Site icon Vistara News

Ballari News: ಜೂ.12ರಂದು ಚೇಳ್ಳಗುರ್ಕಿ ಶ್ರೀ ಎರ‍್ರಿತಾತನವರ ಮಹಾರಥೋತ್ಸವ

Chellagurki Shri Yerrithathanavara Maharathotsava On 12th June

ಬಳ್ಳಾರಿ: ತಾಲೂಕಿನ ಚೇಳ್ಳಗುರ್ಕಿ ಗ್ರಾಮದ ಶ್ರೀ ಎರ‍್ರಿತಾತನವರ ಮಹಾರಥೋತ್ಸವವು ಜೂ.12ರಂದು ಸಂಜೆ 5 ಗಂಟೆಗೆ ಜರುಗಲಿದ್ದು, ಜಾತ್ರಾ ಮಹೋತ್ಸವ ಅಂಗವಾಗಿ ಜೂ.5 ರಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು (Ballari News) ಆರಂಭವಾಗಿವೆ.

ಇದನ್ನೂ ಓದಿ: Health Tips For Monsoon: ಮಳೆಗಾಲಕ್ಕೆ ನಮ್ಮ ಆಹಾರ ಹೇಗಿರಬೇಕು?

ಜಾತ್ರಾ ಮಹೋತ್ಸವದ ಅಂಗವಾಗಿ ಜೂ.5ರಂದು ಬೆಳಿಗ್ಗೆ 6 ಗಂಟೆಯಿಂದಲೇ ನಂದಿ ಧ್ವಜಾರೋಹಣ ಮತ್ತು ಸಪ್ತಭಜನೆ ಕಾರ್ಯಕ್ರಮ ಆರಂಭವಾಗಿದೆ. ಜೂ.6ರಂದು ಸಂಜೆ ಬೆಳ್ಳಿ ರಥೋತ್ಸವ ಕಾರ್ಯಕ್ರಮ ನಡೆಯಿತು. ಮಂಗಳವಾರ ಬಸವ ಉತ್ಸವ ಕಾರ್ಯಕ್ರಮ ನಡೆಯಿತು. ಜೂ.12ರಂದು ಬುಧವಾರ ಬೆಳಿಗ್ಗೆ 6 ಗಂಟೆಗೆ ಸಪ್ತಭಜನೆ ಮುಕ್ತಾಯ ಕಾರ್ಯಕ್ರಮ ನಡೆಯಲಿದೆ.

ಶ್ರೀ ಎರ‍್ರಿಸ್ವಾಮಿ ಜೀವ ಸಮಾಧಿ ಟ್ರಸ್ಟ್ ಕಮಿಟಿಯ ಆವರಣದಲ್ಲಿ ಎರ‍್ರಿತಾತನವರ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆ ಉದ್ಘಾಟನೆ ಕಾರ್ಯಕ್ರಮ ಜೂ.12ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಉರವಕೊಂಡ ಗವಿಮಠ ಸಂಸ್ಥಾನದ ಡಾ. ಕರಿಬಸವರಾಜೇಂದ್ರ ಮಹಾಸ್ವಾಮೀಜಿ, ಮಳಿಗೆ ಉದ್ಘಾಟನೆ ಮಾಡಲಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಜೂ. 29ರಂದು ನಿವೃತ್ತ ನ್ಯಾ. ಚಂದ್ರಶೇಖರಯ್ಯಗೆ ಅಭಿನಂದನೆ

ಜೂ.12 ರಂದು ಸಂಜೆ 5 ಗಂಟೆಗೆ ಶ್ರೀ ಎರ‍್ರಿತಾತನವರ ಮಹಾರಥೋತ್ಸವ ನಡೆಯಲಿದೆ. ಅಂದು ರಾತ್ರಿ 7 ಗಂಟೆಗೆ ಕರ್ಪೂರದ ಆರತಿ ಕಾರ್ಯಕ್ರಮ ನಡೆಯಲಿದೆ. ಜೂ.13ರಂದು ಸಂಜೆ 7 ಗಂಟೆಗೆ ಹೂವಿನ ರಥೋತ್ಸವ ಕಾರ್ಯಕ್ರಮ ನಂತರ ಬಾಣೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ಎರ‍್ರಿಸ್ವಾಮಿ ಜೀವಸಮಾಧಿ ಟ್ರಸ್ಟ್‌ನ ಅಧ್ಯಕ್ಷ ಬಾಳನಗೌಡ ಮತ್ತು ಶ್ರೀ ದಾಸೋಹ ಸೇವಾ ಸಂಘದ ಅಧ್ಯಕ್ಷ ಪಂಪನಗೌಡ ತಿಳಿಸಿದ್ದಾರೆ.

Exit mobile version