Makar Sankranti 2023 | ಸಂಕ್ರಾಂತಿ ಹಬ್ಬದಂದು ಯಾವ ರಾಶಿಯವರು ಏನು ದಾನ ಮಾಡಬೇಕು? - Vistara News

ಪ್ರಮುಖ ಸುದ್ದಿ

Makar Sankranti 2023 | ಸಂಕ್ರಾಂತಿ ಹಬ್ಬದಂದು ಯಾವ ರಾಶಿಯವರು ಏನು ದಾನ ಮಾಡಬೇಕು?

ಪುಣ್ಯಗಳಿಸಲು ಸಂಕ್ರಾಂತಿ (Makar Sankranti 2023) ಅತ್ಯಂತ ಪ್ರಶಸ್ತವಾದ ಕಾಲವಾಗಿದೆ. ಸೂರ್ಯನು ಮಕರ ರಾಶಿಗೆ ಪ್ರವೇಶಿಸುವ ದಿನದಂದು ಸೂರ್ಯನ ಉಪಾಸನೆ ಮಾಡುವುದರ ಜೊತೆಗೆ ಅಗತ್ಯವಿರುವವರಿಗೆ ರಾಶಿಯನುಸಾರ ಕೆಲವು ವಸ್ತುಗಳನ್ನು ದಾನ ಮಾಡಿದರೆ ಪುಣ್ಯಫಲ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಹಾಗಾದರೆ ಯಾವ್ಯಾವ ರಾಶಿಯ ವ್ಯಕ್ತಿಗಳು ಯಾವ್ಯಾವ ವಸ್ತುಗಳನ್ನು ದಾನವಾಗಿ ನೀಡಿದರೆ ಶುಭ ಎಂಬುದನ್ನು ನೋಡೋಣ.

VISTARANEWS.COM


on

Makar Sankranti 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಮ್ಮ ಹಬ್ಬಗಳಲ್ಲಿಯೇ ಮಕರ ಸಂಕ್ರಾಂತಿಗೆ ವಿಶೇಷ ಮಹತ್ವವಿದೆ. ಈ ಹಬ್ಬವನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತದೆ. ಸೂರ್ಯನು ಮಕರ ರಾಶಿಗೆ ಪ್ರವೇಶಿಸುವ ಶುಭ ದಿನವೇ ಸಂಕ್ರಾಂತಿಯಾಗಿದೆ. ಇದು ಉತ್ತರಾಯಣದ ಪುಣ್ಯಕಾಲದ ಆರಂಭವು ಸಹ ಆಗಿರುತ್ತದೆ. ಈ ಸಮಯದಲ್ಲಿ ಸೂರ್ಯನ ಉಪಾಸನೆಯ ಜೊತೆಗೆ ವಿಷ್ಣು ಮತ್ತು ಲಕ್ಷ್ಮೀ ದೇವಿಯನ್ನು ಆರಾಧಿಸಿದರೆ ವಿಶೇಷ ಪುಣ್ಯಫಲ ಪ್ರಾಪ್ತಿಯಾಗುತ್ತದೆ. ಈ ಬಾರಿ ಜನವರಿ 15ರ ಭಾನುವಾರದಂದು ಮಕರ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ.

ಎಳ್ಳು ಬೆಲ್ಲದ ಹಬ್ಬ
ಸೂರ್ಯನು ಮಕರ ರಾಶಿಗೆ ಪ್ರವೇಶಿಸಿದ ಈ ದಿನವೇ ಉತ್ತರಾಯಣದ ಪುಣ್ಯಕಾಲವಾಗಿದೆ. ಕರ್ನಾಟಕದಲ್ಲಿ ಇದು ಸುಗ್ಗಿಯ ಸಂಭ್ರಮದ ಕಾಲವು ಸಹ ಆಗಿದೆ, ಹಾಗಾಗಿ ಈ ಹಬ್ಬವನ್ನು ಅತ್ಯಂತ ಸಡಗರ ಮತ್ತು ಉತ್ಸಾಹದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷವೆಂದರೆ ಎಳ್ಳುಬೆಲ್ಲದ ಮಿಶ್ರಣವನ್ನು ವಿತರಿಸುವುದು. ಇದಕ್ಕೆ ಎಳ್ಳು ಬೀರುವುದು ಎಂದು ಸಹ ಕರೆಯುತ್ತಾರೆ.

ಸಂಕ್ರಾಂತಿಯಂದು ಮಾವಿನ ತೋರಣಗಳ ಜೊತೆಗೆ ಬಣ್ಣದ ರಂಗೋಲಿಗಳಿಂದ ಮನೆಯನ್ನು ಅಲಂಕರಿಸುವುದು ವಿಶೇಷವಾಗಿದೆ. “ಎಳ್ಳು ಬೆಲ್ಲ ತಿಂದು ಒಳ್ಳೆ ಮಾತನಾಡು” ಎಂದು ಎಳ್ಳು ಬೆಲ್ಲವನ್ನು ಹಂಚುತ್ತಾ ಸಿಹಿ ಸಿಹಿಯ ಮಾತನಾಡುವುದು ಈ ಹಬ್ಬದ ವಿಶೇಷ. ಈ ದಿನದಂದು ಎಳ್ಳು ಬೆಲ್ಲ ತಿನ್ನುವುದರ ಹಿಂದೆ ವಿಶೇಷ ಕಾರಣವಿದೆ. ಎಳ್ಳು, ಶೇಂಗಾ ಮತ್ತು ಬೆಲ್ಲ ಚಳಿಗಾಲದಲ್ಲಿ ದೇಹಕ್ಕೆ ಉತ್ತಮ ಆರೋಗ್ಯವನ್ನು ನೀಡುತ್ತದೆ. ಸಂಕ್ರಾಂತಿಯ ದಿನ ಮಹಿಳೆಯರು ಮತ್ತು ಮಕ್ಕಳು ನೆರೆಹೊರೆಯವರಿಗೆ ಎಳ್ಳು ಬೆಲ್ಲದ ಮಿಶ್ರಣವನ್ನು ಮತ್ತು ಕಬ್ಬನ್ನು ಹಂಚುತ್ತಾರೆ. ಅಷ್ಟೇ ಅಲ್ಲದೇ ವಿಶೇಷವಾದ ಸಿಹಿ ತಿನಿಸುಗಳು, ಸಿಹಿ ಮತ್ತು ಖಾರದ ಕಿಚಡಿಯನ್ನು ಈ ದಿನ ತಯಾರಿಸಲಾಗುತ್ತದೆ.

ವಿಶೇಷವಾಗಿ ಸಂಕ್ರಾಂತಿಯಂದು ಅನೇಕ ವಸ್ತುಗಳನ್ನು ದಾನ ಮಾಡುವುದು ಪುಣ್ಯ ಪಡೆದುಕೊಳ್ಳಲು ಉತ್ತಮ ಮಾರ್ಗವಾಗಿದೆ. ಉಳಿದ ದಿನಗಳಿಗಿಂತ ಮಕರ ಸಂಕ್ರಾಂತಿಯಂದು ಮಾಡುವ ದಾನಕ್ಕೆ ವಿಶೇಷ ಫಲವಿದೆ ಎಂದು ಶಾಸ್ತ್ರ ಹೇಳುತ್ತದೆ. ಈ ದಿನ ದಾನ ಮಾಡುವುದರಿಂದ ಸುಖ ಮತ್ತು ಸೌಭಾಗ್ಯವು ಸಹ ಪ್ರಾಪ್ತಿಯಾಗುತ್ತದೆ. ಹಾಗಾದರೆ ರಾಶಿಗೆ ಅನುಗುಣವಾಗಿ ಯಾವ್ಯಾವ ವಸ್ತುಗಳನ್ನು ದಾನ ಮಾಡಿದರೆ ಪುಣ್ಯಫಲ ಪ್ರಾಪ್ತಿಯಾಗುತ್ತದೆ ಎಂಬುದನ್ನು ತಿಳಿಯೋಣ.

