Astrology News Astrology conference at Dharwad successfully ended ಧಾರವಾಡದಲ್ಲಿ ಜ್ಯೋತಿಷ್ಯ ಸಮ್ಮೇಳನ ಯಶಸ್ವಿ; ಹಲವು ವಿಷಯಗಳ ಕುರಿತು ಮಹತ್ವದ ಚರ್ಚೆ - Vistara News

ಧಾರವಾಡ

ಧಾರವಾಡದಲ್ಲಿ ಜ್ಯೋತಿಷ್ಯ ಸಮ್ಮೇಳನ ಯಶಸ್ವಿ; ಹಲವು ವಿಷಯಗಳ ಕುರಿತು ಮಹತ್ವದ ಚರ್ಚೆ

Astrology News : ಧಾರವಾಡದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಸಂಸ್ಕೃತ ಪಾಠಶಾಲೆ ಪಂಚಾಂಗ ಸಮಿತಿ ಹಾಗೂ ಕರ್ನಾಟಕ ಜ್ಯೋತಿಷಿಗಳ ಒಕ್ಕೂಟ ಜಂಟಿಯಾಗಿ ಜ್ಯೋತಿಷ್ಯ ಸಮ್ಮೇಳನ ಏರ್ಪಡಿಸಿದ್ದವು.

VISTARANEWS.COM


on

hubli dharwad astrologer meet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಧಾರವಾಡ: ಜ್ಯೋತಿಷ್ಯದ ಮಹತ್ವ ತಿಳಿದುಕೊಂಡರೆ ಜೀವನದಲ್ಲಿ ಬರುವ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಧರ್ಮಶಾಸ್ತ್ರಕ್ಕೂ ಜ್ಯೋತಿಷ್ಯಕ್ಕೂ ಅವಿನಾಭಾವ ಸಂಬಂಧ ಇದೆ ಎಂದು ಧಾರವಾಡ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಸಂಸ್ಕೃತ ಪಾಠಶಾಲೆಯ ಮುಖ್ಯಾಧ್ಯಾಪಕರ, ನ್ಯಾಯ ಚೂಡಾಮಣಿ ರಾಜೇಶ್ವರ ಶಾಸ್ತ್ರಿಗಳು (Astrology News) ಹೇಳಿದ್ದಾರೆ.

ಅವರು ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಸಂಸ್ಕೃತ ಪಾಠಶಾಲೆ, ಪಂಚಾಂಗ ಸಮಿತಿ ಹಾಗೂ ಕರ್ನಾಟಕ ಜ್ಯೋತಿಷಿಗಳ ಒಕ್ಕೂಟ ಜಂಟಿಯಾಗಿ ಭಾನುವಾರ ಏರ್ಪಡಿಸಿದ್ದ ಜ್ಯೋತಿಷ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡುತ್ತಿದ್ದರು.

ಧಾರವಾಡ ಪಂಚಾಂಗ ಇಂದು ಜನಪ್ರಿಯವಾಗಿದೆ. ಇದಕ್ಕೆ ಬ್ರಹ್ಮಶ್ರೀ ವೇಣಿಮಾಧವ ಶಾಸ್ತ್ರಿಗಳು ಹಾಗೂ ಕಳಸ ದತ್ತಾತ್ರೇಯ ಶಾಸ್ತ್ರಿಗಳ ಕೊಡುಗೆ ಅಪಾರ ಎಂದು ಅವರು ಅಭಿಪ್ರಾಯಟ್ಟರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಿ.ಆರ್.ಜೋಶಿ ಮಾತನಾಡಿ, ಜ್ಯೋತಿಷ್ಯಶಾಸ್ತ್ರ ಸಾಗರದಷ್ಟು ವಿಶಾಲವಾದದ್ದು ಸೂರ್ಯ, ಚಂದ್ರ ನಕ್ಷತ್ರಗಳು ಇರುವವರಿಗೆ ಇರುವಂತದ್ದು ಅದಕ್ಕೆ ಅಂತ್ಯವೇ ಇಲ್ಲ. ಆಳವಾದ ಅಧ್ಯಯನದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲು ಪ್ರತ್ಯಕ್ಷ ಪ್ರಮಾಣವಾದುದು ಜ್ಯೋತಿಷ್ಯ ಎಂದು ತಿಳಿಸಿದರು.

ಇನ್ನೋರ್ವ ಮುಖ್ಯ ಅತಿಥಿ ಸಂಸ್ಕೃತ ಪಾಠಶಾಲೆ ಅಧ್ಯಕ್ಷ ರಾಜು ಪಾಟೀಲ್ ಕುಲಕರ್ಣಿ ಮಾತನಾಡಿ, ಜ್ಯೋತಿಷಿಗಳು ಕೇವಲ ಭವಿಷ್ಯ ನುಡಿಯುವುದು ಅಷ್ಟೇ ಅಲ್ಲ ಹಿಂದೆಲ್ಲಾ ಅವರು ಮನೋರೋಗತಜ್ಞರಾಗಿಯು ಮನಃಶಾಂತಿಗಾಗಿ ಅನೇಕ ಧಾರ್ಮಿಕ ಕ್ರಮಗಳನ್ನು ಮಾಡಿಸಿ ಸಾರ್ಥಕ ಜೀವನ ನಡೆಸುವಂತೆ ಮಾಡುತ್ತಿದ್ದರು ಎಂದರು.

