Site icon Vistara News

Ayodhya Ram Mandir Live: ರಾಮಮಂದಿರ ಕನಸು ನನಸು; ಬಾಲರಾಮನಿಗೆ ಪ್ರಾಣಪ್ರತಿಷ್ಠಾಪನೆ

Rama Eye

ಅಯೋಧ್ಯೆ: ಸುಮಾರು 496 ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ (Ram Mandir) ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನಿಗೆ (Ram Lalla) ಪ್ರಾಣಪ್ರತಿಷ್ಠಾಪನೆ ) ನೆರವೇರಿಸಲಾಗಿದೆ. ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯ ಕ್ಷಣಕ್ಷಣದ ಮಾಹಿತಿ (Ayodhya Ram Mandir Live) ಇಲ್ಲಿದೆ…

B Somashekhar

ಇನ್ನಷ್ಟು ಬೇಕನ್ನ ಹೃದಯಕ್ಕೆ ರಾಮ…

B Somashekhar

ಅಯೋಧ್ಯೆಯಲ್ಲಿ ಬಿಗಿ ಬಂದೋಬಸ್ತ್‌

B Somashekhar

12.20ಕ್ಕೆ ಪ್ರಾಣ ಪ್ರತಿಷ್ಠಾಪನೆ

ಇಂದು ಮಧ್ಯಾಹ್ನ 12.20 ಕ್ಕೆ ಪ್ರತಿಷ್ಠಾಪನಾ ಸಮಾರಂಭ ಪ್ರಾರಂಭವಾಗಲಿದ್ದು, ಮಧ್ಯಾಹ್ನ 1 ಗಂಟೆಯ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ. ವಾರಣಾಸಿಯ ಅರ್ಚಕ ಲಕ್ಷ್ಮೀಕಾಂತ್ ದೀಕ್ಷಿತ್ ಮುಖ್ಯ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ. ಸಮಾರಂಭದ ಕೆಲವು ಆಚರಣೆಗಳು ಜನವರಿ 16 ರಂದು, ಪ್ರಾಣ-ಪ್ರತಿಷ್ಠಾಪನೆಗೆ ಒಂದು ವಾರ ಮೊದಲು ಪ್ರಾರಂಭವಾಗಿದ್ದವು. ಪ್ರಧಾನಿ ನರೇಂದ್ರ ಮೋದಿ ಮತ್ತು ಹಲವಾರು ಗಣ್ಯರು ಭಾಗವಹಿಸಲಿರುವ ಈ ಮೆಗಾ ಕಾರ್ಯಕ್ರಮಕ್ಕೆ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಇಡೀ ಅಯೋಧ್ಯೆ ನಗರದ ಮೇಲೆ ಭದ್ರತಾ ಪಡೆಗಳು ಕಣ್ಗಾವಲು ಇಟ್ಟಿದೆ.

B Somashekhar

ಬೆಳಗ್ಗೆ 6.30ರಿಂದಲೇ ಕಾರ್ಯಕ್ರಮ ಆರಂಭ

ರಾಮಮಂದಿರದಲ್ಲಿ ಬೆಳಗ್ಗೆ 6.30ರಿಂದಲೇ ಧಾರ್ಮಿಕ ವಿಧಿವಿಧಾನಗಳು ಶುರುವಾಗಲಿವೆ. ಬೆಳಗ್ಗೆ 6.30ಕ್ಕೆ ರಾಮಲಲ್ಲಾ ಮೂರ್ತಿಗೆ ಶೃಂಗಾರ ಅಥವಾ ಜಾಗರಣ ಆರತಿ ಬೆಳಗಲಾಗುತ್ತದೆ. ಇನ್ನು 7 ಗಂಟೆಯಿಂದಲೇ ರಾಮನ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ರಾಮಮಂದಿರ ಟ್ರಸ್ಟ್‌ ನೀಡಿರುವ ಪಾಸ್‌ಗಳ ಕ್ಯೂ ಆರ್‌ ಕೋಡ್‌ ಸ್ಕ್ಯಾನ್‌ ಮಾಡುವ ಮೂಲಕ ಭಕ್ತರು ದೇವಾಲಯ ಪ್ರವೇಶಿಸಿ ಬೆಳಗ್ಗೆ 7 ಗಂಟೆಯಿಂದ 11.30ರವರೆಗೆ ರಾಮನ ದರ್ಶನ ಪಡೆಯಬಹುದಾಗಿದೆ. ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಆರತಿ ನಡೆಯಲಿದೆ.

Exit mobile version