Vastu Tips South Facing House as per Vastu Easy Guidelines in kannada to FollowVastu Tips : ದಕ್ಷಿಣ ದಿಕ್ಕಿಗೆ ಬಾಗಿಲಿರುವ ಮನೆ ಕೂಡ ಶುಭವಂತೆ! ಹೌದೇ? ಏನೆನ್ನುತ್ತದೆ ವಾಸ್ತು ಶಾಸ್ತ್ರ? - Vistara News

ಭವಿಷ್ಯ

Vastu Tips : ದಕ್ಷಿಣ ದಿಕ್ಕಿಗೆ ಬಾಗಿಲಿರುವ ಮನೆ ಕೂಡ ಶುಭವಂತೆ! ಹೌದೇ? ಏನೆನ್ನುತ್ತದೆ ವಾಸ್ತು ಶಾಸ್ತ್ರ?

ಕೆಲವು ಅನಿವಾರ್ಯ ಕಾರಣಗಳಿಂದ ದಕ್ಷಿಣ ದಿಕ್ಕಿಗೆ ಬಾಗಿಲಿರುವ ಮನೆಯನ್ನು ಕಟ್ಟಬೇಕಾಗುತ್ತದೆ ಅಥವಾ ಕಟ್ಟಿರುವ ಮನೆಯಲ್ಲಿ ವಾಸಿಸಬೇಕಾಗುತ್ತದೆ. ಆಗ ಪಾಲಿಸಬೇಕಾದ ವಾಸ್ತು ನಿಯಮಗಳೇನು(Vastu Tips)? ತಿಳಿಯಲು ಇಲ್ಲಿ ಓದಿ.

VISTARANEWS.COM


on

South facing house vastu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಸ್ತು ಶಾಸ್ತ್ರದ ಪ್ರಕಾರ (Vastu Tips) ಪೂರ್ವಕ್ಕೆ ಮುಖ್ಯ ದ್ವಾರವಿರುವ ಮನೆ ವಾಸಕ್ಕೆ ಅತ್ಯಂತ ಯೋಗ್ಯ ಎಂದು ಪರಿಗಣಿಸಲಾಗುತ್ತದೆ. ಜೊತೆಗೆ ಪಶ್ಚಿಮ ಮತ್ತು ಉತ್ತರಕ್ಕೆ ಬಾಗಿಲಿರುವ ಮನೆ ಸಹ ಶುಭವೆಂದೇ ಹೇಳಲಾಗುತ್ತದೆ. ಆದರೆ ಕೆಲವೊಮ್ಮೆ ಹಲವಾರು ಕಾರಣಗಳಿಂದ ದಕ್ಷಿಣ ದಿಕ್ಕಿಗೆ ಮುಖ್ಯ ದ್ವಾರವನ್ನು ಇಟ್ಟು ಮನೆ ನಿರ್ಮಾಣ ಮಾಡಬೇಕಾಗಿ ಬರುತ್ತದೆ. ಕೆಲವರಿಗೆ ದಕ್ಷಿಣ ದಿಕ್ಕಿಗೆ ಬಾಗಿಲಿರುವ ಮನೆಯಲ್ಲಿಯೇ ವಾಸಿಸುವ ಅನಿವಾರ್ಯತೆಯೂ ಸೃಷ್ಟಿಯಾಗುತ್ತದೆ. ಸಾಮಾನ್ಯ ತಿಳುವಳಿಕೆ ಏನೆಂದರೆ ವಾಸ್ತು ಶಾಸ್ತ್ರದ ಪ್ರಕಾರ ದಕ್ಷಿಣ ದಿಕ್ಕೆಗೆ ಮುಖ್ಯದ್ವಾರವಿರುವ ಮನೆಯಲ್ಲಿ ವಾಸಿಸುವುದು ಶುಭವಲ್ಲ!

ಇದು ನಿಜವೇ?, ಖಂಡಿತಾ ಸರಿಯಲ್ಲ. ವಾಸ್ತು ಶಾಸ್ತ್ರದ ಪ್ರಕಾರ ದಕ್ಷಿಣ ದಿಕ್ಕಿಗಿರುವ ಮನೆ (South Facing House) ಅಶುಭವೇನಲ್ಲ. ಇದು ಶುಭವೇ ಆಗಿದ್ದು, ಕೆಲ ರಾಶಿ ನಕ್ಷತ್ರದವರಿಗೆ ದಕ್ಷಿಣ ದಿಕ್ಕು ಅತ್ಯಂತ ಶುಭ ದಿಕ್ಕಾಗಿರುತ್ತದೆ. ದಕ್ಷಿಣ ದಿಕ್ಕಿಗೆ ಬಾಗಿಲಿರುವ ಮನೆಯಲ್ಲಿ ಕೆಲವು ವಾಸ್ತು ನಿಯಮಗಳನ್ನು ಅಳವಡಿಸಿಕೊಂಡಲ್ಲಿ ಎಲ್ಲವೂ ಒಳಿತಾಗುತ್ತದೆ.

ಮುಖ್ಯವಾಗಿ ಮನೆ ನಿರ್ಮಾಣದ ಸಮಯದಲ್ಲಿ ದಕ್ಷಿಣ ದಿಕ್ಕಿಗೆ ಮುಖ್ಯದ್ವಾರ ಬರುತ್ತದೆ ಎಂದಾದರೆ, ಆ ಸಮಯದಲ್ಲಿಯೇ ಕೆಲವು ವಾಸ್ತು ನಿಯಮಗಳನ್ನು ಪಾಲಿಸಿ ಮನೆ ನಿರ್ಮಿಸಿಕೊಂಡರೆ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ. ಈಗಾಗಲೇ ಮನೆ ನಿರ್ಮಾಣವಾಗಿದ್ದರೆ ಕೆಲ ವಾಸ್ತು ನಿಯಮಗಳ್ನು ಪಾಲಿಸಿದರೂ ಸಾಕು. ಅವು ಯಾವುವು ಎಂಬುದನ್ನು ತಿಳಿಯೋಣ.

