ಪ್ರಮುಖ ಸುದ್ದಿ
Horoscope Today : ಮಕರ ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ಇಂದಿನ ಭವಿಷ್ಯ ಇಲ್ಲಿದೆ
ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಸಪ್ತಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಇಂದಿನ ಪಂಚಾಂಗ (26-05-2023)
ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ಸಪ್ತಮಿ (ಅಹೋರಾತ್ರಿ) ವಾರ: ಶುಕ್ರವಾರ
ನಕ್ಷತ್ರ: ಆಶ್ಲೇಷಾ 20:48 ಯೋಗ: ಧ್ರುವ 19:01
ಕರಣ: ಗರಜ 18:30
ಅಮೃತಕಾಲ: ಸಂಜೆ 07 ಗಂಟೆ 02 ನಿಮಿಷದಿಂದ ರಾತ್ರಿ 08 ಗಂಟೆ 50 ನಿಮಿಷದವರೆಗೆ.
ಸೂರ್ಯೋದಯ : 05:53 ಸೂರ್ಯಾಸ್ತ : 06:41
ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30
ಮೇಷ: ಆಪ್ತರ ವರ್ತನೆಯಿಂದ ನಿಮ್ಮ ಮನಸ್ಸಿಗೆ ನೋವಾಗುವ ಸಾಧ್ಯತೆಗಳು ಹೆಚ್ಚು. ತಾಳ್ಮೆಯಿಂದ ಇರಿ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆಯ ವ್ಯವಹಾರ ಮಾಡುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು. ಮಾತಿನಲ್ಲಿ ಹಿಡಿತವಿರಲಿ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ವೃಷಭ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ. ಆರೋಗ್ಯದ ಕಡೆಗೆ ಗಮನ ಹರಿಸಿ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಪ್ರಗತಿಯೊಂದಿಗೆ ಲಾಭ ಪಡೆಯುವಿರಿ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಹಿರಿಯರಿಂದ ಮಾರ್ಗದರ್ಶನ. ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಮಿಥುನ: ಯಾರಾದರೂ ನಿಮ್ಮ ಸಹಾಯ ಬೇಡಿ ಬರುವರು. ಯೋಚಿಸಿ ಸಹಾಯ ಮಾಡಿ. ಆರ್ಥಿಕ ಪ್ರಗತಿ ದಿನದ ಮಟ್ಟಿಗೆ ಸಾಧಾರಣವಾಗಿರಲಿದೆ. ಯಾರಾದರೂ ನಿಮ್ಮ ಭಾವನೆಗಳನ್ನು ನಿರಾಸೆ ಮಾಡುವ ಸಾಧ್ಯತೆ. ಅವರ ಮಾತಿನ ಕಡೆಗೆ ಗಮನ ನೀಡದೆ ಕಾರ್ಯದಲ್ಲಿ ಮುನ್ನುಗ್ಗಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಹೊಸ ಭರವಸೆಯ ಆಶಾಭಾವನೆ ಮೂಡಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2
ಕಟಕ: ಕೆಲವು ಅಘಾತಗಳನ್ನು ಎದುರಿಸುವುದರಿಂದ ಧೈರ್ಯದಿಂದ ಇರಿ. ನಿಮ್ಮ ಆಸೆ-ಆಕಾಂಕ್ಷೆಗಳು ಯಶಸ್ಸನ್ನು ತಂದುಕೊಡಲಿವೆ. ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ. ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದೀತು ಎಚ್ಚರಿಕೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಸಿಂಹ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕವಾಗಿ ಲಾಭ ಕಡಿಮೆ. ಹೊಸ ಆಲೋಚನೆಗಳು ನಿಮ್ಮನ್ನು ಸೃಜನಾತ್ಮಕವಾಗಿ ಏನಾದರೂ ಮಾಡಲು ಪ್ರಯತ್ನಿಸುವಂತೆ ಪ್ರೇರೇಪಿಸುತ್ತವೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಕನ್ಯಾ: ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳವಿರಿ. ಹಣಕಾಸು ಪರಿಸ್ಥಿತಿ ಸಾಧಾರಣ, ದಿನದ ಮಟ್ಟಿಗೆ ಖರ್ಚು. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಾಸಿಗೆ ಇದ್ದಷ್ಟು ಕಾಲು ಚಾಚಿ. ಆರೋಗ್ಯ ಮಧ್ಯಮ, ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಪ್ರಭಾವಿ ಜನರ ಬೆಂಬಲ ಸಿಗಲಿದೆ. ಇದರಿಂದ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ. ಒಡಹುಟ್ಟಿದವರ ಸಹಕಾರ ಸಿಗಲಿದೆ. ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನು ಆಡಿ, ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ವೃಶ್ಚಿಕ: ಸಕಾರಾತ್ಮಕ ಆಲೋಚನೆಗಳಿಂದಾಗಿ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಇಂದು ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ. ಪ್ರಯಾಣದಿಂದ ಲಾಭ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6
