Site icon Vistara News

Horoscope Today : ವಾರದ ಬಿಡುವಿನ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ?

horoscope today

ಇಂದಿನ ಭವಿಷ್ಯ

ಇಂದಿನ ಪಂಚಾಂಗ (14-05-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.

ತಿಥಿ: ದಶಮಿ 26:45 ವಾರ: ಭಾನುವಾರ
ನಕ್ಷತ್ರ: ಶತತಾರ 10:14 ಯೋಗ: ಇಂದ್ರ 06:33/ವೈಧೃತಿ 27:55
ಕರಣ: ವಣಿಜ 15:42 ಇಂದಿನ ವಿಶೇಷ: ವಿಶ್ವ ತಾಯಂದಿರ ದಿನ
ಅಮೃತಕಾಲ: ಸೋಮವಾರ ಮಧ್ಯರಾತ್ರಿ 01 ಗಂಟೆ 31 ನಿಮಿಷದಿಂದ 03 ಗಂಟೆ 02 ನಿಮಿಷದವರೆಗೆ.

ಸೂರ್ಯೋದಯ : 05:55 ಸೂರ್ಯಾಸ್ತ : 06:37

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ಅತಿಯಾದ ಒತ್ತಡ ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ. ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವರ ಬಗ್ಗೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

ವೃಷಭ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಅವಕಾಶ ಸಿಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ. ಉತ್ತಮ ಆರೋಗ್ಯ. ಸಹದ್ಯೋಗಿಗಳಿಂದ ಕಿರಿಕಿರಿ, ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಮಿಥುನ: ನಿಮ್ಮನ್ನು ಬಂಧುಗಳು ಟೀಕಿಸುವ ಸಾಧ್ಯತೆ. ದಿನದ ಮಟ್ಟಿಗೆ ಒತ್ತಡ. ಮಾನಸಿಕ ನೆಮ್ಮದಿ ಹಾಳು ಮಾಡುವ ಸಾಧ್ಯತೆ. ಸಂಯಮದಿಂದ ವರ್ತಿಸಿ. ಆರ್ಥಿಕ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ಕಟಕ: ಪ್ರಮುಖ ವ್ಯಕ್ತಿಗಳ ಸಹಕಾರ ಸಿಗಲಿದೆ. ಆತುರದ ತಿರ್ಮಾನ ತೆಗೆದುಕೊಳ್ಳುವುದು ಬೇಡ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣವಾಗಿರುತ್ತದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಸಿಂಹ: ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವು, ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಮಕ್ಕಳಿಂದ ಸಂತೋಷ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಕನ್ಯಾ: ನಿಮ್ಮ ವರ್ತನೆ ಕುಟುಂಬದ ಸದಸ್ಯರಿಗೆ ಕಿರಿಕಿರಿ ಉಂಟು ಮಾಡುವ ಸಾಧ್ಯತೆ. ಆರೋಗ್ಯದಲ್ಲಿ ವ್ಯತ್ಯಾಸ. ಹಣಕಾಸು ಪ್ರಗತಿ. ಬಂಧುಗಳ ಭೇಟಿ ಕೊಂಚ ಸಮಾಧಾನ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ. ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ವೃಶ್ಚಿಕ: ಕುಟುಂಬದ ಸದಸ್ಯರ ಆರೋಗ್ಯ ಕಡೆ ಗಮನ ಇರಲಿ. ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವಂತೆ ಮಾಡಬಹುದು. ದಿನದ ಮಟ್ಟಿಗೆ ಖರ್ಚು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಧನಸ್ಸು: ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆಪ್ತ ಸ್ನೇಹಿತ- ಸಂಬಂಧಿಗಳ ಸಮಸ್ಯೆಗಳಿಗೆ ಸ್ಪಂದಿಸುವಿರಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಮಕರ: ಆರೋಗ್ಯ ಉತ್ತಮ. ಸ್ನೇಹಿತರ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತರುವುದು. ಅತಿರೇಖದಲ್ಲಿ ಮಾತನಾಡುವುದು ಬೇಡ. ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಕುಂಭ: ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ದೊರೆಯಲಿದೆ. ಹಿರಿಯರ ಮಾರ್ಗದರ್ಶನ ಸಿಗುವುದು. ಉತ್ತಮ ಆರೋಗ್ಯ. ಅನಿರೀಕ್ಷಿತ ಖರ್ಚು. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಮೀನ: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕಾರ್ಯಗಳಲ್ಲಿ ಯಶಸ್ಸು. ಪಾಲುದಾರಿಕೆ ವ್ಯವಹಾರವು ನಷ್ಟ ತರುವುದು. ನಿಮ್ಮ ಉದಾರ ವರ್ತನೆಯನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : ಶುಕ್ರ ಗ್ರಹ ಲಗ್ನದಲ್ಲಿದ್ದರೆ ಉತ್ತಮ ಆರೋಗ್ಯ, ಉಳಿದ ಮನೆಯಲ್ಲಿದ್ದರೆ ಯಾವೆಲ್ಲಾ ಫಲ?

Exit mobile version