Kanya Rashi Bhavishya | ಕನ್ಯಾ ರಾಶಿಗೆ ಹಣಕಾಸಿನ ಸ್ಥಿತಿ ಹೀಗಿದೆ! Vistara News

ಭವಿಷ್ಯ

Kanya Rashi Bhavishya | ಕನ್ಯಾ ರಾಶಿಗೆ ಹಣಕಾಸಿನ ಸ್ಥಿತಿ ಹೀಗಿದೆ!

VISTARANEWS.COM


on

Virgo zodic
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಭಾನುವಾರದವರೆಗೂ ವೃಶ್ಚಿಕ ರಾಶಿಯಲ್ಲೇ ನೆಲಸಲ್ಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯ ವಿವಾಹ ಅಪೇಕ್ಷಿತರಿಗೆ ಅನುಕೂಲಕರ ವಾತಾವರಣವಿದು, ಶುಭ ಸುದ್ದಿ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಶುಭ. ಕನ್ಯಾ ರಾಶಿಯವರು ಶುಭ ಕಾರ್ಯಗಳಿಗಾಗಿ ಹೆಚ್ಚು ಖರ್ಚು ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ ಹೆಚ್ಚಾಗುವುದರ ಜತಗೆ ಜವಾಬ್ದಾರಿಗಳು ಹೆಚ್ಚಾಗಲಿದೆ. ಕೋಪದಿಂದ ವರ್ತಿಸುವ ಸಾಧ್ಯತೆ ಇದೆ. ಆತುರದಲ್ಲಿ ಮಾತುಗಳು ಒಳ್ಳೆಯದಲ್ಲ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (10-12-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷ.
ತಿಥಿ: ದ್ವಾದಶಿ 07:12 ವಾರ: ಭಾನುವಾರ
ನಕ್ಷತ್ರ: ಸ್ವಾತಿ 11:49 ಯೋಗ: ಅತಿಗಂಡ 11:49
ಕರಣ: ತೈತುಲ 07:12 ಅಮೃತಕಾಲ: ಬೆಳಗ್ಗೆ 3:17 ರಿಂದ 04:54ರವರೆಗೆ
ದಿನದ ವಿಶೇಷ: ಶೃಂಗೇರಿ ಮಹಾಪ್ರದೋಷ, ಮಾನವ ಹಕ್ಕುಗಳ ದಿನ

ಸೂರ್ಯೋದಯ : 06:31  ಸೂರ್ಯಾಸ್ತ : 05:54

ರಾಹುಕಾಲ : ಸಂಜೆ 4:28ರಿಂದ 5:54
ಗುಳಿಕಕಾಲ: ಮಧ್ಯಾಹ್ನ 3:03 ರಿಂದ 4:28
ಯಮಗಂಡಕಾಲ: ಮಧ್ಯಾಹ್ನ 12:12 ರಿಂದ 1:38

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಹೂಡಿಕೆ ವ್ಯವಹಾರಗಳಲ್ಲಿ ಅಧಿಕ ಲಾಭ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಅನುಕೂಲಕರ ವಾತಾವರಣವಿದು, ಶುಭ ಸುದ್ದಿ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಶುಭ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:6

Horoscope Today

ವೃಷಭ: ಆತ್ಮವಿಶ್ವಾಸ ಹೆಚ್ಚಾಗಲಿದೆ. ಆರ್ಥಿಕವಾಗಿ ಸದೃಢವಾಗಿರಲಿದೆ. ಅತಿರೇಕದ ಮಾತುಗಳಿಂದ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯವು ದಿನದ ಕೊನೆಯಲ್ಲಿ ಹದಗೆಡುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ:5