ಧನಸ್ಸು: ಭಾವನಾ ಜೀವಿಗಳಾದ ನೀವು ನಕಾರಾತ್ಮಕ ಆಲೋಚನೆಗಳಿಂದ ದೂರ ಇರಿ. ಅಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ, ಕ್ಷೇತ್ರ ದರ್ಶನ ಪಡೆದು ಮಾನಸಿಕ ನೆಮ್ಮದಿ ತಂದುಕೊಳ್ಳುವುದು ಅವಶ್ಯಕ. ಮಕ್ಕಳ ಆರೋಗ್ಯದ ಕಡೆಗೆ ಗಮನ ಹರಿಸಿ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಮಕರ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಸಾಧ್ಯತೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಕೆಲಸ ಕಾರ್ಯಗಳಲ್ಲಿ ಬಳಸಿಕೊಂಡರೆ ಇನ್ನೂ ಹೆಚ್ಚು ಆಕರ್ಷಕ ವ್ಯಕ್ತಿತ್ವ ನಿಮ್ಮದಾಗುತ್ತದೆ. ಆರೋಗ್ಯ ಉತ್ತಮ. ದಿನದ ಮಟ್ಟಿಗೆ ಖರ್ಚು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಕುಂಭ: ಅತಿಥಿಗಳ ಆಗಮನ ಸಂತಸ ತರುವುದು. ಆತ್ಮವಿಶ್ವಾಸದ ಹೊಸ ಭರವಸೆ ಮೂಡಲಿದೆ. ಹೂಡಿಕೆಯ ಲಾಭ ಇಂದು ಉಪಯೋಗಕ್ಕೆ ಬರುವುದು. ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದು ಕೊಡಲಿದೆ. ಆರೋಗ್ಯ, ಉದ್ಯೋಗದಲ್ಲಿ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಮೀನ: ಅತಿರೇಕದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಕೋಪಕ್ಕೆ ಕಾರಣವಾಗುವ ವಿಷಯಗಳಿಂದ ದೂರ ಇರಿ. ತಾಳ್ಮೆಯಿಂದ ವರ್ತಿಸಿ. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | [email protected]
ಇದನ್ನೂ ಓದಿ : ಬಹುತೇಕ ಶುಭಫಲಗಳನ್ನೇ ನೀಡುವ ಬುಧನ ಭಾವಫಲಗಳು ಹೀಗಿವೆ
ಕರ್ನಾಟಕ
Congress Guarantee: ಪಾರ್ಟ್ ಟೈಂ ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ!
ಜೂನ್ 10 ಹಾಗೂ 11ರಂದು ಕುಟುಂಬ ಸಮೇತರಾಗಿ ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದರ್ಶನಕ್ಕೆ ಡಿ.ಕೆ. ಶಿವಕುಮಾರ್ ತೆರಳಲಿದ್ದಾರೆ.
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಅದ್ಧೂರಿಯಾಗಿ ಚಾಲನೆ ನೀಡಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದೀಗ ವಿನೂತನ ಉಪಾಯವೊಂದನ್ನು ಆಯ್ಕೆ ಮಾಡಿಕೊಂಡಿದೆ. ಸಾರಿಗೆ ಇಲಾಖೆಯ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಸೇವೆ ಕಲ್ಪಿಸುವ ಶಕ್ತಿ ಯೋಜನೆಗೆ ಚಾಲನೆ ನೀಡಲು ಸ್ವತಃ ಸಿಎಂ ಸಿದ್ದರಾಮಯ್ಯ ಕಂಡಕ್ಟರ್ ಆಗಲಿದ್ದಾರೆ.
ಜೂನ್ 11ರಂದು ರಾಜ್ಯಾದ್ಯಂತ ಶಕ್ತಿ ಯೋಜನೆಗೆ ಚಾಲನೆ ಸಿಗಲಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಯೋಜನೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ವಿಧಾನಸೌಧದ ಬಳಿ ಯೋಜನೆಗೆ ಚಾಲನೆ ನೀಡಿ ಸಿದ್ದರಾಮಯ್ಯ ಮಾತನಾಡಲಿದ್ದಾರೆ.
ಆದರೆ ಅದಕ್ಕೂ ಮುನ್ನ ಕೆಂಪೇಗೌಡ ಬಸ್ ನಿಲ್ದಾಣದಿಂದ(ಮೆಜೆಸ್ಟಿಕ್) ವಿಧಾನಸೌಧದವರೆಗೆ ಮಾರ್ಗ ಸಂಖ್ಯೆ 43ರಲ್ಲಿ ಸಿದ್ದರಾಮಯ್ಯ ಬಸ್‌ನಲ್ಲೇ ಚಲಿಸಲಿದ್ದಾರೆ. ಈ ವೇಳೆ ಉಚಿತ ಟಿಕೆಟ್‌ಗಳನ್ನು ಮಹಿಳೆಯರಿಗೆ ಸಿದ್ದರಾಮಯ್ಯ ನೀಡಲಿದ್ದಾರೆ. ಈ ರೀತಿ ವಿಧಾನಸೌಧದವರೆಗೂ ಕಂಡಕ್ಟರ್ ಆಗಿ ಕೆಲಸ ಮಾಡಲಿದ್ದಾರೆ.
ಡಿ.ಕೆ. ಶಿವಕುಮಾರ್ ಗೈರು
ಚುನಾವಣೆಗೂ ಮುನ್ನ ಕಾಂಗ್ರೆಸ್‌ನಿಂದ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅದನ್ನು ಪ್ರಚಾರ ಮಾಡಿದ್ದರಿಂದ ಪಕ್ಷ ಅಧಿಕಾರಕ್ಕೆ ಬಂದಿತ್ತು. ಕೆಪಿಸಿಸಿ ಅಧ್ಯಕ್ಷರಾಗಿ ಪ್ರಚಾರದ ನೇತೃತ್ವ ವಹಿಸಿದ್ದ, ಇದೀಗ ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಶಕ್ತಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ.
