ಪ್ರಮುಖ ಸುದ್ದಿ
Horoscope Today : ಮತದಾನದ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ
ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಪಂಚಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಇಂದಿನ ಪಂಚಾಂಗ (10-05-2023)
ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಪಂಚಮಿ 13:48 ವಾರ: ಬುಧವಾರ
ನಕ್ಷತ್ರ: ಪೂರ್ವಾಷಾಢ 16:11 ಯೋಗ: ಸಾಧ್ಯ 18:15
ಕರಣ: ತೈತುಲ 13:48 ಇಂದಿನ ವಿಶೇಷ: ರಾಜ್ಯದಲ್ಲಿ ಮತದಾನದ ದಿನ
ಅಮೃತಕಾಲ: ಬೆಳಗ್ಗೆ 11 ಗಂಟೆ 43 ನಿಮಿಷದಿಂದ ಮಧ್ಯಾಹ್ನ 01ಗಂಟೆ 13 ನಿಮಿಷದವರೆಗೆ.
ಸೂರ್ಯೋದಯ : 05:56 ಸೂರ್ಯಾಸ್ತ : 06:36
ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00
ದ್ವಾದಶ ರಾಶಿ ಭವಿಷ್ಯ (Horoscope Today)
ಮೇಷ: ಇಂದು ಅನೇಕ ಒತ್ತಡಗಳು ನಿಮ್ಮನ್ನು ಆವರಿಸುವ ಸಾಧ್ಯತೆ. ಇತರರ ಮೇಲೆ ವಿನಾ ಕಾರಣ ಹಗೆ ಸಾಧಿಸಿ ಮಾನಸಿಕ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ. ಆರ್ಥಿಕವಾಗಿ ಸಮಸ್ಯೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಕೊಂಚ ಮಟ್ಟಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6
ವೃಷಭ: ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯಕ. ವಿನಾ ಕಾರಣ ಎಲ್ಲದಕ್ಕೂ ಮೂಗು ತೂರಿಸುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಹೂಡಿಕೆಯ ಕುರಿತು ಆಲೋಚನೆ. ಆಪ್ತರ ಆರೋಗ್ಯ ವಿಚಾರಣೆ. ಉದ್ಯೋಗಿಗಳಿಗೆ ಮಿಶ್ರ ಫಲ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ, ಆರ್ಥಿಕ ಲಾಭ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಮಿಥುನ: ಕೆಲಸ ಕಾರ್ಯಗಳು ಮಂದಗತಿಯಲ್ಲಿ ಸಾಗಲಿವೆ. ಆರೋಗ್ಯ ಮಧ್ಯಮ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ. ಆರ್ಥಿಕ ಲಾಭ ಸಾಧಾರಣ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರಫಲ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಕಟಕ: ಆತ್ಮವಿಶ್ವಾಸದಿಂದ ಮಾಡಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗಲಿದೆ. ಆರ್ಥಿಕವಾಗಿ ಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಹಳೆಯ ಸ್ನೇಹಿತರು, ಕುಟುಂಬದ ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಸಿಂಹ: ಆರೋಗ್ಯ ಕಾಳಜಿ ಅವಶ್ಯಕ. ಒತ್ತಡದಿಂದ ಹೊರಬರಲು ವ್ಯಸನಗಳಿಗೆ ಬಲಿಯಾಗುವುದು ಬೇಡ. ಆರ್ಥಿಕವಾಗಿ ಕೊಂಚ ಲಾಭ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಕನ್ಯಾ: ಶುಭ ಕಾರ್ಯಗಳಿಗಾಗಿ ಇಂದು ಖರ್ಚು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ. ಜವಾಬ್ದಾರಿಗಳು ಹೆಚ್ಚಾಗಲಿದೆ, ಕೋಪದಿಂದ ವರ್ತಿಸುವ ಸಾಧ್ಯತೆ. ಆತುರದಲ್ಲಿ ಮಾತುಗಳು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಆರೋಗ್ಯ ಪರಿಪೂರ್ಣ. ಕುಟುಂಬದ ಹಿರಿಯರಿಂದ ಒತ್ತಡ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಆರ್ಥಿಕ ಲಾಭ. ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ. ಆಪ್ತರಿಂದ ಸಲಹೆ ಸಹಕಾರ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6