ದೋಷ ಪರಿಹಾರಕ್ಕೆ ಹೀಗೆ ಮಾಡಿ!

ಮುಖ್ಯವಾಗಿ ದಕ್ಷಿಣ ದಿಕ್ಕಿನ ದೋಷವನ್ನು ಪರಿಹರಿಸಿಕೊಳ್ಳಲು ಮನೆಯ ಮುಖ್ಯದ್ವಾರದ ಮೇಲೆ ಪಂಚಮುಖಿ ಆಂಜನೇಯನ ಚಿತ್ರವನ್ನು ಹಾಕಬೇಕು. ಇದರಿಂದ ನಕಾರಾತ್ಮಕ ಶಕ್ತಿಗಳು ಮನೆಯ ಒಳಗೆ ಪ್ರವೇಶಿಸುವುದಿಲ್ಲ.
ದಕ್ಷಿಣ ದ್ವಾರವಿರುವ ಮನೆಯ ಮುಖ್ಯ ದ್ವಾರದ ಎದುರಿಗೆ ಸ್ವಲ್ಪ ದೂರದಲ್ಲಿ ಕಹಿಬೇವಿನ ಗಿಡವನ್ನು ನೆಡುವುದು ಒಳ್ಳೆಯದು. ಇದರಿಂದ ದಕ್ಷಿಣ ದಿಕ್ಕಿನ ನಕಾರಾತ್ಮಕ ಪ್ರಭಾವಗಳು ಕಡಿಮೆಯಾಗುತ್ತವೆ.

ದಕ್ಷಿಣ ದಿಕ್ಕಿಗಿರುವ ಮನೆಯ ಎದುರಿಗೆ ಯಾವುದಾದರೂ ಇದಕ್ಕಿಂತ ಎರಡು ಪಟ್ಟು ಎತ್ತರದ ಮನೆ ಇದ್ದರೆ ಅದರಿಂದ ದಕ್ಷಿಣ ದಿಕ್ಕಿನ ದೋಷಗಳು ಸ್ವಲ್ಪ ಮಟ್ಟಿಗೆ ನಿವಾರಣೆಯಾಗುತ್ತವೆ.

ಆಗ್ನೇಯ ಮೂಲೆಯಲ್ಲಿ ಮುಖ್ಯದ್ವಾರವಿರಲಿ

ದಕ್ಷಿಣ ದಿಕ್ಕಿನ ಮನೆಯಾದರೂ ಮುಖ್ಯದ್ವಾರ ಆಗ್ನೇಯ ಮೂಲೆಯಲ್ಲಿದ್ದರೆ, ವಾಸ್ತು ದೃಷ್ಟಿಯಿಂದ ಇದು ಒಳ್ಳೆಯದೆಂದು ಹೇಳಲಾಗುತ್ತದೆ. ಉತ್ತರ ಮತ್ತು ಪೂರ್ವ ದಿಕ್ಕಿಗೆ ಹೆಚ್ಚು, ದಕ್ಷಿಣ ಮತ್ತು ಪಶ್ಚಿಮ ದಿಕ್ಕಿಗೆ ಕಡಿಮೆ ಖಾಲಿ ಜಾಗವನ್ನು ಬಿಟ್ಟರೆ ದಕ್ಷಿಣದ ದೋಷ ನಿವಾರಣೆಯಾಗುತ್ತದೆ. ಜೊತೆಗೆ ಪೂರ್ವ ಮತ್ತು ಈಶಾನ್ಯ ದಿಕ್ಕಿಗೆ ಚಿಕ್ಕ ಚಿಕ್ಕ ಗಿಡಗಳನ್ನು ಹಾಕಿಕೊಳ್ಳುವುದರಿಂದ ಸಹ ದಕ್ಷಿಣ ದಿಕ್ಕಿನ ನಕಾರಾತ್ಮಕ ಪ್ರಭಾವಗಳಿಂದ ಪಾರಾಗಬಹುದು.

ಆಗ್ನೇಯ ಮೂಲೆಯಲ್ಲಿರುವ ಬಾಗಿಲಿಗೆ ಕೆಂಪು ಅಥವಾ ಕಂದು ಬಣ್ಣ ಬಳಿದರೆ ಉತ್ತಮ ಫಲ ಪ್ರಾಪ್ತವಾಗುತ್ತದೆ. ಅಲ್ಲದೇ ತಿಳಿ ಕೇಸರಿ ಅಥವಾ ಬೂದು ಬಣ್ಣ ಸಹ ಉತ್ತಮವೆಂದೇ ಹೇಳಲಾಗುತ್ತದೆ. ನೀಲಿ ಅಥವಾ ಕಪ್ಪು ಬಣ್ಣವನ್ನು ಯಾವುದೇ ಅನಿವಾರ್ಯ ಪರಿಸ್ಥಿತಿಯಲ್ಲೂ ಬಳಿಯಬಾರದೆಂದು ವಾಸ್ತು ಶಾಸ್ತ್ರದಲ್ಲಿ ಹೇಳಲಾಗುತ್ತದೆ. ಇದರಿಂದ ಮನೆಯಲ್ಲಿ ವಾದ ವಿವಾದಗಳು, ಜಗಳದಂತ ಸನ್ನಿವೇಶಗಳು ಎದುರಾಗುತ್ತವೆ.

ಜ್ಯೋತಿಷ ಮತ್ತು ಭವಿಷ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ (Click Here) ಕ್ಲಿಕ್‌ ಮಾಡಿ.

