ಭವಿಷ್ಯ
Vastu Tips : ಮನೆಯ ಡೈನಿಂಗ್ ಹಾಲ್‌ನಲ್ಲಿ ಈ ಆಕಾರದ ಟೇಬಲ್ ಇರಲೇಬಾರದು!
ವಾಸ್ತು ಶಾಸ್ತ್ರದ ಪ್ರಕಾರ ಊಟ ಮಾಡುವ ಸ್ಥಳವು ಮನೆಯ ಸದಸ್ಯರ ಆರೋಗ್ಯದ ಮೇಲೆ ನೇರ ಪರಿಣಾಮವನ್ನು ಬೀರುತ್ತದೆ. ಹಾಗಾಗಿ ಡೈನಿಂಗ್ ರೂಮ್‌ನ ವಾಸ್ತು ಕುರಿತೂ ಈ ಶಾಸ್ತ್ರದಲ್ಲಿ ಹೇಳಲಾಗಿದೆ (Vastu Tips). ಅವುಗಳನ್ನು ತಿಳಿಯೋಣ.
ವಾಸ್ತು ಶಾಸ್ತ್ರದಲ್ಲಿ ಮನೆಯ ಪ್ರತಿ ಕೋಣೆಯ ವಾಸ್ತುವು ಅತ್ಯಂತ ಮುಖ್ಯವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ವಾತಾವರಣ ನಿರ್ಮಾಣವಾಗ ಬೇಕೆಂದರೆ, ಮನೆಯು ವಾಸ್ತು ಪ್ರಕಾರ ಇದ್ದಾಗ ಮಾತ್ರವೇ ಸಾಧ್ಯವಾಗುತ್ತದೆ. ಮನೆಯ ನೆಮ್ಮದಿ ಮತ್ತು ಆರ್ಥಿಕ ಸ್ಥಿತಿ ಉತ್ತಮವಾಗಲು ವಾಸ್ತು ಶಾಸ್ತ್ರದಲ್ಲಿ (Vastu Tips) ಹೇಳಿರುವ ಕೆಲವು ನಿಯಮಗಳನ್ನು ಪಾಲಿಸುವುದು ಅತ್ಯಂತ ಅವಶ್ಯಕವಾಗುತ್ತದೆ. ಹಾಗಾಗಿ ಮನೆಯ ಅತೀ ಮುಖ್ಯ ಭಾಗವಾದ ಊಟ ಮಾಡುವ ಸ್ಥಳ ಅಂದರೆ ಡೈನಿಂಗ್ ಹಾಲ್‌ನ ವಾಸ್ತು ಹೇಗಿರಬೇಕೆಂಬುದನ್ನು ತಿಳಿಯೋಣ.
ವಾಸ್ತು ಶಾಸ್ತ್ರದಲ್ಲಿ ಮನೆಯ ಅಡುಗೆ ಕೋಣೆಗೆ ಎಷ್ಟು ಮಹತ್ವವಿದೆಯೋ, ಅಷ್ಟೇ ಪ್ರಾಮುಖ್ಯತೆಯನ್ನು ಊಟ ಮಾಡುವ ಸ್ಥಳಕ್ಕೂ ನೀಡಲಾಗಿದೆ. ಅಡುಗೆ ಕೋಣೆಯ ಪಕ್ಕದಲ್ಲೇ ಅಥವಾ ಅಡುಗೆ ಕೋಣೆಗೆ ಹೊಂದಿಕೊಂಡಂತೆಯೇ ಡೈನಿಂಗ್ ಹಾಲ್ ಅನ್ನು ನಿರ್ಮಿಸಲಾಗಿರುತ್ತದೆ. ಡೈನಿಂಗ್ ಹಾಲ್‌ನ ವಾಸ್ತುವು ನೇರವಾಗಿ ಮನೆಯ ಸದಸ್ಯರ ಆರೋಗ್ಯದ ಮೇಲೆ ಪರಿಣಾಮವನ್ನು ಬೀರುತ್ತದೆ. ಹಾಗಾಗಿ ಡೈನಿಂಗ್ ಹಾಲ್ ನಿರ್ಮಾಣದ ಸಂದರ್ಭದಲ್ಲಿ ಸರಿಯಾದ ದಿಕ್ಕು ಮತ್ತು ಸೂಕ್ತವಾದ ಡೈನಿಂಗ್ ಟೇಬಲ್ ಬಗ್ಗೆಯೂ ಯೋಚಿಸಬೇಕಾಗುತ್ತದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ವಾಸ್ತು ಶಾಸ್ತ್ರದಲ್ಲಿ ಕೆಲವು ನಿಯಮಗಳಿವೆ.
ಮನೆಯ ಸದಸ್ಯರೆಲ್ಲೂ ಒಟ್ಟಾಗಿ ಕುಳಿತು, ಅನ್ನಪೂರ್ಣೇಶ್ವರಿಗೆ ನಮಿಸಿ ಊಟ ಮಾಡುವ ಸ್ಥಳಕ್ಕೆ ವಿಶೇಷ ಶಕ್ತಿ ಇದ್ದು, ಇದು ಮನೆಗೆ ಸಕಾರಾತ್ಮಕತೆಯನ್ನು ನೀಡುತ್ತದೆ. ಹಾಗಾಗಿ ಮನೆಯ ಸದಸ್ಯರ ಸುಖ, ಆರೋಗ್ಯ ಮತ್ತು ನೆಮ್ಮದಿಗೆ ಡೈನಿಂಗ್ ಹಾಲ್‌ನ ದಿಕ್ಕು ಮುಖ್ಯವಾಗುತ್ತದೆ.
