Vastu Tips Signs that show your house has Vastu Dosha Vastu Tips : ಮನೆಯಲ್ಲಿ ಈ ಸಂಕೇತಗಳು ಕಂಡರೆ ಬೇಡ ನಿರ್ಲಕ್ಷ್ಯ; ವಾಸ್ತು ದೋಷದಿಂದಲೂ ಹೀಗಾಗಬಹುದು! Vistara News

ಭವಿಷ್ಯ

Vastu Tips : ಮನೆಯಲ್ಲಿ ಈ ಸಂಕೇತಗಳು ಕಂಡರೆ ಬೇಡ ನಿರ್ಲಕ್ಷ್ಯ; ವಾಸ್ತು ದೋಷದಿಂದಲೂ ಹೀಗಾಗಬಹುದು!

ಮನೆಯಲ್ಲಿ ವಾಸ್ತು ದೋಷ ಇದೆ ಎಂಬುದು ಗೊತ್ತಾಗುವುದು ಹೇಗೆ ಎಂಬುದು ನಿಮ್ಮ ಪ್ರಶ್ನೆಯೇ? ಇದನ್ನು ಕೆಲ ಸಂಕೇತಗಳು ಸೂಚಿಸುತ್ತವೆ. ಅವುಗಳ ಬಗ್ಗೆ ತಿಳಿಯೋಣ (Vastu Tips) ಬನ್ನಿ.

VISTARANEWS.COM


on

vastu tips for home
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಮ್ಮ ದೇಶದಲ್ಲಿ ವಾಸ್ತು ಶಾಸ್ತ್ರಕ್ಕೆ (Vastu Tips) ಬಹಳ ಮಹತ್ವ ನೀಡಲಾಗುತ್ತಿದೆ. ಏಕೆಂದರೆ ಇದಕ್ಕಿರುವ ಮಹತ್ವವನ್ನು ನಮ್ಮ ಪೂರ್ವಜರು ಸರಿಯಾಗಿ ತಿಳಿದುಕೊಂಡಿದ್ದು. ಮನೆಯಲ್ಲಿ ಎದುರಾಗುವ ಹಲವು ಸಮಸ್ಯೆಗಳಿಗೆ ವಾಸ್ತು ದೋಷ ಕಾರಣವಾಗಿರಬಹುದು. ವಾಸ್ತು ಶಾಸ್ತ್ರದಲ್ಲಿ ಮುಖ್ಯವಾಗಿ ಸಕಾರಾತ್ಮಕ ಮತ್ತು ನಕಾರಾತ್ಮಕ ಶಕ್ತಿಯ ಬಗ್ಗೆ ಹೇಳಲಾಗುತ್ತದೆ.

ಮನೆಯಲ್ಲಿರುವ ಸದಸ್ಯರ ಮೇಲೆ ಈ ಶಕ್ತಿಗಳ ಪ್ರಭಾವ ಬೀರುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿಯ ಹರಿವು ಇರುವುದರಿಂದ ಸುಖ–ಶಾಂತಿ, ಸಮೃದ್ಧಿ ನೆಲೆಸಿರುತ್ತದೆ. ಅದೇ ಮನೆಯಲ್ಲಿ ನಕಾರಾತ್ಮಕ ಶಕ್ತಿಯ ಹರಿವು ಹೆಚ್ಚಾಗಿದ್ದಲ್ಲಿ ಮನೆಯಲ್ಲಿ ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ವಾಸ್ತು ಶಾಸ್ತ್ರದಲ್ಲಿ ಮನೆಯ ದಿಕ್ಕು, ಮನೆಯಲ್ಲಿರುವ ವಸ್ತುಗಳನ್ನು ಸರಿಯಾದ ಸ್ಥಳದಲ್ಲಿ ಇಡುವುದರಿಂದ ಸಕಾರಾತ್ಮಕ ಶಕ್ತಿಯನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ತಿಳಿಸಲಾಗುತ್ತದೆ. ಹಾಗಾದರೆ ಮನೆಯಲ್ಲಿ ವಾಸ್ತು ದೋಷ ಉಂಟಾಗಿದೆ ಎಂಬುದನ್ನು ಹೇಗೆ ತಿಳಿಯುವುದು ಎಂಬುದು ನಿಮ್ಮ ಪ್ರಶ್ನೆಯಾಗಿರಬಹುದು. ಇದನ್ನು ಕೆಲವು ಸಂಕೇತಗಳು ತಿಳಿಸುತ್ತವೆ.

ಹಾಗಾದರೆ ಮನೆಯಲ್ಲಿ ವಾಸ್ತು ದೋಷ ಇದೆ ಎಂಬುದನ್ನು ತಿಳಿಸುವ ಸಂಕೇತಗಳು ಯಾವವು ಎಂಬುದನ್ನು ನೋಡೋಣ;

ಸಂತಾನ ಸಮಸ್ಯೆ

ವಿವಾಹವಾಗಿ ಹಲವಾರು ವರ್ಷಗಳು ಕಳೆದಿದ್ದರೂ ಸಂತಾನ ಆಗದೇ ಇದ್ದಲ್ಲಿ ಅದಕ್ಕೆ ಮನೆಯ ವಾಸ್ತು ದೋಷವೂ ಸಹ ಕಾರಣವಾಗಿರಬಹುದು. ವಾಸ್ತು ಶಾಸ್ತ್ರದ ಅನುಸಾರ ಮನೆಯಲ್ಲಿ ಸಂತಾನ ಸಮಸ್ಯೆ ಅಥವಾ ವಂಶ ವೃದ್ಧಿಗೆ ಅಡೆತಡೆಗಳು ಎದುರಾಗುತ್ತಿದ್ದರೆ ಅಂಥ ಮನೆಯ ಮಧ್ಯ ಭಾಗದಲ್ಲಿ ವಾಸ್ತು ದೋಷವಿರುವ ಸಾಧ್ಯತೆ ಹೆಚ್ಚಿರುತ್ತದೆ.

