Vastu Tips : ಆರ್ಥಿಕ ಲಾಭ ಪಡೆಯಲು ಮನೆಯ ಉತ್ತರ ದಿಕ್ಕಿನಲ್ಲಿ ಹೀಗೆ ಮಾಡಿ! - Vistara News

ಭವಿಷ್ಯ

Vastu Tips : ಆರ್ಥಿಕ ಲಾಭ ಪಡೆಯಲು ಮನೆಯ ಉತ್ತರ ದಿಕ್ಕಿನಲ್ಲಿ ಹೀಗೆ ಮಾಡಿ!

ವಾಸ್ತು ಶಾಸ್ತ್ರದಲ್ಲಿ ಪ್ರತಿ ದಿಕ್ಕಿಗಿರುವ ಮಹತ್ವವನ್ನು ತಿಳಿಸಲಾಗಿದೆ. ಆಯಾ ದಿಕ್ಕಿನ ವಿಶೇಷತೆಯನ್ನು ತಿಳಿದು ಅದನ್ನು ಪಾಲಿಸಿದರೆ ಮನೆಯಲ್ಲಿ ನೆಮ್ಮದಿ ನೆಲೆಸಿರುತ್ತದೆ. ಇಲ್ಲಿ ಮನೆಯ ಉತ್ತರ ದಿಕ್ಕು ಹೇಗಿರಬೇಕೆಂಬ ಬಗ್ಗೆ ಮಾಹಿತಿ (Vastu Tips) ನೀಡಲಾಗಿದೆ.

VISTARANEWS.COM


on

Vastu Tips
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಸ್ತು ಎಂದರೆ ನಾವು ವಾಸಿಸುವ ಮನೆ ಎಂದರ್ಥ. ಈ ಮನೆಯು 9 ನವಗ್ರಹಗಳ ಅಧಿಪತ್ಯಕ್ಕೆ ಒಳಪಡುವುದರಿಂದ ಯಾವ ಯಾವ ದಿಕ್ಕುಗಳಲ್ಲಿ ಯಾವ ಯಾವ ಕೊಠಡಿಗಳು ಇರಬೇಕು ಯಾವ ಯಾವ ದಿಕ್ಕುಗಳಲ್ಲಿ ಯಾವ ಯಾವ ವಸ್ತುಗಳು ಇರಬೇಕೆಂಬುದನ್ನು ಇದಕ್ಕೆ ಸಂಬಂಧಿಸಿದ ವಾಸ್ತು ಶಾಸ್ತ್ರ (Vastu Tips) ತಿಳಿಸುತ್ತದೆ. ಹೀಗಾಗಿಯೇ ವಾಸ್ತು ಶಾಸ್ತ್ರಕ್ಕೆ ವಿಶೇಷ ಮಹತ್ವವಿದೆ.

ಮನೆಯು ವಾಸ್ತು ಪ್ರಕಾರ ಇದ್ದದ್ದೇ ಆದರೆ ಮನೆಯಲ್ಲಿ ಸುಖ, ಶಾಂತಿ ಮತ್ತು ನೆಮ್ಮದಿ ನೆಲೆಸಿರುತ್ತದೆ. ವಾಸ್ತು ಶಾಸ್ತ್ರದಲ್ಲಿ ದಿಕ್ಕುಗಳಿಗೂ ವಿಶೇಷ ಮಹತ್ವವನ್ನು ನೀಡಲಾಗಿದೆ. ಪ್ರತಿ ದಿಕ್ಕಿಗೂ ಒಂದೊಂದು ದೇವರ ಅಧಿಪತ್ಯವಿರುತ್ತದೆ. ಆಯಾ ದೇವರಿಗೆ ತಕ್ಕಂತೆ ದಿಕ್ಕುಗಳನ್ನು ಹೇಗೆ ಇಟ್ಟುಕೊಳ್ಳಬೇಕೆಂಬುದನ್ನು ತಿಳಿದಿರಬೇಕಾಗುತ್ತದೆ. ಅದರಂತೆಯೇ ವಸ್ತುಗಳನ್ನು ಇಡುವಾಗಲೂ ಸಹ ದಿಕ್ಕುಗಳ ಬಗ್ಗೆ ಗಮನ ನೀಡಬೇಕಾಗುತ್ತದೆ.

ಆಯಾ ವಸ್ತುಗಳನ್ನು ಅದಕ್ಕೆ ಸೂಕ್ತವಾಗುವ ದಿಕ್ಕಿನಲ್ಲಿಟ್ಟರೆ ಮಾತ್ರ ಮನೆಯಲ್ಲಿ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಮನೆಯ ಉತ್ತರ ದಿಕ್ಕಿನಲ್ಲಿ ಕೆಲವು ವಸ್ತುಗಳನ್ನು ಇಡುವುದರಿಂದ ವಾಸ್ತು ಪ್ರಕಾರ ಉತ್ತಮ ಫಲ ಸಿಗುವುದಲ್ಲದೆ, ಆರ್ಥಿಕವಾಗಿಯೂ ಲಾಭ ಉಂಟಾಗುತ್ತದೆ. ಜೊತೆಗೆ ವಾಸ್ತು ದೋಷ ನಿವಾರಣೆಯಾಗಿ, ಮನೆಯಲ್ಲಿ ಸುಖ ಮತ್ತು ಸಮೃದ್ಧಿ ನೆಲೆಸಿರುತ್ತದೆ.

ಹಾಗಾದರೆ ಮನೆಯ ಉತ್ತರ ದಿಕ್ಕಿನಲ್ಲಿ ಯಾವ್ಯಾವ ವಸ್ತುಗಳನ್ನು ಇಡಬೇಕು. ಹಾಗೆ ಇಡುವುದರಿಂದ ಆಗುವ ಲಾಭವೇನು ಮತ್ತು ಉತ್ತರ ದಿಕ್ಕಿಗಿರುವ ಮಹತ್ವವೇನು? ಎಂಬುದರ ಬಗ್ಗೆ ತಿಳಿದುಕೊಳ್ಳೋಣ.

