜು

Rameshwaram Cafe Blast: ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಆರೋಪಿಗಳನ್ನು ರಾತ್ರಿ ಮಡಿವಾಳದ ಎಫ್ಎಸ್ಎಲ್ ಸೆಂಟರ್ ಬಳಿಯ ಇಂಟರಾಗೇಷನ್ ಸೆಲ್‌ನಲ್ಲಿರಿಸಿ ವಿಚಾರಣೆ ನಡೆಸಲಾಗಿದೆ. ಕೋರಮಂಗಲದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಇವರನ್ನು ಹಾಜರುಪಡಿಸಲಾಯಿತು. ಎನ್‌ಐಎ ಪರ ವಕೀಲ ಪ್ರಸನ್ನ ಕುಮಾರ್‌ ವಾದ ಮಂಡಿಸಿದರು.

VISTARANEWS.COM


on

Rameshwaram cafe Blast Abdul Matheen Taha Mussavir Hussain Shazeb
Koo

ಬೆಂಗಳೂರು: ರಾಜಧಾನಿಯ ವೈಟ್‌ಫೀಲ್ಡ್‌ನಲ್ಲಿ ನಡೆದ (Blast in Bengaluru) ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Blast) ಪ್ರಕರಣದ ಆರೋಪಿಗಳಾದ ಅಬ್ದುಲ್ ಮತೀನ್ ತಾಹಾ  (Abdul Mateen Taha) ಹಾಗೂ ಮುಜಾವಿರ್ ಹುಸೇನ್‌ ಶಜೀಬ್‌ (mussavir shazeeb hussain) ಇಬ್ಬರನ್ನೂ ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಇಬ್ಬರನ್ನೂ ನ್ಯಾಯಾಧೀಶರು 10 ದಿನಗಳ ಕಾಲ ಎನ್‌ಐಎ ಕಸ್ಟಡಿಗೆ ಒಪ್ಪಿಸಿದ್ದಾರೆ.

ಆರೋಪಿಗಳಾದ ಅಬ್ದುಲ್ ಮತೀನ್ ತಾಹಾ  (Abdul Mateen Taha) ಹಾಗೂ ಮುಜಾವಿರ್ ಹುಸೇನ್‌ ಶಜೀಬ್‌ರನ್ನು (mussavir shazeeb hussain) ನಿನ್ನೆ ಕೋಲ್ಕತ್ತಾದಲ್ಲಿ ಎನ್‌ಐಎ (NIA) ಬಂಧಿಸಿತ್ತು. ಇಂದು ಮುಂಜಾನೆ ಬೆಂಗಳೂರಿಗೆ ಕರೆತಂದಿದೆ. ಇವರನ್ನು ಬೆಂಗಳೂರಿಗೆ ಕರೆತಂದ ಇಂಡಿಗೋ ವಿಮಾನ ಕೋಲ್ಕತ್ತಾದ ಸುಭಾಷ್‌ಚಂದ್ರ ಬೋಸ್‌ ಏರ್‌ಪೋರ್ಟ್‌ನಿಂದ ಹೊರಟು, ಮಧ್ಯರಾತ್ರಿ 12:45ಕ್ಕೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿತ್ತು. ಆರೋಪಿಗಳನ್ನು ಕರೆತರುವ ಹಿನ್ನೆಲೆಯಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿತ್ತು.

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಆರೋಪಿಗಳನ್ನು ರಾತ್ರಿ ಮಡಿವಾಳದ ಎಫ್ಎಸ್ಎಲ್ ಸೆಂಟರ್ ಬಳಿಯ ಇಂಟರಾಗೇಷನ್ ಸೆಲ್‌ನಲ್ಲಿರಿಸಿ ವಿಚಾರಣೆ ನಡೆಸಲಾಗಿದೆ. ಪಶ್ಚಿಮ ಬಂಗಾಳದಿಂದ‌ ಇವರನ್ನು ಕರೆತರಲು ಟ್ರಾನ್ಸಿಟ್ ವಾರೆಂಟ್ ಪಡೆಯಲಾಗಿತ್ತು. ಕೋರಮಂಗಲದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಇವರನ್ನು ಹಾಜರುಪಡಿಸಲಾಯಿತು. ಎನ್‌ಐಎ ಪರ ವಕೀಲ ಪ್ರಸನ್ನ ಕುಮಾರ್‌ ವಾದ ಮಂಡಿಸಿದರು.

