horoscope today read your daily horoscope predictions for may 27, 2023Horoscope Today : ಸಿಂಹ ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ಇಂದಿನ ಭವಿಷ್ಯ ಹೀಗಿದೆ - Vistara News

ಪ್ರಮುಖ ಸುದ್ದಿ

Horoscope Today : ಸಿಂಹ ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ಇಂದಿನ ಭವಿಷ್ಯ ಹೀಗಿದೆ

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಸಪ್ತಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (27-05-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.

ತಿಥಿ: ಸಪ್ತಮಿ 07:42 ವಾರ: ಶನಿವಾರ
ನಕ್ಷತ್ರ: ಮಘಾ 23:42 ಯೋಗ: ವ್ಯಾಘಾತ 19:55
ಕರಣ: ವಣಿಜ 07:42
ಅಮೃತಕಾಲ: ರಾತ್ರಿ 09 ಗಂಟೆ 02 ನಿಮಿಷದಿಂದ ರಾತ್ರಿ 10 ಗಂಟೆ 50 ನಿಮಿಷದವರೆಗೆ.

ಸೂರ್ಯೋದಯ : 05:53 ಸೂರ್ಯಾಸ್ತ : 06:41

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ಆರೋಗ್ಯದಲ್ಲಿ ವ್ಯತ್ಯಾಸ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು. ನಿಮ್ಮ ಆಪ್ತರು ಸಮಸ್ಯೆಯನ್ನು ಉಂಟು ಮಾಡುವ ಸಾಧ್ಯತೆ. ಅನಗತ್ಯ ಒತ್ತಡ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ. ಸಂಗಾತಿಯ ಮಧುರ ಮಾತುಗಳು ಹಿತವೆನಿಸುಬಹುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ದೀರ್ಘಕಾಲದ ಪ್ರಯತ್ನ ನಿಮಗೆ ಯಶಸ್ಸು ತಂದು ಕೊಡಲಿದೆ. ಈ ಹಿಂದೆ ನೀವು ಮಾಡಿದ ಸಹಾಯ ಇಂದು ಫಲ ನೀಡಲಿದೆ. ಹಿರಿಯರಿಂದ ಪ್ರಶಂಸೆ ವ್ಯಕ್ತವಾಗಲಿದೆ. ಉದ್ಯೋಗದಲ್ಲಿ ಯಶಸ್ಸು. ವ್ಯಾಪಾರ ಅಭಿವೃದ್ಧಿ ಕಾಣಲಿದೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಆಹಾರ ಹಿತ ಮಿತವಾಗಿರಲಿ, ಇಲ್ಲವಾದಲ್ಲಿ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುದಂತೆ ಎಚ್ಚರಿಕೆ ವಹಿಸಿ. ಯೋಚಿಸದೇ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಖರ್ಚು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕಟಕ: ಉದ್ಯೋಗಿಗಳಿಗೆ ಉತ್ತಮ ಯಶಸ್ಸು ಸಿಗಲಿದೆ. ಅವಶ್ಯಕ ಖರೀದಿಯ ಕಾರಣಗಳಿಂದ ಖರ್ಚು, ಅಷ್ಟೇ ಹಣಕಾಸಿನ ಹರಿವು ಹೆಚ್ಚಾಗಲಿದೆ. ಕುಟುಂಬದಲ್ಲಿ ಚರ್ಚಿಸುವ ವಿಷಯಗಳು ನಿಮ್ಮನ್ನು ಭಾವುಕರನ್ನಾಗಿ ಮಾಡುವುದು. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಸೃಜನಾತ್ಮಕ ಕೆಲಸ ಕಾರ್ಯಗಳಿಂದ ಯಶಸ್ಸು ಸಿಗಲಿದೆ. ಉತ್ತಮ ಆರೋಗ್ಯ. ಆರ್ಥಿಕವಾಗಿ ಸದೃಢವಾಗಲಿದ್ದಿರಿ. ಅತಿಥಿಗಳ ಆಗಮನ ಸಂತಸ ತರಲಿದೆ. ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ಹೂಡಿಕೆ ವ್ಯವಹಾರದಲ್ಲಿ ಹೆಚ್ಚು ಲಾಭ ಸಿಗಲಿದೆ. ನಿಮ್ಮ ನಡವಳಿಕೆ ಕುಟುಂಬದ ಸದಸ್ಯರಿಗೆ ಕೋಪ ತರಿಸಬಹುದು. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ವ್ಯಾಪಾರದಲ್ಲಿ ಹೆಚ್ಚು ಲಾಭ ತರುವುದು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅನಿರೀಕ್ಷಿತ ಘಟನೆಗಳು ಸಮಸ್ಯೆಗಳನ್ನು ಉಂಟುಮಾಡಬಹುದು. ಒತ್ತಡಕ್ಕೆ ಒಳಗಾಗದೆ, ತಾಳ್ಮೆಯಿಂದ ಇರಿ. ಹಿರಿಯರ ಮಾರ್ಗದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಭೇಟಿ ಮನಸ್ಸಿಗೆ ಸಮಾಧಾನ ತರುವುದು. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಪೋಷಕರ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಕೆಲಸ ಕಾರ್ಯಗಳು ಮಂದಗತಿಯಲ್ಲಿ ಸಾಗಲಿದ್ದು, ಮುಂಜಾಗ್ರತೆ ವಹಿಸಿ. ವ್ಯಾಪಾರ ವ್ಯವಹಾರದಲ್ಲಿ ಸಾಮಾನ್ಯ ಲಾಭ. ಕೌಟುಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಧನಸ್ಸು: ಅಧಿಕ ಉತ್ಸಾಹದಿಂದ ಇರುವಿರಿ. ಆದರೂ ಕೆಲಸದ ಒತ್ತಡ ತಪ್ಪದು. ವ್ಯಾಪಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಬರುವ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಶಕ್ತಿ ಪ್ರದರ್ಶನ ಮಾಡಲಿದ್ದೀರಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮ.
ಕೌಟುಂಬಿಕ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

