horoscope today read your daily horoscope predictions for may 28, 2023Horoscope Today : ವಾರದ ರಜೆಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ - Vistara News

ಪ್ರಮುಖ ಸುದ್ದಿ

Horoscope Today : ವಾರದ ರಜೆಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಅಷ್ಟಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (28-05-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.

ತಿಥಿ: ಅಷ್ಟಮಿ 09:56 ವಾರ: ಭಾನುವಾರ
ನಕ್ಷತ್ರ: ಹುಬ್ಬಾ 26:19 ಯೋಗ: ಹರ್ಷಣ 20:37
ಕರಣ: ಭವ 09:56 ಇಂದಿನ ವಿಶೇಷ: ಶುಕ್ಲಾದೇವಿ ಪೂಜೆ
ಅಮೃತಕಾಲ: ಸಂಜೆ 07 ಗಂಟೆ 14 ನಿಮಿಷದಿಂದ ರಾತ್ರಿ 09 ಗಂಟೆ 01ನಿಮಿಷದವರೆಗೆ.

ಸೂರ್ಯೋದಯ : 05:52 ಸೂರ್ಯಾಸ್ತ : 06:41

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ : ಭರವಸೆಯ ಹೊಸ ಅವಕಾಶಗಳು ಸಿಗುವ ಸಾಧ್ಯತೆ. ಹಣಗಳಿಸುವ ವಿವಿಧ ಮಾರ್ಗಗಳು ನಿಮ್ಮ ಗಮನಕ್ಕೆ ಬರಲಿವೆ. ಅನಗತ್ಯವಾಗಿ ಇತರರ ಬಗ್ಗೆ ಮನೆಯಲ್ಲಿ ಚರ್ಚಿಸುವುದು ಬೇಡ. ಇದರಿಂದ ಮನೆಯ ವಾತಾವರಣ ಕೆಡುವ ಸಾಧ್ಯತೆ. ಉದ್ಯೋಗ ಹಾಗೂ ಆರೋಗ್ಯದಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ವೃಷಭ: ಗತಿಸಿದ ಘಟನೆಗಳ ಬಗ್ಗೆ ಚಿಂತಿಸಿ, ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಸಾಧ್ಯವಾದಷ್ಟು ತಾಳ್ಮೆಯಿಂದ ಇರಿ. ಭೂಮಿ, ಆಸ್ತಿ ಖರೀದಿ ವ್ಯವಹಾರದಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಖರ್ಚು ಹೆಚ್ಚಾಗಲಿದೆ. ಆರೋಗ್ಯ ಹಾಗೂ ಉದ್ಯೋಗದಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಅನಿವಾರ್ಯವಾಗಿ ಖರ್ಚು. ಪ್ರಯಾಣ ಮಾಡುವ ಸಾಧ್ಯತೆ. ಕುಟುಂಬದಲ್ಲಿ ಯಾವುದೋ ವಿಷಯಕ್ಕೆ ಪರಸ್ಪರರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ. ತಾಳ್ಮೆಯಿಂದ ವರ್ತಿಸಿ. ಅರ್ಹ ನೌಕರರಿಗೆ ಇಂದು ಉದ್ಯೋಗದಲ್ಲಿ ಬಡ್ತಿ ಹೊಂದುವ ಅವಕಾಶ ಕೂಡಿ ಬರಲಿದೆ. ಆರೋಗ್ಯ ಉತ್ತಮ, ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಕಟಕ: ಹಳೆಯ ವಿಚಾರಗಳನ್ನು ಕೆದಕಿ ಮನಸ್ಸಿಗೆ ಘಾಸಿ ಮಾಡಿಕೊಳ್ಳುವುದು ಬೇಡ. ಮನರಂಜನೆಗಾಗಿ ಖರ್ಚು ಮಾಡುವ ಸಾಧ್ಯತೆ. ಸಭೆ ಸಮಾರಂಭದ ಆಮಂತ್ರಣ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗ ಹಾಗೂ ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಸಿಂಹ: ಇಂದು ನಿಮ್ಮ ಕೆಲಸ ಕಾರ್ಯಗಳಿಗೆ ಇತರರಿಂದ ಪ್ರಶಂಸೆ ವ್ಯಕ್ತವಾಗಲಿದೆ. ಬಾಕಿ ಇರುವ ಸಾಲ ಮರುಪಾವತಿ ಆಗಲಿದೆ. ಆರ್ಥಿಕವಾಗಿ ಲಾಭ. ಹೊಸ ಹೂಡಿಕೆ ವ್ಯವಹಾರಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ: ಹಳೆಯ ವಿಚಾರಗಳು ನಿಮ್ಮನ್ನು ಮಾನಸಿಕ ಕುಂದಿಸುವ ಸಾಧ್ಯತೆ. ವ್ಯರ್ಥ ಯೋಚನೆಗಳು ಬೇಡ. ಆರೋಗ್ಯದಲ್ಲಿ ವ್ಯತ್ಯಾಸ. ಹಣಕಾಸು ವ್ಯವಹಾರ ಉತ್ತಮ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯಲು ಸಮಯದ ಅಭಾವ. ವ್ಯಪಾರ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಕುಟುಂಬದ ಜವಾಬ್ದಾರಿಗಳು ಹೆಚ್ಚಾಗಲಿವೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಆರೋಗ್ಯ ಸಾಧಾರಣ. ಉದ್ಯೋಗಿಗಳಿಗೆ ಒತ್ತಡ, ತಾಳ್ಮೆ ಅತ್ಯವಶ್ಯ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ವೃಶ್ಚಿಕ: ನಕಾರಾತ್ಮಕ ಆಲೋಚನೆಗಳು ಬರದಂತೆ ಸೃಜನಾತ್ಮಕ ಕಾರ್ಯಗಳಲ್ಲಿ ತೊಡಗಿ. ಕುಲ ದೇವತಾ ದರ್ಶನ, ಅಧ್ಯಾತ್ಮ ಗುರುಗಳ ಮಾರ್ಗದರ್ಶನ ಪಡೆಯಿರಿ. ದಿನದ ಮಟ್ಟಿಗೆ ಖರ್ಚು. ಅತಿಥಿಗಳಿಗಳ ಆಗಮನದಿಂದ ಸಂತಸ. ಉದ್ಯೋಗಿಗಳಿಗೆ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ಸಾಮಾಜಿಕ ಜವಾಬ್ದಾರಿಗಳು ಹೆಚ್ಚಾಗಲಿವೆ. ಅದರ ಮಧ್ಯೆಯೂ ಆರೋಗ್ಯದ ಕುರಿತು ಕಾಳಜಿ ವಹಿಸಿ. ಸೌಂದರ್ಯ ಪ್ರಜ್ಞೆ ಮೂಡಲಿದೆ. ಭವಿಷ್ಯದ ಹೂಡಿಕೆಗಗಳ ಬಗ್ಗೆ ಆಲೋಚನೆ. ಉದ್ಯೋಗಿಗಳಿಗೆ ಯಶಸ್ಸು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ವಾಸ್ತು ಪ್ರಕಾರ ಮರ್ಮ ಸ್ಥಾನ ಏಕೆ ಮುಖ್ಯ? ಈ ವಿಡಿಯೋ ನೋಡಿ.
Horoscope Today