ವೃಶ್ಚಿಕ: ಸಂಗಾತಿಯ ಆರೋಗ್ಯದ ಸಲವಾಗಿ ಖರ್ಚು ಮಾಡುವಿರಿ. ವೃತಾ ಕಾಲಹರಣ ಮಾಡುವ ಆಲೋಚನೆಗಳಿಂದ ದೂರವಿರಿ. ಸಹೋದ್ಯೋಗಿಗಳಿಂದ ಕಿರಿಕಿರಿ. ವ್ಯಾಪಾರ ವ್ಯವಹಾರ ಸಾಧಾರಣ. ಹೂಡಿಕೆಯ ವ್ಯವಹಾರಗಳಲ್ಲಿ ಪ್ರಗತಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7
ಧನಸ್ಸು: ಆಪ್ತರಿಂದ ಬೆಂಬಲ. ಕೆಲಸಕಾರ್ಯಗಳಲ್ಲಿ ಪ್ರಗತಿ. ಸ್ನೇಹಿತರಿಂದ ಹಣದ ಸಹಾಯದ ಕೋರಿಕೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ಮಕರ: ಉತ್ಸಾಹಭರಿತ ಜೀವನ. ಆರ್ಥಿಕವಾಗಿ ಲಾಭ. ಹೂಡಿಕೆ ವ್ಯವಹಾರಗಳಲ್ಲಿ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ. ಯಾವುದಾದರೂ ಸಭೆ-ಸಮಾರಂಭಗಳಿಗೆ ಭಾಗವಹಿಸುವ ಆಮಂತ್ರಣ. ನಿರೀಕ್ಷೆಯ ಹೊಸ ಭರವಸೆಗಳು ಮೂಡಲಿವೆ. ಆಪ್ತರೊಂದಿಗೆ ಮಾತುಕತೆ. ಕುಟುಂಬದ ಸದಸ್ಯರಿಗೆ ಸಲಹೆ ಸಹಕಾರ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಕುಂಭ: ಇತರರನ್ನು ಟೀಕಿಸುತ್ತಾ ಸಮಯ ವ್ಯರ್ಥ ಮಾಡುವುದು ಬೇಡ. ಭೂಮಿಗೆ ಸಂಬಂಧಿಸಿದಂತೆ ವ್ಯಾಪಾರ ವ್ಯವಹಾರದಲ್ಲಿ ಲಾಭ. ಪ್ರಯಾಣ ಮಾಡುವ ಸಾಧ್ಯತೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಮೀನ: ಆರೋಗ್ಯ ಪರಿಪೂರ್ಣ. ಉದ್ಯೋಗಕ್ಕೆ ಸಂಬಂಧಿಸಿದಂತೆ ಖರ್ಚು. ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ನಿಮ್ಮ ನಿರೀಕ್ಷೆಗೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ. ಕುಟುಂಬದ ಸದಸ್ಯರಿಂದ ಒತ್ತಡ. ಸಂಗಾತಿಯ ವರ್ತನೆ ನಿಮ್ಮ ಖ್ಯಾತಿಯ ಮೇಲೆ ಪರಿಣಾಮ ಬೀರಬಹುದು. ಆರೋಗ್ಯ ಪರಿಪೂರ್ಣ. ದಿಢೀರ್ ಧನಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | [email protected]
ಇದನ್ನೂ ಓದಿ : ಶುಕ್ರ ಗ್ರಹ ಲಗ್ನದಲ್ಲಿದ್ದರೆ ಉತ್ತಮ ಆರೋಗ್ಯ, ಉಳಿದ ಮನೆಯಲ್ಲಿದ್ದರೆ ಯಾವೆಲ್ಲಾ ಫಲ?
ಕರ್ನಾಟಕ
New Parliament Building : ನೂತನ ಸಂಸತ್ ಭವನ ಉದ್ಘಾಟನೆಗೆ ಶೃಂಗೇರಿ ಪುರೋಹಿತರು
ನೂತನ ಸಂಸತ್ ಭವನ: ಭಾನುವಾರ ನಡೆಯಲಿರುವ ನೂತನ ಸಂಸತ್ ಭವನದ ಉದ್ಘಾಟನೆಗೆ ಸಂಬಂಧಿಸಿದ ಪೂಜಾ ಕಾರ್ಯಕ್ರಮಗಳ ಸಾರಥ್ಯವನ್ನು ಶೃಂಗೇರಿಯ ಋತ್ವಿಜರು ವಹಿಸಿದ್ದಾರೆ.
ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಸಾರಥ್ಯದಲ್ಲಿ ನಿರ್ಮಾಣಗೊಂಡಿರುವ ನೂತನ ಸಂಸತ್ ಭವನ (New Parliament Building) ಉದ್ಘಾಟನೆ ಭಾನುವಾರ (ಮೇ 28) ಅದ್ಧೂರಿಯಾಗಿ ಮತ್ತು ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ. ವಿಶೇಷವೆಂದರೆ ಸಂಸತ್ ಭವನದಲ್ಲಿ ನಡೆಯಲಿರುವ ಉದ್ಘಾಟನೆ ಸಂಬಂಧಿತ ಪೂಜಾ ಕೈಂಕರ್ಯಗಳನ್ನು (Pooja programmes) ನಡೆಸುವ ಜವಾಬ್ದಾರಿ ಹೊತ್ತಿರುವವರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ (Shringeri) ಪುರೋಹಿತರು.
ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸುವುದಕ್ಕಾಗಿ ಶೃಂಗೇರಿಯ ಪುರೋಹಿತರ ತಂಡ ಆಗಲೇ ದಿಲ್ಲಿ ತಲುಪಿಸಿದ್ದು ಶನಿವಾರ ಸಂಜೆಯಿಂದಲೇ ಕಾರ್ಯಕ್ರಮಗಳು ನಡೆಯಲಿವೆ. ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಈ ಭವನವನ್ನು ಉದ್ಘಾಟಿಸಲಿದ್ದು, ಅದಕ್ಕೆ ಸಂಬಂಧಿಸಿದ ಪೂಜೆಗಳನ್ನು ಶೃಂಗೇರಿಯ ವೇದಪಾರಂಗತ ಪುರೋಹಿತರಾದ ಸೀತಾರಾಮ ಶರ್ಮ, ಶ್ರೀರಾಮ ಶರ್ಮ ಹಾಗೂ ಲಕ್ಷ್ಮೀಶ ತಂತ್ರಿ ಅವರು ನೆರವೇರಿಸಲಿದ್ದಾರೆ.
ಶನಿವಾರದಿಂದಲೇ ಪೂಜಾ ಕಾರ್ಯಕ್ರಮಗಳು ಆರಂಭವಾಗಿವೆ. ಶನಿವಾರ ರಾತ್ರಿ ವಾಸ್ತು ಹೋಮ ನಡೆಯಲಿದ್ದು, ಭಾನುವಾರ ಬೆಳಗ್ಗೆ ಗಣಪತಿ ಹೋಮ ನಡೆಯಲಿದೆ.
ಅಡಿಗಲ್ಲು ಕಾರ್ಯಕ್ರಮದಲ್ಲೂ ಶೃಂಗೇರಿಯ ಪುರೋಹಿತರಿಂದಲೇ ಪೂಜೆ
2020ರಲ್ಲಿ ಸಂಸತ್ ಭವನಕ್ಕೆ ಅಡಿಗಲ್ಲು ಇಡುವ ಸಂದರ್ಭದಲ್ಲಿ ನಡೆದ ಪೂಜೆಯನ್ನೂ ಶೃಂಗೇರಿಯ ಪುರೋಹಿತರೇ ನಡೆಸಿದ್ದರು. ಆರು ಜನ ಪುರೋಹಿತರಿಂದ ಭೂಮಿ ಪೂಜೆ ನೆರವೇರಿಸಲಾಗಿತ್ತು.
2020ರ ಡಿಸೆಂಬರ್ 10ರಂದು ನಡೆದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಶೃಂಗೇರಿ ಮಠದ ವೈದಿಕ ಪಂಡಿತರಾದ ವೇದಬ್ರಹ್ಮ ಡಾ. ಟಿ. ಶಿವಕುಮಾರ ಶರ್ಮಾ, ವೇದ ಬ್ರಹ್ಮ ಶ್ರೀ ಲಕ್ಷ್ಮೀನಾರಾಯಣ ಸೋಮಯಾಜಿ, ವೇದಬ್ರಹ್ಮ ಶ್ರೀ ಗಣೇಶ ಸೋಮಯಾಜಿ, ನಾಗರಾಜ ಅಡಿಗ, ಋಗ್ವೇದ ಪ್ರಾಧ್ಯಾಪಕರಾಗಿರುವ ರಾಘವೇಂದ್ರ ಭಟ್, ಋಷ್ಯಶೃಂಗ ಭಟ್ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ಬಾರಿ ಏನೇನು ಕಾರ್ಯಕ್ರಮವಿರುತ್ತದೆ?
ನೂತನ ಸಂಸತ್ ಭವನದ ಉದ್ಘಾಟನೆ ಭಾನುವಾರ ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲನೆ ಹಂತದಲ್ಲಿ, ಸಂಸತ್ತಿನ ಮಹಾತ್ಮ ಗಾಂಧಿ ಪ್ರತಿಮೆ ಬಳಿಯ ಮೇಲಾವರಣದೊಳಗೆ ನಡೆಯುವ ಧಾರ್ಮಿಕ ಕ್ರಿಯೆಯೊಂದಿಗೆ ಸಮಾರಂಭವು ಪ್ರಾರಂಭವಾಗುತ್ತದೆ. ಈ ವೇಳೆ, ಪ್ರಧಾನಿ ಮೋದಿ, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ಸೇರಿದಂತೆ ಹಿರಿಯ ಸಚಿವರು ಭಾಗವಹಿಸಲಿದ್ದಾರೆ.