ದಾಂಪತ್ಯ ಜೀವನದಲ್ಲಿ ಜಗಳವಾಗೋದು ಯಾಕೆ ? ಈ ವಿಡಿಯೋ ನೋಡಿ.
Horoscope Today

ಮಕರ: ಮುಂಗೋಪಿ ಮಾತುಗಳನ್ನು ಆಡಿ ತೊಂದರೆಯಿಲ್ಲಿ ಸಿಕ್ಕು, ಅಪಾಯ ತಂದುಕೊಳ್ಳುವುದು ಬೇಡ. ಭೂ ಸಂಬಂಧಿ ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಜೊತೆಗೆ ಇರುವವರೊಂದಿಗೆ ಅನಾವಶ್ಯಕ ಜಗಳಗಳು ನಡೆಯುವ ಸಾಧ್ಯತೆ ಇದೆ. ಮಾತಿನಲ್ಲಿ ನಿಗಾ ಇರಲಿ. ಉದ್ಯೋಗಿಗಳಿಗೆ ಉತ್ತಮ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ಅನಾವಶ್ಯಕ ವಿಚಾರಗಳು ನಿಮ್ಮ ಮಾನಸಿಕ ನೆಮ್ಮದಿ ಹಾಳುಮಾಡುವ ಸಾಧ್ಯತೆ. ಆರ್ಥಿಕ ಪ್ರಗತಿ ಸಾಧಾರಣ. ಸಹನೆ ಕಳೆದುಕೊಳ್ಳುವುದು ಬೇಡ. ನೆರೆಹೊರೆಯವರ ಜೊತೆಗೆ ವಾದಕ್ಕೆ ಇಳಿಯುವುದು ಬೇಡ. ಆರೋಗ್ಯ ಮಧ್ಯಮ. ಕೌಟುಂಬಿಕ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಮೀನ: ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ನಿಮ್ಮ ಅಭಿಪ್ರಾಯಗಳನ್ನು ಇತರರು ಒಪ್ಪಿಕೊಳ್ಳದಿರಬಹುದು. ಮನೆಯಲ್ಲಿ ಹಿರಿಯರೊಂದಿಗೆ ಮಾತಿಗೆ ಇಳಿಯುವುದು ಬೇಡ. ವ್ಯಾಪಾರ ವ್ಯವಹಾರ ಮಧ್ಯಮ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : ಶುಕ್ರ ಗ್ರಹ ಲಗ್ನದಲ್ಲಿದ್ದರೆ ಉತ್ತಮ ಆರೋಗ್ಯ, ಉಳಿದ ಮನೆಯಲ್ಲಿದ್ದರೆ ಯಾವೆಲ್ಲಾ ಫಲ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

HD Kumaraswamy: ಜನರ ಕಣ್ಣಿಗೆ ಮಣ್ಣೆರಚಬೇಡಿ; ಮಂಡ್ಯಕ್ಕೆ ಕಾವೇರಿ ಗ್ಯಾರಂಟಿ ಕೊಡಿ: ಕಾಂಗ್ರೆಸ್‌ಗೆ ಎಚ್‌ಡಿಕೆ ಸವಾಲು

HD Kumaraswamy: ಕನ್ನಡಿಗರ ಮೇಲೆ ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ಕಾಳಜಿ ಇದ್ದರೆ ತಮಿಳುನಾಡಿನವರು ಕೇಂದ್ರದಲ್ಲಿ ಹಾಕಿರುವ ತಕರಾರು ಅರ್ಜಿಗಳನ್ನು ಹಿಂಪಡೆಯಲು ಕಾಂಗ್ರೆಸ್ ಪ್ರಯತ್ನ ಮಾಡಲಿ. ಅವರ ಮಿತ್ರಪಕ್ಷದ ಮನವೊಲಿಸಲಿ. ಡಿಎಂಕೆ ನಾಯಕ ಸ್ಟಾಲಿನ್ ಅವರ ಮನವೊಲಿಸಲಿ. ಕಾಂಗ್ರೆಸ್ ಆ ಕೆಲಸ ಮಾಡಿದರೆ ಕೇಂದ್ರದಿಂದ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿ, ಅದಕ್ಕೆ ಹಣ ಬಿಡುಗಡೆ ಮಾಡಿಸುವುದು ನನ್ನ ಜವಾಬ್ದಾರಿ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

VISTARANEWS.COM


on

HD Kumaraswamy challenges Congress to give Cauvery guarantee to Mandya
Koo

ಮಂಡ್ಯ/ಮಳವಳ್ಳಿ: ಗ್ಯಾರಂಟಿಗಳ (Congress Guarantee) ಮೂಲಕ ಜನರ ಕಣ್ಣಿಗೆ ಕಾಂಗ್ರೆಸ್ ಸರ್ಕಾರ ಮಂಕುಬೂದಿ ಎರಚುತ್ತಿದೆ. ಮಂಡ್ಯ ಜನರಿಗೆ ಕಾವೇರಿ ನೀರಿನ ಗ್ಯಾರಂಟಿ ಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಸವಾಲು ಹಾಕಿದರು.

ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಮಳವಳ್ಳಿ ತಾಲೂಕಿನ ಬೆಳಕವಾಡಿಯಲ್ಲಿ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಎಚ್‌.ಡಿ. ಕುಮಾರಸ್ವಾಮಿ, ಕೇವಲ ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಮತಯಾಚನೆ ಮಾಡುತ್ತಿದೆ. ಆದರೆ, ಮಂಡ್ಯ ಜಿಲ್ಲೆಯಲ್ಲಿ ಸರ್ಕಾರವೇ ಸೃಷ್ಟಿಸಿರುವ ಕೃತಕ ಬರಗಾಲದಿಂದ ಕಬ್ಬು, ಭತ್ತದ ಬೆಳೆ ಒಣಗಿ ಹೋಗಿದೆ. ಕಾವೇರಿ ನೀರಿನ ವಿಚಾರದಲ್ಲಿ ಈ ಸರ್ಕಾರ ಜಿಲ್ಲೆಯ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪ ಮಾಡಿದರು.

ಕಾಂಗ್ರೆಸ್‌ನಿಂದ ಕನ್ನಡಿಗರಿಗೆ ಅನ್ಯಾಯ

ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆ ಮಾಡಲು ಕರ್ನಾಟಕಕ್ಕೆ ಅವಕಾಶ ಕೊಡುವುದಿಲ್ಲ. ಕೇಂದ್ರ ಅನುಮತಿ ಕೊಡುವುದಕ್ಕೂ ಬಿಡುವುದಿಲ್ಲ ಎಂದು ಕಾಂಗ್ರೆಸ್ ಮಿತ್ರಪಕ್ಷ ತಮಿಳುನಾಡಿನ ಡಿಎಂಕೆ ಪಕ್ಷ ತನ್ನ ಲೋಕಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಬರೆದುಕೊಂಡಿದೆ. ರಾಜ್ಯದ ಹಿತಾಸಕ್ತಿಗೆ ಮಾರಕವಾದ ಅನ್ಯ ರಾಜ್ಯದ ಪಕ್ಷದ ಜತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಕನ್ನಡಿಗರಿಗೆ ಅನ್ಯಾಯ ಮಾಡುತ್ತಿದೆ ಎಂದು ಎಚ್.ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದರು.

ಮೇಕೆದಾಟು ಯೋಜನೆಗೆ ಹಣ ಕೊಡಿಸುವೆ

ಕನ್ನಡಿಗರ ಮೇಲೆ ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ಕಾಳಜಿ ಇದ್ದರೆ ತಮಿಳುನಾಡಿನವರು ಕೇಂದ್ರದಲ್ಲಿ ಹಾಕಿರುವ ತಕರಾರು ಅರ್ಜಿಗಳನ್ನು ಹಿಂಪಡೆಯಲು ಕಾಂಗ್ರೆಸ್ ಪ್ರಯತ್ನ ಮಾಡಲಿ. ಅವರ ಮಿತ್ರಪಕ್ಷದ ಮನವೊಲಿಸಲಿ. ಡಿಎಂಕೆ ನಾಯಕ ಸ್ಟಾಲಿನ್ ಅವರ ಮನವೊಲಿಸಲಿ. ಕಾಂಗ್ರೆಸ್ ಆ ಕೆಲಸ ಮಾಡಿದರೆ ಕೇಂದ್ರದಿಂದ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿ, ಅದಕ್ಕೆ ಹಣ ಬಿಡುಗಡೆ ಮಾಡಿಸುವುದು ನನ್ನ ಜವಾಬ್ದಾರಿ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: Lok Sabha Election 2024: ಸಂವಿಧಾನ ತಿದ್ದುಪಡಿ ಮಾಡುವುದಾಗಿ ಘೋಷಿಸಿದ ಪ್ರಿಯಾಂಕಾ ಗಾಂಧಿ!

