Vastu Tips drinking water Vastu tips to bring health and wealth Vastu Tips : ಮನೆಯಲ್ಲಿ ಕುಡಿಯುವ ನೀರಿನ ಫಿಲ್ಟರನ್ನು ಈ ದಿಕ್ಕಿನಲ್ಲಿಟ್ಟರೆ ಬಹಳ ಒಳ್ಳೆಯದು! Vistara News

ಭವಿಷ್ಯ

Vastu Tips : ಮನೆಯಲ್ಲಿ ಕುಡಿಯುವ ನೀರಿನ ಫಿಲ್ಟರನ್ನು ಈ ದಿಕ್ಕಿನಲ್ಲಿಟ್ಟರೆ ಬಹಳ ಒಳ್ಳೆಯದು!

ಮನೆಯಲ್ಲಿ ಸುಖ, ನೆಮ್ಮದಿ ಇರಬೇಕೆಂದರೆ ಏನೇನು ಮಾಡಬೇಕೆಂದು ವಾಸ್ತು ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯಲ್ಲಿ ಕುಡಿಯುವ ನೀರನ್ನು ಎಲ್ಲಿ ಹೇಗೆ ಇರಿಸಬೇಕೆಂಬ ಕುರಿತೂ ವಾಸ್ತು ನಿಯಮಗಳಿವೆ (Vastu Tips). ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

drinking water Vastu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮನೆಯಲ್ಲಿ ಸುಖ, ನೆಮ್ಮದಿ, ಸಮೃದ್ಧಿ ನೆಲೆಸಿರಬೇಕೆಂದರೆ ವಾಸ್ತು ಪ್ರಕಾರ (Vastu shastra) ಮನೆಯನ್ನು ನಿರ್ಮಿಸಿರಬೇಕೆಂದು ವಾಸ್ತು ಶಾಸ್ತ್ರ ಹೇಳುತ್ತದೆ. ವಾಸ್ತು ಶಾಸ್ತ್ರದಲ್ಲಿ ಮನೆಯೊಳಗಿನ ಪ್ರತಿಯೊಂದು ವಿಷಯಕ್ಕೂ ಸಂಬಂಧಿಸಿದಂತೆ ನಿಯಮಗಳಿವೆ. ಮನೆಯ ಮುಂಬಾಗಿಲಿನಿಂದ ಹಿಡಿದು, ಮನೆಯ ಕಸ ಗುಡಿಸುವ ಪೊರಕೆಯವರೆಗೆ ಯಾವುದನ್ನು ಎಲ್ಲಿಡಬೇಕು, ಹೇಗೆ ಬಳಸಬೇಕೆಂಬ ಕುರಿತು ಈ ನಿಯಮಗಳಲ್ಲಿ ಹೇಳಲಾಗಿದೆ. ಹೀಗೆಯೇ ಕುಡಿಯುವ ನೀರನ್ನು ಎಲ್ಲಿಡಬೇಕು ಎಂಬುದರ ಕುರಿತೂ ವಾಸ್ತು ಶಾಸ್ತ್ರದಲ್ಲಿ (Vastu Tips) ಹೇಳಲಾಗಿದೆ.

ವಾಸ್ತು ಶಾಸ್ತ್ರದಲ್ಲಿ ಹೇಳಿರುವಂತೆ ನೀರನ್ನು ಇರಿಸುವುದು ಬಹಳ ಮುಖ್ಯ. ಅಡುಗೆಮನೆಯಲ್ಲಿ ಅದನ್ನು ಇರಿಸುವ ಸ್ಥಾನವು ಆರೋಗ್ಯ ಮತ್ತು ಸಂಪತ್ತಿನ ಮೇಲೆ ಪರಿಣಾಮ ಬೀರುತ್ತದೆ. ಸರಿಯಾದ ದಿಕ್ಕಿನಲ್ಲಿ ನೀರನ್ನಿಟ್ಟರೆ ಅಥವಾ ನೀರಿನ ಫಿಲ್ಟರ್‌ ಅನ್ನು ಕೂರಿಸಿದರೆ, ಅದು ನಿಮ್ಮ ಮತ್ತು ನಿಮ್ಮ ಕುಟುಂಬದ ಸದಸ್ಯರೆಲ್ಲರ ಆರೋಗ್ಯದ ಮೇಲೆ ಒಳ್ಳೆಯ ಪರಿಣಾಮಗಳನ್ನು ಬೀರುತ್ತದೆ. ವಾಸ್ತು ಪ್ರಕಾರ ಕುಡಿಯುವ ನೀರನ್ನು ಇರಿಸಲು ಕೆಲವು ಸಲಹೆಗಳು ಇಲ್ಲಿವೆ:

1. ಕುಡಿಯುವ ನೀರಿನ ಯಾವುದೇ ಮೂಲವನ್ನಾದರೂ ಅಂದರೆ ನಲ್ಲಿ (ಟ್ಯಾಪ್‌), ಫಿಲ್ಟರ್‌ಗಳು, ಪ್ಯೂರಿಫೈಯರ್‌ಗಳು ಇತ್ಯಾದಿಗಳನ್ನು ಮನೆಯ ಈಶಾನ್ಯ ದಿಕ್ಕಿನಲ್ಲಿ ಇರಿಸಬೇಕು. ನೀರಿನ ಸಂಗ್ರಹವೂ ಈ ದಿಕ್ಕಿನಲ್ಲಿರಬೇಕು.