ಕನ್ನಡಿಯಿಂದ ದೋಷ ನಿವಾರಣೆ

ದಕ್ಷಿಣ ದಿಕ್ಕಿಗೆ ಬಾಗಿಲಿರುವ ಮನೆಯಲ್ಲಿ ಬಾಗಿಲಿನ ಎದುರಿಗೆ ದೊಡ್ಡ ಕನ್ನಡಿ ಹಾಕುವುದು ಉತ್ತಮ. ಇದರಿಂದ ಮನೆಯ ಒಳಗೆ ಪ್ರವೇಶಿಸುತ್ತಿದ್ದಂತೆಯೇ, ಬರುವವರ ಪೂರ್ಣ ಪ್ರತಿಬಿಂಬ ಕನ್ನಡಿಯಲ್ಲಿ ಕಾಣುವಂತೆ ಮಾಡುವುದು ಉತ್ತಮ. ಇದರಿಂದ ಮನೆಗೆ ಪ್ರವೇಶಿಸುವ ವ್ಯಕ್ತಿಯ ಜೊತೆಗೆ ಬರುವ ನಕಾರಾತ್ಮಕ ಶಕ್ತಿಗಳು ಹಿಂತಿರುಗಿ ಹೋಗುವಂತಾಗುತ್ತದೆ.

ಹಣಕಾಸಿನ ಸಮಸ್ಯೆಗೆ ಸರಳ ವಾಸ್ತು ಪರಿಹಾರ ಪಡೆಯಲು ಈ ವಿಡಿಯೋ ನೋಡಿ.

ಮನೆಯ ಮುಖ್ಯ ದ್ವಾರ ದಕ್ಷಿಣ ದಿಕ್ಕಿಗಿದ್ದರೂ, ಅಡುಗೆ ಮನೆಗೆ ಆಗ್ನೇಯ ದಿಕ್ಕನ್ನೇ ಆಯ್ಕೆ ಮಾಡಿಕೊಳ್ಳಬೇಕು. ಜೊತೆಗೆ ಅಡುಗೆ ತಯಾರಿಸುವ ಸಂದರ್ಭದಲ್ಲಿ ಅಡುಗೆ ಮಾಡುವವರ ಮುಖ ಪೂರ್ವ ದಿಕ್ಕಿಗಿರಬೇಕು. ನೀರಿಗೆ ಸಂಬಂಧಿಸಿದ ಯಾವುದೇ ನಲ್ಲಿ ಅಥವಾ ಸಿಂಕ್ ದಕ್ಷಿಣ ದಿಕ್ಕಿಗೆ ಇರಬಾರದು.

ಇದನ್ನೂ ಓದಿ : Vastu Tips : ಮನೆಯ ಈ ದಿಕ್ಕಿನಲ್ಲಿಟ್ಟರೆ ಪೊರಕೆ; ಸಿಗಲಿದೆ ಲಕ್ಷ್ಮೀ ಕೃಪೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ ಏಕಾದಶಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina bhavishya
Koo

ಚಂದ್ರನು ಶುಕ್ರವಾರ ಕನ್ಯಾ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ ಮತ್ತು ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ವೃಷಭ ರಾಶಿಯವರು ಒತ್ತಡವನ್ನು ನಿವಾರಿಸಲು ವ್ಯಸನಗಳಿಗೆ ಬಲಿಯಾಗುವುದು ಬೇಡ, ಅಧ್ಯಾತ್ಮದ ಹಾದಿ ಸಮಾಧಾನ ನೀಡುವುದು. ಕುಟುಂಬದ ಆಪ್ತರು ಸ್ನೇಹಿತರಿಂದ ಆರ್ಥಿಕ ಸಹಾಯ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಸಿಂಹ ರಾಶಿಯವರು ನಿಮ್ಮನ್ನು ದ್ವೇಷಿಸುವ ಜನರೇ ನಿಮ್ಮ ಸ್ನೇಹಿತರಾಗಿ ಪರಿವರ್ತನೆ ಆಗುವರು. ಅಂದುಕೊಂಡ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (19-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ.
ತಿಥಿ: ಏಕಾದಶಿ 20:04 ವಾರ: ಶುಕ್ರವಾರ
ನಕ್ಷತ್ರ: ಮಘಾ 10:55 ಯೋಗ: ವೃದ್ಧಿ 25:43
ಕರಣ: ವಣಿಜ 06:46 ಅಮೃತಕಾಲ: ಬೆಳಗ್ಗೆ 08:15 ರಿಂದ 10:03
ದಿನದ ವಿಶೇಷ: ಬೇಲೂರು ಚೆನ್ನಕೇಶವ ರಥ, ಶುಕ್ರ ಜಯಂತಿ, ಸರ‍್ವೇಷಾಮೇಕಾದಶಿ

ಸೂರ್ಯೋದಯ : 06:05   ಸೂರ್ಯಾಸ್ತ : 06:33

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಸಹಕಾರ ಸಿಗಲಿದೆ. ಸಭೆ- ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಒತ್ತಡವನ್ನು ನಿವಾರಿಸಲು ವ್ಯಸನಗಳಿಗೆ ಬಲಿಯಾಗುವುದು ಬೇಡ, ಅಧ್ಯಾತ್ಮದ ಹಾದಿ ಸಮಾಧಾನ ನೀಡುವುದು. ಕುಟುಂಬದ ಆಪ್ತರು ಸ್ನೇಹಿತರಿಂದ ಆರ್ಥಿಕ ಸಹಾಯ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5

