Vastu For Shop: ಅಂಗಡಿಯ ವಾಸ್ತು ಹೀಗಿದ್ದರೆ ಭರ್ಜರಿ ವ್ಯಾಪಾರ - Vistara News

ಪ್ರಮುಖ ಸುದ್ದಿ

Vastu For Shop: ಅಂಗಡಿಯ ವಾಸ್ತು ಹೀಗಿದ್ದರೆ ಭರ್ಜರಿ ವ್ಯಾಪಾರ

ವ್ಯಾಪಾರ ಮಳಿಗೆಗೆ (Vastu For Shop) ವಾಸ್ತು ಅತಿ ಮುಖ್ಯ. ಹಾಗಾದರೆ ಅಂಗಡಿಯ ವಾಸ್ತು ಯಾವ ರೀತಿಯಲ್ಲಿರಬೇಕು? ಯಾವ ದಿಕ್ಕಿನಲ್ಲಿ ಏನಿರಬೇಕು? ಇಲ್ಲಿದೆ ಮಾಹಿತಿ.

VISTARANEWS.COM


on

Vastu For Shop
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಾರುಕಟ್ಟೆಯಲ್ಲಿ ಸಾವಿರಾರು ಅಂಗಡಿಗಳು (Vastu For Shop) ಇರುತ್ತವೆ. ಆದರೆ ಎಲ್ಲವೂ ಒಳ್ಳೆಯ ಲಾಭ ಗಳಿಸಿಕೊಳ್ಳುತ್ತವೆ ಎಂದು ಹೇಳಲಾಗದು. ಗುಣಮಟ್ಟ, ಬೆಲೆ, ಜನ ಸಂಪರ್ಕ ಹೀಗೆ ಅನೇಕ ಅಂಶಗಳು ವ್ಯಾಪಾರದ ಮೇಲೆ ಪರಿಣಾಮ ಬೀರುತ್ತವೆ. ಅದರಂತೆಯೇ ಅಂಗಡಿಯ ವಾಸ್ತು ಕೂಡ ಅಂಗಡಿಯ ವ್ಯಾಪಾರ ವಹಿವಾಟಿನ ಮೇಲೆ ಪ್ರಭಾವ ಬೀರುತ್ತದೆ. ಹಾಗಾದರೆ ಅಂಗಡಿಯ ವಾಸ್ತು ಯಾವ ರೀತಿಯಲ್ಲಿರಬೇಕು? ಯಾವ ದಿಕ್ಕಿನಲ್ಲಿ ಏನಿರಬೇಕು ಎನ್ನುವ ಬಗ್ಗೆ ನಿಮಗೆ ಪ್ರಶ್ನೆಗಳಿರಬಹುದು. ಈ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

Luxury Apparel Boutique

ಚೌಕಾಕಾರದಲ್ಲಿ ಇರಲಿ

ಅಂಗಡಿಗಳನ್ನು ಯಾವಾಗಲೂ ಚೌಕಾಕಾರದಲ್ಲಿ ಅಥವಾ ಆಯತಾಕಾರದಲ್ಲಿ ಇರಬೇಕು. ಇಲ್ಲವೇ ಮುಂಭಾಗವನ್ನು ಅಗಲವಾಗಿ ಮಾಡಿ ಹಿಂಭಾಗವನ್ನು ಚಿಕ್ಕದಾಗಿ ಮಾಡಬಹುದು. ಅದನ್ನ ಹೊರತಾಗಿ ಬೇಕೆ ಆಕಾರದಲ್ಲಿ ಅಂಗಡಿಗಳನ್ನು ಮಾಡಬಾರದು. ಆ ರೀತಿ ಮಾಡಿದರೆ ಅಂಗಡಿಯಲ್ಲಿ ಆರ್ಥಿಕ ನಷ್ಟದ ಜತೆಯಲ್ಲಿ ಮಾಲೀಕರಿಗೆ ಮಾನಸಿಕ ಒತ್ತಡ ಉಂಟಾಗುತ್ತದೆ. ಅಂಗಡಿಯ ಪ್ರವೇಶದ್ವಾರ ಈಶಾನ್ಯ ಅಥವಾ ಪೂರ್ವ ದಿಕ್ಕಿನಲ್ಲೇ ಇರಬೇಕು. ಈ ದಿಕ್ಕಿನಲ್ಲಿ ಪ್ರವೇಶ ದ್ವಾರ ಮಾಡುವುದರಿಂದ ಅಂಗಡಿಗೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಬರುತ್ತಾರೆ ಎನ್ನಲಾಗಿದೆ.

Female Staff Standing at Cash Counter

ಕ್ಯಾಶ್‌ ಕೌಂಟರ್‌ ಎಲ್ಲಿರಬೇಕು?

ಅಂಗಡಿ ಎಂದ ಮೇಲೆ ಕ್ಯಾಶ್‌ ಕೌಂಟರ್‌ ಇದ್ದೇ ಇರುತ್ತದೆ. ಕ್ಯಾಶ್‌ ಕೌಂಟರ್‌ ಯಾವ ಸ್ಥಳದಲ್ಲಿ ಇಡಬೇಕೆಂದರೆ ಅದರ ಬಾಗಿಲನ್ನು ನೀವು ಉತ್ತರ ದಿಕ್ಕಿಗೆ ತೆಗೆಯುವಂತಿರಬೇಕು. ಅಂಗಡಿಯಲ್ಲಿ ಲಾಕರ್‌ ಏನಾದರೂ ಇದ್ದರೆ ಅದನ್ನು ಅಂಡಿಯ ನೈಋತ್ಯ ಭಾಗದಲ್ಲಿ ಇಡಬೇಕು. ಅಂಗಡಿಯ ಮಾಲೀಕರು ಅಥವಾ ಮುಖ್ಯ ವ್ಯವಸ್ಥಾಪಕರು ಪಶ್ಚಿಮ ಅಥವಾ ದಕ್ಷಿಣ ದಿಕ್ಕಿನಲ್ಲೇ ಕುಳಿತುಕೊಳ್ಳಬೇಕು. ಅವರು ಪೂರ್ವ ದಿಕ್ಕಿಗೆ ಮುಖ ಮಾಡಿ ಕೂರುವುದರಿಂದ ಹೆಚ್ಚು ಲಾಭ ಸಿಗುತ್ತದೆ.