Horoscope Today

ಮಿಥುನ: ಕೆಲಸ ಕಾರ್ಯಗಳಲ್ಲಿ ನಿಧಾನಗತಿ. ಆರೋಗ್ಯ ಮಧ್ಯಮವಾಗಿರಲಿದೆ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ ಇದೆ. ಆರ್ಥಿಕ ಲಾಭ ಸಾಧಾರಣವಾಗಿರಲಿದೆ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರಫಲ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರು, ಕುಟುಂಬದ ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಆರೋಗ್ಯದ ಕುರಿತು ಕಾಳಜಿ ಇರಲಿ. ಒತ್ತಡದಿಂದ ಹೊರಬರಲು ವ್ಯಸನಗಳಿಗೆ ಬಲಿಯಾಗುವುದು ಬೇಡ. ಆರ್ಥಿಕವಾಗಿ ಕೊಂಚ ಲಾಭ ಇರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಶುಭ ಕಾರ್ಯಗಳಿಗಾಗಿ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ ಹೆಚ್ಚಾಗುವುದರ ಜತಗೆ ಜವಾಬ್ದಾರಿಗಳು ಹೆಚ್ಚಾಗಲಿದೆ. ಕೋಪದಿಂದ ವರ್ತಿಸುವ ಸಾಧ್ಯತೆ ಇದೆ. ಆತುರದಲ್ಲಿ ಮಾತುಗಳು ಒಳ್ಳೆಯದಲ್ಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಹಿರಿಯರಿಂದ ಒತ್ತಡ ಇರಲಿದೆ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ ಇದೆ. ಆಪ್ತರಿಂದ ಸಲಹೆ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

Horoscope Today

ವೃಶ್ಚಿಕ: ಸಂಗಾತಿಯ ಆರೋಗ್ಯದ ಸಲವಾಗಿ ಖರ್ಚು ಹೆಚ್ಚಾಗಲಿದೆ. ಕಾಲಹರಣ ಮಾಡುವ ಆಲೋಚನೆಗಳಿಂದ ದೂರವಿರಿ. ಸಹದ್ಯೋಗಿಗಳಿಂದ ಕಿರಿಕಿರಿ ಸಾಧ್ಯತೆ. ವ್ಯಾಪಾರ ವ್ಯವಹಾರ ಸಾಧಾರಣವಾಗಿರಲಿದೆ. ಹೂಡಿಕೆಯ ವ್ಯವಹಾರಗಳಲ್ಲಿ ಪ್ರಗತಿ. ಕೌಟುಂಬಿಕವಾಗಿ ಮಿಶ್ರಫಲ .
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಆಪ್ತರಿಂದ ಬೆಂಬಲ ಸಿಗಲಿದೆ. ಕೆಲಸಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಆಪ್ತರಿಂದ ಹಣದ ಸಹಾಯದ ಕೋರಿಕೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಉತ್ಸಾಹಭರಿತ ಜೀವನ ಇರಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಹೂಡಿಕೆ ವ್ಯವಹಾರಗಳಲ್ಲಿ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ. ಯಾವುದಾದರೂ ಸಭೆ-ಸಮಾರಂಭಗಳಿಗೆ ಭಾಗವಹಿಸುವಿರಿ. ನಿರೀಕ್ಷೆಯ ಹೊಸ ಭರವಸೆಗಳು ಮೂಡಲಿವೆ. ಆಪ್ತರೊಂದಿಗೆ ಮಾತುಕತೆ. ಕುಟುಂಬದ ಸದಸ್ಯರಿಗೆ ಸಲಹೆ ಸಹಕಾರ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ಇತರರನ್ನು ಟೀಕಿಸುತ್ತ ಸಮಯ ವ್ಯರ್ಥ ಮಾಡುವುದು ಬೇಡ. ಭೂಮಿಗೆ ಸಂಬಂಧಿಸಿದಂತೆ ವ್ಯಾಪಾರ ವ್ಯವಹಾರದಲ್ಲಿ ಲಾಭ. ಪ್ರಯಾಣ ಸಾಧ್ಯತೆ ಇದೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮೀನ: ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಖರ್ಚು ಹೆಚ್ಚಾಗಿದೆ. ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ನಿಮ್ಮ ನಿರೀಕ್ಷೆಗೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರಿಂದ ಒತ್ತಡ ಹೆಚ್ಚಾಗಲಿದೆ. ಸಂಗಾತಿಯ ವರ್ತನೆ ನಿಮ್ಮ ಖ್ಯಾತಿಯ ಮೇಲೆ ಪರಿಣಾಮ ಬೀರಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ದಿಢೀರ್ ಧನಲಾಭ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