2. ಒಂದು ವೇಳೆ ನಿಮ್ಮ ಮನೆಯಲ್ಲಿ ಈಶಾನ್ಯ ದಿಕ್ಕಿನಲ್ಲಿ ಇವುಗಳನ್ನು ಇರಿಸಲು ಸಾಧ್ಯವಾಗದೇ ಇದ್ದಲ್ಲಿ ಪೂರ್ವ ಮೂಲೆಯಲ್ಲಿ ಅಥವಾ ಉತ್ತರ ದಿಕ್ಕಿನಲ್ಲಿ ಇಡಬಹುದು. ಆದರೆ ಯಾವುದೇ ಕಾರಣಕ್ಕೂ ಬೆಂಕಿಯ ಮೂಲೆಯಲ್ಲಿ ಇಡಬಾರದು.

3. ನೀರಿನ ನಲ್ಲಿಗಳನ್ನು ಯಾವುದೇ ಕಾರಣಕ್ಕೂ ಎರಡು ಗೋಡೆಗಳು ಸೇರುವ ಮೂಲೆಯಲ್ಲಿ ಇರಿಸಬಾರದು.

4.ಅಡುಗೆಮನೆಯಲ್ಲಿ ಕುಡಿಯುವ ನೀರಿನ ಟ್ಯಾಪ್ ಸೋರುತ್ತಿರಬಾರದು. ಇದು ಹಣದ ಹರಿವಿನ ಮೇಲೆ ಪರಿಣಾಮ ಬೀರುತ್ತದೆ. ಇದು ಕೇವಲ ಕುಡಿಯುವ ನೀರಿನ ಟ್ಯಾಪ್‌ಗೆ ಅನ್ವಯವಾಗುವುದಲ್ಲ, ಮನೆಯ ಯಾವುದೇ ಭಾಗದಲ್ಲಿ ನೀರು ಪೋಲಾಗುತ್ತಿರಬಾರದು. ನೀರಿನೊಂದಿಗೆ ಸಂಪತ್ತೂ ಪೋಲಾಗುತ್ತದೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ.

5. ಬೆಂಕಿ ಮತ್ತು ನೀರು ಒಂದಕ್ಕೊಂದು ಹೊಂದಿಕೆಯಾಗದ ಕಾರಣ ಕುಡಿಯುವ ನೀರು ಇಡುವ ಸ್ಥಳ ಮತ್ತು ಅಡುಗೆ ಒಲೆ ಅಕ್ಕಪಕ್ಕ ಇರದಂತೆ ನೋಡಿಕೊಳ್ಳಿ.

ಮನೆ ಕಟ್ಟಲು ಸೈಟ್‌ ಯಾವ ರೀತಿ ಇರಬೇಕು? ಈ ವಿಡಿಯೋ ನೋಡಿ ತಿಳಿಯಿರಿ.

6. ನಿಮ್ಮ ಮನೆಯ ಯಾವುದೇ ಭಾಗದಲ್ಲಿ ನೀರಿನ ಬಾಟಲಿಯನ್ನು ಇಡಬಹುದು. ಆದರೆ ನೀವು ನೀರಿನ ಬಾಟಲಿಯನ್ನು ಇಡುವಾಗ ಆ ಕೋಣೆಯ ಈಶಾನ್ಯ ದಿಕ್ಕಿನಲ್ಲಿ ಇಟ್ಟರೆ ಬಹಳ ಒಳ್ಳೆಯದು.

7. ನೀವು ಯಾವುದೇ ಬಣ್ಣದ ನೀರಿನ ಬಾಟಲಿಯನ್ನಾದರೂ ಬಳಸಬಹುದು. ಆದರೆ ಬಾಟಲಿಯ ಬಣ್ಣ ಕೆಂಪು ಮಾತ್ರ ಆಗಿರಬಾರದು. ಏಕೆಂದರೆ ಕೆಂಪು ಬಣ್ಣ ಅಗ್ನಿಯನ್ನು ಪ್ರತಿನಿಧಿಸುವುದರಿಂದ ಕೆಂಪು ಬಣ್ಣದ ಬಾಟಲಿ ಬಳಸಬಾರದು ಎಂದು ವಾಸ್ತು ನಿಯಮ ಹೇಳುತ್ತದೆ.

8. ಪಾರದರ್ಶಕವಾಗಿರುವ ನೀರಿನ ಬಾಟಲಿಯನ್ನು, ಫಿಲ್ಟರ್‌ ಅನ್ನು ಬಳಸುವುದು ಒಳ್ಳೆಯದು. ಒಂದು ವೇಳೆ ಸಾಧ್ಯವಾಗದೇ ಇದ್ದಲ್ಲಿ ನೀಲಿ ಬಣ್ಣದ ಬಾಟಲಿಯನ್ನು ಬಳಸಬಹುದು. ನೀವು ತುಂಬಾ ಧಾರ್ಮಿಕ ವ್ಯಕ್ತಿಯಾಗಿದ್ದರೆ, ನೇರಳೆ ಬಣ್ಣದ ನೀರಿನ ಬಾಟಲಿಯನ್ನು ಬಳಸಬಹುದು.

ಜ್ಯೋತಿಷ ಮತ್ತು ಭವಿಷ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ (Click Here) ಕ್ಲಿಕ್‌ ಮಾಡಿ.

9. ಮಲಗುವ ಕೋಣೆಯಲ್ಲಿ ನೀರಿನ ಬಾಟಲಿಯನ್ನು ಇಟ್ಟು ಕೊಳ್ಳಲು ವಾಸ್ತು ಶಾಸ್ತ್ರದ ಪ್ರಕಾರ ಯಾವುದೇ ತೊಂದರೆ ಇಲ್ಲ. ಆದರೆ ನೀವು ಮಲಗುವಾಗ ತಲೆಯ ಹತ್ತಿರ ಬಾಟಲಿಯನ್ನು ಅಥವಾ ನೀರಿನ ತಂಬಿಗೆಯನ್ನು ( ನೀರಿನ ಜಗ್‌) ಇಟ್ಟುಕೊಳ್ಳಬಾರದು. ಈ ರೀತಿ ಇಟ್ಟುಕೊಂಡರೆ ನಿದ್ರೆಗೆ ಭಂಗ ಬರಬಹುದು.