ಶಂಕಿತ ಉಗ್ರ ಮುಜಾಮೀಲ್ ಷರೀಫ್ ಎಂಬಾತನಿಂದ ಈ ಇಬ್ಬರು ಶಂಕಿತರ ಸುಳಿವು ದೊರೆತಿತ್ತು. ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವೀರ್ ಹುಸೇನ್ ಬಗ್ಗೆ ಈತ ಬಾಯ್ಬಿಟ್ಟಿದ್ದು, ಇಬ್ಬರ ಟ್ರಾವೆಲ್ ಹಿಸ್ಟರಿ ಸುಳಿವು ನೀಡಿದ್ದ. ಆರೋಪಿಗಳು ಕೋಲ್ಕತ್ತಾ ಕಡೆಗೆ ಹೊರಟಿದ್ದ ಬಗ್ಗೆ ಮಾಹಿತಿ ನೀಡಿದ್ದ. ಬಾಂಬ್ ಸ್ಫೋಟ ಸಂಬಂಧ ಮುಜಾಮೀಲ್ ಷರೀಫ್‌ನನ್ನು ಎನ್‌ಐಎ ಎರಡು ಬಾರಿ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಿತ್ತು. ಎರಡನೇ ಬಾರಿ ವಿಚಾರಣೆ ವೇಳೆ ಅಬ್ದುಲ್ ಮತೀನ್ ಹಾಗೂ ಮುಸಾವೀರ್ ಹುಸೇನ್ ಬಗ್ಗೆ ಸುಳಿವು ನೀಡಿದ್ದ.

ಮುಜಾಮೀಲ್ ಮಾಹಿತಿ ಮೇರೆಗೆ ಎನ್ಐಎ ಹಾಗೂ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದು, ಪಶ್ಚಿಮ ಬಂಗಾಳದ ದಿಘಾ ಎಂಬಲ್ಲಿದ್ದ ಶಂಕಿತರನ್ನು ಹೆಡೆಮುರಿ ಕಟ್ಟಿದ್ದರು. ಕರ್ನಾಟಕ, ಆಂಧ್ರ, ತೆಲಂಗಾಣ, ಪಶ್ಚಿಮ ಬಂಗಾಳ ಪೊಲೀಸರು ಕಾರ್ಯಾಚರಣೆಯಲ್ಲಿ ಕೈಜೋಡಿಸಿದ್ದರು.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಮಾಝ್‌ ಮುನೀರ್‌ನನ್ನು ಎನ್‌ಐಎ ಅಧಿಕಾರಿಗಳು 7 ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಜೈಲಿನಲ್ಲಿ ರೇಡ್ ಮಾಡಿದ ಬಳಿಕ ಮಾಝ್ ಬ್ಯಾರಕ್‌ನಲ್ಲಿ ಕೆಲವೊಂದು ಪತ್ರಗಳು ಸಿಕ್ಕಿದ್ದವು. ಅವುಗಳು ಪ್ರಕರಣಕ್ಕೆ ಮಹತ್ವದ ತಿರುವು ನೀಡಿದ ಹಿನ್ನೆಲೆಯಲ್ಲಿ ಕೆಫೆ ಸ್ಫೋಟ ಪ್ರಕರಣದಲ್ಲಿ ಮಾಝ್‌ ಮುನೀರ್‌ ಸೂತ್ರಧಾರನಾಗಿದ್ದು ಆತನನ್ನೇ ಮೊದಲ ಆರೋಪಿಯನ್ನಾಗಿ ಮಾಡಲಾಗಿದೆ.

ಶಾರಿಕ್ ಜತೆ ಮಂಗಳೂರು ಗೋಡೆ ಬರಹ ಪ್ರಕರಣದ ಆರೋಪಿಯಾಗಿರುವ ಮಾಜ್‌ ಮುನೀರ್ ಸಹ ಹಿಟ್‌ ಲಿಸ್ಟ್‌ನಲ್ಲಿದ್ದಾನೆ. ಎರಡು ಮತ್ತು ಮೂರನೇ ಆರೋಪಿಗಳನ್ನಾಗಿ ಮತೀನ್ ಮತ್ತು ಮುಸಾವೀರ್ ಹೆಸರನ್ನು ಉಲ್ಲೇಖಿಸಲಾಗಿದೆ. ಮುಜಾಮಿಲ್ ಷರೀಫ್‌ನನ್ನು ಮತ್ತೆ ಬಂಧಿಸಲಾಗಿದ್ದು, ನಾಲ್ಕನೇ ಆರೋಪಿಯನ್ನಾಗಿ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಮತ್ತಷ್ಟು ಬಾಂಬ್‌ ಸ್ಫೋಟದ ಸಂಚು

ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಇನ್ನೂ ಹಲವು ರಾಜ್ಯಗಳಲ್ಲಿ ಮತ್ತಷ್ಟು ಬಾಂಬ್ ಸ್ಫೋಟಿಸುವ ಯೋಜನೆಯನ್ನು ಉಗ್ರರು ಹೆಣೆದಿದ್ದರು. ಬಾಂಬ್ ತಯಾರಿಕೆ ಬಗ್ಗೆ ಟ್ರೇನಿಂಗ್, ತಪ್ಪಿಸಿಕೊಳ್ಳುವ ಪ್ಲಾನ್, ಟ್ರ್ಯಾವೆಲ್ ಮ್ಯಾಪ್ ಮೊದಲೇ ಫಿಕ್ಸ್ ಮಾಡಿಕೊಂಡಿದ್ದರು. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿ ರಾಜ್ಯದಿಂದ ರಾಜ್ಯಕ್ಕೆ ಎಸ್ಕೇಪ್ ಆಗುತ್ತಾ 43 ದಿನ ತಲೆ ತಪ್ಪಿಸಿಕೊಂಡ ಖತರ್‌ನಾಕ್ ಉಗ್ರರು, ಮತ್ತೊಂದು ಸ್ಫೋಟಕ್ಕೆ ಪ್ಲಾನ್ ಮಾಡಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ.