ಪದೇ ಪದೇ ಕೆಲಸ ಅರ್ಧಕ್ಕೇ ನಿಲ್ಲುವುದು

ಕೆಲವು ಮನೆಗಳಲ್ಲಿ ಯಾವ ಕೆಲಸವೂ ಸರಿಯಾಗಿ ಆಗುವುದಿಲ್ಲ. ಹಲವಾರು ಕೆಲಸಗಳು ಇನ್ನೇನು ಆಗೇ ಬಿಡುತ್ತದೆ ಎನ್ನುವಷ್ಟರಲ್ಲಿ ಮತ್ತೇನೋ ಸಮಸ್ಯೆ ಎದುರಾಗಿರುತ್ತದೆ. ಕೊನೆಗೂ ಎಷ್ಟೇ ಪ್ರಯತ್ನ ಪಟ್ಟರೂ ಆ ಕೆಲಸ ಫಲಪ್ರದವಾಗುವುದಿಲ್ಲ. ಇದಕ್ಕೂ ಮನೆಯ ಮಧ್ಯ ಭಾಗದ ವಾಸ್ತು ದೋಷವೇ ಕಾರಣವಾಗಿರಬಹುದೆಂದು ವಾಸ್ತು ಶಾಸ್ತ್ರ ಹೇಳುತ್ತದೆ. ಮನೆಯ ಮಧ್ಯಭಾಗದಲ್ಲಿ ಶೌಚಾಲಯವನ್ನು ನಿರ್ಮಿಸುವುದರಿಂದ ಅಥವಾ ಭಾರೀ ಗಾತ್ರದ ವಸ್ತುಗಳನ್ನು ಇಡುವುದರಿಂದ ಸಹ ವಾಸ್ತು ದೋಷ ಉಂಟಾಗುತ್ತದೆ.

ಆರ್ಥಿಕ ಸಂಕಷ್ಟ

ಹೆಚ್ಚು ಹಣ ಸಂಪಾದಿಸಿದರೂ ಹಣವನ್ನು ಉಳಿಸಲು ಆಗದಿರುವುದು ಅಥವಾ ಅಗತ್ಯವಿರುವಾಗ ಹಣದ ಕೊರತೆ ಉಂಟಾಗುವುದು ವಾಸ್ತು ದೋಷದ ಕಾರಣವಾಗಿರಬಹುದು. ಈ ರೀತಿಯ ಸಮಸ್ಯೆಗಳು ಮನೆಯ ನೈಋತ್ಯ ಮೂಲೆಯಲ್ಲಿ ವಾಸ್ತು ದೋಷವಿದ್ದರೆ ಉಂಟಾಗುತ್ತದೆ. ವಾಸ್ತು ಶಾಸ್ತ್ರದ ಅನುಸಾರ ಈ ದಿಕ್ಕಿನಲ್ಲಿ ಮುಖ್ಯದ್ವಾರ ಅಥವಾ ಕಿಟಕಿ ಇದ್ದರೆ ಈ ದೋಷ ಉಂಟಾಗುತ್ತದೆ.

ಮನೆಯಲ್ಲಿ ಕಲಹ ಹೆಚ್ಚುವುದು

ಮನೆಯ ಸದಸ್ಯರ ನಡುವೆ ಮನಸ್ತಾಪಗಳು ಉಂಟಾಗುವುದು, ಸದಾ ಜಗಳವಾಡುತ್ತಿರುವುದು ಸಹ ವಾಸ್ತು ದೋಷದ ಕಾರಣದಿಂದಲೇ ಆಗಿರಬಹುದು. ಈ ರೀತಿಯ ಸಮಸ್ಯೆಗಳು ಮನೆಯ ವಾಯವ್ಯ ಮೂಲೆಯಲ್ಲಿರುವ ವಾಸ್ತು ದೋಷದಿಂದ ಆಗಿರಬಹುದು.

ಜ್ಯೋತಿಷ ಮತ್ತು ಭವಿಷ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ (Click Here) ಕ್ಲಿಕ್‌ ಮಾಡಿ.

ಆರೋಗ್ಯ ಹದಗೆಡುವುದು

ಮನೆಯ ಸದಸ್ಯರಿಗೆ ಪದೇ ಪದೇ ಆರೋಗ್ಯ ಹದಗೆಡುವುದು ಸಹ ವಾಸ್ತು ದೋಷದ ಕಾರಣದಿಂದ ಆಗಿರಬಹುದು. ಈ ಸಮಸ್ಯೆಗಳು ಮನೆಯ ಆಗ್ನೇಯ ದಿಕ್ಕಿನಲ್ಲಿ ವಾಸ್ತು ದೋಷವಿದ್ದರೆ ಉಂಟಾಗುತ್ತದೆ.