ಮಕರ: ಉದ್ವೇಗ ಹೆಚ್ಚಾಗಲಿದೆ. ಆತುರದಲ್ಲಿ ತೆಗೆದುಕೊಂಡ ನಿರ್ಧಾರ ಅಪಾಯ ತರುವುದು. ಕುಟುಂಬದಲ್ಲಿ ಪರಸ್ಪರರ ಮಧ್ಯೆ ಭಿನ್ನಾಭಿಪ್ರಾಯ. ತಂದೆ-ತಾಯಿಗಳ ಆರೋಗ್ಯದಲ್ಲಿ ವ್ಯತ್ಯಾಸ. ದಿನದ ಮಟ್ಟಿಗೆ ಖರ್ಚು. ಮಾತಿನಲ್ಲಿ ಹಿಡಿತವಿರಲಿ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಆರೋಗ್ಯ ಉತ್ತಮ. ಆರ್ಥಿಕ ಹೂಡಿಕೆ ವ್ಯವಹಾರದಲ್ಲಿ ಪ್ರಗತಿ, ಲಾಭ. ವೃತ್ತಿಪರರಿಗೆ ಶುಭ ಫಲ. ಕಾರ್ಯದ ಒತ್ತಡದಿಂದ ಕುಟುಂಬದವರೊಂದಿಗೆ ಕಾಲ ಕಳೆಯಲು ಸಮಯದ ಅಭಾವ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಮಾನಸಿಕ ಆರೋಗ್ಯ ಹದಗೆಡಲಿದೆ. ತಾಳ್ಮೆಯಿಂದ ಇರಿ. ಯಾರದರೂ ಪರ ವಹಿಸಿ ಮಾತನಾಡುವುದು ಬೇಡ. ಇದು ನಿಮಗೆ ಅಪಾಯ ತರುವುದು. ಹಣಕಾಸು ಪ್ರಗತಿ ಸಾಧಾರಣ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುತ್ತದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : ಶುಕ್ರ ಗ್ರಹ ಲಗ್ನದಲ್ಲಿದ್ದರೆ ಉತ್ತಮ ಆರೋಗ್ಯ, ಉಳಿದ ಮನೆಯಲ್ಲಿದ್ದರೆ ಯಾವೆಲ್ಲಾ ಫಲ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

CAA: ಸಿಎಎ ವಿರೋಧಿಸಿ ಸಲ್ಲಿಸಿದ 230ಕ್ಕೂ ಅಧಿಕ ಅರ್ಜಿಗಳ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ

ಕೇಂದ್ರವು ಸಿಎಎ (CAA) ಅಡಿಯಲ್ಲಿ ನಿಯಮಗಳನ್ನು ಹೊರಡಿಸಿದ ಒಂದು ದಿನದ ನಂತರ, ಕೇರಳ ಮೂಲದ ರಾಜಕೀಯ ಪಕ್ಷ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನಿಯಮಗಳ ಅನುಷ್ಠಾನಕ್ಕೆ ತಡೆಯಾಜ್ಞೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

VISTARANEWS.COM


on

Supreme Court
Koo

ಹೊಸದಿಲ್ಲಿ: ಪೌರತ್ವ (ತಿದ್ದುಪಡಿ) ಕಾಯಿದೆಯ (Citizenship amendment Act – CAA) ಸಾಂವಿಧಾನಿಕ ಸಿಂಧುತ್ವವನ್ನು ಹಾಗೂ ಕೋರ್ಟ್‌ ನಿರ್ಧರಿಸುವವರೆಗೆ ಪೌರತ್ವ ತಿದ್ದುಪಡಿ ಕಾಯಿದೆಯ ಅನುಷ್ಠಾನವನ್ನು ತಡೆಯಲು ಕೇಂದ್ರಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾದ 230ಕ್ಕೂ ಅಧಿಕ ಅರ್ಜಿಗಳ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ (Supreme court) ಕೈಗೆತ್ತಿಕೊಳ್ಳಲಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಪರವಾಗಿ ವಾದಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಸಲ್ಲಿಕೆಗಳನ್ನು ಗಮನಿಸಿದೆ. ಒಮ್ಮೆ ವಲಸಿಗ ಹಿಂದೂಗಳಿಗೆ ಭಾರತೀಯ ಪೌರತ್ವವನ್ನು ನೀಡಿದರೆ ಅದನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂಬ ಕಾರಣದಿಂದ ಶೀಘ್ರ ವಿಚಾರಣೆಗಾಗಿ ಒತ್ತಾಯಿಸಲಾಗಿದೆ.

ಸಿಎಎ ಕಾಯಿದೆಯನ್ನು 2019ರಲ್ಲಿ ಸಂಸತ್ತು ಅಂಗೀಕರಿಸಿದೆ. ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಡಿಸೆಂಬರ್ 31, 2014ರ ಮೊದಲು ವಲಸೆ ಬಂದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುವ ಉದ್ದೇಶವನ್ನು ಹೊಂದಿದೆ.

ಕೇಂದ್ರವು ಸಿಎಎ ಅಡಿಯಲ್ಲಿ ನಿಯಮಗಳನ್ನು ಹೊರಡಿಸಿದ ಒಂದು ದಿನದ ನಂತರ, ಕೇರಳ ಮೂಲದ ರಾಜಕೀಯ ಪಕ್ಷ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನಿಯಮಗಳ ಅನುಷ್ಠಾನಕ್ಕೆ ತಡೆಯಾಜ್ಞೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಕಾನೂನನ್ನು ತಡೆಹಿಡಿಯಬೇಕು; ಈ ಕಾನೂನಿನ ಪ್ರಯೋಜನದಿಂದ ವಂಚಿತರಾಗುವ ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿಗಳ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಒತ್ತಾಯಿಸಿದೆ.

IUML ಜೊತೆಗೆ, ಇತರ ಪಕ್ಷಗಳು ಮತ್ತು ವ್ಯಕ್ತಿಗಳಾದ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (DYFI), ಅಸ್ಸಾಂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ದೇಬಬ್ರತ ಸೈಕಾ, ಅಸ್ಸಾಂನ ಕಾಂಗ್ರೆಸ್ ಸಂಸದ ಅಬ್ದುಲ್ ಖಲೀಕ್ ಮತ್ತು ಇತರರು ಸಹ ಅರ್ಜಿಗಳನ್ನು ಸಲ್ಲಿಸಿದ್ದಾರೆ.

2019ರಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ CAA ಅನ್ನು ಪ್ರಶ್ನಿಸಿದ ಆರಂಭಿಕ ಪಕ್ಷಗಳಲ್ಲಿ ಒಂದಾದ IUML, ನಿರ್ದಿಷ್ಟ ದೇಶಗಳಿಂದ ಬಂದ ಮುಸ್ಲಿಮೇತರ ವಲಸಿಗರಿಗೆ ಪೌರತ್ವವನ್ನು ನೀಡುವ ಈ ಕಾನೂನು ʼವೇಗದ ಪ್ರಕ್ರಿಯೆʼಯನ್ನು ಸ್ಥಾಪಿಸುತ್ತಿದೆ. ಇದು ಕೇವಲ ಧಾರ್ಮಿಕ ಗುರುತನ್ನು ಆಧರಿಸಿ ತಾರತಮ್ಯಪೂರಿತವಾದ ಆಡಳಿತವನ್ನು ಜಾರಿಗೊಳಿಸುತ್ತದೆ ಎಂದು ವಾದಿಸಿದೆ.