ಶಂಕಿತ ಉಗ್ರರು ಬಾಂಬ್ ತಯಾರಿಸಿದ ಸ್ಥಳ ಯಾವುದು, ಸಹಾಯ ಮಾಡಿದವರು ಯಾರು, ರಾಮೇಶ್ವರಂ ಕೆಫೆಯನ್ನೇ ಯಾಕೆ ಆಯ್ಕೆ ಮಾಡಿಕೊಳ್ಳಲಾಗಿತ್ತು, ಇನ್ನಷ್ಟು ಸ್ಫೋಟಗಳನ್ನು ಎಲ್ಲಿ ಮಾಡಲು ಉದ್ದೇಶಿಸಲಾಗಿತ್ತು, ಎಷ್ಟು ತೀವ್ರತೆಯ ಸ್ಫೋಟಕ ಎಂಬ ಅಂಶಗಳನ್ನು ಎನ್‌ಐಎ ಬಯಲಿಗೆ ಎಳೆಯಲು ಮುಂದಾಗಿದ್ದಾರೆ.

ಬಾಂಬ್‌ ತಯಾರಿಸಿದವನು ತಾಹಾ

ರಾಮೇಶ್ವರಂ ಕೆಫೆ ಬಾಂಬ್ ತಯಾರಿಸಿದ್ದು ಅಬ್ದುಲ್ ಮತೀನ್‌ ತಾಹಾ ಎಂಬುದು ಗೊತ್ತಾಗಿದೆ. ಎಂಜಿನಿಯರಿಂಗ್ ಪದವೀಧರನಾಗಿದ್ದ ಅಬ್ದುಲ್ ತಾಹಾ, ಬಾಂಬ್ ತಯಾರಿಕೆ ಮಾಹಿತಿ ಹೊಂದಿದ್ದ. ಈತ ಇತರರಿಗೂ ಈ ವಿಷಯದಲ್ಲಿ ಟ್ರೇನಿಂಗ್‌ ನೀಡುತ್ತಿದ್ದ. ತಾಹಾ ತಯಾರಿ ಮಾಡಿಕೊಟ್ಟ ಬಾಂಬನ್ನೇ ರಾಮೇಶ್ವರಂ ಕೆಫೆಯಲ್ಲಿ ಮುಸಾವೀರ್ ಇಟ್ಟಿದ್ದ ಎಂದು ಗೊತ್ತಾಗಿದೆ. ಮುಸಾವೀರ್ ಹಾಗೂ ಅಬ್ದುಲ್ ತಾಹಾ ಇಬ್ಬರು ತೀರ್ಥಹಳ್ಳಿಯವರು.

ಪಶ್ಚಿಮ ಬಂಗಾಳದಲ್ಲೇ ಯಾಕೆ?

ಸ್ಫೋಟ ನಡೆಸಿದ ಉಗ್ರರಿಬ್ಬರೂ ಪಶ್ಚಿಮ ಬಂಗಾಳದಲ್ಲಿ ತಲೆ ಮರೆಸಿಕೊಂಡಿದ್ದರು. ಚೆನ್ನೈಯಲ್ಲಿ ವಿಘ್ನೇಶ್, ಕೋಲ್ಕತ್ತಾದಲ್ಲಿ ಅನ್ಮೂಲ್ ಕುಲಕರ್ಣಿ ಮುಂತಾದ ನಕಲಿ ಹೆಸರುಗಳಿಂದ ಮೋಸ್ಟ್ ವಾಂಟೆಡ್ ಅಬ್ದುಲ್ ಮತೀನ್ ತಾಹ ತಲೆ ಮರೆಸಿಕೊಂಡಿದ್ದ. ಇನ್ನು ಬಾಂಬ್ ಇಟ್ಟ ಮುಸಾವೀರ್ ಹುಸೇನ್ ಶಾಜೀಬ್, ಚೆನ್ನೈಯಲ್ಲಿ ಮಹಮ್ಮದ್ ಜುನೈದ್ ಸೈಯದ್, ಕೋಲ್ಕತ್ತಾದಲ್ಲಿ ಯುಶು ಶಹನವಾಜ್ ಪಾಟೀಲ್ ಇತ್ಯಾದಿ ಹೆಸರುಗಳನ್ನಿಟ್ಟುಕೊಂಡು ಓಡಾಡುತ್ತಿದ್ದ. ಹೀಗೆ ಹೀಗೆ ಒಂದೊಂದು ಕಡೆ ಒಂದೊಂದು ಹೆಸರಲ್ಲಿ ಆರೋಪಿಗಳು ಓಡಾಡುತ್ತಿದ್ದರು.