10. ನೀರನ್ನು ಸಂಗ್ರಹಿಸಿಡಲು ಪ್ಲಾಸ್ಟಿಕ್‌ ಬಾಟಲಿಗಳಿಗಿಂತ, ಮಣ್ಣಿನ ಅಥವಾ ತಾಮ್ರದ ಪಾತ್ರೆಗಳು , ಬಾಟಲಿಗಳು, ಬಹಳ ಸೂಕ್ತ. ವಾಸ್ತು ಶಾಸ್ತ್ರ ಪ್ರಕಾರ, ಮನೆಯಲ್ಲಿ ನೀರು ತುಂಬಿದ ಮಡಕೆಯನ್ನು ಇಡುವುದರಿಂದ ಹಣಕಾಸಿನ ತೊಂದರೆಗಳು ದೂರವಾಗುತ್ತವೆ ಮತ್ತು ನಿಮಗೆ ಎಂದಿಗೂ ಸಂಪತ್ತಿಗೆ ಕೊರತೆ ಇರುವುದಿಲ್ಲ.

ಇದನ್ನೂ ಓದಿ : Vastu Tips For Dining Hall: ಮನೆಯ ಡೈನಿಂಗ್‌ ಹಾಲ್‌ನಲ್ಲಿ ಈ ಆಕಾರದ ಟೇಬಲ್‌ ಇರಲೇಬಾರದು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your daily horoscope predictions for December 5 2023
Koo

ಚಂದ್ರನು ಕನ್ಯಾ ರಾಶಿ ಪ್ರವೇಶಿಸಿದ್ದು, ಬುಧವಾರದವರೆಗೆ ಅಲ್ಲಿಯೇ ನೆಲೆಸಲಿದ್ದಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ದೈಹಿಕ ಶ್ರಮ ಹೆಚ್ಚಲಿದೆ. ಸಂಶಯ ಇದ್ದರೆ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆಪ್ತರಿಂದ ಸಿಹಿ ಸುದ್ದಿ ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಸಿಂಹ ರಾಶಿಯವರಿಗೆ ಕೆಲವು ಘಟನೆಗಳು ಮನಸ್ಸಿನ ಮೇಲೆ ಪರಿಣಾಮ ಬೀರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಹೋದ್ಯೋಗಿಗಳಿಂದ ಬೆಂಬಲ ಸಿಗಲಿದೆ. ಕ್ಷೇತ್ರ ದರ್ಶನ ಮಾಡಲಿದ್ದು, ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಸಿಗಲಿದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (5-12-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷ.
ತಿಥಿ: ಅಷ್ಟಮಿ 24:36 ವಾರ: ಮಂಗಳವಾರ
ನಕ್ಷತ್ರ: ಪೂರ್ವ ಪಾಲ್ಗುಣಿ 27:36 ಯೋಗ: ವಿಷ್ಕುಂಭ 22:40
ಕರಣ: ಬಾಲವ 11:18 ಅಮೃತಕಾಲ: ರಾತ್ರಿ 08:25 ರಿಂದ 10:13ರ ವರೆಗೆ
ದಿನದ ವಿಶೇಷ: ಕಾಲಾಷ್ಟಮಿ