ವೈಜ್ಞಾನಿಕ ಮನೋಭಾವ ಅಗತ್ಯ

ಜ್ಯೋತಿಷ್ಯ ಸಮ್ಮೇಳನನದಲ್ಲಿ ಎರಡು ಗೋಷ್ಠಿಗಳು ನಡೆದವು. ಎರಡನೇ ಗೋಷ್ಠಿಯಲ್ಲಿ ʻಜ್ಯೋತಿಷ್ಯಶಾಸ್ತ್ರ ಹಾಗೂ ವೈಜ್ಞಾನಿಕ ಚಿಂತನೆʼ ಕುರಿತು ಮಾತನಾಡಿದ ವಿದ್ವಾನ್‌ ನವೀನಶಾಸ್ತ್ರಿ ಪುರಾಣಿಕ, ʻʻಜ್ಯೋತಿಷಿಗಳು ಆಧುನಿಕತೆಗೆ ಹೊಂದಿಕೊಂಡು, ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕಿದೆ. ಮೂಲ ಪರಂಪರೆಗೆ ಧಕ್ಕೆ ಬಾರದಂತೆ ಬಂದಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲು ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದರು.

Astrology meet at Dharavad
ಸಮ್ಮೇಳನದಲ್ಲಿ ಮಾತನಾಡುತ್ತಿರುವ ವಿದ್ವಾನ್‌ ನವೀನಶಾಸ್ತ್ರಿ ಪುರಾಣಿಕ.

ಕರ್ನಾಟಕ ಜ್ಯೋತಿಷಿಗಳ ಒಕ್ಕೂಟದ ಅಧ್ಯಕ್ಷ ಪ್ರೊ. ಶ್ರೀಕಾಂತ ಮಂಗಸೂಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗೋಷ್ಠಿಗಳಲ್ಲಿ ʻಗ್ರಹಗಳ ಅವಸ್ಥಾ ಮತ್ತು ಫಲʼ ಕುರಿತು ರಮೇಶಭಟ್ಟ ಜೋಶಿ , ʻಆರೂಢ ಪ್ರಶ್ನಾ ಪದ್ಧತಿʼ ಕುರಿತು ಎಚ್.ಎಸ್.ಸುಂದರರಾಜ, ʻಪಂಚಾಂಗದ ಮಹತ್ವʼ ಕುರಿತು ಸಿ.ಆರ್.ಜೋಶಿ, ʻವೈದ್ಯನಾಥ ವಿರಚಿತ ಜಾತಕ ಪಾರಿಜಾತʼ ಕುರಿತು ಡಾ.ಚಿದಂಬರ ಟಕ್ಕಳಕಿ, ʻಈಶಾನ್ಯದ ಫಲಫಲಗಳುʼ ಕುರಿತು ಸುರೇಶ ಕೊಪ್ಪರ, ʻದ್ವಾದಶ ಭಾವಗಳ ಮಹತ್ವʼ ಕುರಿತು ರಾಮೇಶ್ವರಶಾಸ್ತ್ರಿ ಘೋರ್ಪಡೆ ಉಪನ್ಯಾಸ ನೀಡಿದರು.

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ನಂತರ ನಡೆದ ಸಮಾರೋಪದಲ್ಲಿ ಶ್ರೀ ಕ್ಷೇತ್ರ ಶಕಟಪುರ ಮಠದ ಆಸ್ಥಾನ ವಿದ್ವಾಂಸರಾದ ಮಧುಸೂದನ ಶಾಸ್ತ್ರಿ ಹಾಗೂ ವೇ.ಮೂ.ನಾಗೇಶ ಶಾಸ್ತ್ರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಇಗ್ನೋದ ನಿರ್ದೇಶಕರಾದ ಐ.ಜಿ.ಇಮ್ರಾಪುರ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪಾಠಶಾಲೆಯ ವಿದ್ಯಾರ್ಥಿಗಳಿಂದ ವೇದಘೋಷ ಜರುಗಿತು.

ಇದನ್ನೂ ಓದಿ: Adhika Masa 2023 : ಅಧಿಕ ಮಾಸದ ಲೆಕ್ಕಾಚಾರ ಹೇಗೆ? ಮಹತ್ವವೇನು?

ಪಾಠಶಾಲೆಯ ಕಾರ್ಯದರ್ಶಿ ಖ್ಯಾತ ಮನೋರೋಗ ತಜ್ಞ ಡಾ.ಆನಂದ ಹಂದಿಗೋಳ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಾದೇವಿ ದೊಡ್ಡಮನಿ ನಿರೂಪಿಸಿದರು. ಕೋವಿದಾ ವಂದಿಸಿದರು. ವೇದ ಮೂರ್ತಿ ಪ್ರಲ್ಹಾದ ಜೋಶಿ, ಬಸವರಾಜ ಕುರುಬೆಟ್, ರಂಗನಾಥ ಜೋಶಿ, ಶ್ರೀಕಾಂತ ಗುಡಿ ಸೇರಿದಂತೆ ಅನೇಕ ಜ್ಯೋತಿಷ್ಯ ಆಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Hassan Pen Drive Case: ರಾಕೇಶ್‌ ಸಿದ್ದರಾಮಯ್ಯ ಸಾವಿನ ವೇಳೆ ಏನಾಗಿತ್ತು ಎಂದೂ ಹೇಳುತ್ತೇನೆ: ಎಚ್‌.ಡಿ. ಕುಮಾರಸ್ವಾಮಿ