ಯಾವ ರಾಶಿಯವರು ಏನು ದಾನ ಮಾಡಬೇಕು?

horoscope today

ಮೇಷ : ಈ ರಾಶಿಯ ವ್ಯಕ್ತಿಗಳು ಬೆಲ್ಲದ ಸಿಹಿ ತಿನಿಸುಗಳು, ಶೇಂಗಾ, ಎಳ್ಳು ಮತ್ತು ಬೆಲ್ಲವನ್ನು ಅಗತ್ಯವಿರುವವರಿಗೆ ದಾನ ಮಾಡುವುದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ.

ವೃಷಭ: ರಾಶಿಯ ವ್ಯಕ್ತಿಗಳು ಅಕ್ಕಿ, ಮೊಸರು, ಶ್ವೇತ ವಸ್ತ್ರ, ಎಳ್ಳಿನಿಂದ ಮಾಡಿದ ಸಿಹಿ ತಿನಿಸುಗಳನ್ನು ಈ ದಿನ ದಾನವಾಗಿ ನೀಡಿದರೆ ಶುಭ.

ಮಿಥುನ: ಮಿಥುನ ರಾಶಿಯ ವ್ಯಕ್ತಿಗಳು ಅಕ್ಕಿ, ಬಿಳಿ ಮತ್ತು ಹಸಿರು ಬಣ್ಣದ ಹೊದಿಕೆಗಳು ಮತ್ತು ಹೆಸರು ಬೇಳೆಯನ್ನು ದಾನವಾಗಿ ನೀಡಿದರೆ ಉತ್ತಮ.

ಕರ್ಕಾಟಕ: ರಾಶಿಯ ವ್ಯಕ್ತಿಗಳು ಬಿಳಿ ಎಳ್ಳು ಅಥವಾ ಕರ್ಪೂರವನ್ನು ದಾನ ಮಾಡಿದರೆ ಉತ್ತಮ. ಅನುಕೂಲವಿರುವವರು ಬೆಳ್ಳಿಯ ವಸ್ತುಗಳನ್ನು ದಾನ ಮಾಡಿದರೆ ಶುಭ.

ಸಿಂಹ: ಈ ರಾಶಿಯ ವ್ಯಕ್ತಿಗಳು ತಾಮ್ರದ ವಸ್ತುಗಳನ್ನು, ಬಿಳಿ ಎಳ್ಳಿನಿಂದ ಮಾಡಿದ ಸಿಹಿ ತಿನಿಸುಗಳನ್ನು ದಾನ ಮಾಡಿದರೆ ಒಳಿತಾಗುತ್ತದೆ.

ಕನ್ಯಾ: ರಾಶಿಯ ವ್ಯಕ್ತಿಗಳು ಹಸಿರು ಬಣ್ಣದ ಹೊದಿಕೆ, ಅಕ್ಕಿ ಮತ್ತು ಬೇಳೆಯಿಂದ ತಯಾರಿಸಿದ ಕಿಚಡಿಯನ್ನು ದಾನ ಮಾಡುವುದು ಒಳ್ಳೆಯದು.

ತುಲಾ: ಈ ರಾಶಿಯ ವ್ಯಕ್ತಿಗಳು ಸಕ್ಕರೆ, ಬಿಳಿ ವಸ್ತ್ರ, ಕೀರು ಅಥವಾ ಕರ್ಪೂರವನ್ನು ದಾನವಾಗಿ ನೀಡಬೇಕು.

ವೃಶ್ಚಿಕ: ಈ ರಾಶಿಯ ವ್ಯಕ್ತಿಗಳು ಕೆಂಪು ಬಣ್ಣದ ಬಟ್ಟೆ ಅಥವಾ ಎಳ್ಳನ್ನು ದಾನವಾಗಿ ನೀಡಬೇಕು.

ಧನು: ರಾಶಿಯ ವ್ಯಕ್ತಿಗಳು ಹಳದಿ ಬಣ್ಣದ ಬಟ್ಟೆ ಅಥವಾ ಬಂಗಾರದ ವಸ್ತುಗಳನ್ನು ದಾನ ಮಾಡಿದರೆ ಶುಭವಾಗುತ್ತದೆ.

ಮಕರ: ಈ ರಾಶಿಯ ವ್ಯಕ್ತಿಗಳು ಶನಿಗೆ ಪ್ರಿಯವಾಗಿರುವ ಕಪ್ಪು ಬಣ್ಣದ ಹೊದಿಕೆ ಮತ್ತು ಕಪ್ಪು ಎಳ್ಳನ್ನು ದಾನವಾಗಿ ನೀಡುವುದರಿಂದ ಒಳಿತಾಗುತ್ತದೆ.

ಕುಂಭ: ಈ ರಾಶಿಯ ವ್ಯಕ್ತಿಗಳು ಕಿಚಡಿ ಮತ್ತು ಎಳ್ಳನ್ನು ದಾನವಾಗಿ ನೀಡಬೇಕು.

ಮೀನ: ರೇಷ್ಮೇ ವಸ್ತ್ರಗಳು, ಕಡಲೆ, ಬೇಳೆ ಕಾಳುಗಳು ಮತ್ತು ಎಳ್ಳನ್ನು ದಾನವಾಗಿ ನೀಡಿದರೆ ಉತ್ತಮ.

ಇದನ್ನೂ ಓದಿ| Makar Sankranti 2023 | ಕರುನಾಡಿನ ಸುಗ್ಗಿಯ ಹಬ್ಬ ಮಕರ ಸಂಕ್ರಾಂತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Rahul Dravid: ಸಾಮಾನ್ಯರಂತೆ ಕ್ಯೂನಲ್ಲಿ ನಿಂತು ಮತದಾನ ಮಾಡಿದ ರಾಹುಲ್‌ ದ್ರಾವಿಡ್;‌ ವಿಡಿಯೊ ಇಲ್ಲಿದೆ

Rahul Dravid: Lok Sabha Election: ಮೊದಲ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದೆ. ಬಿಸಿಲನ್ನೂ ಲೆಕ್ಕಿಸದೆ ಜನ ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಸೆಲೆಬ್ರಿಟಿಗಳು ಕೂಡ ಮತದಾನಕ್ಕೆ ಸಾಥ್‌ ನೀಡುತ್ತಿರುವುದು ಪ್ರಮುಖ ಸಂಗತಿಯಾಗಿದೆ. ಅದರಲ್ಲೂ, ರಾಹುಲ್‌ ದ್ರಾವಿಡ್‌ ಅವರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿರುವ ವಿಡಿಯೊ ಭಾರಿ ವೈರಲ್‌ ಅಗಿದೆ.