ಜೂನ್ 10 ಹಾಗೂ 11ರಂದು ಕುಟುಂಬ ಸಮೇತರಾಗಿ ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದರ್ಶನಕ್ಕೆ ಡಿ.ಕೆ. ಶಿವಕುಮಾರ್ ತೆರಳಲಿದ್ದಾರೆ. ಸರ್ಕಾರದ ಮಹತ್ವದ ಯೋಜನೆಗೆ ಚಾಲನೆ ನೀಡುವ ವೇಳೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಈ ಮೂಲಕ ಗೂರುಹಾಜರಾಗಲಿದ್ದಾರೆ.
ಇದನ್ನೂ ಓದಿ: Congress Guarantee: ʼಗೃಹಲಕ್ಷ್ಮಿʼಗೂ ಮಗನ ಐಟಿಗೂ ಸಂಬಂಧ ಇಲ್ಲ; ಉಲ್ಟಾ ಹೊಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಕ್ರಿಕೆಟ್
ICC World Cup 2023: ಏಕದಿನ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಗೆ ಮುಹೂರ್ತ ನಿಗದಿ
ಐಸಿಸಿ ಏಕದಿನ ವಿಶ್ವ ಕಪ್ ಟೂರ್ನಿಯ ವೇಳಾಪಟ್ಟಿ ಜೂನ್ 10, ಶನಿವಾರ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ.
ಲಂಡನ್: ಭಾರತದ ಆತಿಥ್ಯದಲ್ಲಿ ವರ್ಷಾಂತ್ಯದಲ್ಲಿ ನಡೆಯಲಿರುವ ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವ ಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ಐಸಿಸಿ ಮೂಲಗಳ ಪ್ರಕಾರ ಜೂನ್ 10 ಶನಿವಾರ ಟೂರ್ನಿಯ ವೇಳಾಪಟ್ಟಿ ಪ್ರಕಟಗೊಳ್ಳಲಿದೆ ಎಂದು ವರದಿಯಾಗಿದೆ.
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಲಂಡನ್ನಲ್ಲಿ ನಡೆಯುತ್ತಿದ್ದರು. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸುತ್ತಿದೆ. ಈ ಪಂದ್ಯ ವೀಕ್ಷಣೆಗೆ ಬಿಸಿಸಿಐ ಅಧಿಕಾರಿಗಳು ಮತ್ತು ಐಸಿಸಿ ಅಧಿಕಾರಿಗಳು ಲಂಡನ್ನಲ್ಲಿ ಸೇರಿದ್ದಾರೆ. ಇದೇ ವೇಳೆ ಸಭೆ ನಡೆಸಿ ಏಕದಿನ ಟೂರ್ನಿಯ ವೇಳಾಪಟ್ಟಿ ಮತ್ತು ತಾಣಗಳನ್ನು ಅಂತಿಮಗೊಳಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಶನಿವಾರ ಇದು ಅಧಿಕೃತ ಪ್ರಕಟನೆ ಮೂಲಕ ಹೊರಬೀಳಲಿದೆ ಎನ್ನಲಾಗಿದೆ. ಅಕ್ಟೋಬರ್ 5ರಿಂದ ನವೆಂಬರ್ 19ರ ವರೆಗೆ ಈ ಕ್ರೀಡಾಕೂಟ ನಡೆಯುವ ಸಾಧ್ಯತೆ ಇದೆ.
ಟೂರ್ನಿಗಾಗಿ ಕನಿಷ್ಠ 10ಕ್ಕೂ ಹೆಚ್ಚು ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರು, ಚೆನ್ನೈ, ದೆಹಲಿ, ಧರ್ಮಶಾಲಾ, ಗುವಾಹಟಿ, ಹೈದರಾಬಾದ್, ಕೋಲ್ಕೊತಾ, ಲಕ್ನೋ, ಇಂದೋರ್, ರಾಜ್‌ಕೋಟ್ ಮತ್ತು ಮುಂಬೈ ಈ ಪಟ್ಟಿಯಲ್ಲಿ ಸೇರಿವೆ ಎನ್ನಲಾಗಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ಚೆನ್ನೈನಲ್ಲಿ ನಡೆಯುವ ಸಾಧ್ಯತೆಯಿದೆ. ಪಾಕಿಸ್ತಾನದ ಹೆಚ್ಚಿನ ಪಂದ್ಯಗಳು ಬೆಂಗಳೂರು ಮತ್ತು ಚೆನ್ನೈನಲ್ಲಿ ನಡೆಯಲಿದೆ. ಬಾಂಗ್ಲಾದೇಶದ ಪಂದ್ಯಗಳು ಕೋಲ್ಕತ್ತಾ ಮತ್ತು ಗುವಾಹಟಿಯಲ್ಲಿ ನಡೆಯುವ ಸಾಧ್ಯತೆ ಇದೆ. ಭಾರತ ಮತ್ತು ಪಾಕಿಸ್ತಾನ ವಿರುದ್ಧದ ಪಂದ್ಯ ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ ಎಂದು ವರದಿಯಾಗಿತ್ತು. ಆದರೆ ಪಾಕಿಸ್ತಾನ ತಂಡ ಯಾವುದೇ ಕಾರಣಕ್ಕೂ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ಆಡುವುದಿಲ್ಲ ಎಂದು ಹೇಳಿದೆ. ಅಂತಿಮ ಪಟ್ಟಿ ಹೇಗೆ ಇರಲಿದೆ ಎಂದು ಶನಿವಾರ ಉತ್ತರ ಸಿಗುವ ಸಾಧ್ಯತೆ ಇದೆ.