Continue Reading

ಪ್ರಮುಖ ಸುದ್ದಿ

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷದ ದ್ವಾದಶಿ ಅಹೋರಾತ್ರಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

read your daily horoscope predictions for december 9 2023
Koo

ಚಂದ್ರನು ಶನಿವಾರ ವೃಶ್ಚಿಕ ರಾಶಿಯಲ್ಲೇ ನೆಲಸಲ್ಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆಯಿಂದ ಇರಿ. ಜತೆಗೆ ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ವಹಿಸಿ. ಕಟಕ ರಾಶಿಯವರು ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ವಹಿಸಿ. ತುಲಾ ರಾಶಿಯವರು ಹಣಕಾಸಿನ ಸಮಸ್ಯೆ ತಲೆದೋರಲಿದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (9-12-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷ.
ತಿಥಿ: ದ್ವಾದಶಿ ಅಹೋರಾತ್ರಿ ವಾರ: ಶನಿವಾರ
ನಕ್ಷತ್ರ: ಚಿತ್ತಾ 10:42 ಯೋಗ: ಶೋಭನ 23:35
ಕರಣ: ಕೌಲವ 18:57 ಅಮೃತಕಾಲ: 2:37 ರಿಂದ 04:18ರ ವರೆಗೆ
ದಿನದ ವಿಶೇಷ: ಅಂತರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನ

ಸೂರ್ಯೋದಯ : 06:53  ಸೂರ್ಯಾಸ್ತ : 05:39

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ವಹಿಸಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗುವುದು. ಹಿರಿಯರ ಬೆಂಬಲ ಆಶೀರ್ವಾದ ಸಿಗಲಿದೆ.ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿ ಆಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚನೆ ಮಾಡುವಿರಿ.ಕುಟುಂಬದಲ್ಲಿ ಸಂಗಾತಿಯ ಬೆಂಬಲ ಸಲಹೆ ಸಿಗಲಿದೆ.ದಿನ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ ಗಳಿಸುವಿರಿ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಸಾಧ್ಯವಾದಷ್ಟು ಮಟ್ಟಿಗೆ ತಾಳ್ಮೆ ಇರಲಿ. ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು,ಕೀರ್ತಿ, ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ.
ಮುಂದೆ ಆಗುವ ಕಾರ್ಯಗಳ ಬಗೆಗೆ ಗಮನ ಇರಲಿ.ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ.ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಣಕಾಸಿನ ಸಮಸ್ಯೆ ತಲೆದೋರಲಿದೆ.ಹಿರಿಯರ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳನ್ನು ಕೇಳುವಿರಿ. ಹೂಡಿಕೆ ವ್ಯವಹಾರಗಳನ್ನು ಮಾಡುವುದು ಬೇಡ.ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ದೀರ್ಘಕಾಲದ ಕೆಲಸಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದವರ ಸಹಕಾರ ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕೊಂಚಮಟ್ಟಿಗೆ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಭವಿಷ್ಯದ ಕುರಿತಾಗಿ ಆಲೋಚನೆ ಮಾಡುವಿರಿ. ಜೀವನದಲ್ಲಿ ಅಭದ್ರತೆಯು ಕಾಡಬಹುದು.ಯಾವುದನ್ನು ಅತಿಯಾಗಿ ಆಲೋಚಿಸಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ.ಹೂಡಿಕೆ, ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯದಲ್ಲಿ ಕೊಂಚ ಏರು-ಪೇರಾಗುವುದು. ಕೆಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಹಿಂದೆ ನೀಡಿದ ಹಣವು ಮರಳುವ ಸಾಧ್ಯತೆ ಇದೆ. ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಉತ್ಸಾಹದಿಂದ ಕಾರ್ಯ ಸಿದ್ಧಿ.ಅಗತ್ಯವಸ್ತುಗಳ ಖರೀದಿ ಖರ್ಚು ಹೆಚ್ಚಾಗಲಿದೆ. ಅಮೂಲ್ಯ ವಸ್ತುಗಳ ಕುರಿತು ಗಮನ ಇರಲಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅನೇಕ ಮೂಲಗಳಿಂದ ಹಣಕಾಸಿನ ಹರಿವು ಹೆಚ್ಚಳವಾಗಲಿದೆ. ದೀರ್ಘಕಾಲದ ಆಲೋಚನೆಯಿಂದ ದೂರವಾಗುವ ಸಾಧ್ಯತೆ ಇದೆ. ಮಾನಸಿಕ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರುವುದು. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