ಸೂರ್ಯೋದಯ : 06:28  ಸೂರ್ಯಾಸ್ತ : 05:52

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ದೈಹಿಕ ಶ್ರಮ ಹೆಚ್ಚಲಿದೆ. ಸಂಶಯ ಇದ್ದರೆ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆಪ್ತರಿಂದ ಸಿಹಿ ಸುದ್ದಿ ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಸಂಗಾತಿಯ ಮಧುರ ಮಾತುಗಳು ಹಿತವೆನಿಸುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಕುಟುಂಬದ ಆಪ್ತರಿಂದ ಆರ್ಥಿಕ ಸಹಾಯದ ಬೇಡಿಕೆ ಬರಲಿದೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ವಿದ್ಯಾರ್ಥಿಗಳು ಮನೋಬಲ ಹೆಚ್ಚಿಸಿಕೊಳ್ಳುವುದು ಅವಶ್ಯಕ. ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗುವುದು. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಉಂಟಾಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ಸದಾ ಕನಸುಗಳನ್ನು ಕಾಣುವುದು ವೃಥಾ ಕಾಲಹರಣ ಮಾಡಿದಂತೆ. ಇತರರಿಗೆ ಆರ್ಥಿಕವಾಗಿ ಸಹಾಯ ಮಾಡಿ ನೀವು ಹಣಕಾಸಿನ ಸಮಸ್ಯೆಯಲ್ಲಿ ಸಿಲುಕುವುದು ಬೇಡ. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕಟಕ: ಕುಟುಂಬದ ಸದಸ್ಯರಿಂದ ಆರ್ಥಿಕ ಬೆಂಬಲ ಸಿಗಲಿದೆ. ಉದ್ಯೋಗಿಗಳಿಗೆ ಶುಭಫಲ ಇರಲಿದೆ. ಹಣದ ಹರಿವು ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಪ್ರಗತಿ ಕಾಣುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆಪ್ತ ವ್ಯಕ್ತಿಗಳೊಂದಿಗೆ ಮಾತುಕತೆ ನಡೆಯಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಕೆಲವು ಘಟನೆಗಳು ಮನಸ್ಸಿನ ಮೇಲೆ ಪರಿಣಾಮ ಬೀರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಹೋದ್ಯೋಗಿಗಳಿಂದ ಬೆಂಬಲ ಸಿಗಲಿದೆ. ಕ್ಷೇತ್ರ ದರ್ಶನ ಮಾಡಲಿದ್ದು, ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ದೀರ್ಘಕಾಲದ ಕೆಲಸ ಕಾರ್ಯಗಳು ಇಂದು ಯಶಸ್ಸನ್ನು ತಂದು ಕೊಡಲಿದೆ. ಆದಾಯದ ಮೂಲ ಹೆಚ್ಚಾಗಲಿದೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ, ಕುಟುಂಬದ ವಾತಾವರಣ ಹದಗೆಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಕಿರಿಕಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆತ್ಮವಿಶ್ವಾಸದಿಂದ ಕೆಲಸ – ಕಾರ್ಯಗಳಲ್ಲಿ ಪ್ರಗತಿ ಸಾಧಿಸುವಿರಿ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವಿರಿ. ಹಣಕಾಸು, ಉದ್ಯೋಗ ಹಾಗೂ ವ್ಯಾಪಾರದಲ್ಲಿ ಪ್ರಗತಿ ಸಾಧಿಸುವಿರಿ. ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಕಾಲ ಇದಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಆರೋಗ್ಯದ ಕುರಿತು ಕಾಳಜಿ ಇರಲಿ. ನ್ಯಾಯಾಲಯದಲ್ಲಿರುವ ವ್ಯಾಜ್ಯಗಳು ವಿಜಯವನ್ನು ತಂದುಕೊಡುವ ಸಾಧ್ಯತೆ ಇದೆ. ಹಣಕಾಸು, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಹಾದಿ ಅತ್ಯವಶ್ಯಕ. ಹಣಕಾಸು ವಿಷಯದಲ್ಲಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಮಿಶ್ರಫಲ ಇರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ಬುದ್ಧಿವಂತಿಕೆಯಿಂದ ಕೆಲಸಕಾರ್ಯಗಳಲ್ಲಿ ಯಶಸ್ಸು ಕೀರ್ತಿ ಸಿಗುವುದು. ಶೀಘ್ರ ಕೋಪ ಮಾಡಿಕೊಳ್ಳುವುದು ಒಳ್ಳೆಯದಲ್ಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕ ಲಾಭ ಉಂಟಾಗಲಿದೆ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ದುಂದು ವೆಚ್ಚವನ್ನು ತಪ್ಪಿಸಿ. ಬುದ್ಧಿವಂತಿಕೆಯಿಂದ ಕೆಲಸ ಮಾಡಿ. ವ್ಯರ್ಥ ಪ್ರಯತ್ನ ಮಾಡುವುದು ಬೇಡ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

Horoscope Today

ಮೀನ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಸಂಗಾತಿ ಇಂದು ನಿಮ್ಮೊಂದಿಗೆ ಮುಖ್ಯ ವಿಷಯದ ಕುರಿತು ಚರ್ಚಿಸಬಹುದು. ಉದ್ಯೋಗಿಗಳಿಗೆ ಮಧ್ಯಮ ಫಲ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

Continue Reading

ಪ್ರಮುಖ ಸುದ್ದಿ

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

ead your daily horoscope predictions for december 4th 2023
Koo

ಚಂದ್ರನು ಸೋಮವಾರ ಕನ್ಯಾ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ವೃಷಭ ರಾಶಿಯವರು ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಮಿಥುನ ರಾಶಿಯವರು ಬಲವಂತವಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ ಎದುರಾಗಬಹುದು. ಇಂದಿನ ದಿವಸ ಗಾಬರಿಯಿಂದ ಇರುವ ಸಾಧ್ಯತೆ ಇದೆ. ಅವಘಡ ಸಂಭವವಿದ್ದು ನಿಧಾನವಾಗಿ ವಾಹನ ಚಾಲನೆ ಮಾಡಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (4-12-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷ.
ತಿಥಿ: ಸಪ್ತಮಿ 21:59 ವಾರ: ಸೋಮವಾರ
ನಕ್ಷತ್ರ: ಮಘಾ 24:34 ಯೋಗ: ವೈಧೃತಿ
ಕರಣ: ವಿಷ್ಟಿ (ಭದ್ರ) 08:41 ಅಮೃತಕಾಲ: ರಾತ್ರಿ 9:53 ರಿಂದ 11:41 ರವರೆಗೆ
ದಿನದ ವಿಶೇಷ: ಕಾರ್ತಿಕ ಸೋಮವಾರ, ನೌಕಾಪಡೆ ದಿನ, ಶಿಂಗ್ರಪಳ್ಳಿ ಜಾತ್ರೆ, ಪಂಜ ದೀಪೋತ್ಸವ
ಸೂರ್ಯೋದಯ : 06:27  ಸೂರ್ಯಾಸ್ತ : 05:52

ರಾಹುಕಾಲ : ಬೆಳಗ್ಗೆ 7:53 ರಿಂದ 9:19ರವರೆಗೆ
ಗುಳಿಕಕಾಲ: ಮಧ್ಯಾಹ್ನ 1:35ರಿಂದ 03:01ರವರೆಗೆ
ಯಮಗಂಡಕಾಲ: ಬೆಳಗ್ಗೆ 10:44 ರಿಂದ 12:10ರವರೆಗೆ