ಉತ್ತರ ದಿಕ್ಕಿಗಿರುವ ಮಹತ್ವ

ವಾಸ್ತು ಶಾಸ್ತ್ರದಲ್ಲಿ ಉತ್ತರ ದಿಕ್ಕಿಗೆ ವಿಶೇಷ ಮಹತ್ವವನ್ನು ನೀಡಲಾಗಿದೆ. ಉತ್ತರ ದಿಕ್ಕನ್ನು ಅತ್ಯಂತ ಶುಭವೆಂದು ಪರಿಗಣಿಸಲಾಗುತ್ತದೆ. ಉತ್ತರ ದಿಕ್ಕಿನಲ್ಲಿರುವ ಹಿಮಾಲಯದಲ್ಲಿ ಶಿವ ಮತ್ತು ಸಂಪತ್ತಿಗೆ ಒಡೆಯನಾಗಿರುವ ಕುಬೇರ ದೇವರ ಆವಾಸ ಸ್ಥಾನವಿದೆ.

ಸಂಪತ್ತಿಗೆ ಒಡೆಯನಾಗಿರುವ ಕುಬೇರ ದೇವರ ಕೃಪೆಯಿಂದಲೇ ವ್ಯಕ್ತಿಯು ಹಣವಂತನಾಗಲು ಸಾಧ್ಯವಾಗುತ್ತದೆ. ಹಾಗಾಗಿ ವಾಸ್ತು ಪ್ರಕಾರ ಉತ್ತರ ದಿಕ್ಕಿನಲ್ಲಿ ಯಾವ ವಸ್ತುಗಳನ್ನು ಇಡಬೇಕೇಂದು ಹೇಳಿದೆಯೋ ಅದನ್ನೇ ಇಡಬೇಕು. ಇಲ್ಲವಾದಲ್ಲಿ ಮನೆಯಲ್ಲಿ ಕುಬೇರ ದೇವರು ವಾಸ ಮಾಡುವುದಿಲ್ಲವೆಂದು ಹೇಳಲಾಗುತ್ತದೆ. ಹಾಗಾಗಿ ಮನೆಯಲ್ಲಿ ಆರ್ಥಿಕ ಪರಿಸ್ಥಿತಿ ಉತ್ತಮವಾಗಬೇಕೆಂದರೆ, ಉತ್ತರ ದಿಕ್ಕಿನ ಅಧಿಪತ್ಯವನ್ನು ಹೊಂದಿರುವ ಬುಧ ಗ್ರಹ ಮತ್ತು ಕುಬೇರ ದೇವರ ಕೃಪೆ ಪಡೆಯುವುದು ಮುಖ್ಯವಾಗುತ್ತದೆ.

ಉತ್ತರ ದಿಕ್ಕಿನ ಕಿಟಕಿ ತೆಗೆದಿರಲಿ

ಮನೆಯ ಉತ್ತರ ದಿಕ್ಕಿನಲ್ಲಿ ಸ್ನಾನದ ಮನೆಯಿದ್ದರೆ ಅಂಥ ಮನೆಯಲ್ಲಿ ವಾಸಿಸುವವರು ಪದೇ ಪದೇ ಆರ್ಥಿಕ ನಷ್ಟಕ್ಕೆ ಕಾರಣರಾಗಬೇಕಾಗುತ್ತದೆ. ನಿಮ್ಮ ಮನೆಯ ಉತ್ತರ ದಿಕ್ಕಿನಲ್ಲಿ ಕಿಟಕಿಗಳಿದ್ದರೆ ಅದನ್ನು ತೆರೆದಿಡುವುದು ಉತ್ತಮ. ಉತ್ತರ ದಿಕ್ಕು ತೆರೆದಿದ್ದರೆ ಕುಬೇರ ದೇವರ ಕೃಪೆ ಪ್ರಾಪ್ತವಾಗುತ್ತದೆ. ಅಷ್ಟೇ ಅಲ್ಲದೇ ಉತ್ತರ ದಿಕ್ಕಿನಲ್ಲಿ ಭಾರೀ ಗಾತ್ರದ ಪೀಠೋಪಕರಣಗಳನ್ನು ಇಡುವುದು ಕೂಡ ಸೂಕ್ತವಲ್ಲ. ಯಾವಾಗಲೂ ಉತ್ತರ ದಿಕ್ಕಿನಲ್ಲಿ ಹಗುರವಾದ ವಸ್ತುಗಳನ್ನು ಮಾತ್ರ ಇಡಬೇಕು. ಇದರಿಂದ ಕುಬೇರ ದೇವರ ಕೃಪೆ ಪ್ರಾಪ್ತವಾಗುತ್ತದೆ ಎನ್ನುತ್ತಾರೆ ವಾಸ್ತು ತಜ್ಞರು.

ಪಾರದ ಶಿವಲಿಂಗವನ್ನು ಉತ್ತರ ದಿಕ್ಕಿನಲ್ಲಿಡಿ!

Vastu Tips

ವಾಸ್ತು ಶಾಸ್ತ್ರದ ಪ್ರಕಾರ ಉತ್ತರ ದಿಕ್ಕಿನ ಜಾಗ ಯಾವಾಗಲೂ ಖಾಲಿಯಾಗಿದ್ದರೆ ಉತ್ತಮ. ಜೊತೆಗೆ ಉತ್ತರ ದಿಕ್ಕು ಸದಾ ಸ್ವಚ್ಛವಾಗಿರಬೇಕು. ವಾಸ್ತು ಶಾಸ್ತ್ರದ ಪ್ರಕಾರ ಉತ್ತರ ದಿಕ್ಕಿನಲ್ಲಿ ಒಂದು ಪಾರದ ಶಿವಲಿಂಗವನ್ನು ಇಡಬೇಕು. ಇದರಿಂದ ಮನೆಯ ಆರ್ಥಿಕ ಸ್ಥಿತಿ ಉತ್ತಮವಾಗುತ್ತದೆ. ಪಾರದ ಧಾತುವು ಕುಬೇರ ದೇವರಿಗೆ ಪ್ರಿಯವಾಗಿರುವ ಧಾತುವಾಗಿದೆ. ಅಷ್ಟೇ ಅಲ್ಲದೇ ಇದು ಬುಧ ಗ್ರಹಕ್ಕೂ ಸಂಬಂಧಿಸಿರುವ ಧಾತುವಾಗಿದೆ. ಈ ಪಾರದ ಶಿವಲಿಂಗವು ಆರೂವರೆ ಇಂಚಿಗಿಂತ ದೊಡ್ಡದಾಗಿರಬಾರದು. ಹಾಗಾಗಿ ಚಿಕ್ಕ ಪಾರದ ಶಿವಲಿಂಗವನ್ನು ಮನೆಯ ಉತ್ತರ ದಿಕ್ಕಿನಲ್ಲಿಟ್ಟರೆ ಮನೆಗೆ ಶುಭವಾಗುತ್ತದೆ.