ದೇವರ ಫೋಟೊ ಹೀಗಿರಲಿ

ಅಂಗಡಿಯಲ್ಲಿ ದೇವರ ವಿಗ್ರಹ ಅಥವಾ ಫೋಟೊವನ್ನು ಇಡುವುದಾದರೆ ಅದನ್ನು ಈಶಾನ್ಯ ದಿಕ್ಕಿನಲ್ಲಿಯೇ ಇಡಬೇಕು. ಅದರಿಂದ ವ್ಯಾಪಾರ ಚೆನ್ನಾಗಿ ಆಗುತ್ತದೆ. ಅಂಗಡಿಯ ಕಚ್ಚಾ ವಸ್ತುಗಳನ್ನು ಮತ್ತು ಇತರೆ ಭಾರವಾದ ವಸ್ತುಗಳನ್ನು ಯಾವಾಗಲೂ ನೈಋತ್ಯ ಭಾಗದಲ್ಲಿಯೇ ಇಡಬೇಕು. ಇದರಿಂದ ಅದೃಷ್ಟ ಬರುತ್ತದೆ ಎಂದು ವಾಸ್ತು ಶಾಸ್ತ್ರದಲ್ಲಿ ಹೇಳಲಾಗಿದೆ.

Closeup Photo Black Door Yes We Are Open Signage

ಬಾಗಿಲು ಸದ್ದು ಮಾಡದಿರಲಿ!

ಅಂಗಡಿಯಲ್ಲಿ ಕಂಪ್ಯೂಟರ್‌, ಟಿವಿ, ರೆಫ್ರಿಜರೇಟರ್‌ ಮತ್ತು ಮೈಕ್ರೋವೇವ್‌ನಂತರ ಎಲೆಕ್ಟ್ರಾನಿಕ್‌ ವಸ್ತುವಿದ್ದರೆ ಅದನ್ನು ಅಂಗಡಿಯ ಆಗ್ನೇಯ ಮೂಲೆಯಲ್ಲಿ ಇರಿಸುವುದು ಉತ್ತಮ. ಅಂಗಡಿಯ ಬಾಗಿಲು ಶಬ್ದ ಮಾಡುವಂತೆ ಇರಬಾರದು. ಶಬ್ದ ಮಾಡುವ ಬಾಗಿಲನ್ನು ಅಂಗಡಿಯಲ್ಲಿ ಇಟ್ಟುಕೊಳ್ಳುವುದು ದುರದೃಷ್ಟ ಎಂದು ಹೇಳಲಾಗುತ್ತದೆ.

ಗೋಡೆ ಮೇಲೆ ಏನು ಬರೆದಿರಬೇಕು?

ಬಿಸಿ ಆಹಾರವನ್ನು ಮಾರಾಟ ಮಾಡುವುದಾದರೆ ಅಂಗಡಿಯಲ್ಲಿ ಬಿಸಿಯಾದ ಆಹಾರವನ್ನು ವಾಯವ್ಯ ದಿಕ್ಕಿನಲ್ಲಿ ಇಡಬೇಕು ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಅಂಗಡಿಯಲ್ಲಿ ಸ್ವಸ್ತಿಕ್‌ ಶುಭ ಚಿಹ್ನೆಯನ್ನು ಇಡಬೇಕು. ಹಾಗೆಯೇ ಅಂಗಡಿಯ ಗೋಡೆಯ ಮೇಲೆ ಶುಭ ಲಾಭ, ರಿದ್ಧಿ-ಸಿದ್ಧಿ ಎಂದು ಬರೆಯಬೇಕು.

The Grand Bazaar

ಯಾವ ಬಣ್ಣ ಉತ್ತಮ?

ನಿಮ್ಮ ಅಂಗಡಿ ಬಗ್ಗೆ ಸೈನ್‌ ಬೋರ್ಡ್‌ ಅಥವಾ ಬ್ಯಾನರ್‌ ಹಾಕಿರುತ್ತೀರಿ. ಅದು ಬಣ್ಣಗಳೊಂದಿಗೆ ಹೊಂದಾಣಿಕೆಯಾಗುವುದು ಮುಖ್ಯ. ವಾಯವ್ಯ ಮೂಲೆಯಲ್ಲಿ ಪ್ರವೇಶ ಹೊಂದಿರುವ ಅಂಗಡಿಗೆ ಬಿಳಿ ಅಥವಾ ಬೂದು ಬಣ್ಣದಲ್ಲಿ ಚಿಹ್ನೆ ಹಾಕುವುದು ಉತ್ತಮ. ಉತ್ತರ ದಿಕ್ಕಿನಲ್ಲಿ ಪ್ರವೇಶ ಹೊಂದಿರುವ ಅಂಗಡಿಗೆ ಕಪ್ಪು ಅಥವಾ ಹಸಿರು ಬಣ್ಣದಲ್ಲಿ ಸೈನ್‌ ಬೋರ್ಡ್‌ ಮಾಡಿಸಬೇಕು. ಬಟ್ಟೆ ಅಂಗಡಿಗಳಲ್ಲಿ ಗೊಂಬೆಗಳಿಗೆ ಬಟ್ಟೆ ಹಾಕಿ ಇಡಲಾಗಿರುತ್ತದೆ. ಹಾಗೆ ಮಾಡುವಾಗ ಗೊಂಬೆಗಳನ್ನು ವಾಯವ್ಯ ದಿಕ್ಕಿನಲ್ಲಿ ಇರಿಸಿ. ವಾಯುವ್ಯ ದಿಕ್ಕಿನಲ್ಲಿ ಗೊಂಬೆಯಿಡುವುದರಿಂದ ಅದು ಎಲ್ಲರ ಗಮನ ಸೆಳೆಯುತ್ತದೆ.