ಕೇಂದ್ರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಅರ್ಜಿದಾರರ ನಿಲುವನ್ನು ನಿರಾಕರಿಸಿದ್ದಾರೆ. “ಯಾವುದೇ ಅರ್ಜಿದಾರರಿಗೆ ಪೌರತ್ವ ನೀಡುವಿಕೆಯನ್ನು ಪ್ರಶ್ನಿಸಲು ಯಾವುದೇ ಅಧಿಕಾರವಿಲ್ಲ” ಎಂದು ಹೇಳಿದ್ದಾರೆ. ಸಿಎಎ ವಿರುದ್ಧ 237 ಅರ್ಜಿಗಳು ಬಾಕಿ ಉಳಿದಿದ್ದು, ನಿಯಮಗಳ ಅನುಷ್ಠಾನಕ್ಕೆ ತಡೆ ಕೋರಿ ನಾಲ್ಕು ಮಧ್ಯಂತರ ಅರ್ಜಿಗಳಿವೆ.

ಇದನ್ನೂ ಓದಿ: CAA: ಸಿಎಎ ತಡೆ ಕೋರಿದ ಅರ್ಜಿಗಳು ಮಾ.19ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

Continue Reading

ಭವಿಷ್ಯ

Dina Bhavishya : ಈ ರಾಶಿಯವರು ಎಚ್ಚರ ವಹಿಸಿ; ಅಮೂಲ್ಯವಾದ ವಸ್ತುವೊಂದು ಕೈ ತಪ್ಪಬಹುದು

Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷದ ದಶಮಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

dina Bhavishya
Koo

ಚಂದ್ರನು ಕಟಕ ರಾಶಿಯಿಂದ ಮಂಗಳವಾರ ಮಧ್ಯಾಹ್ನ 03:32ಕ್ಕೆ ಸಿಂಹ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ ಹಾಗೂ ಕುಂಭ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಮೇಷ ರಾಶಿಯವರು ನಿಮ್ಮ ಹಾಸ್ಯದ ಮನೋಭಾವನೆ ಇತರರನ್ನು ಆಕರ್ಷಿಸುವುದು. ವೃಷಭ ರಾಶಿಯವರು ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ನಿಮಗೆ ಕೋಪ ತರಿಸಬಹುದು, ಆದರೆ ತಾಳ್ಮೆಯಿಂದ ವರ್ತಿಸಿ. ಈ ಹಿಂದೆ ಕಾಡಿದ ವ್ಯಾಧಿ ಮರುಕಳಿಸುವ ಸಾಧ್ಯತೆ ಇದೆ. ಮಿಥುನ ರಾಶಿಯವರು ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು, ಮುಂದಿನ ಆಗುವ ಕೆಲಸಗಳ ಬಗ್ಗೆ ಕಾರ್ಯ ಪ್ರವೃತ್ತರಾಗಿ. ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಅನೇಕ ವಿಚಾರಗಳಿಂದ ಒತ್ತಡಕ್ಕೆ ಒಳಾಗಾಗುವಿರಿ. ಕೋಪದಿಂದ ಏನನ್ನು ಸಾಧಿಸಲಾಗದು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (19-03-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ.
ತಿಥಿ: ದಶಮಿ 24:21 ವಾರ: ಮಂಗಳವಾರ
ನಕ್ಷತ್ರ: ಪುನರ್ವಸು 20:08 ಯೋಗ: ಶೋಭನ 16:35
ಕರಣ: ತೈತುಲ 11:30 ಅಮೃತ ಕಾಲ: ಸಂಜೆ 05:34ರಿಂದ 07:18 ರವರೆಗೆ
ದಿನದ ವಿಶೇಷ: ನಂಜನಗೂಡಿನ ಶ್ರೀಕಂಠಮುಡಿ ಉತ್ಸವ, ಚನ್ನಬಸವೇಶ್ವರ ರಥ

ಸೂರ್ಯೋದಯ : 6:24   ಸೂರ್ಯಾಸ್ತ : 06:30

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ:ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಹಾಸ್ಯದ ಮನೋಭಾವನೆ ಇತರರನ್ನು ಆಕರ್ಷಿಸುವುದು. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವಿರಿ. ಆಧ್ಯಾತ್ಮ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಷಭ: ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ನಿಮಗೆ ಕೋಪ ತರಿಸಬಹುದು, ಆದರೆ ತಾಳ್ಮೆಯಿಂದ ವರ್ತಿಸಿ. ಈ ಹಿಂದೆ ಕಾಡಿದ ವ್ಯಾಧಿ ಮರುಕಳಿಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಿರಲಿದೆ. ಅತಿಥಿಗಳ ಆಗಮನ ಹರ್ಷ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು, ಮುಂದಿನ ಆಗುವ ಕೆಲಸಗಳ ಬಗ್ಗೆ ಕಾರ್ಯ ಪ್ರವೃತ್ತರಾಗಿ. ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಅನೇಕ ವಿಚಾರಗಳಿಂದ ಒತ್ತಡಕ್ಕೆ ಒಳಾಗಾಗುವಿರಿ. ಕೋಪದಿಂದ ಏನನ್ನು ಸಾಧಿಸಲಾಗದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಹಣದ ಹರಿವು ಹೆಚ್ಚಾಗಲಿದೆ. ಮಾನಸಿಕ ನೆಮ್ಮದಿ ಸಿಗುವುದು. ಹೊಸ ಭರವಸೆಯ ಅವಕಾಶಗಳು ಹುಡುಕಿಕೊಂಡು ಬರಲಿದೆ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಫಲ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಸಿಂಹ: ಕುಟುಂಬದ ಆಪ್ತರ ಹಾಗೂ ಸ್ನೇಹಿತರ ಸೂಕ್ತ ಸಲಹೆ ಸಹಕಾರ ಸಿಗುವುದು. ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ವಿಶ್ರಾಂತಿ ಸಿಗಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ, ಅಗತ್ಯವಿದ್ದಷ್ಟೆ ಮಾತನಾಡಿ, ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತ ಸಂಬಂಧಿಕರಿಂದ ಸಹಾಯ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಣಕಾಸು ಪ್ರಗತಿ ಇರಲಿದೆ. ಹಳೆಯ ವಿಚಾರಗಳು ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗದಲ್ಲಿ ಸಾಧಾರಣ. ಕುಟುಂಬದ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ವಾಹನ ಚಾಲನೆ ಮಾಡುವಾಗ ಆದಷ್ಟು ಎಚ್ಚರಿಕೆ ವಹಿಸಿ. ಆಪ್ತರ ಸಲಹೆಗಳನ್ನು ತಿರಸ್ಕಾರ ಭಾವದಿಂದ ನೋಡಬೇಡಿ, ವ್ಯತಿರಿಕ್ತವಾದ ಪರಿಣಾಮದಿಂದಾಗಿ ಸ್ನೇಹದಲ್ಲಿ ಬಿರುಕು ಮೂಡುವ ಸಾಧ್ಯತೆ ಇದೆ. ಅನಗತ್ಯ ಖರ್ಚು ಇರಲಿದೆ. ಆರೋಗ್ಯ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು: ಅನಿರೀಕ್ಷಿತ ಪ್ರಯಾಣ ಬೆಳೆಸುವಿರಿ. ಆತುರದ ಭರದಲ್ಲಿ ಅತಿರೇಕದ ಮಾತುಗಳು ಜಗಳ ತರಬಹುದು, ಸಮಾಧಾನದಿಂದ ವರ್ತಿಸಿ. ಅಮೂಲ್ಯ ವಸ್ತುಗಳು ಕೈತಪ್ಪುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡದಂತೆ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಕರ: ಆರೋಗ್ಯ ಉತ್ತಮವಾಗಿರಲಿದೆ. ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಭರವಸೆ ಇದೆ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಪ್ರಯತ್ನಿಸುವಿರಿ. ಸಮಾರಂಭದ ಆಮಂತ್ರಣ ಬರುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕುಂಭ: ಆಹಾರದ ಕ್ರಮದಿಂದ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಅಮೂಲ್ಯ ವಸ್ತುಗಳ ಬಗ್ಗೆ ಕಾಳಜಿ ವಹಿಸಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸುವುದರಲ್ಲಿ ಯಶಸ್ಸು ಪಡೆಯುವಿರಿ. ಸಂಗಾತಿಯ ಹಸ್ತಕ್ಷೇಪ ನಿಮಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಭರವಸೆ ಮೂಡಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಬೆಂಗಳೂರು ರೌಡಿಗಳ ಸಾಮ್ರಾಜ್ಯ ಆಗದಿರಲಿ