ಸರಿಯಾದ ದಿಕ್ಕು ಯಾವುದು?
ವಾಸ್ತು ಪ್ರಕಾರ ಅಡುಗೆ ಮನೆಯು ಆಗ್ನೇಯ ದಿಕ್ಕಿನಲ್ಲಿರುವುದು ಸೂಕ್ತ. ಅಡುಗೆ ಮನೆಯು ಯಾವುದೇ ಅನಿವಾರ್ಯ ಪರಿಸ್ಥಿತಿಯಲ್ಲೂ ನೈಋತ್ಯ ದಿಕ್ಕಿಗಿರಬಾರದು. ಇದರಿಂದ ಮನೆಯ ಆರ್ಥಿಕ ಸ್ಥಿತಿ ಹದಗೆಡುವುದಲ್ಲದೇ, ಸದಸ್ಯರ ಆರೋಗ್ಯದ ಮೇಲೆ ನೇರ ಪರಿಣಾಮವನ್ನು ಬೀರುತ್ತದೆ. ಹಾಗೆಯೇ ಡೈನಿಂಗ್ ಹಾಲ್ ಸಹ ಅಡುಗೆ ಮನೆಯ ಪಕ್ಕದಲ್ಲಿ ಅಥವಾ ಅದಕ್ಕೆ ಹೊಂದಿಕೊಂಡೇ ಇದ್ದರೆ ಉತ್ತಮ. ಹೀಗಿರುವುದು ಅತ್ಯಂತ ಸೂಕ್ತವೆಂದು ವಾಸ್ತು ಶಾಸ್ತ್ರ ಹೇಳುತ್ತದೆ.
ಅಡುಗೆ ಕೋಣೆಯ ದಕ್ಷಿಣಕ್ಕೆ, ಪಶ್ಚಿಮಕ್ಕೆ ಅಥವಾ ಪೂರ್ವ ದಿಕ್ಕಿಗೆ ಡೈನಿಂಗ್ ಹಾಲ್ ಹೊಂದಿಕೊಂಡಿದ್ದರೆ ಒಳ್ಳೆಯದು. ಡೈನಿಂಗ್ ಹಾಲ್ ನಿರ್ಮಾಣಕ್ಕೆ ಪಶ್ಚಿಮ ದಿಕ್ಕು ಅತ್ಯಂತ ಸೂಕ್ತವಾದ ದಿಕ್ಕು ಎಂದು ವಾಸ್ತು ಶಾಸ್ತ್ರ ಹೇಳುತ್ತದೆ.
ಬೆಳಕು ಚೆನ್ನಾಗಿರಲಿ!
ಮನೆಗೆ ಶುದ್ಧವಾದ ಗಾಳಿ ಮತ್ತು ಉತ್ತಮ ಬೆಳಕು ಅತ್ಯಂತ ಮುಖ್ಯವಾಗುತ್ತದೆ. ಹಾಗೆಯೇ ಡೈನಿಂಗ್ ಹಾಲ್‌ಗೂ ಉತ್ತಮ ಬೆಳಕಿನ ಅವಶ್ಯಕತೆ ಇರುತ್ತದೆ. ಡೈನಿಂಗ್ ಹಾಲ್ ಕತ್ತಲಾಗಿರಬಾರದು. ಉತ್ತಮ ಬೆಳಕು ಸಕಾರಾತ್ಮಕ ಶಕ್ತಿಯನ್ನು ನೀಡುತ್ತದೆ ಮತ್ತು ಇದರಿಂದ ಮನೆಯ ಸದಸ್ಯರ ಮಾನಸಿಕ ಸ್ಥಿತಿ ಮತ್ತಷ್ಟು ಉತ್ತಮವಾಗುತ್ತದೆ.
ಯಾವ ಬಣ್ಣ ಸೂಕ್ತ?
ಡೈನಿಂಗ್ ಹಾಲ್‌ನ ಬಣ್ಣ ಗಾಢವಾಗಿದ್ದು, ಕಣ್ಣಿಗೆ ತಂಪೆರೆಯುವಂತಿರಬೇಕು. ಹಿಂಸೆ ಮತ್ತು ಕೆಟ್ಟದ್ದನ್ನುವನ್ನು ಬಿಂಬಿಸುವ ಬಣ್ಣಗಳನ್ನು ಬಳಸದಿರುವುದು ಉತ್ತಮ. ಹಣ್ಣು, ತರಕಾರಿ, ತೋಟ ಮತ್ತು ಸಹಜ ಪ್ರಾಕೃತಿಕ ಸೌಂದರ್ಯವನ್ನು ಹೊಂದಿರುವ ಚಿತ್ರಗಳನ್ನು ಬಳಸುವುದು ಉತ್ತಮ. ಕೇಸರಿ, ಹಸಿರು ಮತ್ತು ಕ್ರೀಮ್ ಕಲರ್‌ಗಳನ್ನು ಬಳಸಬಹುದಾಗಿದೆ.
ಚೆಂದದ ಹೂವುಗಳಿಂದ ಡೈನಿಂಗ್ ಟೇಬಲ್ ಅನ್ನು ಅಲಂಕರಿಸುವುದರ ಜೊತೆಗೆ ಕಣ್ಣಿಗೆ ಮುದ ನೀಡುವ ಟೇಬಲ್ ಕ್ಲಾತ್ ಬಳಸುವುದು ಉತ್ತಮ. ಅಷ್ಟೇ ಅಲ್ಲದೇ ಬೇಡದಿರುವ ವಸ್ತುಗಳು ಡೈನಿಂಗ್ ಟೇಬಲ್ ಮೇಲೆ ಇಡಬಾರದು ಮತ್ತು ಅವಶ್ಯಕವಾಗಿರುವ ವಸ್ತುಗಳು ಮಾತ್ರ ಟೇಬಲ್ ಮೇಲೆ ಇರುವಂತೆ ನೋಡಿಕೊಳ್ಳಬೇಕು.