ಇದನ್ನೂ ಓದಿ World Cup 2023: ಈ ಸ್ಟೇಡಿಯಂನಲ್ಲಿ ಪಾಕ್ ತಂಡ ಭಾರತ ವಿರುದ್ಧ ವಿಶ್ವ ಕಪ್ ಆಡಲ್ಲವಂತೆ!
48 ಪಂದ್ಯಗಳು
ಒಟ್ಟು ಹತ್ತು ತಂಡಗಳನ್ನು ಎರಡು ಗುಂಪುಗಳಾಗಿ ಆಡಿಸಲಾಗುತ್ತದೆ. ಹೀಗಾಗಿ 46 ದಿನಗಳಲ್ಲಿ 48 ಪಂದ್ಯಗಳು ನಡೆಯಲಿವೆ. ಅಕ್ಟೋಬರ್-ನವೆಂಬರ್ನಲ್ಲಿ ಕೆಲ ಪ್ರದೇಶಗಳಲ್ಲಿ ಹಿಂಗಾರು ಮಳೆ ಸಾಧ್ಯತೆ ಇರುವುದರಿಂದ ಅಭ್ಯಾಸ ನಡೆಸುವ ತಾಣಗಳನ್ನು ಬಿಸಿಸಿಐ ಶಿಘ್ರದಲ್ಲೇ ಪ್ರಕಟಿಸಲಿದೆ ಎಂದು ವರದಿ ಮಾಡಿದೆ.
ಪ್ರಮುಖ ಸುದ್ದಿ
Monsoon Travel: ಮಲೆನಾಡಿನ ಮಳೆಹಾಡಿನ ಹೊಸತನ! ರಾಜ್ಯದ ಈ ಟಾಪ್ 5 ತಾಣಗಳಿಗೆ ಮಳೆಯಲ್ಲೊಮ್ಮೆ ಭೇಟಿ ಕೊಡಿ
ನೀವು ಈ ಸ್ಥಳಗಳನ್ನು ನೋಡಿರುವಿರಾದರೂ, ಮಳೆಗಾಲದಲ್ಲೊಮ್ಮೆ ಮತ್ತೊಮ್ಮೆ ಹೋಗಿ ನೋಡಿ, ಇದು ಅದೇ ಜಾಗ ಹೌದೋ ಅಲ್ಲವೋ ಎಂಬಷ್ಟು ವ್ಯತ್ಯಾಸ ನೀವು ಗುರುತಿಸುತ್ತೀರಿ. ಮಳೆಯನ್ನು ಇಷ್ಟಪಡುವ ಎಲ್ಲರೂ ಮಳೆಗಾಲದಲ್ಲಿ ಮಲೆನಾಡನ್ನು ನೋಡಬೇಕು.
ಮಳೆಗಾಲದ ಪ್ರವಾಸ ಎಂದರೆ ಮೈಮನಗಳಿಗೆ ತಾಜಾತನದ ಅನುಭೂತಿ. ಜೂನ್ ಬಂತೆಂದರೆ ಆಕಾಶ ಕಪ್ಪಿಟ್ಟು ಧೋ ಎಂದು ಸುರಿವ ಮಳೆಯನ್ನು ಕಾರಿನಲ್ಲಿ ತಿರುವು ಮುರುವಿನ ರಸ್ತೆಯಲ್ಲಿ ಕಾರು ಚಲಾಯಿಸುತ್ತಲೋ, ಅಥವಾ ಹೋಂ ಸ್ಟೇಯೊಂದರಲ್ಲಿ ಕೂತು, ಮಳೆಯನ್ನು ನೋಡುತ್ತಾ ಕೂರುವುದೋ ಅಥವಾ ಸುರಿದ ಮಳೆ ಬಿಟ್ಟು ಹೋದ ತಂಪಿನಲ್ಲಿ ಕಾಡಿನುದ್ದಕ್ಕೂ ಹೆಜ್ಜೆ ಹಾಕುವುದರಲ್ಲೋ ಆನಂದವಿದೆ. ಮಳೆಯನ್ನು ಪ್ರೀತಿಸುವ ಪ್ರತಿಯೊಂದು ಜೀವವೂ ಮಳೆಗಾಲದ ಪ್ರವಾಸವನ್ನು ಪ್ರೀತಿಸದೆ ಇರಲು ಸಾಧ್ಯವೇ ಇಲ್ಲ.