ತಮ್ಮ ಗುರುತು ಮರೆಮಾಚಲು ಇವರು ನಕಲಿ ಅಧಾರ್ ಕಾರ್ಡ್ ಬಳಕೆ ಮಾಡುತ್ತಿದ್ದರು. ಕೊನೆಗೂ ಈ ನಕಲಿ ಕಾರ್ಡ್‌ ಬಳಕೆಯೇ ಆರೋಪಿಗಳ ಬಂಧನದ ಮುಖ್ಯ ಕಾರಣಗಳಲ್ಲಿ ಒಂದಾಗಿದೆ. ಪಶ್ಚಿಮ ಬಂಗಾಳದಲ್ಲಿ ನಕಲಿ ಆಧಾರ್ ಕಾರ್ಡ್ ಬಳಕೆದಾರರ ಸಂಖ್ಯೆ ಹೆಚ್ಚಿದೆ. ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರು ಹೆಚ್ಚಾಗಿ ನಕಲಿ ಆಧಾರ್ ಕಾರ್ಡ್ ಬಳಸುತ್ತಿದ್ದು, ಇದು ವ್ಯಾಪಕವಾಗಿದೆ. ಹೀಗಾಗಿ ಇವರು ಇದೇ ಭಾಗಗಳಲ್ಲಿ ಇರಬಹುದು ಎನ್ನುವ ಶಂಕೆ ಇತ್ತು. ಇದೇ ಶಂಕೆಯ ಆಧಾರದಲ್ಲಿ ಎನ್‌ಐಎ ಕಾರ್ಯಾಚರಣೆ ಮುಂದುವರಸಿತ್ತು.

ತೀರ್ಥಹಳ್ಳಿಯ ಮುಸಾವೀರ್ ಹುಸೇನ್ ಶಾಜೀಬ್

ಬಾಂಬ್‌ ಇಟ್ಟ ಮುಸಾವೀರ್ ಹುಸೇನ್ ಶಾಜೀಬ್ ತೀರ್ಥಹಳ್ಳಿಯ ಮಧ್ಯಮವರ್ಗದ ಕುಟುಂಬದವನಾಗಿದ್ದಾನೆ. ತೀರ್ಥಹಳ್ಳಿಯಲ್ಲಿ ತಾಯಿ ಮಾತ್ರ ವಾಸವಾಗಿದ್ದು, ಮನೆ ಬಾಡಿಗೆಯೇ ಮುಸಾವೀರ್ ಕುಟುಂಬಕ್ಕೆ ಆಧಾರವಾಗಿದೆ. ಈತ ಸಾಂಪ್ರದಾಯಿಕ ಉದ್ದನೆಯ ಬಿಳಿ ನಿಲುವಂಗಿಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ. ಈತ ಸ್ಥಳೀಯರ ಜೊತೆ ಹೆಚ್ಚು ಬೆರೆಯುತ್ತಿರಲಿಲ್ಲ. ಸ್ಥಳೀಯರಿಗೆ ಹೆಚ್ಚು ಪರಿಚಯವಿಲ್ಲದ ಈತ ತನ್ನ ಸಮುದಾಯದವರು ಇರುವ ಒಂದೆರಡು ಸ್ಥಳಗಳಲ್ಲಿ ಮಾತ್ರ ಓಡಾಡುತ್ತಿದ್ದ.

ಮತೀನ್‌ ತಾಹನೇ ಮಾಸ್ಟರ್‌ ಮೈಂಡ್‌

ಕೆಫೆ ಬ್ಲಾಸ್ಟ್ ಮಾಸ್ಟರ್ ಮೈಂಡ್ ಆಗಿರುವ ಅಬ್ದುಲ್ ಮತೀನ್ ತಾಹಾನ ತಂದೆ ದೇಶಕ್ಕಾಗಿ ಹೋರಾಡಿದ ಯೋಧರಾಗಿದ್ದವರು. ವರ್ಷದ ಹಿಂದೆ ಅವರು ಮೃತಪಟ್ಟಿದ್ದಾರೆ. ತಾಹ ಅತ್ಯಂತ ಚುರುಕಾದ ಎಂಜಿನಿಯರಿಂಗ್ ಪದವೀಧರನಾಗಿದ್ದು, ತೀರ್ಥಹಳ್ಳಿಯಲ್ಲಿ ಪ್ರೌಡಶಾಲೆ ಮುಗಿಸಿ ಬೆಂಗಳೂರಲ್ಲಿ ಎಂಜಿನಿಯರಿಂಗ್ ಪದವಿ ಪಡೆದಿದ್ದ. ಬೆಂಗಳೂರಿಗೆ ಬಂದ ವೇಳೆ ಉಗ್ರರ ಸಂಪರ್ಕಕ್ಕೆ ಬಂದಿದ್ದ. ಪೋಷಕರಿಗೆ ಒಬ್ಬನೇ ಮಗನಾಗಿರುವ ಈತ ಐಇಡಿ ಬಾಂಬ್ ತಯಾರಿಕೆಯ ಎಕ್ಸ್‌ಪರ್ಟ್ ಆಗಿದ್ದ.