ರೌಡಿಗಳ ಸಂಖ್ಯೆ ಎಷ್ಟು ಬೆಳೆದಿದೆ ಎಂದರೆ, ಚುನಾವಣೆಗೆ ಮುಂಚಿತವಾಗಿ ರೌಡಿ ಶೀಟರ್‌ಗಳನ್ನು ಠಾಣೆಗೆ ಕರೆತಂದು ಪರೇಡ್‌ ಮಾಡಿಸುವಾಗ ಕಾಣುವ ರೌಡಿಗಳ ಸಂಖ್ಯೆಯನ್ನು ಗಮನಿಸಿದರೆ ಗಾಬರಿಯಾಗುತ್ತದೆ. ಬೆಂಗಳೂರಿನ ಭೂಗತ ಜಗತ್ತು ಮತ್ತೆ ತುಂಬಿ ತುಳುಕುತ್ತಿದೆಯೇ ಎನ್ನುವ ಅನುಮಾನ ಮೂಡುತ್ತಿದೆ.

VISTARANEWS.COM


on

Banaglore incident
Koo

ಬೆಂಗಳೂರಿನ ಅಂಗಡಿಯೊಂದರಲ್ಲಿ ಹನುಮಾನ್‌ ಚಾಲೀಸಾ ಹಾಕಿದ್ದನ್ನು ಪ್ರಶ್ನಿಸಿ ಅನ್ಯಕೋಮಿನ ಯುವಕರು ಮೊಬೈಲ್‌ ಶಾಪ್‌ನಲ್ಲಿದ್ದ ಯುವಕನಿಗೆ ಥಳಿಸಿದ್ದಾರೆ. ಭಾನುವಾರ ಸಂಜೆ ನಡೆದ ಈ ಘಟನೆಯಲ್ಲಿ ಐದಾರು ಯುವಕರ ಗ್ಯಾಂಗ್‌ ನಗರ್ತಪೇಟೆಯಲ್ಲಿರುವ ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಗೆ ಬಂದು, ʼನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದೀಯಾ?ʼ ಎಂದು ತಗಾದೆ ತೆಗೆದು ಮುಖೇಶ್‌ ಎಂಬಾತನನ್ನು ಅಂಗಡಿಯಿಂದ ಹೊರಗೆಳೆದು ನೆಲಕ್ಕೆ ಕೆಡವಿ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಮುಖೇಶ್‌ ಕೂಡಲೇ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಆರಂಭದಲ್ಲಿ ಪೊಲೀಸರು ಎಫ್ಐಆರ್ ಮಾಡಲು ಹಿಂದೇಟು ಹಾಕಿದ್ದರು. ಜನಾಕ್ರೋಶ ಹೆಚ್ಚಾಗುತ್ತಿದ್ದಂತೆ ಪೊಲೀಸರು ಎಫ್‌ಐಆರ್‌ ದಾಖಲಿಸಿ, ಐವರನ್ನು ಬಂಧಿಸಿದ್ದರು. ಇದೀಗ ಬಿಜೆಪಿ ಸಂಸದರು ಮತ್ತಿತರರು ಕೂಡ ಈ ಪ್ರಕರಣದಲ್ಲಿ ಮಧ್ಯೆ ಪ್ರವೇಶಿಸಿದ್ದು, ಪ್ರಕರಣ ತೀವ್ರ ಸ್ವರೂಪ ಪಡೆಯುತ್ತಿದೆ. ನೊಂದ ವ್ಯಕ್ತಿ ದೂರು ನೀಡಿದ ಕೂಡಲೇ ಪೊಲೀಸರು ಕ್ರಮ ಕೈಗೊಂಡಿದ್ದರೆ ಪ್ರಕರಣ ಅಲ್ಲಿಗೇ ಮುಗಿಯುತ್ತಿತ್ತೋ ಏನೋ. ಪೊಲೀಸರು ಕೆರೆದು ಹುಣ್ಣು ಮಾಡಿಕೊಂಡಿದ್ದಾರೆ.

ಇಂಥದೇ ಇನ್ನೊಂದು ಪ್ರಕರಣ 20 ದಿನಗಳ‌ ಹಿಂದೆಯೂ ನಡೆದಿದೆ ಎನ್ನಲಾಗಿದೆ. ಸತೀಶ್‌ ಎಂಬುವರು ನಡೆಸುತ್ತಿದ್ದ ಹೋಟೆಲ್‌ಗೆ ಪುಂಡರು ಬಂದು ಫ್ರೀಯಾಗಿ ಊಟ ಕೇಳಿದ್ದು, ಕೊಡದೇ ಹೋದಾಗ ಸತೀಶ್‌ ಹಾಗೂ ಅವರ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ದೂರು ನೀಡಿದರೂ ಪೊಲೀಸರು ದೂರು ಸ್ವೀಕರಿಸಿಲ್ಲ ಎಂದು ಸಂಸದರು ಆರೋಪಿಸಿದ್ದಾರೆ. ಇದು ಬಾಂಗ್ಲಾದಿಂದ ಅಕ್ರಮವಾಗಿ ಬಂದು ನೆಲೆಸಿರುವ ಪುಂಡರ ಕೃತ್ಯ ಎನ್ನಲಾಗಿದೆ. ಇನ್ನೊಂದು ಪ್ರಕರಣ ನಿನ್ನೆ ತಾನೆ ನಡೆದಿದೆ. ಆರ್‌ಟಿ ನಗರದ ಸುಲ್ತಾನ್‌ ಪಾಳ್ಯದಲ್ಲಿ ಬರೋಬ್ಬರಿ 20ಕ್ಕೂ ಹೆಚ್ಚಿ ಪುಡಿ ರೌಡಿಗಳು ಗುಂಪು ಕಟ್ಟಿಕೊಂಡು ದ್ವಿಚಕ್ರ ವಾಹನಗಳಲ್ಲಿ ತಲವಾರು, ಲಾಂಗ್‌ ಝಳಪಿಸುತ್ತಾ ಕೇಕೆ ಹಾಕುತ್ತಾ ಓಡಾಡಿದ್ದಾರೆ. ಆ ಕ್ಷಣವೇ ಬೀದಿಯಲ್ಲಿ ಯಾರಾದರೂ ಇದನ್ನು ಪ್ರಶ್ನಿಸಿದ್ದರೆ ಹಾಗೆ ಪ್ರಶ್ನಿಸಿದವರ ತಲೆ ಉರುಳುವ ಸಾಧ್ಯತೆಯೂ ಇತ್ತು. ಯಾಕೆಂದರೆ ಗ್ಯಾಂಗ್‌ ಮನೋವರ್ತನೆ ಹಾಗೂ ಅಮಲುಕೋರತನ ಎರಡೂ ದುಷ್ಕೃತ್ಯಗಳನ್ನು ಪ್ರೇರೇಪಿಸುವಂಥದು.