ಹಣಕಾಸಿನ ಸಮಸ್ಯೆಗೆ ಸರಳ ಪರಿಹಾರ ಇಲ್ಲಿದೆ ನೋಡಿ

ಇನ್ನೂ ಕೆಲವು ಕಾರಣಗಳು ವಾಸ್ತು ದೋಷ ಉಂಟುಮಾಡುತ್ತವೆ. ಅವುಗಳೆಂದರೆ;

  • ದೇವರ ಕೋಣೆ ನೈಋತ್ಯ ದಿಕ್ಕಿನಲ್ಲಿರುವುದು.
  • ವಾಯವ್ಯ ಮೂಲೆಯಲ್ಲಿ ಮಾಸ್ಟರ್ ಬೆಡ್‌ರೂಮ್ ಇರುವುದು.
  • ಸರಿಯಾದ ಆಕಾರವಿಲ್ಲದ ಫ್ಲಾಟ್ ಖರೀದಿಸಿ, ಮನೆ ನಿರ್ಮಿಸುವುದು.
  • ದಂಪತಿಗಳು ಮಲಗುವ ಮಂಚಕ್ಕೆ ನೇರವಾಗಿ ಕನ್ನಡಿ ಇರುವುದು.
  • ಡಬಲ್ ಬೆಡ್‌ನಲ್ಲಿ ಎರಡು ಬೇರೆ ಬೇರೆ ಹಾಸಿಗೆ ಹಾಸುವುದು.

ಇದನ್ನೂ ಓದಿ: Vastu Tips : ಮನೆಯ ಈ ದಿಕ್ಕಿಗೆ ಕಿಟಕಿ ಇದ್ದರೆ ಆರ್ಥಿಕ ಲಾಭ, ಸಮೃದ್ಧಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷದ ಬಿದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಿಥುನ ರಾಶಿಯಯಿಂದ ಬುಧವಾರ ಕಟಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ವೃಷಭ ರಾಶಿಯವರು ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಸಿಗಲಿದೆ. ತುಲಾ ರಾಶಿಯವರು ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿಯುನ್ನುಂಟಾಗಲಿದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (29-11-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷ.
ತಿಥಿ: ಬಿದಿಗೆ 13:56 ವಾರ: ಬುಧವಾರ
ನಕ್ಷತ್ರ: ಮೃಗಶಿರಾ 13:57 ಯೋಗ: ಸಾಧ್ಯ 20:53
ಕರಣ: ಗರಜ 13:56 ಅಮೃತ ಕಾಲ: ಬೆಳಗ್ಗೆ 4:35 ರಿಂದ 06: 15 ರವರೆಗೆ
ದಿನದ ವಿಶೇಷ: ಹೊರನಾಡು ದೀಪೋತ್ಸವ, ಸಂತರಾಜಾರಾಮ ಪುಣ್ಯದಿನ

ಸೂರ್ಯೋದಯ : 06:28  ಸೂರ್ಯಾಸ್ತ : 05:56

ರಾಹುಕಾಲ :ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬದ ಸದಸ್ಯರ ಸಕಾಲಿಕ ಬೆಂಬಲದಿಂದ ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಸಿಗಲಿದೆ. ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಆರ್ಥಿಕವಾಗಿ ಪ್ರಗತಿ ಸಿಗಲಿದೆ. ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡುವಿರಿ. ಅತಿಥಿಗಳ ಆಗಮನದ ಜತೆಗೆ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಬಗ್ಗೆ ಜಾಗೃತಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವಿರಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ನಿಮ್ಮ ಕ್ರಿಯಾಶೀಲ ಕಾರ್ಯ ಯೋಜನೆ ಸಫಲತೆಯನ್ನು ತಂದು ಕೊಡಲಿದೆ. ಆಪ್ತರು ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ, ಅದರ ಹೊರತಾಗಿಯೂ ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿಯುನ್ನುಂಟಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಬಿಡುವಿಲ್ಲದ ಕಾರ್ಯದಿಂದ ಆಯಾಸ, ಇದರಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆದಷ್ಟು ವಿಶ್ರಾಂತಿ ಪಡೆಯಿರಿ. ಅನಗತ್ಯ ಖರ್ಚು ಹೆಚ್ಚಾಗಲಿದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಂತೋಷದ ವಾತಾವರಣ ಇರಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಆತ್ಮವಿಶ್ವಾಸದಿಂದ ಮಾಡಿದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಈ ದಿನ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮಲ್ಲಿರುವ ನಾಯಕತ್ವ ಗುಣವನ್ನು ಗುರುತಿಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮ ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ. ಆದರೆ ಅದೇ ಸಮಯದಲ್ಲಿ ಖರ್ಚು ಹೆಚ್ಚಾಗುತ್ತದೆ. ನಿಮ್ಮ ಬಗೆಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಬೇಡ. ದೀರ್ಘಕಾಲದ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ವಿನಾಕಾರಣ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಗತ್ಯವಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಸಲಹೆ ಹಿತಕರವೆನಿಸುವುದು. ಆತ್ಮೀಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