ಮಂಗಳೂರು ಕುಕ್ಕರ್ ಬ್ಲಾಸ್ಟ್, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್‌ಗಳ ಮಾಸ್ಟರ್ ಮೈಂಡ್ ಕೂಡ ಆಗಿರುವ ಮತೀನ್ ತಾಹ ಕಳೆದ ನಾಲ್ಕು ವರ್ಷಗಳಿಂದ ನಾಪತ್ತೆಯಾಗಿದ್ದ. ಈ ಹಿಂದೆ ಎನ್ಐಎ ತಾಹನ ಪತ್ತೆಗೆ ಮೂರು ಲಕ್ಷ ರಿವಾರ್ಡ್ ಘೋಷಿಸಿತ್ತು. ರಾಮೇಶ್ವರಂ ಕೆಫೆ ಬ್ಲಾಸ್ಟ್ ನಂತರ ಹತ್ತು ಲಕ್ಷ ರಿವಾರ್ಡ್ ಘೋಷಿಸಲಾಗಿತ್ತು. ಇದೀಗ ಮುಸಾವೀರ್‌ ಜೊತೆಗೆ ಸಿಕ್ಕಿಬಿದ್ದಿದ್ದಾನೆ.

ಹಲವು ಲಾಡ್ಜ್‌ಗಳಲ್ಲಿ ವಾಸ

ಕಳೆದ 12 ದಿನಗಳಿಂದ ಕೋಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು, ಅಲ್ಲೂ ಒಂದೇ ಕಡೆ ಇರದೆ ಲಾಡ್ಜ್‌ಗಳನ್ನು ಬದಲಿಸುತ್ತಿದ್ದರು. ಕೋಲ್ಕತ್ತಾದ ಮಿಧಿನಾಪುರದ ಹಲವು ಲಾಡ್ಜ್‌ಗಳಲ್ಲಿ ತಂಗಿದ್ದ ಆರೋಪಿಗಳು ಪ್ರತಿ ಎರಡು ಮೂರು ದಿನಗಳಿಗೊಮ್ಮೆ ವಾಸ್ತವ್ಯ ಬದಲಿಸುತ್ತಿದ್ದರು. ಎರಡು ದಿನಗಳ ಹಿಂದೆಯಷ್ಟೆ ಮಿದ್ನಾಪುರ ದೀಘಾ ಬಳಿ ಲಾಡ್ಜ್ ಬದಲಾಯಿಸಿದ್ದ ಆರೋಪಿಗಳು ಕೋಲ್ಕತ್ತಾದ ಹೊಟೇಲ್ ಪ್ಯಾರಡೈಸ್, ಲೇನಿನ್ ಸೇರಾನಿ ಸೇರಿ ಹಲವು ಹೊಟೇಲ್‌ಗಳಲ್ಲಿ ತಂಗಿದ್ದರು.

ಸಂಜಯ್ ಅಗರವಾಲ್, ಉದಯ್ ದಾಸ್, ಯಶು ಪಟೇಲ್, ವಿಘ್ನೇಶ ಹೀಗೆ ನಾನಾ ನಕಲಿ ಹೆಸರುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಮುಸಾವೀರ್ ಹುಸೇನ್ ಮಹಾರಾಷ್ಟದ ಪಾಲ್ಘಾರ್ ಜಿಲ್ಲೆಯ ನಕಲಿ ಆಧಾರ್ ಕಾರ್ಡ್ ನೀಡಿದ್ದ. ಕರ್ನಾಟಕದ ವಿಘ್ನೇಶ್ ಹಾಗೂ ಅಮೋಲ್ ಕುಲಕರ್ಣಿಣಿ ಹೆಸರಿನಲ್ಲಿ ಮತೀನ್ ತಾಹ ನಕಲಿ ದಾಖಲಾತಿ ನೀಡಿದ್ದ. ಹೊಟೇಲ್‌ ಸಿಬ್ಬಂದಿ ಬಳಿ ತಮ್ಮ ಹೆಸರುಗಳು ಸಂಜಯ್ ಅಗರ್‌ವಾಲ್ ಹಾಗು ಉದಯ್ ದಾಸ್ ಎಂದು, ತಾವು ಜಾರ್ಖಂಡ್ ಹಾಗು ತ್ರಿಪುರಾ ಮೂಲದವರು ಎಂದು ಹೇಳಿಕೊಂಡಿದ್ದರು.

