ನವದೆಹಲಿ: ಅಯೋಧ್ಯೆಯ ರಾಮ ಮಂದಿರದಲ್ಲಿ (Ayodhya Ram Mandir) ಜನವರಿ 22ರಂದು ನಡೆಯಲಿರುವ ಪ್ರಾಣ ಪ್ರತಿಷ್ಠೆ (Pran-Pratishta) ಕಾರ್ಯಕ್ರಮಕ್ಕೆ ದಿನಗಣನೆ ಶುರುವಾಗಿದ್ದು, ಭರದಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಮಧ್ಯೆ, ಮಂದಿರದ ಉಳಿದ ಕೆಲಸವನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುತ್ತಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ (Sri Ram Janmabhoomi Tirath Kshetra Trust) ಕಳೆದ ಕೆಲವು ವಾರಗಳಿಂದ ರಾಮ ಮಂದಿರ ನಿರ್ಮಾಣದ ಅನೇಕ ಫೋಟೋಗಳನ್ನು ಸೋಷಿಯ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದೆ. ಈಗ ರಾಮ ಮಂದಿರದ ಮೊದಲನೇ ಮಹಡಿಯ (First Floor of Ram mandir) ನಿರ್ಮಾಣ ಕಾರ್ಯದ ಫೋಟೋಗಳನ್ನು ಟ್ರಸ್ಟ್ ಶುಕ್ರವಾರ ಷೇರ್ ಮಾಡಿದೆ.
Shri Ram Janmabhoomi Mandir first floor – Construction Progress.
— Shri Ram Janmbhoomi Teerth Kshetra (@ShriRamTeerth) December 15, 2023
श्री राम जन्मभूमि मंदिर प्रथम तल – निर्माण की वर्तमान स्थिति pic.twitter.com/Cz9zUS5pLe
ಶ್ರೀ ರಾಮ ಜನ್ಮಭೂಮಿ ಮಂದಿರ ಮೊದಲ ಮಹಡಿ ನಿರ್ಮಾಣ ಪ್ರಗತಿಯಲ್ಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಎಕ್ಸ್ ವೇದಿಕೆಯಲ್ಲಿ ಬರೆದುಕೊಂಡು, ಜತೆಗೆ ಫೋಟೋಗಳನ್ನು ಷೇರ್ ಮಾಡಿದೆ. ಈ ಫೋಟೋಗಳು ಅದ್ಭುತವಾಗಿದ್ದು, ಮೊದಲ ಮಹಡಿಯ ನಿರ್ಮಾಣ ಕಾರ್ಯವು ಭರದಿಂದ ಸಾಗಿರುವುದನ್ನು ಗುರುತಿಸಬುಹದಾಗಿದೆ. ಜನವರಿ 22ರಂದು ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿರುವುದರಿಂದ ಉಳಿದಿರುವ ನಿರ್ಮಾಣ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುತ್ತಿದೆ.
ಇದಕ್ಕೂ ಮೊದಲು ರಾಮ ಮಂದಿರದ ಗರ್ಭ ಗುಡಿಯ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು. ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಅವರು ಈ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಷೇರ್ ಮಾಡಿಕೊಂಡಿದ್ದರು. ರಾಮನನ್ನು ಪ್ರತಿಷ್ಠಾಪಿಸುವ ಪೀಠ ಮತ್ತು ಗರ್ಭಗುಡಿಯನ್ನು ಫೋಟೋದಲ್ಲಿಕಾಣಬಹುದು.
ಭಗವಾನ್ ಶ್ರೀ ರಾಮ ಅವರ ಗರ್ಭಗುಡಿ ಬಹುತೇಕ ಸಿದ್ಧವಾಗಿದೆ. ಇತ್ತೀಚೆಗೆ ಲೈಟಿಂಗ್-ಫಿಟ್ಟಿಂಗ್ ಕೆಲಸವೂ ಪೂರ್ಣಗೊಂಡಿದೆ. ಕೆಲವು ಛಾಯಾಚಿತ್ರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ ಎಂದು ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಎಕ್ಸ್ ವೇದಿಕೆಯಲ್ಲಿ ಬರೆದುಕೊಂಡಿದ್ದರು. ಮತ್ತೊಂದೆಡೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಶುಕ್ರವಾರ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಯ ಫೋಟೋಗಳನ್ನು ಬಿಡುಗಡೆ ಮಾಡಿತ್ತು.