ಡೈನಿಂಗ್ ಟೇಬಲ್ ಆಕಾರ ಹೀಗಿರಲಿ!
ವೃತ್ತಾಕಾರ ಮತ್ತು ಸರಿಯಾದ ಆಕಾರವಿಲ್ಲದ ಟೇಬಲ್‌ಗಳನ್ನು ಬಳಸಬಾರದು. ಡೈನಿಂಗ್ ಟೇಬಲ್‌ಗಾಗಿ ಬಳಸುವ ಟೇಬಲ್‌ನ ಆಕಾರ ಚೌಕ ಅಥವಾ ಆಯತಾಕಾರದ್ದಾಗಿದ್ದರೆ ಉತ್ತಮ. ಈ ರೀತಿಯ ಟೇಬಲ್‌ಗಳು ಸ್ಥಿರತೆಯನ್ನು ಮತ್ತು ಸಕಾರಾತ್ಮಕ ಶಕ್ತಿಯ ಹರಿವನ್ನು ಹೆಚ್ಚಿಸುತ್ತದೆ.
ಜ್ಯೋತಿಷ ಮತ್ತು ಭವಿಷ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ (Click Here) ಕ್ಲಿಕ್ ಮಾಡಿ.
ಕುಳಿತು ಕೊಳ್ಳುವ ಬಗೆ ಹೇಗೆ?
ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಹಿರಿಯರು ಅಥವಾ ಯಜಮಾನರು ಪೂರ್ವ ದಿಕ್ಕಿಗೆ ಕುಳಿತುಕೊಳ್ಳಬೇಕು. ಉಳಿದವರು ಪೂರ್ವ, ಉತ್ತರ ಮತ್ತು ಪಶ್ಚಿಮ ದಿಕ್ಕಿಗೆ ಕುಳಿತುಕೊಳ್ಳಬಹುದಾಗಿದೆ. ಊಟ ಮಾಡುವ ಮೊದಲು ದೇವರಿಗೆ ಪ್ರಾರ್ಥನೆ ಸಲ್ಲಿಸಿ, ಅನ್ನಪೂರ್ಣೇಶ್ವರಿಗೆ ನಮಿಸಿ ಆಹಾರ ಸೇವಿಸಲು ಪ್ರಾರಂಭಿಸಬೇಕು.
ಇದನ್ನೂ ಓದಿ: Prerane : ಅರ್ಥವು ಅನರ್ಥವೇ? ಈ ಬಗ್ಗೆ ಶಂಕರಭಗವತ್ಪಾದರು ಹೇಳಿದ್ದಾದರೂ ಏನು?
ಪ್ರಮುಖ ಸುದ್ದಿ
Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!
Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಚಂದ್ರನು ವೃಶ್ಚಿಕ ರಾಶಿಯಿಂದ ಶುಕ್ರವಾರ ಮಕರ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರಿಂದಾಗಿ ಮಿಥುನ, ಕಟಕ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ ಇದ್ದು, ಮಾತಿನಲ್ಲಿ ಹಿಡಿತವಿರಲಿ. ಮಿಥುನ ರಾಶಿಯವರ ಅಭಿಪ್ರಾಯಗಳಿಗೆ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ. ಕಟಕ ರಾಶಿಯ ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಧನಸ್ಸು ರಾಶಿಯವರು ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕುಂಭ ರಾಶಿಯ ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಮೀನ ರಾಶಿಯವರಿಗೆ ರಹಸ್ಯ ಕಾರ್ಯಗಳು ಯಶಸ್ಸು ತಂದು ಕೊಡಲಿವೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (22-09-2023)
ಮೇಷ: ಸ್ನೇಹಿತರು ಅಥವಾ ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಾಸದಿಂದ ಖರ್ಚು ಹೆಚ್ಚಾಗಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಅತಿಥಿಗಳ ಆಗಮನ ನಿಮ್ಮ ಯೋಚಿತ ಕಾರ್ಯ ವಿಳಂಬವಾಗುವ ಸಾಧ್ಯತೆ ಇದೆ. ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ ಇದ್ದು, ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ವೃಷಭ: ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು , ಪ್ರಶಂಸೆ ಸಿಗುವುದು. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಸಂಬಂಧವಿರದ ವಿಷಯಗಳಿಗೆ ಕಿವಿಗೊಡವುದು ಬೇಡ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಳೆಯ ವಿಚಾರಗಳನ್ನು ಕೆದಕಿ ಗಾಯ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3
ಮಿಥುನ: ನಿಮ್ಮ ಅಭಿಪ್ರಾಯಗಳಿಗೆ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ. ಇದರಿಂದ ಆತುರದಲ್ಲಿ ಮಾತನಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತವಾಗಿ ಖರ್ಚು ಹೆಚ್ಚಾಗಲಿದೆ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1
ಕಟಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಗೃಹಬಳಕೆ ಸಾಧನಗಳ ಖರೀದಿ ಸಾಧ್ಯತೆಯಿಂದ ಖರ್ಚು ಹೆಚ್ಚಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅತಿಥಿಗಳ ಆಗಮನ ಹರ್ಷ ತರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಸಿಂಹ: ನಿಮ್ಮ ಆಕರ್ಷಕ ಮಾತುಗಳು ಇತರರಿಂದ ಆಕರ್ಷಸುವಿರಿ. ನಾಲಿಗೆಯ ರುಚಿಗೆ ಮಾರು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ, ಮಿತಿಯಿರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸಂಗಾತಿಯ ಮಾತುಗಳು ಮಧುರವೇನಿಸುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಕನ್ಯಾ: ನಿಮ್ಮ ತ್ಯಾಗದ ಮನೋಭಾವ ನಿಮಗೆ ಸಂತಸ ತರುವುದು. ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ, ವಿನಾಕಾರಣ ವಿವಾದವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದಲ್ಲಿ ಅನಾವಶ್ಯಕ ಮಾತುಗಳಿಂದ ಜಗಳವಾಗಬಹುದು, ಮೌನದಿಂದ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಇತರರು ನಿಮ್ಮ ಕಾರ್ಯಗಳನ್ನು ಪ್ರಶಂಸೆ ಮಾಡುವರು. ಹಣಕಾಸಿನ ಹರಿವು ಹೆಚ್ಚಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸಹದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ, ಎಚ್ಚರಿಕೆ ಇರಲಿ. ವಿನಾಕಾರಣ ಜಗಳ ಮಾಡಿ ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4
ವೃಶ್ಚಿಕ: ಇತರರನ್ನು ಟೀಕಿಸಲು ನಿಮ್ಮ ಅಮೂಲ್ಯ ಸಮಯ ವ್ಯರ್ಥ ಮಾಡುವುದು ಬೇಡ. ಅನಾವಶ್ಯಕ ಚಿಂತಿಸಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ.ಕುಟುಂಬದಲ್ಲಿ ಹಳೆಯ ವಿಚಾರಗಳು ಕಲಹ ಸೃಷ್ಟಿಸಬಹುದು, ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5
ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಮೇಲೆ ಗಮನವಿರಲಿ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ವಿನಾಕಾರಣ ನಿಮ್ಮ ಸಿಟ್ಟು ಸಂಗಾತಿಯ ಮೇಲೆ ಹಾಕಿ, ಕುಟುಂಬದ ವಾತಾವರಣ ಕೆಡಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2
ಜೀವನದಲ್ಲಿ ಕರ್ಮಫಲ ಹೇಗೆ ಬರುತ್ತದೆ?
ಮಕರ: ನಿಮ್ಮ ಕೋಪದ ಸ್ವಭಾವದಿಂದ ಇತರರೊಂದಿಗೆ ವಾದಕ್ಕೆಳಿಯಬೇಡಿ. ಆತುರದಲ್ಲಿ ಅತಿರೇಕದ ಮಾತುಗಳು ಜಗಳ ತಂದಿತು. ಆರೋಗ್ಯದ ಕಡೆಗೆ ಗಮನವಿರಲಿ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಆತ್ಮೀರೊಂದಿಗೆ ಪ್ರಯಾಣಿಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ . ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಕುಂಭ: ಕೆಲಸಕ್ಕೆ ಹಾಕಿದ ಶ್ರಮ ವ್ಯರ್ಥವಾಗದಂತೆ ಎಚ್ಚರಿಕೆ ವಹಿಸಿ. ಆತುರದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಸರಿಯಲ್ಲ, ತಾಳ್ಮೆಯಿಂದ ಮಾತನಾಡಿ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?
ಮೀನ: ರಹಸ್ಯ ಕಾರ್ಯಗಳು ಯಶಸ್ಸು ತಂದು ಕೊಡಲಿವೆ. ಕುಟುಂಬಕ್ಕೆ ಸಮಯವನ್ನು ನೀಡುವಿರಿ. ವಿನಾಕಾರಣ ಕೋಪಗೊಂಡು ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಖರ್ಚು ಹೆಚ್ಚಾಗಲಿದೆ. ಸಂಗಾತಿ ನಿಮ್ಮ ಮನಸ್ಸಿನ ಭಾವನೆಗಳಿಗೆ ಸ್ಪಂದಿಸುವಳು. ಮಧುರ ಪ್ರೇಮ ಅಂಕುರವಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | [email protected]
ಪ್ರಮುಖ ಸುದ್ದಿ
Dina Bhavishya : ಈ ರಾಶಿಯವರ ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ; ಬೇಸರ ಬೇಡ, ತಾಳ್ಮೆ ಇರಲಿ!
Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ಷಷ್ಠಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಚಂದ್ರನು ವೃಶ್ಚಿಕ ರಾಶಿಯಿಂದ ಬುಧವಾರ ಬೆಳಗ್ಗೆ 10:06ಕ್ಕೆ ಧನಸ್ಸು ರಾಶಿಗೆ ಪ್ರವೇಶಿಸಿದ್ದು, ಸೆಪ್ಟೆಂಬರ್ 22ರ ಶುಕ್ರವಾರ ಸಂಜೆ 4.20ರವರೆಗೂ ಅಲ್ಲಿಯೇ ನೆಲೆಸಿರುತ್ತಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ವೃಶ್ಚಿಕ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ವೃಷಭ ರಾಶಿಯವರಿಗೆ ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ಕೋಪ ತರಿಸಬಹುದು, ಹೀಗಾಗಿ ತಾಳ್ಮೆಯಿಂದ ವರ್ತಿಸುವುದು ಒಳಿತು. ಕುಂಭ ರಾಶಿಯವರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಉದ್ಯೋಗದಲ್ಲಿ ಪ್ರಗತಿ ಕಾಣಲಿದ್ದಾರೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (21-09-2023)
ಮೇಷ: ಹಾಸ್ಯದ ಮನೋಭಾವನೆ ಇತರರನ್ನು ಆಕರ್ಷಿಸುವುದು. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಧಾರ್ಮಿಕ ಸ್ಥಳಗಳ ಭೇಟಿ ನೀಡುವ ಸಾಧ್ಯತೆ ಇದೆ. ಅಧ್ಯಾತ್ಮ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8
ವೃಷಭ: ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ನಿಮಗೆ ಕೋಪ ತರಿಸಬಹುದು, ಹೀಗಾಗಿ ತಾಳ್ಮೆಯಿಂದ ವರ್ತಿಸಿ. ಈ ಹಿಂದೆ ಕಾಡಿದ ವ್ಯಾಧಿ ಮರುಕಳಿಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಏತನ್ಮಧ್ಯೆ ಅತಿಥಿಗಳ ಆಗಮನ ಹರ್ಷ ತರುತ್ತದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಮಿಥುನ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು, ಮುಂದೆ ಆಗುವ ಕೆಲಸಗಳ ಬಗ್ಗೆ ಕಾರ್ಯ ಪ್ರವೃತ್ತರಾಗಿ. ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಅನೇಕ ವಿಚಾರಗಳಿಂದ ಒತ್ತಡಕ್ಕೆ ಒಳಾಗಾಗುವ ಸಾಧ್ಯತೆ ಇದೆ. ಕೋಪದಿಂದ ಏನನ್ನೂ ಸಾಧಿಸಲಾಗದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5
ಕಟಕ: ಹೂಡಿಕೆ ವ್ಯವಹಾರದಲ್ಲಿ ತೊಡಗುವ ಸಾಧ್ಯತೆ ಇದೆ. ಬಿಡುವಿರದ ಕೆಲಸದ ಮಧ್ಯೆಯೂ ಆರೋಗ್ಯ ಪರಿಪೂರ್ಣವಾಗಿರಲಿದೆ. ಆಪ್ತರೊಂದಿಗೆ ಮಾತುಕತೆ ನಡೆಸುವಿರಿ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ವಿವಾಹಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ಸಿಂಹ: ಕುಟುಂಬದ ಆಪ್ತರ ಹಾಗೂ ಸ್ನೇಹಿತರ ಸೂಕ್ತ ಸಲಹೆ ಸಹಕಾರ ಸಿಗುವುದು. ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ವಿಶ್ರಾಂತಿ ಸಿಗಲಿದೆ. ಹಣಕಾಸು ಪ್ರಗತಿ ಕಾಣುವಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ ಇದ್ದು, ಅಗತ್ಯವಿದ್ದಷ್ಟೆ ಮಾತನಾಡುವುದು ಒಳಿತು. ಆದಷ್ಟು ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಕನ್ಯಾ: ಅನೇಕ ವಿಷಯಗಳು ನಿಮಗೆ ಒತ್ತಡ ಉಂಟು ಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಉಂಟು. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ ಆಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಆಪ್ತ ಸಂಬಂಧಿಕರಿಂದ ಸಹಾಯ ದೊರೆಯಲಿದೆ. ವ್ಯಾಪಾರ – ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಹಣಕಾಸು ಪ್ರಗತಿ ಆಗಲಿದೆ. ಹಳೆಯ ವಿಚಾರಗಳು ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ಹೀಗಾಗಿ ಈ ಬಗ್ಗೆ ಎಚ್ಚರಿಕೆ ಇರಲಿ. ಉತ್ತಮ ಆರೋಗ್ಯ ನಿಮ್ಮದಾಗಲಿದೆ. ಉದ್ಯೋಗದಲ್ಲಿ ಸಾಧಾರಣ ಪ್ರಗತಿ ಕಾಣುವಿರಿ. ಕುಟುಂಬದ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ವೃಶ್ಚಿಕ: ವಾಹನ ಚಾಲನೆ ಮಾಡುವಾಗ ಆದಷ್ಟು ಎಚ್ಚರಿಕೆ ವಹಿಸಿ. ಆಪ್ತರ ಸಲಹೆಗಳನ್ನು ತಿರಸ್ಕಾರ ಭಾವದಿಂದ ನೋಡಬೇಡಿ. ವ್ಯತಿರಿಕ್ತವಾದ ಪರಿಣಾಮದಿಂದಾಗಿ ಸ್ನೇಹದಲ್ಲಿ ಬಿರುಕು ಮೂಡುವ ಸಾಧ್ಯತೆ ಇದೆ. ಅನಗತ್ಯ ಖರ್ಚು ನಿಮ್ಮದಾಗಲಿದೆ. ಆರೋಗ್ಯ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1
ಧನಸ್ಸು: ಅನಿರೀಕ್ಷಿತ ಪ್ರಯಾಣ ನಿಮ್ಮದಾಗಲಿದೆ. ಆತುರದ ಭರದಲ್ಲಿ ಅತಿರೇಕದ ಮಾತುಗಳು ಜಗಳ ತರಬಹುದು, ಸಮಾಧಾನದಿಂದ ವರ್ತಿಸಿ. ಅಮೂಲ್ಯ ವಸ್ತುಗಳು ಕೈತಪ್ಪುವ ಸಾಧ್ಯತೆ ಇದೆ. ಈ ಬಗ್ಗೆ ಜಾಗ್ರತೆ ವಹಿಸಿ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡದಂತೆ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7
1 ರಿಂದ 15 ನೇ ತಾರೀಖಿನ ಒಳಗೆ ಹುಟ್ಟಿದ್ದರೆ ಇದನ್ನು ತಪ್ಪದೇ ತಿನ್ನಿರಿ
ಮಕರ: ಆರೋಗ್ಯ ಉತ್ತಮವಾಗಿರಲಿದೆ. ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಉದ್ಯೋಗಿಗಳಿಗೆ ಬಡ್ತಿ ಸಿಗಲಿದ್ದು, ವೇತನದಲ್ಲಿ ಹೆಚ್ಚಳವಾಗಬಹುದು. ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯುಲು ಪ್ರಯತ್ನಿಸುವಿರಿ. ಸಮಾರಂಭದ ಆಮಂತ್ರಣ ಬರುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಕುಂಭ: ನಿಮ್ಮ ಆಹಾರದ ಕ್ರಮ ಆರೋಗ್ಯದಲ್ಲಿ ವ್ಯತ್ಯಾಸ ಮೂಡಿಸಬಹುದು. ಅಮೂಲ್ಯ ವಸ್ತುಗಳ ಬಗ್ಗೆ ಕಾಳಜಿ ವಹಿಸಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಉದ್ಯೋಗದಲ್ಲಿ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?