ಇದನ್ನೂ ಓದಿ : Vastu Tips: ಉತ್ತಮ ಆರೋಗ್ಯಕ್ಕಾಗಿ ವಾಸ್ತು ಪ್ರಕಾರ ಹೀಗಿರಲಿ ಅಡುಗೆ ಮನೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಭವಿಷ್ಯ

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

Dina Bhavishya: ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷದ ತದಿಗೆ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your daily horoscope predictions for March 28 2024
Koo

ಚಂದ್ರನು ವೃಶ್ಚಿಕ ರಾಶಿಯನ್ನು ಪ್ರವೇಶಿಸಿದ್ದಾನೆ. ಹೀಗಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮಿಥುನ ರಾಶಿಯ ಉದ್ಯೋಗಿಗಳಿಗೆ ಆಪ್ತರಿಂದ ಸಲಹೆ ಸೂಚನೆಗಳು ಸಿಗಲಿವೆ. ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರಿಕೆವಹಿಸಿ. ಶ್ರೇಷ್ಠ ಜನರ ಜತೆಗಿನ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (28-03-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ.
ತಿಥಿ: ತದಿಗೆ 18:5655 ವಾರ: ಗುರುವಾರ
ನಕ್ಷತ್ರ: ಸ್ವಾತಿ 18:37 ಯೋಗ: ಹರ್ಷಣ 23:11
ಕರಣ: ವಿಷ್ಟಿ (ಭದ್ರ) 18:56 ಅಮೃತ ಕಾಲ: ಬೆಳಗ್ಗೆ 08:58 ರಿಂದ 10:43ರ ವರೆಗೆ
ದಿನ ವಿಶೇಷ: ಸಂಕಷ್ಟ ಚತುರ್ಥಿ, ಶ್ರೀ ಅಗ್ನಿಬನ್ನಿರಾಯ ಜಯಂತಿ

ಸೂರ್ಯೋದಯ : 06:18   ಸೂರ್ಯಾಸ್ತ : 06:31

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಇದರೊಂದಿಗೆ ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿಗೆ ಹಣಗಳಿಕೆಯ ಹೊಸ ಮಾರ್ಗವೊಂದು ಹೊಳೆಯಲಿದೆ. ಅದರಿಂದ ನಿಮಗೆ ಲಾಭವೂ ಸಿಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಇಂದು ನಿಮ್ಮ ಜೀವನದಲ್ಲಿ ಹೆಚ್ಚು ಪ್ರೀತಿಯನ್ನು ಕಾಣುವಿರಿ. ಪ್ರವಾಸ ಹೊರಡುವ ಸಾಧ್ಯತೆ ಇದೆ. ಜತೆಗೆ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ನಿಮ್ಮ ವೈವಾಹಿಕ ಜೀವನದಲ್ಲಿ ಅನೇಕ ಏರಿಳಿತಗಳ ನಂತರ ಇಂದು ಪರಸ್ಪರರು ಪ್ರೀತಿಯಿಂದ ಭಾವನೆಗಳನ್ನು ಹಂಚಿಕೊಳ್ಳುವ ಉತ್ತಮ ದಿನ ಇದಾಗಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಹಾಗೂ ಕೌಟುಂಬಿಕವಾಗಿ ಶುಭ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಉದ್ಯೋಗಿಗಳಿಗೆ ಆಪ್ತರಿಂದ ಸಲಹೆ ಸೂಚನೆಗಳು ಸಿಗಲಿವೆ. ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರಿಕೆವಹಿಸಿ. ಶ್ರೇಷ್ಠ ಜನರ ಜತೆಗಿನ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಸಭಲತೆಯನ್ನು ಹೊಂದುವಿರಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕಟಕ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಸದೃಢರಾಗುವಿರಿ. ವ್ಯಾಪಾರ – ವ್ಯವಹಾರಗಳಲ್ಲಿ ಅಧಿಕ ಲಾಭ ನಿಮ್ಮದಾಗಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ಜನರು ಇಂದು ಕೆಲಸದ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು, ತಾಳ್ಮೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಸಿಂಹ: ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ನಿಮ್ಮ ಸರ್ವಾಧಿಕಾರಿ ಧೋರಣೆಯಿಂದಾಗಿ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುವ ಸಾಧ್ಯತೆ ಹೆಚ್ಚು. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳ ಬಗ್ಗೆ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ: ಅನಗತ್ಯ ಒತ್ತಡದಿಂದ ಹೊರಬರಲು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಸಮಾಧಾನ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ನಿಧಾನವಾದರೂ ಪ್ರಯತ್ನವನ್ನು ಬಿಡಬೇಡಿ. ಮುಂದೊಂದು ದಿನ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಉತ್ತಮ ಸ್ಥಿತಿಯನ್ನು ಹೊಂದುವಿರಿ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯದ ದೃಷ್ಟಿಯಿಂದ ಉತ್ತಮವಾದ ದಿನ. ನಿಮ್ಮ ಹರ್ಷಚಿತ್ತದ ಮನಸ್ಸು ನಿಮಗೆ ಇನ್ನಷ್ಟು ಆತ್ಮವಿಶ್ವಾಸವನ್ನು ತರಲಿದೆ. ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಆರ್ಥಿಕವಾಗಿ ಸಾಧಾರಣ ಫಲ ನಿಮ್ಮದಾಗಲಿದೆ. ಉದ್ಯೋಗಿಗಳಿಗೆ ಮಿಶ್ರಫಲ ಇರಲಿದೆ. ಕೌಟುಂಬಿಕವಾಗಿ ಸಂತೋಷದ ವಾತಾವರಣ ನೆಲೆಯೂರಲಿದೆ.
ಅದೃಷ್ಟ ಸಂಖ್ಯೆ: 9