Hassan Pen Drive Case: ನಮ್ಮ ಮನೆಯ ಎದುರು ಏಕೆ ಪ್ರತಿಭಟನೆ ಮಾಡುತ್ತೀರಿ. ಇದನ್ನು ಇಷ್ಟಕ್ಕೆ ಬಿಡಲ್ಲ. ಎಲ್ಲ ವಿಷಯವೂ ತನಿಖೆಯಾಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ‌ಎಚ್‌.ಡಿ. ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಕಾಂಗ್ರೆಸ್‌ನವರು ನಮ್ಮ ಮನೆ ಬಳಿ ಬಂದು ಪ್ರತಿಭಟಿಸುತ್ತಿದ್ದಾರೆ. ಮಹಾನುಭಾವನ ಮನೆ ಮುಂದೆ ಹೋಗಿ ಪ್ರತಿಭಟನೆ ಮಾಡಿ. ಡಿಸಿಎಂ ಡಿ.ಕೆ. ಶಿವಕುಮಾರ್‌ ಮನೆ ಬಳಿ ಹೋಗಿ ಪ್ರತಿಭಟನೆ ಮಾಡಿ. ಎಚ್‌.ಡಿ. ರೇವಣ್ಣ ಕುಟುಂಬದ ಬಗ್ಗೆ ವಿಷಯವನ್ನು ಕೆದಕಿದ್ದಾರೆ. ನಾನು ಚರ್ಚೆ ಮಾಡಲು ಸಿದ್ಧ. ಪಲಾಯಾನ ಮಾಡುವುದಿಲ್ಲ. ಕಾಂಗ್ರೆಸ್‌ ನಾಯಕ ಮಹಾಪರಾಧ ಮಾಡಿದ್ದಾನೆ ಎಂದು ಎಚ್.ಡಿ. ಕುಮಾರಸ್ವಾಮಿ ಗುಡುಗಿದ್ದಾರೆ.

VISTARANEWS.COM


on

Hassan Pen Drive Case will tell Rakesh Siddaramaiah died history says HD Kumaraswamy
Koo

ಹುಬ್ಬಳ್ಳಿ: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅವರ ಮನೆಯಲ್ಲಿ ನಡೆದಿದ್ದ ವಿಚಾರವನ್ನು ಹೊರಗಡೆ ತರುತ್ತೇನೆ ಎಂದು ರಾಕೇಶ್ ಸಿದ್ದರಾಮಯ್ಯ (Rakesh Siddaramaiah) ಸಾವಿನ ಸಂದರ್ಭದಲ್ಲಿ ನಡೆದ ವಿಚಾರವನ್ನು ಎಚ್‌ಡಿಕೆ ಎಳೆದು ತಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದಲ್ಲಿ ನಡೆದಿದ್ದ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಅವರು ಯಾವ ರೀತಿ ಸಹಾಯ ಮಾಡಿದ್ದಾರೆ ಎಂಬುದನ್ನು ಮರೆತಿದ್ದೀರಿ. ಎಲ್ಲ ದಾಖಲೆಗಳನ್ನು ನಾವು ಹೊರಗಡೆ ತರುತ್ತೇವೆ. ನಿಮ್ಮ ಕುಟುಂಬದಲ್ಲಿ ನಡೆದ ಘಟನೆ ಏನೇನಾಯಿತು ಎಲ್ಲವೂ ಹೊರಗೆ ಬರಲಿದೆ ಎಂದು ಎಚ್ಚರಿಕೆ ನೀಡಿದರು.

ನಮ್ಮ ಮನೆಯ ಎದುರು ಏಕೆ ಪ್ರತಿಭಟನೆ ಮಾಡುತ್ತೀರಿ. ಇದನ್ನು ಇಷ್ಟಕ್ಕೆ ಬಿಡಲ್ಲ. ಎಲ್ಲ ವಿಷಯವೂ ತನಿಖೆಯಾಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ‌ಎಚ್‌.ಡಿ. ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಕಾಂಗ್ರೆಸ್‌ನವರು ನಮ್ಮ ಮನೆ ಬಳಿ ಬಂದು ಪ್ರತಿಭಟಿಸುತ್ತಿದ್ದಾರೆ. ಮಹಾನುಭಾವನ ಮನೆ ಮುಂದೆ ಹೋಗಿ ಪ್ರತಿಭಟನೆ ಮಾಡಿ. ಡಿಸಿಎಂ ಡಿ.ಕೆ. ಶಿವಕುಮಾರ್‌ ಮನೆ ಬಳಿ ಹೋಗಿ ಪ್ರತಿಭಟನೆ ಮಾಡಿ. ಎಚ್‌.ಡಿ. ರೇವಣ್ಣ ಕುಟುಂಬದ ಬಗ್ಗೆ ವಿಷಯವನ್ನು ಕೆದಕಿದ್ದಾರೆ. ನಾನು ಚರ್ಚೆ ಮಾಡಲು ಸಿದ್ಧ. ಪಲಾಯಾನ ಮಾಡುವುದಿಲ್ಲ. ಕಾಂಗ್ರೆಸ್‌ ನಾಯಕ ಮಹಾಪರಾಧ ಮಾಡಿದ್ದಾನೆ. ಎಷ್ಟು ತಿಂಗಳ ಹಿಂದೆ ಆ ಮಹಾನ್‌ ನಾಯಕನಿಗೆ ಗೊತ್ತಿತ್ತು. ಪೆನ್‌ಡ್ರೈವ್‌ ಯಾರು ಸರಬರಾಜು ಮಾಡಿದರು ಎಲ್ಲವೂ ಗೊತ್ತಿದೆ. ಈ ಮಹಾನ್‌ ನಾಯಕನ ನಡವಳಿಕೆಯ ಬಗ್ಗೆಯೂ ಚರ್ಚಿಸೋಣ. ನಿನ್ನೆ ಹಾಸನ ಜಿಲ್ಲಾಧಿಕಾರಿ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಸರ್ಕಾರದ ಹುನ್ನಾರ ಅಡಗಿದೆ ಎಂದು ಕಿಡಿಕಾರಿದರು.

ಹಲವು ವಿಷಯಗಳಿವೆ, ಎಲ್ಲವನ್ನೂ ಹೇಳುವೆ

ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಸಂಬಂಧ ಹಲವು ವಿಷಯಗಳಿವೆ. ಅದನ್ನು ನಾನು ಹೇಳುತ್ತೇನೆ. ಮಹಾನ್‌ ನಾಯಕ ಮಹಿಳೆಯರ ಬದುಕನ್ನು ಬೀದಿಗೆ ತಂದಿದ್ದಾನೆ. ಇದರ ಬಗ್ಗೆಯೂ ನಾವು ಚರ್ಚೆ ಮಾಡಬೇಕಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಗುಡುಗಿದರು.

ಮಾತೃ ಶಕ್ತಿ ಪರ ನಿಲ್ಲುವುದಾಗಿ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಮಿತ್‌ ಶಾ ಅವರು ಪ್ರಜ್ವಲ್‌ ರೇವಣ್ಣ ಬಗ್ಗೆ ಚರ್ಚೆ ಮಾಡಿಲ್ಲ. ಪ್ರಜ್ವಲ್‌ ವಿರುದ್ಧದ ಕ್ರಮ ತೆಗೆದುಕೊಳ್ಳುವ ವಿಷಯವನ್ನು ನಮಗೆ ಬಿಟ್ಟಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್ ಪ್ರಕರಣದಲ್ಲಿ ರೇವಣ್ಣ-ಸಿದ್ದರಾಮಯ್ಯ ಒಪ್ಪಂದ; ಪ್ರಲ್ಹಾದ್ ಜೋಶಿ ಹೇಳಿದ್ದೇನು?

ನಿಮ್ಮ ಜತೆ ನಾವಿದ್ದೇವೆ

ತಪ್ಪಾಗಿದ್ದರೆ ಶಿಕ್ಷೆಯಾಗಬೇಕೆಂದು ನಾನೇ ಹೇಳಿದ್ದೇನೆ. ಕಾನೂನು ವ್ಯಾಪ್ತಿಯಲ್ಲಿ ಏನಾಗಬೇಕೆಂದು ಚರ್ಚಿಸುತ್ತೇವೆ. ಈ ಬಗ್ಗೆ ಯಾರೂ ಗಾಬರಿಯಾಗಬೇಡಿ, ಆತಂಕ ಬೇಡ. ಯಾವುದೇ ಮಹಿಳೆಯರಿಗೆ ಅನ್ಯಾಯವಾದರೂ ಧ್ವನಿ ಎತ್ತುತ್ತೇವೆ. ನಿಮ್ಮ ಜತೆ ಎಚ್.ಡಿ. ದೇವೇಗೌಡ ಹಾಗೂ ನಾವು ಇದ್ದೇವೆ ಎಂದು ಎಚ್.ಡಿ. ಕುಮಾರಸ್ವಾಮಿ ಅಭಯ ನೀಡಿದರು.

Continue Reading

ಕ್ರೈಂ

Hassan Pen Drive Case: ಲೈಂಗಿಕ ದೌರ್ಜನ್ಯ ಕೇಸ್;‌ ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ ಅಮಾನತು

Hassan Pen Drive Case: ಪ್ರಜ್ವಲ್‌ ರೇವಣ್ಣ ಮೇಲೆ ಬಂದಿರುವ ಆರೋಪಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಎಸ್‌ಐಟಿಗೆ ತನಿಖಾ ಹೊಣೆ ನೀಡಿರುವ ಕ್ರಮವನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಅವರಿಂದ ಮಹಿಳೆಯರಿಗೆ ಸಾಕಷ್ಟು ಅವಮಾನ ಆಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ ಮನವಿ ಮಾಡಿದ್ದೇವೆ ಎಂದು ಮಾಜಿ ಸಚಿವ ಜಿ.ಟಿ. ದೇವೇಗೌಡ ಹೇಳಿದ್ದಾರೆ.

VISTARANEWS.COM


on

Hassan Pen Drive Case Sexual assault case Prajwal Revanna suspended from JDS
Koo

ಹುಬ್ಬಳ್ಳಿ: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಜೆಡಿಎಸ್‌ ಕಠಿಣ ಕ್ರಮವನ್ನು ತೆಗೆದುಕೊಂಡಿದೆ. ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಿ ಕ್ರಮ ಕೈಗೊಳ್ಳಲಾಗಿದೆ. ಪ್ರಜ್ವಲ್‌ ಅವರನ್ನು ಉಚ್ಚಾಟನೆ ಮಾಡುವ ಸಂಬಂಧ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ಅವರು ತೀರ್ಮಾನ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಈ ಸಂಬಂಧ ಹುಬ್ಬಳ್ಳಿಯಲ್ಲಿ ನಡೆದ ಕೋರ್‌ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಪ್ರಜ್ವಲ್‌ ರೇವಣ್ಣ ಅವರ ಮೇಲೆ ಕೇಳಿ ಬಂದಿರುವ ಗಂಭೀರ ಆರೋಪ ಹಿನ್ನೆಲೆಯಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

ಕೋರ್‌ ಕಮಿಟಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಜಿ.ಟಿ. ದೇವೇಗೌಡ, ಪ್ರಜ್ವಲ್‌ ರೇವಣ್ಣ ಮೇಲೆ ಬಂದಿರುವ ಆರೋಪಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಎಸ್‌ಐಟಿಗೆ ತನಿಖಾ ಹೊಣೆ ನೀಡಿರುವ ಕ್ರಮವನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಅವರಿಂದ ಮಹಿಳೆಯರಿಗೆ ಸಾಕಷ್ಟು ಅವಮಾನ ಆಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ ಮನವಿ ಮಾಡಿದ್ದೇವೆ ಎಂದು ಹೇಳಿದರು.

ಏಕೆ ಈ ಕ್ರಮ?