Horoscope Today

ಮಿಥುನ: ನಿಮ್ಮ ಆಕರ್ಷಕ ವ್ಯಕ್ತಿತ್ವದಿಂದ ಇತರರನ್ನು ಆಕರ್ಷಿಸುತ್ತಿರಿ. ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಇಂದು ಎಂದು ಸಿಗದ ಉತ್ಸಾಹ, ನೆಮ್ಮದಿ, ಸಂತೋಷ ಸಿಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಬದುಕಿನ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಅನೇಕ ಒತ್ತಡಗಳಿಂದ ಮುಕ್ತರಾಗುವಿರಿ. ಸಾಲದ ಮರುಪಾವತಿಯಾಗಿ ಆರ್ಥಿಕವಾಗಿ ಬಲಗೊಳ್ಳುವಿರಿ.ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಸಂಗಾತಿಯ ಮಧುರ ಮಾತುಗಳು ಕುಟುಂಬದಲ್ಲಿ ಭರವಸೆಯನ್ನು ಹೆಚ್ಚಿಸಲಿದೆ. ಆರೋಗ್ಯ ಪರಿಪೂರ್ಣ.ಕೌಟುಂಬಿಕ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಕುಟುಂಬದ ಆಪ್ತರಿಂದ ಸಹಾಯ ಸಹಕಾರ ಸಿಗಲಿದೆ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ನಿಮ್ಮನ್ನು ದ್ವೇಷಿಸುವ ಜನರೇ ನಿಮ್ಮ ಸ್ನೇಹಿತರಾಗಿ ಪರಿವರ್ತನೆ ಆಗುವರು. ಅಂದುಕೊಂಡ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಉತ್ಸಾಹದಿಂದ ಇರುವಿರಿ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಕುಟುಂಬದಲ್ಲಿ ಪರಸ್ಪರರ ಸಾಮರಸ್ಯ ಮೂಡಲಿದೆ‌. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕ ಚಿಂತೆ ಕಾಡಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವಿನಾಕಾರಣ ಅಪರಿಚಿತರೊಂದಿಗೆ ಕಲಹವಾಗುವ ಸಾಧ್ಯತೆ ಇದೆ. ಮಾತಿನ ಮೇಲೆ ಹಿಡಿತವಿರಲಿ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಒತ್ತಡದ ಮಧ್ಯೆಯೂ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ರಹಸ್ಯ ಕಾರ್ಯಗಳು ಸಹ ಯಶಸ್ಸನ್ನು ನೀಡಲಿದೆ. ಮಾತುಗಳು ಮಥಿಸಿ ಕಲಹವು ಸಂಬಂಧಿಗಳ ಮಧ್ಯೆ ಬಿರುಕು ಮೂಡುವ ಸಾಧ್ಯತೆ ಇದೆ. ಕೌಶಲ್ಯಕ್ಕ ತಕ್ಕ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಆಪ್ತರ ಬೆಂಬಲ ಸಿಗಲಿದೆ. ಇತರ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡುವಿರಿ. ದಿನದ ಕೊನೆಯಲ್ಲಿ ಯಾರೊಂದಿಗೂ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಹಿಂದೆ ಮಾಡಿರುವ ಧನ ಸಹಾಯ ಇಂದು ತಮಗೆ ಮರಳುವ ಸಾಧ್ಯತೆ ಇದೆ. ಅಲ್ಪಸಮಯದ ಕೋಪ ನಿಮ್ಮ ಮನಸ್ಥಿತಿ ಹಾಳುಮಾಡುವ ಸಾಧ್ಯತೆ ಇದೆ, ಆದರಿಂದ ಶಾಂತವಾಗಿರಿ. ಸೂಕ್ತ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗದಲ್ಲಿ ಸ್ವಲ್ಪ ಮಟ್ಟಿಗೆ ಒತ್ತಡ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ಮನೋರಂಜನೆಯಿಂದಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ.ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳ ಸಹಕಾರ ಸಿಗಲಿದೆ. ಮನೆಯಲ್ಲಿ ಹಿರಿಯರೊಂದಿಗೆ ಮಾತಿಗೆ ಮಾತು ಬೆಳೆಸಬೇಡಿ. ಮೌನವಾಗಿರುವುದು ಉತ್ತಮ. ಆರೋಗ್ಯ ಉತ್ತಮ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮೀನ: ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸಂಗಾತಿಯಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರು ಇಂದು ಕಾರಣಾಂತರಗಳಿಂದ ಮೋಸ ಹೋಗುವ ಸಾಧ್ಯತೆ ಇದೆ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ ದಶಮಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

daily horoscope predictions for April 18 2024
Koo

ಚಂದ್ರನು ಗುರುವಾರ ಬೆಳಗ್ಗೆ 10:10ಕ್ಕೆ ಕನ್ಯಾರಾಶಿಯನ್ನು ಪ್ರವೇಶ ಮಾಡಲಿದ್ದಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ ಮತ್ತು ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಇಂದು ಕಾರಣಾಂತರಗಳಿಂದ ಮೋಸ ಹೋಗುವ ಸಾಧ್ಯತೆ ಇದೆ. ಹಣಕಾಸು ಪ್ರಗತಿಯಲ್ಲಿ ಸಾಧಾರಣ ಪ್ರಗತಿ ಕಾಣುವಿರಿ. ಹೊಸದೊಂದು ವಸ್ತು ಖರೀದಿಯಿಂದ ಸಂತೋಷ ಆಗಲಿದೆ. ಆರೋಗ್ಯದಲ್ಲಿ ಉತ್ತಮ ಸ್ಥಿತಿ ಇರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಸಿಂಹ ರಾಶಿಯವರಿಗೆ ಆಪ್ತರು ನಿಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡಲಿದ್ದಾರೆ. ಆದರೆ, ಯಾವುದೇ ವಿಷಯ ಇದ್ದರೂ ನಿಮ್ಮ ನಿಲುವನ್ನು ದೃಢವಾಗಿಟ್ಟುಕೊಂಡಿರಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ದಿನದ ಮಧ್ಯಭಾಗದಲ್ಲಿ ಸ್ವಲ್ಪ ಮನೋ ಒತ್ತಡ ಉಂಟಾಗಲಿದೆ. ಉದ್ಯೋಗ, ಆರೋಗ್ಯದಲ್ಲಿ ಉತ್ತಮ ಪ್ರಗತಿ ಕಾಣುವಿರಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (18-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ.
ತಿಥಿ: ದಶಮಿ ವಾರ: ಗುರುವಾರ
ನಕ್ಷತ್ರ: ಆಶ್ಲೇಷಾ 07:55 ಯೋಗ: ಗಂಡ 24:41
ಕರಣ: ಗರಜ 17:31 ಅಮೃತಕಾಲ: ಬೆಳಗ್ಗೆ 6:10ರಿಂದ 07:57