VISTARANEWS.COM


on

Rahul Dravid
Koo

ಬೆಂಗಳೂರು: ಭಾರತೀಯ ಕ್ರಿಕೆಟ್‌ ತಂಡದ ಮುಖ್ಯ ತರಬೇತುದಾರ, ಮಾಜಿ ಕ್ರಿಕೆಟಿಗ, ವಾಲ್‌ ಎಂದೇ ಖ್ಯಾತಿಯಾದ ರಾಹುಲ್‌ ದ್ರಾವಿಡ್‌ (Rahul Dravid) ಅವರು ಬೆಂಗಳೂರಿನಲ್ಲಿ (Bengaluru) ಮತದಾನ ಮಾಡಿದ್ದಾರೆ. ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ಹಿನ್ನೆಲೆಯಲ್ಲಿ ರಾಹುಲ್‌ ಅವರು ಮಲ್ಲೇಶ್ವರಂ ಮತಗಟ್ಟೆಯಲ್ಲಿ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. ಹಾಗೆಯೇ, ಜನರಿಂದ ಭಾರಿ ಮೆಚ್ಚುಗೆಯೂ ವ್ಯಕ್ತವಾಗಿದೆ.

ಚುನಾವಣೆ ಆಯೋಗದ ಮಾಹಿತಿ ಪ್ರಕಾರ, ಮಧ್ಯಾಹ್ನ 3 ಗಂಟೆ ವೇಳಗೆ ಶೇ.50.93ರಷ್ಟು ಮತದಾನ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.58.76ರಷ್ಟು ಮತದಾನ ದಾಖಲಾಗಿದ್ದು, ಇದೇ ಜಿಲ್ಲೆಯಲ್ಲಿ ಹೆಚ್ಚು ಮತದಾನ ದಾಖಲಾಗಿದೆ. ಬೆಂಗಳೂರು ಕೇಂದ್ರದಲ್ಲಿ ಶೇ.40.10ರಷ್ಟು ಮತದಾನ ನಡೆದಿದ್ದು, ಅತಿ ಕಡಿಮೆ ಮತದಾನ ದಾಖಲಾದ ಜಿಲ್ಲೆ ಎನಿಸಿದೆ. ಉಡುಪಿ-ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರಿನಲ್ಲೂ ಹೆಚ್ಚಿನ ಜನ ಮತದಾನ ಮಾಡಿದ್ದಾರೆ.

ಹಸಿಮಣೆ ಏರುವ ಮೊದಲು ಮತದಾನ ಮಾಡಿದ ವರ

ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕಿನ ಸಂತೇಮರಳ್ಳಿಯಲ್ಲಿ ವರನೊಬ್ಬ ಮತಗಟ್ಟೆಗೆ ಓಡೋಡಿ ಬಂದು ಮತ ಚಲಾಯಿಸಿದ್ದಾರೆ. ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಮತಕೇಂದ್ರಕ್ಕೆ ಓಡೋಡಿ ಹೋದ ವರ ವೋಟ್‌ ಹಾಕಿ ನಿರಾಳರಾದರು. ವರ ಚೇತನ್ ಎಂಬುವವರು ಮತಗಟ್ಟೆ ಸಂಖ್ಯೆ 60ರಲ್ಲಿ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿ ಇತರರಿಗೂ ಮಾದರಿ ಆದರು. ಚೇತನ್‌ ಅವರು ದೀಪಿಕಾ ಎಂಬುವರ ಜತೆಗೆ ವಿವಾಹವಾಗುತ್ತಿದ್ದು, ತಮ್ಮ ಮುಹೂರ್ತದ ವಸ್ತ್ರದಲ್ಲೇ ಬಂದು ವೋಟ್‌ ಹಾಕಿದ್ದಾರೆ.

ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಕೊತ್ತುಗೋಡು ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮುಹೂರ್ತಕ್ಕೂ ಮುನ್ನ ನವ ವಧುವೊಬ್ಬರು ಮತದಾನ ಮಾಡಿ ಗಮನ ಸೆಳೆದಿದ್ದಾರೆ. ರೇಷ್ಮೆ ಸೀರೆ ಉಟ್ಟಿದ್ದ ಮದುವಣಗಿತ್ತಿ ಸಂಪೂರ್ಣ ರೆಡಿಯಾಗಿ ಬಂದು ಮತ ಚಲಾಯಿಸಿ ಮದುವೆ ಮಂಟಪಕ್ಕೆ ಹೋಗಿದ್ದಾರೆ. ಬಳಿಕ ಹಸೆಮಣೆ ಏರಿದ್ದಾರೆ. ಈ ಮೂಲಕ ತಮ್ಮ ಹಕ್ಕನ್ನು ಚಲಾವಣೆ ಮಾಡಿದ್ದಾರೆ. ಕುಂದೂರಿನ ತಳವಾರದ ಸೌಮ್ಯಾ ಅವರು ಮೂಡಿಗೆರೆಯ ಕಲ್ಯಾಣ ಮಂಟಪಕ್ಕೆ ತೆರಳುವ ವೇಳೆ ಕುಟುಂಬ ಸಮೇತ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ.

ಇದನ್ನೂ ಓದಿ: Gold Rate Today: ಮತದಾನದ ದಿನ ಬಂಗಾರದ ದರ ತೇಜಿ, ಬೆಂಗಳೂರಿನಲ್ಲಿ 24K ಚಿನ್ನಕ್ಕೆ ₹440 ಏರಿಕೆ

Continue Reading

ಕ್ರೀಡೆ

Virat Kohli : ಕೊಹ್ಲಿಯ ನಿಧಾನಗತಿಯ ಬ್ಯಾಟಿಂಗ್​ ಬಗ್ಗೆ ಬೇಸರ ವ್ಯಕ್ತಪಡಿಸಿದ ಗವಾಸ್ಕರ್; ಏನಂದ್ರು ಅವರು?

Virat Kohli: ಎಸ್ಆರ್​​ಎಚ್​​ನ ಸ್ಪಿನ್ ಜೋಡಿ ಶಹಬಾಜ್ ಅಹ್ಮದ್ ಮತ್ತು ಮಯಾಂಕ್ ಮಾರ್ಕಂಡೆ ಗೆ ಕೊಹ್ಲಿ ಹೆದರಿದರು. ಹೀಗಾಗಿ ಅವರ ರನ್ ವೇಗ ಕಡಿಮೆಯಾಯಿತು. 15ನೇ ಓವರ್​ನಲ್ಲಿ ಜಯದೇವ್ ಉನಾದ್ಕಟ್ 43 ಎಸೆತಗಳಲ್ಲಿ 51 ರನ್ ಗಳಿಸಿ ಔಟಾಗುವ ಮೊದಲು ಕೊಹ್ಲಿ ತಮ್ಮ ಕೊನೆಯ 25 ಎಸೆತಗಳಲ್ಲಿ ಕೇವಲ 19 ರನ್ ಗಳಿಸಿದರು. ಇದು ಅವರ ಸ್ಟ್ರೈಕ್​ ರೇಟ್​​ ಕಡಿಮೆಯಾಗಲು ಕಾರಣವಾಯಿತು.

