Dina Bhavishya : ಗೌಪ್ಯ ವಿಷಯಗಳು ಬಹಿರಂಗ ಮಾಡ್ಬೇಡಿ; ತರಾತುರಿಯಲ್ಲಿ ನಿರ್ಧಾರ ಕೈಗೊಳ್ಳಬೇಡಿ - Vistara News

ಭವಿಷ್ಯ/ಧಾರ್ಮಿಕ

Dina Bhavishya : ಗೌಪ್ಯ ವಿಷಯಗಳು ಬಹಿರಂಗ ಮಾಡ್ಬೇಡಿ; ತರಾತುರಿಯಲ್ಲಿ ನಿರ್ಧಾರ ಕೈಗೊಳ್ಳಬೇಡಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷದ ಚೌತಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಮೇಷ ರಾಶಿಯಿಂದ ಶುಕ್ರವಾರ ರಾತ್ರಿ 08:00 ಗಂಟೆಗೆ ವೃಷಭ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ, ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಉತ್ಸಾಹದ ವಾತಾವರಣ ಇರಲಿದೆ. ಆಪ್ತರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ಮಿಥುನ ರಾಶಿಯವರು ಸಂತಸದ ಕ್ಷಣಗಳನ್ನು ಕಳೆಯುವಿರಿ. ಆರ್ಥಿಕ ಪ್ರಗತಿ ಇರಲಿದೆ. ಬಹಳ ದಿನಗಳ ಬಾಕಿ ಇರುವ ಕಾರ್ಯವು ಪೂರ್ಣವಾಗುವುದು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (23-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ಚೌತಿ 10:38 ವಾರ: ಶುಕ್ರವಾರ
ನಕ್ಷತ್ರ: ರೇವತಿ 19:53 ಯೋಗ: ಧೃತಿ 13:09ಶೂಲ 09:29/ ಗಂಡ 30:07
ಕರಣ: ಬಾಲವ 10:38 / ಕೌಲವ 21:11 ಅಮೃತಕಾಲ: ಸಂಜೆ 05:43 ರಿಂದ 07:10
ದಿನದ ವಿಶೇಷ: ಕಲ್ಯಾಣ ಕಾರಣಿಕ

ಸೂರ್ಯೋದಯ : 06:08   ಸೂರ್ಯಾಸ್ತ : 06:36

ರಾಹುಕಾಲ: ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಉತ್ಸಾಹದ ವಾತಾವರಣ ಇರಲಿದೆ. ಆಪ್ತರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ವ್ಯಾಪಾರ ವ್ಯವಹಾರಗಳಿಗೆ ಹೆಚ್ಚಿನ ಲಾಭ ದೊರೆಯಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ನಿಮ್ಮ ವ್ಯಕ್ತಿತ್ವ ಇತರರನ್ನು ಆಕರ್ಷಿಸಿ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಕುಟುಂಬದಲ್ಲಿ ನೆಮ್ಮದಿ. ಅದೃಷ್ಟ ಸಂಖ್ಯೆ: 5

Horoscope Today

ಮಿಥುನ: ಸಂತಸದ ಕ್ಷಣಗಳನ್ನು ಕಳೆಯುವಿರಿ. ಆರ್ಥಿಕ ಪ್ರಗತಿ ಇರಲಿದೆ. ಬಹಳ ದಿನಗಳ ಬಾಕಿ ಇರುವ ಕಾರ್ಯವು ಪೂರ್ಣವಾಗುವುದು. ಮನೆಯಲ್ಲಿ ಪರಸ್ಪರ ಸಹಕಾರ ಸಿಗುವುದು, ಉತ್ಸಾಹದ ದಿನವಿದು. ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಆಕರ್ಷಕ ವ್ಯಕ್ತಿತ್ವ ಹೊಂದಿರುವ ನೀವು ಇಂದು ಇತರರನ್ನು ಆಕರ್ಷಿಸುವಿರಿ. ಆರ್ಥಿಕ ಪ್ರಗತಿ ಸಾಧಾರಣ ಇದ್ದರೂ ಸಮರ್ಥವಾಗಿ ನಿರ್ವಹಿಸುವಿರಿ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಮಡದಿಯ ಪ್ರೀತಿಗೆ ಸೋಲುವಿರಿ. ಕುಟುಂಬದಲ್ಲಿ ನೆಮ್ಮದಿ. ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಉದ್ಯೋಗ ಅಪೇಕ್ಷಿತರಿಗೆ ಇಂದು ಉದ್ಯೋಗದ ಭರವಸೆ. ಆರ್ಥಿಕ ಪ್ರಗತಿ ಇರಲಿದೆ. ಪರಿಶ್ರಮಕ್ಕೆ ಪ್ರತಿ ಫಲ ಸಿಗುವುದು. ಮನೆಯವರ ಪ್ರೀತಿ ಸಹಕಾರ ಸಿಗಲಿದೆ. ಕುಟುಂಬದಲ್ಲಿ ನೆಮ್ಮದಿ. ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಮನೆಯಲ್ಲಿ ಪರಸ್ಪರರ ಮಧ್ಯೆ ಕಲಹದಿಂದ ವಾತಾವರಣ ಹದಗೆಡಬಹುದು. ಕೆಲಸದಲ್ಲಿ ಹಿರಿಯರಿಂದ ಒತ್ತಡ ಇರಲಿ, ಎಚ್ಚರಿಕೆ ವಹಿಸಿ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಯಾವುದೇ ಹೂಡಿಕೆ ಬೇಡ. ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರೋಗ್ಯದಲ್ಲಿ ಉತ್ತಮವಾಗಿರಲಿದೆ. ಮನೆಯಲ್ಲಿ ಸಂತೋಷದ ದಿನ. ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಹೊಂದಲು ಹಿರಿಯರು ಮಾರ್ಗದರ್ಶನ ಮಾಡುವುರು. ಧೈರ್ಯದಿಂದ ಕಾರ್ಯದಲ್ಲಿ ಮುನ್ನುಗ್ಗಿ. ಯಶ ಸಿಗುವುದು. ಕುಟುಂಬದಲ್ಲಿ ನೆಮ್ಮದಿ. ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಕುಟುಂಬ ಸದಸ್ಯರ ಆರೋಗ್ಯ ಸಂಬಂಧಿ ವಿಷಯಗಳು ತಮಗೆ ಒತ್ತಡ ಉಂಟುಮಾಡಬಹುದು. ಉದಾಸೀನತೆ ಮಾಡುವುದು ಬೇಡ. ಆಶಾವಾದಿಗಳಾಗಿರಿ ಕುಲದೇವರನ್ನು ಸ್ಮರಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಮಕರ: ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳಿಂದ ಕಿರಿಕಿರಿ ಒತ್ತಡ ಉಂಟಾಗುವ ಸಾಧ್ಯತೆ ಇದೆ. ಆಲಸ್ಯದಿಂದ ದೂರವಿದ್ದು ಕಾರ್ಯ ಪೂರ್ಣ ಮಾಡಿ. ಕೆಲಸದ ಒತ್ತಡದಿಂದ ಮನೆಯ ಸದಸ್ಯರ ಮೇಲೆ ಹಾಕಿ, ವಾತಾವರಣ ಹದಗೆಡಲು ಕಾರಣವಾಗಬೇಡಿ. ಗುರುಗಳ ಆರಾಧನೆ ಮಾಡಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ಭೂ ಸಂಬಂಧಿ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರುವುದು. ಅನ್ಯರು ಆಡುವ ಕುಹುಕು ಮಾತುಗಳಿಗೆ ಧ್ವನಿಯಾಗಬೇಡಿ. ಕುಟುಂಬದಲ್ಲಿ ನೆಮ್ಮದಿ. ಅದೃಷ್ಟ ಸಂಖ್ಯೆ: 3