ಈಗಾಗಲೇ ಜೆಡಿಎಸ್‌ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದೆ. ಅಲ್ಲದೆ, ಈ ಪ್ರಕರಣ ಈಗ ದೇಶಾದ್ಯಂತ ಸಂಚಲನ ಉಂಟುಮಾಡಿದೆ. ಮೈತ್ರಿ ಪಕ್ಷ ಬಿಜೆಪಿ ಕೂಡ ಇದರಿಂದ ಮುಜುಗರ ಅನುಭವಿಸುತ್ತಿದೆ. ದೇಶದ ಹಲವು ಕಡೆ ಇನ್ನೂ ಚುನಾವಣೆ ನಡೆಯುತ್ತಿದೆ. ಈ ಹೊತ್ತಿನಲ್ಲಿ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲವೆಂದಾದರೆ ಬಿಜೆಪಿಗೆ ಇದು ತೀವ್ರ ಇರಿಸುಮುರಿಸನ್ನು ತರುತ್ತದೆ. ಅಲ್ಲದೆ, ವಿಪಕ್ಷಗಳ ಟೀಕೆಯನ್ನು ಸಮರ್ಥವಾಗಿ ಎದುರಿಸಲು ಕಷ್ಟವಾಗುತ್ತದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸದ್ಯಕ್ಕೆ ಮುಜುಗರದಿಂದ ತಪ್ಪಿಸಿಕೊಳ್ಳಲು ಪ್ರಜ್ವಲ್ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಳ್ಳುವುದು ಅನಿವಾರ್ಯ ಎಂಬ ತೀರ್ಮಾನಕ್ಕೆ ಜೆಡಿಎಸ್‌ ಬಂದಿದೆ.

ಜೆಡಿಎಸ್‌ ಶಾಸಕರಿಂದ ಹೆಚ್ಚಿತ್ತು ಒತ್ತಡ

ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಜೆಡಿಎಸ್‌ನ ಹಲವು ಶಾಸಕರು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಈ ಸಂಬಂಧ ಶಾಸಕರಾದ ಸಮೃದ್ಧಿ ಮಂಜುನಾಥ್‌ ಹಾಗೂ ಶರಣಗೌಡ ಕುಂದಕೂರ ಅವರು ಎಚ್.ಡಿ. ದೇವೇಗೌಡರಿಗೆ ಬಹಿರಂಗ ಪತ್ರ ಬರೆದು ಕೋರಿದ್ದರು.

ಸಮೃದ್ಧಿ ಮಂಜುನಾಥ್‌ ಪತ್ರದಲ್ಲೇನಿತ್ತು?

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ. ಇತ್ತೀಚಿನ ದಿನಗಳಲ್ಲಿ ಹಾಸನದ ಲೀಲೆಗಳು ಮಾಧ್ಯಮಗಳಲ್ಲಿ ಪ್ರಜ್ವಲಿಸುತ್ತಿರುವುದು ಪಕ್ಷದ ಸಾಮಾನ್ಯ ಕಾರ್ಯಕ್ರತರಾಗಿ ರಾಜ್ಯದಲ್ಲೆಡೆ ಮುಜುಗರಕ್ಕೆ ಒಳಗಾಗಿರುವುದಲ್ಲದೆ ಪಕ್ಷದ ಹೆಸರು ಹೇಳಲು ಸಹ ಹೇಸಿಗೆ ಅನಿಸುವಂತ ಸ್ಥಿತಿಗೆ ತಲುಪಿದೆ.

ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗದ ದಯನೀಯ ಪರಿಸ್ಥಿತಿ ಮೊದಲ ಬಾರಿಗೆ ಶಾಸಕನಾಗಿರುವ ನನಗೆ ಈ ಕಷ್ಟಕರ ಸನ್ನಿವೇಶಗಳು ಎದುರಾಗುತ್ತಿದ್ದರೆ, ಸಾಮಾನ್ಯ ಕಾರ್ಯಕರ್ತರ ಪರಿಸ್ಥಿತಿಯಾದರೇನು ಯೋಚಿಸಿ??

ಪಕ್ಷದ ರಾಷ್ಟ್ರಾಧ್ಯಕ್ಷರು ಎಚ್.ಡಿ. ದೇವೇಗೌಡರು, ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕಾದ ಸಮಯವಿದಾಗಿದೆ. ನಿಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ 19 ಜನ ಶಾಸಕರ ಭವಿಷ್ಯ ಬೇಕೋ ತಮ್ಮ ಕುಟುಂಬದ ರೇವಣ್ಣ, ಪ್ರಜ್ವಲ್‌ ಅವರು ಮುಖ್ಯವೋ ತೀರ್ಮಾನಿಸಬೇಕಿದೆ.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್ ಪ್ರಕರಣದಲ್ಲಿ ರೇವಣ್ಣ-ಸಿದ್ದರಾಮಯ್ಯ ಒಪ್ಪಂದ; ಪ್ರಲ್ಹಾದ್ ಜೋಶಿ ಹೇಳಿದ್ದೇನು?

24 ಗಂಟೆಗಳಲ್ಲಿ ಆರೋಪ ಹೊತ್ತಿರುವ ರೇವಣ್ಣ ಮತ್ತು ಪ್ರಜ್ವಲ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಸಿದ್ಧಾಂತಗಳನ್ನು ಉಳಿಸಿ ಕಾರ್ಯಕರ್ತರನ್ನು ನಮ್ಮನ್ನು ಮುಜುಗರದಿಂದ ಪಾರು ಮಾಡಲು ಕೋರುತ್ತೇನೆ. ನಿಮ್ಮ ತೀರ್ಮಾನದ ಮೇಲೆ ಪಕ್ಷದ ಮುಂದಿನ ಭವಿಷ್ಯವಿದೆಯೆಂಬುದು ಮತ್ತೊಮ್ಮೆ ತಿಳಿಸಲು ಬಯಸುತ್ತೇನೆ ಎಂದು ಫೇಸ್‌ಬುಕ್‌ನಲ್ಲಿ ಸಮೃದ್ಧಿ ಮಂಜುನಾಥ್ ಬರೆದುಕೊಂಡಿದ್ದಾರೆ.

Continue Reading

ಕ್ರೈಂ

Hassan Pen Drive Case: ಪ್ರಜ್ವಲ್ ಪ್ರಕರಣದಲ್ಲಿ ರೇವಣ್ಣ-ಸಿದ್ದರಾಮಯ್ಯ ಒಪ್ಪಂದ; ಪ್ರಲ್ಹಾದ್ ಜೋಶಿ ಹೇಳಿದ್ದೇನು?