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರ್ಥಿಕವಾಗಿ ಬಲಿಷ್ಠತೆ ಇರಲಿದೆ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಹಳೆಯ ಸ್ನೇಹಿತರ ಜತೆ ಕಾಲ ಕಳೆಯುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಪ್ರಯಾಣ ಮಾಡುವ ಸಾಧ್ಯತೆ ಇದೆ. ಅನಿರೀಕ್ಷಿತ ಲಾಭಗಳನ್ನು ಪಡೆಯುವಿರಿ. ಕುಟುಂಬ ಸದಸ್ಯರ ಬೆಂಬಲ ದೊರೆಯಲಿದೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಸಾಮಾಜಿಕ ಕಾರ್ಯಗಳಲ್ಲಿ ತೊಡಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಬಲವಂತವಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ ಎದುರಾಗಬಹುದು. ಇಂದಿನ ದಿವಸ ಗಾಬರಿಯಿಂದ ಇರುವ ಸಾಧ್ಯತೆ ಇದೆ. ಅವಘಡ ಸಂಭವ ನಿಧಾನವಾಗಿ ವಾಹನ ಚಾಲನೆ ಮಾಡಿ. ಕುಟುಂಬದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವಿರಿ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಒತ್ತಡದ ಜೀವನಕ್ಕೆ ವಿಶ್ರಾಂತಿ ಸಿಗಲಿದೆ. ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ. ಅಗತ್ಯ ವಸ್ತುಗಳ ಖರೀದಿ ಮಾಡುವಿರಿ. ಸಹದ್ಯೋಗಿಗಳ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಮಾನಸಿಕ ಆರೋಗ್ಯ ಸದೃಢವಾಗಿರಲಿದೆ. ಅತಿ ಅವಶ್ಯಕ ಕೆಲಸದ ಕಾರಣ ದೈಹಿಕವಾಗಿ ಶ್ರಮವಾಗಲಿದೆ. ಉದ್ಯೋಗಿಗಳಿಗೆ ಸಹಕಾರ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕ ಕಲಹಗಳಿಗೆ ಧ್ವನಿಯಾಗುವುದು ಬೇಡ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ದೀರ್ಘಕಾಲದ ಪ್ರಯಾಣ ಬೆಳೆಸುವಿರಿ. ನಿರೀಕ್ಷೆಗೆ ತಕ್ಕಂತೆ ಫಲ ಸಿಗಲಿದೆ. ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವ ಅವಕಾಶವಿದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಕುಟುಂಬದಲ್ಲಿನ ಹಿರಿಯರೊಂದಿಗೆ ವಾದಕ್ಕೆ ಇಳಿಯುವುದು ಬೇಡ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ . ಹರಟೆಯಿಂದ ಕಾಲಹರಣ ಮಾಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿದೆ. ಸಕರಾತ್ಮಕವಾಗಿ ಆಲೋಚನೆ ಮಾಡುವಿರಿ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಆತ್ಮವಿಶ್ವಾಸ ಹೆಚ್ಚಲಿದೆ. ಕುಟುಂಬದ ಸದಸ್ಯರ ಮೇಲೆ ಕೋಪಗೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಉತ್ತಮ ಫಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗಿ ಪ್ರಯಾಣ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಪ್ರಮುಖ ಯೋಜನೆ ಕೈಗೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ನಿಮ್ಮ ವರ್ತನೆ ಇತರರಿಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಯಾರೊಂದಿಗೂ ಅತಿಯಾದ ಸಲುಗೆ ಬೇಡ. ಆತುರದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ಒತ್ತಡದ ಕೆಲಸದಿಂದ ಮುಕ್ತರಾಗುವಿರಿ. ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವುದು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

Continue Reading

ಪ್ರಮುಖ ಸುದ್ದಿ

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷದ ಷಷ್ಠಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavihsya
Koo

ಚಂದ್ರನು ಸಿಂಹ ರಾಶಿಯಿಂದ ಭಾನುವಾರ ರಾತ್ರಿ 10:50ಕ್ಕೆ ಕನ್ಯಾ ರಾಶಿಗೆ ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ಅನಗತ್ಯವಾಗಿ ಮಾನಸಿಕ ಒತ್ತಡವನ್ನು ತಂದುಕೊಳ್ಳುವುದು ಬೇಡ. ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ, ಇಂದು ನೀವು ಅದರಲ್ಲಿ ವಿಜಯವನ್ನು ಪಡೆಯಬಹುದು. ಸಿಂಹ ರಾಶಿಯವರು ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ವಿಚಲಿತರಾಗುವಂತೆ ಮಾಡಬಹುದು. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (3-12-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷ.
ತಿಥಿ: ಷಷ್ಠಿ 19:26 ವಾರ: ರವಿವಾರ
ನಕ್ಷತ್ರ:ಆಶ್ಲೇಷಾ 21:34 ಯೋಗ: ಇಂದ್ರ 20:54
ಕರಣ: ವಣಿಜ 19:26 ಅಮೃತಕಾಲ: ರಾತ್ರಿ 7:49 ರಿಂದ 9:36ರವರೆಗೆ
ದಿನದ ವಿಶೇಷ: ವಿಶ್ವ ಅಂಗವಿಕಲ ದಿನ, ತಲಕಾಡು ವೈದ್ಯೇಶ್ವರ ರಥ, ನಂಜನಗೂಡು ಅಷ್ಟತೀರ್ಥ