ಸಮಯಕ್ಕೆ ತಕ್ಕ ರಾಜಕಾರಣ

ಕಾಂಗ್ರೆಸ್ ರಾಜ್ಯಕ್ಕೆ ಬೇಕಾದ ಶಾಶ್ವತ ಕೆಲಸಗಳನ್ನು ಮಾಡುವುದು ಬಿಟ್ಟು ಅಗ್ಗದ ಕಾರ್ಯಕ್ರಮಗಳಿಗೆ ಜೋತು ಬಿದ್ದು ಜನರನ್ನು ಯಮಾರಿಸುತ್ತಿದೆ. ಜನರ ಬದುಕಿನ ಜತೆ ಚೆಲ್ಲಾಟ ಆಡುತ್ತಿದೆ. ಕಾವೇರಿ ನೀರಿನ ಬಗ್ಗೆ ಚಕಾರ ಎತ್ತದ ಕಾಂಗ್ರೆಸ್, ಡಿಎಂಕೆ ಪ್ರಣಾಳಿಕೆ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಸಮಯಕ್ಕೆ ತಕ್ಕ ರಾಜಕಾರಣ ಮಾಡಿಕೊಂಡು ಬೇಳೆ ಬೇಯಿಸಿಕೊಳ್ಳುತ್ತಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಮಾಜಿ ಶಾಸಕ ಡಾ.ಕೆ.ಅನ್ನದಾನಿ, ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ, ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಸೇರಿದಂತೆ ಬಿಜೆಪಿ ಜೆಡಿಎಸ್ ಪಕ್ಷದ ಅನೇಕ ನಾಯಕರು, ಕಾರ್ಯಕರ್ತರು, ಸಾರ್ವಜನಿಕರು ದೊಡ್ಡ ಪ್ರಮಾಣದಲ್ಲಿ ನೆರೆದಿದ್ದರು.

Continue Reading

ಕ್ರೀಡೆ

Fantasy Gaming : 8ನೇ ಕ್ಲಾಸ್​ ಫೇಲ್​, ಕ್ರಿಕೆಟ್​ ಗೊತ್ತಿಲ್ಲ; ಆದ್ರೂ ಒಲಿಯಿತು ಕ್ರಿಕೆಟ್​ ಫ್ಯಾಂಟಸಿ ಗೇಮ್​ನಲ್ಲಿ 1.5 ಕೋಟಿ ರೂ!

Fantasy Gaming: ನನಗೆ ತುಂಬಾ ಸಂತೋಷವಾಯಿತು. ನಂಬಲಾಗಲಿಲ್ಲ. ಆರಂಭದಲ್ಲಿ ಇದು ವಂಚನೆ ಎಂದು ಭಾವಿಸಿದೆ. ಅಪ್ಲಿಕೇಶನ್ ಗಳಲ್ಲಿ ಎಂದಿಗೂ ಹಣ ಬರುವುದಿಲ್ಲ ಎಂದು ನಂಬಿದ್ದೆ .ನಾನು ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತೇನೆ. ನಡುವೆ ನಾನು ಕಳೆದ ಆರು ತಿಂಗಳಿನಿಂದ ಫ್ಯಾಂಟಸಿ ಗೇಮಿಂಗ್ ಆಡುತ್ತಿದ್ದೇನೆ. ಭಾನುವಾರ, ನನಗೆ ಯಾವುದೇ ಕೆಲಸವಿರಲಿಲ್ಲ ಎಂದು ಓಜಾ ಹೇಳಿದ್ದಾನೆ.

VISTARANEWS.COM


on

Fantasy Gaming
Koo

ಬೆಂಗಳೂರು: ಅದೃಷ್ಟ ಯಾವಾಗ ಬಾಗಿಲು ಬಡಿದು ಮನೆಯೊಳಗೆ ನುಗ್ಗುತ್ತದೆ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ. ಯಾಕೆಂದರೆ ಅದು ಅನಿರೀಕ್ಷಿತ, ಅಚ್ಚರಿ ಮತ್ತು ಅಪರೂಪ. ಇಂಥದ್ದೇ ಒಬ್ಬ ಅದೃಷ್ಟ ಶಾಲಿಯ ಪರಿಚಯವನ್ನು ನಿಮಗೆ ಮಾಡಿಸಬೇಕಾಗಿದೆ. ಅವರೇ ಬಿಹಾರದ ದೀಪು ಓಜಾ. ಭಾನುವಾರ ನಡೆದ ಕೆಕೆಆರ್ ಮತ್ತು ಆರ್​ಸಿಬಿ ನಡುವಿನ ಐಪಿಎಲ್ ಪಂದ್ಯದ ವೇಳೆ ಮೊಬೈಲ್ ಗೇಮಿಂಗ್ ಅಪ್ಲಿಕೇಶನ್​ನಲ್ಲಿ (Fantasy Gaming) ಐಪಿಎಲ್ ಫ್ಯಾಂಟಸಿ ಗೇಮಿಂಗ್ (Fantasy Gaming) ಆಡುವ ಮೂಲಕ ಬಿಹಾರದ ಅರ್ರಾ ಜಿಲ್ಲೆಯ ಕೊಹ್ಡಾ ಗ್ರಾಮದ ಈತ 1.5 ಕೋಟಿ ರೂಪಾಯಿ ಬಹುಮಾನ ಗೆದ್ದಿದ್ದಾನೆ. ಅವರು ಪಂದ್ಯದಲ್ಲಿ ಆಂಡ್ರೆ ರಸೆಲ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿ ಅದೃಷ್ಟಶಾಲಿ ಎನಿಸಿಕೊಂಡಿದ್ದಾರೆ. ಅಂದ ಹಾಗೆ ಓಜಾ 8 ನೇ ತರಗತಿಯಲ್ಲಿ ಫೇಲ್​, ಹಾಗೂ ಕಾರ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಾನೆ. ಕ್ರಿಕೆಟ್​ನ ಗಂಧ ಗಾಳಿ ಗೊತ್ತಿಲ್ಲ.