ಸೂರ್ಯೋದಯ : 06:05   ಸೂರ್ಯಾಸ್ತ : 06:33

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕಾರಣಾಂತರಗಳಿಂದ ಮೋಸ ಹೋಗುವ ಸಾಧ್ಯತೆ ಇದೆ. ಹಣಕಾಸು ಪ್ರಗತಿಯಲ್ಲಿ ಸಾಧಾರಣ ಪ್ರಗತಿ ಕಾಣುವಿರಿ. ಹೊಸದೊಂದು ವಸ್ತು ಖರೀದಿಯಿಂದ ಸಂತೋಷ ಆಗಲಿದೆ. ಆರೋಗ್ಯದಲ್ಲಿ ಉತ್ತಮ ಸ್ಥಿತಿ ಇರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಶಾಂತ ಮನಃಸ್ಥಿತಿಯು ಉತ್ಸಾಹ ತುಂಬಿ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಪ್ರೀತಿ ಪಾತ್ರರಿಂದ ಕಿರಿಕಿರಿ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣಲಿದೆ. ದಿನದ ಕೊನೆಯಲ್ಲಿ ಯಾವುದಾದರೂ ಸುದ್ದಿ ದುಃಖ ತರುವುದು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಜೀವನದಲ್ಲಿ ಅಭದ್ರತೆಯು ಮಾನಸಿಕ ಒತ್ತಡವನ್ನು ಉಂಟು ಮಾಡುವ ಸಾಧ್ಯತೆ ಇದೆ. ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಕಚೇರಿ ಕೆಲಸಗಳು ನಿಧಾನವಾಗಿ ಸಾಗುವುದು. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ ನಿಮ್ಮದಾಗಲಿದೆ.
ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಬಿಡುವಿಲ್ಲದ ಕೆಲಸದಿಂದ ಆಯಾಸ ಉಂಟಾಗಲಿದೆ. ಕುಟುಂಬದ ಸಂತಸ ಹೆಚ್ಚಿಸಲು ಪ್ರಯತ್ನ ಮಾಡುವಿರಿ. ಸಭೆ-ಸಮಾರಂಭಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಸ್ವಲ್ಪ ಖರ್ಚಿನ ದಿನ ನಿಮ್ಮದಾಗಲಿದೆ. ಬಹುದಿನಗಳ ಕನಸು ನನಸಾಗುವ ಸಮಯ ಬಂದಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಆಪ್ತರು ನಿಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡಲಿದ್ದಾರೆ. ಆದರೆ, ಯಾವುದೇ ವಿಷಯ ಇದ್ದರೂ ನಿಮ್ಮ ನಿಲುವನ್ನು ದೃಢವಾಗಿಟ್ಟುಕೊಂಡಿರಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ದಿನದ ಮಧ್ಯಭಾಗದಲ್ಲಿ ಸ್ವಲ್ಪ ಮನೋ ಒತ್ತಡ ಉಂಟಾಗಲಿದೆ. ಉದ್ಯೋಗ, ಆರೋಗ್ಯದಲ್ಲಿ ಉತ್ತಮ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಆಪ್ತರೊಂದಿಗೆ ಅನೇಕ ವಿಚಾರಗಳನ್ನು ಹಂಚಿಕೊಳ್ಳುವಿರಿ. ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಉತ್ತಮವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ನಿಮ್ಮ ಹಿಂದೆ ಪಿತೂರಿ ಮಾಡುವ ಜನರ ಬಗ್ಗೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ ನಿಮ್ಮದಾಗಲಿದೆ.
ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಆಹಾರದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಆಪ್ತರೊಂದಿಗಿನ ಮಾತುಕತೆಯಲ್ಲಿ ವ್ಯತಿರಿಕ್ತವಾದ ಪರಿಣಾಮದಿಂದಾಗಿ ಜಗಳವಾಗುವ ಸಾಧ್ಯತೆ ಇದೆ. ಆದಷ್ಟು ಮಾತು ನಿಯಂತ್ರಣದಲ್ಲಿರಲಿ. ಇದರ ಮಧ್ಯೆ ಉದ್ಯೋಗದ ಸ್ಥಳದಲ್ಲಿ ಕೌಶಲ್ಯದ ಕೆಲಸ ನಿಮಗೆ ಯಶಸ್ಸು ತಂದು ಕೊಡುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಅತಿಯಾದ ಒತ್ತಡದ ಕಾರ್ಯ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ಆಪ್ತರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ನಿಸ್ಪೃಹ ಮನೋಭಾವದ ಕಾರ್ಯ ಸಿದ್ಧಿ ಮಾಡುವುದು. ಈ ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವ ಸಾಧ್ಯತೆಗಳು ಹೆಚ್ಚು. ಅನಗತ್ಯವಾಗಿ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅಗತ್ಯ. ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಇರುವವರು ಹೆಚ್ಚು ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು. ವ್ಯಾಪಾರದಲ್ಲಿ ಪ್ರಗತಿ ಕಾಣುವಿರಿ. ಹೊಸದಾಗಿ ಕಾರ್ಯ ಪ್ರಾರಂಭಿಸುವುದು ದಿನದ ಮಟ್ಟಿಗೆ ಬೇಡ. ಜೀವನದ ಭವಿಷ್ಯದ ಬಗ್ಗೆ ಅತಿಯಾಗಿ ಚಿಂತಿಸಿ ಮನಸ್ಥಿತಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮೀನ: ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯ ಉಂಟಾಗಲಿದ್ದು, ಮಾನಸಿಕ ಅಸಮತೋಲನಕ್ಕೆ ಕಾರಣವಾಗಲಿದೆ. ನಡೆದು ಹೋದ ಘಟನೆಗಳ ಬಗ್ಗೆ ಚಿಂತಿಸಿ ಫಲವಿಲ್ಲ. ಉದ್ಯೋಗಿಗಳಿಗೆ ಸಾಧಾರಣ ಫಲ ಇರಲಿದೆ. ಕೌಟುಂಬಿಕ ವ್ಯಾಜ್ಯಗಳು ಹುಟ್ಟುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ ನವಮಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಬುಧವಾರವೂ ಸಿಂಹ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರಿಕೆ ಇರಲಿ. ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಪ್ರತಿಫಲ ಸಿಗುವುದರ ಜತೆಗೆ ಪುರಸ್ಕಾರ ಸಿಗುವ ಸಾಧ್ಯತೆ ಇದೆ. ವೃಷಭ ರಾಶಿಯವರು ಕುಟುಂಬದ ಸದಸ್ಯರಿಗೆ ಸಂಬಂಧಿಗಳಿಂದ ಸುದ್ದಿ ಬರುವುದು. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕಟಕ ರಾಶಿಯವರು ಅತಿಯಾದ ಒತ್ತಡವು ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಸೂಕ್ತ ವ್ಯಕ್ತಿಗಳ ಬೆಂಬಲದಿಂದ ಹೂಡಿಕೆ ವ್ಯವಹಾರದಲ್ಲಿ ತೊಡುಗುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (17-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ.
ತಿಥಿ: ನವಮಿ 15:13 ವಾರ: ಬುಧವಾರ
ನಕ್ಷತ್ರ: ಆಶ್ಲೇಷಾ 31:55 ಯೋಗ: ಶೂಲ 23:49
ಕರಣ: ಕೌಲವ 15:13 ದಿನದ ವಿಶೇಷ: ಚಾಂದ್ರ ಸೌರ ಶ್ರೀರಾಮನವಮಿ