ಸೂರ್ಯೋದಯ : 06:53  ಸೂರ್ಯಾಸ್ತ : 05:39

ರಾಹುಕಾಲ : ಸಾಯಂಕಾಲ 4.30 ರಿಂದ 6.00
ಗುಳಿಕಕಾಲ: ಸಾಯಂಕಾಲ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನಗತ್ಯವಾಗಿ ಮಾನಸಿಕ ಒತ್ತಡವನ್ನು ತಂದುಕೊಳ್ಳುವುದು ಬೇಡ. ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ, ಇಂದು ನೀವು ಅದರಲ್ಲಿ ವಿಜಯವನ್ನು ಪಡೆಯಬಹುದು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಉತ್ಸಾಹದಿಂದ ಕಾಲ ಕಳೆಯುವಿರಿ. ಯಾರಾದರೂ ಆರ್ಥಿಕ ಸಹಾಯವನ್ನು ಕೇಳಬಹುದು. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ‌ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಅನಾವಶ್ಯಕ ವಿಚಾರಗಳಿಂದ ಮಾನಸಿಕವಾಗಿ ವಿಚಲಿತರಾಗುವುದು ಬೇಡ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಉತ್ತಮ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಅನೇಕ ಒತ್ತಡಗಳು ದೂರವಾಗಿ ಹರ್ಷದಿಂದ ಕಾಲ ಕಳೆಯುರಿ. ಸಂಗಾತಿಯೊಂದಿಗೆ ಪ್ರಮುಖ ಯೋಜನೆಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ವಿಚಲಿತರಾಗುವಂತೆ ಮಾಡಬಹುದು. ಕುಲ ದೇವರ ಆರಾಧನೆ, ಕ್ಷೇತ್ರ ದರ್ಶನದಿಂದ ಮಾನಸಿಕ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗುವುದು. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಜವಾಬ್ದಾರಿ ಹೆಚ್ಚಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬ ಸದಸ್ಯರ ಬೆಂಬಲ ದೊರೆಯಲಿದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಮಾನಸಿಕ ಒತ್ತಡದಿಂದ ದೂರವಿರಲು ಯೋಗ, ಪ್ರಾಣಾಯಾಮ, ಧ್ಯಾನ ಮಾಡಿ. ಆರ್ಥಿಕ ಸಹಾಯವನ್ನು ಪಡೆಯಬೇಕಾಗಬಹುದು. ಆಪ್ತರೊಂದಿಗೆ ಸಮಯ ಕಳೆಯಲು ಅವಕಾಶವಿದು. ಕುಟುಂಬದವರ ಸಹಕಾರ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಅನಿರೀಕ್ಷಿತ ಪ್ರಯಾಣ ಮಾಡುವಿರಿ. ದೇಹದ ಆಯಾಸ ಹೆಚ್ಚಾಗುವ ಸಾಧ್ಯತೆ ಇದೆ. ಒತ್ತಡದಿಂದ ಮನಸ್ಸಿನ ಹತೋಟಿ ತಪ್ಪುವ ಸಾಧ್ಯತೆ ಇದೆ, ಹೀಗಾಗಿ ತಾಳ್ಮೆವಹಿಸಿ. ವ್ಯಾಪಾರ ವ್ಯವಹಾರದಲ್ಲಿ ಲಾಭ ಸಿಗಲಿದ್ದು, ಆರ್ಥಿಕವಾಗಿ ಬಲಿಷ್ಠರಾಗುವಿರಿ. ಆದಾಯದ ಮೂಲಗಳು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಆರೋಗ್ಯದ ಕಡೆಗೆ ಹೆಚ್ಚು ಗಮನ ಇರಲಿ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಕುಟುಂಬದ ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವಿರಿ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಆಪ್ತರೊಂದಿಗೆ ಸಮಯ ಕಳೆಯವಿರಿ. ಅನೇಕ ಭಿನ್ನಾಭಿಪ್ರಾಯಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡಬಹುದು, ಮಾನಸಿಕ ಆರೋಗ್ಯಕ್ಕಾಗಿ ದತ್ತಾತ್ರೇಯ ಗುರುಗಳ ಆರಾಧನೆ ಮಾಡಿ. ಆರೋಗ್ಯ ಮಾಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಉತ್ತಮ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗಲಿದೆ. ಅನಾವಶ್ಯಕವಾಗಿ ಒತ್ತಡಕ್ಕೆ ಒಳಗಾಗುವುದು ಬೇಡ. ಆರ್ಥಿಕ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆಪ್ತರಿಂದ ಉಡುಗೊರೆ ಸಿಗುವುದು. ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮೀನ: ದೈಹಿಕ ಆರೋಗ್ಯ ಉತ್ತಮವಾಗಿರಲಿದ್ದು, ಮಾನಸಿಕ ಆರೋಗ್ಯಕ್ಕಾಗಿ ಹಿಂದೆ ನಡೆದ ಘಟನೆ ನೆನಪಿಸಿ ಕೊರಗುವುದು ಬೇಡ. ಸಂಗಾತಿಯ ಮಾತುಗಳು ಅಹಿತಕರ ಎನಿಸಬಹುದು. ಕುಟುಂಬದ ಸದಸ್ಯರ ಅಡ್ಡಿಯ ಕಾರಣದಿಂದ ನಿಮ್ಮ ದಿನ ಸ್ವಲ್ಪ ಏರುಪೇರಾಗಬಹುದು. ಆಪ್ತರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