ಬಳಿಕ ಲೋಕಸಭೆ ಮತ್ತು ರಾಜ್ಯಸಭೆ ಆವರಣಗಳನ್ನು ಗಣ್ಯರು ಪರಿಶೀಲಿಸಿದ ಬಳಿಕ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಬಳಿಕ ಲೋಕಸಭೆ ಸ್ಪೀಕರ್ ಪೀಠದ ಮುಂದೆ ಪವಿತ್ರ ರಾಜದಂಡವನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಈ ಪ್ರತಿಷ್ಠಾಪನೆಯನ್ನು ತಮಿಳುನಾಡಿನಿಂದ ಆಗಮಿಸಿದ ಪುರೋಹಿತರೇ ಮಾಡಲಿದ್ದು, ರಾಜದಂಡವನ್ನು ವಿನ್ಯಾಸ ಮಾಡಿದ ಮೂಲ ಅಕ್ಕಸಾಲಿಗ ಕೂಡ ಈ ವೇಳೆ ಹಾಜರು ಇರಲಿದ್ದಾರೆ. ಮೊದಲನೆ ಹಂತದ ಈ ಕಾರ್ಯಕ್ರಮವು ಬೆಳಗ್ಗೆ 9.30ಕ್ಕೆ ಮುಕ್ತಾಯವಾಗಲಿದೆ.
ಮಧ್ಯಾಹ್ನದ ವೇಳೆ ಎರಡನೇ ಹಂತದ ಕಾರ್ಯಕ್ರಮಗಳು ನಡೆಯಲಿವೆ. ಈ ವೇಳೆ ನಾಯಕರು ಮಾತನಾಡಲಿದ್ದಾರೆ. ಮೊದಲಿಗೆ ರಾಜ್ಯಸಭೆಯ ಡೆಪ್ಯುಟಿ ಚೇರ್ಮನ್ ಹರಿವಂಶ್ ಅವರು, ರಾಜ್ಯಸಭಾ ಚೇರ್ಮನ್ ಆಗಿರುವ ಉಪರಾಷ್ಟ್ರಪತಿಗಳ ಲಿಖಿತ ಸಂದೇಶವನ್ನು ಓದಲಿದ್ದಾರೆ. ಇದೇ ವೇಳೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಳುಹಿಸಿರುವ ಲಿಖಿತ ಸಂದೇಶವನ್ನೂ ಓದಲಾಗುತ್ತದೆ.
ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆ ಪ್ರಧಾನ ಕಾರ್ಯದರ್ಶಿ ಅವರು ವಂದನಾರ್ಪಣೆ ಮಾಡುವುದರೊಂದಿಗೆ ಉದ್ಘಾಟನಾ ಕಾರ್ಯಕ್ರಮವು ಸಂಪನ್ನಗೊಳ್ಳಲಿದೆ.
ಇದನ್ನೂ ಓದಿ: New Parliament: ಹೊಸ ಸಂಸತ್ ಭವನದ ವಿಡಿಯೊ ಹಂಚಿಕೊಂಡು, ವಿಶೇಷ ಮನವಿ ಮಾಡಿದ ಪ್ರಧಾನಿ ಮೋದಿ
ಕರ್ನಾಟಕ
Karnataka Cabinet expansion: ಮೊದಲ, 2ನೇ ಬಾರಿಗೇ ಸಚಿವಗಿರಿ ಪಡೆದ ಬೆಳಗಾವಿ ಶಾಸಕಿಯರಿವರು!
state cabinet expansion: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ಬೆಳಗಾವಿಯಿಂದ ಮಹಿಳಾ ಕೋಟಾದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಚಿವರಾಗಿದ್ದಾರೆ. ಇವರು ಎರಡನೇ ಬಾರಿಗೆ ಆಯ್ಕೆಯಾದರೂ ಮಂತ್ರಿಗಿರಿಯ ಅದೃಷ್ಟ ಒಲಿದಿದೆ. ಇದೇ ರೀತಿ ಈ ಹಿಂದೆ ಇನ್ನೂ ಇಬ್ಬರು ಶಾಸಕಿಯರಿಗೆ ಮೊದಲ ಇಲ್ಲವೇ ಎರಡನೇ ಬಾರಿಗೆ ಮಂತ್ರಿ ಪಟ್ಟ ಸಿಕ್ಕಿದೆ. ಅವರ ಬಗ್ಗೆ ವಿವರವನ್ನು ನೋಡೋಣ.