ಮಲೆನಾಡು ಹೆಸರೇ ಹೇಳುವಂತೆ ಮಲೆಗಳ ನಾಡು. ಇವು ಮಳೆಗಾಲದಲ್ಲಿ ಮಾತ್ರವಲ್ಲ, ಸರ್ವ ಕಾಲದಲ್ಲೂ ಹಸಿರಾಗಿ ಕಂಗೊಳಿಸುವ ಊರುಗಳು. ಇನ್ನು ಮಳೆಗಾಲ ಹೇಗಿರಬಹುದು ಎಂದು ಯಾರೂ ಕೂಡಾ ಊಹಿಸಬಹುದು. ಮಳೆಗಾಲದಲ್ಲಿ ಜಿಟಿಜಿಟಿ ಮಳೆಯ ಸದ್ದನ್ನೇ ದಿನವೂ ಕೇಳಬಹುದಾದ ಚಂದನೆಯ ಹಚ್ಚ ಹಸಿರು ಪಚ್ಚೆಪೈರಿನ ಊರುಗಳನ್ನು ಹೊಂದಿರುವ ಮಲೆನಾಡಿನಲ್ಲಿ ಸಾಕಷ್ಟು ಪ್ರವಾಸೀ ತಾಣಗಳೂ ಇವೆ. ಬಹುತೇಕ ಪ್ರವಾಸಿ ತಾಣಗಳನ್ನು ಮಳೆಗಾಲದಲ್ಲಿ ನೋಡುವ ಸೊಗಸೇ ಬೇರೆ. ನೀವು ಈ ಸ್ಥಳಗಳನ್ನು ನೋಡಿರುವಿರಾದರೂ, ಮಳೆಗಾಲದಲ್ಲೊಮ್ಮೆ ಮತ್ತೊಮ್ಮೆ ಹೋಗಿ ನೋಡಿ, ಇದು ಅದೇ ಜಾಗ ಹೌದೋ ಅಲ್ಲವೋ ಎಂಬಷ್ಟು ವ್ಯತ್ಯಾಸ ನೀವು ಗುರುತಿಸುತ್ತೀರಿ. ಮಳೆಯನ್ನು ಇಷ್ಟಪಡುವ ಎಲ್ಲರೂ ಮಳೆಗಾಲದಲ್ಲಿ ಮಲೆನಾಡನ್ನು ನೋಡಬೇಕು.
1. ಸಕ್ರೆಬೈಲು ಆನೆ ಶಿಬಿರ: ಶಿವಮೊಗ್ಗದಿಂದ 14 ಕಿಮೀ ದೂರದಲ್ಲಿರುವ ಸಕ್ರೆಬೈಲು ಆನೆ ಶಿಬಿರ ಹಲವು ಆನೆಗಳಿಗಿಗೆ ತವರು. ಇಲ್ಲಿ ತರಬೇತಿ ಪಡೆದ ಆನೆಗಳನ್ನೂ, ಆನೆ ಮರಿಗಳನ್ನೂ ನೋಡುವುದಷ್ಟೇ ಅಲ್ಲ, ಇಲ್ಲಿ ತುಂಬಿ ಹರಿವ ತುಂಗೆಯಲ್ಲಿ ಆನೆ ಸ್ನಾನ ಮಾಡುವ ಸೊಬಗನ್ನೂ ನೋಡಬಹುದು. ಮಳೆಗಾಲದಲ್ಲಿ, ಸಕ್ರೆಬೈಲು ಹಾಗೂ ಸುತ್ತಮುತ್ತಲ ಕಾಡಿನ ಪರಿಸರ ಅದ್ಭುತವಾಗಿ ಕಾಣಿಸುವುದಷ್ಟೇ ಅಲ್ಲ, ಇಲ್ಲಿಗೆ ಹೋಗುವ ದಾರಿಯೂ ಒಂದು ಅನುಭವವೇ. ರಸ್ತೆಯ ಇಕ್ಕೆಲಗಳಲ್ಲಿರುವ ಗದ್ದೆ, ಮಳೆಗಾಲ ಶುರುವಾಗುವ ಹೊತ್ತಿನಲ್ಲಿ ರೈತರು ಪೈರು ನೆಡುವ ಸಂಭ್ರಮ, ಮುಂಜಾವಿನಲ್ಲಿ ಮಂಜು ಮುಸುಕಿದ ಪ್ರಕೃತಿ ಇವೆಲ್ಲ ನೋಡುತ್ತಾ ಪ್ರವಾಸ ಮಾಡುವ ಅನುಭವವೇ ಜೀವನದ ಅತ್ಯಂತ ಸಂತಸಾಯಕ ಅನುಭವಗಳಲ್ಲೊಂದಾಗಬಹುದು.
2. ಕುಪ್ಪಳ್ಳಿ: ನಮ್ಮ ನಾಡಗೀತೆಯನ್ನು ರಚಿಸಿದ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪು ಅವರನ್ನು ನಾವು ಪ್ರೀತಿಯಿಂದ ಸ್ಮರಿಸಿದಾಗಲೆಲ್ಲ ನೆನಪಾಗುವುದು ಕುಪ್ಪಳ್ಳಿ. ಕುಪ್ಪಳ್ಳಿ ಕುವೆಂಪು ಅವರ ತವರು. ಕುವೆಂಪು ಕೃತಿಗಳಲ್ಲಿ ಮಲೆನಾಡಿನ ಸೊಬಗಿನ ಕುರಿತಾದ ವರ್ಣನೆಯನ್ನು ಕೇಳಿದವರಿಗೆಲ್ಲ, ಕುಪ್ಪಳ್ಳಿಯನ್ನು ನೋಡಬೇಕೆಂಬ ತವಕ ಇಲ್ಲದೆ ಇರದು. ಮಳೆಗಾಲದಲ್ಲಿ ಮಲೆನಾಡಿನ ಕುಪ್ಪಳ್ಳಿಯನ್ನು ನೋಡಲು ಸಕಾಲ. ಶಿವಮೊಗ್ಗದಿಂದ 66 ಕಿಮೀ ದೂರದಲ್ಲಿರುವ ಕುಪ್ಪಳ್ಳಿಯಲ್ಲಿ ಕುವೆಂಪು ಅವರ ಮನೆಯನ್ನೂ, ಕವಿಶೈಲವನ್ನೂ ನೋಡಿ, ಆಗುಂಬೆಯ ಸೊಬಗನ್ನೂ ಸವಿದು ಜೋಗ ಜಲಪಾತ, ಲಿಂಗನಮಕ್ಕಿ ಹಿನ್ನೀರು, ಕುಂದಾದ್ರಿ ಬೆಟ್ಟ ಇತ್ಯಾದಿಗಳನ್ನೆಲ್ಲ ನೋಡಿ ಬರಬಹುದು.
