Site icon Vistara News

Horoscope Today : ಶ್ರವಣ ನಕ್ಷತ್ರದ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡಿ

Horoscope Today daily horoscope

Horoscope Today

ಇಂದಿನ ಪಂಚಾಂಗ (12-05-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.

ತಿಥಿ: ಸಪ್ತಮಿ 09:06 ವಾರ: ಶುಕ್ರವಾರ
ನಕ್ಷತ್ರ: ಶ್ರವಣ 13:02 ಯೋಗ: ಶುಕ್ಲ 12:15
ಕರಣ: ಭವ 09:06 ಇಂದಿನ ವಿಶೇಷ: ಅಂತಾರಾಷ್ಟ್ರೀಯ ದಾದಿಯರ ದಿನ.
ಅಮೃತಕಾಲ: ಶನಿವಾರ ಮಧ್ಯರಾತ್ರಿ 01 ಗಂಟೆ 49 ನಿಮಿಷದಿಂದ ಮುಂಜಾನೆ 03 ಗಂಟೆ 19 ನಿಮಿಷದವರೆಗೆ.

ಸೂರ್ಯೋದಯ : 05:55 ಸೂರ್ಯಾಸ್ತ : 06:37

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ನಿಮಗೆ ಉತ್ಸಾಹದ ದಿನವಿದು. ಪ್ರಭಾವಿ ವ್ಯಕ್ತಿಗಳ ಬೆಂಬಲ ಸಿಗಲಿದೆ. ಜೀವನದಲ್ಲಿ ಹೊಸ ತಿರುವು ಪಡೆದುಕೊಳ್ಳುವ ಸಾಧ್ಯತೆಯಿದೆ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕೌಟುಂಬಿಕ ಶುಭ ಫಲ.
ಅದೃಷ್ಟ ಸಂಖ್ಯೆ: 2

ವೃಷಭ: ನಿಮ್ಮ ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಆರ್ಥಿಕವಾಗಿ ಇಂದು ನೀವು ಸಾಕಷ್ಟು ಬಲವಾಗಿ ಕಾಣುವಿರಿ. ಸಂಗಾತಿಯೊಂದಿಗೆ ಮಾತಿಗೆ ಇಳಿಯುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

ಮಿಥುನ: ನಿಮ್ಮೆಲ್ಲ‌ ಕೆಲಸ ಕಾರ್ಯಗಳಿಗೆ ಜನರ ಸಹಕಾರ ಸಿಗಲಿದೆ. ನಿಮ್ಮ ಕೋಪದಿಂದ ಇತರರ ಮೇಲೆ ಒತ್ತಡ ಹೇರುವುದು ಬೇಡ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಕಟಕ: ನಿಮಗೆ ಪ್ರಭಾವಿ ವ್ಯಕ್ತಿಗಳ ಬೆಂಬಲ ಸಿಗಲಿದೆ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಹೊಸ ಯೋಜನೆ, ಯೋಚನೆಗಳು ಫಲ ನೀಡಲಿವೆ. ಹಣಕಾಸು ವ್ಯವಹಾರದಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ, ಕಾಳಜಿ ವಹಿಸಿ. ಕುಟುಂಬದ ಬೆಂಬಲ ಸಿಗಲಿದೆ. ಯಾವುದೇ ವಿಷಯದಲ್ಲಿ ಆತುರದ ತಿರ್ಮಾನ ಕೈಗೊಳ್ಳುವುದು ಬೇಡ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಕನ್ಯಾ: ನಕಾರಾತ್ಮಕ ಆಲೋಚನೆಗಳಿಂದ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಪ್ರಯಾಣ ಮಾಡುವ ಸಾಧ್ಯತೆ. ಆರ್ಥಿಕವಾಗಿ ಪ್ರಗತಿ. ಉದ್ಯೋಗದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಅತಿಯಾದ ಒತ್ತಡ ಆಯಾಸವನ್ನುಂಟುಮಾಡಬಹುದು. ಆಲಸ್ಯದಿಂದ
ಕೆಲಸ ಕಾರ್ಯಗಳನ್ನು ಮುಂದೂಡುವುದು ಬೇಡ. ಅತಿಥಿಗಳ ಆಗಮನ ಸಂತಸ ತಂದೀತು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ವೃಶ್ಚಿಕ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಅನುಮಾನ ಸಂಬಂಧಗಳನ್ನು ಹಾಳು ಮಾಡುವುದು. ಕುಟುಂಬದಲ್ಲಿ ಮಾತಿಗೆ ಮಾತು ಬೆಳೆಸುವುದು ಬೇಡ. ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ಧನಸ್ಸು: ಕೆಲವು ಅನಿವಾರ್ಯ ಸಂದರ್ಭಗಳು ಸೃಷ್ಟಿಯಾಗಿ ನಿಮಗೆ ಅಹಿತಕರ ಅನುಭವಗಳಾಗಬಹುದು. ಆತುರದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಬೇಡ. ಹೂಡಿಕೆಯಲ್ಲಿ ತೊಡಗಿಸಿದ ಹಣ ಇಮ್ಮಡಿ ಲಾಭ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಸಮಯಕ್ಕೆ ಸರಿಯಾಗಿ ಮದುವೆಯಾಗಲು ಜಾತಕ ಹೇಗಿರಬೇಕು? ಈ ವಿಡಿಯೋ ನೋಡಿ.