ಕ್ರಿಕೆಟ್ ಬಗ್ಗೆ ನನಗೆ ಏನೂ ತಿಳಿದಿಲ್ಲ ಎಂಬುದಾಗಿ ಓಜಾ ಹೇಳಿದ್ದಾನೆ. ನನಗೆ ಬೇರೆ ಕೆಲಸವಿಲ್ಲದ ಕಾರಣ ಆಕಸ್ಮಿಕವಾಗಿ ತಂಡವನ್ನು ಆಯ್ಕೆ ಮಾಡಿದೆ ಎಂದಿದ್ದಾನೆ. “ನನಗೆ ತುಂಬಾ ಸಂತೋಷವಾಯಿತು. ನಂಬಲಾಗಲಿಲ್ಲ. ಆರಂಭದಲ್ಲಿ ಇದು ವಂಚನೆ ಎಂದು ಭಾವಿಸಿದೆ. ಅಪ್ಲಿಕೇಶನ್ ಗಳಲ್ಲಿ ಎಂದಿಗೂ ಹಣ ಬರುವುದಿಲ್ಲ ಎಂದು ನಂಬಿದ್ದೆ .ನಾನು ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತೇನೆ. ನಡುವೆ ನಾನು ಕಳೆದ ಆರು ತಿಂಗಳಿನಿಂದ ಫ್ಯಾಂಟಸಿ ಗೇಮಿಂಗ್ ಆಡುತ್ತಿದ್ದೇನೆ. ಭಾನುವಾರ, ನನಗೆ ಯಾವುದೇ ಕೆಲಸವಿರಲಿಲ್ಲ. ಹೀಗಾಗಿ ತಂಡವನ್ನು ರಚಿಸಿದೆ. ಇದು ಕೆಕೆಆರ್ ಮತ್ತು ಆರ್​​ಸಿಬಿ ನಡುವಿನ ಪಂದ್ಯ ಎಂದು ಎಂದು ಓಜಾ ಹೇಳಿದ್ದಾನೆ.

ಇದನ್ನೂ ಓದಿ: Mohammad Rizwan : ಪಾಕ್​ ಬ್ಯಾಟರ್​ನನ್ನು ಬ್ರಾಡ್ಮನ್ ಎಂದು ಹೊಗಳಿದ ನಾಯಕ; ಗೊಳ್ಳೆಂದು ನಗುತ್ತಿರುವ ನೆಟ್ಟಿಗರು!

ಸಿಕ್ಕಿರುವ ದುಡ್ಡನ್ನು ಏನು ಮಾಡಬೇಕೆಂದು ಆತ ಇನ್ನೂ ನಿರ್ಧರಿಸಿಲ್ಲವಂತೆ. ಅಂದ ಹಾಗೆ ಫ್ಯಾಂಟಿಸಿ ಗೇಮ್​ಗಳು ಲೀಗ್​ ಕ್ರಿಕೆಟ್​ ಬೆಳವಣಿಗೆ ಬಳಿಕ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕ್ರಿಕೆಟ್​ ನೋಡುವ ಜತೆಗೆ ಆಟ ಆರಂಭಕ್ಕೆ ಮೊದಲು ತಂಡಗಳನ್ನು ರಚಿಸಿ ಬಹುಮಾನಗಳನ್ನು ಗೆಲ್ಲುತ್ತಿದ್ದಾರೆ. ಫ್ಯಾಂಟಸಿ ಗೇಮ್​ಗಳು ಒಂದರ್ಥದಲ್ಲಿ ಬದಲಾದ ಜಗತ್ತಿನಲ್ಲಿ ಹೊಸ ಸ್ಪರ್ಧಾ ವೇದಿಕೆಯಾಗಿದೆ. ಆದರೆ, ಅಪಾಯಕಾರಿಯೂ ಹೌದು. ಆ್ಯಪ್​​ಗಳಲ್ಲಿ ಆಡುವಾಗ ಅದಕ್ಕಾಗಿ ನಿರ್ದಿಷ್ಟ ಮೊತ್ತವನ್ನು ಕಷ್ಟಬೇಕಾಗುತ್ತದೆ. ಒಂದರ್ಥದಲ್ಲಿ ಕಾನೂನುಬದ್ಧ ಜೂಜು. ಹಣದಾಸೆಗೆ ಬೀಳುವ ಕೆಲವರು ಇದೇ ವೇದಿಕೆಗಳ ಮೂಲಕ ಲಕ್ಷಾಂತರ ರೂಪಾಯಿ ನಷ್ಟ ಮಾಡಿಕೊಂಡಿದ್ದಾರೆ ಎಂಬ ವರದಿಗಳು ಆಗಿವೆ. ಮದ್ಯಪಾನದ ರೀತಿಯಲ್ಲಿಯೇ ಫ್ಯಾಂಟಸಿ ಗೇಮ್​ಗಳ ಜಾಹೀರಾತು ನೀಡುವಾಗ ಮುಂದಾಗುವ ಅಪಾಯಗಳ ಬಗ್ಗೆಯೂ ಮಾಹಿತಿ ನೀಡಲಾಗುತ್ತದೆ.

Rohit Sharma : ಇಶಾನ್​ ಕಿಶನ್ ಜತೆ ಮಗುವಿನಂತೆ ಕ್ರಿಕೆಟ್​ ಆಡಿದ ರೋಹಿತ್​ ಶರ್ಮಾ

ಐಪಿಎಲ್ 2024 ರಲ್ಲಿ ರಾಜಸ್ಥಾನ್ ರಾಯಲ್ಸ್ (Rajastan Royals ) ಮತ್ತು ಮುಂಬೈ ಇಂಡಿಯನ್ಸ್ (Mumbai Indians ) ನಡುವಿನ ಬಹುನಿರೀಕ್ಷಿತ ಐಪಿಎಲ್​ 2024ರ (IPL 2024) ಮುಖಾಮುಖಿಗೆ ಸಿದ್ಧತೆ ನಡೆಸುವ ವೇಳೆ ರೋಹಿತ್ ಶರ್ಮಾ (Rohit Sharma) ಅವರ ಬ್ಯಾಟಿಂಗ್​ ನೆಟ್ಟಿಗರ ಗಮನ ಸೆಳೆದಿದೆ. ಅವರ ಇಶಾನ್ ಕಿಶನ್​ಗೆ ವಿಕೆಟ್​ಕೀಪಿಂಗ್​ ಅಭ್ಯಾಸ ಮಾಡಲು ಮಕ್ಕಳಂತೆ ಬ್ಯಾಟ್ ಹಿಡಿದು ಬೀಸಿದ ಪ್ರಸಂಗ ನಡೆಯಿತು. ಏಪ್ರಿಲ್ 22 ರ ಸೋಮವಾರ ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಮುಖಾಮುಖಿಗೆ ಮುಂಚಿತವಾಗಿ ಇವರಿಬ್ಬರು ಕ್ಯಾಚಿಂಗ್ ಅಭ್ಯಾಸದಲ್ಲಿ ತೊಡಗಿದ್ದರು. ಅದು ಸಣ್ಣ ಮಕ್ಕಳು ಆಡುವಂತೆ ಕಂಡು ಬಂತು.

ಮುಂಬೈ ಇಂಡಿಯನ್ಸ್ ಟ್ವಿಟರ್ ಹ್ಯಾಂಡಲ್ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ರೋಹಿತ್ ಶರ್ಮಾ ಇಶಾನ್ ಕಿಶನ್ ಅವರ ವಿಕೆಟ್ ಕೀಪಿಂಗ್ ಕೌಶಲವನ್ನು ಹೆಚ್ಚಿಸಲು ಬ್ಯಾಟ್​ನಿಂದ ಸಣ್ಣ ಸಣ್ಣ ಹೊಡೆತಗಳನ್ನು ಹೊಡೆಯುತ್ತಿದ್ದರು. ಅದನ್ನು ಇಶಾನ್​ ಹಿಡಿಯುತ್ತಿದ್ದರು. ಈ ಅಭ್ಯಾಸದಿಂದ ಇಬ್ಬರಿಗೂ ಸಾಕಷ್ಟು ಲಾಭವಾಗುತ್ತದೆ.