ಮೀನ: ಸಂಗಾತಿಯ ಆರೋಗ್ಯದ ಸಲವಾಗಿ ಖರ್ಚು ಹೆಚ್ಚಾಗಲಿದೆ. ವೃತಾ ಕಾಲಹರಣ ಮಾಡುವ ಆಲೋಚನೆಗಳಿಂದ ದೂರವಿರಿ. ಸಹೋದ್ಯೋಗಿಗಳಿಂದ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ವ್ಯಾಪಾರ – ವ್ಯವಹಾರ ಸಾಧಾರಣವಾಗಿರಲಿದೆ. ಹೂಡಿಕೆಯ ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 7
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | [email protected]
ಪ್ರಮುಖ ಸುದ್ದಿ
Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್!
Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ಪಂಚಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಚಂದ್ರನು ವೃಶ್ಚಿಕ ರಾಶಿಯಿಂದ ಬುಧವಾರ ಬೆಳಗ್ಗೆ 10:06ಕ್ಕೆ ಧನಸ್ಸು ರಾಶಿಗೆ ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ವೃಶ್ಚಿಕ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಗೆ ಗಮನ ಹರಿಸುವಿರಿ. ವೃಷಭ ರಾಶಿಯವರಿಗೆ ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ಇರಲಿ. ಕಟಕ ರಾಶಿಯವರಿಗೆ ಹೂಡಿಕೆ ವ್ಯವಹಾರ ಇಂದು ಹೆಚ್ಚು ಲಾಭ ತರುವುದು. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (20-09-2023)
ಮೇಷ: ನಿಮ್ಮ ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಗೆ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ವೃಷಭ: ಕುಟುಂಬದಲ್ಲಿ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಮಿಥುನ: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಅದರಲ್ಲೂ ಗರ್ಭಿಣಿಯರು ಹೆಚ್ಚು ಕಾಳಜಿ ವಹಿಸಿ. ಹೊಸ ಒಪ್ಪಂದ ಮಾಡುವುದು ಇಂದಿನ ಮಟ್ಟಿಗೆ ಬೇಡ. ಆತುರದಲ್ಲಿ ಯಾವ ತೀರ್ಮಾನಗಳು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8
ಕಟಕ: ಬಿಡುವಿಲ್ಲದ ಕಾರ್ಯ ಯೋಜನೆ, ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡುವುದು. ಪ್ರಯಾಣದ ಕುರಿತಾಗಿ ಯೋಜನೆ ಮಾಡುವಿರಿ. ಹೂಡಿಕೆ ವ್ಯವಹಾರ ಇಂದು ಹೆಚ್ಚು ಲಾಭ ತರುವುದು. ಪರಿಪೂರ್ಣ ಆರೋಗ್ಯ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದ್ದು, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ ಆಗಲಿದೆ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9
ಕನ್ಯಾ: ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ತರಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸೌಂದರ್ಯದ ಕುರಿತು ಕಾಳಜಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ವೃಶ್ಚಿಕ: ಮಾನಸಿಕ ಒತ್ತಡದಿಂದ ದೂರವಾಗಲು ಧ್ಯಾನ ಮಾಡಿ. ಚಿಂತೆ ನಿಮ್ಮನ್ನು ಮತ್ತಷ್ಟು ಖಿನ್ನತೆಗೆ ಒಳಪಡಿಸುವುದು. ಆದರಿಂದ ಸಕಾರಾತ್ಮಕ ಆಲೋಚನೆಗಳನ್ನು ಮಾಡಿ. ಕೌಟುಂಬಿಕ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ, ಮನೆಯ ವಾತಾವರಣ ಹದಗೆಡಬಹುದು. ಮೌನದಿಂದ ಕಾರ್ಯ ಸಿದ್ಧಿಸಿಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3
ಧನಸ್ಸು: ಪ್ರಭಾವಿ ವ್ಯಕ್ತಿಗಳ ವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಅನಿರೀಕ್ಷಿತ ಖರ್ಚು, ಇದರ ಹೊರಾತಾಗಿಯೂ ಲಾಭ ಪಡೆಯುವಿರಿ. ಮಾತಿನ ಮೇಲೆ ಹಿಡಿತವಿರಲಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
1 ರಿಂದ 15 ನೇ ತಾರೀಖಿನ ಒಳಗೆ ಹುಟ್ಟಿದ್ದರೆ ಇದನ್ನು ತಪ್ಪದೇ ತಿನ್ನಿರಿ
ಮಕರ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು ಕಾರ್ಯದಲ್ಲಿ ಮುನ್ನುಗ್ಗಿ. ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಆಗುವ ಸಾಧ್ಯತೆ ಇದೆ. ಅತಿರೇಕವಾಗಿ ಕೋಪದಿಂದ ಮಾತನಾಡುವುದು ಬೇಡ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9
ಕುಂಭ: ನಿಮ್ಮ ಸಹಾಯ ಮಾಡುವ ಗುಣ,ಇತರರಿಂದ ಪ್ರಶಂಸೆ ಸಿಗಲಿದೆ.ವ್ಯಾಪರ ವ್ಯವಹಾರದಲ್ಲಿ ಪ್ರಗತಿ.ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ.ಆರೋಗ್ಯ ಉತ್ತಮ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?