VISTARANEWS.COM


on

Virat Kohli
Koo

ಬೆಂಗಳೂರು: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಗುರುವಾರ (ಏಪ್ರಿಲ್ 25) ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) ಮತ್ತು ಸನ್​ರೈರ್ಸ್​​ ಹೈದರಾಬಾದ್ ನಡುವಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಅರ್ಧ ಶತಕ ಬಾರಿಸಿದ್ದಾರೆ. ಟಾಸ್ ಗೆದ್ದ ಆರ್​​ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ನಂತರ, ಕೊಹ್ಲಿ ಎಸ್ಆರ್​ಎಚ್​​​ ಬೌಲರ್​ಗಳನ್ನು ಎದುರಿಸಿ ಉತ್ತಮ ಆರಂಭ ಪಡೆದರು. ಪವರ್​ಪ್ಲೇನಲ್ಲಿ ಕೇವಲ 18 ಎಸೆತಗಳಲ್ಲಿ 32 ರನ್ ಗಳಿಸಿದ ಮಾಜಿ ಆರ್​​ಸಿಬಿ ನಾಯಕ ದೊಡ್ಡ ಮೊತ್ತಕ್ಕೆ ಸಜ್ಜಾಗುತ್ತಿರುವಂತೆ ತೋರಿತು.

ಆದಾಗ್ಯೂ, ಎಸ್ಆರ್​​ಎಚ್​​ನ ಸ್ಪಿನ್ ಜೋಡಿ ಶಹಬಾಜ್ ಅಹ್ಮದ್ ಮತ್ತು ಮಯಾಂಕ್ ಮಾರ್ಕಂಡೆ ಗೆ ಕೊಹ್ಲಿ ಹೆದರಿದರು. ಹೀಗಾಗಿ ಅವರ ರನ್ ವೇಗ ಕಡಿಮೆಯಾಯಿತು. 15ನೇ ಓವರ್​ನಲ್ಲಿ ಜಯದೇವ್ ಉನಾದ್ಕಟ್ 43 ಎಸೆತಗಳಲ್ಲಿ 51 ರನ್ ಗಳಿಸಿ ಔಟಾಗುವ ಮೊದಲು ಕೊಹ್ಲಿ ತಮ್ಮ ಕೊನೆಯ 25 ಎಸೆತಗಳಲ್ಲಿ ಕೇವಲ 19 ರನ್ ಗಳಿಸಿದರು. ಇದು ಅವರ ಸ್ಟ್ರೈಕ್​ ರೇಟ್​​ ಕಡಿಮೆಯಾಗಲು ಕಾರಣವಾಯಿತು.

ಮಧ್ಯಮ ಓವರ್​ಗಳಲ್ಲಿ ರನ್​ ವೇಗವನ್ನು ಹೆಚ್ಚಿಸಲು ಕೊಹ್ಲಿಯ ಪರದಾಡಿರುವ ಬಗ್ಗೆ ಭಾರತದ ಮಾಜಿ ಆರಂಭಿಕ ಆಟಗಾರ ಸುನಿಲ್ ಗವಾಸ್ಕರ್ ಅವರಿಂದ ತೀವ್ರ ಟೀಕೆ ಮಾಡಿದ್ದಾರೆ.

“ಮಧ್ಯಂತರದಲ್ಲಿ ಅವರು ವೇಗ ಕಳೆದುಕೊಂಡಂತೆ ತೋರುತ್ತದೆ. ನಿಖರವಾದ ಸಂಖ್ಯೆಗಳ ಬಗ್ಗೆ ನನಗೆ ಖಚಿತವಿಲ್ಲ, ಆದರೆ 31-32 ರಿಂದ ಅವರು ಔಟ್ ಆಗುವವರೆಗೂ ಅವರು ಬೌಂಡರಿ ಹೊಡೆಯಲಿಲ್ಲ ಎಂದು ನಾನು ಭಾವಿಸುತ್ತೇನೆ. ಆದ್ದರಿಂದ ದಿನದ ಕೊನೆಯಲ್ಲಿ, ನೀವು ಇನ್ನಿಂಗ್ಸ್​ನ ಮೊದಲ ಎಸೆತದಲ್ಲಿ ಸ್ಟ್ರೈಕ್ ಎದುರಿಸುತ್ತಿರುವಾಗ ಅವರು ಔಟಾದಾಗ ಮತ್ತು ನೀವು 14 ಅಥವಾ 15 ನೇ ಓವರ್​ನಲ್ಲಿ ಔಟಾದಾಗ, ಅವರಿಂದ 118 ಸ್ಟ್ರೈಕ್ ರೇಟ್ ದೊರಕಿದೆ. ನಿಮ್ಮ ತಂಡವು ನಿಮ್ಮಿಂದ ನಿರೀಕ್ಷಿಸುವುದು ಅದಲ್ಲ”ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ.

ವಿರಾಟ್ ಕೊಹ್ಲಿ ಬಹುಶಃ ಅದನ್ನು ಮಾಡಬೇಕಾಗಿತ್ತು: ಸೈಮನ್ ಕ್ಯಾಟಿಚ್

ಕೊಹ್ಲಿ ರನ್​​ ವೇಗದ ಬಗ್ಗೆ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಸೈಮನ್ ಕ್ಯಾಟಿಚ್ ಹೊಗಳಿದ್ದಾರೆ. ಅವರ ಅರ್ಧ ಶತಕವು ಬೆಂಗಳೂರು ಮೂಲದ ಫ್ರಾಂಚೈಸಿಗೆ ಭಾರಿ ನೆರವು ನೀಡಿತು ಎಂದು ಅಭಿಪ್ರಾಯಪಟ್ಟಿದ್ದಾರೆ. ಅವರು ಉತ್ತಮ ಆರಂಭವನ್ನು ಪಡೆಯಲು ಮತ್ತು ಅಪಾಯಕಾರಿ ಎಸ್​ಆರ್​​ಎಚ್​​​ ಬ್ಯಾಟಿಂಗ್ ಲೈನ್ಅಪ್ ವಿರುದ್ಧ ರನ್​ ಗಳಿಸಲ ನೆರವಾಯಿತು ಎಂದು ಹೇಳಿದರು.

ಇದನ್ನೂ ಓದಿ: World Record : ಒಂದೇ ಒಂದು ರನ್​ ನೀಡದೇ 7 ವಿಕೆಟ್​ ಉರುಳಿಸಿದ ಬೌಲರ್​​; ಕ್ರಿಕೆಟ್​ ಕ್ಷೇತ್ರದಲ್ಲಿ ವಿಶ್ವ ದಾಖಲೆ

ಅವರಿಂದಾಗಿ ರಜತ್ ಪಾಟಿದಾರ್ ಸುಂದರವಾಗಿ ಆಡಿದರು ಎಂದು ನಾನು ಭಾವಿಸುತ್ತೇನೆ. ಅವರು ಬೌಂಡರಿ ಮತ್ತು ಸಿಕ್ಸರ್​ಗಳನ್ನು ಹೊಡೆಯಲು ಪ್ರಯತ್ನಿಸುತ್ತಿದ್ದರು. ವಿರಾಟ್ ಕೊಹ್ಲಿ ಬಹುಶಃ ಅದನ್ನು ಮಾಡಬೇಕಾಗಿತ್ತು. ಸನ್​ರೈಸರ್ಸ್​ ವಿರುದ್ಧ ಆರ್​​ಸಿಬಿಗೆ ಸ್ಟ್ರೈಕ್ ರೇಟ್ ನಷ್ಟವಾಗಿದೆ ಎಂದು ನಾನು ಭಾವಿಸುತ್ತೇನೆ. ಎಸ್ಆರ್​ಎಚ್​​​ ವಿರುದ್ಧ 206 ರನ್ ಗಳಿಸಿದರೆ ಸಾಕಾಗುವುದಿಲ್ಲ “ಎಂದು ಕ್ಯಾಟಿಚ್ ಹೇಳಿದರು.