ಮಂಜುನಾಥ ಅಶೋಕ್ ಹುಡೇದ, ಬೆಳಗಾವಿ
ರಾಜ್ಯ ರಾಜಕಾರಣದ ಮಟ್ಟಿಗೆ ಕುಂದಾನಗರಿ ಬೆಳಗಾವಿ ಸಹ ಒಂದು ಶಕ್ತಿ ಕೇಂದ್ರ. ಈ ಕಾರಣಕ್ಕೆ ಇದನ್ನು ರಾಜ್ಯದ ಎರಡನೇ ರಾಜಧಾನಿ ಎಂದೂ ಕರೆಯುತ್ತಾರೆ. ಅಲ್ಲದೆ, ಉತ್ತರ ಕರ್ನಾಟಕಕ್ಕೆ ಆಡಳಿತ ಪ್ರಾತಿನಿಧ್ಯವನ್ನು ಕೊಡುವ ನಿಟ್ಟಿನಲ್ಲಿ ಇಲ್ಲಿ ಸುವರ್ಣ ವಿಧಾನಸೌಧವನ್ನೂ ಸ್ಥಾಪನೆ ಮಾಡಲಾಗಿದೆ. ಜತೆಗೆ ಇಲ್ಲಿನ ರಾಜಕಾರಣಿಗಳೂ ಸಹ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಈ ವೇಳೆ ಇಲ್ಲಿ ಮಹಿಳಾ ರಾಜಕಾರಣಿಗಳ ಪಾರುಪತ್ಯವೂ ಇದ್ದು, ಮೊದಲ ಹಾಗೂ ಎರಡನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿ ಸಚಿವ ಸ್ಥಾನವನ್ನು ಪಡೆದವರೂ ಇದ್ದಾರೆ. ಈ ಬಾರಿ ಎರಡನೇ ಸಲಕ್ಕೆ ಆಯ್ಕೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬೆಳಗಾವಿ ಅತಿ ದೊಡ್ಡ ಜಿಲ್ಲೆಯಾಗಿದ್ದು, ರಾಜಕೀಯವಾಗಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಾ ಬಂದಿದೆ. ಬರೋಬ್ಬರಿ 18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಈ ಜಿಲ್ಲೆಯಲ್ಲಿ ಸದ್ಯಕ್ಕೆ ಇಬ್ಬರು ಮಹಿಳಾ ಶಾಸಕಿಯರಿದ್ದಾರೆ. ನಿಪ್ಪಾಣಿ ಕ್ಷೇತ್ರದ ಶಶಿಕಲಾ ಜೊಲ್ಲೆ ಹಾಗೂ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಲಕ್ಷ್ಮೀ ಹೆಬ್ಬಾಳ್ಕರ್ ಹಾಲಿ ಶಾಸಕರಾಗಿದ್ದಾರೆ. ಕಳೆದ ಬಾರಿ ಶಶಿಕಲಾ ಜೊಲ್ಲೆ ಸಚಿವರಾಗಿದ್ದರೆ, ಈ ಬಾರಿ ಲಕ್ಷ್ಮಿ ಹೆಬ್ಬಾಳ್ಕರ್ ಮಂತ್ರಿ ಪಟ್ಟವನ್ನು ಗಿಟ್ಟಿಸಿಕೊಂಡಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿಯಿಂದ ಸಚಿವೆ ಆಗುತ್ತಿರುವ ಮೂರನೇ ಶಾಸಕಿ!
ಬೆಳಗಾವಿ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಕೆಲವು ಮನೆತನಗಳು ಇಂದಿಗೂ ಖ್ಯಾತಿಯನ್ನು ಪಡೆದುಕೊಂಡಿವೆ. ಸರ್ಕಾರವನ್ನೇ ಬೀಳಿಸುವಷ್ಟರ ಮಟ್ಟಿಗೆ ಪ್ರಾಬಲ್ಯ ಹೊಂದಿರುವ ಮನೆತನಗಳು ಇಲ್ಲಿವೆ. ಈ ಹಿಂದೆ ಹಿಂದೆ ವಿ.ಎಲ್. ಪಾಟೀಲ್ ಕುಟುಂಬ, ಕತ್ತಿ ಕುಟುಂಬ, ಸದ್ಯ ಜಾರಕಿಹೊಳಿ ಕುಟುಂಬವು ಈಗಲೂ ಜಿಲ್ಲಾ ರಾಜಕೀಯದ ಮೇಲಿನ ತಮ್ಮ ಹಿಡಿತವನ್ನು ಕಳೆದುಕೊಂಡಿಲ್ಲ. ಈ ಫ್ಯಾಮಿಲಿ ಫೈಟ್, ಪ್ರತಿಷ್ಠೆಯ ಕಣದ ನಡುವೆಯೂ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸತತ ಎರಡನೇ ಬಾರಿಗೆ ಲಕ್ಷ್ಮೀ ಹೆಬ್ಬಾಳಕರ್ ಗೆದ್ದು ಬೀಗಿದ್ದಾರೆ. ಲಿಂಗಾಯತ ಕೋಟಾದಡಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿದ್ದರಾಮಯ್ಯ ಅವರ ಸಂಪುಟ ಸೇರಿದ್ದಾರೆ.