Horoscope Today

ಮೀನ: ನಿಮ್ಮ ಮಹತ್ವಾಕಾಂಕ್ಷೆಯ ಕೆಲಸ ಕಾರ್ಯಗಳು ಕುಂಠಿತವಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗಿರಲಿದೆ. ಆರ್ಥಿಕ ನಷ್ಟದಿಂದ ತಪ್ಪಿಸಿಕೊಳ್ಳಿ. ಸಂಗಾತಿಯ ಮಾತುಗಳು ಹಿತವೆನಿಸುದು. ಕುಟುಂಬದಲ್ಲಿ ನೆಮ್ಮದಿ. ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Dina Bhavishya: ಇಂದು ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಸಿಗಲಿದೆ ಶುಭ ಸುದ್ದಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷದ ತದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
Koo

ಚಂದ್ರನು ಗುರುವಾರ ಮೇಷ ರಾಶಿಯಲ್ಲೇ ನೆಲೆಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಸಿಂಹ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಇನ್ನು ತುಲಾ ರಾಶಿಯವರ ಕಾರ್ಯಗಳನ್ನು ಪ್ರಶಂಸೆ ಸಿಗಲಿದೆ. ಹಣಕಾಸಿನ ಹರಿವು ಹೆಚ್ಚಾಗಲಿದ್ದು, ವ್ಯಾಪಾರ ವ್ಯವಹಾರ ಪ್ರಗತಿ ಕಾಣಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (22-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ತದಿಗೆ 13:45 ವಾರ: ಗುರುವಾರ
ನಕ್ಷತ್ರ: ಉತ್ತರ ಭಾದ್ರಪದ 22:04 ಯೋಗ: ಧೃತಿ 13:09
ಕರಣ: ವಿಷ್ಠಿ (ಭದ್ರ) 13:09 ಅಮೃತಕಾಲ: ಸಂಜೆ 05:47 ರಿಂದ 07:13
ದಿನದ ವಿಶೇಷ: ಸಂಕಷ್ಟಹರ ಗಣಪತಿ ವ್ರತ