ಮೆಟ್ಟಿಲು ಯಾವ ದಿಕ್ಕಿನಲ್ಲಿರಬೇಕು?

ನಿಮ್ಮದು ಬಹುಮಹಡಿಯ ಕಟ್ಟಡವಾದರೆ ಅದರಲ್ಲಿ ಮೆಟ್ಟಿಲುಗಳು ಇದ್ದೇ ಇರುತ್ತದೆ. ಮೆಟ್ಟಿಲುಗಳು ಯಾವಾಗಲೂ ನೈಋತ್ಯ ದಿಕ್ಕಿನಲ್ಲಿ ಇರಬೇಕು ಹಾಗೆಯೇ ಮೆಟ್ಟಿನಲ್ಲು ಹತ್ತುವಾಗ ಪ್ರದಕ್ಷಿಣಾಕಾರವಾಗಿ ಹತ್ತುವಂತಿರಬೇಕು.
ಅಂಗಡಿಗಳಲ್ಲಿ ಕನ್ನಡಿಗಳು ಇದ್ದೇ ಇರುತ್ತದೆ. ವಾಸ್ತುವಿನ ಪ್ರಕಾರ ಕನ್ನಡಿಯು ನೀರಿನ ಅಂಶವನ್ನು ಪ್ರತಿಬಿಂಬಿಸುತ್ತದೆ. ಹಾಗಾಗಿ ಅದನ್ನು ಉತ್ತರ, ಈಶಾನ್ಯ ಮತ್ತು ಪಶ್ಚಿಮ ದಿಕ್ಕಿನಲ್ಲಿ ಇರಿಸಬೇಕು.

Toilet bowls in shop

ಶೌಚಾಲಯ ಈ ದಿಕ್ಕಿನಲ್ಲಿರಲಿ

ಅಂಗಡಿಯಲ್ಲಿ ಶೌಚಾಲಯವಿದ್ದರೆ ಅದು ವಾಯವ್ಯ ಅಥವಾ ಪಶ್ಚಿಮ ಮೂಲೆಯಲ್ಲಿರಬೇಕು.
ಅಂಗಡಿಯಲ್ಲಿ ಗ್ರಾಹಕರಿಗೆ ಕುಳಿತುಕೊಳ್ಳುವುದಕ್ಕೆ ಹಾಕಲಾದ ಸೋಫಾ ಉತ್ತರ ಅಥವಾ ಪೂರ್ವ ಭಾಗದಲ್ಲಿರಬೇಕು.

ಟ್ರಯಲ್‌ ರೂಮ್‌ ಪಶ್ಚಿಮ ದಿಕ್ಕಿನಲ್ಲಿರಲಿ

ಬಟ್ಟೆ ಅಂಗಡಿಯಲ್ಲಿ ಟ್ರಯಲ್‌ ರೂಮ್‌ ಅಂಗಡಿಯ ಪಶ್ಚಿಮ ಭಾಗದಲ್ಲಿ ಇರಬೇಕು. ಅಂಗಡಿಯ ಆಗ್ನೇಯ ದಿಕ್ಕಿನಲ್ಲಿ ಬಿದಿರಿನ ಸಸಿಯನ್ನು ಇಡಿ. ಇದು ಅಂಗಡಿಯಲ್ಲಿ ಸಂಪತ್ತು ಹೆಚ್ಚುವಂತೆ ಮಾಡುತ್ತದೆ. ಅಂಗಡಿಯ ಕೌಂಟರ್‌ ಚೌಕ ಅಥವಾ ಆಯತಾಕಾರದಲ್ಲಿ ಇರಬೇಕು ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಒಂದು ವೇಳೆ ಕೌಂಟರ್‌ ವೃತ್ತಾಕಾರದಲ್ಲಿದ್ದರೆ ಸಂಪತ್ತಿನಲ್ಲಿ ನಷ್ಟ ಉಂಟಾಗಬಹುದು. ಕೌಂಟರ್‌ ಅನ್ನು ಆಗ್ನೇಯ ಅಥವಾ ನೈಋತ್ಯ ದಿಕ್ಕಿನಲ್ಲಿ ಇರಿಸಬೇಕು.

ಇದನ್ನೂ ಓದಿ: Vastu Tips For Students: ವಿದ್ಯಾರ್ಥಿಗಳು ಸ್ಟಡಿ ಮಾಡುವಾಗ ಈ ವಾಸ್ತು ಸೂತ್ರ ಪಾಲಿಸಿದರೆ ಸಕ್ಸೆಸ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