Hassan Pen Drive Case: ಪ್ರಜ್ವಲ್ ರೇವಣ್ಣ ಅವರು ಎಫ್‌ಐಆರ್‌ ಆಗುವ ಮೊದಲೇ ವಿದೇಶಕ್ಕೆ ಹೋಗಿದ್ದಾರೆ. ರಾಜ್ಯ ಪೊಲೀಸರು ತಕ್ಷಣವೇ ಎಫ್ಐಆರ್ ಹಾಕಬೇಕಿತ್ತು. ಹೋಗಲು ಏಕೆ ಬಿಟ್ಟರು? ಪ್ರಜ್ವಲ್ ವಿದೇಶಕ್ಕೆ ಹಾರುತ್ತಾರೆಂಬುದು ಕೇಂದ್ರಕ್ಕೆ ಕನಸು ಬೀಳುತ್ತದೆಯೇ? ರಾಜ್ಯ ಸರ್ಕಾರ ತನ್ನ ತಪ್ಪನ್ನು ಕೇಂದ್ರದ ಮೇಲೆ ಹಾಕಲು ನೋಡುತ್ತಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಆರೋಪ ಕೇಳಿ ಬಂದ ತತ್ ಕ್ಷಣವೇ ರಾಜ್ಯ ಪೊಲೀಸರು ಏಕೆ ಎಫ್‌ಐಆರ್‌ ಹಾಕಲಿಲ್ಲ? ಪ್ರಜ್ವಲ್ ರೇವಣ್ಣ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಎಂಬ ಕಾರಣಕ್ಕೆ ಪ್ರಕರಣ ಸೆನ್ಸಿಟಿವ್ ಆಗಿದೆ. ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಶಿಕ್ಷೆಯಾಗುತ್ತದೆ ಎಂದು ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ.

VISTARANEWS.COM


on

Hassan Pen Drive Case Revanna and Siddaramaiah pact in Prajwal case Says Pralhad Joshi
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಮತ್ತು ಸಿಎಂ ಸಿದ್ದರಾಮಯ್ಯ ನಡುವೆ ಒಪ್ಪಂದವಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಮಂಗಳವಾರ ಮಾಧ್ಯಮವರೊಂದಿಗೆ ಮಾತನಾಡಿದ ಸಚಿವ ಪ್ರಲ್ಹಾದ್‌ ಜೋಶಿ, ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕಾಂಗ್ರೆಸ್ ಅತ್ಯಂತ ಬೇಜವಾಬ್ದಾರಿತನದಿಂದ ಆರೋಪ ಮಾಡುತ್ತಿದೆ ಎಂದು ಪ್ರತಿಕ್ರಿಯಿಸಿದರು.

ಪ್ರಜ್ವಲ್ ರೇವಣ್ಣ ಅವರು ಎಫ್‌ಐಆರ್‌ ಆಗುವ ಮೊದಲೇ ವಿದೇಶಕ್ಕೆ ಹೋಗಿದ್ದಾರೆ. ರಾಜ್ಯ ಪೊಲೀಸರು ತಕ್ಷಣವೇ ಎಫ್ಐಆರ್ ಹಾಕಬೇಕಿತ್ತು. ಹೋಗಲು ಏಕೆ ಬಿಟ್ಟರು? ಎಂದು ಜೋಶಿ ಪ್ರಶ್ನಿಸಿದರು.

ಪ್ರಜ್ವಲ್ ವಿದೇಶಕ್ಕೆ ಹಾರುತ್ತಾರೆಂಬುದು ಕೇಂದ್ರಕ್ಕೆ ಕನಸು ಬೀಳುತ್ತದೆಯೇ? ರಾಜ್ಯ ಸರ್ಕಾರ ತನ್ನ ತಪ್ಪನ್ನು ಕೇಂದ್ರದ ಮೇಲೆ ಹಾಕಲು ನೋಡುತ್ತಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಆರೋಪ ಕೇಳಿ ಬಂದ ತತ್ ಕ್ಷಣವೇ ರಾಜ್ಯ ಪೊಲೀಸರು ಏಕೆ ಎಫ್‌ಐಆರ್‌ ಹಾಕಲಿಲ್ಲ? ಎಂದು ಪ್ರಲ್ಹಾದ್‌ ಜೋಶಿ ಪ್ರಶ್ನಿಸಿದರು.

ಉಚ್ಚಾಟನೆಗೆ ನಮ್ಮ ವಿರೋಧವಿಲ್ಲ

ಜೆಡಿಎಸ್ ಒಂದು ಸ್ವತಂತ್ರ ಪಕ್ಷ. ಆಗಲೇ ಪ್ರಜ್ವಲ್ ರೇವಣ್ಣ ಅವರನ್ನು ಉಚ್ಚಾಟಿಸುವ ತೀರ್ಮಾನವನ್ನು ತೆಗೆದುಕೊಂಡಿದೆ. ಆ ಪಕ್ಷ ಕೈಗೊಂಡಿರುವ ಕ್ರಮಕ್ಕೆ ಬಿಜಿಪಿಯ ವಿರೋಧವಿಲ್ಲ ಎಂದು ಸಚಿವ ಜೋಶಿ ಸ್ಪಷ್ಟಪಡಿಸಿದರು.

ಇನ್ನು, ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು ಆಗಲೇ “ಉಪ್ಪು ತಿಂದವರು ನೀರು ಕುಡಿಯಬೇಕು” ಎಂದು ಹೇಳಿದ್ದಾರೆ. ಜೆಡಿಎಸ್ ಆಗಲಿ, ಬಿಜೆಪಿಯಾಗಲಿ ಪ್ರಜ್ವಲ್ ಉಚ್ಚಾಟನೆಗೆ ವಿರೋಧ ವ್ಯಕ್ತಪಡಿಸಿಲ್ಲ ಎಂದು ಪ್ರಲ್ಹಾದ್‌ ಜೋಶಿ ಹೇಳಿದರು.