ಸೂರ್ಯೋದಯ : 06:06   ಸೂರ್ಯಾಸ್ತ : 06:33

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಭಾವನಾತ್ಮಕವಾಗಿ ನೀವಿಂದು ಸ್ಥಿರವಾಗಿರುವುದಿಲ್ಲ. ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರಿಕೆ ಇರಲಿ. ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಪ್ರತಿಫಲ ಸಿಗುವುದರ ಜತೆಗೆ ಪುರಸ್ಕಾರ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಕುಟುಂಬದ ಸದಸ್ಯರಿಗೆ ಸಂಬಂಧಿಗಳಿಂದ ಸುದ್ದಿ ಬರುವುದು. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಮನೆಯಲ್ಲಿ ಶುಭ ಕಾರ್ಯಗಳ ಕುರಿತು ಚರ್ಚೆ ಮಾಡುವಿರಿ. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡುವಂತೆ ಮಾಡುವುದು. ಆತುರದ ತೀರ್ಮಾನ, ಮಾತುಗಳು ಅಪಾಯ ತಂದಿತು ಎಚ್ಚರಿಕೆ. ಆರೋಗ್ಯ ಕೊಂಚ ಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿಯಾಗಲಿದೆ. ಮನೆಯವರ ಧೈರ್ಯದ ಮಾತುಗಳು ಮನಸ್ಸಿಗೆ ಸಂತೋಷ ನೆಮ್ಮದಿ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅತಿಯಾದ ಒತ್ತಡವು ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಸೂಕ್ತ ವ್ಯಕ್ತಿಗಳ ಬೆಂಬಲದಿಂದ ಹೂಡಿಕೆ ವ್ಯವಹಾರದಲ್ಲಿ ತೊಡುಗುವ ಸಾಧ್ಯತೆ ಇದೆ. ಪ್ರೀತಿ-ಪಾತ್ರರೊಂದಿಗೆ ಸಮಯ ಕಳೆಯುವಿರಿ. ಸಂಗಾತಿ ನಿಮ್ಮ ಮನಸ್ಸಿಗೆ ಮುದ ನೀಡುವಳು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ವರ್ತನೆಯಲ್ಲಿ ಬದಲಾವಣೆ, ಹಿರಿಯರ ಆಶೀರ್ವಾದದ ಬಲದಿಂದ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಭೇಟಿ ಮಾಡಿ ಸ್ವಾಂತನ ಹೇಳಬಹುದು. ದೀಢಿರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಒತ್ತಡದ ಕಾರ್ಯ ಆಯಾಸವನ್ನುಂಟು ಮಾಡುವುದು.ಕುಟುಂಬದ ಸದಸ್ಯರ ಅವಶ್ಯಕತೆಗಾಗಿ ಅನಗತ್ಯ ಖರ್ಚು ಮಾಡುವಿರಿ. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಇದರ ಮಧ್ಯೆ ಕುಟುಂಬ ಸದಸ್ಯರು ನಿಮ್ಮ ಮುಂದೆ ಸಮಸ್ಯೆ ಹಂಚಿಕೊಳ್ಳುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಕೈಗೊಂಡ ಧಾರ್ಮಿಕ ಕಾರ್ಯಗಳು ಮನಸ್ಸಿಗೆ ಸಮಾಧಾನ ತರುವುದು. ಅಗತ್ಯಕ್ಕೆ ತಕ್ಕಂತೆ ಖರ್ಚು ಇರಲಿದೆ. ಕುಟುಂಬ ಸದಸ್ಯರಿಂದ ರಹಸ್ಯ ಸುದ್ದಿ ಅಚ್ಚರಿ ತರುವುದು, ಕೋಪದಲ್ಲಿ ಮಾತಿಗೆ ಇಳಿಯುವುದರಿಂದ ಕಠಿಣ ಪರಿಸ್ಥಿತಿ ನಿರ್ಮಾಣ ಮಾಡುವುದು. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಕಠಿಣ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾಗುವಿರಿ. ಭಾವನಾತ್ಮಕ ನಿರ್ಧಾರ ಕೈಗೊಳ್ಳುವ ಭರದಲ್ಲಿ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವುದು ಬೇಡ. ಅಜಾಗೃತ ಕಾರ್ಯ ನಿಮಗೆ ಆರ್ಥಿಕ ನಷ್ಟ ಉಂಟು ಮಾಡಬಹುದು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕುಟುಂಬದ ಸದಸ್ಯರ ವರ್ತನೆಯಿಂದ ಕೋಪಗೊಳ್ಳುವ ಸಾಧ್ಯತೆ ಇದೆ. ಸಂಬಂಧಿಕರಿಂದ ವ್ಯಾಜ್ಯ ಉಂಟಾಗುವ ಸಾಧ್ಯತೆ ಇದೆ. ಆತುರದ ಮಾತುಗಳನ್ನಾಡಬೇಡಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಜೀವನದಲ್ಲಿ ಹೊಸ ಪಾಠ ಕಲಿಯುವಿರಿ. ಕೌಟುಂಬಿಕ ಒತ್ತಡ ನಿಮ್ಮ ಮನಸ್ಸಿಗೆ ನೋವುಂಟು ಮಾಡುವ ಸಾಧ್ಯತೆ ಇದೆ. ಕೋಪದಲ್ಲಿ ಆಡಿದ ಮಾತುಗಳ ಮನವರಿಕೆ ಆಗುವುದು. ಆರೋಗ್ಯದ ಕಡೆಗೆ ಗಮನ ಹರಿಸಿ. ವೈದ್ಯರ ಸಲಹೆ ಪಡೆಯುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ,ಕೀರ್ತಿ ಸಿಗುವುದು. ದಿನದ ಮಟ್ಟಿಗೆ ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳನ್ನು ಹಂಚಿಕೊಂಡು ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ಸಮಾಧಾನದ ಮಾತುಗಳು ಸೂಕ್ತ ವ್ಯಕ್ತಿಗಳಿಂದ ಸಿಗಲಿವೆ. ನಿಮ್ಮ ವರ್ತನೆಯಿಂದ ಕುಟುಂಬದ ಸದಸ್ಯರು ಕೋಪಗೊಳ್ಳವ ಸಾಧ್ಯತೆ ಇದೆ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅವಶ್ಯಕ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