ರಜತ್ ಪಾಟಿದಾರ್ ಅವರ 20 ಎಸೆತಗಳಲ್ಲಿ 50 ರನ್ ಗಳಿಸುವ ಮೂಲಕ ಆರ್​ಸಿಬಿ 7 ವಿಕೆಟ್ ನಷ್ಟಕ್ಕೆ 206 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ಕಳೆದ ಕೆಲವು ಪಂದ್ಯಗಳಲ್ಲಿ ಕೊಹ್ಲಿ ತಮ್ಮ ಇನ್ನಿಂಗ್ಸ್ ಅನ್ನು ವೇಗಗೊಳಿಸಲು ವಿಫಲರಾಗಿದ್ದರೂ ಐಪಿಎಲ್ 2024 ರಲ್ಲಿ 430 ರನ್​​ಗಳೊಂದಿಗೆ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಆರ್​​ಸಿಬಿ ಪ್ರಸ್ತುತ ನಾಲ್ಕು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಏಪ್ರಿಲ್ 28ರಂದು ನಡೆಯಲಿರುವ ತನ್ನ ಮುಂದಿನ ಪಂದ್ಯದಲ್ಲಿ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ.

Continue Reading

Lok Sabha Election 2024

Lok Sabha Election 2024: ಚಾಮರಾಜನಗರದಲ್ಲಿ ಮತ ಯಂತ್ರ ಪೀಸ್‌ ಪೀಸ್‌; ಮತಗಟ್ಟೆ ಧ್ವಂಸ, ಲಾಠಿ ಚಾರ್ಜ್‌!

Lok Sabha Election 2024: ಕನಿಷ್ಠ ಮೂಲಭೂತ ಸೌಕರ್ಯವನ್ನೂ ನೀಡಲಾಗಿಲ್ಲ. ಕುಡಿಯುವ ನೀರು, ರಸ್ತೆ, ವಿದ್ಯುತ್, ಆರೋಗ್ಯ, ಶಿಕ್ಷಣ ಎಲ್ಲವೂ ಇಲ್ಲಿ ಮರೀಚಿಕೆಯಾಗಿದೆ. ಕೆಲವು ದಿನಗಳ ಹಿಂದೆಯೇ ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಆದರೂ, ಯಾವೊಂದು ಭರವಸೆ ಸಿಗದೇ ಇರುವ ಹಿನ್ನೆಲೆಯಲ್ಲಿ ಮತದಾನವನ್ನು ಬಹಿಷ್ಕಾರ ಮಾಡುತ್ತಿರುವುದಾಗಿ ಗ್ರಾಮಸ್ಥರು ಹೇಳಿದ್ದಾರೆ. ಇನ್ನು ಇಂಡಿಗನತ್ತ ಗ್ರಾಮಸ್ಥರು ಮತಗಟ್ಟೆಯನ್ನು ಪುಡಿ ಪುಡಿ ಮಾಡಿದ್ದಾರೆ.

VISTARANEWS.COM


on

Lok Sabha Election 2024 Villagers vandalise polling booth in Chamarajanagar
Koo

ಚಾಮರಾಜನಗರ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ನಡೆಯುತ್ತಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದರೆ, ಚಾಮರಾಜನಗರ ಲೋಕಸಭಾ ಕ್ಷೇತ್ರದ (Chamarajanagar Lok Sabha constituency) ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕರಿಸಲಾಗಿದೆ. ಇದೇ ವೇಳೆ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯನ್ನೇ ಧ್ವಂಸ ಮಾಡಲಾಗಿದೆ.

ಎಷ್ಟೇ ಬಾರಿ ಮನವಿ ಮಾಡಿದರೂ ಈ ಗ್ರಾಮಗಳಲ್ಲಿ ಮೂಲ ಸೌಕರ್ಯವನ್ನು ಕಲ್ಪಿಸಲಾಗಿಲ್ಲ. ಚುನಾವಣೆ ಬಂದಾಗ ಮಾತ್ರ ಈ ರಾಜಕಾರಣಿಗಳಿಗೆ ನಮ್ಮ ನೆನಪಾಗುತ್ತದೆ. ಅದಾದ ಬಳಿಕ ನಮ್ಮನ್ನು ಕೇಳುವವರೇ ಇಲ್ಲ ಎಂದು ಆರೋಪಿಸಿ ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳ ಗ್ರಾಮಸ್ಥರು ಮತದಾನವನ್ನು ಬಹಿಷ್ಕಾರ ಮಾಡಿದ್ದಾರೆ.

Lok Sabha Election 2024 Villagers vandalise polling booth in Chamarajanagar

85 ಮಂದಿಯಲ್ಲಿ ಮತ ಚಲಾಯಿಸಿದ್ದು ಇಬ್ಬರೇ!

ಇಂಡಿಗನತ್ತ, ತೇಕಣೆ, ಮೆಂದಾರೆ ಹಾಗೂ ತುಳಸಿಕೆರೆ ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕಾರ ಮಾಡಲಾಗಿದೆ. ಪಡಸಲನತ್ತ ಗ್ರಾಮದಲ್ಲಿ 85 ಮತದಾರರ ಪೈಕಿ ಕೇವಲ ಇಬ್ಬರು ಮತದಾನ ಮಾಡಿದ್ದಾರೆ. ಉಳಿದಂತೆ ಮತಗಟ್ಟೆಗಳತ್ತ ಯಾರೊಬ್ಬರೂ ಸುಳಿದಿಲ್ಲ.

Lok Sabha Election 2024 Villagers vandalise polling booth in Chamarajanagar

ನೀರು, ರಸ್ತೆ, ವಿದ್ಯುತ್‌ ಏನೂ ಇಲ್ಲ!

ಕನಿಷ್ಠ ಮೂಲಭೂತ ಸೌಕರ್ಯವನ್ನೂ ನೀಡಲಾಗಿಲ್ಲ. ಕುಡಿಯುವ ನೀರು, ರಸ್ತೆ, ವಿದ್ಯುತ್, ಆರೋಗ್ಯ, ಶಿಕ್ಷಣ ಎಲ್ಲವೂ ಇಲ್ಲಿ ಮರೀಚಿಕೆಯಾಗಿದೆ. ಕೆಲವು ದಿನಗಳ ಹಿಂದೆಯೇ ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಆದರೂ, ಯಾವೊಂದು ಭರವಸೆ ಸಿಗದೇ ಇರುವ ಹಿನ್ನೆಲೆಯಲ್ಲಿ ಮತದಾನವನ್ನು ಬಹಿಷ್ಕಾರ ಮಾಡುತ್ತಿರುವುದಾಗಿ ಗ್ರಾಮಸ್ಥರು ಹೇಳಿದ್ದಾರೆ.