3. ಹೊನ್ನಾವರ ಕಾಂಡ್ಲಾವನ: ಹೊನ್ನಾವರದ ಶರಾವತಿ ಕಾಂಡ್ಲಾವನ ಇತ್ತೀಚೆಗೆ ಭಾರೀ ಪ್ರಸಿದ್ಧಿ ಪಡೆದಿರುವ ಚಂದನೆಯ ಪ್ರವಾಸೀ ತಾಣಗಳಲ್ಲೊಂದು. ಶರಾವತಿ ಹಿನ್ನೀರಿನಲ್ಲಿ ಕಾಂಡ್ಲಾ ಮಳೆಕಾಡುಗಳನ್ನು ನೋಡಲು ನಿರ್ಮಿತವಾದ ನಡೆದು ಸಾಗಬಹುದಾದ ಮರದ ಸೇತುವೆಯ ಮೂಲಕ ಸಾಗುತ್ತಾ ಕಾಂಡ್ಲಾವನದ ಸೊಬಗನ್ನು ಸವಿಯಬಹುದು. ಶರಾವತಿ ಹಿನ್ನೀರಿನಲ್ಲಿ ಬೋಟಿಂಗ್ ಕೂಡಾ ಮಾಡಬಹುದು.
4. ಮಂಜರಾಬಾದ್ ಕೋಟೆ: ಕನ್ನಡದ ಹಲವು ಸಿನಿಮಾಗಳ ಹಾಡುಗಳಲ್ಲಿ ಬಂದು ಹೋಗಿರುವ ಈ ಕೋಟೆಯನ್ನು ಮಳೆಗಾಲದಲ್ಲಿ ನೋಡುವುದೇ ಸೊಗಸು. ೧೭೯೨ರಲ್ಲಿ ಟಿಪ್ಪು ಸುಲ್ತಾನ್ ಕಟ್ಟಿಸಿದ ಈ ಕೋಟೆ ನಕ್ಷತ್ರಾಕಾರದಲ್ಲಿರುವುದರಿಂದ ಗಮನ ಸೆಳೆಯುತ್ತದೆ. ಸಕಲೇಶಪುರಿಂದ ೬ ಕಿಮೀ ದೂರದಲ್ಲಿರುವ ಈ ಕೋಟೆ ಮಳೆಗಾಲದಲ್ಲಿ ನೋಡಲೇಬೇಕಾದ ಸುಂದರ ತಾಣ.
5. ದಾಂಡೇಲಿ: ಮಳೆಗಾಲದಲ್ಲಿ ನೋಡಲೇಬೇಕಾದ ಇನ್ನೊಂದು ಅದ್ಭುತ ಸ್ಥಳ ಎಂದರೆ ಅದು ಉತ್ತರಕನ್ನಡ ಜಿಲ್ಲೆಯಲ್ಲಿರುವ ದಾಂಡೇಲಿ. ಕಾಳೀ ನದೀ ತೀರದಲ್ಲಿರುವ ದಾಂಡೇಲಿಯನ್ನು ಮಳೆಗಾಲದಲ್ಲಿ ನೋಡುವುದೇ ಚಂದ. ದಟ್ಟ ಕಾಡು, ಸದಾ ಸುರಿವ ಮಳೆ, ಅಪರೂಪದ ಪಕ್ಷಿಸಂಕುಲ ಎಲ್ಲವೂ ದಾಂಡೇಲಿಯನ್ನು ಅಪೂರ್ವವನ್ನಾಗಿ ಮಾಡಿವೆ. ಇಲ್ಲಿ ತಿರುಗಾಡುವ ಮೂಲಕ ನೀವು ಈವರೆಗೆ ಕಂಡಿರದ ಮಳೆಯನ್ನೂ ಅನುಭವಿಸಬಹುದು, ಅಷ್ಟೇ ಅಲ್ಲ, ಅದೃಷ್ಟ ಮಾಡಿದ್ದರೆ, ಹಾರ್ನ್‌ಬಿಲ್ ಪಕ್ಷಿಯನ್ನೂ ಕಾಣಬಹುದು!
ಇದನ್ನೂ ಓದಿ: Monsoon Travel: ಮಳೆ ಇಷ್ಟಪಡುವ ಮಂದಿ ಮಳೆಗಾಲದಲ್ಲಿ ಈ ಬೆಟ್ಟದೂರುಗಳಿಗೆ ಹೋಗಬೇಕು!
ಆರೋಗ್ಯ
Dinesh Gundu Rao: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ ಮರು ತನಿಖೆ; ರೆಡಿ ಆಗ್ತಿದೆ ಡಿಪಿಆರ್!
Chamarajanagar oxygen tragedy: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 2021ರಲ್ಲಿ ದಾಖಲಾಗಿದ್ದ ರೋಗಿಗಳಿಗೆ ಆಕ್ಸಿಜನ್ ಕೊರತೆಯಾಗಿ ಮೇ 2ರಂದು 36 ಕೊರೊನಾ ರೋಗಿಗಳು ಮೃತಪಟ್ಟಿದ್ದರು. ಆಗ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್, ಈ ಪ್ರಕರಣವನ್ನು ತನಿಖೆಗೆ ಆಗ್ರಹಿಸಿತ್ತು. ಈಗ ಅಧಿಕಾರಕ್ಕೆ ಬಂದೊಡನೆ ಈ ಪ್ರಕರಣದ ತನಿಖೆಗೆ ಮುಂದಾಗಿದೆ.