Horoscope Today

ವೃಶ್ಚಿಕ: ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ ಇದೆ. ಹೀಗಾಗಿ ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯರೊಬ್ಬರ ಆರೋಗ್ಯ ಹದಗೆಡುವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡವನ್ನುಂಟು ಮಾಡಲಿದೆ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಕಿರಿಕಿರಿಗಳು ಹೆಚ್ಚಲಿವೆ. ಸಂಗಾತಿಯಿಂದ ಉಪಯುಕ್ತ ಸಲಹೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ದೃಢ ವಿಶ್ವಾಸದ ನಿರ್ಧಾರದಿಂದಾಗಿ ಬಹಳ ಸಮಯದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸ್ನೇಹಿತರಿಂದ ಆರ್ಥಿಕ ಸಹಾಯದ ಬೇಡಿಕೆ ಬರಲಿದೆ. ಹೀಗಾಗಿ ಆಲೋಚಿಸಿ ಸಹಾಯ ಮಾಡಿ. ಬಹಳ ದಿನಗಳಿಂದ ಪ್ರಯತ್ನಿಸುತ್ತಿದ್ದ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮಗೆ ಪ್ರಶಂಸೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ ಇದೆ.
ಅದೃಷ್ಟ ಸಂಖ್ಯೆ: 8

Horoscope Today

ಮಕರ: ಇಂದು ನೀವು ಹಲವಾರು ಒತ್ತಡಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗಬಹುದು. ಇದು ನಿಮಗೆ ಕಿರಿಕಿರಿ ತರುವುದಲ್ಲದೆ, ಆತಂಕಕ್ಕೆ ದೂಡಬಹುದು. ಆದರೆ, ಈ ವೇಳೆ ಕುಟುಂಬದವರ ಬೆಂಬಲ ಸಿಗುವುದರಿಂದ ಕೊಂಚಮಟ್ಟಿಗೆ ನಿರಾಳ ಭಾವ ನಿಮ್ಮದಾಗಲಿದೆ. ಆರೋಗ್ಯದ ಬಗ್ಗೆ ಕಿಂಚಿತ್ತು ಕಾಳಜಿ ವಹಿಸುವುದು ಉತ್ತಮ. ಉದ್ಯೋಗದ ಸ್ಥಳದಲ್ಲಿ ಒತ್ತಡ ಹೆಚ್ಚಲಿದೆ. ಖರ್ಚಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ದಿನದ ಮಟ್ಟಿಗೆ ಮಾಡುವುದು ಬೇಡ. ಆತುರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಲಾಭ ಇರಲಿದೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ ಉಂಟಾಗಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಹೂಡಿಕೆಯಲ್ಲಿ ಲಾಭಾಂಶ ಕಡಿಮೆ ಬರಲಿದೆ. ನಿಮಗೆ ಎದುರಾಗಿದ್ದ ದೊಡ್ಡ ಸಮಸ್ಯೆಯಿಂದ ಇಂದು ಹೊರಬರಬಹುದು. ಪ್ರೀತಿ – ಪಾತ್ರರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕೊಂಚ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

Dina Bhavishya: ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷದ ಬಿದಿಗೆ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ತುಲಾ ರಾಶಿಯಿಂದ ಬುಧವಾರ ಬೆಳಗ್ಗೆ 05:02ಕ್ಕೆ ವೃಶ್ಚಿಕ ರಾಶಿಯನ್ನು ಪ್ರವೇಶಿಸುತ್ತಾನೆ. ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಉತ್ಸಾಹದ ಭರದಲ್ಲಿ ಆಶ್ವಾಸನೆ ನೀಡುವುದು ಅಪಾಯ ತರುವ ಸಾಧ್ಯತೆಗಳು ಹೆಚ್ಚು, ಎಚ್ಚರಿಕೆಯಿಂದ ಇರಿ. ಮಿಥುನ ರಾಶಿಯವರು ಹತಾಶೆಯ ಭಾವನೆಯಿಂದ ಮನಸ್ಸಿನ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಲಾಭ ಸಿಗುವ ಸಾಧ್ಯತೆ ಇದೆ. ಪ್ರೀತಿಪಾತ್ರರ ಜತೆ ವಾದಕ್ಕೆ ಕಾರಣವಾಗಬಹುದಾದ ವಿವಾದಾತ್ಮಕ ವಿಷಯಗಳನ್ನು ತಪ್ಪಿಸಿ, ಎಚ್ಚರಿಕೆಯಿಂದ ಮಾತನಾಡಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (27-03-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ.
ತಿಥಿ: ಬಿದಿಗೆ 17:05 ವಾರ: ಬುಧವಾರ
ನಕ್ಷತ್ರ: ಚಿತ್ತಾ 16:14 ಯೋಗ: ವ್ಯಾಘಾತ 22:52
ಕರಣ: ಗರಜ 17:05 ಅಮೃತ ಕಾಲ: ಬೆಳಗ್ಗೆ 09:08 ರಿಂದ 10:55 ರವರೆಗೆ