ಈ ಮೂರೂ ಘಟನೆಗಳು, ಮತ್ತು ವರದಿಯಾಗದ ಇಂಥ ಇನ್ನಷ್ಟು ಪ್ರತ್ಯೇಕ ಘಟನೆಗಳು ಬೆಂಗಳೂರಿನ ಪ್ರಸ್ತುತ ಕಾನೂನು ಸುವ್ಯವಸ್ಥೆಯ ದಾರುಣ ಚಿತ್ರಣವನ್ನು ನಮ್ಮ ಮುಂದಿಡುತ್ತಿವೆ. ಬೀದಿ ರೌಡಿಗಳು ಲಾಂಗ್‌ ಝಳಪಿಸಿ ಪುಟ್ಟ ಅಂಗಡಿಯವರನ್ನೋ ಸಣ್ಣ ಉದ್ಯಮಿಗಳನ್ನೋ ಬೆದರಿಸಿ ವಸೂಲಿ ಮಾಡುವುದು, ಹಫ್ತಾ ನೀಡದಿದ್ದರೆ ದಾಂಧಲೆ ನಡೆಸುವುದು ಅವ್ಯಾಹತವಾಗಿದೆ. ವೈರಿ ಗ್ಯಾಂಗ್‌ಗಳು ರಸ್ತೆಗಳಲ್ಲೇ ಹೊಡೆದಾಡಿಕೊಳ್ಳುತ್ತವೆ, ರೌಡಿಗಳು ಬೀದಿ ಹೆಣಗಳಾಗುತ್ತಾರೆ. ಇನ್ನು ಬೈಕ್ ವ್ಹೀಲಿಂಗ್ ಮಾಡಿ ಇತರರಿಗೆ ಭಯ ಹುಟ್ಟಿಸುವವರು, ಅದನ್ನು ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್‌ ಮಾಡಿದರೂ ಪೊಲೀಸರ ಭಯವಿಲ್ಲ ಎನ್ನುವಂತಿದ್ದಾರೆ. ಬೀದಿಯಲ್ಲಿ, ಮನೆ ಮನೆಯ ಎದುರಲ್ಲೂ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿದೆ ಎಂಬ ಅರಿವಿದ್ದರೂ ಇಲ್ಲದವರಂತೆ ರೌಡಿಗಳು, ಕೊಲೆಗಾರರು ದುಷ್ಕೃತ್ಯ ಎಸಗಿ ಪರಾರಿಯಾಗುತ್ತಿದ್ದಾರೆ. ದಾರಿಹೋಕ ಅಮಾಯಕರನ್ನು ಗಾಂಜಾ ಮತ್ತಿನಲ್ಲಿರುವವರು ಸುಖಾಸುಮ್ಮನೆ ತಿವಿದು ಸಾಯಿಸುತ್ತಿದ್ದಾರೆ. ಪಾಗಲ್‌ಪ್ರೇಮಿಗಳು ತಮ್ಮ ಪ್ರೇಮ ನಿರಾಕರಿಸುವ ಹುಡುಗಿಯರ ಮೇಲೆ ಆಸಿಡ್‌ ಎರಚುವುದು, ಚಾಕುವಿನಿಂದ ತಿವಿದು ಸಾಯಿಸುವುದು ರಾಜಾರೋಷವಾಗಿ ಎಲ್ಲರ ಕಣ್ಣೆದುರೇ ನಡೆಯುತ್ತಿದೆ. ಬದಲಾಗಿರುವ ಈ ಅಪರಾಧಗಳ ಸ್ವರೂಪ ನಮ್ಮನ್ನು ಆತಂಕಕ್ಕೆ ಒಳಪಡಿಸುವಂತಿದೆ. ಮೊಬೈಲ್, ಚೈನ್ ಎಗರಿಸಿ ಪರಾರಿಯಾಗುವ ಪ್ರಕರಣಗಳಂತೂ ಅಸಂಖ್ಯ.

ಬೆಂಗಳೂರಿನಲ್ಲಿ ತಮ್ಮ ಅಂಗಡಿಯಲ್ಲಿ ತಮಗೆ ಬೇಕಾದ ಹಾಡು ಹಾಕುವ ಸ್ವಾತಂತ್ರ್ಯವೂ ಇಲ್ಲವೇ? ಇಲ್ಲಿನ ಪುಡಿ ರೌಡಿಗಳಿಗೆ ಬೀದಿಯಲ್ಲಿರುವವರನ್ನೆಲ್ಲ ಬೆದರಿಸುವ ಅಧಿಕಾರವನ್ನು ನೀಡಲಾಗಿದೆಯೇ? ಲಾಂಗ್‌ ಹಿಡಿದು ಸಜ್ಜನರನ್ನು ಬೆದರಿಸುವ ರೌಡಿಗಳನ್ನು ಪೊಲೀಸರು ಏನೂ ಮಾಡುತ್ತಿಲ್ಲ ಏಕೆ? ಕಾನೂನು ಸುವ್ಯವಸ್ಥೆಯನ್ನು ನೋಡಿಕೊಳ್ಳಬೇಕಾದ ಗೃಹ ಇಲಾಖೆ ಇನ್ನಷ್ಟು ಚುರುಕಾಗಿ ಕ್ರಿಯಾಶೀಲವಾಗದಿದ್ದರೆ, ಬೆಂಗಳೂರಿಗೆ ಕ್ರೈಂ ಸಿಟಿ ಎಂಬ ಕಳಂಕ ಶಾಶ್ವತವಾಗಿ ಅಂಟಿಕೊಳ್ಳಲಿದೆ. ಉತ್ತರ ಪ್ರದೇಶದಲ್ಲಿ ಒಂದು ಕಾಲದಲ್ಲಿ ಅವ್ಯಾಹತವಾಗಿದ್ದ ಅಪರಾಧ ಮಾಫಿಯಾ ವ್ಯವಸ್ಥೆಯೇ ಅಲ್ಲಿನ ಆಡಳಿತ ಪಕ್ಷವನ್ನು ನೆಲಕ್ಕಿಳಿಸಲು ಕಾರಣವಾಯಿತು ಎಂಬುದನ್ನು ನೆನಪಿಡಬೇಕು. ಬೆಂಗಳೂರಿನ ಭೂಗತ ಲೋಕ ಮತ್ತೆ ಸಕ್ರಿಯವಾದಂತಿದೆ. ಆದರೆ ಈ ಸಲ ಭೂಗತ ಲೋಕಕ್ಕೆ ಮತೀಯ ವಾಸನೆ ಕೂಡ ಅಂಟಿಕೊಂಡಂತಿದೆ. ಹಿಂದೂಗಳನ್ನು ಹುಡುಕಿ ಹುಡುಕಿ ಹಣಿಯುವ ರೌಡಿ ಪ್ರವೃತ್ತಿ ಹೆಚ್ಚು ಹೆಚ್ಚು ಕಂಡುಬರುತ್ತಿದೆ. ಇದು ಅತ್ಯಂತ ಅಪಾಯಕಾರಿ. ಪೊಲೀಸರು ಇದನ್ನು ಇಗಲೇ ಅರ್ಥ ಮಾಡಿಕೊಂಡು ಮಟ್ಟ ಹಾಕಬೇಕು.