Continue Reading

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷದ ಪಾಡ್ಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಂಗಳವಾರವೂ ಮಿಥುನ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯ ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ವೃಷಭ ರಾಶಿಯವರು ಆತುರದಲ್ಲಿ ಮಾಡುವ ಕೆಲಸವು ಅಪಾಯ ತಂದಿತು ಎಚ್ಚರಿಕೆ ಇರಲಿ. ಆರೋಗ್ಯದ ಕುರಿತು ವಿಶೇಷ ಕಾಳಜಿ ಇರಲಿ. ಉದ್ಯೋಗಿಗಳಿಗೆ ಹಿರಿಯ ಅಧಿಕಾರಿಗಳಿಂದ ಕಿರುಕುಳ ಸಾಧ್ಯತೆ ಇದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (28-11-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷ.
ತಿಥಿ: ಪಾಡ್ಯ 14:04 ವಾರ: ಮಂಗಳವಾರ
ನಕ್ಷತ್ರ: ರೋಹಿಣಿ 13:30 ಯೋಗ: ಸಿದ್ದಿ 22:02
ಕರಣ: ಕೌಲವ 14:04 ಅಮೃತ ಕಾಲ: ಬೆಳಗ್ಗೆ 10:20 ರಿಂದ 11:56 ರವರೆಗೆ
ದಿನದ ವಿಶೇಷ: ನಂಜನಗೂಡು ಚಿಕ್ಕಜಾತ್ರೆ

ಸೂರ್ಯೋದಯ : 06:28  ಸೂರ್ಯಾಸ್ತ : 05:56

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಆಕರ್ಷಕ ವ್ಯಕ್ತಿತ್ವ ಇತರರ ಗಮನ ಸೆಳೆಯಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ವಿಶೇಷ ಅತಿಥಿಗಳ ಆಗಮನವು ಹರುಷ ತರುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ವೃಷಭ: ದೈಹಿಕವಾಗಿ ಮತ್ತು ಮಾನಸಿಕವಾಗಿ ಇಂದು ಕೊಂಚಮಟ್ಟಿಗೆ ಬಳಲುವ ಸಾಧ್ಯತೆ ಇದೆ. ಕುಟುಂಬದಲ್ಲಿ ಹೊಸ ಅತಿಥಿಗಳ ಆಗಮನ ಸಂತಸ ಹೆಚ್ಚಿಸಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಆತುರದಲ್ಲಿ ಮಾಡುವ ಕೆಲಸವು ಅಪಾಯ ತಂದಿತು ಎಚ್ಚರಿಕೆ ಇರಲಿ. ಆರೋಗ್ಯದ ಕುರಿತು ವಿಶೇಷ ಕಾಳಜಿ ಇರಲಿ. ಉದ್ಯೋಗಿಗಳಿಗೆ ಹಿರಿಯ ಅಧಿಕಾರಿಗಳಿಂದ ಕಿರುಕುಳ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಹಳೆಯ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಪೋಷಕರಿಂದ ಹಣಕಾಸು ರೀತಿಯಿಂದ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

Horoscope Today

ಕಟಕ: ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ದಿನಕ್ಕಿಂತಲೂ ಹೆಚ್ಚಿನ ಪ್ರಗತಿ ಸಾಧಿಸಲಿದ್ದೀರಿ. ಅತಿಥಿಗಳ ಆಗಮನ ಸಂತಸ ತರುವುದು. ಸಂಗಾತಿಯ ಮಾತುಗಳು ಅಹಿತಕರವೆನಿಸಲಿದೆ. ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ, ಪ್ರೋತ್ಸಾಹ ಸಿಗುವುದು. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 1

Horoscope Today

ಸಿಂಹ: ಹಿಂದೆ ಮಾಡಿದ ತಪ್ಪಿನ ಅರಿವಾಗಲಿದೆ. ಕುಟುಂಬದ ಸದಸ್ಯರೊಂದಿಗೆ ಪ್ರವಾಸ ಬೆಳೆಸುವ ಸಾಧ್ಯತೆ ಇದೆ. ವಿನಾಕಾರಣ ಸಂಬಂಧಿಕರೊಂದಿಗೆ ಮಾತಿಗೆ ಇಳಿದು ಅಪಾಯ ತಂದುಕೊಳ್ಳುವುದು ಬೇಡ. ಮಾತಿನಲ್ಲಿ ಹಿಡಿತವಿರಲಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿಯ ದಿನವಿದು. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ: ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ಸಮಾಧಾನ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಯಶಸ್ಸಿನ ದಿನ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಬಿಡುವಿರದ ಕೆಲಸದಿಂದ ಒತ್ತಡ ಹೆಚ್ಚಾಗಲಿದೆ. ಅದರ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ದಿನದ ಕೊನೆಯಲ್ಲಿ ಮನೆಯ ಸದಸ್ಯರ ಭಿನ್ನಾಭಿಪ್ರಾಯ ನಿಮ್ಮ ಮನಸ್ಸಿಗೆ ನೋವು ತರುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 9