ಸೂರ್ಯೋದಯ : 06:19   ಸೂರ್ಯಾಸ್ತ : 06:31

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುವ ದಿನವಿದು. ಕೆಲಸ-ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣಲಿದ್ದಿರಿ. ಉತ್ಸಾಹದ ಭರದಲ್ಲಿ ಆಶ್ವಾಸನೆ ನೀಡುವುದು ಅಪಾಯ ತರುವ ಸಾಧ್ಯತೆಗಳು ಹೆಚ್ಚು, ಎಚ್ಚರಿಕೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ.
ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಧ್ಯಮ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ನಿಮ್ಮ ಆಕರ್ಷಣೆಯ ವ್ಯಕ್ತಿತ್ವವು ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡುತ್ತದೆ. ಹೂಡಿಕೆ ವ್ಯವಹಾರದ ಕುರಿತು ಆಲೋಚನೆ ಮಾಡುವಿರಿ. ವ್ಯಾಪಾರ ವ್ಯವಹಾರದ ಕುರಿತಾಗಿ ಬೆಳೆಸುವ ಪ್ರಯಾಣ ಲಾಭ ತಂದುಕೊಡಲಿದೆ. ಉದ್ಯೋಗಿಗಳಿಗೆ ಮೆಚ್ಚುಗೆ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಹತಾಶೆಯ ಭಾವನೆಯಿಂದ ಮನಸ್ಸಿನ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಲಾಭ ಸಿಗುವ ಸಾಧ್ಯತೆ ಇದೆ. ಪ್ರೀತಿಪಾತ್ರರ ಜತೆ ವಾದಕ್ಕೆ ಕಾರಣವಾಗಬಹುದಾದ ವಿವಾದಾತ್ಮಕ ವಿಷಯಗಳನ್ನು ತಪ್ಪಿಸಿ, ಎಚ್ಚರಿಕೆಯಿಂದ ಮಾತನಾಡಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಸದೃಢ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ
ಅದೃಷ್ಟ ಸಂಖ್ಯೆ: 4

Horoscope Today

ಕಟಕ: ಮಾನಸಿಕವಾಗಿ ದೈಹಿಕವಾಗಿ ಆರೋಗ್ಯ ಪರಿಪೂರ್ಣವಾಗಿರಲಿದೆ. ಹರ್ಷ ತುಂಬಿದ ಮನಸ್ಸು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಹಳೆಯ ಬಾಕಿ ಮರುಪಾವತಿ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯಮಿಗಳಿಗೆ ಒಳ್ಳೆಯ ದಿನವಿದು. ವ್ಯಾಪಾರದ ಉದ್ದೇಶಕ್ಕಾಗಿ ಕೈಗೊಂಡ ಪ್ರವಾಸ ಸಕಾರಾತ್ಮಕ ಫಲಿತಾಂಶವನ್ನು ನೀಡುತ್ತದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಬಹಳ ದಿನಗಳಿಂದ ಕಾಡುತ್ತಿರುವ ಸಮಸ್ಯಗೆ ಪರಿಹಾರ ಸಿಗಲಿದೆ. ಭವಿಷ್ಯದ ಹೂಡಿಕೆ ವ್ಯವಹಾರದ ಕುರಿತಾಗಿ ಆಲೋಚನೆ ಮಾಡುವಿರಿ. ನಿಮ್ಮ ಹಿಂದೆ ನಿಮಗೆ ಆಗದವರು ಪಿತೂರಿ ನಡೆಸುವ ಸಾಧ್ಯತೆ ಅಂತವರಿಂದ ಎಚ್ಚರಿಕೆ ಇರಲಿ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ‌ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ಸೃಜನಾತ್ಮಕ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಯಶಸ್ವಿ ದಿನ. ಭೂಮಿ ಸಂಬಂಧಿ ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ದಿನಕ್ಕಿಂತ ಹೆಚ್ಚಿನ ಸಂತೋಷ ಇರಲಿದೆ. ಆರ್ಥಿಕ ಚಟುವಟಿಕೆಗೆ ಗರಿಗೆದರಲಿದೆ. ದಿನದ ಕೊನೆಯಲ್ಲಿ ಕೌಟುಂಬಿಕ ಕಲಹಗಳು ನಡೆಯುವ ಸಾಧ್ಯತೆ, ಮಾತಿನಲ್ಲಿ ಹಿಡಿತವಿರಲಿ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಒತ್ತಡ ತುಂಬಿದ ವಾತಾವರಣ ಇರಲಿದೆ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ತೊಡಗಿರುವವರಿಗೆ ದಿನದ ಮಟ್ಟಿಗೆ ಹೆಚ್ಚಿನ ಲಾಭ ಸಿಗಲಿದೆ.ಕುಟುಂಬ ಸಹಿತರಾಗಿ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ.ಆರ್ಥಿಕವಾಗಿ ಪ್ರಗತಿ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ವ್ಯಾಪಾರಿಗಳಿಗೆ ಹೆಚ್ಚಿನ ಲಾಭವಾಗಲಿದೆ. ನಿಮ್ಮ ಸಂತೋಷದ ಸಂಗತಿಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಆರ್ಥಿಕವಾಗಿ ಸಾಧಾರಣವಾಗಿರಲಿದೆ. ಅಮೂಲ್ಯ ವಸ್ತುಗಳ ಬಗ್ಗೆ ಜಾಗೃತಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಧನಸ್ಸು: ಕೆಲವು ಪ್ರಮುಖ ನಿರ್ಧಾರಗಳು ನಿಮ್ಮ ಮೇಲೆ ಪರಿಣಾಮ ಬೀರಬಹುದು. ಅದರ ಹೊರತಾಗಿ ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ಕುಟುಂಬ ಸದಸ್ಯರ ಮಾತುಗಳು ನಿಮ್ಮನ್ನು ಘಾಸಿಗೊಳಿಸಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ.ಉದ್ಯೋಗಿಗಳಿಗೆ ಮಿಶ್ರ ಫಲ.ಆರ್ಥಿಕ ಪ್ರಗತಿ ಸಾಧಾರಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಮಕರ: ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ.ಅದರಲ್ಲಿಯೂ ಗರ್ಭಿಣಿಯರು ಹೆಚ್ಚಿನ ಮುತುವರ್ಜಿ ವಹಿಸಬೇಕು. ಅನಾವಶ್ಯಕ ಖರ್ಚುಗಳಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಸಂಬಂಧ ಪಡದೆ ಇರುವ ವಿಷಯದ ಕುರಿತು ಮೂಗು ತೂರಿಸುವುದು ಬೇಡ. ಟೀಕೆಗಳನ್ನು ಎದಿರಿಸಬೇಕಾದಿತು,ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಒತ್ತಡ ಇರಲಿದೆ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ವಿವಾದಾತ್ಮಕ ವಿಷಯಗಳಿಂದ ದೂರ ಇರಿ. ಮಾತಿನಲ್ಲಿ ಹಿಡಿತವಿರಲಿ. ತಮ್ಮ ಬಳಿ ಯಾರಾದರೂ ಹಣದ ಸಹಾಯ ಬೇಡುವ ಸಾಧ್ಯತೆ ಇದೆ, ಆಲೋಚಿಸಿ ಹೆಜ್ಜೆ ಇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಮೀನ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆ ಮಾರ್ಗಸೂಚಿಯಾಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೆಲಸ ಕಾರ್ಯಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಸದೃಢವಾಗಿಇರಲಿದೆ. ಉದ್ಯೋಗಿಗಳಿಗೆ ಅಭದ್ರತೆಯ ಭಾವನೆ ಕಾಡಲಿದೆ. ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Dina Bhavishya: ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷದ ಪಾಡ್ಯ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಂಗವಾರವೂ ತುಲಾ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರಿಗೆ ಆಪ್ತರ ವರ್ತನೆಯಿಂದ ನಿಮ್ಮ ಮನಸ್ಸಿಗೆ ನೋವು ತರುವ ಸಾಧ್ಯತೆಗಳು ಹೆಚ್ಚು, ತಾಳ್ಮೆಯಿಂದ ಇರಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು ಮಾತಿನಲ್ಲಿ ಹಿಡಿತವಿರಲಿ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ಕಟಕ ರಾಶಿಯವರು ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರಿಕೆ ಇರಲಿ. ಕೆಲವು ಆಘಾತಗಳನ್ನು ಎದುರಿಸಬೇಕಾಗಬಹುದು, ಧೈರ್ಯದಿಂದ ಇರಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (26-03-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ.
ತಿಥಿ: ಪಾಡ್ಯ 14:55 ವಾರ: ಮಂಗಳವಾರ
ನಕ್ಷತ್ರ: ಹಸ್ತಾ 13:32 ಯೋಗ: ಧ್ರುವ 22:16
ಕರಣ: ಕೌಲವ 14:55 ಅಮೃತ ಕಾಲ: ಬೆಳಗ್ಗೆ 06:50ರಿಂದ 08:37ರವರೆಗೆ
ದಿನದ ವಿಶೇಷ: ಮೇಲುಕೋಟೆ ಬ್ರಹ್ಮೋತ್ಸವ ಪ್ರಾರಂಭ