Karnataka Weather: ರಾಜ್ಯದಾದ್ಯಂತ ಏ.30ರಿಂದ ಮೇ 5ರವರೆಗೆ ಒಣ ಹವೆ ಇರಲಿದೆ. ಇನ್ನು ನಾಲ್ಕೈದು ದಿನ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಈ ಬಾರಿ ಬೇಸಿಗೆಯಲ್ಲಿ ರಾಜ್ಯದಲ್ಲಿ ದಿನೇ ದಿನೇ ತಾಪಮಾನ (Karnataka Weather) ಹೆಚ್ಚಾಗುತ್ತಿರುವುದು ಕಂಡುಬರುತ್ತಿದೆ ಉತ್ತರ ಕರ್ನಾಟಕ ಭಾಗದಲ್ಲಿ ದಾಖಲೆಯ ಉಷ್ಣಾಂಶ ದಾಖಲಾಗುತ್ತಿದೆ. ರಾಯಚೂರಿನಲ್ಲಿ ಭಾನುವಾರ ರಾಜ್ಯದಲ್ಲೇ ಅತಿ ಹೆಚ್ಚು ಅಂದರೆ 43 ಡಿಗ್ರಿ ಸೆ. ಉಷ್ಣಾಂಶ ವರದಿಯಾಗಿದೆ. ಇನ್ನು ಮಂಗಳವಾರವೂ ಕೂಡ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಂಗಳವಾರ ಶಾಖದ ಅಲೆಗಳ ತೀವ್ರತೆ (Heat wave) ಹೆಚ್ಚಾಗುವ ಸಾಧ್ಯತೆ ಇದೆ.

ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದಾದ್ಯಂತ ಏ.30ರಿಂದ ಮೇ 5ರವರೆಗೆ ಒಣ ಹವೆ ಇರಲಿದೆ. ಅದೇ ರೀತಿ ಮೇ 6ರಂದು ಮಂಡ್ಯ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕೆಲವೆಡೆ ಹಗರು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ತಿಳಿಸಿದೆ.

ಶಾಖದ ಅಲೆಯ ಎಚ್ಚರಿಕೆ

ಮೇ 3ರವರೆಗೆ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ

ಮೇ 3ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ಬಾಗಲಕೋಟೆ, ಕಲಬುರಗಿ, ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

ಇದನ್ನೂ ಓದಿ | Karnataka Weather: ರಾಜ್ಯದಲ್ಲಿ ಮೇ 2ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಳ; ಆರೆಂಜ್‌ ಅಲರ್ಟ್‌ ಘೋಷಣೆ

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading

ದೇಶ

3ನೇ ಹಂತದಲ್ಲಿ ಕಣಕ್ಕಿಳಿದ 1,352 ಅಭ್ಯರ್ಥಿಗಳ ಪೈಕಿ 244 ಜನರ ವಿರುದ್ಧ ಕ್ರಿಮಿನಲ್‌ ಕೇಸ್!

Lok Sabha Election 2024: ಮೂರನೇ ಹಂತದಲ್ಲಿ 1,352 ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಇವರಲ್ಲಿ ಶೇ.18ರಷ್ಟು ಅಂದರೆ 244 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ. 172 ಅಭ್ಯರ್ಥಿಗಳ ವಿರುದ್ಧ ಗಂಭೀರ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ. ಅತ್ಯಾಚಾರ ಸೇರಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಕುರಿತಂತೆ 38 ಜನರ ವಿರುದ್ಧ ಕೇಸ್‌ ದಾಖಲಾಗಿದೆ. ದ್ವೇಷ ಭಾಷಣಕ್ಕೆ ಕುರಿತಂತೆ 17 ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿವೆ ಎಂದು ಎಡಿಆರ್‌ ವರದಿ ತಿಳಿಸಿದೆ.

VISTARANEWS.COM


on

Lok Sabha Election
Koo

ನವದೆಹಲಿ: ದೇಶಾದ್ಯಂತ ಬೇಸಿಗೆಯ ಬಿಸಿಲಿನಷ್ಟೇ ಲೋಕಸಭೆ ಚುನಾವಣೆ (Lok Sabha Election 2024) ಕಾವು ಕೂಡ ಜೋರಾಗಿದೆ. ರಾಜಕೀಯ ನಾಯಕರ ಅಬ್ಬರದ ಸಮಾವೇಶಗಳು, ಪ್ರಚಾರದ ಭರಾಟೆ, ತೀಕ್ಷ್ಣ ಹೇಳಿಕೆಗಳು, ಪ್ರತಿಸ್ಪರ್ಧಿಗಳ ವಿರುದ್ಧ ಮಾಡುವ ಆರೋಪಗಳು ಸುದ್ದಿಯಾಗುತ್ತಿವೆ. ಇನ್ನು ಮೇ 7ರಂದು ಮೂರನೇ ಹಂತದ ಮತದಾನ ನಡೆಯಲಿದ್ದು, ಇದಕ್ಕಾಗಿ ಅಭ್ಯರ್ಥಿಗಳು, ನಾಯಕರು ಇನ್ನಿಲ್ಲದ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಬೆನ್ನಲ್ಲೇ, ಮೂರನೇ ಹಂತದಲ್ಲಿ 1,352 ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಇವರಲ್ಲಿ ಶೇ.18ರಷ್ಟು ಅಂದರೆ 244 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್‌ ಕೇಸ್‌ (Criminal Case) ದಾಖಲಾಗಿವೆ ಎಂದು ತಿಳಿದುಬಂದಿದೆ.

ನ್ಯಾಷನಲ್‌ ಎಲೆಕ್ಷನ್‌ ವಾಚ್‌ ಹಾಗೂ ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ (ADR) ಬಿಡುಗಡೆ ಮಾಡಿರುವ ವರದಿ ಪ್ರಕಾರ, ಮೂರನೇ ಹಂತದ 244 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ ಎಂದು ತಿಳಿದುಬಂದಿದೆ. 172 ಅಭ್ಯರ್ಥಿಗಳ ವಿರುದ್ಧ ಗಂಭೀರ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ. ಅತ್ಯಾಚಾರ ಸೇರಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಕುರಿತಂತೆ 38 ಜನರ ವಿರುದ್ಧ ಕೇಸ್‌ ದಾಖಲಾಗಿದೆ. ದ್ವೇಷ ಭಾಷಣಕ್ಕೆ ಕುರಿತಂತೆ 17 ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿವೆ. ಅಭ್ಯರ್ಥಿಗಳು ಚುನಾವಣೆ ಆಯೋಗಕ್ಕೆ ನೀಡಿರುವ ಮಾಹಿತಿ ಆಧರಿಸಿ ವರದಿ ತಯಾರಿಸಲಾಗಿದೆ.