ಸೂರ್ಯೋದಯ : 06:06   ಸೂರ್ಯಾಸ್ತ : 06:53

ರಾಹುಕಾಲ: ಮಧ್ಯಾಹ್ನ 1:30 ರಿಂದ 03:00
ಗುಳಿಕಕಾಲ: ಬೆಳಗ್ಗೆ 09:00 ರಿಂದ 10:30
ಯಮಗಂಡಕಾಲ: ಬೆಳಗ್ಗೆ 06:00 ರಿಂದ 07:30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಸ್ನೇಹಿತರು ಅಥವಾ ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಸಾಧ್ಯತೆ. ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಾಸದಿಂದ ಖರ್ಚು. ಹಿರಿಯರ ಮಾರ್ಗದರ್ಶನ ಸಿಗಲಿದೆ. ಅತಿಥಿಗಳ ಆಗಮನದಿಂದ ನಿಮ್ಮ ಯೋಜಿತ ಕಾರ್ಯ ವಿಳಂಬವಾಗುವ ಸಾಧ್ಯತೆ. ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ, ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಪ್ರಶಂಸೆ ಸಿಗುವುದು. ದಿನದ ಮಟ್ಟಿಗೆ ಖರ್ಚು. ಸಂಬಂಧವಿರದ ವಿಷಯಗಳಿಗೆ ಕಿವಿಗೊಡುವುದು ಬೇಡ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಳೆಯ ವಿಚಾರಗಳನ್ನು ಕೆರಳಿಸಿ ಗಾಯ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ನಿಮ್ಮ ಅಭಿಪ್ರಾಯಗಳಿಗೆ ವಿರೋಧ ವ್ಯಕ್ತವಾಗುವ ಸಾಧ್ಯತೆ. ಇದರಿಂದ ಆತುರದಲ್ಲಿ ಮಾತನಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಖರ್ಚು. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕಟಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಗೃಹಬಳಕೆ ಸಾಧನಗಳ ಖರೀದಿ ಸಾಧ್ಯತೆಯಿಂದ ಖರ್ಚು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಅತಿಥಿಗಳ ಆಗಮನ ಹರ್ಷ ತರಲಿದೆ. ಆರೋಗ್ಯ ಉತ್ತಮ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ನಿಮ್ಮ ಆಕರ್ಷಕ ಮಾತುಗಳಿಂದ ಇತರರನ್ನು ಆಕರ್ಷಿಸುವಿರಿ. ನಾಲಿಗೆಯ ರುಚಿಗೆ ಮಾರು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ, ಮಿತಿಯಿರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಸಂಗಾತಿಯ ಮಾತುಗಳು ಮಧುರವೇನಿಸುವವು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ನಿಮ್ಮ ತ್ಯಾಗದ ಮನೋಭಾವ ನಿಮಗೆ ಸಂತಸ ತರುವುದು. ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ, ವಿನಾಕಾರಣ ವಿವಾದವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದಲ್ಲಿ ಅನಾವಶ್ಯಕ ಮಾತುಗಳಿಂದ ಜಗಳವಾಗಬಹುದು, ಮೌನದಿಂದ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಇತರರು ನಿಮ್ಮ ಕಾರ್ಯಗಳನ್ನು ಪ್ರಶಂಸೆ ಮಾಡುವರು. ಹಣಕಾಸಿನ ಹರಿವು ಹೆಚ್ಚಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಸಹದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ, ಎಚ್ಚರಿಕೆ ಇರಲಿ. ವಿನಾಕಾರಣ ಜಗಳ ಮಾಡಿ ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ: ಇತರರನ್ನು ಟೀಕಿಸಲು ನಿಮ್ಮ ಅಮೂಲ್ಯ ಸಮಯ ವ್ಯರ್ಥ ಮಾಡುವುದು ಬೇಡ. ಅನಾವಶ್ಯಕ ವಿಚಾರ ಮಾಡಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಶುಭ. ಕುಟುಂಬದಲ್ಲಿ ಹಳೆಯ ವಿಚಾರಗಳು ಕಲಹ ಸೃಷ್ಟಿಸಬಹುದು, ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ. ಅಮೂಲ್ಯ ವಸ್ತುಗಳ ಮೇಲೆ ಗಮನವಿರಲಿ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಹಣಕಾಸು ಪ್ರಗತಿ ಸಾಧಾರಣ. ವಿನಾಕಾರಣ ನಿಮ್ಮ ಸಿಟ್ಟು ಸಂಗಾತಿಯ ಮೇಲೆ ಹಾಕಿ, ಕುಟುಂಬದ ವಾತಾವರಣ ಕೆಡಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ನಿಮ್ಮ ಕೋಪದ ಸ್ವಭಾವದಿಂದ ಇತರರೊಂದಿಗೆ ವಾದಕ್ಕಿಳಿಯಬೇಡಿ. ಆತುರದಲ್ಲಿ ಅತಿರೇಕದ ಮಾತುಗಳು ಜಗಳ ತಂದೀತು. ಆರೋಗ್ಯದ ಕಡೆಗೆ ಗಮನವಿರಲಿ. ದಿನದ ಮಟ್ಟಿಗೆ ಖರ್ಚು ಇರಲಿದ್ದು, ಅತ್ಮೀಯರೊಂದಿಗೆ ಪ್ರಯಾಣಿಸುವ ಸಾಧ್ಯತೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ಕೆಲಸಕ್ಕೆ ಹಾಕಿದ ಶ್ರಮ ವ್ಯರ್ಥವಾಗದಂತೆ ಎಚ್ಚರಿಕೆ ವಹಿಸಿ. ಆತುರದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಸರಿಯಲ್ಲ, ತಾಳ್ಮೆಯಿಂದ ಮಾತನಾಡಿ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮೀನ: ರಹಸ್ಯ ಕಾರ್ಯಗಳು ಯಶಸ್ಸು ತಂದು ಕೊಡಲಿವೆ. ಕುಟುಂಬಕ್ಕೆ ಸಮಯವನ್ನು ನೀಡುವಿರಿ. ವಿನಾಕಾರಣ ಕೋಪಗೊಂಡು ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಖರ್ಚು ಹೆಚ್ಚಾಗಲಿದೆ. ಸಂಗಾತಿ ನಿಮ್ಮ ಮನಸ್ಸಿನ ಭಾವನೆಗಳಿಗೆ ಸ್ಪಂದಿಸುವಳು. ಮಧುರ ಪ್ರೇಮ ಅಂಕುರವಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷದ ಬಿದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina bhavishya
Koo

ಚಂದ್ರನು ಮೀನ ರಾಶಿಯಿಂದ ಬುಧವಾರ ಮೇಷ ರಾಶಿಯನ್ನು ಸಂಜೆ 07:01ಕ್ಕೆ ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಕಟಕ ರಾಶಿಯವರು ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (21-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ಬಿದಿಗೆ 17:06 ವಾರ: ಬುಧವಾರ
ನಕ್ಷತ್ರ: ಪೂರ್ವ ಭಾದ್ರಪದ 24:32 ಯೋಗ: ಸುಕರ್ಮ 16:59
ಕರಣ: ತೈತುಲ 06:49 /ಗರಜ 17:06 ಅಮೃತಕಾಲ: ಸಂಜೆ 05:25ರಿಂದ 06:51
ದಿನದ ವಿಶೇಷ: ರಾಘವೇಂದ್ರ ಸ್ವಾಮಿ ಆರಾಧನೆ