ಕಾಂಗ್ರೆಸ್ ಬೇಜವಾಬ್ದಾರಿ ಆರೋಪ

ಪ್ರಜ್ವಲ್ ರೇವಣ್ಣ ತಲೆಮರೆಸಿಕೊಳ್ಳಲು ಬಿಜೆಪಿ ಸಹಾಯ ಮಾಡಿದೆ ಎಂಬ ಆರೋಪ ಕಾಂಗ್ರೆಸ್‌ನವರ ಆರೋಪವು ಬೇಜವಾಬ್ದಾರಿತನದ್ದು. ಇವರ ತಪ್ಪನ್ನು ಇಟ್ಟುಕೊಂಡು ನಮ್ಮ ಮೇಲೆ ಗೂಬೆ ಕೂರಿಸಿದರೆ ಹೇಗೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Hassan pen drive case: “ಇದನ್ನು ಸಹಿಸಲು ಸಾಧ್ಯವಿಲ್ಲ…” ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಖಡಕ್‌ ಎಚ್ಚರಿಕೆ

ಸ್ವಲ್ಪ ಬುದ್ಧಿ, ಜ್ಞಾನ ಇಟ್ಟುಕೊಳ್ಳಲಿ

ಯಾರೇ ಆಗಲಿ ಆರೋಪ ಮಾಡುವಾಗ ಬುದ್ಧಿ, ಜ್ಞಾನ ಇಟ್ಟುಕೊಳ್ಳಬೇಕು. ದುರುದ್ದೇಶದಿಂದ ಕೂಡಿರಬಾರದು ಎಂದು ಕಾಂಗ್ರೆಸ್‌ ನಾಯಕರನ್ನು ತಿವಿದ ಪ್ರಲ್ಹಾದ್‌ ಜೋಶಿ, ಪ್ರಜ್ವಲ್ ರೇವಣ್ಣ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಎಂಬ ಕಾರಣಕ್ಕೆ ಪ್ರಕರಣ ಸೆನ್ಸಿಟಿವ್ ಆಗಿದೆ. ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಶಿಕ್ಷೆಯಾಗುತ್ತದೆ ಎಂದು ಹೇಳಿದರು.

Continue Reading

ಮಳೆ

Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

Karnataka Weather Forecast : ರಾಜ್ಯಾದ್ಯಂತ ತಾಪಮಾನ ಏರಿಕೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜನ-ಸಾಮಾನ್ಯರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ (Dry Weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಏಪ್ರಿಲ್‌ 30ರವರೆಗೆ ಹೀಟ್‌ ವೇವ್‌ (heat Wave) ಪ್ರಭಾವ ಇರಲಿದೆ.

ಪ್ರಮುಖವಾಗಿ ಉತ್ತರ ಒಳನಾಡಿ ಬೀದರ್, ಕಲಬುರಗಿ, ವಿಯಜಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಜತೆಗೆ ಹೀಟ್‌ ವೇವ್‌ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಗಾಳಿ ಎಚ್ಚರಿಕೆ

ಏಪ್ರಿಲ್ 27 ರಿಂದ ಮೇ 1ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 23 ಡಿ.ಸೆ ಇರುವ ಸಾಧ್ಯತೆ ಇದೆ.

ಇದನ್ನೂ ಓದಿ: Murder Case : ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ಸೂರ್ಯನ ತಾಪವು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೇವರಿಸುವ ಸೂರ್ಯನ ಶಾಖವು ಜನರು ಆರೋಗ್ಯದ ಮೇಲೂ ಪರಿಣಾಮ (Health Tips) ಬೀರುತ್ತಿದೆ. ಸಾರ್ವಜನಿಕರು ಏನು ಮಾಡಬೇಕು ಏನು ಮಾಡಬಾರದು ಎಂಬ ಮಾಹಿತಿ ಇಲ್ಲದೆ.

ತಾಪಮಾನದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳೇನು?

ಸಾಮಾನ್ಯವಾಗಿ ದೇಹದ ಉಷ್ಣತೆಯು 36.4 ಡಿ.ಸೆ ನಿಂದ 37.2 ಡಿ.ಸೆ ಇರಲಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸಾಧಾರಣದಿಂದ ತೀವ್ರ ಜ್ವರ, ಗಂಧೆಗಳು (prickly heat), ಊತಗಳು ( ಕೈ-ಕಾಲುಗಳು ಹಾಗೂ ಮೊಣಕಾಲು), ಉಷ್ಣತೆಯಿಂದ ಸೆಳೆತ (ಸ್ನಾಯುಗಳ ಸೆಳೆತ), ಪ್ರಜ್ಞೆ ತಪ್ಪುವುದು, ಸುಸ್ತಾಗುವುದು ಹಾಗೂ ಪಾಶ್ವವಾಯು ಉಂಟಾಗಲಿದೆ. ಕೆಲವೊಮ್ಮೆ ಅತಿಯಾದ ಉಷ್ಣತೆಯಿಂದಾಗಿ ಹೃದ್ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಹೆಚ್ಚಾಗುತ್ತದೆ. ಅತಿಯಾದ ಬಾಯಾರಿಕೆ, ವಾಕರಿಕೆ ಅಥವಾ ವಾಂತಿಯಾಗುವುದು, ತಲೆನೋವು ಹಾಗೂ ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ, ಏರು ಗತಿಯ ಉಸಿರಾಟ ಹಾಗೂ ಹೃದಯದ ಬಡಿತ ಹೆಚ್ಚಾಗಲಿದೆ.