ಇನ್ನಷ್ಟು ಓದಿ: ವಿಸ್ತಾರ ಸಂಪಾದಕೀಯ: ಚಾಂಪಿಯನ್​ ಆರ್​​ಸಿಬಿ ಮಹಿಳೆಯರು ಯುವ ಅಥ್ಲೀಟ್​​ಗಳಿಗೆ ಪ್ರೇರಣೆ

ರೌಡಿಗಳ ಸಂಖ್ಯೆ ಎಷ್ಟು ಬೆಳೆದಿದೆ ಎಂದರೆ, ಚುನಾವಣೆಗೆ ಮುಂಚಿತವಾಗಿ ರೌಡಿ ಶೀಟರ್‌ಗಳನ್ನು ಠಾಣೆಗೆ ಕರೆತಂದು ಪರೇಡ್‌ ಮಾಡಿಸುವಾಗ ಕಾಣುವ ರೌಡಿಗಳ ಸಂಖ್ಯೆಯನ್ನು ಗಮನಿಸಿದರೆ ಗಾಬರಿಯಾಗುತ್ತದೆ. ಬೆಂಗಳೂರಿನ ಭೂಗತ ಜಗತ್ತು ಮತ್ತೆ ತುಂಬಿ ತುಳುಕುತ್ತಿದೆಯೇ ಎನ್ನುವ ಅನುಮಾನ ಮೂಡುತ್ತಿದೆ. ಮಹಿಳೆಯರ ವಿರುದ್ಧ ನಡೆಯುತ್ತಿರುವ ಅಪರಾಧಗಳಲ್ಲಿ ಹೆಚ್ಚಳವಾಗಿರುವುದು ಹೆಚ್ಚು ಆತಂಕಕಾರಿ. ಇದು ಮಹಿಳೆಯರಿಗೆ ಈ ನಗರ ಅಸುರಕ್ಷಿತ ಎಂಬ ಭಾವನೆ ಮೂಡಿಸದೇ ಇರದು. ಹಾಗೆಯೇ ಗಾಂಜಾ- ಅಫೀಮು ಮುಂತಾದ ಮಾದಕ ದ್ರವ್ಯಗಳು ಎಗ್ಗಿಲ್ಲದೇ ರಾಜ್ಯದೊಳಗೆ ಸರಬರಾಜಾಗುತ್ತಿದ್ದು, ಇದು ನಮ್ಮ ಯುವಜನತೆಯನ್ನು ಶಾಶ್ವತ ಚಿತ್ತವಿಕಲತೆಯತ್ತ ಕೊಂಡೊಯ್ಯಲಿದೆ. ಇದನ್ನು ಮೂಲದಿಂದಲೇ ಪತ್ತೆ ಹಚ್ಚಿ ತಡೆಯದೇ ಹೋದರೆ ಉಳಿಗಾಲವಿಲ್ಲ. ಇದೆಲ್ಲದಕ್ಕೆ ಪೊಲೀಸ್‌ ವ್ಯವಸ್ಥೆಯನ್ನು ಇನ್ನಷ್ಟು ಸಕ್ರಿಯ, ಗಟ್ಟಿ ಹಾಗೂ ಆಧುನೀಕರಣಗೊಳಿಸಬೇಕಿದೆ.

Continue Reading

ಪ್ರಮುಖ ಸುದ್ದಿ

Sarfaraz Khan : ಬಿಸಿಸಿಐ ಕೇಂದ್ರ ಗುತ್ತಿಗೆಗೆ ಸರ್ಫರಾಜ್ ಖಾನ್, ಧ್ರುವ್ ಜುರೆಲ್​ ಸೇರ್ಪಡೆ

Sarfaraz Khan : ಸರ್ಫರಾಜ್ ಖಾನ್ ಹಾಗೂ ಧ್ರುವ್ ಜುರೆಲ್ ಇತ್ತೀಚೆಗೆ ಮುಕ್ತಾಯಗೊಂಡ ಇಂಗ್ಲೆಂಡ್​ ವಿರುದ್ದದ ಟೆಸ್ಟ್​ ಸರಣಿಯಲ್ಲಿ ಆಡಿದ್ದರು.

VISTARANEWS.COM


on

Sarfaraz Khan
Koo

ನವದೆಹಲಿ: ಭಾರತದ ಹೊಸ ಬ್ಯಾಟಿಂಗ್ ತಾರೆ ಸರ್ಫರಾಜ್ ಖಾನ್ (Sarfaraz Khan) ಮತ್ತು ವಿಕೆಟ್ ಕೀಪರ್ ಧ್ರುವ್ ಜುರೆಲ್ ಅವರನ್ನು ಬಿಸಿಸಿಐನ ಕೇಂದ್ರ ಒಪ್ಪಂದದ ಸಿ ಗುಂಪಿಗೆ ಸೇರಿಸಲಾಗಿದೆ. ಅವರು ವಾರ್ಷಿಕ 1 ಕೋಟಿ ರೂಪಾಯಿ ಪಡೆಯಲಿದ್ದಾರೆ. ಸೋಮವಾರ ನಡೆದ ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಅವರ ಹೆಸರುಗಳನ್ನು ಅನುಮೋದಿಸಲಾಯಿತು. ಮುಂಬೈ ಪರ ದೇಶೀಯ ಹೆವಿವೇಯ್ಟ್ ಆಟಗಾರ ಸರ್ಫರಾಜ್ ಇಂಗ್ಲೆಂಡ್ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳಲ್ಲಿ ಮೂರು ಅರ್ಧಶತಕಗಳನ್ನು ಗಳಿಸಿದರೆ, ರಾಂಚಿಯಲ್ಲಿ ನಡೆದ ಕಠಿಣ ಚೇಸಿಂಗ್​​ನಲ್ಲಿ 90 ಮತ್ತು 39 ರನ್ ಗಳಿಸಿದ ಆಗ್ರಾ ಆಟಗಾರ ಜುರೆಲ್ ತಮ್ಮ ಎರಡನೇ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದರು.

ಬಿಸಿಸಿಐ ಮುಂದಿನ ಋತುವಿಗಾಗಿ ರಣಜಿ ಟ್ರೋಫಿ ಕ್ಯಾಲೆಂಡರ್ ಅನ್ನು ಮರುಪರಿಶೀಲಿಸುವ ಸಾಧ್ಯತೆಯಿದೆ ಮತ್ತು ಡಿಸೆಂಬರ್ ಮತ್ತು ಜನವರಿ ತಿಂಗಳಲ್ಲಿ ಭಾರತದ ಉತ್ತರ ಭಾಗದಲ್ಲಿ ಯಾವುದೇ ಪಂದ್ಯಗಳನ್ನು ನಿಗದಿಪಡಿಸುವುದಿಲ್ಲ.