ಸೂರ್ಯೋದಯ : 06:08   ಸೂರ್ಯಾಸ್ತ : 06:37

ರಾಹುಕಾಲ: ಮಧ್ಯಾಹ್ನ 12:23 ರಿಂದ 01:56
ಗುಳಿಕಕಾಲ: ಬೆಳಗ್ಗೆ 10:49 ರಿಂದ 12:23
ಯಮಗಂಡಕಾಲ: ಬೆಳಗ್ಗೆ 07:42 ರಿಂದ 09:15

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು ಹೆಚ್ಚಾಗಲಿದೆ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗುವುದು. ಹಿರಿಯರ ಬೆಂಬಲ ಆಶೀರ್ವಾದ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚನೆ ಮಾಡುವಿರಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆ ವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಸಾಧ್ಯವಾದಷ್ಟು ಮಟ್ಟಿಗೆ ತಾಳ್ಮೆ ಇರಲಿ. ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು,ಕೀರ್ತಿ, ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ಮುಂದಾಗುವ ಕಾರ್ಯಗಳ ಬಗೆಗೆ ಗಮನ ಇರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಣಕಾಸಿನ ಸಮಸ್ಯೆ ತಲೆದೋರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳನ್ನು ಕೇಳುವಿರಿ. ಹೂಡಿಕೆ ವ್ಯವಹಾರಗಳನ್ನು ಮಾಡುವುದು ಬೇಡ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಭವಿಷ್ಯದ ಕುರಿತಾಗಿ ಆಲೋಚನೆ ಮಾಡುವಿರಿ. ಜೀವನದಲ್ಲಿ ಅಭದ್ರತೆಯು ಕಾಡಬಹುದು.ಯಾವುದನ್ನು ಅತಿಯಾಗಿ ಆಲೋಚಿಸಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ. ಹೂಡಿಕೆ, ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 9

Horoscope Today

ಮಕರ: ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯದಲ್ಲಿ ಕೊಂಚ ಏರು-ಪೇರಾಗಲಿದೆ. ಕೆಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಹಿಂದೆ ನೀಡಿದ ಹಣವು ಮರಳುವ ಸಾಧ್ಯತೆ ಇದೆ. ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಉತ್ಸಾಹದಿಂದ ಕಾರ್ಯ ಸಿದ್ಧಿ. ಅಗತ್ಯವಸ್ತುಗಳ ಖರೀದಿಯು ಖರ್ಚು ಇರಲಿದೆ. ಅಮೂಲ್ಯ ವಸ್ತುಗಳ ಕುರಿತು ಲಕ್ಷ ಇರಲಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅನೇಕ ಮೂಲಗಳಿಂದ ಹಣಕಾಸಿನ ಹರಿವು ಹೆಚ್ಚಳಗೊಳ್ಳಲಿದೆ. ದೀರ್ಘಕಾಲದ ಆಲೋಚನೆಯಿಂದ ದೂರವಾಗುವ ಸಾಧ್ಯತೆ ಇದೆ. ಮಾನಸಿಕ ನೆಮ್ಮದಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರುವುದು. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಧಾರ್ಮಿಕ

Rayara Aradhane 2024 : ಏಕಾಏಕಿ ಸುರಿದ ಮಳೆ; ಭಕ್ತರಿಗೆ ಮಠದ ಪ್ರಾಕಾರದಲ್ಲಿ ಮಲಗಲು ವ್ಯವಸ್ಥೆ ಮಾಡಿಕೊಟ್ಟ ಮಂತ್ರಾಲಯ ಶ್ರೀಗಳು

Rayara Aradhane 2024 :

VISTARANEWS.COM


on

Rayara Aradhane 2024
Koo

ಮಂತ್ರಾಲಯ : ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಸೋಮವಾರ ರಾತ್ರಿ ಏಕಾಏಕಿ ಭರ್ಜರಿ ಮಳೆಯಾಗಿದೆ. ಅಂತೆಯೇ ಪುಣ್ಯ ಕ್ಷೇತ್ರವಾದ ಮಂತ್ರಾಲಯದಲ್ಲೂ ಏಕಾಏಕಿ ಭಾರೀ ಪ್ರಮಾಣದಲ್ಲಿ ಮಳೆ ಬಂದಿದೆ. ಇದರಿಂದಾಗಿ ರಾಯರ ಆರಾಧನೆಗೆ (Rayara Aradhane 2024) ಬಂದಿದ್ದ ಭಕ್ತರಿಗೆ ಸಮಸ್ಯೆ ಉಂಟಾಗಿದೆ. ಅವರೆಲ್ಲರಿಗೂ ಮಂತ್ರಾಲಯದ ಶ್ರೀ ಸುಬುಧೇಂದ್ರ ತೀರ್ಥರು ಮಠದ ಪ್ರಾಕಾರದಲ್ಲಿ ಮಲಗಲು ಅವಕಾಶ ಮಾಡಿಕೊಟ್ಟು ಭಕ್ತರ ಪಾಲಿಗೆ ಆಪದ್ಬಾಂಧವರೆನಿಸಿಕೊಂಡಿದ್ದಾರೆ.

ಆಗಸ್ಟ್‌ 20ರಿಂದ ಮಂತ್ರಾಲಯದಲ್ಲಿ 353ನೇ ಗುರುರಾಯರ ಆರಾಧಾನ ಮಹೋತ್ಸವ ಆಯೋಜನೆಗೊಂಡಿದೆ. ಇಂದು ಪೂರ್ವಾರಾಧನೆ ನಡೆಯಲಿದೆ. ಹೀಗಾಗಿ ದೊಡ್ಡ ಪ್ರಮಾಣದ ಭಕ್ತರು ಮಂತ್ರಾಲಯಕ್ಕೆ ಸೋಮವಾರ ರಾತ್ರಿಯೇ ಆಗಮಿಸಿದ್ದರು. ಅವರಲ್ಲಿ ಕೊಠಡಿ ಪಡೆಯದವರು ಮಠದ ಕಾರಿಡಾರ್‌ನಲ್ಲಿಯೇ ಮಲಗಿ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ರಾತ್ರಿ ವೇಳೆ ಏಕಾಏಕಿ ಮಳೆ ಸುರಿದಿದೆ.