ಏನು ಮಾಡಬೇಕು?
-ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿ. ನೀರಿನ ಸೇವನೆ ಅತ್ಯುತ್ತಮ.
-ಹೆಚ್ಚು ನೀರು ಕುಡಿಯುವುದು. ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಸೇವಿಸಿ. ಜತೆಗೆ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ ಹಾಗು ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.
-ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
-ತಿಳಿ ಬಣ್ಣದ, ಅಳಕವಾದ (loose fitting) ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
-ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ ಬಿಸಿಲಿನಿಂದ ರಕ್ಷಣೆ ಪಡೆಯಿರಿ.
-ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ಗಳನ್ನು ಧರಿಸಬೇಕು.
-ಸಾಧ್ಯವಾದಷ್ಟು ಒಳಾಂಗಣದಲ್ಲಿದ್ದು, ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ. ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿ.

ಈ ಕೆಲಸವನ್ನು ಮಾಡಬಾರದು

-ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಿ.
-ಮಧ್ಯಾಹ್ನದ ಸಮಯದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
-ಮಧ್ಯಾಹ್ನ ಅಡುಗೆ ಮಾಡುವುದು ತಪ್ಪಿಸಿ. ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
-ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
-ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
-ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನಾಪಮಾನವು ಅಪಾಯಕಾರಿಯಾಗಬಹುದು.
-ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಗ್ಲಾಸ್‌ ಅಥವಾ ಅದಕ್ಕಿಂತ ಹೆಚ್ಚಿನ ನೀರು ಕುಡಿಬೇಕು

Heat wave

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Suhana Khan
ಬಾಲಿವುಡ್22 mins ago

Suhana Khan: ಬ್ರೇಕಪ್‌ ಬಗ್ಗೆ ಓಪನ್‌ ಆಗಿ ಮಾತನಾಡಿದ ಶಾರುಖ್‌ ಪುತ್ರಿ ಸುಹಾನಾ ಖಾನ್‌; ವಿಡಿಯೊ ಇಲ್ಲಿದೆ

Sharavathi Project
ಕರ್ನಾಟಕ26 mins ago

Sharavathi Project: ಶರಾವತಿ ಜಲವಿದ್ಯುತ್ ಯೋಜನೆ; ಟೆಂಡರ್‌ ಪ್ರಶ್ನಿಸಿ ಎಲ್ & ಟಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

Reliance launched a new campaign for Campa-Cola
ದೇಶ31 mins ago

Campa cola: ಕ್ಯಾಂಪಾ ಕೋಲಾ ಪ್ರಚಾರದ ಹೊಸ ವಿಡಿಯೊ ಬಿಡುಗಡೆ ಮಾಡಿದ ರಿಲಯನ್ಸ್

Hassan Pen Drive Case Did Karthik offer to display Prajwal videos on LED wall in Public
ಕ್ರೈಂ39 mins ago

Hassan Pen Drive Case: ಪ್ರಜ್ವಲ್‌ ಅಶ್ಲೀಲ ವಿಡಿಯೊಗಳನ್ನು ಎಲ್‌ಇಡಿ ವಾಲ್‌ನಲ್ಲಿ ಪ್ರದರ್ಶನಕ್ಕೆ ಮುಂದಾಗಿದ್ದರೇ ಕಾರ್ತಿಕ್?

Hassan Pen Drive Case How did Karthik get Prajwal video Devaraje Gowda questions
ರಾಜಕೀಯ60 mins ago

Hassan Pen Drive Case: ಪ್ರಜ್ವಲ್‌ ಅಶ್ಲೀಲ ವಿಡಿಯೊ ಕಾರ್ತಿಕ್‌ಗೆ ಹೇಗೆ ಸಿಕ್ತು? ಡೌನ್ಲೋಡ್‌ ಮಾಡಿದ್ದು ಯಾರು? ಈ ಬಗ್ಗೆ ದೇವರಾಜೇಗೌಡ ಹೇಳಿದ್ದೇನು?

IPL 2024
ಪ್ರಮುಖ ಸುದ್ದಿ1 hour ago

IPL 2024 : ಐಪಿಎಲ್ ಪ್ಲೇಆಫ್​ ಹಂತಕ್ಕೆ ಇಂಗ್ಲೆಂಡ್ ಆಟಗಾರರು ಅಲಭ್ಯ; ಇದಕ್ಕೂ ಒಂದು ಕಾರಣವಿದೆ

Multivitamin Pill
ಆರೋಗ್ಯ1 hour ago

Multivitamin Pill: ಮಲ್ಟಿವಿಟಮಿನ್‌ ಮಾತ್ರೆಗಳ ಮೊರೆ ಹೋಗದೆ, ನೈಸರ್ಗಿಕವಾಗಿ ಪೋಷಣೆ ಪಡೆಯುವುದು ಹೇಗೆ?

Kannada New Movie
ಸ್ಯಾಂಡಲ್ ವುಡ್1 hour ago

Kannada New Movie: ‘ಕನ್ನಡ ಮಾಧ್ಯಮ’ ಸಿನಿಮಾಕ್ಕೆ ಹಿರಿಯ ಸಾಹಿತಿ ದೊಡ್ಡರಂಗೇಗೌಡರ ಸಾಥ್; ಮೋಷನ್ ಪೋಸ್ಟರ್ ರಿಲೀಸ್

V Srinivas Prasad
ಪ್ರಮುಖ ಸುದ್ದಿ2 hours ago

V Srinivas Prasad: ಮಣ್ಣಲ್ಲಿ ಮಣ್ಣಾದ ಸಂಸದ ಶ್ರೀನಿವಾಸ ಪ್ರಸಾದ್; ಬೌದ್ಧ ಸಂಪ್ರದಾಯದಂತೆ ಅಂತ್ಯಕ್ರಿಯೆ

KL Rahul
ಕ್ರೀಡೆ2 hours ago

KL Rahul : ವಿಶ್ವ ಕಪ್​ ತಂಡಕ್ಕೆ ರಾಹುಲ್ ಕೈಬಿಟ್ಟ ಬಿಸಿಸಿಐಗೆ ಟಾಂಗ್​ ಕೊಟ್ಟ ಲಕ್ನೊ ಫ್ರಾಂಚೈಸಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ14 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