ಮೀನ: ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | [email protected]
ಪ್ರಮುಖ ಸುದ್ದಿ
Dina Bhavishya : ಈ ರಾಶಿಯವರ ಹೂಡಿಕೆ ತರಲಿದೆ ಭರ್ಜರಿ ಲಾಭ!
Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ಚೌತಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಚಂದ್ರನು ಸೋಮವಾರ 12:58ಕ್ಕೆ ವೃಶ್ಚಿಕ ರಾಶಿಯನ್ನು ಪ್ರವೇಶಿಸಿದ್ದು, ಬುಧವಾರ ಬೆಳಗ್ಗೆ 10.06ರ ವರೆಗೂ ಅಲ್ಲಿಯೇ ನೆಲೆಸಿರುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನುಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ ಆಗಲಿದೆ. ಕಟಕ ರಾಶಿಯವರಿಗೆ ಸಾಲದ ಮರುಪಾವತಿಯಾಗಿ ಆರ್ಥಿಕವಾಗಿ ಬಲಗೊಳ್ಳಲಿದ್ದಾರೆ. ತುಲಾ ರಾಶಿಯವರಿಗೆ ವಿನಾಕಾರಣ ಅಪರಿಚಿತರೊಂದಿಗೆ ಕಲಹವಾಗುವ ಸಾಧ್ಯತೆ ಇದೆ. ಮಾತಿನ ಮೇಲೆ ಹಿಡಿತವಿರಲಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (19-09-2023)
ಮೇಷ: ಶ್ರಮದ ಜೀವಕೆ ವಿಶ್ರಾಂತಿ ಸಿಗಲಿದೆ. ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ ಆಗಲಿದೆ. ಉದ್ಯೋಗದ ಸ್ಥಳದಲ್ಲಿ ಸಹಕಾರ ಸಿಗಲಿದೆ. ಸಭೆ- ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6
ವೃಷಭ: ಒತ್ತಡವನ್ನು ನಿವಾರಿಸಲು ಹೋಗಿ ವ್ಯಸನಗಳಿಗೆ ಬಲಿಯಾಗುವುದು ಬೇಡ. ಅಧ್ಯಾತ್ಮದ ಹಾದಿ ಸಮಾಧಾನ ನೀಡುವುದು. ಕುಟುಂಬದ ಆಪ್ತರು ಮತ್ತು ಸ್ನೇಹಿತರಿಂದ ಆರ್ಥಿಕ ಸಹಾಯ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5
ಮಿಥುನ: ನಿಮ್ಮ ಆಕರ್ಷಕ ವ್ಯಕ್ತಿತ್ವವು ಇತರರನ್ನು ಸೆಳೆಯಲಿದೆ. ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಎಂದೂ ಸಿಗದ ಉತ್ಸಾಹ, ನೆಮ್ಮದಿ, ಸಂತೋಷ ಈ ದಿನ ನಿಮ್ಮದಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಬದುಕಿನಲ್ಲಿ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಕಟಕ: ಅನೇಕ ಒತ್ತಡಗಳಿಂದ ಮುಕ್ತರಾಗುವಿರಿ. ಸಾಲದ ಮರುಪಾವತಿಯಾಗಿ ಆರ್ಥಿಕವಾಗಿ ಬಲಗೊಳ್ಳುವಿರಿ. ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಸಂಗಾತಿಯ ಮಧುರ ಮಾತುಗಳು ಕುಟುಂಬದಲ್ಲಿ ಭರವಸೆಯನ್ನು ಹೆಚ್ಚಿಸಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕ ಶುಭ ಫಲ.