ಮತಯಂತ್ರ ಧ್ವಂಸ ಮಾಡಿದ ಗ್ರಾಮಸ್ಥರು

ಇನ್ನು ಇಂಡಿಗನತ್ತ ಗ್ರಾಮದಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆಯನ್ನು ಧ್ವಂಸ ಮಾಡಿದ್ದಾರೆ. ಮತದಾನದಿಂದ ದೂರ ಉಳಿದ ಗ್ರಾಮಸ್ಥರಿಂದ ಈ ಕೃತ್ಯ ನಡೆದಿದೆ. ಈ ವೇಳೆ ಗ್ರಾಮಸ್ಥರ ಮನವೊಲಿಕೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೂ ಹಲ್ಲೆ ನಡೆಸಲಾಗಿದೆ. ಆಕ್ರೋಶಗೊಂಡ ಹಲವರು ಇವಿಎಂ, ಮೇಜು ಕುರ್ಚಿ ಮತಗಟ್ಟೆ ಸಾಮಗ್ರಿಗಳನ್ನು ಧ್ವಂಸ ಮಾಡಿದ್ದಾರೆ.

ಲಾಠಿ ಚಾರ್ಚ್‌; ಹಲವರಿಗೆ ಗಾಯ

ಸ್ಥಳದಲ್ಲಿ ಜನರನ್ನು ಚದುರಿಸಲು ಪೊಲೀಸರಿಂದ ಲಾಠಿ ಚಾರ್ಜ್ ನಡೆಸಲಾಗಿದೆ. ಇದೇ ವೇಳೆ ತಿರುಗಿಬಿದ್ದ ಜನರು ಸಹ ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿದೆ. ಸಾರ್ವಜನಿಕರು ಸೇರಿ ಅಧಿಕಾರಿಗಳಿಗೂ ಗಾಯಗಳಾಗಿವೆ. ಪುರುಷರು, ಮಹಿಳೆಯರು ಎನ್ನದೆ ಪೊಲೀಸರು ಲಾಠಿ ಚಾರ್ಚ್ ಮಾಡಿದ್ದಾರೆ.

ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ನಡೆಯುತ್ತಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ ವೃದ್ಧೆಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದರೂ, ಆಕ್ಸಿಜನ್‌ ಸಮೇತ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ್ದಾರೆ. ಇನ್ನು ಮೈಸೂರಿನ ಹುಣಸೂರಿನಲ್ಲಿ ವೃದ್ಧೆಯೊಬ್ಬರು ಮತ ಚಲಾಯಿಸಿ ಮೃತಪಟ್ಟಿದ್ದಾರೆ.

ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ (Bangalore South Lok Sabha constituency) ಜಯನಗರದಲ್ಲಿ ವೃದ್ಧೆಯೊಬ್ಬರು ಆಕ್ಸಿಜನ್‌ ಸಹಾಯದಿಂದಲೇ ಮತಗಟ್ಟೆಗೆ ಬಂದು ಹಕ್ಕು ಚಲಾವಣೆ ಮಾಡಿದ್ದಾರೆ. 78 ವರ್ಷದ ಕಲಾವತಿ ಎಂಬುವವರೇ ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆಯಾಗಿದ್ದಾರೆ. ಕಲಾವತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರನ್ನು ಏಪ್ರಿಲ್‌ 23ರಂದು ಜಯನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಅವರನ್ನು ಆಂಬ್ಯುಲೆನ್ಸ್‌ ಮೂಲಕ ವೈದ್ಯಕೀಯ ಸಿಬ್ಬಂದಿ ಜತೆ ಕರೆತರಲಾಗಿದ್ದು, ಮತ ಚಲಾವಣೆಗೆ ಅವಕಾಶ ಕಲ್ಪಿಸಲಾಗಿತ್ತು. ಕೊನೆಗೂ ಅವರು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.

ವೋಟು ಹಾಕಿ ಬಂದು ವೃದ್ಧೆ ನಿಧನ

ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದ (Mysore Lok Sabha constituency) ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ವೃದ್ಧೆಯೊಬ್ಬರು ತಿಪ್ಪೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 172ರಲ್ಲಿ ಮತ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಹೊರ ಬರುತ್ತಿದ್ದಂತೆ ಅವರು ಕುಸಿದು ಮೃತಪಟ್ಟಿದ್ದಾರೆ.

Lok Sabha Election 2024 Woman casts her vote with the help of oxygen elderly woman dies after casting her vote

ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ಪುಟ್ಟಮ್ಮ (90) ಮೃತರು. ಇವರು ಪ್ರತಿ ಚುನಾವಣೆಯಂತೆ ಈ ಬಾರಿಯೂ ತಮ್ಮ ಹಕ್ಕನ್ನು ತಪ್ಪದೇ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಅದೇ ಖುಷಿಯಲ್ಲಿ ವಾಪಸಾಗುತ್ತಿದ್ದಾಗ ದಿಢೀರ್‌ ಕುಸಿದುಬಿದ್ದಿದ್ದು, ಅಲ್ಲಿಯೇ ಮೃತಪಟ್ಟಿದ್ದಾರೆ.

ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ (First phase of polling) ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮತ ಚಲಾಯಿಸಲು ಬಂದ ಮಹಿಳೆಯೊಬ್ಬರಿಗೆ ಹೃದಯ ಸ್ತಂಭನ (cardiac arrest) ಆಗಿದೆ. ಬಳಿಕ ಅಲ್ಲಿಯೇ ಮತ ಚಲಾಯಿಸಲು ಬಂದಿದ್ದರಿಂದ ಅವರ ಜೀವ ಉಳಿದಿದೆ.

ಜೆ.ಪಿ. ನಗರದ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮಹಿಳೆಯೊಬ್ಬರು ಮತದಾನ ಮಾಡಲು ಬಂದಿದ್ದಾರೆ. ಅವರು ಆಯಾಸವಾಗಿದೆ ಎಂದು ಮತಗಟ್ಟೆಯಲ್ಲಿ ಇಟ್ಟಿದ್ದ ನೀರು ಕುಡಿಯಲು ಹೋಗಿದ್ದಾರೆ. ಅದೇ ವೇಳೆಗೆ ಅವರು ಕುಸಿದು ಬಿದ್ದಿದ್ದಾರೆ. ಅದೇ ಸಮಯದಲ್ಲಿ ಅಲ್ಲಿಗೆ ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ರಕ್ಷಣೆಗೆ ದಾವಿಸಿದ್ದಾರೆ.