ಇದನ್ನೂ ಓದಿ: Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟ ಟ್ರಯಲ್‌, ಇನ್ನಷ್ಟು ಭೀಕರ ಸ್ಫೋಟಗಳಿಗೆ ಸಿದ್ಧತೆ ಮಾಡಿದ್ದರು ಉಗ್ರರು!

Continue Reading

ಕರ್ನಾಟಕ

Laxman Savadi: ‘ಭಾರತ್‌ ಮಾತಾ ಕಿ ಜೈ’ ಬಿಜೆಪಿ ಅಪ್ಪನ ಮನೆ ಆಸ್ತಿನಾ? ಲಕ್ಷ್ಮಣ ಸವದಿ ಆಕ್ರೋಶ

Laxman Savadi: ಕಲಬುರಗಿಯ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ್ದ ಲಕ್ಷ್ಮಣ ಸವದಿ, ಮಲ್ಲಿಕಾರ್ಜುನ ಖರ್ಗೆ ಅವರು ತಪ್ಪು ತಿಳಿಯಬಾರದು ಎಂದು ಹೇಳಿದ ಬಳಿಕ ಭಾರತ್‌ ಮಾತಾ ಕಿ ಜೈ ಎಂಬುದಾಗಿ ಘೋಷಣೆ ಕೂಗಿದ್ದರು. ಇದು ಈಗ ಬಿಜೆಪಿ ಹಾಗೂ ಲಕ್ಷ್ಮಣ ಸವದಿ ಮಧ್ಯೆ ವಾಗ್ಯುದ್ಧಕ್ಕೆ ಕಾರಣವಾಗಿದೆ. ಇನ್ನು, ಬಿಜೆಪಿ ನಾಯಕರಿಗೆ ಲಕ್ಷ್ಮಣ ಸವದಿ ಅವರು ತಿರುಗೇಟು ನೀಡಿದ್ದಾರೆ. ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ.

VISTARANEWS.COM


on

Laxman Savadi
Koo

ಕಲಬುರಗಿ: ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ ಅವರು ಭಾರತ್‌ ಮಾತಾ ಕಿ ಜೈ (Bharat Mata Ki Jai) ಎಂಬುದಾಗಿ ಕೂಗುವ ಮೊದಲು “ಖರ್ಗೆಯವರು ತಪ್ಪು ತಿಳಿದುಕೊಳ್ಳಬಾರದು” ಎಂದು ಹೇಳಿರುವುದು ಈಗ ರಾಜಕೀಯ ಮೇಲಾಟಕ್ಕೆ ಕಾರಣವಾಗಿದೆ. “ಕಾಂಗ್ರೆಸ್‌ನಲ್ಲಿ (Congress) ಭಾರತ್‌ ಮಾತಾ ಕಿ ಜೈ ಎಂದು ಕೂಗಲು ಕೂಡ ಅನುಮತಿ ಪಡೆಯಬೇಕಾದ ದುಸ್ಥಿತಿ ಇದೆ” ಎಂದು ಬಿಜೆಪಿ ಟೀಕಿಸಿದ ಬೆನ್ನಲ್ಲೇ ಲಕ್ಷ್ಮಣ ಸವದಿ (Laxman Savadi) ತಿರುಗೇಟು ನೀಡಿದ್ದಾರೆ. “ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆಯು ಬಿಜೆಪಿ (BJP) ಮನೆ ಆಸ್ತಿನಾ” ಎಂದು ಪ್ರಶ್ನಿಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಲಕ್ಷ್ಮಣ ಸವದಿ, “ವಿನಾಶಕಾಲೆ ವಿಪರೀತ ಬುದ್ಧಿ ಎಂಬಂತಹ ಸ್ಥಿತಿ ಬಿಜೆಪಿಗೆ ಬಂದಿದೆ. ಭಾರತ್‌ ಮಾತಾ ಕಿ ಜೈ ಅನ್ನೋದು ದೇಶದ ಪ್ರತಿಯೊಬ್ಬ ಪ್ರಜೆಯ ಹಕ್ಕು, ಅಭಿಮಾನ ಹಾಗೂ ದೇಶಭಕ್ತಿಯಾಗಿದೆ. ಕಾಂಗ್ರೆಸ್‌ನಲ್ಲಿ ಕೂಡ ಭಾರತ್‌ ಮಾತಾ ಕಿ ಜೈ ಎನ್ನುತ್ತೇವೆ. ದೇಶಭಕ್ತಿ, ಘೋಷಣೆಗಳು ಬಿಜೆಪಿಯವರಿಗೆ ಗುತ್ತಿಗೆ ಕೊಡಲಾಗಿದೆಯೇ? ವಂದೇ ಮಾತರಂ ಅನ್ನುತ್ತೇವೆ, ಜೈ ಹಿಂದು ಕೂಡ ಎನ್ನುತ್ತೇವೆ. ನಮ್ಮಲ್ಲಿ ಇವರಿಗಿಂತ ದೇಶಭಕ್ತಿ ಹೆಚ್ಚಿದೆ” ಎಂದು ತಿರುಗೇಟು ನೀಡಿದರು.