Continue Reading

ಪ್ರಮುಖ ಸುದ್ದಿ

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷದ ಪಂಚಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶನಿವಾರ ಸಿಂಹ ರಾಶಿಯಲ್ಲೆ ನೆಲಸಲ್ಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮಿಥುನ ರಾಶಿಯವರು ಯಾರನ್ನೂ ನಂಬಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕಟಕ ರಾಶಿಯವರು ಆಪ್ತರೊಂದಿಗೆ ಅತಿಯಾದ ಸಲುಗೆ ಒಳ್ಳೆಯದಲ್ಲ, ಇದು ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಬೇರೆಯವರನ್ನು ಟೀಕೆ ಮಾಡುವ ಭರದಲ್ಲಿ ನೀವು ಟೀಕೆಗೆ ಒಳಗಾಗುವುದು ಬೇಡ. ಆರ್ಥಿಕವಾಗಿ ಸಾಧಾರಣ ಪ್ರಗತಿ ಇರಲಿದೆ. ಆತುರದ ಮಾತುಗಳಿಗೆ ನಿಯಂತ್ರಣ ಇರಲಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (2-12-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷ.
ತಿಥಿ: ಪಂಚಮಿ 17:13 ವಾರ: ಶನಿವಾರ
ನಕ್ಷತ್ರ: ಪುಷ್ಯ 18:53 ಯೋಗ: ಬ್ರಹ್ಮ 20:17
ಕರಣ: ತೈತುಲ 17:13 ಅಮೃತಕಾಲ: 11:54 ರಿಂದ 1: 39ರವರೆಗೆ

ಸೂರ್ಯೋದಯ : 06:53  ಸೂರ್ಯಾಸ್ತ : 05:39

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರೋಗ್ಯ ಸಂಬಂಧಿ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಕುಟುಂಬ ಸದಸ್ಯರ ಸಂಪೂರ್ಣ ಬೆಂಬಲ ಸಿಗಲಿದೆ. ಅಪರೂಪದ ವ್ಯಕ್ತಿಗಳ ಪರಿಚಯದಿಂದಾಗಿ ಅನೇಕ ವಿಚಾರಗಳು ಮನಸ್ಸಿನ ಆಳಕ್ಕೆ ಇಳಿಯಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಆರ್ಥಿಕವಾಗಿ ಪ್ರಗತಿ ಇರಲಿದೆ. ಅನೇಕ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದಕ್ಕೆ ಉತ್ತಮ ಕಾಲವಿದು. ಹೂಡಿಕೆಯಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಯಾರನ್ನೂ ನಂಬಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಸಂತೃಪ್ತ ಜೀವನ ನಿಮದಾಗಲಿದೆ, ಕಾರ್ಯದಲ್ಲಿ ಯಶಸ್ಸು ಸಿಗುವುದು. ಆಪ್ತ ಸ್ನೇಹಿತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ದಿನದ ಕೊನೆಯ ಭಾಗದಲ್ಲಿ ಮಾನಸಿಕವಾಗಿ ದುರ್ಬಲವಾಗುವ ಸಾಧ್ಯತೆ ಇದೆ. ಮಕ್ಕಳೊಂದಿಗೆ ಸಿಟ್ಟು ತರಿಸಬಹುದು. ಆರ್ಥಿಕವಾಗಿ ಸಾಧಾರಣವಾಗಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಆಪ್ತರೊಂದಿಗೆ ಅತಿಯಾದ ಸಲುಗೆ ಒಳ್ಳೆಯದಲ್ಲ, ಇದು ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಬೇರೆಯವರನ್ನು ಟೀಕೆ ಮಾಡುವ ಭರದಲ್ಲಿ ನೀವು ಟೀಕೆಗೆ ಒಳಗಾಗುವುದು ಬೇಡ. ಆರ್ಥಿಕವಾಗಿ ಸಾಧಾರಣ ಪ್ರಗತಿ ಇರಲಿದೆ. ಆತುರದ ಮಾತುಗಳಿಗೆ ನಿಯಂತ್ರಣ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಅತಿಥಿಗಳ ಆಗಮನದಿಂದ ಕಾರ್ಯ ವಿಳಂಬವಾಗಲಿದೆ. ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಹಣಕಾಸು, ಹೂಡಿಕೆ,ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಒತ್ತಡದಿಂದ ಹೊರಬಂದು ಉತ್ಸಾಹ ಹೆಚ್ಚಾಗಲಿದೆ. ದೈಹಿಕವಾಗಿ ಮಾನಸಿಕವಾಗಿ ಆರೋಗ್ಯ ಉತ್ತಮವಾಗಿರಲಿದೆ. ದಿಢೀರ್‌ ಧನಾಗಮನವಾಗಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಕೀರ್ತಿ ಸಿಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ದಿನದ ಮಟ್ಟಿಗೆ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ. ಸಾಲದ ಮರುಪಾವತಿ ಆಗಲಿದೆ. ಕುಟುಂಬದಲ್ಲಿ ಸಾಮರಸ್ಯ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅನಿವಾರ್ಯ ಕಾರಣಗಳಿಂದ ನೀವು ಇತರರೊಂದಿಗೆ ಜಗಳಕ್ಕೆ ಇಳಿಯುವ ಸಾಧ್ಯತೆ ಇದೆ. ಆದಷ್ಟು ಮಾತಿನಲ್ಲಿ ನಿಯಂತ್ರಣ ಇರಲಿ. ಕುಟುಂಬದ ಆಪ್ತರು, ಸ್ನೇಹಿತರಿಂದ ಉಡುಗೊರೆ ಸಿಗುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸುನ್ನು ತಂದು ಕೊಡಲಿದೆ. ಇಂದು ಮನೋರಂಜನೆಗೆ ಹೆಚ್ಚು ಮಹತ್ವ ಕೊಡುವ ಸಾಧ್ಯತೆ ಇದೆ. ಆಪ್ತರು ಹಾಗೂ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಧನಸ್ಸು: ಆರೋಗ್ಯ ಪರಿಪೂರ್ಣವಾಗಿರಲಿದೆ. ಬಹಳ ದಿನಗಳ ಕನಸು ನನಸಾಗಲಿದೆ. ಆರ್ಥಿಕವಾಗಿ ಇಂದು ಸಬಲತೆ ಹೊಂದುವಿರಿ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸಂತೋಷದ ಜತೆ ಜತೆಗೆ ನಿಮ್ಮನ್ನು ಯಾರಾದರೂ ಟೀಕಿಸುವ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಕೌಟುಂಬಿಕ ತಾಪತ್ರಯ ನಿಮ್ಮನ್ನು ನಿರಾಸೆಗೊಳಿಸಬಹುದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮಕರ: ಆರೋಗ್ಯ ದಿನದ ಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ ಆದಷ್ಟು ಎಚ್ಚರಿಕೆ ಇರಲಿ. ಕುಟುಂಬ ಸದಸ್ಯರ ಬೆಂಬಲ ನಿಮಗೆ ಪುಷ್ಟಿ ನೀಡಲಿದೆ. ಆರ್ಥಿಕವಾಗಿ ಬಲಗೊಳ್ಳುವಿರಿ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಕುಟುಂಬ ಸದಸ್ಯರ ಅನಾರೋಗ್ಯ ಕಾರಣಕ್ಕೆ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಒಂಟಿತನ ನಿಮ್ಮನ್ನು ಕಾಡಬಹುದು. ಬಾಕಿ ಇರುವ ಕೆಲಸ ಕಾರ್ಯಗಳನ್ನು ಮುಂದೂಡುವುದು ಬೇಡ. ಅತಿಯಾದ ಆಲಸ್ಯದಿಂದ ಹೊರ ಬಂದು ಕೆಲಸದಲ್ಲಿ ತೊಡಗಿಸಿಕೊಳ್ಳುವುದು ಉತ್ತಮ.
ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮೀನ: ಆಪ್ತರು ನೀಡುವ ಶುಭ ಸಂದೇಶ ನಿಮ್ಮನ್ನು ಹರ್ಷಿತರನ್ನಾಗಿ ಮಾಡುವುದು. ಭರವಸೆಯ ಬದುಕು ರೂಪುಗೊಳ್ಳಲಿದೆ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕನಸಿನ ಭರವಸೆ ಚಿಗುರೂಡೆಯಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