ನಾಡಿಮಿಡಿತವನ್ನು ಪರಿಶೀಲಿಸಿದ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್, ಪಲ್ಸ್‌ ರೇಟ್‌ ಕಡಿಮೆಯಾಗುತ್ತಿರುವುದನ್ನು ಗಮನಿಸಿದ್ದಾರೆ. ಆ ಸಮಯದಲ್ಲಿ ದೇಹ ಕೂಡ ಯಾವುದೇ ಸ್ಪಂದನೆಯನ್ನು ಮಾಡುತ್ತಿರಲಿಲ್ಲ. ಹೀಗಾಗಿ ಕೂಡಲೇ ಸಿಪಿಆರ್‌ ಮಾಡಿದ್ದು, ಪರಿಸ್ಥಿತಿಯು ಕೊಂಚ ಮಟ್ಟಿಗೆ ಸುಧಾರಿಸುವಂತೆ ಮಾಡಿದ್ದಾರೆ. ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿದೆ. ಐದು ನಿಮಿಷದೊಳಗೆ ಮತಗಟ್ಟೆ ಬಳಿ ಆಂಬ್ಯುಲೆನ್ಸ್ ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Continue Reading

ಪ್ರಮುಖ ಸುದ್ದಿ

PM Narendra Modi: “ಇವಿಎಂ ಅಪಪ್ರಚಾರ ಮಾಡುವವರಿಗೆ ಕಪಾಳಮೋಕ್ಷ…” ಸುಪ್ರೀಂ ಕೋರ್ಟ್‌ ತೀರ್ಪಿಗೆ ಪ್ರಧಾನಿ ಸ್ವಾಗತ

PM Narendra Modi: ಇಂದು ಮುಂಜಾನೆ, ಸುಪ್ರೀಂ ಕೋರ್ಟ್ ಪೇಪರ್ ಬ್ಯಾಲೆಟ್ ಮತದಾನದ ಮನವಿಗಳನ್ನು ತಿರಸ್ಕರಿಸಿತು. ಇವಿಎಂಗಳ ವಿಶ್ವಾಸಾರ್ಹತೆ ಮತ್ತು ವಿವಿಪ್ಯಾಟ್‌ಗಳೊಂದಿಗೆ ಅವುಗಳ ಸಂಯೋಜನೆಯನ್ನು ದೃಢಪಡಿಸಿತು. ಚುನಾವಣಾ ಮತಯಂತ್ರಗಳಲ್ಲಿ (EVM) ದಾಖಲಾದ ಎಲ್ಲ ಮತಗಳನ್ನು ವಿವಿಪ್ಯಾಟ್‌ಗಳ ಜತೆ ತಾಳೆ (VVPAT Verification) ಮಾಡಬೇಕು ಎಂದು ಸಲ್ಲಿಸಿದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

VISTARANEWS.COM


on

Modi in Karnataka PM Modi to address rally in Bengaluru Here live video
Koo

ಹೊಸದಿಲ್ಲಿ: ಇವಿಎಂ- ವಿವಿಪ್ಯಾಟ್ (EVM- VVPAT) ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ (Supreme Court) ತೀರ್ಪನ್ನು ಶುಕ್ರವಾರ ಸ್ವಾಗತಿಸಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi), “ಈ ಆದೇಶವು ನಿರಂತರವಾಗಿ ಇವಿಎಂ ಬಗ್ಗೆ ಅಪಪ್ರಚಾರ ಮಾಡಲು ಪ್ರಯತ್ನಿಸುತ್ತಿರುವ ಜನತೆಗೆ ನೀಡಿದ ಬಿಗಿಯಾದ ಕಪಾಳಮೋಕ್ಷವಾಗಿದೆ” ಎಂದು ಹೇಳಿದ್ದಾರೆ.

“ಈ ಜನರು ನಿರಂತರವಾಗಿ ಇವಿಎಂ ಮೇಲೆ ದೋಷ ಹೇರಲು ಪ್ರಯತ್ನಿಸಿದರು. ಆದರೆ ಇಂದು ಸುಪ್ರೀಂ ಕೋರ್ಟ್‌ ಅವರಿಗೆ ಬಹಳ ಬಿಗಿಯಾದ ತಪರಾಕಿ ನೀಡಿದೆ. ಅವರು ಸತ್ಯವನ್ನು ನೋಡಲು ಇಷ್ಟಪಡುವುದಿಲ್ಲ. ಇಂದು ಪ್ರಜಾಪ್ರಭುತ್ವಕ್ಕೆ ಒಳ್ಳೆಯ ದಿನ” ಎಂದು ಬಿಹಾರದ ಅರಾರಿಯಾದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಪ್ರಧಾನಿ ಹೇಳಿದರು.

“ಇಂಡಿಯಾ ಮೈತ್ರಿಕೂಟʼದ ಪ್ರತಿಯೊಬ್ಬ ನಾಯಕನೂ ಇವಿಎಂ ಬಗ್ಗೆ ಸಾರ್ವಜನಿಕರ ಮನಸ್ಸಿನಲ್ಲಿ ಅನುಮಾನಗಳನ್ನು ಹುಟ್ಟುಹಾಕುವ ಪಾಪವನ್ನು ಮಾಡಿದ್ದಾರೆ. ಆದರೆ ಇಂದು, ದೇಶದ ಪ್ರಜಾಪ್ರಭುತ್ವದ ಶಕ್ತಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಶಕ್ತಿಯನ್ನು ನೋಡಿ. ಇಂದು ಅವರ ಕನಸುಗಳೆಲ್ಲವೂ ನುಚ್ಚುನೂರಾಗುವಂತೆ, ಮತಪೆಟ್ಟಿಗೆಯನ್ನು ಲೂಟಿ ಮಾಡಲು ಉದ್ದೇಶಿಸಿರುವವರಿಗೆ ಸುಪ್ರೀಂ ಕೋರ್ಟ್ ತೀವ್ರ ಹೊಡೆತ ನೀಡಿದೆ” ಎಂದಿದ್ದಾರೆ ಮೋದಿ.

“ಇಂದು ಇಡೀ ಜಗತ್ತು ಭಾರತದ ಪ್ರಜಾಪ್ರಭುತ್ವ, ಭಾರತದ ಚುನಾವಣಾ ಪ್ರಕ್ರಿಯೆ ಮತ್ತು ಚುನಾವಣೆಯಲ್ಲಿ ತಂತ್ರಜ್ಞಾನದ ಬಳಕೆಯನ್ನು ಹೊಗಳುತ್ತಿರುವಾಗ, ಈ ಜನರು ತಮ್ಮ ವೈಯಕ್ತಿಕ ಹಿತಾಸಕ್ತಿಗಳಿಗಾಗಿ ಇವಿಎಂ ಅನ್ನು ದೂಷಿಸುವಲ್ಲಿ ನಿರತರಾಗಿದ್ದರು. ಅವರು ನಿರಂತರವಾಗಿ ಪ್ರಜಾಪ್ರಭುತ್ವಕ್ಕೆ ದ್ರೋಹ ಮಾಡಲು ಪ್ರಯತ್ನಿಸಿದ್ದರು” ಎಂದು ಅವರು ಹೇಳಿದರು.

