Site icon Vistara News

Horoscope Today : ನಿರ್ಜಲಾ ಏಕಾದಶಿಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

horoscope today

Horoscope Today

ಇಂದಿನ ಪಂಚಾಂಗ (31-05-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.

ತಿಥಿ: ಏಕಾದಶಿ 13:45 ವಾರ: ಬುಧವಾರ
ನಕ್ಷತ್ರ: ಹಸ್ತಾ 05:58 ಯೋಗ: ವ್ಯತಿಪಾತ 20:13
ಕರಣ: ವಿಷ್ಟಿ (ಭದ್ರ) 13:45 ಇಂದಿನ ವಿಶೇಷ: ನಿರ್ಜಲಾ ಏಕಾದಶಿ
ಅಮೃತಕಾಲ: ಮಧ್ಯರಾತ್ರಿ 12 ಗಂಟೆ 11 ನಿಮಿಷದಿಂದ ಮಧ್ಯರಾತ್ರಿ 01 ಗಂಟೆ 51 ನಿಮಿಷದವರೆಗೆ.

ಸೂರ್ಯೋದಯ : 05:52 ಸೂರ್ಯಾಸ್ತ : 06:42

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ನಿಮ್ಮ ವೈಯುಕ್ತಿಕ ಜೀವನದಲ್ಲಿ ಇತರರು ಹಸ್ತಕ್ಷೇಪ ಮಾಡದಂತೆ ಎಚ್ಚರಿಕೆ ವಹಿಸಿ. ಅನೇಕ ವಿಚಾರಗಳು ಮಾನಸಿಕ ಒತ್ತಡ ತರುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು ವ್ಯವಹಾರದಲ್ಲಿ ಸಾಧರಣ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ವೃಷಭ: ಬಹಳ ದಿನಗಳ ಕನಸು ಈಡೇರುವುದು. ಭೂ ಸಂಬಂಧಿಸಿದ ವ್ಯವಹಾರದಲ್ಲಿ ಯಶಸ್ಸು. ಇಂದು ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ, ಪ್ರೋತ್ಸಾಹ ಸಿಗಲಿದೆ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಕುಟುಂಬದಲ್ಲಿ ವಿನಾಕಾರಣ ಕಲಹಗಳು ನಡೆಯದಂತೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಮಿಥುನ: ಅತ್ಯಂತ ಉತ್ಸಾಹದ ದಿನವಿಂದು. ಆತುರದಲ್ಲಿ ಹಣ ಹೂಡಿಕೆ ಮಾಡುವುದು ಬೇಡ. ಆರೋಗ್ಯದಲ್ಲಿ ಉತ್ತಮ. ಮಕ್ಕಳ ಕುರಿತಾಗಿ ಚಿಂತಿಸಿ ಉತ್ಸಾಹ ಕಳೆದುಕೊಳ್ಳುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಕಟಕ: ಅನಾವಶ್ಯಕ ಒತ್ತಡ ತೆಗೆದುಕೊಳ್ಳುವುದು ಬೇಡ. ಮನೆಯಲ್ಲಿನ ಕಲಹಗಳಿಗೆ ನೀವು ಧ್ವನಿಯಾಗುವುದು ಬೇಡ. ಪ್ರತಿಭೆಗೆ ತಕ್ಕ ಪ್ರೋತ್ಸಾಹ ಸಿಗುವುದು. ಆರ್ಥಿಕ ಪ್ರಗತಿ ಸಾಧಾರಣ. ಸಂಗಾತಿಯ ಬೆಂಬಲ ಸಿಗಲಿದೆ.
ಅದೃಷ್ಟ ಸಂಖ್ಯೆ: 8