ಮಳೆ ಸುರಿಯುತ್ತಿರುವ ಮತ್ತು ಭಕ್ತರು ಸಂಕಷ್ಟದಲ್ಲಿರುವ ವಿಷಯ ತಿಳಿಸದ ಸುಬುಧೇಂದ್ರ ಶ್ರೀಗಳು ತಕ್ಷಣ ಅಲ್ಲಿಗೆ ಬಂದಿದ್ದು ಮಳೆಯಲ್ಲಿ ನೆನೆಯುತ್ತಿದ್ದ ಭಕ್ತರಿಗೆ ಮಠದ ಪ್ರಾಕಾರ ಹಾಗೂ ಪ್ರವಚನ ಮಂಟಪದಲ್ಲಿ ಉಳಿದುಕೊಳ್ಳುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ತಮ್ಮ ಸಮಸ್ಯೆಗೆ ತಕ್ಷಣವೇ ಸ್ಪಂದಿಸಿದ ಶ್ರೀಗಳಿಗೆ ಭಕ್ತರು ಅಪಾರ ಗೌರವ ಸಲ್ಲಿಸಿದ್ದಾರೆ.

ಗುರುಗಳ ಜೀವನ ಹೇಗಿತ್ತು, ಸಂದೇಶ ಏನಾಗಿತ್ತು?

ಮಂತ್ರಾಲಯ ಗುರು (Mantralaya guru) ರಾಘವೇಂದ್ರ ಸ್ವಾಮಿಗಳ (Rayara Aradhane 2024) 353ನೇ ಆರಾಧನಾ ಮಹೋತ್ಸವ (Raghavendra Aradhana Mahotsava) ಮಂಗಳವಾರದಿಂದ ಮೂರು ದಿನಗಳ ಕಾಲ ನಡೆಯಲಿದೆ. ಗುರುಗಳು ಬೃಂದಾವನ ಪ್ರವೇಶಿಸಿದ ಈ ದಿನವನ್ನು ದೇಶ, ವಿದೇಶಗಳಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಆಗಸ್ಟ್ 20ರಂದು ಪೂರ್ವಾರಾಧನೆ, 21ರಂದು ಮಧ್ಯ ಆರಾಧನೆ ಮತ್ತು 22ರಂದು ಉತ್ತರಾರಾಧನೆ ನಡೆಯಲಿದೆ.

16ನೇ ಶತಮಾನದ ಸಂತರು ಮತ್ತು ಗುರುಗಳಾದ ಶ್ರೀ ರಾಘವೇಂದ್ರ ಸ್ವಾಮಿಗಳು ವೈಷ್ಣವ ಧರ್ಮವನ್ನು ಪ್ರತಿಪಾದಿಸಿದ್ದು, ಮಧ್ವಾಚಾರ್ಯರ ದ್ವೈತ ತತ್ತ್ವವನ್ನು ಜನಪ್ರಿಯಗೊಳಿಸಿದರು. ಗುರುಗಳು ಬೃಂದಾವನ ಪ್ರವೇಶಿಸಿರುವ ಕ್ಷೇತ್ರವಾಗಿರುವ ಮಂತ್ರಾಲಯದಲ್ಲಿ ಗುರುಗಳ ಆರಾಧನೆ ಆಗಸ್ಟ್ 21ರಂದು ನಡೆಯಲಿದೆ.
ಗುರುಗಳ ಆರಾಧನೆ ಎಂದರೇನು?

ರಾಘವೇಂದ್ರ ಸ್ವಾಮಿ ಆರಾಧನೆ ಎಂದರೆ ರಾಯರು ಜೀವಂತವಾಗಿ ಬೃಂದಾವನವನ್ನು ಪ್ರವೇಶಿಸಿರುವ ದಿನ. ದೇಶ ವಿದೇಶಗಳಲ್ಲಿ ಆಚರಿಸಲ್ಪಡುವ ಗುರುಗಳ ಆರಾಧನೆಯು ಹೆಚ್ಚಿನ ಮಠಗಳು ಮತ್ತು ಸಂಸ್ಥೆಗಳಲ್ಲಿ ಪೂರ್ವಾರಾಧನೆಯಿಂದ ಪ್ರಾರಂಭವಾಗುತ್ತದೆ. ಇದನ್ನು ವಾರ್ಷಿಕವಾಗಿ ಶ್ರಾವಣ ಕೃಷ್ಣ ಪಕ್ಷ ದ್ವಿತೀಯ ಅಥವಾ ಕರ್ನಾಟಕದಲ್ಲಿ ಅನುಸರಿಸುವ ಸಾಂಪ್ರದಾಯಿಕ ಹಿಂದೂ ಚಂದ್ರನ ಕ್ಯಾಲೆಂಡರ್ ಪ್ರಕಾರ ಶ್ರಾವಣ ಮಾಸದಲ್ಲಿ ಚಂದ್ರನ ಕ್ಷೀಣಿಸುತ್ತಿರುವ ಎರಡನೇ ದಿನದಂದು ಆಚರಿಸಲಾಗುತ್ತದೆ.