ಬೆಂಗಳೂರು: ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಹಾಗೂ ಕೋವಿಡ್ (Covid 19) ಸಂದರ್ಭದಲ್ಲಿ ನಡೆದ ಕೆಲವು ಸಂಗತಿಗಳ ತನಿಖೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ 2021ರಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದ ಆಕ್ಸಿಜನ್ ದುರಂತ (Chamarajanagar oxygen tragedy) ಪ್ರಕರಣದ ಮರು ತನಿಖೆಗೆ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಮುಂದಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಮಾತನಾಡಿ, ಈ ಘಟನೆಯು ಎರಡು ಇಲಾಖೆಗೆ ಒಳಪಡುತ್ತದೆ. ಹಾಗಾಗಿ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ (Health Department) ಸಮನ್ವಯತೆ ಇರುವುದರಿಂದ ತನಿಖೆಯನ್ನು ಮಾಡಬೇಕಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಈ ಹಿಂದಿನ ಸರ್ಕಾರ ತನಿಖೆಗೆ ಕೆಲವರನ್ನು ನೇಮಕ ಮಾಡಿತ್ತು. ಆದರೆ, ಆ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ ಹೊಸ ಸರ್ಕಾರ ಬಂದಿರುವುದರಿಂದ ನಾವು ಮರು ತನಿಖೆಗೆ ನಿರ್ಧಾರ ಮಾಡಿದ್ದೇವೆ. ಮರು ತನಿಖೆಗೆ ಸರ್ಕಾರಕ್ಕೆ ಹೇಳಿದ್ದೇನೆ. ಅದಕ್ಕೆ ಡಿಪಿಆರ್ ಕೂಡ ಸಿದ್ಧವಾಗುತ್ತಿದೆ ಎಂದು ತಿಳಿಸಿದರು.
ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ರೋಗಿಗಳಿಗೆ ಆಕ್ಸಿಜನ್ ಕೊರತೆಯಾಗಿ 36 ಕೊರೊನಾ ರೋಗಿಗಳು ಮೃತಪಟ್ಟಿದ್ದರು. ಈ ಬಗ್ಗೆ ಆಗ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್, ಈ ಪ್ರಕರಣವನ್ನು ತನಿಖೆಗೆ ಆದೇಶಿಸಿತ್ತು. ಈಗ ಅಧಿಕಾರಕ್ಕೆ ಬಂದೊಡನೆ ಈ ಪ್ರಕರಣದ ತನಿಖೆಗೆ ಮುಂದಾಗಿದೆ.
ಇದನ್ನೂ ಓದಿ: Electricity Bill: ನೇಕಾರರಿಗೆ ಶಾಕ್! 90 ರೂಪಾಯಿ ಮಿನಿಮಮ್ ಚಾರ್ಜ್ 140ಕ್ಕೆ ಏರಿಕೆ; ಇದು ಗ್ಯಾರಂಟಿ ಎಫೆಕ್ಟಾ?
ದಕ್ಷಿಣ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಕ ಆಗಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ದಿನೇಶ್ ಗುಂಡೂರಾವ್, ದಕ್ಷಿಣ ಕನ್ನಡ ಪ್ರಜ್ಞಾವಂತ ಜಿಲ್ಲೆಯಾಗಿದೆ. ನಾನು ಯಾವ ಜಿಲ್ಲೆಗೂ ಬೇಡಿಕೆ ಇಟ್ಟಿರಲಿಲ್ಲ. ಇದು ಮುಖ್ಯಮಂತ್ರಿಗಳ ನಿರ್ಧಾರವಾಗಿದೆ. ಯಾವ ಜಿಲ್ಲೆಗೆ ಹೋದರೂ ಕೆಲಸ ಮಾಡಬೇಕು. ದಕ್ಷಿಣ ಕನ್ನಡದಲ್ಲಿ ಜನ ಸಹೋದರತೆಯಿಂದ ಬದುಕಿ ಬಾಳಬೇಕು. ನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಹಾಕಬೇಕಿದೆ. ಅಲ್ಲಿ ಶಾಂತಿ ಸೌಹರ್ದತೆ ನೆಲೆಸಬೇಕಿದೆ. ಅ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಕೋವಿಡ್ ಅವಧಿಯ ಟೆಂಡರ್‌ಗಳ ಮರು ಪರಿಶೀಲನೆ ಮಾಡಲಾಗುತ್ತದೆ. ಅನುಮಾನ ಬಂದ ಟೆಂಡರ್‌ಗಳ ತನಿಖೆ ಮಾಡುತ್ತೇವೆ. ಹೆಚ್ಚು ಬಿಡ್ ಮಾಡಿರುವ ಟೆಂಡರ್‌ಗಳನ್ನು ಪರಿಶೀಲಿಸಲು ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಈ ಹಿಂದೆ ಕರೆಯಲಾಗಿದ್ದ 108 ಆಂಬ್ಯುಲೆನ್ಸ್ ಟೆಂಡರ್ ಮತ್ತು ಡಯಾಲಿಸಿಸ್ ಟೆಂಡರ್ ಅನ್ನು ರದ್ದುಪಡಿಸಿದ್ದು, ಮರು ಟೆಂಡರ್ ಕರೆಯುತ್ತೇವೆ. ಜಿವಿಕೆ ಮೇಲೆ ಆರೋಪ ಬಂದಿರುವ ಕಾರಣ ಈ ಕ್ರಮ ತೆಗೆದುಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಟೆಂಡರ್ ಕರೆಯುತ್ತೇವೆ ಎಂದು ಹೇಳಿದರು.