ಇಂದು ಮುಂಜಾನೆ, ಸುಪ್ರೀಂ ಕೋರ್ಟ್ ಪೇಪರ್ ಬ್ಯಾಲೆಟ್ ಮತದಾನದ ಮನವಿಗಳನ್ನು ತಿರಸ್ಕರಿಸಿತು. ಇವಿಎಂಗಳ ವಿಶ್ವಾಸಾರ್ಹತೆ ಮತ್ತು ವಿವಿಪ್ಯಾಟ್‌ಗಳೊಂದಿಗೆ ಅವುಗಳ ಸಂಯೋಜನೆಯನ್ನು ದೃಢಪಡಿಸಿತು. ಚುನಾವಣಾ ಮತಯಂತ್ರಗಳಲ್ಲಿ (EVM) ದಾಖಲಾದ ಎಲ್ಲ ಮತಗಳನ್ನು ವಿವಿಪ್ಯಾಟ್‌ಗಳ ಜತೆ ತಾಳೆ (VVPAT Verification) ಮಾಡಬೇಕು ಎಂದು ಸಲ್ಲಿಸಿದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಹಾಗೆಯೇ, ದೇಶದಲ್ಲಿ ಬ್ಯಾಲಟ್‌ ಪೇಪರ್‌ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂಬ ಕುರಿತು ಸಲ್ಲಿಸಿದ ಅರ್ಜಿಗಳನ್ನು ಕೂಡ ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ. ಇದರೊಂದಿಗೆ ದೇಶದಲ್ಲಿ ಬ್ಯಾಲಟ್‌ ಪೇಪರ್‌ ವ್ಯವಸ್ಥೆ ಬರಬೇಕು, ಇವಿಎಂ ಸುರಕ್ಷತೆ ಇಲ್ಲ ಎಂದು ವಾದಿಸುವವರಿಗೆ, ಅರ್ಜಿ ಸಲ್ಲಿಸಿದವರಿಗೆ ಭಾರಿ ಹಿನ್ನಡೆಯಾಗಿದೆ.

ಅರ್ಜಿದಾರರ ವಾದ-ಪ್ರತಿವಾದವನ್ನು ಆಲಿಸಿದ್ದ, ಚುನಾವಣೆ ಆಯೋಗದ ಮಾಹಿತಿಯನ್ನೂ ಪಡೆದಿದ್ದ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಾಂಕರ್‌ ದತ್ತ ಅವರು, ಎಲ್ಲ ಅರ್ಜಿಗಳನ್ನು ತಿರಸ್ಕರಿಸಿದರು. “ನಾವು ತಾಂತ್ರಿಕ ವಿಭಾಗದ ಎಲ್ಲ ಮಾಹಿತಿಯನ್ನು ಗಮನಿಸಿದ್ದೇವೆ. ಹಾಗಾಗಿ, ಇವಿಎಂ ಮತಗಳನ್ನು ವಿವಿಪ್ಯಾಟ್‌ ಜತೆ ತಾಳೆ ಮಾಡುವ ಅವಶ್ಯಕತೆ ಇಲ್ಲ. ಹಾಗಾಗಿ, ಎಲ್ಲ ಅರ್ಜಿಗಳನ್ನು ತಿರಸ್ಕರಿಸಿದ್ದೇವೆ” ಎಂದು ನ್ಯಾಯಮೂರ್ತಿಗಳು ತಿಳಿಸಿದರು.

ಇದನ್ನೂ ಓದಿ: VVPAT Verification: ಬ್ಯಾಲಟ್‌ ಪೇಪರ್‌ ಬೇಕಿಲ್ಲ, ವಿವಿಪ್ಯಾಟ್‌ 100% ತಾಳೆಯೂ ಬೇಡ ಎಂದ ಸುಪ್ರೀಂ; ಇವಿಎಂ ವಿರೋಧಿಗಳಿಗೆ ಹಿನ್ನಡೆ

Continue Reading
Advertisement
Lok Sabha Election 2024 union minister pralhad joshi statement
ಕರ್ನಾಟಕ2 mins ago

Lok Sabha Election 2024 ಮುಸ್ಲಿಮರಿಗೆ ಒಬಿಸಿ ಮೀಸಲಾತಿ ಸತ್ಯ; ನಮ್ಮ ಬಳಿ ದಾಖಲೆ ಇದೆ ಎಂದ ಪ್ರಲ್ಹಾದ್‌ ಜೋಶಿ

Lok Sabha Election 2024
Lok Sabha Election 20248 mins ago

Lok Sabha Election 2024 : ತುಮಕೂರಲ್ಲಿ ಕುದುರೆ ಏರಿ ಬಂದು ಮತದಾನ ಮಾಡಿದ ಡಾಕ್ಟರ್‌

Rahul Dravid
ಕರ್ನಾಟಕ8 mins ago

Rahul Dravid: ಸಾಮಾನ್ಯರಂತೆ ಕ್ಯೂನಲ್ಲಿ ನಿಂತು ಮತದಾನ ಮಾಡಿದ ರಾಹುಲ್‌ ದ್ರಾವಿಡ್;‌ ವಿಡಿಯೊ ಇಲ್ಲಿದೆ

Raj B Shetty entry in duniya Vijay Movie
ಸ್ಯಾಂಡಲ್ ವುಡ್9 mins ago

Raj B Shetty: ದುನಿಯಾ ವಿಜಯ್‌ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರಂತೆ ರಾಜ್ ಬಿ ಶೆಟ್ಟಿ!

ದೇಶ10 mins ago

Congress Manifesto: ಮುಸಲ್ಮಾನರಿಗೆ ಸಂಪತ್ತು ಹಂಚಿಕೆ; ಮನಮೋಹನ್‌ ಸಿಂಗ್‌ ಹಳೆಯ ವಿಡಿಯೋ ಶೇರ್‌ ಮಾಡಿದ ಬಿಜೆಪಿ!

Virat Kohli
ಕ್ರೀಡೆ11 mins ago

Virat Kohli : ಕೊಹ್ಲಿಯ ನಿಧಾನಗತಿಯ ಬ್ಯಾಟಿಂಗ್​ ಬಗ್ಗೆ ಬೇಸರ ವ್ಯಕ್ತಪಡಿಸಿದ ಗವಾಸ್ಕರ್; ಏನಂದ್ರು ಅವರು?

Lok Sabha Election 2024 Villagers vandalise polling booth in Chamarajanagar
Lok Sabha Election 202416 mins ago

Lok Sabha Election 2024: ಚಾಮರಾಜನಗರದಲ್ಲಿ ಮತ ಯಂತ್ರ ಪೀಸ್‌ ಪೀಸ್‌; ಮತಗಟ್ಟೆ ಧ್ವಂಸ, ಲಾಠಿ ಚಾರ್ಜ್‌!

Lok Sabha Election 2024
ಕರ್ನಾಟಕ19 mins ago

Lok Sabha Election 2024: ಫಲಿತಾಂಶ ಬರುವ ಮುಂಚೆಯೇ ಗೆದ್ರಾ ಎಚ್‌.ಡಿ. ಕುಮಾರಸ್ವಾಮಿ?; ಚುನಾವಣೆ ಬಗ್ಗೆ ಹೇಳಿದ್ದೇನು?

lok sabha election 2024
Lok Sabha Election 202450 mins ago

Lok Sabha Election 2024 : ಬೋಟ್‌ನಲ್ಲಿ ಬಂದು ವೋಟ್‌ ಮಾಡಿದ 150ಕ್ಕೂ ಮತದಾರರು

Congress election camapaign meeting in haliyala
ರಾಜಕೀಯ2 hours ago

Lok Sabha Election 2024: ಬಿಜೆಪಿಯವರಿಂದ ಹಿಂದೂ ಧರ್ಮಕ್ಕೆ ಅಪಾಯ ಎಂದ ಅಂಜಲಿ ನಿಂಬಾಳ್ಕರ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ4 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20245 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20245 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ11 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ1 day ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ1 day ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