Continue Reading

ಪ್ರಮುಖ ಸುದ್ದಿ

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷದ ಏಕಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ತುಲಾ ರಾಶಿಯಿಂದ ಶುಕ್ರವಾರ ವೃಶ್ಚಿಕ ರಾಶಿಗೆ ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಿ. ಮಿಥುನ ರಾಶಿಯ ಇತರರ ವಿರುದ್ಧ ದ್ವೇಷ ಕಾರುತ್ತಾ ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ನಕರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡಬಹುದು. ಧನಸ್ಸು ರಾಶಿಯವರು ಅತಿಯಾದ ಚಿಂತೆ, ಒತ್ತಡ ನಿಮ್ಮ ಆರೋಗ್ಯದ ಮೇಲೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಪರಿಣಾಮವನ್ನು ಬೀರಬಹುದು. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (8-12-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷ.
ತಿಥಿ: ಏಕಾದಶಿ 30:30 ವಾರ: ಶುಕ್ರವಾರ
ನಕ್ಷತ್ರ: ಹಸ್ತ 08:52 ಯೋಗ: ಸೌಭಾಗ್ಯ 24:03
ಕರಣ: ಭವ 17:53 ಅಮೃತಕಾಲ: 3:50 ರಿಂದ 05: 33ರ ವರೆಗೆ