ಅಧಿಕಾರಿಗಳಿಗೆ ತರಾಟೆ
ಆರೋಗ್ಯ ಇಲಾಖೆಯಲ್ಲಿ ಅಧಿಕಾರಿಗಳ ಜತೆ ಸಭೆ ಮುಂದುವರಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ವೇಳೆ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಗಳಲ್ಲಿ ಸಾವಾದರೆ ನಾನು ಸಹಿಸೋದಿಲ್ಲ. ಯಾರದ್ದೇ ತಪ್ಪು ಕಂಡುಬಂದರೂ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ತೆಗೆದುಕೊಳ್ಳುತ್ತೇನೆ. ಈ ವಿಚಾರವಾಗಿ ಯಾವುದೇ ರಾಜಕೀಯ ಒತ್ತಡ ತಂದರೂ ಪ್ರಯೋಜನ ಇಲ್ಲ. ರಾಜಕೀಯ ಒತ್ತಡ ತಂದರೆ ಅದರ ಮುಂದಿನ ಪರಿಣಾಮವನ್ನು ನೀವೇ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: Viral News: ಮುಖ್ಯಮಂತ್ರಿಗಳೇ ಎಣ್ಣೆ ರೇಟ್ ಜಾಸ್ತಿ ಮಾಡ್ಬೇಡಿ; BPL ಕಾರ್ಡ್‌ದಾರನ ವಾರ್ಷಿಕ ಲೆಕ್ಕ ಮುಂದಿಟ್ಟ ಕುಡುಕರ ಸಂಘ!
ಈ ಹಿಂದೆ ಡಯಾಬಿಟಿಕ್ ಸಮೀಕ್ಷೆ ನಡೆಸಲಾಗಿತ್ತು. ಈ ವೇಳೆ ಜಿರೋ ಡಯಾಬಿಟಿಕ್ ಎಂದು ಯಾದಗಿರಿ ಜಿಲ್ಲೆಯಲ್ಲಿ ವರದಿ ನೀಡಲಾಗಿದೆ. ಆದರೆ, ಇಂತಹ ತಪ್ಪು ಮಾಹಿತಿಗಳನ್ನು ಕೊಡಬಾರದು ಎಂದು ಇದೇ ವೇಳೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು.
-
ಸುವಚನ13 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ19 hours ago
ವಿಸ್ತಾರ ಸಂಪಾದಕೀಯ: ಇಂದಿರಾ ಗಾಂಧಿ ಹತ್ಯೆಯ ಸಂಭ್ರಮ; ಕೆನಡಾದಲ್ಲಿ ಖಲಿಸ್ತಾನಿಗಳ ಉದ್ಧಟತನ ಖಂಡನೀಯ
-
South Cinema23 hours ago
Kannada New Movie: ಹಿಮಾಲಯದ ಕೊರೆಯುವ ಚಳಿಯಲ್ಲಿ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಶೂಟಿಂಗ್!
-
South Cinema23 hours ago
Nandamuri Balakrishna: ‘ಐ ಡೋಂಟ್ ಕೇರ್ʼ ಎಂದು ಮಾಸ್ ಅವತಾರವೆತ್ತ ನಂದಮೂರಿ ಬಾಲಕೃಷ್ಣ; ಟೈಟಲ್ ರಿವೀಲ್!
-
ಪ್ರಮುಖ ಸುದ್ದಿ24 hours ago
ವಿಧವೆ ಅನ್ನೋದಕ್ಕೆ ರಾಷ್ಟ್ರಪತಿಯನ್ನು ಸಂಸತ್ ಭವನ ಉದ್ಘಾಟನೆಗೆ ಮೋದಿ ಆಹ್ವಾನಿಸಿಲ್ಲವೆಂದ ಕುಂ. ವೀರಭದ್ರಪ್ಪ
-
ದೇಶ18 hours ago
ಬದುಕುಳಿಯಲಿಲ್ಲ ಬೋರ್ವೆಲ್ಗೆ ಬಿದ್ದ ಕಂದಮ್ಮ; ಸಾವಿನ ವಿರುದ್ಧ 50 ಗಂಟೆ ಹೋರಾಟದಲ್ಲಿ ಗೆದ್ದಿದ್ದು ವಿಧಿ
-
ದೇಶ21 hours ago
ಸಹಕಾರಿ ಬ್ಯಾಂಕ್ಗಳು ಕೂಡ ಸುಸ್ತಿದಾರರ ಜತೆ ರಾಜಿ, ಸಾಲ ರೈಟ್-ಆಫ್ ಮಾಡಬಹುದು; ಆರ್ಬಿಐ ಮಹತ್ವದ ಘೋಷಣೆ
-
ಕರ್ನಾಟಕ22 hours ago
Fraud Case: ಬೆಳದಿಂಗಳ ಬಾಲೆ ಪ್ರಕರಣಕ್ಕೆ ಟ್ವಿಸ್ಟ್; ಸ್ವಾಮೀಜಿ ವಂಚನೆ ಕೇಸಲ್ಲಿ ಎ2 ಆರೋಪಿ ಈಗ ಎ1!