ಇಶಾನ್ ರೋಹಿತ್ ಕಡೆಗೆ ಚೆಂಡುಗಳನ್ನು ಎಸೆದಾಗ ಇಬ್ಬರು ಆಟಗಾರರ ನಡುವಿನ ಸ್ನೇಹವು ಸ್ಪಷ್ಟವಾಯಿತು. ರೋಹಿತ್ ಶರ್ಮಾ ಕಿಶನ್​​ಗೆ ಕಡಿಮೆ ಅಂತರ ಕ್ಯಾಚ್​ಗಳನ್ನು ನೀಡುವಲ್ಲಿ ಅತಿ ಹೆಚ್ಚು ಉತ್ಸಾ ಹ ತೋರಿದ್ದರು. ಹಿರಿಯ ಆಟಗಾರರು ಯುವ ಪ್ರತಿಭೆಗಳಿಗೆ ಮಾರ್ಗದರ್ಶನ ನೀಡುವ ಇಂತಹ ನಿದರ್ಶನಗಳು ಮುಂಬೈ ಇಂಡಿಯನ್ಸ್ ನಂಥ ತಂಡಗಳಲ್ಲಿ ಮಾತ್ರ ಕಾಣಿಸುತ್ತದೆ. ಉಳಿದಂತೆ ತರಬೇತುದಾರರು ಹಾಗೂ ಸಹಾಯಕ ಸಿಬ್ಬಂದಿ ಇಂಥದ್ದಕ್ಕೆಲ್ಲ ನೆರವಾಗುತ್ತಾರೆ.

Continue Reading

ವಿಜ್ಞಾನ

Zero Shadow Day: ನಾಳೆ ಬೆಂಗಳೂರಿನಲ್ಲಿ ನೆರಳೇ ಮೂಡುವುದಿಲ್ಲ; ಅದ್ಯಾಕೆ? ಏನಿದು ʼಶೂನ್ಯ ನೆರಳಿನ ದಿನʼ ?

Zero Shadow Day: ಎಲ್ಲರೂ ನಮ್ಮನ್ನು ತೊರೆದರೂ ನೆರಳು ಯಾವತ್ತೂ ನಮ್ಮನ್ನು ಬಿಟ್ಟು ಹೋಗುವುದಿಲ್ಲ ಎನ್ನುವ ಮಾತಿದೆ. ಆದರೆ ಈ ಮಾತು ನಾಳೆ ಕೆಲವು ನಿಮಿಷಗಳ ಮಟ್ಟಿಗೆ ಬೆಂಗಳೂರಿಗರ ಪಾಲಿಗೆ ಸುಳ್ಳಾಗಲಿದೆ. ಅಂದರೆ ಮಧ್ಯಾಹ್ನ ನೆರಳೇ ಮೂಡುವುದಿಲ್ಲ. ಇದನ್ನು ʼಶೂನ್ಯ ನೆರಳಿನ ದಿನʼ ಎನ್ನುತ್ತಾರೆ. ಇದು ಯಾಕೆ ಸಂಭವಿಸುತ್ತದೆ? ಏನಿದರ ವೈಶಿಷ್ಟ್ಯ? ಮುಂತಾದ ವಿವರ ಇಲ್ಲಿದೆ.

VISTARANEWS.COM


on

Zero Shadow Day
Koo

ಬೆಂಗಳೂರು: ನಾಳೆ (ಏಪ್ರಿಲ್‌ 24) ಬೆಂಗಳೂರಿಗರು ವಿಶಿಷ್ಟ ವಿದ್ಯಾಮಾನವೊಂದಕ್ಕೆ ಸಾಕ್ಷಿಯಾಗಲಿದ್ದಾರೆ. ಪ್ರತಿ ಕ್ಷಣವೂ ನಿಮ್ಮೊಂದಿಗೆ ಇರುವ ನೆರಳು ಕೆಲ ಹೊತ್ತು ನಿಮ್ಮನ್ನು ಬಿಟ್ಟು ದೂರ ಹೋಗಲಿದೆ. ಅಂದರೆ ಯಾವುದೇ ಲಂಬ ವಸ್ತುವೂ ನೆರಳನ್ನು ಹೊಂದಿರುವುದಿಲ್ಲ! ಇದನ್ನೇ ʼಶೂನ್ಯ ನೆರಳಿನ ದಿನʼ (Zero Shadow Day) ಎಂದು ಕರೆಯುತ್ತಾರೆ. ಇದು ಹೇಗೆ ರೂಪುಗೊಳ್ಳುತ್ತದೆ? ಏನಿದರ ವೈಶಿಷ್ಟ್ಯ ? ಮುಂತಾದ ನಿಮ್ಮ ಕುತೂಹಲಗಳಿಗೆ ಇಲ್ಲಿದೆ ಉತ್ತರ.

ಮಧ್ಯಾಹ್ನ 12.17ರಿಂದ 12.23ರ ನಡುವೆ ಈ ವಿದ್ಯಾಮಾನ ಸಂಭವಿಸಲಿದ್ದು, ಈ ವೇಳೆ ಸೂರ್ಯನ ಸ್ಥಾನವು ನಿಖರವಾಗಿ ಉತ್ತುಂಗದಲ್ಲಿರುತ್ತದೆ. ಹೀಗಾಗಿ ಎಲ್ಲ ವಸ್ತುಗಳ ನೆರಳು ಕಣ್ಮರೆಯಾಗುತ್ತದೆ. ಬೆಂಗಳೂರಿನ ಕೋರಮಂಗಲದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (IIA) ಈ ಸಂದರ್ಭಕ್ಕಾಗಿ ತನ್ನ ಕ್ಯಾಂಪಸ್‌ನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿದೆ.

ಏನಿದು ʼಶೂನ್ಯ ನೆರಳಿನ ದಿನʼ ?

ಸೂರ್ಯನು ಮಧ್ಯಾಹ್ನ ನಡು ನೆತ್ತಿಯ ಮೇಲಿರುವಾಗ ಲಂಬವಾಗಿರುವ ವಸ್ತುವಿಗೆ ಸ್ವಲ್ಪ ಮಾತ್ರವಾದರೂ ನೆರಳು ಇದ್ದೇ ಇರುತ್ತದೆ. ಆದರೆ ನಾಳೆ ಅಂಥ ಯಾವುದೇ ನೆರಳು ಇರುವುದಿಲ್ಲ. ಉಷ್ಣವಲಯದ ಸ್ಥಳಗಳಲ್ಲಿ (ಕರ್ಕಾಟಕ ಸಂಕ್ರಾಂತಿ ಮತ್ತು ಮಕರ ಸಂಕ್ರಾಂತಿಯ ನಡುವೆ) ವರ್ಷಕ್ಕೆ ಎರಡು ಬಾರಿ ಶೂನ್ಯ ನೆರಳು ದಿನ ಸಂಭವಿಸುತ್ತದೆ.