Horoscope Today

ವೃಶ್ಚಿಕ: ಇಂದು ಎಲ್ಲಿಲ್ಲದ ಉತ್ಸಾಹ, ಸಂತಸ ಇರಲಿದೆ. ನಿಮ್ಮ ಆಕರ್ಷಕ ವ್ಯಕ್ತಿತ್ವ ಇತರರ ಗಮನ ಸೆಳೆಯಲಿದೆ. ಯಾರಾದರೂ ನಿಮ್ಮ ಸಹಾಯವನ್ನು ಕೇಳಬಹುದು, ಆದರೆ ಯೋಚಿಸಿ ಸಹಾಯ ಮಾಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ನಿರಂತರ ಪರಿಶ್ರಮದಿಂದ ಇಂದು ವಿಶ್ರಾಂತಿ ಸಿಗಲಿದೆ. ದಿನದ ಮಧ್ಯ ಭಾಗದಲ್ಲಿ ಆರೋಗ್ಯ ಕೊಂಚ ಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ನಡೆಯಬಹುದು, ಎಚ್ಚರಿಕೆ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮಕರ: ಒತ್ತಡಗಳಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ. ಇದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಆರ್ಥಿಕವಾಗಿ ಸದೃಢ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಸಿಗಲಿವೆ. ದಿನದ ಮಟ್ಟಿಗೆ ಸಣ್ಣ ಪ್ರಯಾಣ ಬೆಳೆಸಲಿದ್ದೀರಿ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ದೀರ್ಘಕಾಲದ ಪ್ರಯಾಣದಿಂದ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಲಿದೆ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ ಸಿಗಲಿದೆ. ಕುಟುಂಬದ ಸದಸ್ಯರು ಸಕಾರಾತ್ಮಕವಾಗಿ ಸ್ಪಂದಿಸಲಿದ್ದಾರೆ. ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿದೆ. ಉದ್ಯೋಗಿಗಳಿಗೆ ಯಶಸ್ಸು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಕೆಲಸದ ಸ್ಥಳದಲ್ಲಿ ಅಥವಾ ವ್ಯಾಪಾರದಲ್ಲಿ ನಿಮ್ಮ ಯಾವುದೇ ಅಜಾಗರೂಕತೆ ಆರ್ಥಿಕ ನಷ್ಟವನ್ನು ಉಂಟುಮಾಡಬಹುದು .ಅತಿಥಿಗಳ ಆಗಮನ ನಿಮ್ಮ ಮನಸ್ಸಿಗೆ ಸಮಾಧಾನ ತರುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

Continue Reading

ಪ್ರಮುಖ ಸುದ್ದಿ

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷದ ಹುಣ್ಣಿಮೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

read your daily horoscope predictions for november 27 2023
Koo

ಚಂದ್ರನು ಭಾನುವಾರ ರಾತ್ರಿ 07:40ಕ್ಕೆ ಮಿಥುನ ರಾಶಿಯನ್ನು ಪ್ರವೇಶಿಸಿದ್ದು, ಸೋಮವಾರವೂ ಇಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ನಿಮ್ಮ ಆಪ್ತರೇ ಸಮಸ್ಯೆಯನ್ನು ಉಂಟು ಮಾಡುವ ಸಾಧ್ಯತೆ ಇದೆ. ಅನಗತ್ಯ ಒತ್ತಡ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ಮಿಥುನ ರಾಶಿಯವರು ಪ್ರೀತಿಪಾತ್ರರ ಜತೆಗೆ ವಾದಕ್ಕೆ ಕಾರಣವಾಗಬಹುದಾದ ವಿಷಯಗಳನ್ನು ತಪ್ಪಿಸಿ, ಎಚ್ಚರಿಕೆಯಿಂದ ಮಾತನಾಡಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (27-11-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷ
ತಿಥಿ: ಹುಣ್ಣಿಮೆ 14:45 ವಾರ: ಸೋಮವಾರ
ನಕ್ಷತ್ರ: ಕೃತ್ತಿಕಾ 13:34 ಯೋಗ: ಶಿವ 23:37
ಕರಣ:ಭವ 14:45 ಅಮೃತ ಕಾಲ: ಬೆಳಗ್ಗೆ 11:14 ರಿಂದ 12:48 ರವರೆಗೆ
ದಿನದ ವಿಶೇಷ: ಗೌರಿ ಹುಣ್ಣಿಮೆ

ಸೂರ್ಯೋದಯ : 06:28  ಸೂರ್ಯಾಸ್ತ : 05:56

ರಾಹುಕಾಲ : ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಹೆಚ್ಚಾಗಲಿದೆ. ನಿಮ್ಮ ಆಪ್ತರೇ ಸಮಸ್ಯೆಯನ್ನು ಉಂಟು ಮಾಡುವ ಸಾಧ್ಯತೆ ಇದೆ. ಅನಗತ್ಯ ಒತ್ತಡ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ಸಂಗಾತಿಯ ಮಧುರ ಮಾತುಗಳು ಹಿತವೆನಿಸುಬಹುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ದೀರ್ಘಕಾಲದ ಪ್ರಯತ್ನ ನಿಮಗೆ ಯಶಸ್ಸು ತಂದು ಕೊಡಲಿದೆ. ಈ ಹಿಂದೆ ನೀವು ಮಾಡಿದ ಸಹಾಯ ಇಂದು ಫಲ ನೀಡಲಿದೆ. ಹಿರಿಯರಿಂದ ಪ್ರಶಂಸೆ ವ್ಯಕ್ತವಾಗಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ವ್ಯಾಪಾರದಲ್ಲಿ ಅಭಿವೃದ್ಧಿ ಕಾಣಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಹತಾಶೆಯ ಭಾವನೆಯಿಂದ ಮನಸ್ಸಿನ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಲಾಭ ಸಿಗಲಿದೆ. ಪ್ರೀತಿಪಾತ್ರರ ಜತೆಗೆ ವಾದಕ್ಕೆ ಕಾರಣವಾಗಬಹುದಾದ ವಿಷಯಗಳನ್ನು ತಪ್ಪಿಸಿ, ಎಚ್ಚರಿಕೆಯಿಂದ ಮಾತನಾಡಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಸದೃಢವಾಗಿರಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ
ಅದೃಷ್ಟ ಸಂಖ್ಯೆ: 4

