Site icon Vistara News

ಬೆಂಗಾಲಿ ಶಾರದಾ ಉತ್ಸವಕ್ಕೆ ನಟಿ ಪ್ರಿಯಾಂಕಾ ಉಪೇಂದ್ರ ಅದ್ಧೂರಿ ಚಾಲನೆ

ಬೆಂಗಳೂರು/ಆನೇಕಲ್‌: ಆಯುಧ ಪೂಜಾ ಹಾಗೂ ವಿಜಯದಶಮಿ ಪ್ರಯುಕ್ತ ಬೇಗೂರು ಬೆಂಗಾಲಿ ಕಲ್ಚರಲ್ ಅಸೋಸಿಯೇಷನ್ ವತಿಯಿಂದ ಶಾರದಾ ಉತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ರಾಮಕೃಷ್ಣ ಮಿಷನ್‌ನ ಸ್ವಾಮಿ ಆತ್ಮವಿದಾನಂದಜಿ ಮಹಾರಾಜ್ ಹಾಗೂ ನಟಿ ಪ್ರಿಯಾಂಕಾ ಉಪೇಂದ್ರ ಚಾಲನೆ ನೀಡಿದರು.

ನಟಿ ಪ್ರಿಯಾಂಕಾ ಉಪೇಂದ್ರ

ಬೆಂಗಳೂರಿನ ಅಕ್ಷಯ ನಗರದ ಡಿಎಲ್ಎಫ್ ನ್ಯೂಟೌನ್‌ನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ 5 ದಿನಗಳ ಶಾರದಾ ಉತ್ಸವದ ದುರ್ಗಾ ಪೂಜಾ ಕಾರ್ಯಕ್ರಮ ನಡೆಯಲಿದೆ. ಮೊದಲನೇಯ ದಿನ ಮಹಾಪಂಚಮಿ ಪೂಜೆ, ಪ್ರತಿದಿನ ಬೆಳಗ್ಗೆ 8 ಗಂಟೆಯಿಂದ 2 ಗಂಟೆಯವರೆಗೆ ದುರ್ಗಾದೇವಿಗೆ ವಿಶೇಷ ಪೂಜೆ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಆ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.

ಸುತ್ತಮುತ್ತಲಿನ ಸಾವಿರಾರು ಸಂಖ್ಯೆಯ ಭಕ್ತರು ಶಾರದಾ ಉತ್ಸವಕ್ಕೆ ಸಾಕ್ಷಿಯಾದರು. ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ನಟಿ ಪ್ರಿಯಾಂಕಾ ಉಪೇಂದ್ರ, ವಿಜಯದಶಮಿ ದಸರಾವನ್ನು ಎಲ್ಲೆಡೆ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತದೆ. ಬೆಂಗಾಲಿ ಅಸೋಸಿಯೇಷನ್ ವತಿಯಿಂದ ಮೊದಲ ಬಾರಿಗೆ ಶಾರದಾ ಉತ್ಸವದ ದುರ್ಗಾ ದೇವಿ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಐದು ದಿನಗಳ ಕಾಲ ಈ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, ದೇವಿ ಕೃಪೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದುರ್ಗಾ ದೇವಿಯ ದರ್ಶನವನ್ನು ಪಡೆಯಬಹುದು ಎಂದರು.

ಇದನ್ನೂ ಓದಿ | ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿ ದಸರಾ ಡ್ಯಾನ್ಸ್‌, ಪ್ರಯಾಣಿಕರಿಗೆ ಮಸ್ತ್ ಮನರಂಜನೆ!

Exit mobile version