ಅದೃಷ್ಟ ಸಂಖ್ಯೆ: 6
ಸಿಂಹ: ಕುಟುಂಬದ ಆಪ್ತರಿಂದ ಸಹಾಯ ಮತ್ತು ಸಹಕಾರ ಸಿಗಲಿದೆ. ವ್ಯಾಪಾರದಲ್ಲಿ ಪ್ರಗತಿ ಕಾಣುವಿರಿ. ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ನಿಮ್ಮನ್ನು ದ್ವೇಷಿಸುವ ಜನರೇ ನಿಮ್ಮ ಸ್ನೇಹಿತರಾಗಿ ಪರಿವರ್ತನೆ ಆಗುವರು. ಅಂದುಕೊಂಡ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5
ಕನ್ಯಾ: ಉತ್ಸಾಹದಿಂದ ಇರುವಿರಿ. ವ್ಯಾಪಾರದಲ್ಲಿ ಪ್ರಗತಿ ಕಾಣುವಿರಿ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಕುಟುಂಬದಲ್ಲಿ ಪರಸ್ಪರರ ಮಧ್ಯೆ ಸಾಮರಸ್ಯ ಮೂಡಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಅತಿಯಾದ ಒತ್ತಡದಿಂದ ಮಾನಸಿಕ ಚಿಂತೆ ಕಾಡಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವಿನಾಕಾರಣ ಅಪರಿಚಿತರೊಂದಿಗೆ ಕಲಹವಾಗುವ ಸಾಧ್ಯತೆ ಇದೆ. ಮಾತಿನ ಮೇಲೆ ಹಿಡಿತವಿರಲಿ. ಉದ್ಯೋಗದಲ್ಲಿ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5
ವೃಶ್ಚಿಕ: ಒತ್ತಡದ ಮಧ್ಯೆಯೂ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ರಹಸ್ಯ ಕಾರ್ಯಗಳು ಸಹ ಯಶಸ್ಸನ್ನು ನೀಡಲಿದೆ. ಮಾತುಗಳು ಸಂಬಂಧಿಗಳ ಮಧ್ಯೆ ಬಿರುಕು ಮೂಡಿಸುವ ಸಾಧ್ಯತೆ ಇದೆ. ಕೌಶಲ್ಯಕ್ಕ ತಕ್ಕ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7
ಧನಸ್ಸು: ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಆಪ್ತರ ಬೆಂಬಲ ಸಿಗಲಿದೆ. ಇತರ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡುವಿರಿ. ದಿನದ ಕೊನೆಯಲ್ಲಿ ಯಾರೊಂದಿಗೂ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4
ಗಣಪತಿ ಹಬ್ಬವನ್ನು ಹೇಗೆ ಆಚರಿಸಬೇಕು? ಇಲ್ಲಿದೆ ನೋಡಿ ಮಾಹಿತಿ
ಮಕರ: ಹಿಂದೆ ಮಾಡಿರುವ ಧನಸಹಾಯ ಇಂದು ತಮಗೆ ಮರಳುವ ಸಾಧ್ಯತೆ ಇದೆ. ಅಲ್ಪ ಸಮಯದ ಕೋಪ ನಿಮ್ಮ ಮನಸ್ಥಿತಿಯನ್ನು ಹಾಳುಮಾಡುವ ಸಾಧ್ಯತೆ ಇದೆ. ಆದ್ದರಿಂದ ಶಾಂತವಾಗಿರಿ. ಸೂಕ್ತ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗದಲ್ಲಿ ಸ್ವಲ್ಪ ಮಟ್ಟಿಗೆ ಒತ್ತಡ ಉಂಟಾಗಬಹುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಕುಂಭ: ಮನೋರಂಜನೆಯಿಂದಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳ ಸಹಕಾರ ಸಿಗಲಿದೆ. ಮನೆಯಲ್ಲಿ ಹಿರಿಯರೊಂದಿಗೆ ಮಾತಿಗೆ ಮಾತು ಬೆಳೆಸಬೇಡಿ. ಮೌನವಾಗಿರುವುದು ಉತ್ತಮ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?
ಮೀನ: ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸಂಗಾತಿಯಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | [email protected]
-
ಪ್ರಮುಖ ಸುದ್ದಿ13 hours ago
Lina Mukherjee: ಇಸ್ಲಾಮಿಕ್ ದೇಶದಲ್ಲಿ ಹಂದಿ ಮಾಂಸ ತಿಂದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ!
-
ಪ್ರಮುಖ ಸುದ್ದಿ4 hours ago
Ipsos poll Survey: ಟ್ರುಡೋ ಜನಪ್ರಿಯತೆ ಕುಸಿತ, ಕೆನಡಾ ಪಿಎಂ ಆಗಲು ಪ್ರತಿಪಕ್ಷ ನಾಯಕನೇ ಬೆಸ್ಟ್!
-
ಉಡುಪಿ10 hours ago
FB Profile Deleted: 20ಕ್ಕೂ ಅಧಿಕ ಹಿಂದು ಜಾಗರಣ ವೇದಿಕೆ ನಾಯಕರ ಫೇಸ್ ಬುಕ್ ಪ್ರೊಫೈಲ್ ಏಕಕಾಲದಲ್ಲಿ ಡಿಲೀಟ್!
-
ಸುವಚನ18 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕಲೆ/ಸಾಹಿತ್ಯ24 hours ago
Painting: ಕೇವಲ 328 ರೂ.ಗೆ ಖರೀದಿಸಿದ ಪೇಂಟಿಂಗ್ 1.5 ಕೋಟಿ ರೂಪಾಯಿಗೆ ಹರಾಜು!
-
ಕರ್ನಾಟಕ23 hours ago
Honey Bee Attack: ಶವ ಸಂಸ್ಕಾರಕ್ಕೆಂದು ಹೋದವರ ಮೇಲೆ ಹೆಜ್ಜೇನು ದಾಳಿ; 10 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
-
ಗ್ಯಾಜೆಟ್ಸ್7 hours ago
YouTube: ಯುಟ್ಯೂಬ್ ವಿಡಿಯೋ ಮಾಡುವುದು ಇನ್ನೂ ಸುಲಭ! ಹೊಸ ಎಡಿಟಿಂಗ್ ಆ್ಯಪ್ ಲಾಂಚ್
-
ಆರೋಗ್ಯ16 hours ago
Health Tips: ಎಳನೀರು ಒಳ್ಳೆಯದೆಂದು ಕುಡಿಯುವ ಮೊದಲು ಅದರ ಅವಗುಣಗಳೂ ಗೊತ್ತಿರಲಿ!