ರಾಘವೇಂದ್ರ ಸ್ವಾಮಿಯು ವಿಷ್ಣುವಿನ ಶ್ರೇಷ್ಠ ಭಕ್ತರಾಗಿದ್ದರು. 1621 ರಿಂದ 1671ರವರೆಗೆ ಅವರು ಶ್ರೀ ಮಧ್ವಾಚಾರ್ಯರು ಸ್ಥಾಪಿಸಿದ ಶ್ರೀ ಮಠದ ಮುಖ್ಯಸ್ಥರಾಗಿದ್ದರು. ತಮ್ಮ ಜೀವನದಲ್ಲಿ ಹಲವಾರು ಪವಾಡಗಳನ್ನು ನಡೆಸಿರುವ ಅವರು ಮಧ್ವಾಚಾರ್ಯರ ಬೋಧನೆಗಳ ಮೇಲೆ ಹಲವಾರು ಭಜನೆ ಮತ್ತು ವ್ಯಾಖ್ಯಾನಗಳನ್ನು ರಚಿಸಿದ್ದಾರೆ. ಗುರು ಶ್ರೀ ರಾಘವೇಂದ್ರ ಸ್ವಾಮಿಗಳು 1671 ರಲ್ಲಿ ಸಮಾಧಿಯನ್ನು ಪ್ರವೇಶಿಸದರು. ಆವರ ಸಮಾಧಿ ಸ್ಥಳವನ್ನು ಬೃಂದಾವನ ಎಂದು ಕರೆಯಲಾಗುತ್ತದೆ. ಇದು ಮಂತ್ರಾಲಯದಲ್ಲಿದೆ.
ಮಂತ್ರಾಲಯದಲ್ಲಿ ಅದ್ಧೂರಿ ಆಚರಣೆ

ಗುರುಗಳ ಆರಾಧನೆಯನ್ನು ಮಂತ್ರಾಲಯದಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈ ಹಬ್ಬವನ್ನು ಮಹಾ ಆರಾಧನೆ ಎಂದೂ ಕರೆಯಲಾಗುತ್ತದೆ. ಈ ಸಂದರ್ಭದಲ್ಲಿ, ಮಠದ ಸಂಕೀರ್ಣವನ್ನು ಹಾಗೂ ಮಂತ್ರಾಲಯ ಪಟ್ಟಣವನ್ನು ಸುಂದರವಾಗಿ ಅಲಂಕರಿಸಲಾಗುತ್ತದೆ. ಗುರುಗಳ ಮಹಾ ಆರಾಧನೆಯ ಅಂಗವಾಗಿ ನಡೆಯುವ ಮಹಾರಥೋತ್ಸವದಲ್ಲಿ ದೇಶ ವಿದೇಶಗಳಿಂದ ಸಾವಿರಾರು ಭಕ್ತರು ಪಾಲ್ಗೊಳ್ಳುತ್ತಾರೆ.

ಇದನ್ನೂ ಓದಿ: Raichur News : ಉಸಿರಾಡುತ್ತಿವೆ ಮುಸ್ಲಿಂ ಧರ್ಮಗುರುಗಳ ಗೋರಿಗಳು, ಪವಾಡ ಎಂದ ಭಕ್ತರು

ವಿವಿಧ ಆಚರಣೆಗಳು

ಕಲಿಯುಗದ ಕಾಮಧೇನು ಎಂದೇ ಜಗತ್ಪ್ರಸಿದ್ಧಿ ಪಡೆದ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಮಂತ್ರಾಲಯದಲ್ಲಿ ಭಾನುವಾರವೇ ಆರಂಭಗೊಂಡಿದ್ದು, ಆಗಸ್ಟ್ 24ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ರಾಯರ ಉತ್ಸವ ಮೂರ್ತಿಯ ಬಲಿ, ರಥೋತ್ಸವ, ಗೋ ಪೂಜೆ, ಗಜಪೂಜೆ ಮತ್ತಿತರ ಪೂಜೆಗಳು ನಡೆಯುತ್ತವೆ. ಇದಕ್ಕೂ ಮೊದಲು ಧ್ವಜಾರೋಹಣ ನಡೆಸಿ ಮಹಾರಥೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ.

ಪೂರ್ವ ಆರಾಧನಾ ದಿನದಂದು ಸಿಂಹ ವಾಹನ ಸವಾರಿ, ಮಧ್ಯ ಆರಾಧನಾ ದಿನದಂದು ಮಹಾ ಪಂಚಾಮೃತ ಅಭಿಷೇಕ, ಉತ್ತರ ಆರಾಧನಾ ದಿನದಂದು ಸ್ವರ್ಣ ರಥೋತ್ಸವವನ್ನು ನಡೆಸಲಾಗುತ್ತದೆ. ಮಠವು ಪ್ರತಿ ವರ್ಷ ಸಮಾಜ ಸೇವೆ ಮಾಡಿದ ಗಣ್ಯರಿಗೆ ಶ್ರೀ ರಾಘವೇಂದ್ರ ಅನುಗ್ರಹ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತದೆ. ಈ ಸಂದರ್ಭದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿವಿಧ ಸಾಂಸ್ಕೃತಿಕ ಪ್ರದರ್ಶನಗಳನ್ನೂ ನಡೆಸಲಾಗುತ್ತದೆ.

Continue Reading

ಧಾರ್ಮಿಕ

Vastu Tips: ಸ್ನಾನಗೃಹದಲ್ಲಿ ಯಾವ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ!

ವಾಸ್ತು ಶಾಸ್ತ್ರವು (Vastu Tips) ಹಿಂದೂ ಧರ್ಮದ ಪ್ರಮುಖ ಭಾಗವಾಗಿದೆ. ಇದು ಭಾರತೀಯರ ಪ್ರಾಚೀನ ವಿಜ್ಞಾನವು ಹೌದು. ಜೀವನದಲ್ಲಿ ನಕಾರಾತ್ಮಕತೆಯನ್ನು ತೊಡೆದುಹಾಕಲು ಮತ್ತು ಸಕಾರಾತ್ಮಕತೆಯನ್ನು ಹೆಚ್ಚಿಸಲು ಜೀವನದ ವಿವಿಧ ಅಂಶಗಳ ಕುರಿತು ಮಾರ್ಗಸೂಚಿಗಳನ್ನು ಇದು ಒದಗಿಸುತ್ತದೆ. ಕೆಲವು ಪ್ರಾಚೀನ ತತ್ತ್ವ ಗಳನ್ನು ಅನುಸರಿಸುವ ಮೂಲಕ ಮನೆಯಲ್ಲಿ ಸಮೃದ್ಧಿಯನ್ನು ಉತ್ತೇಜಿಸಬಹುದು ಮತ್ತು ದುರದೃಷ್ಟವನ್ನು ತಪ್ಪಿಸಬಹುದು.

