ಅಯೋಧ್ಯೆ: ಸುಮಾರು 496 ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ (Ram Mandir) ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನಿಗೆ (Ram Lalla) ಪ್ರಾಣಪ್ರತಿಷ್ಠಾಪನೆ ) ನೆರವೇರಿಸಲಾಗಿದೆ. ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯ ಕ್ಷಣಕ್ಷಣದ ಮಾಹಿತಿ (Ayodhya Ram Mandir Live) ಇಲ್ಲಿದೆ…
ವಿದೇಶದಲ್ಲೂ ರಾಮನಾಮ ಜಪ
US: 'Overseas Friends of Ram Mandir' distributes laddoos at Times Square ahead of Pran Pratishtha
— ANI Digital (@ani_digital) January 22, 2024
Read @ANI Story | https://t.co/tJPnNvaKt2#timessquare #pranpratishtharammandir #newyork pic.twitter.com/IWAMSJWAYy
ಜನರ ರಾಮನಿಗೆ ಜಾನಪದ ನೃತ್ಯದ ಮೆರುಗು
#watch | Ayodhya, Uttar Pradesh: Artists perform folk dance, ahead of the Pran Pratishtha ceremony of Ram Temple, today. pic.twitter.com/tBAzaesS71
— ANI (@ANI) January 22, 2024
84 ಸೆಕೆಂಡ್‌ಗಳಲ್ಲಿ ನಡೆಯಲಿದೆ ಪ್ರಾಣ ಪ್ರತಿಷ್ಠೆ
ಭವ್ಯ ರಾಮಮಂದಿರದ ಗರ್ಭಗುಡಿಯಲ್ಲಿ ಕೇವಲ 84 ಸೆಕೆಂಡ್‌ಗಳಲ್ಲಿ ರಾಮಲಲ್ಲಾನಿಗೆ ಪ್ರಾಣ ಪ್ರತಿಷ್ಠೆ ನೆರವೇರಲಿದೆ. ಮಧ್ಯಾಹ್ನ 12 ಗಂಟೆ 29 ನಿಮಿಷ ಹಾಗೂ 8 ಸೆಕೆಂಡ್‌ಗಳಿಂದ 12 ಗಂಟೆ 30 ನಿಮಿಷ ಹಾಗೂ 32 ಸೆಕೆಂಡ್‌ಗಳ ಶುಭ ಮುಹೂರ್ತದಲ್ಲಿ ಪ್ರಾಣ ಪ್ರತಿಷ್ಠೆ ನೆರವೇರಿಸಲಾಗುತ್ತಿದೆ. ಕೇವಲ 84 ಸೆಕೆಂಡ್‌ಗಳಲ್ಲಿ ಪ್ರಾಣ ಪ್ರತಿಷ್ಠೆ ನೆರವೇರಲಿದೆ.
ಮೋದಿ ಅಯೋಧ್ಯೆ ಭೇಟಿಯ ವೇಳಾಪಟ್ಟಿ
ಪ್ರಾಣ ಪ್ರತಿಷ್ಠೆ ಎಂದರೇನು?
ಪ್ರಾಣ ಪ್ರತಿಷ್ಠಾ ಎನ್ನುವುದು ಹಿಂದೂ ಮತ್ತು ಜೈನ ಧರ್ಮದಲ್ಲಿನ ಜನಪ್ರಿಯ ಆಚರಣೆಯಾಗಿದ್ದು, ದೇವರ ವಿಗ್ರಹವನ್ನು ಪವಿತ್ರಗೊಳಿಸಿದ ನಂತರ ದೇವಾಲಯದ ಗರ್ಭಗುಡಿಯಲ್ಲಿ ಸ್ಥಾಪಿಸಲಾಗುತ್ತದೆ. ವಿಗ್ರಹಗಳನ್ನು ಹೀಗೆ ಪ್ರತಿಷ್ಠಾಪಿಸುವ ಸಮಯದಲ್ಲಿ ಪುರೋಹಿತರು ವೈದಿಕ ಸ್ತೋತ್ರಗಳ ಪಠಣ ನಡೆಸುವುದು ವಾಡಿಕೆ. ಪ್ರಾಣ್ ಎಂಬ ಪದದ ಅರ್ಥ ಜೀವಶಕ್ತಿ ಮತ್ತು ಪ್ರತಿಷ್ಠಾ ಎಂದರೆ ಸ್ಥಾಪನೆ. ಪ್ರಾಣ ಪ್ರತಿಷ್ಠಾ ಅಥವಾ ಪ್ರತಿಷ್ಠಾಪನಾ ಸಮಾರಂಭ ಎಂದರೆ ವಿಗ್ರಹಕ್ಕೆ ಜೀವಶಕ್ತಿಯನ್ನು ತುಂಬುವ ಆಚರಣೆ ಎಂದು ಹಿರಿಯರು ಹೇಳುತ್ತಾರೆ. ಪ್ರಾಣ ಪ್ರತಿಷ್ಠಾ ಪ್ರಕ್ರಿಯೆಯ ಮೊದಲು ವಿಗ್ರಹಕ್ಕೆ ಯಾವುದೇ ವಿಶೇಷ ಶಕ್ತಿ ಇರುವುದಿಲ್ಲ ಎನ್ನಲಾಗಿದೆ. ಪ್ರಾಣ ಪ್ರತಿಷ್ಠಾನದ ಮೂಲಕ ವಿಗ್ರಹಕ್ಕೆ ವಿಶೇಷ ಶಕ್ತಿಗಳನ್ನು ತುಂಬಲಾಗುತ್ತದೆ. ಬಳಿಕವೇ ವಿಗ್ರಹ ದೈವಿಕ ಶಕ್ತಿಯಾಗಿ ರೂಪಾಂತರಗೊಳ್ಳುತ್ತದೆ. ಈ ಪ್ರಕ್ರಿಯೆಯ ನಂತರ ಭಕ್ತರು ಈ ವಿಗ್ರಹಗಳನ್ನು ಪೂಜಿಸಬಹುದು ಎಂದು ನಂಬಲಾಗಿದೆ.