ಸೂರ್ಯೋದಯ : 06:53  ಸೂರ್ಯಾಸ್ತ : 05:39

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು, ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ವಾಹನ ಖರೀದಿ ಬಗ್ಗೆ ವಿಚಾರ ಮಾಡುವಿರಿ. ಈ ಹಿಂದೆ ನಡೆದ ಘಟನೆ ನೆನಪಿಸಿ ಕೊರಗುವುದು ಬೇಡ. ಸಹದ್ಯೋಗಿಗಳಿಂದ ಅಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಇತರರ ವಿರುದ್ಧ ದ್ವೇಷ ಕಾರುತ್ತಾ ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ನಕರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭಫಲ. ಆರ್ಥಿಕ ಪ್ರಗತಿ ಸಾಧಾರಣ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ಕಟಕ: ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಆರ್ಥಿಕ ಸಮಸ್ಯೆಯಿಂದಾಗಿ ಒತ್ತಡ ಹೆಚ್ಚಾಗಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ, ಸ್ನೇಹ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ವ್ಯಾಪಾರ-ವ್ಯವಹಾರದಲ್ಲಿ ಸಾಧಾರಣ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ ಇದೆ. ದೂರದೂರಿಗೆ ಪ್ರಯಾಣ ಮಾಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸ ಕಾರ್ಯಗಳು ನಿಧಾನಗತಿ ಇರಲಿದೆ. ತಾಳ್ಮೆಯಿಂದ ವರ್ತಿಸಿ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಬೇಡ. ಉದ್ಯೋಗಿಗಳಿಗೆ ಶುಭಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಸಮಾರಂಭಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಜನಪ್ರಿಯತೆ ಹೆಚ್ಚಾಗಲಿದೆ. ಪ್ರವಾಸದ ಕುರಿತು ಚರ್ಚೆ ಮಾಡುವಿರಿ. ಕುಟುಂಬದವರ ಸಹಕಾರ ಸಿಗಲಿದೆ. ಕೊಂಚ ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅತಿಯಾದ ಚಿಂತೆ, ಒತ್ತಡ ನಿಮ್ಮ ಆರೋಗ್ಯದ ಮೇಲೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಪರಿಣಾಮವನ್ನು ಬೀರಬಹುದು. ಆದಷ್ಟು ವಿಶ್ರಾಂತಿ ಪಡೆಯಿರಿ, ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳನ್ನು ಕೇಳುವಿರಿ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಅನಿವಾರ್ಯ ಪ್ರಸಂಗಗಳು ನಿಮ್ಮನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಬಹುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ, ಹೂಡಿಕೆಯ ಕುರಿತು ಆಲೋಚನೆ ಮಾಡುವಿರಿ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಉದ್ಯೋಗದ ಕುರಿತು ಆಲೋಚನೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ವಾಹನ ಚಾಲನೆ ಮಾಡುವಾಗ ಜಾಗರೂಕತೆಯಿಂದ ಚಾಲನೆ ಮಾಡಿ, ಅಪಘಾತ ಸಂಭವಿಸಲಿದೆ. ಅವಸರದಲ್ಲಿ ಕೆಲಸ ಮಾಡುವುದು ಬೇಡ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ದಿಢೀರ್ ಪ್ರಯಾಣ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಕನಿಷ್ಠ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮೀನ: ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಮಾತಿನ ಭರದಲ್ಲಿ ಅತಿರೇಕದ ಮಾತುಗಳು ಬೇಡ, ತಾಳ್ಮೆಯಿಂದ ವರ್ತಿಸಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

Continue Reading

ಪ್ರಮುಖ ಸುದ್ದಿ

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷದ ದಶಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavihsya
Koo

ಚಂದ್ರನು ಗುರುವಾರವೂ ತುಲಾ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ಅತಿಯಾದ ಸಂಶಯಾತ್ಮಕ ಸ್ವಭಾವವೇ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ಮಿಥುನ ರಾಶಿಯವರು ದ್ವಿಸ್ವಭಾವದರಾದ ನೀವು ಆಂತರಿಕ ಭಯದಿಂದ ಬಳಲುತ್ತಿರುವ ಹಾಗೆ ಭಾಸವಾಗುವುದು. ವೃಷಭ ರಾಶಿಯವರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರುವ ಮುನ್ನ ಕೋಪದಿಂದ ಹದಗೆಡಲಿದೆ, ತಾಳ್ಮೆಯಿಂದ ವರ್ತಿಸಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (7-12-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷ.
ತಿಥಿ: ದಶಮಿ 29:05 ವಾರ: ಗುರುವಾರ
ನಕ್ಷತ್ರ: ಹಸ್ತ 32:52 ಯೋಗ: ಆಯುಸ್ಮಾನ್ 23:58
ಕರಣ: ವಾಣಿಜ 16:08 ಅಮೃತಕಾಲ: ಮಧ್ಯರಾತ್ರಿ 2:18 ರಿಂದ 04: 03ರ ವರೆಗೆ
ದಿನದ ವಿಶೇಷ: ರಾಷ್ಟ್ರೀಯ ಧ್ವಜ ದಿನ