Horoscope Today

ಕಟಕ: ಮಾನಸಿಕವಾಗಿ ದೈಹಿಕವಾಗಿ ಆರೋಗ್ಯ ಪರಿಪೂರ್ಣವಾಗಿರಲಿದೆ. ಹರ್ಷ ತುಂಬಿದ ಮನಸ್ಸು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಹಳೆಯ ಬಾಕಿ ಮರುಪಾವತಿ ಆಗಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯಮಿಗಳಿಗೆ ಒಳ್ಳೆಯ ದಿನ. ವ್ಯಾಪಾರದ ಉದ್ದೇಶಕ್ಕಾಗಿ ಕೈಗೊಂಡ ಪ್ರವಾಸ ಸಕಾರಾತ್ಮಕ ಫಲಿತಾಂಶವನ್ನು ನೀಡುತ್ತದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಬಹಳ ದಿನಗಳಿಂದ ಕಾಡುತ್ತಿರುವ ಸಮಸ್ಯಗೆ ಪರಿಹಾರ ಸಿಗಲಿದೆ. ಭವಿಷ್ಯದ ಹೂಡಿಕೆ ವ್ಯವಹಾರದ ಕುರಿತಾಗಿ ಆಲೋಚನೆ ಮಾಡುವಿರಿ. ನಿಮ್ಮ ಹಿಂದೆ ನಿಮಗೆ ಆಗದವರು ಪಿತೂರಿ ನಡೆಸುವ ಸಾಧ್ಯತೆ ಅಂತಹವರಿಂದ ಎಚ್ಚರಿಕೆಯಿಂದ ಇರಿ. ದಿಢೀರ್‌ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ಸೃಜನಾತ್ಮಕ ಕ್ಷೇತ್ರಗಳಲ್ಲಿ ಯಶಸ್ವಿ ಪಡೆಯುವ ದಿನ. ಭೂಮಿ ಸಂಬಂಧಿ ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಸಂತೋಷದ ದಿನ. ಆರ್ಥಿಕ ಚಟುವಟಿಕೆಗೆ ಗರಿಗೆದರಲಿದೆ. ದಿನದ ಕೊನೆಯಲ್ಲಿ ಕೌಟುಂಬಿಕ ಕಲಹಗಳು ನಡೆಯುವ ಸಾಧ್ಯತೆ ಇದೆ. ಮಾತಿನಲ್ಲಿ ಹಿಡಿತವಿರಲಿ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಒತ್ತಡ ತುಂಬಿದ ವಾತಾವರಣ ಇರಲಿದೆ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ತೊಡಗಿರುವವರಿಗೆ ದಿನದ ಮಟ್ಟಿಗೆ ಲಾಭ ಸಿಗಲಿದೆ. ಕುಟುಂಬ ಸಮೇತ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ.ಆರ್ಥಿಕವಾಗಿ ಪ್ರಗತಿ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ವ್ಯಾಪಾರಿಗಳಿಗೆ ಹೆಚ್ಚಿನ ಲಾಭ ಇರಲಿದೆ. ನಿಮ್ಮ ಸಂತೋಷದ ಸಂಗತಿಗಳನ್ನು ಇತರರೊಂದಿಗೆ ಹಂಚಿಕೊಳ್ಳುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಜಾಸ್ತಿ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಧನಸ್ಸು: ಕೆಲವು ಪ್ರಮುಖ ನಿರ್ಧಾರಗಳು ನಿಮ್ಮ ಮೇಲೆ ಪರಿಣಾಮ ಬೀರಬಹುದು. ಅದರ ಹೊರತಾಗಿ ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ಕುಟುಂಬ ಸದಸ್ಯರ ಮಾತುಗಳು ನಿಮ್ಮನ್ನು ಘಾಸಿಗೊಳಿಸಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಮಿಶ್ರ ಫಲ.ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಮಕರ: ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ.ಅದರಲ್ಲಿಯೂ ಗರ್ಭಿಣಿಯರು ಹೆಚ್ಚಿನ ಮುತುವರ್ಜಿ ವಹಿಸಬೇಕು. ಅನಾವಶ್ಯಕ ಖರ್ಚುಗಳಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಸಂಬಂಧ ಇಲ್ಲದ ವಿಷಯದ ಕುರಿತು ಮೂಗು ತೂರಿಸುವುದು ಬೇಡ. ಇದರಿಂದಾಗಿ ಟೀಕೆಗಳನ್ನು ಎದಿರಿಸಬೇಕಾದಿತು, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ವಿವಾದಾತ್ಮಕ ವಿಷಯಗಳಿಂದ ದೂರ ಇರಿ. ಮಾತಿನಲ್ಲಿ ಹಿಡಿತವಿರಲಿ. ತಮ್ಮ ಬಳಿ ಯಾರಾದರೂ ಹಣದ ಸಹಾಯ ಬೇಡುವ ಸಾಧ್ಯತೆ ಇದೆ, ಆಲೋಚಿಸಿ ಹೆಜ್ಜೆ ಇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಧ್ಯಮ ಫಲ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಮೀನ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆ ಮಾರ್ಗಸೂಚಿಯಾಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೆಲಸ ಕಾರ್ಯಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ.ಆರ್ಥಿಕವಾಗಿ ಸದೃಢ ಇರಲಿದೆ. ಉದ್ಯೋಗಿಗಳಿಗೆ ಅಭದ್ರತೆಯ ಭಾವನೆ ಕಾಡಲಿದೆ. ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

Continue Reading

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರಿಗೆ ಆಪ್ತರಿಂದಲೇ ಆಘಾತ; ಯಾರದೋ ಸಲಹೆಯಿಂದ ಧನನಷ್ಟ!