ರಾಮ ಜನ್ಮಭೂಮಿ ದೇವಸ್ಥಾನದಲ್ಲಿ, ಅಯೋಧ್ಯೆಯ ಮೂರು ಸ್ಥಳಗಳಲ್ಲಿ ಭಗವಾನ್ ರಾಮನ ಐದು ವರ್ಷದ ಮಗುವಿನ ರೂಪವನ್ನು ಚಿತ್ರಿಸುವ 4’3″ ವಿಗ್ರಹವನ್ನು ನಿರ್ಮಿಸಲಾಗುತ್ತಿದೆ. ಮೂವರು ಕುಶಲಕರ್ಮಿಗಳು ಮೂರು ವಿಭಿನ್ನ ಶಿಲೆಗಳಯಲ್ಲಿ ವಿಗ್ರಹವನ್ನು ನಿರ್ಮಿಸುತ್ತಿದ್ದಾರೆ. ಈ ವಿಗ್ರಹಗಳು 90 ಪ್ರತಿಶತದಷ್ಟು ಸಿದ್ಧವಾಗಿವೆ ಮತ್ತು ಅಂತಿಮ ಕಾರ್ಯವು ಸುಮಾರು ಒಂದು ವಾರ ತೆಗೆದುಕೊಳ್ಳುತ್ತದೆ ಎಂದು ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಅವರು ಈ ಹಿಂದೆ ಹೇಳಿದ್ದರು.
प्रभु श्री रामलला का गर्भ गृह स्थान लगभग तैयार है। हाल ही में लाइटिंग-फिटिंग का कार्य भी पूर्ण कर लिया गया है। आपके साथ कुछ छायाचित्र साझा कर रहा हूँ। pic.twitter.com/yX56Z2uCyx
— Champat Rai (@ChampatRaiVHP) December 9, 2023
ವಿಗ್ರಹವನ್ನು ನೆಲ ಮಹಡಿಯಲ್ಲಿರುವ ‘ಗ್ರಹಗೃಹ’ದಲ್ಲಿ ಪ್ರತಿಷ್ಠಾಪಿಸಲಾಗುವುದು. ದೇವಾಲಯದ ನೆಲ ಮಹಡಿ ಬಹುತೇಕ ಸಿದ್ಧವಾಗಿದೆ. ಹಾಗಾಗಿ ‘ಪ್ರಾಣ-ಪ್ರತಿಷ್ಠಾ’ (ಪ್ರತಿಷ್ಠಾಪನಾ ಸಮಾರಂಭ)ಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಅವರು ಚಂಪತ್ ರಾಯ್ ಅವರು ತಿಳಿಸಿದ್ದಾರೆ. ಮುಂದಿನ ತಿಂಗಳು ಜನವರಿ 22ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ.
ಪ್ರಾಣ-ಪ್ರತಿಷ್ಠೆ ಸಮಾರಂಭದ ವೈದಿಕ ವಿಧಿವಿಧಾನಗಳು ಜನವರಿ 16 ರಂದು ಮುಖ್ಯ ಸಮಾರಂಭಕ್ಕೆ ಒಂದು ವಾರ ಮುಂಚಿತವಾಗಿ ಪ್ರಾರಂಭವಾಗುತ್ತವೆ. ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಲಕ್ಷ್ಮೀಕಾಂತ ದೀಕ್ಷಿತ್ ಮುಖ್ಯ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸುಮಾರು 10ರಿಂದ 15 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಈ ಸುದ್ದಿಯನ್ನೂ ಓದಿ: Ram Mandir: ಅಯೋಧ್ಯೆ ರಾಮ ಮಂದಿರದಲ್ಲಿ ಅದ್ಭುತ ಕಲಾಕೃತಿಗಳು!