ಸೂರ್ಯೋದಯ : 06:53  ಸೂರ್ಯಾಸ್ತ : 05:39

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರೋಗ್ಯದಲ್ಲಿ ಪ್ರಗತಿಯಲ್ಲಿ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ಇರಲಿದೆ. ಅತಿಯಾದ ಸಂಶಯಾತ್ಮಕ ಸ್ವಭಾವ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ಧಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಕೈಗೆ ಬಂದ ತುತ್ತು ಬಾಯಿಗೆ ಬರುವ ಮುನ್ನ ಕೋಪದಿಂದ ಹದಗೆಡಲಿದೆ, ತಾಳ್ಮೆಯಿಂದ ವರ್ತಿಸಿ. ಕೆಲಸ ಕಾರ್ಯಗಳಲ್ಲಿ ನಿಧಾನಗತಿ ಇರಲಿದೆ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಆಪ್ತ ವ್ಯಕ್ತಿಗಳಿಂದ ಸಲಹೆ ಸಿಗಲಿದೆ. ಆರ್ಥಿವಾಗಿ ಬಲ ಸಿಗಲಿದೆ. ದ್ವಿಸ್ವಭಾವದರಾದ ನೀವು ಆಂತರಿಕ ಭಯದಿಂದ ಬಳಲುತ್ತಿರುವ ಹಾಗೆ ಭಾಸವಾಗುವುದು. ಆರೋಗ್ಯದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕಟಕ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ಹೊಸ ವ್ಯವಹಾರದಲ್ಲಿ ತೊಡಗುವಿರಿ. ಆತುರದ ತೀರ್ಮಾನಗಳು ಬೇಡ. ಕುಟುಂಬದ ಸದಸ್ಯರೊಂದಿಗೆ ಚರ್ಚೆ ನಡೆಸುವಿರಿ. ಸಂಗಾತಿಯ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ಅತಿಯಾದ ವ್ಯಾಮೋಹ ದುಃಖಕ್ಕೆ ಕಾರಣವಾಗಬಹುದು. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಮೇಲುಗೈ ಸಾಧಿಸುವಿರಿ. ನಿಮ್ಮ ಶಕ್ತಿ ಮತ್ತು ನಿಮ್ಮ ಮುಂದಿನ ಯೋಜನೆಗಳನ್ನು ಮರು ನಿರ್ಣಯಿಸುವ ಸಮಯವಿದು. ಆರೋಗ್ಯದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಅತಿಥಿಗಳ ಆಗಮನ ಸಂತಸ ತರುವುದು. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತರ ಮಾತುಗಳು ಪರಿಣಾಮ ಬೀರುವ ಸಾಧ್ಯತೆ ಇದೆ. ಹಣಕಾಸು ವ್ಯವಹಾರದಲ್ಲಿ ಕುಂಠಿತ. ಕುಟುಂಬ ಸದಸ್ಯರ ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು. ಧೃತಿಗೆಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ಉದಾರ ವರ್ತನೆಯನ್ನು ಬಳಸಿ ಕೊಂಡು ಬೆರೆಯವರು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ದೈಹಿಕ ಆಯಾಸವಾಗುವುದು. ಅತಿಯಾದ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಕೆಲಸಕಾರ್ಯಗಳಲ್ಲಿ ನಿಧಾನಗತಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 3

Horoscope Today

ಮಕರ: ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ. ಎಂದಿಗಿಂತ ಇಂದು ಉತ್ಸಾಹದಿಂದ ಇರುವಿರಿ. ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ಸಿಗಲಿದೆ. ಪ್ರೇಮ ಅಂಕುರವಾಗುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಭರವಸೆಯು ನಿಮ್ಮ ಕೆಲಸದಲ್ಲಿ ಸಹಾಯ ಮಾಡುವುದು. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ವ್ಯಾಪಾರ-ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮೀನ: ಪ್ರೀತಿ, ಭರವಸೆ, ನಂಬಿಕೆ, ಸಹಾನುಭೂತಿ, ಆಶಾವಾದ ಮತ್ತು ನಿಷ್ಠೆಗಳಂಥ ಧನಾತ್ಮಕ ಭಾವನೆಗಳನ್ನು ಗ್ರಹಿಸಲು ಮನಸ್ಸು ಪ್ರೋತ್ಸಾಹಿಸುವುದು. ಕಾರ್ಯದಲ್ಲಿ ಪ್ರಗತಿ ಇರಲಿದೆ. ಹಿರಿಯರ ಆಶೀರ್ವಾದ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