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷದ ಚತುರ್ದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

read your daily horoscope predictions for november 26 2023
Koo

ಚಂದ್ರನು ವೃಷಭ ರಾಶಿಯಿಂದ ಭಾನುವಾರ ರಾತ್ರಿ 07:40ಕ್ಕೆ ಮಿಥುನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ಆಪ್ತರ ವರ್ತನೆಯು ಮನಸ್ಸಿಗೆ ನೋವು ತರಲಿದೆ ಹೀಗಾಗಿ ತಾಳ್ಮೆಯಿಂದ ಇರಿ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು, ಮಾತಿನಲ್ಲಿ ಹಿಡಿತವಿರಲಿ. ಕಟಕ ರಾಶಿಯವರಿಗೆ ಕೆಲವು ಆಘಾತಗಳನ್ನು ಎದುರಿಸಬೇಕಾದಿತು, ಧೈರ್ಯದಿಂದ ಇರಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (26-11-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷ
ತಿಥಿ: ಚತುರ್ದಶಿ 15:52 ವಾರ: ಭಾನುವಾರ
ನಕ್ಷತ್ರ: ಭರಣಿ 14:04 ಯೋಗ: ಪರಿಘ 25:35
ಕರಣ:ವಣಿಜ 15:52 ಅಮೃತ ಕಾಲ: ಬೆಳಗ್ಗೆ 09:27 ರಿಂದ 11:00 ರವರೆಗೆ
ದಿನದ ವಿಶೇಷ: ವೈಕುಂಠ ಚತುರ್ದಶಿ, ನಂಜನಗೂಡು ಶ್ರೀಕಂಠಮುಡಿ ಉತ್ಸವ, ಕಾನೂನು ದಿನ

ಸೂರ್ಯೋದಯ : 06:28  ಸೂರ್ಯಾಸ್ತ : 05:56

ರಾಹುಕಾಲ : ಸಾಯಂಕಾಲ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆಪ್ತರ ವರ್ತನೆಯು ನಿಮ್ಮ ಮನಸ್ಸಿಗೆ ನೋವು ತರಲಿದೆ ಹೀಗಾಗಿ ತಾಳ್ಮೆಯಿಂದ ಇರಿ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು, ಮಾತಿನಲ್ಲಿ ಹಿಡಿತವಿರಲಿ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆಗೆ ಗಮನ ಹರಿಸಿ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಪ್ರಗತಿಯೊಂದಿಗೆ ಲಾಭ ಪಡೆಯುವಿರಿ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಯಾರಾದರೂ ನಿಮ್ಮ ಸಹಾಯ ಕೇಳಬಹುದು, ವಿಮರ್ಶಿಸಿ ಸಹಾಯ ಮಾಡಿ. ಆರ್ಥಿಕ ಪ್ರಗತಿ ದಿನದ ಮಟ್ಟಿಗೆ ಸಾಧಾರಣವಾಗಿರಲಿದೆ. ಯಾರಾದರೂ ನಿಮ್ಮ ಭಾವನೆಗಳನ್ನು ನಿರಾಸೆ ಮಾಡುವ ಸಾಧ್ಯತೆ, ಅವರ ಮಾತನ್ನು ಲಕ್ಷಿಸದೆ ಕಾರ್ಯದಲ್ಲಿ ಮುನ್ನುಗ್ಗಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಹೊಸ ಭರವಸೆಯ ಆಶಾಭಾವನೆ ಮೂಡಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕಟಕ: ಕೆಲವು ಆಘಾತಗಳನ್ನು ಎದುರಿಸಬೇಕಾದಿತು, ಧೈರ್ಯದಿಂದ ಇರಿ. ನಿಮ್ಮ ಆಸೆ-ಆಕಾಂಕ್ಷೆಗಳು ಯಶಸ್ಸನ್ನು ತಂದುಕೊಡಲಿವೆ. ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ ಇದೆ. ಅಪರಿಚರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕವಾಗಿ ಲಾಭ ಕಡಿಮೆ. ಹೊಸ ಆಲೋಚನೆಗಳು ನಿಮ್ಮನ್ನು ಸೃಜನಾತ್ಮಕವಾಗಿ ಏನಾದರೂ ಮಾಡಲು ಪ್ರಯತ್ನಿಸುವಂತೆ ಮಾಡುವಂತೆ ಪ್ರೇರೇಪಿಸುತ್ತದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳವಿರಿ. ಹಣಕಾಸು ಪರಿಸ್ಥಿತಿ ಸಾಧಾರಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಾಸಿಗೆ ಇದ್ದಷ್ಟು ಕಾಲು ಚಾಚಿ. ಆರೋಗ್ಯ ಮಧ್ಯಮ, ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಪ್ರಭಾವಿ ಜನರ ಬೆಂಬಲ ಸಿಗಲಿದೆ.ಇದರಿಂದ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ. ಒಡಹುಟ್ಟಿದವರ ಸಹಕಾರ ಸಿಗಲಿದೆ. ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನು ಆಡಿ, ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ: ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡಿ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಇಂದು ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ. ಪ್ರಯಾಣದಿಂದ ಲಾಭ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ಭಾವನಾ ಜೀವಿಗಳಾದ ನೀವು ನಕಾರಾತ್ಮಕ ಆಲೋಚನೆಗಳಿಂದ ದೂರ ಇರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ, ಕ್ಷೇತ್ರ ದರ್ಶನ ಪಡೆದು ಮಾನಸಿಕ ನೆಮ್ಮದಿ ತಂದುಕೊಳ್ಳುವುದು ಅವಶ್ಯಕ. ಮಕ್ಕಳ ಆರೋಗ್ಯದ ಕಡೆಗೆ ಗಮನ ಹರಿಸಿ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಮಕರ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಕೆಲಸ ಕಾರ್ಯಗಳಲ್ಲಿ ಬಳಸಿಕೊಂಡರೆ ಇನ್ನೂ ಹೆಚ್ಚು ಆಕರ್ಷಕ ವ್ಯಕ್ತಿತ್ವ ವಿಕಸನ ಆಗುತ್ತದೆ. ಆರೋಗ್ಯ ಉತ್ತಮವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಅತಿಥಿಗಳ ಆಗಮನ ಸಂತಸ ತರಲಿದೆ. ಆತ್ಮವಿಶ್ವಾಸದ ಹೊಸ ಭರವಸೆ ಮೂಡಲಿದೆ. ಹೂಡಿಕೆಯ ಲಾಭ ಇಂದು ಉಪಯೋಗಕ್ಕೆ ಬರುವುದು. ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದು ಕೊಡಲಿದೆ. ಆರೋಗ್ಯ, ಉದ್ಯೋಗದಲ್ಲಿ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮೀನ: ಅತಿರೇಕದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಕೋಪಗೊಳ್ಳುವಂತೆ ಉದ್ರೇಕವಾಗುವ ವಿಷಯಗಳಿಂದ ದೂರ ಇರಿ. ತಾಳ್ಮೆಯಿಂದ ವರ್ತಿಸಿ. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