“ಬಿಜೆಪಿಯವರ ದೇಶಭಕ್ತಿಯು ತೋರಿಕೆಗೆ ಸೀಮಿತವಾಗಿದೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇ ಕಾಂಗ್ರೆಸ್.‌ 400ಕ್ಕೂ ಅಧಿಕ ಸೀಟು ಗೆದ್ದರೆ ಸಂವಿಧಾನ ಬದಲಾಯಿಸುತ್ತೇವೆ ಎಂಬುದಾಗಿ ಹೇಳುತ್ತಾರೆ. ಹಾಗಾಗಿ, ಬಿಜೆಪಿಯವರೇ ನಿಜವಾದ ದೇಶದ್ರೋಹಿಗಳು. ಸಂವಿಧಾನವನ್ನು ವಿರೋಧಿಸುತ್ತಾರೆ, ಜಾತಿ ವಿರೋಧ ಮಾಡುತ್ತಾರೆ. ಇವರ ಮನಸ್ಥಿತಿಯಿಂದಾಗಿ ದೇಶಕ್ಕೆ ಹಾನಿಯಾಗುತ್ತಿದೆ” ಎಂದು ಹೇಳಿದರು.

ನನ್ನ ಹೆಸರೇ ಲಕ್ಷ್ಮಣ, ಜೈ ಶ್ರೀರಾಮ್‌ ಎನ್ನುವೆ

“ದೇಶದಲ್ಲಿ ಘೋಷಣೆ ಕೂಗಲು ಬಿಜೆಪಿಯವರ ಪರ್ಮಿಷನ್‌ ತೆಗೆದುಕೊಳ್ಳಬೇಕಾ? ಅದೇ ಅವರ ಅಪ್ಪನ ಮನೆ ಆಸ್ತಿಯೇ? ನನ್ನ ಹೆಸರೇ ಲಕ್ಷ್ಮಣ. ರಾಮನ ತಮ್ಮನ ಹೆಸರು ಲಕ್ಷ್ಮಣ. ಜೈ ಶ್ರೀರಾಮ್‌ ಎಂದು ಘೋಷಣೆ ಕೂಗುತ್ತೇವೆ. ಭಾರತ್‌ ಮಾತಾ ಕಿ ಜೈ ಎನ್ನುತ್ತೇವೆ. ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ” ಎಂದರು. ರಾಮೇಶ್ವರಂ ಕೆಫೆ ಸ್ಫೋಟದ ಕುರಿತು ಮಾತನಾಡಿದ ಲಕ್ಷ್ಮಣ ಸವದಿ, “ಪ್ರತಿಯೊಂದು ವಿಷಯದಲ್ಲೂ ರಾಜಕೀಯ ಮಾಡುವುದು ಬಿಜೆಪಿಯವರ ಕೆಲಸ. ಇಂತ ಕೀಳು ರಾಜಕೀಯದಿಂದಾಗಿಯೇ ಅವರು ಕೇಂದ್ರದಲ್ಲಿ ಅಧಿಕಾರಕ್ಕೆ ಬರಲ್ಲ” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ‘ನನಗೆ ಒಳ್ಳೇ ದಿನಗಳು ಬರುತ್ತವೆ’ಎಂದ ಲಕ್ಷ್ಮಣ್​ ಸವದಿ; ಸಿದ್ದರಾಮಯ್ಯ ಎರಡೂವರೆ ವರ್ಷಕ್ಕೆ ಮುಖ್ಯಮಂತ್ರಿಯಾ?

Continue Reading
Advertisement
murder-case
ಕ್ರೈಂ19 mins ago

Murder Case: ಹೆಂಡತಿಯ ಕೊಂದ ಗಂಡನ ಸುಳಿವಿಗೆ 3 ಕೋಟಿ ರೂ. ಬಹುಮಾನ!

Gold price
ಚಿನ್ನದ ದರ28 mins ago

Gold Price Explainer: ಚಿನ್ನದ ದರ ಇಷ್ಟೊಂದು ಏರಲು ಏನು ಕಾರಣ? ಬಂಗಾರದ ಮೇಲೆ ಹೂಡಿಕೆಗಿದು ಸಕಾಲವೇ?