ಸೂರ್ಯನ ಸುತ್ತ ಭೂಮಿಯ ಪರಿಭ್ರಮಣೆಯ ಅಕ್ಷವು ತನ್ನ ಸಮತಲದಿಂದ 23.5 ಡಿಗ್ರಿಗಳಷ್ಟು ಬಾಗಿದೆ. ಇದರಿಂದ ವಿವಿಧ ಋತುಗಳು ಸಂಭವಿಸುತ್ತವೆ. ಇದರಿಂದಾಗಿ ಸೂರ್ಯನು ದಿನದ ಅತ್ಯುನ್ನತ ಬಿಂದುವಿನಲ್ಲಿರುವಾಗ, ಉತ್ತರಾಯಣದಲ್ಲಿ ಆಕಾಶ ಸಮಭಾಜಕದ ದಕ್ಷಿಣದ 23.5 ಡಿಗ್ರಿಗಳಿಂದ ಸಮಭಾಜಕದ ಉತ್ತರಕ್ಕೆ 23.5 ಡಿಗ್ರಿಗಳಿಗೆ ಚಲಿಸುತ್ತಾನೆ ಮತ್ತು ದಕ್ಷಿಣಾಯನದಲ್ಲಿ ಇದರ ವಿರುದ್ಧಕ್ಕೆ ಚಲಿಸುತ್ತಾನೆ. ಈ ಪರಿಭ್ರಮಣ ಚಲನೆಯಿಂದಾಗಿ, ಒಂದು ಶೂನ್ಯ ನೆರಳು ದಿನವು ಉತ್ತರಾಯಣದಲ್ಲಿ (ಸೂರ್ಯ ಉತ್ತರದ ಕಡೆಗೆ ಚಲಿಸುವಾಗ) ಬರುತ್ತದೆ ಮತ್ತು ಇನ್ನೊಂದು ದಕ್ಷಿಣಾಯನದಲ್ಲಿ (ಸೂರ್ಯನು ದಕ್ಷಿಣಕ್ಕೆ ಚಲಿಸುವಾಗ) ಬರುತ್ತದೆ. 23.5 ಡಿಗ್ರಿ ಉತ್ತರ ಮತ್ತು 23.5 ಡಿಗ್ರಿ ದಕ್ಷಿಣ ಅಕ್ಷಾಂಶಗಳ ನಡುವೆ ವಾಸಿಸುವ ಜನರಿಗೆ, ಸೂರ್ಯನ ಅವನತಿಯು ಅವರ ಅಕ್ಷಾಂಶಕ್ಕೆ ಎರಡು ಬಾರಿ ಸಮನಾಗಿರುತ್ತದೆ.

ಮಹತ್ವ

ಇದು ಸೂರ್ಯನ ನಿಖರವಾದ ಸ್ಥಾನವನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ. ಜತೆಗೆ ವಿಜ್ಞಾನಿ ಮತ್ತು ಖಗೋಳಶಾಸ್ತ್ರಜ್ಞರಿಗೆ ಸೂರ್ಯನ ಬೆಳಕಿನ ನಡವಳಿಕೆ ಮತ್ತು ಭೂಮಿಯ ವಾತಾವರಣದ ಮೇಲೆ ಅದು ಬೀರುವ ಪರಿಣಾಮಗಳ ಬಗ್ಗೆ ಸಂಶೋಧನೆ ನಡೆಸಲು ಅವಕಾಶವನ್ನು ಕಲ್ಪಿಸುತ್ತದೆ. ಸಾಮಾನ್ಯವಾಗಿ ಶೂನ್ಯ ನೆರಳು ಸುಮಾರು ಒಂದೂವರೆ ನಿಮಿಷ ಕಾಲ ಅನುಭವಕ್ಕೆ ಬರುತ್ತದೆ.

ಎಲ್ಲೆಲ್ಲಿ , ಯಾವಾಗ?

ಶೂನ್ಯ ನೆರಳಿನ ದಿನ ದೇಶದ ವಿವಿಧ ನಗರಗಳಲ್ಲಿ ವರ್ಷದಲ್ಲಿ ಎರಡು ಬಾರು ಅನುಭವಕ್ಕೆ ಬರುತ್ತದೆ. ಅದು ಯಾವಾಗ ಎನ್ನುವ ವಿವರ ಇಲ್ಲಿದೆ.

  • ಕನ್ಯಾಕುಮಾರಿ: ಏಪ್ರಿಲ್ 10 ಮತ್ತು ಸೆಪ್ಟೆಂಬರ್ 1 (ಮಧ್ಯಾಹ್ನ: 12.21, 12.22)
  • ಬೆಂಗಳೂರು: ಏಪ್ರಿಲ್ 24 ಮತ್ತು ಆಗಸ್ಟ್ 18 (ಮಧ್ಯಾಹ್ನ: 12.17, 12.25)
  • ಹೈದರಾಬಾದ್: ಮೇ 9 ಮತ್ತು ಆಗಸ್ಟ್ 5 (ಮಧ್ಯಾಹ್ನ: 12.12, 12.19)
  • ಮುಂಬೈ: ಮೇ 15 ಮತ್ತು ಜೂನ್ 27 (ಮಧ್ಯಾಹ್ನ: 12.34, 12.45)
  • ಭೋಪಾಲ್: ಜೂನ್ 13 ಮತ್ತು ಜೂನ್ 28 (ಮಧ್ಯಾಹ್ನ: 12.20, 12.23)

ಇದನ್ನೂ ಓದಿ: Chandrayaan-3 mission: ಇಸ್ರೋದ ಚಂದ್ರಯಾನ-3 ಟೀಮ್‌ಗೆ ಅಮೆರಿಕದ ಪ್ರಶಸ್ತಿ: ʼಸ್ಫೂರ್ತಿʼ ಎಂದ ಸ್ಪೇಸ್‌ ಫೌಂಡೇಶನ್

Continue Reading

ಕ್ರೀಡೆ

Mohammad Rizwan : ಪಾಕ್​ ಬ್ಯಾಟರ್​ನನ್ನು ಬ್ರಾಡ್ಮನ್ ಎಂದು ಹೊಗಳಿದ ನಾಯಕ; ಗೊಳ್ಳೆಂದು ನಗುತ್ತಿರುವ ನೆಟ್ಟಿಗರು!

Mohammad Rizwan: ಮೊಹಮ್ಮದ್ ರಿಜ್ವಾನ್, ಟಿ20 ಐನಲ್ಲಿ ವೇಗವಾಗಿ 3000 ರನ್ ಗಳಿಸಿದ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಹಾದಿಯಲ್ಲಿ ಅವರು ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ರಿಜ್ವಾನ್ 2 92 ನೇ ಟಿ 20 ಅಂತರರಾಷ್ಟ್ರೀಯ ಪಂದ್ಯ ಮತ್ತು 79 ನೇ ಇನ್ನಿಂಗ್ಸ್​ನಲ್ಲಿ ಈ ವೈಯಕ್ತಿಕ ಮೈಲಿಗಲ್ಲನ್ನು ತಲುಪಿದ್ದಾರೆ. 81 ಇನ್ನಿಂಗ್ಸ್​​ಗಳಲ್ಲಿ 3000 ಟಿ 20 ರನ್ ಗಳಿಸಿದ ವೈಟ್-ಬಾಲ್ ನಾಯಕ ಬಾಬರ್ ಅಜಮ್ ಅವರನ್ನೂ 31 ವರ್ಷದ ಆಟಗಾರ ಹಿಂದಿಕ್ಕಿದ್ದಾರೆ.