Continue Reading
Advertisement
peace accord between Manipur oldest armed group UNLF and Government
ದೇಶ10 mins ago

ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಮಣಿಪುರದ ಹಳೆ ಬಂಡುಕೋರ ಗುಂಪು ಯುಎನ್ಎಲ್ಎಫ್!

Gauvarav Yatra
ದೇಶ25 mins ago

Indian Railways : ಭಾರತ ಗೌರವ ಯಾತ್ರಾ ರೈಲಿನಲ್ಲಿ ಕಲುಷಿತ ಆಹಾರ ಸೇವಿಸಿ 90 ಮಂದಿ ಅಸ್ವಸ್ಥ

Actress Ramya
ಕರ್ನಾಟಕ27 mins ago

Actress Ramya: ಹುಟ್ಟುಹಬ್ಬದಂದು ನಾಯಿಮರಿಗಳೊಂದಿಗೆ ಕಾಲಕಳೆದ ಮೋಹಕ ತಾರೆ ರಮ್ಯಾ

fight between Couple in air and Lufthansa flight was diverted to Delhi and Viral News
ದೇಶ38 mins ago

ಗಂಡ-ಹೆಂಡತಿ ಜಗಳ ವಿಮಾನ ಹತ್ತಿದ್ರೂ ಮುಗಿಲಿಲ್ಲ! ಆ ಮೇಲೆ ಏನಾಯ್ತು?

life certificate
ಉದ್ಯೋಗ50 mins ago

ಜೀವನ ಪ್ರಮಾಣ ಪತ್ರ ಇನ್ನೂ ಸಲ್ಲಿಸಿಲ್ಲವೇ? ನಾಳೆಯೇ ಕೊನೇ ದಿನ! ಇಲ್ದಿದ್ರೆ ಸಿಗಲ್ಲ ಪೆನ್ಶನ್

pain
ಆರೋಗ್ಯ1 hour ago

Home Remedies: ಚಳಿಗಾಲದಲ್ಲಿ ಪಾದ ನೋವೇ? ಇಲ್ಲಿದೆ ಮನೆಮದ್ದು

BPO Employee Bangalore Nude Photos
ಕರ್ನಾಟಕ1 hour ago

ಬಾಯ್‌ಫ್ರೆಂಡ್‌ ಮೊಬೈಲ್‌ ತೆರೆದಾಗ ಅವಳಿಗೆ ಕಂಡಿದ್ದು 13000 ಹುಡುಗಿಯರ ನಗ್ನಲೋಕ!

Finger Ring
ಫ್ಯಾಷನ್1 hour ago

Cocktail finger ring : ಬ್ರೈಡಲ್‌ ಜ್ಯುವೆಲರಿ ಫ್ಯಾಷನ್‌ನಲ್ಲಿ ಎಥ್ನಿಕ್‌ ಕಾಕ್‌ಟೈಲ್‌ ಉಂಗುರಗಳ ಕಲರವ

siri bbk
ಕಿರುತೆರೆ2 hours ago

BBK SEASON 10: ಸ್ಪರ್ಧಿಗಳ ಕಾಲಿಗೆ ಹಗ್ಗ; ಕಣ್ಣೀರಿಟ್ಟ ಸಿರಿ

Mandya Ramesh
ಕಿರುತೆರೆ2 hours ago

Mandya Ramesh: ಶೂಟಿಂಗ್ ವೇಳೆ ಮಂಡ್ಯ ರಮೇಶ್‌ಗೆ ಗಾಯ; ಆಸ್ಪತ್ರೆಗೆ ದಾಖಲು

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ15 hours ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ2 days ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ2 days ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ3 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ3 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

ಟ್ರೆಂಡಿಂಗ್‌