ಮಕರ: ಜೀವನದಲ್ಲಿ ಭರವಸೆ ಮೂಡಲಿದೆ. ಅನಿರೀಕ್ಷಿತವಾಗಿ ಹಣ ಖರ್ಚು ಮಾಡುವಿರಿ. ಸಂಬಂಧಿಗಳಿಂದ ಕುಟುಂಬಕ್ಕೆ ಶುಭ ಸುದ್ದಿ ಸಿಗುವ ಸಾಧ್ಯತೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ದಿನದ ಕೊನೆಯ ಗಳಿಗೆಯಲ್ಲಿ ಸ್ವಲ್ಪ ಒತ್ತಡ ಉಂಟಾಗವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

ಕುಂಭ: ಅನೇಕ ವಿಷಯಗಳು ನಿಮಗೆ ಸಂತಸ ತರುವುದು. ದೀರ್ಘಕಾಲದ ಕೆಲಸ ಇಂದು ಪೂರ್ಣ ಗೊಳ್ಳುವ ಸಾಧ್ಯತೆ. ಆರ್ಥಿಕ ವ್ಯವಹಾರದಲ್ಲಿ ಪ್ರಗತಿ. ಟೀಕಿಸುವವರ ಮಾತುಗಳಿಗೆ ಕಿವಿ ಕೊಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

ಮೀನ: ಅನುಮಾನದಿಂದ ಯಾವುದೇ ಕಾರ್ಯದಲ್ಲಿ ತೊಡಗುವುದು ಬೇಡ. ಹೊಸ ಅವಕಾಶಗಳು ಒದಗಿ ಬಂದಾವು. ಮಕ್ಕಳ ಆರೋಗ್ಯದ ಕಡೆಗೆ ಗಮನ ಇರಲಿ. ಕುಟುಂಬದಲ್ಲಿ ವ್ಯತಿರಿಕ್ತವಾದ ವಾತಾವರಣ ಸೃಷ್ಟಿಯಾಗುವ ಮುಂಚೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : ಶುಕ್ರ ಗ್ರಹ ಲಗ್ನದಲ್ಲಿದ್ದರೆ ಉತ್ತಮ ಆರೋಗ್ಯ, ಉಳಿದ ಮನೆಯಲ್ಲಿದ್ದರೆ ಯಾವೆಲ್ಲಾ ಫಲ?

Exit mobile version