ಸೂರ್ಯೋದಯ : 06:20   ಸೂರ್ಯಾಸ್ತ : 06:31

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆಪ್ತರ ವರ್ತನೆಯಿಂದ ನಿಮ್ಮ ಮನಸ್ಸಿಗೆ ನೋವು ತರುವ ಸಾಧ್ಯತೆಗಳು ಹೆಚ್ಚು, ತಾಳ್ಮೆಯಿಂದ ಇರಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು ಮಾತಿನಲ್ಲಿ ಹಿಡಿತವಿರಲಿ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಇರಲಿ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಪ್ರಗತಿಯೊಂದಿಗೆ ಲಾಭ ಪಡೆಯುವಿರಿ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗಲಿದೆ. ಆಹಾರ ಕ್ರಮದ ವ್ಯತ್ಯಾಸದಿಂದಾಗಿ ಆರೋಗ್ಯದಲ್ಲಿ ಏರುಪೇರಾಗಬಹುದು, ಗಮನ ಹರಿಸಿ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಯಾರಾದರೂ ನಿಮ್ಮ ಸಹಾಯ ಬೇಡಿ ಬರುವರು, ವಿಮರ್ಶಿಸಿ ಸಹಾಯ ಮಾಡಿ. ಆರ್ಥಿಕ ಪ್ರಗತಿ ದಿನದ ಮಟ್ಟಿಗೆ ಸಾಧಾರಣವಾಗಿರಲಿದೆ. ಯಾರಾದರೂ ನಿಮ್ಮ ಭಾವನೆಗಳನ್ನು ನಿರಾಸೆ ಮಾಡುವ ಸಾಧ್ಯತೆ ಇದೆ. ಅವರ ಮಾತನ್ನು ನಿರ್ಲಕ್ಷ್ಯ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಹೊಸ ಭರವಸೆಯ ಆಶಾಭಾವನೆ ಮೂಡಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕಟಕ: ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರಿಕೆ ಇರಲಿ. ಕೆಲವು ಆಘಾತಗಳನ್ನು ಎದುರಿಸಬೇಕಾಗಬಹುದು, ಧೈರ್ಯದಿಂದ ಇರಿ. ನಿಮ್ಮ ಆಸೆ-ಆಕಾಂಕ್ಷೆಗಳು ಯಶಸ್ಸನ್ನು ತಂದುಕೊಡಲಿವೆ. ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕವಾಗಿ ಲಾಭ ಕಡಿಮೆ ಇರಲಿದೆ. ಹೊಸ ಆಲೋಚನೆಗಳು ನಿಮ್ಮನ್ನು ಸೃಜನಾತ್ಮಕವಾಗಿ ಏನಾದರೂ ಮಾಡಲು ಪ್ರಯತ್ನಿಸುವಂತೆ ಮಾಡುವಂತೆ ಪ್ರೇರೇಪಿಸುತ್ತದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳವಿರಿ. ಹಣಕಾಸು ಪರಿಸ್ಥಿತಿ ಸಾಧಾರಣ, ದಿನದ ಮಟ್ಟಿಗೆ ಖರ್ಚು ಇರಲಿದೆ. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಾಸಿಗೆ ಇದ್ದಷ್ಟು ಕಾಲು ಚಾಚಿ. ಆರೋಗ್ಯ ಮಧ್ಯಮ, ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಪ್ರಭಾವಿ ಜನರ ಬೆಂಬಲ ಸಿಗಲಿದೆ. ಇದರಿಂದ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ. ಒಡಹುಟ್ಟಿದವರ ಸಹಕಾರ ಸಿಗಲಿದೆ. ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನು ಆಡಿ, ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ: ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡಿ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಇಂದು ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ. ಪ್ರಯಾಣದಿಂದ ಲಾಭ ಇರಲಿದೆ. ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ಭಾವನಾ ಜೀವಿಗಳಾದ ನೀವು ನಕಾರಾತ್ಮಕ ಆಲೋಚನೆಗಳಿಂದ ದೂರ ಇರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ, ಕ್ಷೇತ್ರ ದರ್ಶನ ಪಡೆದು ಮಾನಸಿಕ ನೆಮ್ಮದಿ ತಂದುಕೊಳ್ಳುವುದು ಅವಶ್ಯಕ. ಮಕ್ಕಳ ಆರೋಗ್ಯದ ಕಡೆಗೆ ಗಮನ ಹರಿಸಿ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಮಕರ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಕೆಲಸ ಕಾರ್ಯಗಳಲ್ಲಿ ಬಳಸಿಕೊಂಡರೆ ಇನ್ನೂ ಹೆಚ್ಚು ಆಕರ್ಷಕ ವ್ಯಕ್ತಿತ್ವ ವಿಕಸನ ಆಗುತ್ತದೆ. ಆರೋಗ್ಯ ಉತ್ತಮ.ದಿನದ ಮಟ್ಟಿಗೆ ಖರ್ಚು.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಅತಿಥಿಗಳ ಆಗಮನ ಸಂತಸ ತರುವುದು.ಆತ್ಮವಿಶ್ವಾಸದ ಹೊಸ ಭರವಸೆ ಮೂಡಲಿದೆ. ಹೂಡಿಕೆಯ ಲಾಭ ಇಂದು ಉಪಯೋಗಕ್ಕೆ ಬರುವುದು.ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದು ಕೊಡಲಿದೆ.ಆರೋಗ್ಯ, ಉದ್ಯೋಗದಲ್ಲಿ ಉತ್ತಮ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮೀನ: ಅತಿರೇಕದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಕೋಪಗೊಳ್ಳುವಂತೆ ಉದ್ರೇಕವಾಗುವ ವಿಷಯಗಳಿಂದ ದೂರ ಇರಿ. ತಾಳ್ಮೆಯಿಂದ ವರ್ತಿಸಿ. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರಿಗೆ ಹೂಡಿಕೆ ವ್ಯವಹಾರದಲ್ಲಿ ಡಬಲ್‌ ಲಾಭ

Dina Bhavishya: ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷದ ಹುಣ್ಣಿಮೆ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಸೋಮವಾರ ತುಲಾ ರಾಶಿಯಲ್ಲಿ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಕುಂಭ ರಾಶಿಯವರು ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಅತಿಯಾದ ಉತ್ಸಾಹದ ಭರದಲ್ಲಿ ಅತಿರೇಕದ ಮಾತುಗಳನ್ನಾಡುವುದು ಸರಿಯಲ್ಲ, ಅಪಾಯ ತಂದಿತು ಎಚ್ಚರಿಕೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (25-03-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ.
ತಿಥಿ: ಹುಣ್ಣಿಮೆ 12:29 ವಾರ: ಸೋಮವಾರ
ನಕ್ಷತ್ರ: ಉತ್ತರ ಪಾಲ್ಗುಣಿ 10:36 ಯೋಗ: ವೃದ್ಧಿ 21:28
ಕರಣ: ಭವ 12:29 ದಿನದ ವಿಶೇಷ: ಹೋಳಿ ಹುಣ್ಣಿಮೆ, ಮಹಾಲಿಂಗೇಶ್ವರ ಜಾತ್ರೆ, ಶ್ರೀ ಯೋಗಿ ನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ಜಯಂತಿ.