dina bhavishya
Koo

ಚಂದ್ರನು ಮಂಗಳವಾರವೂ ಸಿಂಹ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ನಿಮ್ಮ ವರ್ತನೆ ಇತರರಿಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ವೃಷಭ ರಾಶಿಯವರು ದ್ವೇಷದ ಭಾವನೆ ನಿಮ್ಮ ಮನಸ್ಸಿಗೆ ಅಸಮಾಧಾನ ತರುವುದರೊಂದಿಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರೊಂದಿಗೆ ಸಮಾಧಾನದಿಂದ ವರ್ತಿಸಿ. ಮೌನದಿಂದ ಇರುವುದು ಒಳಿತು. ಸಿಂಹ ರಾಶಿಯವರು ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯವಿದು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (16-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ.
ತಿಥಿ: ಅಷ್ಟಮಿ 13:23 ವಾರ: ಮಂಗಳವಾರ
ನಕ್ಷತ್ರ: ಪುಷ್ಯ 29:14 ಯೋಗ: ಧೃತಿ 23:15
ಕರಣ: ಭವ 13:23 ಅಮೃತಕಾಲ: ರಾತ್ರಿ 10:17 ರಿಂದ 12:02 ರವರೆಗೆ

ಸೂರ್ಯೋದಯ : 06:06   ಸೂರ್ಯಾಸ್ತ : 06:32

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ನಿಮ್ಮ ವರ್ತನೆ ಇತರರಿಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಧಾರ್ಮಿಕ ವ್ಯಕ್ತಿಗಳ ಭೇಟಿ ಮಾಡಿ, ಕ್ಷೇತ್ರ ದರ್ಶನ ಮಾಡುವಿರಿ. ಕೌಟುಂಬಿಕವಾಗಿ ಸಾಧಾರಣ ಫಲ
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ದ್ವೇಷದ ಭಾವನೆ ನಿಮ್ಮ ಮನಸ್ಸಿಗೆ ಅಸಮಾಧಾನ ತರುವುದರೊಂದಿಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರೊಂದಿಗೆ ಸಮಾಧಾನದಿಂದ ವರ್ತಿಸಿ. ಮೌನದಿಂದ ಇರುವುದು ಒಳಿತು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಮಹತ್ವಾಕಾಂಕ್ಷೆಯ ಯೋಜನೆಗಳು ಸಫಲವಾಗುವುದು. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ ಇದೆ. ಅನವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಆರ್ಥಿಕವಾಗಿ ಉತ್ತಮ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಬಿಡುವಿಲ್ಲದ ಕೆಲಸದಿಂದ ಒತ್ತಡ ಇರಲಿದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿಯಾಗಲಿದೆ. ಮನಸ್ಸಿಗೆ ನೋವುಂಟು ಮಾಡಬಹುದು. ಆಪ್ತರೊಂದಿಗೆ ಭಾವನೆ ಹಂಚಿಕೊಳ್ಳುವಿರಿ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯವಿದು. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಸಂತೋಷದಿಂದ ಇದ್ದು, ಇತರರಿಗೆ ಸಂತಸ ಹಂಚಿಕೊಳ್ಳಲು ಹವಣಿಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆತುರದ ಭರದಲ್ಲಿ ಇತರರನ್ನು ಟೀಕೆ ಮಾಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ನಿಮ್ಮ ಹರಿತವಾದ ಮಾತುಗಳಿಂದ ಇತರರ ಮನಸ್ಸು ನೋವುಗುವುದು ಬೇಡ, ಆಲೋಚಿಸಿ ಮಾತನಾಡಿ. ಕುಟುಂಬದ ಪ್ರತಿಯೊಂದು ವಿಷಯದಲ್ಲೂ ತಪ್ಪು ಹುಡುಕುವುದು ಬೇಡ, ಇದರಿಂದ ಮನಸ್ಸು ಘಾಸಿಯಾಗುವುದು. ಆಧ್ಯಾತ್ಮದ ಹಾದಿ ದಾರಿ ತೋರಿತು. ಗುರು ದತ್ತಾತ್ರೇಯನನ್ನು ಆರಾಧಿಸಿ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಸಮಯ ನೀಡುವಿರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಭೂಮಿ, ಆಸ್ತಿ ಖರೀದಿಗಾಗಿ ಆಲೋಚನೆ ಮಾಡುವಿರಿ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ದೀರ್ಘಕಾಲದ ಪ್ರಯಾಣ ಇರಲಿದೆ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹೊಸ ಕೆಲಸಗಳಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವುದು. ಮುಂಗೋಪದಿಂದ ನಷ್ಟ ಸಾಧ್ಯತೆ ಇದೆ. ಸ್ನೇಹಿತರ ಸಲಹೆ ಸಹಕಾರ ಸಿಗುವುದು.
ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಆಲಸ್ಯದಿಂದ ಕಾರ್ಯ ಹಾನಿ. ಆರೋಗ್ಯದ ಕಡೆಗೆ ಗಮನ ಹರಿಸಬೇಕು.ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸೃಜನಾತ್ಮಕವಾಗಿ ಕೆಲಸ ಮಾಡಿ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹೊಸ ಅವಕಾಶಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಹಿಂದೆ ಟೀಕೆಗಳನ್ನು ಮಾಡುವ ಜನರಿಂದ ದೂರ ಇರಿ. ದಿನ ಮಟ್ಟಿಗೆ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಆಗುವ ಸಾಧ್ಯತೆ ಇದೆ. ಸಂಗಾತಿಯ ಸ್ವಾರ್ಥದಿಂದ ಕುಟುಂಬದ ವಾತಾವರಣದಲ್ಲಿ ವ್ಯತ್ಯಾಸ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
murder case gadag
ಕ್ರೈಂ4 mins ago

Murder Case: ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿ 4 ಮಂದಿ ಮಲಗಿದಲ್ಲೇ ಕೊಚ್ಚಿ ಕೊಲೆ

voting
ಪ್ರಮುಖ ಸುದ್ದಿ31 mins ago

Lok Sabha Election 2024: ಮೊದಲ ಹಂತದ ಮತದಾನ ಆರಂಭ; 102 ಲೋಕಸಭಾ ಕ್ಷೇತ್ರಗಳ ಭವಿಷ್ಯ ಇಂದು ನಿರ್ಣಯ

kalpana chawla rajamarga column
ಅಂಕಣ49 mins ago

ರಾಜಮಾರ್ಗ ಅಂಕಣ: ಭಾರತದ ಹೆಣ್ಣು ಮಕ್ಕಳಿಗೆ ಆಕಾಶದ ಎತ್ತರವೂ ಕಡಿಮೆ ಎಂದು ಸಾಬೀತು ಪಡಿಸಿದ ಕಲ್ಪನಾ ಚಾವ್ಲಾ!

Karnataka Weather Forecast
ಮಳೆ1 hour ago

Karnataka Weather : 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Dina bhavishya
ಭವಿಷ್ಯ3 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Steet Food
ಆಹಾರ/ಅಡುಗೆ8 hours ago

ವಿಸ್ತಾರ ಸಂಪಾದಕೀಯ: ಸಾರ್ವಜನಿಕ ಆಹಾರದಲ್ಲಿ ಆರೋಗ್ಯ ಕಾಳಜಿ ಪ್ರಮುಖವಾಗಿರಲಿ

IPL 2024
ಪ್ರಮುಖ ಸುದ್ದಿ8 hours ago

IPL 2024 : ಪಂಜಾಬ್​ ತಂಡಕ್ಕೆ ವಿರೋಚಿತ 9 ರನ್ ಸೋಲು, ಜಯದ ಹಳಿಗೆ ಮರಳಿದ ಮುಂಬೈ

Physical Abuse
ದೇಶ8 hours ago

Physical Abuse : ಸ್ಪೇನ್​ನ ಮಹಿಳೆ ಮೇಲೆ ಜಾರ್ಖಂಡ್​ನಲ್ಲಿ ಗ್ಯಾಂಗ್​ ರೇಪ್​; ತಿಂಗಳ ಬಳಿಕ ಪ್ರಕರಣ ಬಯಲು

Amanatullah Khan
ದೇಶ9 hours ago

Amanatullah Khan: ಆಪ್‌ಗೆ ಮತ್ತಷ್ಟು ಸಂಕಷ್ಟ; ಶಾಸಕ ಅಮಾನತುಲ್ಲಾ ಖಾನ್ ಅರೆಸ್ಟ್‌

Moral policing
ಪ್ರಮುಖ ಸುದ್ದಿ9 hours ago

Moral policing : ನೈತಿಕ ಪೊಲೀಸ್​ಗಿರಿ; ಮುಸ್ಲಿಮರ ಗುಂಪಿನಿಂದ ಹಿಂದೂ ಯುವಕನ ಮೇಲೆ ಹಲ್ಲೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ3 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ7 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ1 week ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

ಟ್ರೆಂಡಿಂಗ್‌