VISTARANEWS.COM


on

Mohammad Rizwan
Koo

ಬೆಂಗಳೂರು: ಪಾಕಿಸ್ತಾನದ ಮಾಜಿ ಟಿ 20 ಐ ಮಾಜಿ ನಾಯಕ ಹಾಗೂ ವೇಗದ ಬೌಲರ್​​ ಶಾಹೀನ್ ಅಫ್ರಿದಿ ತಂಡದ ಸಹ ಆಟಗಾರ ಮೊಹಮ್ಮದ್ ರಿಜ್ವಾನ್ ಅವರನ್ನು ಟಿ 20 ಕ್ರಿಕೆಟ್ನ ಬ್ರಾಡ್ಮನ್ ಎಂದು ಹೊಗಳಿರುವುದು ನೆಟ್ಟಿಗರ ಪಾಲಿಗೆ ತಮಾಷೆಯ ಸುದ್ದಿಯಾಗಿ ಪರಿವರ್ತನೆಗೊಂಡಿದೆ. ಸೋಶೀಯಲ್​ ಮೀಡಿಯಾಗಳಲ್ಲಿ ಇದನ್ನು ವರ್ಷದ ಜೋಕ್ ಎಂದರೆ ಕರೆದರೆ ಕೆಲವರು ಬಿದ್ದು ಬಿದ್ದು ನಗುತ್ತಿದ್ದಾರೆ.

ಏಪ್ರಿಲ್ 21 ರಂದು ನ್ಯೂಜಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ 20 ಐ ಸರಣಿಯ 3 ನೇ ಪಂದ್ಯದಲ್ಲಿ ರಿಜ್ವಾನ್ ಕ್ರಿಕೆಟ್​ ಚುಟುಕು ಸ್ವರೂಪದಲ್ಲಿ 3000 ರನ್ ಪೂರೈಸಿದ್ದಾರೆ. ಹೀಗಾಗಿ ಅಫ್ರಿದಿ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಭಯಂಕರ ಹೇಳಿಕೆ ನೀಡಿದ್ದಾರೆ. ರಾವಲ್ಪಿಂಡಿ ಕ್ರೀಡಾಂಗಣದಲ್ಲಿ ನಡೆದ 2ನೇ ಟಿ 20 ಪಂದ್ಯದಲ್ಲಿ ಪಾಕ್ ತಂಡ ಗೆದ್ದಿತ್ತು. ಆದರೆ, 3ನೇ ಪಂದ್ಯವನ್ನು 7 ವಿಕೆಟ್​ಗಳಿಂದ ಕಳೆದುಕೊಂಡಿತ್ತು.

“ಟಿ20 ಕ್ರಿಕೆಟ್​ನ ಬ್ರಾಡ್ಮನ್ ಮತ್ತು ಟಿ 20ಐನಲ್ಲಿ 3,000 ರನ್ ಗಳಿಸಿದ ಪಾಕಿಸ್ತಾನದ ಸೂಪರ್​ಮ್ಯಾನ್​ ಮೊಹಮ್ಮದ್ ರಿಜ್ವಾನ್ ಅವರಿಗೆ ಅಭಿನಂದನೆಗಳು! 🏏🌟 ನಿಮ್ಮ ಪ್ರಭಾವವು ಆಟದ ರೀತಿಯನ್ನು ಪರಿವರ್ತಿಸಿದೆ ಮತ್ತು ಟೀಕಾಕಾರರನ್ನು ಮೌನಗೊಳಿಸಿದೆ. ಬೆಳೆಯುತ್ತಲೇ ಇರಿ, ಚಾಂಪಿಯನ್! ನೀವು ಅನೇಕರಿಗೆ ಸ್ಫೂರ್ತಿಯಾಗಿದ್ದೀರಿ” ಎಂದು ಶಾಹೀನ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ. ಈ ಪೋಸ್ಟ್​​ ತಮಾಷೆಯ ಸಂಗತಿಯಾಗಿ ಮಾರ್ಪಟ್ಟಿದೆ.

ಮೊಹಮ್ಮದ್ ರಿಜ್ವಾನ್, ಟಿ20 ಐನಲ್ಲಿ ವೇಗವಾಗಿ 3000 ರನ್ ಗಳಿಸಿದ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಹಾದಿಯಲ್ಲಿ ಅವರು ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ರಿಜ್ವಾನ್ 2 92 ನೇ ಟಿ 20 ಅಂತರರಾಷ್ಟ್ರೀಯ ಪಂದ್ಯ ಮತ್ತು 79 ನೇ ಇನ್ನಿಂಗ್ಸ್​ನಲ್ಲಿ ಈ ವೈಯಕ್ತಿಕ ಮೈಲಿಗಲ್ಲನ್ನು ತಲುಪಿದ್ದಾರೆ. 81 ಇನ್ನಿಂಗ್ಸ್​​ಗಳಲ್ಲಿ 3000 ಟಿ 20 ರನ್ ಗಳಿಸಿದ ವೈಟ್-ಬಾಲ್ ನಾಯಕ ಬಾಬರ್ ಅಜಮ್ ಅವರನ್ನೂ 31 ವರ್ಷದ ಆಟಗಾರ ಹಿಂದಿಕ್ಕಿದ್ದಾರೆ.

ರೆಕಾರ್ಡ್​ ಮಾತ್ರ, ಗೆಲುವು ಇಲ್ಲ

ಮೊಹಮ್ಮದ್ ರಿಜ್ವಾನ್ ಮತ್ತು ಪಾಕಿಸ್ತಾನ ಇಬ್ಬರಿಗೂ ರಾತ್ರಿ ಅಂತಿಮವಾಗಿ ಉತ್ತಮವಾಗಿ ಕೊನೆಗೊಳ್ಳಲಿಲ್ಲ. ವಿಕೆಟ್ ಕೀಪರ್ ಬ್ಯಾಟ್ಸ್ಮನ್ ತಮ್ಮ 3000 ನೇ ಟಿ 20 ರನ್ ತಲುಪಿದ ಕೂಡಲೇ ಗಾಯಗೊಂಡರು. ಪಾಕಿಸ್ತಾನ 178 ರನ್ ಗಳಿಸಿದ್ದ ಮೊದಲ ಇನಿಂಗ್ಸ್​​ನಲ್ಲಿ 21 ಎಸೆತಗಳಲ್ಲಿ 22 ರನ್ ಗಳಿಸಿದ ನಂತರ ರಿಜ್ವಾನ್ ಡ್ರೆಸ್ಸಿಂಗ್ ರೂಮ್​ಗೆ ಮರಳಿದರು. ಪ್ರತಿಯಾಗಿ ಆಡಿದ ಮೈಕೆಲ್ ಬ್ರೇಸ್ವೆಲ್ ನೇತೃತ್ವದ ನ್ಯೂಜಿಲ್ಯಾಂಡ್ ತಂಡ 19 ನೇ ಓವರ್​ನ ಎರಡನೇ ಎಸೆತದಲ್ಲಿ ಮೊತ್ತವನ್ನು ಯಶಸ್ವಿಯಾಗಿ ಬೆನ್ನಟ್ಟಿ ಸರಣಿಯನ್ನು 1-1 ರಿಂದ ಸಮಬಲಗೊಳಿಸಿತು.