Lok Sabha Election 2024
ಬೆಂಗಳೂರು48 mins ago

Lok Sabha Election 2024 : ಮಾವಿನ ಹಣ್ಣಿನ ಬ್ಯಾಗ್‌ ಬಿಡ್ರೀ ಎಂದವರ ಬಳಿ ಗರಿ ಗರಿ ನೋಟು; ಜಯನಗರದಲ್ಲಿ 4 ಕೋಟಿ ರೂ. ಸೀಜ್‌

Sonu Srinivas Gowda shares Jail Experience
ಸಿನಿಮಾ48 mins ago

Sonu Srinivas Gowda: ಸಿಕ್ಕಾಪಟ್ಟೆ ಸೊಳ್ಳೆ ಕಾಟ ಇತ್ತು ಎಂದು ಜೈಲಿನ ಅನುಭವ ಹಂಚಿಕೊಂಡ ಸೋನು ಗೌಡ!

CM Siddaramaiah
ಕರ್ನಾಟಕ50 mins ago

ಇಂಡಿಯಾ ಒಕ್ಕೂಟಕ್ಕೆ ಬಹುಮತ ಸಿಗಲ್ಲ ಎಂದ ಸಿದ್ದರಾಮಯ್ಯ; ಚುನಾವಣೆ ಮೊದಲೇ ಸೋಲೊಪ್ಪಿಗೆ?

Siddaramaiah
ಕರ್ನಾಟಕ1 hour ago

ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ಮೋದಿ ಕಾರ್ಯಕ್ರಮಕ್ಕೆ ಹೋಗಲ್ಲ ಎಂದ ಶ್ರೀನಿವಾಸ ಪ್ರಸಾದ್!‌ ಏನಿದರ ಮರ್ಮ?

Vinesh Phogat
ಕ್ರೀಡೆ1 hour ago

Vinesh Phogat: ಡೋಪಿಂಗ್ ಪ್ರಕರಣದಲ್ಲಿ ಸಿಲುಕಿಸುವ ಯತ್ನ ನಡೆದಿದೆ; ಡಬ್ಲ್ಯುಎಫ್‌ಐ ವಿರುದ್ಧ ಗಂಭೀರ ಆರೋಪ ಹೊರಿಸಿದ ವಿನೇಶ್

Salman khan Aayush Sharma recalls his father words marry Arpita
ಸಿನಿಮಾ2 hours ago

Salman Khan: ಬಿಡಿಗಾಸೂ ಕೈಯಲ್ಲಿ ಇಲ್ಲದೇ ಇದ್ದಾಗ ಸಲ್ಮಾನ್‌ ಖಾನ್‌ ಸಹೋದರಿಯನ್ನು ಮದುವೆಯಾಗಿದ್ರಂತೆ ಈ ನಟ!

Medical Negligence in Chitradurga
ಚಿತ್ರದುರ್ಗ2 hours ago

Medical Negligence : ಗ್ಯಾಸ್ಟ್ರಿಕ್‌ ಎಂದು ಆಸ್ಪತ್ರೆಗೆ ಹೋದ ಯುವಕ ಮನೆಗೆ ಹೆಣವಾಗಿ ವಾಪಸ್‌

tamanna bhatia gold
ಚಿನ್ನದ ದರ2 hours ago

Gold Rate Today: ಭಾರಿ ಏರಿಕೆ ಬಳಿಕ ಇಂದು ಚಿನ್ನದ ಬೆಲೆ ಇಳಿಕೆ; ರಾಜಧಾನಿಯಲ್ಲಿ ಎಷ್ಟಿದೆ ಇಲ್ಲಿ ಗಮನಿಸಿ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 day ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ1 day ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ2 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20242 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಹೂಡಿಕೆ ವ್ಯವಹಾರದಲ್ಲಿ ಅಧಿಕ ಲಾಭ

Ugadi 2024
ಬಾಗಲಕೋಟೆ4 days ago

Ugadi 2024 : ಬೀಳಗಿಯ ಎಕ್ಕೆ ಎಲೆ ಭವಿಷ್ಯ; ಈಶಾನ್ಯ, ಪಶ್ಚಿಮ ಭಾಗದಲ್ಲಿ ಭಾರಿ ಕಂಟಕ!

ugadi 2024
ಧಾರವಾಡ4 days ago

Ugadi 2024 : ಹನುಮನಕೊಪ್ಪದಲ್ಲಿ ಭವಿಷ್ಯ ನುಡಿದ ಬೊಂಬೆ! ಮುಂದಿನ ಪ್ರಧಾನಿ ಯಾರಾಗ್ತಾರೆ?

Dina Bhavishya
ಭವಿಷ್ಯ4 days ago

Dina Bhavishya : ನೂತನ ಸಂವತ್ಸರದಲ್ಲಿ ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ

Dina Bhavishya
ಭವಿಷ್ಯ5 days ago

Dina Bhavishya : ಅತಿರೇಕದ ಮಾತು ಈ ರಾಶಿಯವರಿಗೆ ಒಳ್ಳೆಯದಲ್ಲ

ಟ್ರೆಂಡಿಂಗ್‌