VISTARANEWS.COM


on

By

Vastu Tips
Koo

ನಾವು ಮಾಡುವ ಕೆಲವು ಸಣ್ಣಪುಟ್ಟ ತಪ್ಪುಗಳು ಮನೆಯಲ್ಲಿ ವಾಸ್ತು (Vastu Tips) ದೋಷವನ್ನು ಉಂಟು ಮಾಡಿ ನಕಾರಾತ್ಮಕತೆಯ (Negativity) ಪ್ರವೇಶಕ್ಕೆ ಅನುಮತಿ ಮಾಡಿಕೊಡಬಹುದು. ಇನ್ನು ಕೆಲವು ನಿಯಮಗಳ ಪಾಲನೆಯಿಂದ ವಾಸ್ತು ದೋಷವನ್ನು (vastu dosha) ದೂರ ಮಾಡಬಹುದು ಮಾತ್ರವಲ್ಲ, ಮನೆಯೊಳಗೇ ಸುಖ, ಶಾಂತಿ, ಸಮೃದ್ಧಿ ಹೆಚ್ಚಳಕ್ಕೆ ಕಾರಣವಾಗಬಹುದು.

ವಾಸ್ತು ಶಾಸ್ತ್ರವು ಹಿಂದೂ ಧರ್ಮದ ಪ್ರಮುಖ ಭಾಗವಾಗಿದೆ. ಇದು ಭಾರತೀಯರ ಪ್ರಾಚೀನ ವಿಜ್ಞಾನವು ಹೌದು. ಜೀವನದಲ್ಲಿ ನಕಾರಾತ್ಮಕತೆಯನ್ನು ತೊಡೆದುಹಾಕಲು ಮತ್ತು ಸಕಾರಾತ್ಮಕತೆಯನ್ನು ಹೆಚ್ಚಿಸಲು ಜೀವನದ ವಿವಿಧ ಅಂಶಗಳ ಕುರಿತು ಮಾರ್ಗಸೂಚಿಗಳನ್ನು ಇದು ಒದಗಿಸುತ್ತದೆ.

ಕೆಲವು ಪ್ರಾಚೀನ ತತ್ತ್ವ ಗಳನ್ನು ಅನುಸರಿಸುವ ಮೂಲಕ ಮನೆಯಲ್ಲಿ ಸಮೃದ್ಧಿಯನ್ನು ಉತ್ತೇಜಿಸಬಹುದು ಮತ್ತು ದುರದೃಷ್ಟವನ್ನು ತಪ್ಪಿಸಬಹುದು. ಮನೆಯ ಸ್ನಾನಗೃಹದಲ್ಲಿ ಮಾಡುವ ಕೆಲವು ತಪ್ಪುಗಳು ನಮ್ಮ ಅದೃಷ್ಟದ ಮೇಲೆ ಪರಿಣಾಮ ಬೀರುತ್ತದೆ. ಅವು ಯಾವುದು, ಅವುಗಳಿಗೆ ವಾಸ್ತು ಶಾಸ್ತ್ರದಲ್ಲಿ ಸೂಚಿಸಿರುವ ಪರಿಹಾರಗಳೇನು ಎನ್ನುವ ಕುರಿತು ಇಲ್ಲಿದೆ ಮಾಹಿತಿ.


ಖಾಲಿ ಬಕೆಟ್ ಇಟ್ಟುಕೊಳ್ಳಬೇಡಿ

ಖಾಲಿ ಬಕೆಟ್ ಅನ್ನು ಎಂದಿಗೂ ಸ್ನಾನಗೃಹದಲ್ಲಿ ಇಡಬಾರದು. ನೆರಳು ಗ್ರಹವಾದ ರಾಹುವು ಖಾಲಿ ಬಕೆಟ್‌ನಲ್ಲಿ ವಾಸಿಸುತ್ತಾನೆ. ವಾಸ್ತು ದೋಷ ಮತ್ತು ನಕಾರಾತ್ಮಕತೆಯನ್ನು ಇದು ಉತ್ತೇಜಿಸುತ್ತದೆ ಎಂದು ನಂಬಲಾಗಿದೆ. ಇದು ಮಾನಸಿಕ ತೊಂದರೆ ಮತ್ತು ಆರ್ಥಿಕ ನಷ್ಟ ಎರಡನ್ನೂ ಉಂಟುಮಾಡಬಹುದು.

Vastu Tips
Vastu Tips


ಒದ್ದೆಯಾದ ಬಟ್ಟೆ ಇಡಬೇಡಿ

ಬಾತ್ ರೂಮ್‌ನಲ್ಲಿ ಒದ್ದೆಯಾದ ಬಟ್ಟೆಗಳನ್ನು ಬಿಡುವುದು ನಕಾರಾತ್ಮಕ ಶಕ್ತಿಯನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ. ಇದು ಸೂರ್ಯ ದೋಷವನ್ನು ಉಂಟುಮಾಡುತ್ತದೆ. ಜೀವನದಲ್ಲಿ ಪ್ರಗತಿಗೆ ಅಡ್ಡಿಯಾಗುತ್ತದೆ.