Lok Sabha Election-2024

ಬಿಜೆಪಿಯಿಂದ ಸ್ಪರ್ಧಿಸಿದ 82 ಅಭ್ಯರ್ಥಿಗಳಲ್ಲಿ 22 ಮಂದಿ ವಿರುದ್ಧ ಕ್ರಿಮಿನಲ್‌ ಕೇಸ್‌ ಇವೆ. ಇನ್ನು ಕಾಂಗ್ರೆಸ್‌ನ 68 ಅಭ್ಯರ್ಥಿಗಳ ಪೈಕಿ 26, ಆರ್‌ಜೆಡಿಯ ಮೂರಕ್ಕೆ ಮೂವರ ವಿರುದ್ಧವೂ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ. ಶಿವಸೇನೆ (ಉದ್ಧವ್‌ ಬಾಳಾಸಾಹೇಬ್‌ ಠಾಕ್ರೆ) ಶೇ.80, ಎನ್‌ಸಿಪಿ (ಶರದ್‌ ಪವಾರ್)‌ ಶೇ.67, ಸಮಾಜವಾದಿ ಪಾರ್ಟಿ ಶೇ.50, ಜೆಡಿಯು ಶೇ.33 ಹಾಗೂ ತೃಣಮೂಲ ಕಾಂಗ್ರೆಸ್‌ನ ಶೇ.17ರಷ್ಟು ಅಭ್ಯರ್ಥಿಗಳು ಕ್ರಿಮಿನಲ್‌ ಕೇಸ್‌ ಹೊಂದಿದ್ದಾರೆ ಎಂಬುದು ವರದಿ ಮೂಲಕ ಬಹಿರಂಗವಾಗಿದೆ.

ಇವರ ಆಸ್ತಿ-ಪಾಸ್ತಿ ಎಷ್ಟು?

ಮೂರನೇ ಹಂತದಲ್ಲಿ 1,352 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದ್ದು, ಇವರಲ್ಲಿ 292 ಅಭ್ಯರ್ಥಿಗಳು ಕೋಟ್ಯಧೀಶರಾಗಿದ್ದಾರೆ. ಇವರಲ್ಲಿ ಬಿಜೆಪಿಯ 77, ಕಾಂಗ್ರೆಸ್‌ನ 60 ಅಭ್ಯರ್ಥಿಗಳು ಕೋಟ್ಯಧೀಶರಾಗಿದ್ದಾರೆ. ಗೋವಾದ ಪಲ್ಲವಿ ಶ್ರೀನಿವಾಸ್‌ ಡೆಂಪೊ ಅವರ ಆಸ್ತಿಯ ಮೌಲ್ಯವು 1,361 ಕೋಟಿ ರೂ. ಆಗಿದ್ದು, ಇವರೇ ಶ್ರೀಮಂತ ಅಭ್ಯರ್ಥಿ ಎನಿಸಿದ್ದಾರೆ. ಇನ್ನು ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧಿಯಾ ಅವರ ಆಸ್ತಿಯ ಮೌಲ್ಯವು 424 ಕೋಟಿ ರೂ. ಆಗಿದ್ದು, ಎರಡನೇ ಶ್ರೀಮಂತ ಅಭ್ಯರ್ಥಿ ಎನಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಶಾಹು ಶಹಾಜಿ ಅವರು ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದು, ಇವರ ಆಸ್ತಿ ಮೌಲ್ಯ 342 ಕೋಟಿ ರೂ. ಆಗಿದೆ. ಇವರು ಮೂರನೇ ಶ್ರೀಮಂತ ಅಭ್ಯರ್ಥಿ ಆಗಿದ್ದಾರೆ.

ಇದನ್ನೂ ಓದಿ: Narendra Modi: ತಾಕತ್ತಿದ್ದವರು 370ನೇ ವಿಧಿ ಜಾರಿಗೆ ತರಲಿ; ಪ್ರತಿಪಕ್ಷಗಳಿಗೆ ಮೋದಿ ಸವಾಲು!

Continue Reading

ಕರ್ನಾಟಕ

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌; ಇಬ್ಬರು ಶಂಕಿತ ಉಗ್ರರಿಗೆ 14 ದಿನ ನ್ಯಾಯಾಂಗ ಬಂಧನ

Rameshwaram Cafe Blast: ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣದ ಆರೋಪಿಗಳಾದ ಅಬ್ದುಲ್ ಮತೀ‌ನ್ ತಾಹ ಮತ್ತು ಮುಸಾವೀರ್ ಹುಸೇನ್‌ಗೆ ಎನ್.ಐ.ಎ ವಿಶೇಷ ನ್ಯಾಯಾಲಯ 2 ವಾರ ನ್ಯಾಯಾಂಗ ಬಂಧನ ವಿಧಿಸಿದೆ.