ಬೆಳಗಾವಿಯಿಂದ ನೀರಾವರಿ ಸಚಿವರಾಗಿದ್ದ ಲೀಲಾವತಿ ಆರ್ ಪ್ರಸಾದ್
ಲೀಲಾವತಿ ಆರ್ ಪ್ರಸಾದ್ ಅವರು ಅಥಣಿ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. 1985 ಮತ್ತು 1994ರಲ್ಲಿ ಅಥಣಿಯಿಂದ ಜನತಾದಳದಿಂದ ಸ್ಪರ್ಧೆ ಮಾಡಿ ಗೆದ್ದು ಬೀಗಿದ್ದರು. ಅಲ್ಲದೆ, ಜೆ.ಎಚ್. ಪಟೇಲ್, ಎಸ್.ಆರ್. ಬೊಮ್ಮಾಯಿ ಸರ್ಕಾರದಲ್ಲಿ ಸಚಿವೆಯಾಗಿ ಕೆಲಸ ಮಾಡಿದ್ದ ಲೀಲಾವತಿ ಆರ್. ಪ್ರಸಾದ್ ಅವರು ದೇವೆಗೌಡರ ಸರ್ಕಾರದಲ್ಲಿ ಮೊದಲ ಮಹಿಳಾ ನೀರಾವರಿ ಮಂತ್ರಿಯಾಗಿಯೂ ಕೆಲಸ ಮಾಡಿ ಸೈ ಎನಿಸಿಕೊಂಡಿದ್ದು ಈಗ ಇತಿಹಾಸ. ತಮ್ಮ 23ನೇ ವಯಸ್ಸಿಗೆ (ಅಂದಿನ ಬೆಂಗಳೂರು ಸಿಟಿ ಕಾರ್ಪೊರೇಷನ್) ಇಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೌನ್ಸಿಲರ್ ಆಗಿಯೂ ಸಹ ಲೀಲಾವತಿ ಆರ್. ಪ್ರಸಾದ್ ಅವರು ಸೇವೆ ಸಲ್ಲಿಸಿದ್ದರು.
ಇದನ್ನೂ ಓದಿ: Weather Report: ಈ ವಾರ ಕರಾವಳಿಯಲ್ಲಿ ಮಳೆ ಅಬ್ಬರ; ಉಳಿದೆಡೆ ಬಿಸಿಲಿಗೆ ಜನ ತತ್ತರ
ಎರಡನೇ ಬಾರಿ ಗೆದ್ದಾಗಲೇ ಶಶಿಕಲಾ ಜೊಲ್ಲೆ ಮಂತ್ರಿ
ನಿಪ್ಪಾಣಿ ಕ್ಷೇತ್ರದಿಂದ 2013ರಲ್ಲಿ ಚುನಾವಣೆ ಎದುರಿಸಿ ಗೆದ್ದು ಬೀಗಿದ್ದ ಶಶಿಕಲಾ ಜೊಲ್ಲೆ 2018ರಲ್ಲಿಯೂ ಶಾಸಕರಾಗಿ ಮರು ಆಯ್ಕೆ ಆಗುವಲ್ಲಿ ಯಶಸ್ವಿಯಾಗಿದ್ದರು. 2018 ರಲ್ಲಿ ಸಮ್ಮಿಶ್ರ ಸರ್ಕಾರ ಅಸ್ವಿತ್ವಕ್ಕೆ ಬಂತು. ಅದಾದ ನಂತರ 17 ಜನ ಶಾಸಕರು ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡೆದ್ದು ಸರ್ಕಾರ ಕಡೆವಿದ್ದರು. ಬಳಿಕ ಅಸ್ವಿತ್ವಕ್ಕೆ ಬಂದ ಬಿಜೆಪಿ ಸರ್ಕಾರದಲ್ಲಿ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆ ಆಗಿದ್ದ ಶಶಿಕಲಾ ಜೊಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾಗಿ ಆಯ್ಕೆ ಆಗಿದ್ದರು. ನಂತರ ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿದ ಮೇಲೆ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿ ಆದಾಗಲೂ ಮುಜರಾಯಿ ಹಾಗೂ ವಕ್ಫ್ ಸಚಿವೆಯಾಗಿಯೂ ಜೊಲ್ಲೆ ಕೆಲಸ ಮಾಡಿದ್ದರು.