Continue Reading
Advertisement
Vishnu Deo Sai New chief minister of Chhattisgarh
ದೇಶ10 mins ago

Chhattisgarh CM: ವಿಷ್ಣು ದೇವ ಸಾಯಿ ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿ

TN Seetharam Book release function
ಕರ್ನಾಟಕ10 mins ago

TN Seetharam: ನನ್ನ ರಾಜಕೀಯ ಪ್ರವೇಶಕ್ಕೆ ಪ್ರೊ. ನಂಜುಂಡಸ್ವಾಮಿ ಕಾರಣ: ಸಿಎಂ ಸಿದ್ದರಾಮಯ್ಯ

Vidyut Jammwal
ಬಾಲಿವುಡ್20 mins ago

Vidyut Jammwal: ಬೆತ್ತಲಾಗಿ ಹಿಮಾಲಯದಲ್ಲಿದ್ದಾರೆ ಈ ಫೇಮಸ್‌ ನಟ! ಸೋಷಿಯಲ್‌ ಮೀಡಿಯಾದಲ್ಲಿ ಫೋಟೊ!

England vs West Indies, 3rd ODI
ಕ್ರಿಕೆಟ್24 mins ago

WI vs ENG: ಇಂಗ್ಲೆಂಡ್​ ವಿರುದ್ಧ 25 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ವೆಸ್ಟ್​ ಇಂಡೀಸ್​

pdo new
ಕರ್ನಾಟಕ25 mins ago

Corruption Case: ನರೇಗಾದಲ್ಲಿ 150 ಕೋಟಿ ರೂ. ಭ್ರಷ್ಟಾಚಾರ; ನಾಲ್ವರು ಪಿಡಿಒಗಳ ಅಮಾನತು

sukhdev
ದೇಶ30 mins ago

ರಜಪೂತ ನಾಯಕನ ಹತ್ಯೆ ಸಂಚು ನಡೆದಿದ್ದು ಕೆನಡಾದಲ್ಲಿ; ಇದರ ಹಿಂದೆ ಇರೋದು ಯಾರು?

BJP likely to choose cm for Chhattisgarh chief minister
ದೇಶ35 mins ago

ಛತ್ತೀಸ್‌ಗಢಗೆ ಇಂದೇ ಸಿಎಂ ಫೈನಲ್! ಯಾರಾಗ್ತಾರೆ ಮುಖ್ಯಮಂತ್ರಿ?

Karavali prajwal devaraj
South Cinema48 mins ago

Prajwal Devaraj: ಕೋಣದ ಮೇಲೆ ಪ್ರಜ್ವಲ್ ಸವಾರಿ; ‘ಕರಾವಳಿ’ ಟೀಸರ್ ಔಟ್‌!

Dog killing
ದೇಶ53 mins ago

Viral Video : ನಾಯಿಮರಿಯನ್ನು ನೆಲಕ್ಕೆ ಬಡಿದು ತುಳಿದು ಸಾಯಿಸಿದ ಕ್ರೂರಿ, ಭಯಾನಕ ವಿಡಿಯೊ ಇಲ್ಲಿದೆ

Actor Shivarajkumar rejects DKS offer
ಕರ್ನಾಟಕ54 mins ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Actor Shivarajkumar rejects DKS offer
ಕರ್ನಾಟಕ54 mins ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

HD Kumaraswamy attack on congress
ಕರ್ನಾಟಕ4 hours ago

HD Kumaraswamy: ಬಿಜೆಪಿಗೆ ‌50 ಶಾಸಕರ ಕರ್ಕೊಂಡು ಬರ್ತೇವೆ ಎಂದಿರುವ ಕಾಂಗ್ರೆಸ್‌ ನಾಯಕ!

Dina Bhavishya
ಪ್ರಮುಖ ಸುದ್ದಿ12 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ1 day ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema2 days ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema2 days ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ2 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಟ್ರೆಂಡಿಂಗ್‌