ಒಡೆದ ಕನ್ನಡಿ ಇಡಬೇಡಿ

ಸ್ನಾನ ಗೃಹದಲ್ಲಿ ಮುರಿದ ಕನ್ನಡಿಗಳು ಗಂಭೀರವಾದ ವಾಸ್ತು ದೋಷಗಳನ್ನು ಉಂಟು ಮಾಡಬಹುದು. ಇದು ಆರ್ಥಿಕ ತೊಂದರೆಗಳಿಗೂ ಕಾರಣವಾಗಬಹುದು. ಆರ್ಥಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಲು ತಕ್ಷಣವೇ ಬಾತ್ ರೂಮ್ ನಿಂದ ಮುರಿದ ಕನ್ನಡಿಗಳನ್ನು ತೆಗೆದುಹಾಕಿ.


ನೀರು ಸೋರಿಕೆಯಾಗದಿರಲಿ

ಸ್ನಾನಗೃಹದಲ್ಲಿ ಯಾವುದೇ ಸೋರಿಕೆ ಅಥವಾ ತೊಟ್ಟಿಕ್ಕುವ ನಲ್ಲಿಗಳಿದ್ದರೆ ಕೂಡಲೇ ಸರಿಪಡಿಸಿ. ಯಾಕೆಂದರೆ ನೀರಿನ ವ್ಯರ್ಥ ಅಥವಾ ಸೋರಿಕೆಯು ಚಂದ್ರನ ದೋಷವನ್ನು ಉಂಟು ಮಾಡುತ್ತದೆ ಮತ್ತು ಲಕ್ಷ್ಮಿ ದೇವಿಯನ್ನು ಕೋಪಗೊಳಿಸುತ್ತದೆ. ಇದು ಮಾನಸಿಕ ಒತ್ತಡ ಮತ್ತು ಆರ್ಥಿಕ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ಇದನ್ನೂ ಓದಿ: Vastu Tips: ಮಲಗುವ ದಿಕ್ಕು ಸತಿಪತಿ ನಡುವಿನ ವಿರಸಕ್ಕೆ ಕಾರಣ ಆಗಬಹುದು!


ಬಕೆಟ್ ಬಣ್ಣ

ಬಾತ್ ರೂಮ್‌ನಲ್ಲಿ ಕಪ್ಪು ಬಕೆಟ್ ಅನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಯಾಕೆಂದರೆ ಇದು ಮನೆಗೆ ತೊಂದರೆಗಳನ್ನು ತರುತ್ತದೆ. ನೀಲಿ ಬಕೆಟ್ ಅನ್ನು ಹೆಚ್ಚು ಮಂಗಳಕರವೆಂದು ಪರಿಗಣಿಸಲಾಗುತ್ತದೆ.

Continue Reading
Advertisement
Namma Metro green Line
ಬೆಂಗಳೂರು7 mins ago

Namma Metro: ಇಂದೂ ಈ ಮಾರ್ಗದಲ್ಲಿ ನಮ್ಮ ಮೆಟ್ರೋ ಇಲ್ಲ, ಪ್ರಯಾಣಿಕರೇ ಗಮನಿಸಿ

Valmiki Corporation Scam
ಪ್ರಮುಖ ಸುದ್ದಿ34 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣದ ಚಾರ್ಜ್‌ಶೀಟ್‌ ಸಲ್ಲಿಕೆ, ನಾಗೇಂದ್ರಗೆ ಕ್ಲೀನ್‌ ಚಿಟ್!‌

ರಾಜಮಾರ್ಗ ಅಂಕಣ aruna shanubhag
ಅಂಕಣ1 hour ago

ರಾಜಮಾರ್ಗ ಅಂಕಣ: ನೆನಪಾದಳು ಅರುಣಾ ಶಾನುಭಾಗ್!‌

Eye Care Food
Latest2 hours ago

Eye Care Food: ನೀವು ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿದ್ದೀರಾ? ಈ ಆಹಾರಗಳನ್ನು ಸೇವಿಸಿ

karnataka weather forecast
ಮಳೆ2 hours ago

Karnataka Weather : ಕರಾವಳಿಯಲ್ಲಿ ರಭಸವಾಗಿ ಬೀಸಲಿದೆ ಗಾಳಿ; ಸಾಧಾರಣ ಮಳೆ ಸಾಧ್ಯತೆ

Dina Bhavishya
ಭವಿಷ್ಯ/ಧಾರ್ಮಿಕ3 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗ ಮಾಡ್ಬೇಡಿ; ತರಾತುರಿಯಲ್ಲಿ ನಿರ್ಧಾರ ಕೈಗೊಳ್ಳಬೇಡಿ

Kapil sibal
ದೇಶ8 hours ago

Kapil Sibal: ವೈದ್ಯೆ ಕೊಲೆ ಕೇಸ್‌- ಸುಪ್ರೀಂಕೋರ್ಟ್‌ ವಿಚಾರಣೆ ವೇಳೆ ಎಲ್ಲರೆದುರು ಜೋರಾಗಿ ನಕ್ಕ ಕಪಿಲ್‌ ಸಿಬಲ್‌-ಭಾರೀ ಆಕ್ರೋಶ ವ್ಯಕ್ತ

Bengaluru News
ಬೆಂಗಳೂರು8 hours ago

Bengaluru News: ಬೆಂಗಳೂರಿನಲ್ಲಿ ರಾಷ್ಟ್ರೀಯ ಯುವ ಸಂಸತ್ತು ಸ್ಪರ್ಧೆ

Al-Qaeda terror module
ದೇಶ9 hours ago

Al-Qaeda Terror module: ಮೂರು ರಾಜ್ಯಗಳಲ್ಲಿ ಭರ್ಜರಿ ಉಗ್ರರ ಬೇಟೆ; 11ಶಂಕಿತರು ಅರೆಸ್ಟ್‌

Pralhad Joshi
ಬೆಂಗಳೂರು9 hours ago

Pralhad Joshi: ಮುಂಬೈ, ಕೋಲ್ಕತಾದಲ್ಲಿ ಇವಿ ಬ್ಯಾಟರಿ ಚಾರ್ಜರ್ ಘಟಕಕ್ಕೆ ಬೆಂಗಳೂರು ಮಾದರಿ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