ಸಿಂಹ: ಪಾಲುದಾರಿಕೆ ವ್ಯವಹಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿ ಆಗುವ ಸಾಧ್ಯತೆ, ಎಚ್ಚರವಹಿಸಿ. ಹಿರಿಯರ ಮಾರ್ಗದರ್ಶನ ಪಡೆಯಿರಿ. ಅತಿಯಾದ ಆತ್ಮವಿಶ್ವಾಸದಿಂದ ಯಾವುದೇ ಕೆಲಸದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಕನ್ಯಾ: ವ್ಯಾಪಾರ ವ್ಯವಹಾರಗಳಲ್ಲಿ ಕಾರ್ಯ ಸಿದ್ಧಿ. ಪ್ರಯಾಣದಿಂದ ಲಾಭ. ತಾಳ್ಮೆಯಿಂದ ಕಾಯ್ದು ಕೊಂಡಿರುವ ಕೆಲಸವು ಫಲ ನೀಡುವುದು. ಆರೋಗ್ಯದಲ್ಲಿ ಉತ್ತಮ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಕೆಲಸ ಕಾರ್ಯಗಳಲ್ಲಿ ಪ್ರಶಂಸೆ ಪ್ರೋತ್ಸಾಹ ಸಿಗುವುದು. ನಿಮ್ಮ ಸಭ್ಯ ನಡವಳಿಕೆ ಮೆಚ್ಚುಗೆ ಪಡೆಯುತ್ತದೆ. ಆರ್ಥಿಕ ಸಮಸ್ಯೆಗಳು ಪರಿಹಾರ ಆಗುವವು. ಆದರೂ ಯಾವುದಾದರೂ ಒಂದು ಕೊರತೆ ಕಾಡುವುದು. ಆಧ್ಯಾತ್ಮದ ಹಾದಿಯಲ್ಲಿ ಹೆಜ್ಜೆ ಹಾಕಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

ವೃಶ್ಚಿಕ: ಅತಿಯಾದ ಮಾನಸಿಕ ಒತ್ತಡ ನಿಮ್ಮನ್ನು ಜರ್ಜರಿತ ರನ್ನಾಗಿ ಮಾಡಬಹುದು, ಅದರಿಂದ ಹೊರ ಬನ್ನಿ. ಮನೆಯಲ್ಲಿ ಮಾತಿಗೆ ಮಾತು ಬೆಳೆದು ಕಲಹವಾಗುವ ಸಾಧ್ಯತೆ. ಮೌನದಿಂದ ಕಾರ್ಯ ಸಾಧಿಸಿ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

ಧನಸ್ಸು: ದೀರ್ಘ ಕಾಲದ ಅನಾರೋಗ್ಯ ನಿಮ್ಮನ್ನು ಹಿಂಸೆಗೆ ಗುರಿ ಮಾಡಬಹುದು. ವಿಶ್ವಾದಿಂದ ಕಾರ್ಯ ಸಾಧನೆ ಮಾಡಿ, ಶುಭವಾಗುವುದು. ಅರ್ಥಿಕವಾಗಿ ಶುಭ ಫಲ. ಉದ್ಯೋಗದಲ್ಲಿ ಅಡಚಣೆಗಳಿವೆ ಎಚ್ಚರ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಮಕರ: ಯಾವುದೇ ಕೆಲಸದಲ್ಲಿಯೂ ಅತಿಯಾದ ಭರವಸೆಯಿಂದ ದುಡುಕುವುದು ಬೇಡ. ಆರ್ಥಿಕ ಪ್ರಗತಿ ಉತ್ತಮ. ನಿಮ್ಮ ಪ್ರತಿ ಸ್ಪರ್ಧಿಗಳು ಕೆಟ್ಟದನ್ನು ಮಾಡಬಹುದು. ಎಚ್ಚರಿಕೆಯಿಂದ ಹೆಜ್ಜೆ ಇಡಿ. ಆರೋಗ್ಯವು ಉತ್ತಮ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:6

ಕುಂಭ: ಭೂ ವ್ಯವಹಾರದಲ್ಲಿ ಅನುಕೂಲತೆಗಳಿವೆ. ಸಂಬಂಧಿಕರು ಮತ್ತು ಸ್ನೇಹಿತರಿಂದ ಅನಿರೀಕ್ಷಿತ ಉಡುಗೊರೆಗಳು ದೊರೆಯುವವು. ಉದ್ಯೋಗದಲ್ಲಿ ಹಿಡಿದ ಕಾರ್ಯ ಸಾಧಿಸುವಿರಿ. ಆರ್ಥಿಕ ವ್ಯವಹಾರದಲ್ಲಿ ಎಚ್ಚರಿಕೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ಮೀನ: ಮಕ್ಕಳ ಆರೋಗ್ಯದ ಬಗ್ಗೆ ಗಮನ ಹರಿಸಿ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : ಶುಕ್ರ ಗ್ರಹ ಲಗ್ನದಲ್ಲಿದ್ದರೆ ಉತ್ತಮ ಆರೋಗ್ಯ, ಉಳಿದ ಮನೆಯಲ್ಲಿದ್ದರೆ ಯಾವೆಲ್ಲಾ ಫಲ?

Exit mobile version