VISTARANEWS.COM


on

Rameshwaram Cafe blast
Koo

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣದ (Rameshwaram Cafe Blast) ಇಬ್ಬರು ಆರೋಪಿಗಳಿಗೆ ಎನ್.ಐ.ಎ ವಿಶೇಷ ನ್ಯಾಯಾಲಯವು 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಎನ್‌ಐಎ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಸೋಮವಾರ ಶಂಕಿತ ಉಗ್ರರನ್ನು ಎನ್.ಐ.ಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ ಹಿನ್ನೆಲೆ ಆರೋಪಿಗಳಾದ ಅಬ್ದುಲ್ ಮತೀ‌ನ್ ತಾಹ ಮತ್ತು ಮುಸಾವೀರ್ ಹುಸೇನ್‌ಗೆ ಎರಡು ವಾರ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಏಪ್ರಿಲ್ 12ರಂದು ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಇಬ್ಬರು ಆರೋಪಿಗಳನ್ನು ಎನ್ಐಎ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿ 10 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದರು. ಆರೋಪಿಗಳ ಕಸ್ಟಡಿ ಅವಧಿ ಅಂತ್ಯವಾದ ಬಳಿಕ ಪುನಃ 7 ದಿನ ಕಸ್ಟಡಿಗೆ ಪಡೆಯಲಾಗಿತ್ತು. ಇದೀಗ ಸೋಮವಾರ ಎನ್‌ಐಎ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್‌ ಪ್ರಕರಣಕ್ಕೆ ಅಚ್ಚರಿಯ ತಿರುವು; ಅವರು ಹಾಗೆ ಮಾಡಿಯೇ ಇಲ್ಲ ಎಂದ ದೂರುದಾರೆಯ ಅತ್ತೆ!

ಮಾರ್ಚ್ 1ರಂದು ವೈಟ್‌ಫೀಲ್ಡ್‌ನ ಬ್ರೂಕ್‌ಫೀಲ್ಡ್‌ನ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಕೆಫೆ ಸಿಬ್ಬಂದಿ, ಗ್ರಾಹಕರಸಹಿತ 9 ಜನರು ಗಾಯಗೊಂಡಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸಲಾಗಿತ್ತು. ಪ್ರಕರಣ ಸಂಬಂಧ ಹಲವೆಡೆ ಶೋಧ ನಡೆಸಿದ್ದ ಎನ್​ಐಎ ಅಧಿಕಾರಿಗಳು ಸುಮಾರು 40 ದಿನಗಳ ಬಳಿಕ ಕೋಲ್ಕೊತಾದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದರು.

ಸುಪ್ರೀಂ ಆದೇಶದಂತೆ ಕೋರ್ಟ್‌ಗೆ ಶರಣಾದ ಮುರುಘಾ ಶ್ರೀ; ಮತ್ತೆ 1 ತಿಂಗಳು ಜೈಲು

Murugha Seer

ಚಿತ್ರದುರ್ಗ: ಸುಪ್ರೀಂ ಕೋರ್ಟ್‌ ಆದೇಶದಂತೆ ಮುರುಘಾ ಶರಣರು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಪೋಕ್ಸೊ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮುರುಘಾ ಶ್ರೀಗಳಿಗೆ (Murugha Seer) ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಏ.23ರಂದು ರದ್ದು ಮಾಡಿ, ಶರಣಾಗತಿಯಾಗುವಂತೆ ಸೂಚಿಸಿತ್ತು. ಹೀಗಾಗಿ ಶ್ರೀಗಳು ಚಿತ್ರದುರ್ಗ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಮುಂದೆ ಸೋಮವಾರ ಶರಣಾಗಿದ್ದಾರೆ. ಅವರಿಗೆ ಮೇ 27ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶ ಎಸ್.ಎನ್.ಕಲ್ಕಣಿ ಆದೇಶ ನೀಡಿದ್ದಾರೆ.

ಪೋಕ್ಸೋ ಕೇಸ್ ವಿಚಾರಣೆ ಮುಗಿದು ತೀರ್ಪು ಬರುವವರೆಗೂ ಮುರುಘಾ ಶ್ರೀಗಳನ್ನು ನ್ಯಾಯಾಂಗ ಬಂಧನದಲ್ಲಿಡುವಂತೆ ಸುಪ್ರೀಂ ಕೋರ್ಟ್‌ ಆದೇಶ ನೀಡಿ, ಒಂದು ವಾರದೊಳಗೆ ಶರಣಾಗತಿ ಆಗುವಂತೆ ಶ್ರೀಗಳಿಗೆ ಸೂಚಿಸಿತ್ತು. ಹೀಗಾಗಿ ಶ್ರೀಗಳು ಜಿಲ್ಲಾ ನ್ಯಾಯಾಲಯಕ್ಕೆ ಶರಣಾಗಿದ್ದು, ವೈದ್ಯಕೀಯ ಪರೀಕ್ಷೆ ಬಳಿಕ ಅವರನ್ನು ಪೊಲೀಸರು ಜೈಲಿಗೆ ಕರೆದೊಯ್ಯಲಿದ್ದಾರೆ.

2022 ಆಗಸ್ಟ್‌ 31 ರಂದು ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಸೆಪ್ಟೆಂಬರ್‌ 1ರಂದು ಶ್ರೀಗಳ ಬಂಧನವಾಗಿತ್ತು. ಸುಮಾರು 14 ತಿಂಗಳ ಕಾಲ ಜೈಲಿನಲ್ಲಿದ್ದ, ಶ್ರೀಗಳು 2023 ನವೆಂಬರ್ 16ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗೆ ಬಂದಿದ್ದರು. ಆದರೆ, ಸುಪ್ರೀಂ ಕೋರ್ಟ್‌ ಜಾಮೀನು ರದ್ದು ಮಾಡಿದ್ದರಿಂದ ಇದೀಗ ಶ್ರೀಗಳು ಮತ್ತೆ ಜೈಲು ಸೇರುವಂತಾಗಿದೆ.