Continue Reading
Advertisement
sadghuru with students
ಅಂಕಣ41 mins ago

Prerane Column : ವಿದ್ಯಾಭ್ಯಾಸ ಎಂದರೆ ದುಡ್ಡು ಮಾಡುವ ದಂಧೆಯ ಅಡಿಪಾಯವೇ?

ಕರ್ನಾಟಕ55 mins ago

ವಿಜಯಪುರ ಗೋದಾಮು ದುರಂತ: ಮೃತರ ಸಂಖ್ಯೆ 7ಕ್ಕೆ, ಇನ್ನೂ ನಾಲ್ಕು ಶವ ಸಿಕ್ಕಿಲ್ಲ

cm siddaramaih respect captain pranjal
ಕರ್ನಾಟಕ1 hour ago

CM Siddaramaiah: ಹುತಾತ್ಮ ಯೋಧ ಪ್ರಾಂಜಲ್‌ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 50 ಲಕ್ಷ ರೂ. ಪರಿಹಾರ

Canara Bank Ammembala Subbarao Pai
ಅಂಕಣ2 hours ago

Raja Marga Column: ಹಿಡಿಯಕ್ಕಿ ಸಂಗ್ರಹಿಸಿ ಕೆನರಾ ಬ್ಯಾಂಕ್ ಕಟ್ಟಿದ ಅಮ್ಮೆಂಬಳ ಸುಬ್ಬರಾವ್ ಪೈ

CBSE Board Exam 2024 and many more changes proposed implemented in this year
ದೇಶ2 hours ago

ಸಿಬಿಎಸ್‌ಇ ಬೋರ್ಡ್‌ ಎಕ್ಸಾಂಗೆ ಘೋಷಿಸಿದ ಪ್ರಮುಖ ಬದಲಾವಣೆಗಳೇನು?

Saurav Gangly
ಕ್ರಿಕೆಟ್2 hours ago

Virat Kohli : ಕೊಹ್ಲಿಯನ್ನು ನಾಯಕತ್ವದಿಂದ ಇಳಿಸಿದ್ದಕ್ಕೆ ಕಾರಣ ತಿಳಿಸಿದ ಸೌರವ್​ ಗಂಗೂಲಿ

Physical Education Teacher
ಉದ್ಯೋಗ2 hours ago

Teachers Recruitment : ಪ್ರಾಥಮಿಕ ಶಾಲೆಯಲ್ಲಿ 2120 ದೈಹಿಕ ಶಿಕ್ಷಕರ ಹುದ್ದೆ ಭರ್ತಿಗೆ ತೀರ್ಮಾನ

sufi
ಅಂಕಣ2 hours ago

ನನ್ನ ದೇಶ ನನ್ನ ದನಿ ಅಂಕಣ: ಸಯ್ಯಿದ್ ರಿಜ್ವಿ ಸ್ವತಃ ಹೇಳಿದ ಸೂಫಿಗಳ ನಿಜ ಕಥನ

Rain in Karnataka woman listening to music with an umbrella
ಕರ್ನಾಟಕ2 hours ago

Karnataka Weather : ಇಂದು – ನಾಳೆ ಬೆಂಗಳೂರು ಸೇರಿ ದಕ್ಷಿಣ ಒಳನಾಡಲ್ಲಿ ಭಾರಿ ಮಳೆ; ಇದು ಮಿಚುಂಗ್ ಎಫೆಕ್ಟ್‌

Congress party directed kamal nath to resign Madhya Pradesh Congress president post
ದೇಶ3 hours ago

ಎಂಪಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಮಲ್ ನಾಥ್‌ಗೆ ಸೂಚನೆ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ4 hours ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ1 day ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ2 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ2 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ3 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ4 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ4 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ5 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ5 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

ಟ್ರೆಂಡಿಂಗ್‌