ವಿವರವಾದ ದೇಶೀಯ ಕ್ಯಾಲೆಂಡರ್ ಅನ್ನು ನಂತರ ಘೋಷಿಸಲಾಗುವುದು, ಬಿಸಿಸಿಐ ಅಪೆಕ್ಸ್ ಕೌನ್ಸಿಲ್ 2024-25 ರ ತಾತ್ಕಾಲಿಕ ವೇಳಾಪಟ್ಟಿಯನ್ನು ಚರ್ಚಿಸಿತು. ಇದು ಆ ದಿನದ ಅಪೆಕ್ಸ್ ಕೌನ್ಸಿಲ್ ಸಭೆಯ ಎಂಟು ಅಂಶಗಳ ಕಾರ್ಯಸೂಚಿಯ ಪ್ರಾಥಮಿಕ ಅಂಶಗಳಲ್ಲಿ ಒಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ಕೆಲವು ಋತುಗಳಿಂದ, ರಣಜಿ ಟ್ರೋಫಿ ಜನವರಿಯಲ್ಲಿ ಪ್ರಾರಂಭವಾಗಿ ಮಾರ್ಚ್ ಎರಡನೇ ವಾರದಲ್ಲಿ ಕೊನೆಗೊಳ್ಳುತ್ತದೆ ಮತ್ತು ದೆಹಲಿ, ಚಂಡೀಗಢ, ಕಾನ್ಪುರ, ಮೀರತ್, ಜಮ್ಮು, ಧರ್ಮಶಾಲಾದಂತಹ ಉತ್ತರ ಭಾರತದ ನಗರಗಳಲ್ಲಿ ಚಳಿಗಾಲದ ತಿಂಗಳುಗಳಲ್ಲಿ ಹೆಚ್ಚಿನ ಪಂದ್ಯಗಳು ಕೆಟ್ಟ ಬೆಳಕು ಮತ್ತು ಮಂಜಿನಿಂದ ಹಾಳಾಗುತ್ತಿವೆ. ಹೀಗಾಗಿ ಅಲ್ಲಿ ಪಂದ್ಯಗಳು ನಡೆಯುವ ಸಾಧ್ಯತೆಗಳು ಇಲ್ಲ.

ಅಕ್ಟೋಬರ್ ಮಧ್ಯದಿಂದ ಆರಂಭ

ಐಪಿಎಲ್ ಹರಾಜು ವೇದಿಕೆಯಾಗಿ ಕಾರ್ಯನಿರ್ವಹಿಸುವ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ನಂತರ ಹಿಂದಿನ ವರ್ಷಗಳಂತೆ ರಣಜಿ ಟ್ರೋಫಿ ಅಕ್ಟೋಬರ್ ಮಧ್ಯದಿಂದ ಅಥವಾ ಅಂತ್ಯದಿಂದ ಪ್ರಾರಂಭವಾಗಬಹುದು. ಡಿಸೆಂಬರ್ ಮಧ್ಯದಿಂದ ಫೆಬ್ರವರಿ ಮಧ್ಯದವರೆಗೆ ಪ್ರತಿಕೂಲ ಹವಾಮಾನದಿಂದಾಗಿ ಕೆಲವು ರಾಜ್ಯಗಳು ಮಾಡು ಇಲ್ಲವೇ ಮಡಿ ಪಂದ್ಯಗಳಲ್ಲಿ ನಿರ್ಣಾಯಕ ಅಂಕಗಳನ್ನು ಕಳೆದುಕೊಳ್ಳುತ್ತಿವೆ ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ : IPL 2024 : ಸಿಎಸ್​ಕೆ ತಂಡಕ್ಕೆ ಮತ್ತೊಂದು ಆಘಾತ; ಮುಸ್ತಾಫಿಜುರ್​ಗೂ ಗಾಯ

ಕೇಂದ್ರಾಡಳಿತ ಪ್ರದೇಶವಾದ ದಮನ್ ಮತ್ತು ದಿಯುಗೆ ಅಸೋಸಿಯೇಟ್ ಸದಸ್ಯತ್ವ ಸಿಗುತ್ತದೆಯೇ ಎಂದು ನಿರ್ಧರಿಸಲು ಬಿಸಿಸಿಐ ಸಮಿತಿಯನ್ನು ರಚಿಸಲಿದೆ ಎಂದು ತಿಳಿದುಬಂದಿದೆ.

ವಿದೇಶಿ ತಂಡಗಳ ಜತೆ ಸೌಹಾರ್ದ ಪಂದ್ಯಕ್ಕೆ ಎನ್​ಒಸಿ ಅಗತ್ಯ

ನೇಪಾಳದಂತಹ ಬಹಳಷ್ಟು ಐಸಿಸಿ ಅಸೋಸಿಯೇಟ್ ಸದಸ್ಯ ರಾಷ್ಟ್ರಗಳು ಭಾರತಕ್ಕೆ ಪ್ರವಾಸ ಕೈಗೊಳ್ಳಲು ಮತ್ತು ಕೆಲವು ರಾಜ್ಯ ತಂಡಗಳ ವಿರುದ್ಧ ಅಭ್ಯಾಸ ಪಂದ್ಯಗಳನ್ನು ಆಡಲು ಬಯಸುತ್ತವೆ. ವಾಸ್ತವವಾಗಿ, ಯುಎಸ್ಎ ಮತ್ತು ವೆಸ್ಟ್ ಇಂಡೀಸ್​ನಲ್ಲಿ ಟಿ 20 ವಿಶ್ವಕಪ್ ಆಡಲಿರುವ ನೇಪಾಳ ತಂಡವು ರಾಷ್ಟ್ರ ರಾಜಧಾನಿಯಲ್ಲಿ ತರಬೇತಿ ಪಡೆಯಬೇಕಿತ್ತು. ಫ್ರೆಂಡ್​ಶಿಪ್​ ಕಪ್ ಎಂಬ ಮೂರು ತಂಡಗಳ ಪಂದ್ಯಾವಳಿಯಲ್ಲಿ ಗುಜರಾತ್, ಬರೋಡಾ ವಿರುದ್ಧ ಕೆಲವು ಟಿ 20 ಪಂದ್ಯಗಳನ್ನು ಆಡಲು ಯೋಜಿಸಿದೆ. ಯಾವುದೇ ಸಂಯೋಜಿತ ರಾಜ್ಯ ಘಟಕವು ಯಾವುದೇ ಅಂತರರಾಷ್ಟ್ರೀಯ ತಂಡವನ್ನು ಆತಿಥ್ಯ ವಹಿಸುವ ಮೊದಲು ಮಾತೃ ಸಂಸ್ಥೆಯಿಂದ ಎನ್ಒಸಿ ಪಡೆಯುವ ಅಗತ್ಯವಿದೆ ಎಂದು ಬಿಸಿಸಿಐನ ಅಪೆಕ್ಸ್ ಕೌನ್ಸಿಲ್ ಸ್ಪಷ್ಟಪಡಿಸಿದೆ.