ಇದನ್ನೂ ಓದಿ : Suresh Raina : ಧೋನಿ ನೇತೃತ್ವದಲ್ಲಿ ವಿಶ್ವ ಕಪ್ ಗೆದ್ದಿರುವುದು ಪೂರ್ವ ನಿಯೋಜಿತ; ಸ್ಫೋಟಕ ಮಾಹಿತಿ ಬಹಿರಂಗ ಮಾಡಿದ ರೈನಾ!

ರಿಜ್ವಾನ್ ತನ್ನ ವೃತ್ತಿಜೀವನದಲ್ಲಿ ಬ್ರಾಡ್ಮನ್ ಹೊಂದಿದ್ದ ಸರಾಸರಿಗೆ ಹತ್ತಿರದಲ್ಲಿಯೂ ಇಲ್ಲ. ಹಾಗಿರುವಾಗ ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳು ಶಾಹೀನ್ ಅವರನ್ನು ಪ್ರಶ್ನಿಸಿದ್ದಾರೆ. ರಿಜ್ವಾನ್​ ಅವರನ್ನು ಬ್ರಾಡ್ಮನ್ ಎಂದು ಕರೆಯಲು ಹೇಗೆ ಸಾಧ್ಯ ಎಂದ ಪ್ರಶ್ನಿಸಿದ್ದಾರೆ.

ಬಾಬರ್ ಅಜಮ್ ಅವರನ್ನು ಮತ್ತೆ ನೇಮಕ ಮಾಡಲು ಪಿಸಿಬಿ ಕಳೆದ ತಿಂಗಳು ಅವರನ್ನು ನಾಯಕತ್ವದಿಂದ ವಜಾಗೊಳಿಸಿದ ನಂತರ ಕೆಲವು ಅಭಿಮಾನಿಗಳು ಅವರ ಮಾನಸಿಕ ಸ್ಥಿರತೆಯ ಬಗ್ಗೆ ಪ್ರಶ್ನೆ ಕೇಳುತ್ತಿದ್ದಾರೆ. ಹೀಗಾಗಿಯೇ ಶಾಹೀನ್ ರಿಜ್ವಾನ್ ಅವರನ್ನು ಟಿ 20 ಕ್ರಿಕೆಟ್​​ ಬ್ರಾಡ್ಮನ್ ಎಂದು ಕರೆದಿದ್ದಾರೆ ಎಂದು ಹೇಳಲಾಗುತ್ತಿದೆ.

Continue Reading
Advertisement
The Legend of Hanuman
ಸಿನಿಮಾ7 mins ago

The Legend of Hanuman: ಹನುಮ ಜಯಂತಿಯಂದೇ ‘ದಿ ಲೆಜೆಂಡ್ ಆಫ್ ಹನುಮಾನ್’ ಸೀಸನ್ 4 ಘೋಷಣೆ

HD Kumaraswamy challenges Congress to give Cauvery guarantee to Mandya
Lok Sabha Election 202414 mins ago

HD Kumaraswamy: ಜನರ ಕಣ್ಣಿಗೆ ಮಣ್ಣೆರಚಬೇಡಿ; ಮಂಡ್ಯಕ್ಕೆ ಕಾವೇರಿ ಗ್ಯಾರಂಟಿ ಕೊಡಿ: ಕಾಂಗ್ರೆಸ್‌ಗೆ ಎಚ್‌ಡಿಕೆ ಸವಾಲು

Fantasy Gaming
ಕ್ರೀಡೆ34 mins ago

Fantasy Gaming : 8ನೇ ಕ್ಲಾಸ್​ ಫೇಲ್​, ಕ್ರಿಕೆಟ್​ ಗೊತ್ತಿಲ್ಲ; ಆದ್ರೂ ಒಲಿಯಿತು ಕ್ರಿಕೆಟ್​ ಫ್ಯಾಂಟಸಿ ಗೇಮ್​ನಲ್ಲಿ 1.5 ಕೋಟಿ ರೂ!

Shivasharane Akkamahadevi Jayanti Celebration and Shivanubhava programme at Soraba
ಶಿವಮೊಗ್ಗ34 mins ago

Shivamogga News: ಶಿವಶರಣೆ ಅಕ್ಕಮಹಾದೇವಿ ವಿಚಾರಧಾರೆ, ಚಿಂತನೆ ಸರ್ವಕಾಲಕ್ಕೂ ಪ್ರಸ್ತುತ: ಶ್ರೀ ಸಿದ್ದ ವೃಷಭೇಂದ್ರ ಸ್ವಾಮೀಜಿ

World Book and Copyright Day celebration at Kottur
ವಿಜಯನಗರ36 mins ago

Vijayanagara News: ಕೊಟ್ಟೂರಿನಲ್ಲಿ ವಿಶ್ವ ಪುಸ್ತಕ, ಕೃತಿ ಸ್ವಾಮ್ಯ ದಿನ ಆಚರಣೆ

Minister Sharanbassappa Gowda Darshanpur Election campaign
ಯಾದಗಿರಿ37 mins ago

Lok Sabha Election 2024: ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿಯನ್ನು ಗೆಲ್ಲಿಸಿ: ಸಚಿವ ದರ್ಶನಾಪುರ

Viral News
ವೈರಲ್ ನ್ಯೂಸ್40 mins ago

Viral News: ರಾಮನ ಚಿತ್ರವಿರುವ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ; ಅಂಗಡಿ ಮಾಲೀಕ ಅರೆಸ್ಟ್‌

DK ShivaKumar
ಕರ್ನಾಟಕ49 mins ago

DK Shivakumar: ಮತದಾರರಿಗೆ ಬೆದರಿಕೆ ಪ್ರಕರಣ; ಎಫ್ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಡಿಕೆಶಿ ಅರ್ಜಿ

Zero Shadow Day
ವಿಜ್ಞಾನ60 mins ago

Zero Shadow Day: ನಾಳೆ ಬೆಂಗಳೂರಿನಲ್ಲಿ ನೆರಳೇ ಮೂಡುವುದಿಲ್ಲ; ಅದ್ಯಾಕೆ? ಏನಿದು ʼಶೂನ್ಯ ನೆರಳಿನ ದಿನʼ ?

Mohammad Rizwan
ಕ್ರೀಡೆ1 hour ago

Mohammad Rizwan : ಪಾಕ್​ ಬ್ಯಾಟರ್​ನನ್ನು ಬ್ರಾಡ್ಮನ್ ಎಂದು ಹೊಗಳಿದ ನಾಯಕ; ಗೊಳ್ಳೆಂದು ನಗುತ್ತಿರುವ ನೆಟ್ಟಿಗರು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ15 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು1 day ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ1 day ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