ಸೂರ್ಯೋದಯ : 06:20   ಸೂರ್ಯಾಸ್ತ : 06:31

ರಾಹುಕಾಲ : ಬೆಳಗ್ಗೆ- 07:52 ರಿಂದ 09:23
ಗುಳಿಕಕಾಲ: ಮಧ್ಯಾಹ್ನ- 1:30 ರಿಂದ 3:00
ಯಮಗಂಡಕಾಲ: ಬೆಳಗ್ಗೆ- 10:30 ರಿಂದ 12:00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಹಣದ ಹೂಡಿಕೆ ಕುರಿತು ಆಲೋಚನೆ ಮಾಡುವಿರಿ. ನಿಮ್ಮ ಹಾಸ್ಯದ ಮನೋವೃತ್ತಿ ಇತರನ್ನು ಆಕರ್ಷಿಸುತ್ತದೆ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸ್ನೇಹಿತರು, ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ, ಉಡುಗೊರೆ ಸಿಗುವ ಸಾಧ್ಯತೆ ಇದೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಸೌಜನ್ಯದಿಂದ ವರ್ತಿಸಿ. ಯಾವುದೇ ಆತುರದ ಮಾತುಗಳನ್ನಾಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಒತ್ತಡದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರಲಿದೆ. ನ್ಯಾಯಲಯದಲ್ಲಿರುವ ವ್ಯಾಜ್ಯ ಪ್ರಕರಣಗಳು ನಿಮಗೆ ವಿಜಯವನ್ನು ತಂದುಕೊಡಲಿದೆ. ಸಂಗಾತಿಯ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ, ಬದಲಾಗಿ ಕ್ಷೇತ್ರ ದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಸೂಕ್ತ. ಆರೋಗ್ಯ ಮಧ್ಯಮವಾಗಿರಲಿದೆ. ವ್ಯಾಪಾರ ವ್ಯವಹಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯ ಚಟುವಟಿಕೆಯ ಮಧ್ಯೆಯೂ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಭೂ ಸಂಬಂಧಿ, ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಲಾಭವಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಿರಿಯರ ಮಾರ್ಗದರ್ಶನ ಸಿಗಲಿದೆ, ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದಲ್ಲಿ ಅನೇಕ ಬದಲಾವಣೆಗಳನ್ನು ಕಾಣುವ ಸಾಧ್ಯತೆ ಇದೆ. ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಸಂಬಂಧ ಇರದ ವಿಷಯದ ಕುರಿತು ಅನಗತ್ಯವಾಗಿ ಚರ್ಚೆ ಮಾಡಿ, ಕುಟುಂಬದ ಸ್ವಾಸ್ಥ್ಯ ಕೆಡಿಸಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡುವ ಸಾಧ್ಯತೆ ಇದೆ. ಆಲಸ್ಯತನದಿಂದ ಕಾರ್ಯ ಮುಂದುಡುವುದು ಬೇಡ. ಅಮೂಲ್ಯ ವಸ್ತುಗಳ ಕುರಿತಾಗಿ ಜಾಗೃತೆ ಇರಲಿ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸುವುದು ಅಗತ್ಯ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅತಿಯಾದ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ.ಕುಟುಂಬದ ಆಪ್ತರಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದ ವ್ಯತ್ಯಾಸದಿಂದ ದಿನದ ಮಟ್ಟಿಗೆ ಖರ್ಚು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಹಾಸ್ಯ ಪ್ರವೃತ್ತಿಯಿಂದ ಬರುವ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದವರು ನಿಮ್ಮ ಬಗ್ಗೆ ಹೆಚ್ಚು ಕಾಳಜಿ ವಹಿಸುವರು. ಆರೋಗ್ಯ‌ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಅತಿಯಾದ ಉತ್ಸಾಹದ ಭರದಲ್ಲಿ ಅತಿರೇಕದ ಮಾತುಗಳನ್ನಾಡುವುದು ಸರಿಯಲ್ಲ, ಅಪಾಯ ತಂದಿತು ಎಚ್ಚರಿಕೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮೀನ: ಆಹಾರ ಕ್ರಮದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಸಂಗಾತಿಯ ಮಾತುಗಳು ಹಿತವೇನಿಸಿದರೂ ಅವರ ಮಾತುಗಳಿಗೆ ಮನ್ನಣೆ ಸಿಗುವುದಿಲ್ಲ. ಆರೋಗ್ಯ ಹಾಗೂ ಹಣಕಾಸಿನ ವಿಷಯದಲ್ಲಿ ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Lok Sabha Election 2024 DK Shivakumar Suresh assetsworth Rs 598 crore and 259.19 crore Increase in 5 years
Lok Sabha Election 20243 mins ago

Lok Sabha Election 2024: ಡಿ.ಕೆ. ಸುರೇಶ್‌ ಆಸ್ತಿ ಮೌಲ್ಯ 598 ಕೋಟಿ ರೂ.; 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!

Summer Fashion
ಫ್ಯಾಷನ್5 mins ago

Summer Fashion: ಸಮ್ಮರ್‌ ಸೀಸನ್‌ನಲ್ಲಿ ಸಿಂಪಲ್‌ ಸ್ಲಿವ್‌ಲೆಸ್‌ ಗೌನ್‌ಗಳ ಹಂಗಾಮ!

job alert
ಉದ್ಯೋಗ6 mins ago

Job Alert: ಗುಡ್‌ನ್ಯೂಸ್‌; 93 ಬ್ಯಾಂಕ್‌ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

Aditi Rao Hydari engaged to Siddharth
ಟಾಲಿವುಡ್13 mins ago

Aditi Rao Hydari: ಎಂಗೇಜ್‌ ಆಗಿರುವ ಫೋಟೊ ಶೇರ್‌ ಮಾಡಿದ ಅದಿತಿ ರಾವ್ ಹೈದರಿ!

Henrich Klasen- IPL
ಪ್ರಮುಖ ಸುದ್ದಿ15 mins ago

IPL 2024 : ಅಪ್ಪನ ಸಿಕ್ಸರ್​​ಗೆ ಚಿಯರ್ಸ್ ಹೇಳಿದ ಕ್ಲಾಸೆನ್ ಪುತ್ರಿ, ಇಲ್ಲಿದೆ ವಿಡಿಯೊ

Actor Govinda
ದೇಶ18 mins ago

Actor Govinda: ಶಿವಸೇನೆ ನಾಯಕನ ಜತೆ ನಟ ಗೋವಿಂದಾ ಚರ್ಚೆ; ಚುನಾವಣಾ ಕಣಕ್ಕೆ ಎಂಟ್ರಿ?

SSLC Students Fighting
ಬೆಂಗಳೂರು25 mins ago

SSLC Students Fight: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಹೊಡಿಬಡಿ; ಮೂವರಿಗೆ ಚಾಕು ಇರಿತ

RCB team
ಕ್ರೀಡೆ45 mins ago

IPL 2024 : ಕೊಹ್ಲಿ- ಗಂಭೀರ್ ಮುಖಾಮುಖಿಯಲ್ಲಿ ವಿಜಯ ಯಾರಿಗೆ?

toll hike
ಬೆಂಗಳೂರು52 mins ago

Toll Hike: ಮತ್ತೆ ಟೋಲ್‌ ಬರೆ; ಬೆಂಗಳೂರು-ಮೈಸೂರು ಓಡಾಟ ಇನ್ನಷ್ಟು ದುಬಾರಿ

Arvind Kejriwal
ದೇಶ1 hour ago

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ತಪ್ಪದ ಸಂಕಷ್ಟ; ಇನ್ನೂ 4 ದಿನ ಜೈಲೇ ಗತಿ!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20243 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20245 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ12 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