ಇದನ್ನೂ ಓದಿ | Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು

ನಾಲ್ಕು ತಿಂಗಳಲ್ಲಿ ವಿಚಾರಣೆ ಮುಗಿಸಲು ಚಿತ್ರದುರ್ಗದ ಕೋರ್ಟ್‌ಗೆ ಸುಪ್ರೀಂ ಕೋರ್ಟ್‌ ಈಗಾಗಲೇ ಸೂಚನೆ ನೀಡಿದ್ದು, ಸಾಕ್ಷ್ಯಗಳ ವಿಚಾರಣೆ ಮುಗಿಯುವ ತನಕ ಶ್ರೀಗಳು ನ್ಯಾಯಾಂಗ ಬಂಧನದಲ್ಲಿರಬೇಕು ಎಂದು ತಿಳಿಸಿತ್ತು.

Continue Reading

ದೇಶ

Narendra Modi: ತಾಕತ್ತಿದ್ದವರು 370ನೇ ವಿಧಿ ಜಾರಿಗೆ ತರಲಿ; ಪ್ರತಿಪಕ್ಷಗಳಿಗೆ ಮೋದಿ ಸವಾಲು!

Narendra Modi: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ 370ನೇ ವಿಧಿಯು ರಾಜ್ಯಗಳ ಪಟ್ಟಿಯಲ್ಲಿ ಬರುವುದಿಲ್ಲ. ಇದು ರಾಜ್ಯಗಳಿಗೆ ಸಂಬಂಧಿಸಿದ ವಿಷಯವಲ್ಲ. ಹಾಗಾಗಿ, ಯಾವುದೇ ರಾಜ್ಯ ಸರ್ಕಾರಗಳು ಸಿಎಎ ಜಾರಿಯನ್ನು ತಡೆಯುವ ಹಾಗೂ 370ನೇ ವಿಧಿಯನ್ನು ಮತ್ತೆ ಜಾರಿಗೆ ತರುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಕಾವು ದಿನೇದಿನೆ ಜಾಸ್ತಿಯಾಗುತ್ತಿದೆ. ರಾಜಕಾರಣಿಗಳ ಹೇಳಿಕೆಗಳು, ಅವರು ಮಾತನಾಡುವ ವಿಷಯಗಳು ಇನ್ನಷ್ಟು ಕಾವು ಪಡೆದುಕೊಳ್ಳುತ್ತಿವೆ. “ನಾವು ಅಧಿಕಾರಕ್ಕೆ ಬಂದರೆ ಕಾಶ್ಮೀರದಲ್ಲಿ 370ನೇ ವಿಧಿ ಮತ್ತೆ ಜಾರಿಗೆ ತರುತ್ತೇವೆ. ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಯನ್ನು ತಡೆಯುತ್ತೇವೆ” ಎಂದು ಪ್ರತಿಪಕ್ಷಗಳು ಹೇಳುತ್ತಿವೆ. ಇದರ ಬೆನ್ನಲ್ಲೇ, ಪ್ರತಿಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸವಾಲು ಹಾಕಿದ್ದಾರೆ. “ತಾಕತ್ತಿದ್ದವರು 370ನೇ ವಿಧಿಯನ್ನು ಮತ್ತೆ ಜಾರಿಗೆ ತರಲಿ. ತಾಕತ್ತಿದ್ದವರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಡೆಯಲಿ” ಎಂದು ನ್ಯೂಸ್‌ 18ಗೆ ನೀಡಿದ ಸಂದರ್ಶನದ ವೇಳೆ ನರೇಂದ್ರ ಮೋದಿ ಹೇಳಿದ್ದಾರೆ.

“ಪಶ್ಚಿಮ ಬಂಗಾಳದಲ್ಲಿ ಸಿಎಎ ಜಾರಿಯಾಗಲು ಬಿಡುವುದಿಲ್ಲ. ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ಮತ್ತೆ ಜಾರಿಗೆ ತರಲಾಗುವುದು” ಎಂಬುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿರುವ ಕುರಿತು ಸಂದರ್ಶನದ ವೇಳೆ ಪ್ರಶ್ನೆಗೆ ನರೇಂದ್ರ ಮೋದಿ ಉತ್ತರಿಸಿದರು. “ನಾನು ಕಾಂಗ್ರೆಸ್‌ ಸೇರಿ ಯಾವುದೇ ಪ್ರತಿಪಕ್ಷಗಳಿಗೆ ಸವಾಲು ಹಾಕುತ್ತೇನೆ. ತಾಕತ್ತಿದ್ದವರು 370ನೇ ವಿಧಿಯನ್ನು ಜಾರಿಗೆ ತರಲಿ. ಹಾಗೆಯೇ, ಸಿಎಎ ಜಾರಿಯನ್ನು ಯಾರಿಗೂ ತಡೆಯಲು ಆಗುವುದಿಲ್ಲ” ಎಂದು ಹೇಳಿದರು.

“ಯಾರು ಸಂವಿಧಾನವನ್ನು ಸರಿಯಾಗಿ ಓದಿರುತ್ತಾರೋ, ಯಾರು ಒಕ್ಕೂಟ ವ್ಯವಸ್ಥೆಯನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುತ್ತಾರೋ, ಅವರು ಇಂತಹ ಹೇಳಿಕೆ ನೀಡುವುದಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ 370ನೇ ವಿಧಿಯು ರಾಜ್ಯಗಳಿಗೆ ಸಂಬಂಧಿಸಿದ ವಿಷಯವಲ್ಲ. ರಾಜ್ಯಗಳ ಪಟ್ಟಿಯಲ್ಲಿ ಇವು ಬರುವುದಿಲ್ಲ. ನರೇಂದ್ರ ಮೋದಿ ಕೂಡ ಯಾವುದೇ ರಾಜ್ಯದ ಮುಖ್ಯಮಂತ್ರಿಯಾಗಿದ್ದರೂ, ಇಂತಹ ನಿರ್ಧಾರ ತೆಗೆದುಕೊಳ್ಳಲು ಬರುವುದಿಲ್ಲ. ಇದು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ ವಿಷಯವಾಗಿದೆ” ಎಂದು ತಿಳಿಸಿದರು.

