ಬೆಂಗಳೂರು: ಶ್ರೀ ಆದಿಚುಂಚನಗಿರಿ (Adichunchanagiri) ಮಹಾಸಂಸ್ಥಾನ ಮಠದ 71ನೇ ಪೀಠಾಧ್ಯಕ್ಷರಾಗಿ ಸಿದ್ಧ ಸಿಂಹಾಸನಾರೋಹಣ ಮಾಡಿದ್ದ ಜಗದ್ಗುರು ಪದ್ಮಭೂಷಣ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯುತ್ಸವ ಮತ್ತು 10ನೇ ವರ್ಷದ ಸಂಸ್ಮರಣಾ ಮಹೋತ್ಸವ ಕಾರ್ಯಕ್ರಮವನ್ನು ಜನವರಿ 12 ರಿಂದ ಜನವರಿ 18ರ ವರೆಗೆ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಏರ್ಪಡಿಸಲಾಗಿದೆ.
ಜಗದ್ಗುರು ಮಹಾಸ್ವಾಮೀಜಿಯವರು ಪಟ್ಟಾಭಿಷಿಕ್ತರಾದ ಕೇವಲ 39 ವರ್ಷದಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಅನೇಕ ಯೋಜನೆಗಳನ್ನು ಶ್ರೀಮಠದ ವತಿಯಿಂದ ಜಾರಿಗೆ ತಂದಿದ್ದು, ಅವರ ಸಂಸ್ಮರಣಾ ಮಹೋತ್ಸವದ ಅಂಗವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಎಂದು ಏನು ಕಾರ್ಯಕ್ರಮ?
ಶೀ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಭಕ್ತರು ಭಾಗವಹಿಸಿ ಶ್ರೀ ಗುರುದೇವತಾ ದರ್ಶನಾಶೀರ್ವಾದ ಪಡೆಯಬೇಕೆಂದು ಶೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಇದನ್ನೂ ಓದಿ| Amit shah | ಬೆಂಗಳೂರಿನ ಆದಿಚುಂಚನಗಿರಿ ಮಠಕ್ಕೆ ಅಮಿತ್ ಶಾ ಭೇಟಿ; ಸಿಎಂ ಬೊಮ್ಮಾಯಿ ಸೇರಿ ಹಲವು ಸಚಿವರು ಸಾಥ್