ದೇಶ
ಹಳೇ ಬೇರು, ಹೊಸ ಚಿಗುರು: ಮೊದಲಿನ ಸಂಸತ್, ನೂತನ ಸಂಸತ್ ಭವನದ ನಡುವಿನ ವ್ಯತ್ಯಾಸ ಹೀಗಿದೆ ನೋಡಿ
New Parliament Building: ನೂತನ ಸಂಸತ್ ಭವನದ ಉದ್ಘಾಟನೆಯು ಭಾನುವಾರ ನೆರವೇರಲಿದೆ. ಇದರ ಮಧ್ಯೆಯೇ, ಕೇಂದ್ರ ಸರ್ಕಾರವು ಹಳೆಯ ಹಾಗೂ ನೂತನ ಸಂಸತ್ ಭವನದ ನಡುವಿನ ವ್ಯತ್ಯಾಸದ ಕುರಿತು ಮಾಹಿತಿ ನೀಡಿದೆ.
ನವದೆಹಲಿ: ನೂತನ ಹಾಗೂ ಭವ್ಯ ಸಂಸತ್ ಭವನದ ಉದ್ಘಾಟನೆಗೆ ಕ್ಷಣಗಣನೆ (May 28) ಆರಂಭವಾಗಿದೆ. ಪ್ರತಿಪಕ್ಷಗಳ ಬಹಿಷ್ಕಾರದ ಮಧ್ಯೆಯೂ ಅದ್ಧೂರಿಯಾಗಿ ನೂತನ ಸಂಸತ್ ಭವನದ ಉದ್ಘಾಟನೆಗೆ ಕೇಂದ್ರ ಸರ್ಕಾರ ಸಿದ್ಧವಾಗಿದೆ. ಇದರ ಮಧ್ಯೆಯೇ, ಹಳೆಯ ಹಾಗೂ ನೂತನ ಸಂಸತ್ ಭವನದ ನಡುವಿನ ವ್ಯತ್ಯಾಸ, ತಂತ್ರಜ್ಞಾನದ ಅಳವಡಿಕೆ, ವಿನ್ಯಾಸ ಸೇರಿ ಹಲವು ದಿಸೆಯಲ್ಲಿ ಹೋಲಿಕೆ ಮಾಡಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಮೊದಲಿನ ಹಾಗೂ ನೂತನ ಸಂಸತ್ ಭವನಗಳ ನಡುವಿನ ವ್ಯತ್ಯಾಸವನ್ನು ಚಿತ್ರಗಳಲ್ಲಿ ನೋಡಿ.
ಹಳೆಯ ಸಂಸತ್‌ನ ಲೋಕಸಭೆಯಲ್ಲಿ 550 ಆಸನ, ಹೊಸ ಸಂಸತ್‌ನ ಲೋಕಸಭೆಯಲ್ಲಿ 888 ಆಸನಗಳು.
ಹಳೆಯ ರಾಜ್ಯಸಭೆಯಲ್ಲಿ 250 ಆಸನ, ಹೊಸ ರಾಜ್ಯಸಭೆಯಲ್ಲಿ 384 ಆಸನ
ಭೂಕಂಪ ವಲಯಗಳಿಗೆ ಆಧರಿಸಿ ನೂತನ ಸಂಸತ್ ಭವನ ನಿರ್ಮಾಣ, ಇದರಿಂದ ಕಟ್ಟಡ ಸುರಕ್ಷಿತ
ನೂತನ ಸಂಸತ್ ಭವನದಲ್ಲಿ ಆಸನಗಳ ವ್ಯವಸ್ಥೆ, ಜಾಗ ನಿರ್ವಹಣೆ ಸಮರ್ಪಕವಾಗಿದೆ
ಹಳೆಯ ಹಾಗೂ ಹೊಸ ಸಂಸತ್ ಭವನದ ವಿಸ್ತೀರ್ಣದಲ್ಲಿ ವ್ಯತ್ಯಾಸ
ಇದನ್ನೂ ಓದಿ: New Parliament Building: ನೂತನ ಸಂಸತ್ ಭವನದ ವೈಭವ ಹೇಗಿದೆ? ಇಲ್ಲಿದೆ ಅದ್ಭುತ ವಿಡಿಯೊ!
ಕರ್ನಾಟಕ
Karnataka Cabinet: ತಾತನನ್ನು ಮಿನಿಸ್ಟರ್ ಮಾಡಿ ಪ್ಲೀಸ್: ರಾಹುಲ್ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು
ತಮ್ಮ ತಾತ ಸಚಿವರಾಗದೇ ಇದ್ದದ್ದಕ್ಕೆ ಬೇಸರವಾಗಿದೆ. ನನ್ನ ತಾತ ಬಹಳ ಕರುಣಾಮಯಿ, ಸಾಮರ್ಥ್ಯ ಇರುವವರು ಹಾಗೂ ಪರಿಶ್ರಮಿಯಾಗಿದ್ದಾರೆ ಎಂದು ಆರ್ನ ತಿಳಿಸಿದ್ದಾಳೆ.
ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗುವಲ್ಲಿ ಹಿರಿಯ ಕಾಂಗ್ರೆಸಿಗ ಟಿ.ಬಿ. ಜಯಚಂದ್ರ ಸಫಲರಾಗಿಲ್ಲ. ತಮ್ಮನ್ನು ಆಯ್ಕೆ ಮಾಡದೇ ಇರುವ ಕುರಿತು ಮಾಧ್ಯಮಗಳ ಎದುರು ಅಸಮಾಧಾನ ಹೊರಹಾಕಿದ್ದಾರೆ. ಇದೀಗ ಜಯಚಂದ್ರ ಅವರ ಮೊಮ್ಮಗಳೂ ಬೇಸರಗೊಂಡಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಪತ್ರ ಬರೆದಿದ್ದಾಳೆ.
ಇಂಗ್ಲಿಷ್‌ನಲ್ಲಿ ಪತ್ರ ಬರೆದಿರುವ ಆರ್ನಾ ಸಂದೀಪ್, ಕೊನೆಯಲ್ಲಿ ಒಂದು ಸ್ಮೈಲಿಯನ್ನೂ ಅಂಟಿಸಿದ್ದಾಳೆ. Dear Rahu Gandhi, I Am TB Jayachandras Granddaughter. I Am sad that my grandfather did not become minister. I want him to become minister because he is kind, capable and hardworking. Please. ಎಂದು ಬರೆದಿದ್ದಾಳೆ.
ತಮ್ಮ ತಾತ ಸಚಿವರಾಗದೇ ಇದ್ದದ್ದಕ್ಕೆ ಬೇಸರವಾಗಿದೆ. ನನ್ನ ತಾತ ಬಹಳ ಕರುಣಾಮಯಿ, ಸಾಮರ್ಥ್ಯ ಇರುವವರು ಹಾಗೂ ಪರಿಶ್ರಮಿಯಾಗಿದ್ದಾರೆ, ಅವರು ಸಚಿವರಾಗಬೇಕೆಂದು ನಾನು ಬಯಸುತ್ತೇನೆ. ದಯಮಾಡಿ ಎಂದು ಪತ್ರದಲ್ಲಿ ತಿಳಿಸಿ ಕೊನೆಯಲ್ಲಿ ಒಂದು ಸ್ಮೈಲಿಯನ್ನೂ ಹಾಕಿದ್ದಾಳೆ. ಸ್ವಯಂಸ್ಫೂರ್ತಿಯಿಂದ ಮೊಮ್ಮಗಳು ಪತ್ರ ಬರೆದಿರುವುದನ್ನು ಕಂಡು ಜಯಚಂದ್ರ ಅಚ್ಚರಿಪಟ್ಟರು.
ಇದನ್ನೂ ಓದಿ: Electricity Bill: ಇವತ್ತಿಂದ ಕರೆಂಟ್ ಬಿಲ್ ಕಟ್ಟಂಗಿಲ್ಲ; ಇದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಆರ್ಡರ್!
-
ಸುವಚನ15 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕರ್ನಾಟಕ7 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ9 hours ago
Karnataka Cabinet Expansion Live : 34 ಸಚಿವರಿಗೆ ಖಾತೆ ಹಂಚಿಕೆ; ಬಯಸಿದ ಖಾತೆ ಪಡೆದ ಡಿ ಕೆ ಶಿವಕುಮಾರ್
-
ಕರ್ನಾಟಕ21 hours ago
RP Ashok: ಇನ್ಸ್ಪೆಕ್ಟರ್ ಆರ್.ಪಿ.ಅಶೋಕ್ಗೆ ಆರ್ಯಭಟ ಪ್ರಶಸ್ತಿ ಪ್ರದಾನ
-
ಕರ್ನಾಟಕ21 hours ago
ರಾಜ್ಯ ಸಚಿವ ಸಂಪುಟ ವಿಸ್ತರಣೆ: ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ 24 ಶಾಸಕರಿಗೆ ಸಚಿವ ಸ್ಥಾನ, ಮತ್ತೆ ಸಿದ್ದು ಮೇಲುಗೈ
-
ಕ್ರಿಕೆಟ್22 hours ago
IPL 2023: ಗಿಲ್ ಶತಕದ ಕಮಾಲ್; ಮುಂಬೈಗೆ ಬೃಹತ್ ಮೊತ್ತದ ಗುರಿ
-
ಉತ್ತರ ಕನ್ನಡ20 hours ago
Honnavar News: ಕಾರಿಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ, 30 ಮಂದಿಗೆ ಗಾಯ
-
ಪ್ರಮುಖ ಸುದ್ದಿ20 hours ago
ವಿಸ್ತಾರ ಸಂಪಾದಕೀಯ: ರಾಜ್ಯಾದ್ಯಂತ ಗ್ಯಾರಂಟಿ ಭರವಸೆಯ ಗದ್ದಲ, ಹೊಸ ಸರ್ಕಾರ ಗೊಂದಲ ನಿವಾರಿಸಲಿ