Continue Reading
Advertisement
Supreme Court
ದೇಶ6 mins ago

CAA: ಸಿಎಎ ವಿರೋಧಿಸಿ ಸಲ್ಲಿಸಿದ 230ಕ್ಕೂ ಅಧಿಕ ಅರ್ಜಿಗಳ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ

Fruits and Vegetables Spilling from Paper Bag
ಆರೋಗ್ಯ24 mins ago

Health Tips: ಈ ಹಣ್ಣು ಮತ್ತು ತರಕಾರಿಗಳನ್ನು ಎಂದಿಗೂ ಜೊತೆಯಾಗಿ ಇಡಲೇಬಾರದು!

Rain alert issued for Ramanagara and Kalaburagi Rising temperature in coastal areas
ಮಳೆ54 mins ago

Karnataka Weather : ರಾಜ್ಯದಲ್ಲಿಂದು ಬಿಸಿಲು, ಮಳೆ, ಗಾಳಿ ಒಟ್ಟೊಟ್ಟಿಗೆ ದಾಳಿ

dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರು ಎಚ್ಚರ ವಹಿಸಿ; ಅಮೂಲ್ಯವಾದ ವಸ್ತುವೊಂದು ಕೈ ತಪ್ಪಬಹುದು

Ukrainian minister
ದೇಶ6 hours ago

Ukrainian Minister: ಶೀಘ್ರ ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೊ ಕುಲೆಬಾ ಭಾರತಕ್ಕೆ ಭೇಟಿ; ಉದ್ದೇಶವೇನು?

Techie couple assaulted over parking issue in Bengaluru
ಕರ್ನಾಟಕ7 hours ago

Assault Case: ಬೆಂಗಳೂರಲ್ಲಿ ಪಾರ್ಕಿಂಗ್‌ ವಿಚಾರಕ್ಕೆ ಟೆಕ್ಕಿ ದಂಪತಿ ಮೇಲೆ ಹಲ್ಲೆ

Banaglore incident
ಪ್ರಮುಖ ಸುದ್ದಿ8 hours ago

ವಿಸ್ತಾರ ಸಂಪಾದಕೀಯ: ಬೆಂಗಳೂರು ರೌಡಿಗಳ ಸಾಮ್ರಾಜ್ಯ ಆಗದಿರಲಿ

Sarfaraz Khan
ಪ್ರಮುಖ ಸುದ್ದಿ8 hours ago

Sarfaraz Khan : ಬಿಸಿಸಿಐ ಕೇಂದ್ರ ಗುತ್ತಿಗೆಗೆ ಸರ್ಫರಾಜ್ ಖಾನ್, ಧ್ರುವ್ ಜುರೆಲ್​ ಸೇರ್ಪಡೆ

World Consumer Day celebration in karwar
ಉತ್ತರ ಕನ್ನಡ8 hours ago

Uttara Kannada News: ಖರೀದಿಗೂ ಮುನ್ನ ವಸ್ತುಗಳನ್ನು ಪರಿಶೀಲಿಸಿ; ನ್ಯಾ. ಮಾಯಣ್ಣ

rains lash several parts of Kodagu; Huge tree falls on house, damages house
ಕರ್ನಾಟಕ8 hours ago

Rain News: ಕೊಡಗಿನ ಹಲವೆಡೆ ಮಳೆಯ ಸಿಂಚನ; ಬೃಹತ್‌ ಮರ ಬಿದ್ದು ಮನೆಗೆ ಹಾನಿ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರು ಎಚ್ಚರ ವಹಿಸಿ; ಅಮೂಲ್ಯವಾದ ವಸ್ತುವೊಂದು ಕೈ ತಪ್ಪಬಹುದು

Tejaswi Surya About Hanuman Chalisa Issue
ಬೆಂಗಳೂರು13 hours ago

ಹನುಮಾನ್‌ ಚಾಲೀಸಾ ಕೇಸ್‌; ಆರೋಪಿಗಳು ಅರೆಸ್ಟ್ ಆಗದಿದ್ದರೆ ಪ್ರತಿಭಟನೆ- ತೇಜಸ್ವಿ ಸೂರ್ಯ ಎಚ್ಚರಿಕೆ

read your daily horoscope predictions for march 18 2024
ಭವಿಷ್ಯ1 day ago

Dina Bhavishya : ಈ ದಿನ ನೀವೂ ಮೋಸ ಹೋಗುವುದು ಗ್ಯಾರಂಟಿ; ಬೆನ್ನ ಹಿಂದೆಯೇ ನಡೆಯುತ್ತೆ ಪಿತೂರಿ

Lok Sabha Election 2024 Congress finalises list of 13 seats
Lok Sabha Election 20242 days ago

Lok Sabha Election 2024: ಕಾಂಗ್ರೆಸ್‌ನಲ್ಲಿ 13 ಕ್ಷೇತ್ರಗಳ ಪಟ್ಟಿ ಫೈನಲ್!‌ ಸಂಭಾವ್ಯ ಅಭ್ಯರ್ಥಿಗಳ ಲಿಸ್ಟ್‌ ಇಲ್ಲಿದೆ

dina Bhvishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಅತ್ತೆ ಮನೆಯಿಂದ ಸಿಗಲಿದೆ ಭರಪೂರ ಉಡುಗೊರೆ

Dina Bhavishya
ಭವಿಷ್ಯ3 days ago

Dina Bhavishya : ಇವತ್ತು ಈ ರಾಶಿಯವರು ಮೌನದಿಂದ ಇರುವುದು ಒಳಿತು

Lok Sabha Election 2024 Is Operation JDS Worker Behind DK Brothers Breakfast Meeting
Lok Sabha Election 20244 days ago

Lok Sabha Election 2024: ಡಿಕೆ ಬ್ರದರ್ಸ್‌ ಬ್ರೇಕ್‌ಫಾಸ್ಟ್‌ ಮೀಟಿಂಗ್ ಹಿಂದೆ ‘ಆಪರೇಷನ್‌ ಜೆಡಿಎಸ್‌ ಕಾರ್ಯಕರ್ತ’?

read your daily horoscope predictions for march 15 2024
ಭವಿಷ್ಯ4 days ago

Dina Bhavishya : ಕೆಲವು ರಹಸ್ಯ ವಿಷಯಗಳು ಈ ರಾಶಿಯವರಿಗೆ ಅಚ್ಚರಿ ತರಲಿದೆ

Lok Sabha Election 2024 Yaduveer talks about entering politics and Yaduveer Krishnadatta Chamaraja Wadiyar meets BY Vijayendra
ಕರ್ನಾಟಕ4 days ago

‌Lok Sabha Election 2024: ಮೆಣಸಿನಕಾಯಿಯನ್ನು ಜೀರ್ಣಿಸಿಕೊಳ್ತೇನೆ; ನನ್ನ ಮೇಲೆ ರಾಜಸ್ಥಾನದ ಪ್ರಭಾವ ಇಲ್ಲ: ಯದುವೀರ್

Different Danny Filed Case Against Ravi Varma
ಬೆಂಗಳೂರು5 days ago

Different Danny : ಫೈಟ್‌ ಮಾಸ್ಟರ್ಸ್‌ ಫೈರ್‌ ಫೈಟಿಂಗ್‌; ರವಿವರ್ಮ ವಿರುದ್ಧ ಡಿಫರೆಂಟ್‌ ಡ್ಯಾನಿ ಸಮರ

ಟ್ರೆಂಡಿಂಗ್‌