“ಯಾವುದೇ ರಾಜ್ಯಗಳಿಗೆ 370ನೇ ವಿಧಿ ಮರು ಜಾರಿಗೊಳಿಸಲು ಆಗುವುದಿಲ್ಲ. ಕಾಂಗ್ರೆಸ್‌ ಸೇರಿ, ಯಾವುದೇ ಪಕ್ಷಗಳಿಗೆ ನಾನು ಸವಾಲು ಹಾಕುತ್ತೇನೆ. ತಾಕತ್ತಿದ್ದರೆ, 370ನೇ ವಿಧಿಯನ್ನು ಮತ್ತೆ ಜಾರಿಗೊಳಿಸುತ್ತೇವೆ ಎಂದು ಘೋಷಿಸಲಿ ನೋಡೋಣ. ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹೆಸರು ಹೇಳಿಕೊಂಡು ನಮ್ಮ ವಿರುದ್ಧ ಟೀಕೆ ಮಾಡುತ್ತಾರೆ. ಆದರೆ, ಸ್ವಾತಂತ್ರ್ಯದ ಬಳಿಕ ಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನವು ಜಮ್ಮು-ಕಾಶ್ಮೀರದಲ್ಲಿ ಅನ್ವಯವಾಗಿರಲಿಲ್ಲ. 370ನೇ ವಿಧಿ ರದ್ದುಗೊಳಿಸಿ, ನಾವು ಅಂಬೇಡ್ಕರ್‌ ಸಂವಿಧಾನವು ಜಮ್ಮು-ಕಾಶ್ಮೀರದಲ್ಲೂ ಜಾರಿಯಾಗುವಂತೆ ಮಾಡಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ: PM Narendra Modi: ಶಿರಸಿಗೆ ಬಂದಾಗ ಮೋದಿ ಭೇಟಿ ಮಾಡಿದ ನಾಲ್ವರು ವಿಶೇಷ ವ್ಯಕ್ತಿಗಳಿವರು! ಏನಿವರ ಸಾಧನೆ?

Continue Reading
Advertisement
Karnataka Weather
ಕರ್ನಾಟಕ3 mins ago

Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

Lok Sabha Election
ದೇಶ5 mins ago

3ನೇ ಹಂತದಲ್ಲಿ ಕಣಕ್ಕಿಳಿದ 1,352 ಅಭ್ಯರ್ಥಿಗಳ ಪೈಕಿ 244 ಜನರ ವಿರುದ್ಧ ಕ್ರಿಮಿನಲ್‌ ಕೇಸ್!

Thomas Cup 2024
ಕ್ರೀಡೆ28 mins ago

Thomas Cup 2024: ಕ್ವಾರ್ಟರ್‌ ಫೈನಲ್​ಗೆ ಲಗ್ಗೆಯಿಟ್ಟ ಹಾಲಿ ಚಾಂಪಿಯನ್​ ಭಾರತ

Rameshwaram Cafe blast
ಕರ್ನಾಟಕ50 mins ago

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌; ಇಬ್ಬರು ಶಂಕಿತ ಉಗ್ರರಿಗೆ 14 ದಿನ ನ್ಯಾಯಾಂಗ ಬಂಧನ

IPL 2024
ಕ್ರೀಡೆ1 hour ago

IPL 2024: ರಿಂಕು ಸಿಂಗ್​ಗೆ ಬೌಲಿಂಗ್​ ಮಾಡಿದ ಶಾರುಖ್‌ ಪುತ್ರ ಅಬ್ರಾಮ್; ವಿಡಿಯೊ ವೈರಲ್​

Narendra Modi
ದೇಶ1 hour ago

Narendra Modi: ತಾಕತ್ತಿದ್ದವರು 370ನೇ ವಿಧಿ ಜಾರಿಗೆ ತರಲಿ; ಪ್ರತಿಪಕ್ಷಗಳಿಗೆ ಮೋದಿ ಸವಾಲು!

International Labor Day-2024
ಉದ್ಯೋಗ1 hour ago

Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

car crossed the divider and collided with a lorry Driver death
ತುಮಕೂರು2 hours ago

Road Accident: ಡಿವೈಡರ್ ದಾಟಿ ಲಾರಿಗೆ ಡಿಕ್ಕಿ ಹೊಡೆದ ಕಾರು; ಚಾಲಕ ಸ್ಥಳದಲ್ಲೇ ಸಾವು

Hassan Pen Drive Case
ಕರ್ನಾಟಕ2 hours ago

Hassan Pen Drive Case: ವಿಚಾರಣೆಗೆ ಕರೆದಾಗ ವಿದೇಶದಿಂದ ಪ್ರಜ್ವಲ್ ಬರುತ್ತಾನೆ ಎಂದ ಎಚ್‌.ಡಿ.ರೇವಣ್ಣ

PF Balance Check
ಮನಿ ಗೈಡ್2 hours ago

PF Balance Check: ಬಡ್ಡಿ ಬಂದಿದೆಯೋ ಇಲ್ಲವೋ… ಇಪಿಎಫ್ ಬ್ಯಾಲೆನ್ಸ್ ಚೆಕ್ ಮಾಡೋದು ಹೇಗೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20248 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20249 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ16 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